2. ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, “ಚೀಯೋನಿಗೆ ಅವಮಾನವಾಯಿತಲ್ಲಾ ಎಂದು ಬಹಳವಾಗಿ ಕುದಿಯುತ್ತೇನೆ. ಅತಿರೋಷಗೊಂಡು ಕುದಿಯುತ್ತೇನೆ.”
|
3. ಯೆಹೋವನು ಇಂತೆನ್ನುತ್ತಾನೆ,
“ನಾನು ಚೀಯೋನಿಗೆ ಹಿಂದಿರುಗಿದ್ದೇನೆ, ಯೆರೂಸಲೇಮಿನ ಮಧ್ಯದಲ್ಲಿ ವಾಸಿಸುವೆನು; ಆಗ ಯೆರೂಸಲೇಮ್ ಸತ್ಯದ ಪಟ್ಟಣವೆಂದು ಅನ್ನಿಸಿಕೊಳ್ಳುವುದು, ಸೇನಾಧೀಶ್ವರ ಯೆಹೋವನ ಪರ್ವತಕ್ಕೆ ಪರಿಶುದ್ಧ ಪರ್ವತವೆಂಬ ಹೆಸರು ಬರುವುದು.” |
4. ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ,
“ಇನ್ನು ಮುಂದೆ ಯೆರೂಸಲೇಮಿನ ಚೌಕಗಳಲ್ಲಿ ಮುದುಕ ಮತ್ತು ಮುದುಕಿಯರು ಸೇರುವರು. ಅತಿ ವೃದ್ಧಾಪ್ಯದ ನಿಮಿತ್ತ ಪ್ರತಿಯೊಬ್ಬ ಮುದುಕನ ಕೈಯಲ್ಲಿ ಊರುಗೋಲಿರುವುದು. |
6. ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ,
“ಆ ಕಾಲದ ಸ್ಥಿತಿಯು ಈ ಜನಶೇಷದವರ ದೃಷ್ಟಿಗೆ ಅತ್ಯಾಶ್ಚರ್ಯವಾದರೂ ನನ್ನ ದೃಷ್ಟಿಗೆ ಅತ್ಯಾಶ್ಚರ್ಯವೋ?” ಇದು ಸೇನಾಧೀಶ್ವರ ಯೆಹೋವನ ನುಡಿ. |
7. ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ,
“ಇಗೋ, ನಾನು ನನ್ನ ಜನರನ್ನು ಪೂರ್ವದಿಕ್ಕಿನ ದೇಶದಿಂದಲೂ, ಪಶ್ಚಿಮದಿಕ್ಕಿನ ದೇಶದಿಂದಲೂ ಪಾರುಮಾಡಿ ಬರಗೊಳಿಸುವೆನು, |
8. ಅವರು ಯೆರೂಸಲೇಮಿನೊಳಗೆ ವಾಸಿಸುವರು;
ಸತ್ಯಸಂಧತೆಯಿಂದಲೂ ಮತ್ತು ಸದ್ಧರ್ಮದಿಂದಲೂ ಅವರು ನನಗೆ ಪ್ರಜೆಯಾಗಿರುವರು. ಹಾಗೆಯೇ ನಾನು ಅವರಿಗೆ ದೇವರಾಗಿರುವೆನು.” |
9. ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ,
“ದೇವಾಲಯವನ್ನು ಕಟ್ಟುವ ಉದ್ದೇಶದಿಂದ ಸೇನಾಧೀಶ್ವರ ಯೆಹೋವನ ಆ ಮಂದಿರದ ಅಸ್ತಿವಾರವನ್ನು ಹಾಕಿದ ಕಾಲದಲ್ಲಿಯೂ ಇದ್ದ ಪ್ರವಾದಿಗಳ ಬಾಯಿಂದ ಈ ಮಾತುಗಳನ್ನು ಈಗ ಕೇಳುವವರೇ, ನಿಮ್ಮ ಕೈಗಳು ಬಲಗೊಳ್ಳಲಿ! |
10. ಆ ಕಾಲಕ್ಕೆ ಮುಂಚೆ ಮನುಷ್ಯನಿಗಾಗಲಿ,
ಪಶುವಿಗಾಗಲಿ ದುಡಿತದಿಂದ ಏನೂ ಜೀವನವಾಗುತ್ತಿರಲಿಲ್ಲ; ಹೋಗಿ ಬರುವವರಿಗೆ ಶತ್ರುಗಳ ದೆಸೆಯಿಂದ ಭಯವಿಲ್ಲದೆ ಇರಲಿಲ್ಲ; ಒಬ್ಬರನೊಬ್ಬರು ಎದುರಿಸುವಂತೆ ಎಲ್ಲರನ್ನೂ ಪ್ರೇರೇಪಿಸುತ್ತಿದ್ದರು. |
11. ಇಂದಿನಿಂದಲೋ ಈ ಜನಶೇಷದವರ ವಿಷಯದಲ್ಲಿ ನಾನು ಪೂರ್ವಕಾಲದಲ್ಲಿ ಇದ್ದಂತೆ ಇರುವುದಿಲ್ಲ”
ಇದು ಸೇನಾಧೀಶ್ವರನಾದ ಯೆಹೋವನ ನುಡಿ. |
12. “ನೆಮ್ಮದಿಯ ಬೆಳೆಯಾಗುವುದು; ದ್ರಾಕ್ಷಾಲತೆಯು ಹಣ್ಣುಬಿಡುವುದು,
ಭೂಮಿಯು ಧಾನ್ಯವನ್ನೀಯುವುದು, ಆಕಾಶವು ಇಬ್ಬನಿಯನ್ನು ಸುರಿಸುವುದು; ಈ ಜನಶೇಷದವರು ಇವುಗಳನ್ನೆಲ್ಲಾ ಅನುಭವಿಸುವಂತೆ ಅನುಗ್ರಹಿಸುವೆನು. |
13. ಯೆಹೂದ ಕುಲವೇ, ಇಸ್ರಾಯೇಲ್ ವಂಶವೇ,
ನಿಮ್ಮ ಹೆಸರು ಹೇಗೆ ಜನಾಂಗಗಳಲ್ಲಿ ಶಾಪದ ಮಾತಾಗಿ ಸಲ್ಲುತ್ತಿತ್ತೋ, ಹಾಗೆಯೇ ನಾನು ನಿಮ್ಮನ್ನು ರಕ್ಷಿಸಿ ಆಶೀರ್ವದಿಸುವೆನು; ಹೆದರಬೇಡಿರಿ, ನಿಮ್ಮ ಕೈಗಳು ಬಲಗೊಳ್ಳಲಿ!” PEPS |
14. ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನಿಮ್ಮ ಪೂರ್ವಿಕರು ನನಗೆ ಸಿಟ್ಟೆಬ್ಬಿಸಿದಾಗ ನಿಮಗೆ ಕೇಡುಮಾಡಬೇಕೆಂದು ನಾನು ಕರುಣೆಯಿಲ್ಲದೆ ಸಂಕಲ್ಪಸಿದಂತೆ
|
15. ಈ ಕಾಲದಲ್ಲಿಯೂ ಯೆರೂಸಲೇಮಿಗೂ, ಯೆಹೂದ ಕುಲಕ್ಕೂ ಮೇಲುಮಾಡಬೇಕೆಂದು ಹೊಸ ಸಂಕಲ್ಪ ಮಾಡಿಕೊಂಡಿದ್ದೇನೆ; ಹೆದರಬೇಡಿರಿ. ಇದು ಸೇನಾಧೀಶ್ವರನಾದ ಯೆಹೋವನು ನುಡಿ. PEPS
|
16. “ನೀವು ಮಾಡಬೇಕಾದ ಕಾರ್ಯಗಳು ಇವೇ. ಪ್ರತಿಯೊಬ್ಬನೂ ತನ್ನ ನೆರೆಯವನ ಸಂಗಡ ನಿಜವನ್ನೇ ಆಡಲಿ; ನಿಮ್ಮ ಚಾವಡಿಗಳಲ್ಲಿ ಸತ್ಯವನ್ನೂ, ಸಮಾಧಾನವಾದ ನ್ಯಾಯವನ್ನೂ ಸ್ಥಾಪಿಸಿರಿ;
|
17. ನಿಮ್ಮಲ್ಲಿ ಯಾವನೂ ತನ್ನ ಹೃದಯದಲ್ಲಿ ನೆರೆಯವನಿಗೆ ಕೇಡನ್ನು ಬಗೆಯದಿರಲಿ; ಸುಳ್ಳು ಸಾಕ್ಷಿಗೆ ಎಂದೂ ಸಂತೋಷಪಡಬೇಡಿರಿ; ನಾನು ಇವುಗಳನ್ನೆಲ್ಲಾ ದ್ವೇಷಿಸುವವನಾಗಿದ್ದೇನೆ; ಇದು ಯೆಹೋವನ ನುಡಿ.” PEPS
|
19. ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ‘ನಾಲ್ಕನೆಯ ತಿಂಗಳಿನ ಉಪವಾಸ, ಐದನೆಯ ತಿಂಗಳಿನ ಉಪವಾಸ, ಏಳನೆಯ ತಿಂಗಳಿನ ಉಪವಾಸ, ಹತ್ತನೆಯ ತಿಂಗಳಿನ ಉಪವಾಸ ಇವು ಯೆಹೂದ ವಂಶಕ್ಕೆ ವಿಶೇಷವಾದ ಹಬ್ಬಗಳಾಗಿ ಹರ್ಷೋಲ್ಲಾಸಗಳನ್ನು ಉಂಟುಮಾಡುವವು; ಹೀಗಿರಲು ಸತ್ಯವನ್ನೂ, ಸಮಾಧಾನವನ್ನೂ ಪ್ರೀತಿಸಿರಿ.’ ” PEPS
|
21. ಒಂದು ಊರಿನವರು ಇನ್ನೊಂದು ಊರಿಗೆ ಹೋಗಿ, ‘ಯೆಹೋವನ ಪ್ರಸನ್ನತೆಯನ್ನು ಬೇಡುವುದಕ್ಕೂ, ಸೇನಾಧೀಶ್ವರ ಯೆಹೋವನನ್ನು ಆಶ್ರಯಿಸುವುದಕ್ಕೂ ಹೋಗೋಣ ಬನ್ನಿರಿ, ನಾವೂ ಹೋಗುತ್ತೇವೆ’ ಎಂದು ಹೇಳುವರು.
|
22. ಹೀಗೆ ಬಹು ದೇಶಗಳವರೂ, ಬಲವಾದ ಜನಾಂಗಗಳವರೂ ಯೆರೂಸಲೇಮಿನಲ್ಲಿ ಸೇನಾಧೀಶ್ವರ ಯೆಹೋವನನ್ನು ಆಶ್ರಯಿಸುವುದಕ್ಕೂ ಯೆಹೋವನ ಪ್ರಸನ್ನತೆಯನ್ನು ಬೇಡುವುದಕ್ಕೂ ಬರುವರು.” PEPS
|
23. ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಆ ಕಾಲದಲ್ಲಿ ಜನಾಂಗಗಳ ವಿವಿಧ ಭಾಷೆಗಳವರಾದ ಹತ್ತು ಜನರು ಯೆಹೂದ್ಯನೊಬ್ಬನ ಸೆರಗನ್ನು ಹಿಡಿದುಕೊಂಡು, ‘ನಾವು ನಿಮ್ಮೊಂದಿಗೆ ಬರುವೆವು, ಏಕೆಂದರೆ ದೇವರು ನಿಮ್ಮ ಸಂಗಡ ಇದ್ದಾನೆಂಬ ಸುದ್ದಿಯು ನಮ್ಮ ಕಿವಿಗೆ ಬಿದ್ದಿದೆ’ ” ಎಂದು ಹೇಳುವರು. PE
|