1. {#1ಪಶ್ಚಾತ್ತಾಪಕ್ಕೆ ಕರೆ } [PS]ನಾಚಿಕೆಗೇಡಿ ಜನಾಂಗದವರೇ, ತೀರ್ಪು ಫಲಿಸುವುದರೊಳಗೆ, [PE][QS]ಯೆಹೋವನ ಉಗ್ರಕೋಪವು ನಿಮ್ಮ ಮೇಲೆ ಬರುವುದಕ್ಕೆ ಮೊದಲೇ [QE][QS]ಯೆಹೋವನ ಸಿಟ್ಟಿನ ದಿನವೂ ಉರಿದು ನಿಮ್ಮ ಮೇಲೆ ಬರುವುದಕ್ಕಿಂತ ಮೊದಲೇ, [QE][QS]ನೀವೆಲ್ಲರೂ ಸೇರಿ ಬನ್ನಿರಿ, ಒಟ್ಟಾಗಿ ಕೂಡಿರಿ. [QE]
2. [QS]ಆ ಕಾಲವು ಹೊಟ್ಟಿನಂತೆ ಹಾರಿಹೋಗುತ್ತದಲ್ಲಾ. [QE]
3. [QS]ಯೆಹೋವನ ನಿಯಮವನ್ನು ಕೈಕೊಂಡು ನಡೆಯುವ ಲೋಕದ ದೀನರೇ, [QE][QS]ನೀವೆಲ್ಲರೂ ಯೆಹೋವನ ನೀತಿಯನ್ನು ಅನುಸರಿಸಿರಿ, ಧರ್ಮವನ್ನು ಅಭ್ಯಾಸಿಸಿರಿ, ನಮ್ರತೆಯನ್ನು ಹೊಂದಿಕೊಳ್ಳಿರಿ; [QE][QS]ಬಹುಶಃ ಯೆಹೋವನ ಸಿಟ್ಟಿನ ದಿನದಲ್ಲಿ ನೀವು ಮರೆಯಾಗುವಿರಿ. [QE]
4. {#1ಫಿಲಿಷ್ಟಿಯರ ದುರ್ಗತಿ } [PS]ಗಾಜ ಪಟ್ಟಣ ನಿರ್ಜನವಾಗುವುದು, ಅಷ್ಕೆಲೋನ್ ಹಾಳಾಗುವುದು, [PE][QS]ಅಷ್ಡೋದ್ ನಿವಾಸಿಗಳನ್ನು ನಡು ಮಧ್ಯಾಹ್ನದಲ್ಲಿ ಆಕ್ರಮಿಸಿ ಓಡಿಸಿಬಿಡುವರು, ಎಕ್ರೋನ್ ನಗರ ನಿರ್ಮೂಲವಾಗುವುದು. [QE]
2. [QS2]ಅಯ್ಯೋ, ಕರಾವಳಿಯಲ್ಲಿ ವಾಸಿಸುವ ಕೆರೇತ್ಯ ಜನಾಂಗವೇ, ನಿನ್ನ ಗತಿಯನ್ನು ಏನು ಹೇಳಲಿ! [QE][QS2]ಕಾನಾನೇ, ಫಿಲಿಷ್ಟಿಯ ದೇಶವೇ, ಯೆಹೋವನ ನುಡಿಯು ನಿನಗೆ ವಿರುದ್ಧವಾಗಿದೆ; ನಿನ್ನಲ್ಲಿ ವಾಸಿಸುವ ಜನರೇ ನಿಲ್ಲದಂತೆ ನಿನ್ನನ್ನು ನಾಶಮಾಡುವೆನು. [QE]
2. [QS2]ಸಮುದ್ರ ತೀರದ ಆ ಪ್ರಾಂತ್ಯವು ಹುಲ್ಲುಗಾವಲಾಗಿ, ಕುರುಬರ ಗುಡಿಸಲಾಗಿ, ಹಿಂಡುಗಳ ದೊಡ್ಡಿಗಳು ಇವೇ ಅಲ್ಲಿರುವವು. [QE]
2. [QS2]ಆ ಕರಾವಳಿಯು ಉಳಿದ ಯೆಹೂದ್ಯರ ಪಾಲಾಗುವುದು; [QE][QS2]ದನಕುರಿಗಳನ್ನು ಅಲ್ಲೇ ಮೇಯಿಸುವರು; ಸಂಜೆಗೆ ಅಷ್ಕೆಲೋನಿನ ಮನೆಗಳಲ್ಲಿ ಮಲಗಿಕೊಳ್ಳುವರು; [QE][QS2]ಅವರ ದೇವರಾದ ಯೆಹೋವನು ಅವರನ್ನು ಪರಾಂಬರಿಸಿ ಅವರ ದುರವಸ್ಥೆಯನ್ನು ತಪ್ಪಿಸುವನು. [QE]
8. {#1ಮೋವಾಬ್ಯರ ಮತ್ತು ಅಮ್ಮೋನಿಯರ ದುರ್ಗತಿ } [PS]ಮೋವಾಬ್ಯರೂ, ಅಮ್ಮೋನ್ಯರೂ ಅಹಂಕಾರದಿಂದ ನನ್ನ ಜನರ ಮೇರೆಯನ್ನು ಮೀರಿ, [PE][QS]ಅವರನ್ನು ನಿಂದಿಸಿ, ಅವರ ಮೇಲೆ ಹೊರಿಸಿರುವ ದೂರುದೂಷಣೆಗಳು ನನ್ನ ಕಿವಿಗೆ ಬಿದ್ದಿವೆ. [QE]
9. [QS]ಇಸ್ರಾಯೇಲರ ದೇವರಾದ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, [QE][QS]“ನನ್ನ ಜೀವದಾಣೆ, ಸೊದೋಮಿನ ಗತಿಯೇ ಮೋವಾಬಿಗೂ ಆಗುವುದು. ಗೊಮೋರದ ದುರ್ದಶೆಯೇ ಅಮ್ಮೋನ್ಯರಿಗೆ ಸಂಭವಿಸುವುದು; [QE][QS]ಆ ಪ್ರಾಂತ್ಯಗಳು ಮುಳ್ಳುಗಿಡಗಳಿಂದಲೂ, ಸೌಳುಗುಂಡಿಗಳಿಂದಲೂ ತುಂಬಿಕೊಂಡು ನಿತ್ಯ ನಾಶನಕ್ಕೆ ಈಡಾಗುವವು; [QE][QS]ನನ್ನ ಜನರಲ್ಲಿ ಉಳಿದವರು ಅವುಗಳನ್ನು ಸೂರೆಮಾಡುವರು. [QE][QS]ಅಳಿದುಳಿದ ನನ್ನ ಜನರಿಗೆ ಅವು ಸ್ವಾಸ್ತ್ಯವಾಗುವವು[* ಆದಿ 19:23-29 ನೋಡಿರಿ. ].” [QE]
10. [PS]ಆ ಪ್ರಾಂತ್ಯಗಳವರು ಸೇನಾಧೀಶ್ವರನಾದ ಯೆಹೋವನ ಜನರನ್ನು ದೂಷಿಸಿ, ಅವರ ಮೇಲೆ ಉಬ್ಬಿಕೊಂಡು ಬಂದುದ್ದರಿಂದ ಅವರ ಅಹಂಕಾರದ ನಿಮಿತ್ತವೇ ಅವರಿಗೆ ಈ ಗತಿಯಾಗುವುದು!
11. ಯೆಹೋವನು ಅವರಿಗೆ ಭಯಂಕರನಾಗುವನು; ಲೋಕದ ದೇವರುಗಳನ್ನೆಲ್ಲಾ ನಾಶಮಾಡುವನು; ಸಮಸ್ತ ಜನರು, ಪ್ರತಿಯೊಂದು ಪ್ರಾಂತ್ಯದ ನಿವಾಸಿಗಳು ಸಕಲ ಜನಾಂಗಗಳವರು ತಮ್ಮ ತಮ್ಮ ಸ್ಥಳಗಳಲ್ಲೇ ಆತನನ್ನು ಆರಾಧಿಸುವರು. [PE]
12. {#1ಕೂಷಿನ ದುರ್ಗತಿ } [QS]ಕೂಷಿನವರೇ, ನೀವು ಸಹ ನನ್ನ ಖಡ್ಗದಿಂದ ಹತರಾಗುವಿರಿ. [QE]
13. {#1ಅಶ್ಶೂರ್ಯರ ದುರ್ಗತಿ } [QS]ಯೆಹೋವನು ಉತ್ತರಕ್ಕೆ ಕೈಚಾಚಿ ಅಶ್ಶೂರವನ್ನು ಧ್ವಂಸ ಮಾಡುವನು; [QE][QS]ನಿನವೆಯನ್ನು ಹಾಳುಮಾಡಿ ನೀರಿಲ್ಲದ ಮರುಭೂಮಿಯಂತೆ ಒಣಗಿಸಿಬಿಡುವನು. [QE]
14. [QS]ಜನಾಂಗಗಳ ಪಶುಗಳೆಲ್ಲಾ ಮಂದೆಮಂದೆಯಾಗಿ ಅದರ ಮಧ್ಯದಲ್ಲಿ ಮಲಗಿಕೊಳ್ಳುವವು; [QE][QS]ಕೊಕ್ಕರೆಯೂ, ಮುಳ್ಳುಹಂದಿಯೂ ಹಟ್ಟಿಗಳಲ್ಲಿ ವಾಸಮಾಡಿಕೊಳ್ಳುವವು. [QE][QS]ಗೂಬೆಯು ಕಿಟಕಿಗಳಲ್ಲಿ ಮನೆಕಂಬಗಳ ಮೇಲೆ ಚಿಲಿಪಿಲಿ ಗಾನವು ತಂಗುವವು; ಕಾಗೆಗಳ ಕೂಗು ಹೊಸ್ತಿಲುಗಳಲ್ಲಿ ಕೇಳುವುದು; ದೇವದಾರು ಹಲಿಗೆಯ ಹೊದಿಕೆಯು ಕೀಳಲ್ಪಡುವುದು. [QE]
15. [QS]ಈ ನಿನವೆಯು ಮೊದಲು ಉಲ್ಲಾಸದ ನಗರಿಯಾಗಿ ನೆಮ್ಮದಿಯಿಂದ ನೆಲೆಗೊಂಡಿದ್ದು [QE][QS]ತನ್ನ ಹೃದಯದೊಳಗೆ, “ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ” ಅಂದುಕೊಳ್ಳುತ್ತಿತ್ತು; [QE][QS]ಅಯ್ಯೋ, ಎಷ್ಟೋ ಹಾಳಾಗಿ ಹೋಗಿ ಮೃಗಗಳು ತಂಗುವ ಕೊಟ್ಟಿಗೆಯ ಬೀಡಾಗಿದೆ! [QE][QS]ಅದರ ಮುಂದೆ ಹಾದುಹೋಗುವವರೆಲ್ಲರು ಸಿಳ್ಳು ಹಾಕಿ ಅಪಹಾಸ್ಯ ಮಾಡುತ್ತಾರೆ. [QE]