1. ಸಹೋದರರೇ, (ನ್ಯಾಯಪ್ರಮಾಣವನ್ನು ತಿಳಿದವರಿಗೆ ನಾನು ಹೇಳುವದೇ ನಂದರೆ,) ಒಬ್ಬ ಮನುಷ್ಯನು ಜೀವದಿಂದಿರುವ ತನಕ ಅವನ ಮೇಲೆ ನ್ಯಾಯಪ್ರಮಾಣವು ಪ್ರಭುತ್ವ ಮಾಡುತ್ತ ದೆಂಬದು ನಿಮಗೆ ಗೊತ್ತಿಲ್ಲವೇ?
|
2. ಗಂಡನಿರುವ ಸ್ತ್ರೀಯು ಅವನು ಬದುಕಿರುವ ತನಕ ನ್ಯಾಯಪ್ರಮಾಣದಿಂದ ಅವನಿಗೆ ಕಟ್ಟಲ್ಪಟ್ಟಿದ್ದಾಳೆ; ಗಂಡನು ಸತ್ತರೆ ಆಕೆಯು ಅವನ ನ್ಯಾಯಪ್ರಮಾಣದಿಂದ ಬಿಡುಗಡೆಯಾಗಿ ದ್ದಾಳೆ.
|
3. ಹೀಗಿರಲಾಗಿ ಗಂಡನು ಜೀವದಿಂದಿರುವಾಗ ಆಕೆ ಬೇರೊಬ್ಬನನ್ನು ಮದುವೆ ಮಾಡಿಕೊಂಡರೆ ವ್ಯಭಿ ಚಾರಿಣಿ ಎಂದು ಕರೆಯಲ್ಪಡುವಳು; ಗಂಡನು ಸತ್ತರೆ ಆ ನ್ಯಾಯಪ್ರಮಾಣದಿಂದ ಆಕೆಯು ಬಿಡುಗಡೆಯಾಗಿ ದ್ದಾಳೆ. ಹೀಗೆ ಆಕೆ ಮತ್ತೊಬ್ಬನನ್ನು ಮದುವೆ ಮಾಡಿ ಕೊಂಡರೂ ವ್ಯಭಿಚಾರಿಣಿಯಲ್ಲ.
|
4. ಹಾಗೆಯೇ ನನ್ನ ಸಹೋದರರೇ, ನೀವು ಸಹ ಕ್ರಿಸ್ತನ ದೇಹದ ಮೂಲಕವಾಗಿ ನ್ಯಾಯಪ್ರಮಾಣದ ಪಾಲಿಗೆ ಸತ್ತಿರಿ. ದೇವರಿಗೆ ಫಲಫಲಿಸುವದಕ್ಕಾಗಿ ಮತ್ತೊಬ್ಬನನ್ನು ಅಂದರೆ ಸತ್ತುಜೀವಿತನಾಗಿ ಎದ್ದಾತನನ್ನು ಸೇರಿಕೊಂಡಿರಿ.
|
5. ನಾವು ಶರೀರದಲ್ಲಿದ್ದಾಗ ಪಾಪಗಳ ಇಚ್ಛೆಗಳು ನ್ಯಾಯಪ್ರಮಾಣದಿಂದಲೇ ಮರಣಕ್ಕೆ ಫಲಫಲಿಸುವ ದಕ್ಕಾಗಿ ನಮ್ಮ ಅಂಗಗಳಲ್ಲಿ ಯತ್ನಿಸುತ್ತಿದ್ದವು.
|
6. ಈಗಲಾದರೋ ನಮ್ಮನ್ನು ಹಿಡುಕೊಂಡಿದ್ದ ನ್ಯಾಯಪ್ರಮಾಣದ ಪಾಲಿಗೆ ನಾವು ಸತ್ತಕಾರಣ ಅದರಿಂದ ವಿಮುಕ್ತರಾಗಿದ್ದೇವೆ; ಹೀಗೆ ನಾವು ಅಕ್ಷರದ ಹಳೇ ರೀತಿಯಲ್ಲಿ ಆತನನ್ನು ಸೇವಿಸದೆ ಆತ್ಮನಿಂದ ಹೊಸ ರೀತಿಯಲ್ಲಿಯೇ ಸೇವಿಸುತ್ತೇವೆ.
|
7. ಹಾಗಾದರೆ ನಾವು ಏನು ಹೇಳೋಣ? ನ್ಯಾಯ ಪ್ರಮಾಣವು ಪಾಪವೋ? ಹಾಗೆ ಎಂದಿಗೂ ಅಲ್ಲ; ನ್ಯಾಯಪ್ರಮಾಣದಿಂದಲೇ ಹೊರತು ಪಾಪವೆಂಬದು ಏನೋ ನನಗೆ ಗೊತ್ತಿರಲಿಲ್ಲ. ಯಾಕಂದರೆ--ನೀನು ಆಶಿಸಬಾರದು ಎಂದು ನ್ಯಾಯಪ್ರಮಾಣವು ಹೇಳ ದಿದ್ದರೆ ದುರಾಶೆಯೆಂದರೆ ಏನೋ ನನಗೆ ತಿಳಿಯು ತ್ತಿರಲಿಲ್ಲ.
|
8. ಆದರೆ ಪಾಪವು ಈ ಆಜ್ಞೆಯಿಂದ ಅನುಕೂಲ ಹೊಂದಿ ಸಕಲ ವಿಧವಾದ ದುರಾಶೆಯನ್ನು ನನ್ನಲ್ಲಿ ಹುಟ್ಟಿಸಿತು. ನ್ಯಾಯಪ್ರಮಾಣವು ಇಲ್ಲದಿರು ವಾಗ ಪಾಪವು ಸತ್ತದ್ದಾಗಿದೆ.
|
9. ಮೊದಲು ನಾನು ನ್ಯಾಯಪ್ರಮಾಣವಿಲ್ಲದವನಾಗಿದ್ದು ಜೀವದಿಂದಿದ್ದೆನು. ಆಜ್ಞೆಯು ಬಂದಾಗ ಪಾಪವು ಪುನರ್ಜೀವವಾಗಿ ನಾನು ಸತ್ತೆನು.
|
13. ಹಾಗಾದರೆ ಹಿತವಾದದ್ದು ನನಗೆ ಮರಣಕ್ಕೆ ಕಾರಣವಾಯಿತೋ? ಹಾಗೆ ಎಂದಿಗೂ ಅಲ್ಲ; ಆದರೆ ಪಾಪವು ಹಿತವಾದದ್ದರ ಮೂಲಕ ನನ್ನಲ್ಲಿ ಮರಣವನ್ನು ಉಂಟುಮಾಡಿದ್ದರಿಂದ ಅದು ಪಾಪವೇ ಎಂದು ಕಾಣಿಸಿಕೊಂಡಿತು. ಹೀಗೆ ಆಜ್ಞೆಯ ಮೂಲಕ ಪಾಪವು ಅತ್ಯಧಿಕವಾದ ಪಾಪವಾಗಿ ತೋರಿಬಂತು.
|
14. ನ್ಯಾಯ ಪ್ರಮಾಣವು ಆತ್ಮೀಕವಾದದ್ದೆಂದು ನಾವು ಬಲ್ಲೆವು; ಆದರೆ ನಾನು ಶರೀರಾಧೀನನೂ ಪಾಪದ ಅಧೀನದಲ್ಲಿ ರುವದಕ್ಕೆ ಮಾರಲ್ಪಟ್ಟವನೂ ಆಗಿದ್ದೇನೆ.
|
15. ಹೇಗಂದರೆ ನಾನು ಮಾಡುವದನ್ನು ನಾನೇ ಒಪ್ಪುವದಿಲ್ಲ; ಯಾವದನ್ನು ಮಾಡಬೇಕೆಂದು ನಾನು ಇಚ್ಛಿಸುತ್ತೇನೋ ಅದನ್ನು ಮಾಡದೆ ನಾನು ವಿರೋಧಿಸುವದನ್ನು ಮಾಡುತ್ತೇನೆ.
|
18. ಯಾಕಂದರೆ ನನ್ನಲ್ಲಿ ಅಂದರೆ ನನ್ನ ಶರೀರದಲ್ಲಿ ಒಳ್ಳೆಯದೇನೂ ವಾಸವಾಗಿಲ್ಲವೆಂದು ನನಗೆ ತಿಳಿದದೆ; ಒಳ್ಳೇದನ್ನು ಮಾಡುವದಕ್ಕೆ ನನಗೇನೋ ಮನಸ್ಸುಂಟು; ಆದರೆ ಅದನ್ನು ಮಾಡುವದು ನನ್ನಿಂದಾಗದು.
|
20. ಇಚ್ಛಿಸದಿರುವದನ್ನು ನಾನು ಮಾಡಿದರೆ ಅದನ್ನು ಮಾಡಿದವನು ಇನ್ನು ನಾನಲ್ಲ. ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡಿತು.
|
23. ಆದರೆ ನನ್ನ ಅಂಗಗಳಲ್ಲಿ ಬೇರೊಂದು ನಿಯಮವುಂಟೆಂದು ನಾನು ನೋಡುತ್ತೇನೆ; ಅದು ನನ್ನ ಮನಸ್ಸಿನಲ್ಲಿರುವ ನಿಯಮಕ್ಕೆ ವಿರೋಧವಾಗಿ ಕಾದಾಡಿ ನನ್ನನ್ನು ಸೆರೆ ಹಿಡಿದು ನನ್ನ ಅಂಗಗಳಲ್ಲಿರುವ ಪಾಪದ ನಿಯಮಕ್ಕೆ ವಶಮಾಡುವಂಥದ್ದಾಗಿದೆ.
|
25. ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಮಾಡುತ್ತೇನೆ; ಹೀಗೆ ನನ್ನಷ್ಟಕ್ಕೆ ನಾನೇ ಮನಸ್ಸಿನಿಂದ ದೇವರ ನಿಯಮಕ್ಕೂ ಶರೀರದಿಂದ ಪಾಪವೆಂಬ ನಿಯಮಕ್ಕೂ ಆಳಾಗಿದ್ದೇನೆ.
|