1.
2. [PS]ಆಮೋನನ ಮಗನೂ, ಯೆಹೂದದ ಅರಸನಾದ ಯೋಷೀಯನ ಕಾಲದಲ್ಲಿ ಕೂಷಿಯನ ಮಗನೂ, ಗೆದಲ್ಯನ ಮೊಮ್ಮಗನೂ, ಹಿಜ್ಕೀಯನಿಗೆ ಹುಟ್ಟಿದ ಅಮರ್ಯನ ಮರಿಮಗನೂ ಆದ ಚೆಫನ್ಯನಿಗೆ ಯೆಹೋವನು ದಯಪಾಲಿಸಿದ ವಾಕ್ಯ. [PE]{#1ಮುಂಬರಲಿರುವ ನಾಶನ }
3. [PS]ಯೆಹೋವನು ಇಂತೆನ್ನುತ್ತಾನೆ, “ನಾನು ಭೂಮಂಡಲದಿಂದ ಸಮಸ್ತವನ್ನು ಅಳಿಸಿಬಿಡುವೆನು. [PE][QS]ಮನುಷ್ಯರನ್ನೂ, ಪಶುಗಳನ್ನೂ, ಮತ್ತು ಆಕಾಶದ ಪಕ್ಷಿಗಳನ್ನೂ, ಸಮುದ್ರದ ಮೀನುಗಳನ್ನೂ ನಾಶಪಡಿಸುವೆನು; ವಿಗ್ರಹಗಳೆಂಬ ವಿಘ್ನಗಳನ್ನೂ, [QE][QS]ಅವುಗಳಿಗೆ ಅಡ್ಡಬೀಳುವ ದುಷ್ಟರನ್ನೂ ಸಂಹರಿಸುವೆನು; ಭೂಮಿಯ ಮೇಲಿಂದ ದುಷ್ಟರ ಸಂತಾನವನ್ನೂ ಕಿತ್ತುಹಾಕುವೆನು” ಇದು ಯೆಹೋವನ ನುಡಿ. [QE]
4. {#1ಯೆಹೂದಕ್ಕೆ ದೇವರ ದಂಡನೆ ತಪ್ಪದು } [PS]“ನಾನು ಯೆಹೂದದ ಮೇಲೂ ಮತ್ತು ಯೆರೂಸಲೇಮಿನವರೆಲ್ಲರ ಮೇಲೂ ಕೈಯೆತ್ತಿ, [PE][QS]ಈ ಸ್ಥಳದಿಂದ ಬಾಳನ ಪೂಜೆಯನ್ನು ನಿಶ್ಶೇಷಗೊಳಿಸಿ, ಕೆಮಾರ್ಯ ಮೊದಲಾದ ಪೂಜಾರಿಗಳನ್ನು ನಿರ್ನಾಮ ಮಾಡುವೆನು, [QE]
5. [QS]ಮಾಳಿಗೆಗಳ ಮೇಲೆ ಆಕಾಶದ ನಕ್ಷತ್ರಗಣವನ್ನು ಪೂಜಿಸುವವರನ್ನೂ, [QE][QS]ಯೆಹೋವನ ಭಕ್ತರೆಂದು ಪ್ರತಿಜ್ಞೆ ಮಾಡಿಕೊಂಡು ಆರಾಧಿಸಿ ಮಲ್ಕಾಮನ[* ಮಲ್ಕಾಮನ ಇದು ವಿಗ್ರಹ, ಆಮೋನ್ಯರ ದೇವತೆ. ] ಮೇಲೆ ಆಣೆಯಿಡುವವರನ್ನೂ, [QE]
6. [QS]ಯೆಹೋವನನ್ನು ಆಶ್ರಯಿಸದೆ, ಯೆಹೋವನ ದರ್ಶನವನ್ನು ಬಯಸದೇ, ಯೆಹೋವನ ಮಾರ್ಗ ಬಿಟ್ಟವರನ್ನೂ ಧ್ವಂಸ ಮಾಡುವೆನು.” [QE]
2. [QS2]ಕರ್ತನಾದ ಯೆಹೋವನ ಸನ್ನಿಧಿಯಲ್ಲಿ ಮೌನವಾಗಿರಿ, ಯೆಹೋವನ ನ್ಯಾಯತೀರ್ಪಿನ ದಿನವು ಸಮೀಪಿಸಿತು; [QE][QS2]ಯೆಹೋವನು ಯಜ್ಞದ ಔತಣವನ್ನು ಸಿದ್ಧಪಡಿಸಿದ್ದಾನೆ, ಕರೆದವರನ್ನು ಪ್ರತಿಷ್ಠಿಸಿದ್ದಾನೆ. [QE]
8. [QS]“ಯೆಹೋವನ ಆ ಯಜ್ಞದಿನದಲ್ಲಿ ನಾನು ದೇಶಾಧಿಪತಿಗಳನ್ನೂ, [QE][QS]ರಾಜವಂಶದವರನ್ನೂ, ವಿದೇಶ ವಸ್ತ್ರದಾರಿಗಳೆಲ್ಲರನ್ನೂ ದಂಡಿಸುವೆನು. [QE]
9. [QS]ಹೊಸ್ತಿಲನ್ನು ದಾಟಿ ಮೋಸ ಹಿಂಸೆಗಳಿಂದ ದೋಚಿದ್ದನ್ನು, [QE][QS]ತಮ್ಮ ಒಡೆಯನ ಮನೆಯೊಳಗೆ[† ಒಡೆಯನ ಮನೆಯೊಳಗೆ ಅಥವಾ ತಮ್ಮ ದೇವಸ್ಥಾನದೊಳಗೆ. ] ತುಂಬಿಸುವವರೆಲ್ಲರನ್ನು ಆ ದಿನದಲ್ಲಿ ದಂಡಿಸುವೆನು. [QE]
10. [QS]ಅದೇ ದಿನದಲ್ಲಿ ಮೀನುಬಾಗಿಲಿನಿಂದ ಕೂಗಾಟ, [QE][QS]ಎರಡನೆಯ ಕೇರಿಯಿಂದ ಗೋಳಾಟ, ಗುಡ್ಡಗಳ ಮೇಲಿನಿಂದ ಭೀಕರ ಶಬ್ದವನ್ನು ಕೇಳುವಿರಿ, [QE][QS]ಅಂತು ದೊಡ್ಡ ಗದ್ದಲವಾಗುವುದು” ಇದು ಯೆಹೋವನ ನುಡಿ. [QE]
11. [QS]ಯೆರುಸಲೇಮ್ ಜಿಲ್ಲೆಯ ಮಾರುಕಟ್ಟೆಯಲ್ಲಿ ವಾಸಿಸುವವರೇ, ಕೂಗಿರಿ, [QE][QS]ಏಕೆಂದರೆ ಎಲ್ಲಾ ವರ್ತಕರ ಜನರೆಲ್ಲಾ ಹಾಳಾದರು, ಬೆಳ್ಳಿಯ ವ್ಯಾಪಾರಿಗಳೆಲ್ಲರೂ ನಾಶವಾದರು. [QE]
12. [QS]ಆ ಕಾಲದಲ್ಲಿ ನಾನು ದೀಪಗಳನ್ನು ಹಿಡಿದು, [QE][QS]ಯೆರೂಸಲೇಮನ್ನೆಲ್ಲಾ ಹುಡುಕಿಬಿಡುವೆನು; [QE][QS]ಯೆಹೋವನು ಮೇಲನ್ನಾಗಲಿ, ಕೇಡನ್ನಾಗಲಿ ಮಾಡನು ಎಂದು ಮನಸ್ಸಿನೊಳಗೆ ಅಂದುಕೊಳ್ಳುವವರಾಗಿ, [QE][QS]ಮಡ್ಡಿಯಂತೆ ಮಂದವಾಗಿರುವ ದ್ರಾಕ್ಷಾರಸಕ್ಕೆ ಸಮಾನರಾದ ಜನರನ್ನು ದಂಡಿಸುವೆನು. [QE]
13. [QS]ಅವರ ಆಸ್ತಿಯು ಸೂರೆಯಾಗುವುದು, ಅವರ ಮನೆಗಳು ಹಾಳಾಗುವವು; [QE][QS]ಅವರು ಮನೆಗಳನ್ನು ಕಟ್ಟಿಕೊಂಡರೂ ಅವುಗಳಲ್ಲಿ ವಾಸಿಸರು, ದ್ರಾಕ್ಷಾತೋಟಗಳನ್ನು ಮಾಡಿಕೊಂಡರೂ ಅವುಗಳ ದ್ರಾಕ್ಷಾರಸವನ್ನು ಕುಡಿಯರು. [QE]
14. {#1ಯೆಹೋವನ ದಿನದ ವಿವರಣೆ } [PS]ಯೆಹೋವನ ಮಹಾದಿನವು ಸಮೀಪಿಸಿತು, ಬಹು ತ್ವರೆಯಾಗಿ ಬರುತ್ತಿದೆ; [PE][QS]ಆಹಾ, ಕಿವಿಗೊಡಿರಿ, ಯೆಹೋವನ ದಿನವೇ ಬಂದಿತು; ಇಗೋ, ಅಲ್ಲಿ ಒಬ್ಬ ಶೂರನು ಘೋರವಾಗಿ ಗೋಳಾಡುತ್ತಿದ್ದಾನೆ! [QE]
15. [QS]ಆ ದಿನದ ಸುದ್ದಿ ಕಹಿಯಾದುದು, ಅದು ರೌದ್ರದ ದಿನ, ಶ್ರಮಸಂಕಟಗಳ ದಿನ, [QE][QS]ಹಾಳುಪಾಳುಮಾಡುವ ದಿನ, ಕತ್ತಲಿನ ಮೊಬ್ಬಿನ ದಿನ, [QE][QS]ಕಾರ್ಮುಗಿಲ ಕಗ್ಗತ್ತಲ ದಿನ! [QE]
16. [QS]ಕೋಟೆಗಳನ್ನೂ, ದೊಡ್ಡ ಕೊತ್ತಲುಗಳನ್ನೂ ಹಿಡಿಯಲು, [QE][QS]ಆರ್ಭಟಿಸಿ ಕೊಂಬೂದುವ ದಿನ. [QE]
2. [QS2]ಯೆಹೋವನಾದ ನನಗೆ ಜನರು ಪಾಪಮಾಡಿದ ಕಾರಣ [QE][QS2]ಕುರುಡರಂತೆ ನಡೆಯುವ ಹಾಗೆ ಅವರನ್ನು ಸಂಕಟಪಡಿಸುವೆನು; [QE][QS2]ಅವರ ರಕ್ತವು ಧೂಳಿನಂತೆ ಚೆಲ್ಲಿ ಹೋಗುವುದು, ಅವರ ಮಾಂಸವು ಮಲದ ಹಾಗೆ ಬಿದ್ದಿರುವುದು! [QE]
2. [QS2]ಯೆಹೋವನ ರೌದ್ರದ ದಿನದಲ್ಲಿ ಅವರ ಬೆಳ್ಳಿ, ಬಂಗಾರಗಳೂ ಕೂಡಾ ಅವರನ್ನು ರಕ್ಷಿಸಲಾರವು; [QE][QS2]ಆತನ ರೋಷಾಗ್ನಿಯು ದೇಶವನ್ನೆಲ್ಲಾ ನುಂಗಿಬಿಡುವುದು; [QE][QS2]ಆತನು ದೇಶನಿವಾಸಿಗಳೆಲ್ಲರನ್ನೂ ಕೊನೆಗಾಣಿಸುವನು, ಹೌದು, ಘೋರವಾಗಿ ನಿರ್ಮೂಲಮಾಡುವನು! [QE]