2. ನೀನು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಿ ಅವರಿಗೆ--ನನ್ನ ಸುವಾಸನೆಗೋಸ್ಕರ ಬೆಂಕಿ ಯಿಂದ ಮಾಡಿದ ಬಲಿಗಳಿಗೋಸ್ಕರವಾಗಿರುವ ನನ್ನ ರೊಟ್ಟಿಯ ಅರ್ಪಣೆಯನ್ನು ಅದರ ನೇಮಕವಾದ ಸಮಯದಲ್ಲಿ ನನಗೆ ಅರ್ಪಿಸುವದಕ್ಕೆ ನೀವು ನೋಡಿ ಕೊಳ್ಳಿರಿ.
|
3. ನೀನು ಅವರಿಗೆ ಹೇಳಬೇಕಾದದ್ದು--ನೀವು ಕರ್ತನಿಗೆ ಅರ್ಪಿಸಬೇಕಾದ ಅರ್ಪಣೆ ಏನಂದರೆನಿತ್ಯ ದಹನಬಲಿಗಾಗಿ ಪ್ರತಿದಿನ ಮಚ್ಚೆಯಿಲ್ಲದ ಒಂದು ವರುಷದ ಎರಡು ಕುರಿಮರಿಗಳು.
|
5. ಆಹಾರದ ಅರ್ಪಣೆಗಾಗಿ ಹಿನ್ನಿನ ನಾಲ್ಕನೇ ಪಾಲು, ಕುಟ್ಟಿದ ಎಣ್ಣೆ ಕಲಸಿದ ಹಿಟ್ಟಿನ ಏಫದ ಹತ್ತನೇ ಪಾಲು. ಇದು ಸೀನಾಯಿ ಪರ್ವತದಲ್ಲಿ ಕರ್ತನಿಗೆ ಸುವಾಸನೆಯ ದಹನಬಲಿಗಾಗಿ ನೇಮಿಸಿದ ನಿತ್ಯ ದಹನಬಲಿಯು.
|
6. ಒಂದು ಕುರಿಮರಿಗೆ ತಕ್ಕ ಪಾನದ ಅರ್ಪಣೆ ಹಿನ್ನಿನ ನಾಲ್ಕನೇ ಪಾಲು ಪರಿಶುದ್ಧ ಸ್ಥಳದಲ್ಲಿ ಅಮಲೇರುವ ದ್ರಾಕ್ಷಾರಸದ ಪಾನದ ಅರ್ಪಣೆಯನ್ನು ಕರ್ತನಿಗೆ ಹೊಯಿಸಬೇಕು.
|
8. ಅದರ ಆಹಾ ರದ ಅರ್ಪಣೆಯನ್ನೂ ಪಾನದ ಅರ್ಪಣೆಯನ್ನೂ ಉದಯದಲ್ಲಿ ಮಾಡಿದ ಹಾಗೆ ಕರ್ತನಿಗೆ ಸುವಾಸನೆ ಯಾಗುವಂತೆ ಬೆಂಕಿಯಿಂದ ಮಾಡಿದ ಬಲಿಯನ್ನು ನೀನು ಅರ್ಪಿಸಬೇಕು.
|
9. ಆದರೆ ಸಬ್ಬತ್ ದಿವಸದಲ್ಲಿ ಆಹಾರದ ಅರ್ಪಣೆ ಗಾಗಿ ಮಚ್ಚೆಯಿಲ್ಲದ ಒಂದು ವರುಷದ ಎರಡು ಕುರಿ ಮರಿಗಳನ್ನೂ ಎರಡು ದಶಾಂಶಗಳಷ್ಟು ಎಣ್ಣೇ ಕಲಸಿದ ಹಿಟ್ಟನ್ನೂ ಅದಕ್ಕೆ ಪಾನದ ಅರ್ಪಣೆಯನ್ನೂ
|
11. ನಿಮ್ಮ ತಿಂಗಳುಗಳ ಆರಂಭದಲ್ಲಿ ನೀವು ಕರ್ತನಿಗೆ ದಹನಬಲಿಗಾಗಿ ಎರಡು ಎಳೇ ಹೋರಿಗಳನ್ನೂ ಒಂದು ಟಗರನ್ನೂ ಮಚ್ಚೆಯಿಲ್ಲದ ಒಂದು ವರುಷದ ಏಳು ಕುರಿಮರಿಗಳನ್ನೂ
|
12. ಒಂದೊಂದು ಹೋರಿಗೆ ಆಹಾರದ ಅರ್ಪಣೆಗಾಗಿ ಎಣ್ಣೇ ಕಲಸಿದ ಹಿಟ್ಟಿನ ಮೂರು ದಶಾಂಶಗಳು; ಒಂದೊಂದು ಟಗರಿಗೆ ಆಹಾರದ ಅರ್ಪಣೆಯಾಗಿ ಎಣ್ಣೇ ಕಲಸಿದ ಹಿಟ್ಟಿನ ಎರಡು ದಶಾಂಶಗಳು.
|
13. ಒಂದೊಂದು ಕುರಿಮರಿಗೆ ಆಹಾರದ ಅರ್ಪಣೆಯಾಗಿ ಎಣ್ಣೇ ಕಲಸಿದ ಹಿಟ್ಟಿನ ಒಂದು ದಶಾಂಶವು, ಕರ್ತನಿಗೆ ಸುವಾಸನೆಯ ದಹನ ಬಲಿಗಾಗಿ ಬೆಂಕಿಯಿಂದ ಮಾಡಿದ ಬಲಿಯು ಇದೇ.
|
14. ಇವುಗಳಿಗೆ ತಕ್ಕ ಪಾನದ ಅರ್ಪಣೆಗಳು ಅಂದರೆ ಹೋರಿಗೆ ಅರ್ಧ ಹಿನ್ನಿನ ದ್ರಾಕ್ಷಾರಸವು; ಟಗರಿಗೆ ಹಿನ್ನಿನ ಮೂರನೇ ಪಾಲು ದ್ರಾಕ್ಷಾರಸವು; ಕುರಿಮರಿಗೆ ಕಾಲು ಹಿನ್ನಿನ ದ್ರಾಕ್ಷಾರಸವು ಇರಬೇಕು; ಇದು ವರುಷಕ್ಕಿರುವ ತಿಂಗಳುಗಳಲ್ಲಿ ಒಂದೊಂದಕ್ಕೆ ತಕ್ಕ ದಹನ ಬಲಿಯಾಗಿದೆ.
|
15. ಇದಲ್ಲದೆ ನಿತ್ಯ ದಹನ ಬಲಿಯ ಹೊರತು ಕರ್ತನಿಗೆ ಪಾಪ ಬಲಿಗಾಗಿ ಒಂದು ಮೇಕೆಮರಿಯನ್ನೂ ಅದಕ್ಕೆ ತಕ್ಕ ಪಾನದ ಅರ್ಪಣೆ ಯನ್ನೂ ಅರ್ಪಿಸಬೇಕು.
|
18. ಮೊದಲನೇ ದಿವಸದಲ್ಲಿ ಪರಿಶುದ್ಧ ಸಭೆಯನ್ನು ಕೂಡಿಸಬೇಕು. ಯಾವ ತರವಾದ ಕಷ್ಟಕರವಾದ ಕೆಲಸ ವನ್ನು ನೀವು ಆ ದಿವಸದಲ್ಲಿ ಮಾಡಬಾರದು.
|
19. ಆದರೆ ನೀವು ಕರ್ತನಿಗೆ ಬೆಂಕಿಯಿಂದ ಮಾಡಿದ ದಹನ ಬಲಿಯನ್ನು ಅರ್ಪಿಸಬೇಕು. ಯಾವದಂದರೆ--ಎರಡು ಎಳೇ ಹೋರಿಗಳು, ಒಂದು ಟಗರು, ವರುಷದ ಏಳು ಕುರಿಮರಿಗಳು; ನಿಮಗೆ ಇವು ದೋಷವಿಲ್ಲದ ಪೂರ್ಣಾಂಗಗಳಾಗಿರಬೇಕು.
|
20. ಅವುಗಳ ಆಹಾರದ ಅರ್ಪಣೆಯನ್ನೂ ಎಣ್ಣೇ ಕಲಸಿದ ಹಿಟ್ಟನ್ನೂ ಹೋರಿಗೆ ಮೂರು ದಶಾಂಶಗಳನ್ನೂ ಟಗರಿಗೆ ಎರಡು ದಶಾಂಶ ಗಳನ್ನೂ ಅರ್ಪಿಸಬೇಕು.
|
24. ಈ ಪ್ರಕಾರ ನೀವು ಏಳು ದಿವಸಗಳ ಮಟ್ಟಿಗೂ ದಿನ ದಿನಕ್ಕೆ ಕರ್ತನಿಗೆ ಸುವಾಸೆನೆಗಾಗಿ ದಹನಬಲಿಯ ಆಹಾರವನ್ನು ಅರ್ಪಿಸಬೇಕು; ಅದನ್ನೂ ಅದಕ್ಕೆ ತಕ್ಕ ಪಾನದ ಅರ್ಪಣೆಯನ್ನೂ ನಿತ್ಯವಾದ ದಹನಬಲಿಯ ಹೊರತಾಗಿ ಅರ್ಪಿಸಬೇಕು.
|
26. ಪ್ರಥಮ ಫಲಗಳ ದಿವಸದಲ್ಲಿಯೂ ನೀವು ಕರ್ತ ನಿಗೆ ನಿಮ್ಮ ವಾರಗಳಲ್ಲಿ ಹೊಸ ಆಹಾರದ ಅರ್ಪಣೆ ಯನ್ನು ಅರ್ಪಿಸುವಾಗ ನಿಮಗೆ ಪರಿಶುದ್ಧವಾದ ಸಭೆ ಇರಬೇಕು; ಯಾವ ಕೆಲಸವನ್ನಾದರೂ ಮಾಡಬಾರದು.
|
30. ನಿಮಗೋಸ್ಕರ ಪ್ರಾಯಶ್ಚಿತ್ತಕ್ಕೆ ಮೇಕೆಮರಿಯನ್ನೂ ಅರ್ಪಿಸಬೇಕು.ನಿತ್ಯವಾದ ದಹನಬಲಿಯನ್ನೂ ಅದರ ಆಹಾರದ ಅರ್ಪಣೆಯನ್ನೂ ಹೊರತಾಗಿ ನೀವು ದೋಷವಿಲ್ಲದ ಇವುಗಳನ್ನೂ ಅವುಗಳಿಗೆ ತಕ್ಕ ಪಾನದ ಅರ್ಪಣೆ ಗಳನ್ನೂ ಅರ್ಪಿಸಬೇಕು.
|
31. ನಿತ್ಯವಾದ ದಹನಬಲಿಯನ್ನೂ ಅದರ ಆಹಾರದ ಅರ್ಪಣೆಯನ್ನೂ ಹೊರತಾಗಿ ನೀವು ದೋಷವಿಲ್ಲದ ಇವುಗಳನ್ನೂ ಅವುಗಳಿಗೆ ತಕ್ಕ ಪಾನದ ಅರ್ಪಣೆ ಗಳನ್ನೂ ಅರ್ಪಿಸಬೇಕು.
|