1. ಜೊತೆ ಹಿರಿಯನೂ ಕ್ರಿಸ್ತನ ಶ್ರಮೆಗಳ ಸಾಕ್ಷಿಯೂ ಪ್ರತ್ಯಕ್ಷವಾಗಲಿರುವ ಪ್ರಭಾವ ದಲ್ಲಿ ಪಾಲುಗಾರನು ಆಗಿರುವ ನಾನು ನಿಮ್ಮಲ್ಲಿರುವ ಹಿರಿಯರನ್ನು ಎಚ್ಚರಿಸುವದೇನಂದರೆ,
|
2. ನಿಮ್ಮಲ್ಲಿರುವ ದೇವರ ಮಂದೆಯನ್ನು ಕಾಯಿರಿ; ಬಲಾತ್ಕಾರದಿಂದಲ್ಲ, ಆದರೆ ಇಷ್ಟಪೂರ್ವಕವಾಗಿಯೂ; ನೀಚವಾದ ದ್ರವ್ಯಾಶೆಯಿಂದಲ್ಲ, ಸಿದ್ಧಮನಸ್ಸಿನಿಂದಲೂ ಮೇಲ್ವಿ ಚಾರಣೆ ಮಾಡಿರಿ.
|
5. ಅದೇ ರೀತಿಯಾಗಿ ಯೌವನಸ್ಥರೇ, ಹಿರಿಯರಿಗೆ ಅಧೀನರಾಗಿರ್ರಿ; ನೀವೆಲ್ಲರೂ ದೀನತೆಯೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಅಧೀನರಾಗಿರ್ರಿ. ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ. ದೀನರಿ ಗಾದರೊ ಕೃಪೆಯನ್ನು ಅನುಗ್ರಹಿಸುತ್ತಾನೆ.
|
6. ಹೀಗಿರುವದರಿಂದ ದೇವರ ತ್ರಾಣವುಳ್ಳ ಹಸ್ತದ ಕೆಳಗೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ; ಆತನು ತಕ್ಕ ಕಾಲದಲ್ಲಿ ನಿಮ್ಮನ್ನು ಮೇಲಕ್ಕೆ ತರುವನು.
|
8. ಸ್ವಸ್ಥಚಿತ್ತರಾಗಿರ್ರಿ. ಎಚ್ಚರವಾಗಿರ್ರಿ; ನಿಮ್ಮ ವಿರೋಧಿ ಯಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.
|
9. ನೀವು ನಂಬಿಕೆಯಲ್ಲಿ ದೃಢವಾಗಿದ್ದು ಅವನನ್ನು ಎದುರಿಸಿರಿ; ಲೋಕದಲ್ಲಿರುವ ನಿಮ್ಮ ಸಹೋದರರಿಗೂ ಅಂಥ ಬಾಧೆಗಳೇ ಸಂಭವಿಸುತ್ತವೆಯೆಂದು ನಿಮಗೆ ತಿಳಿದದೆಯಲ್ಲಾ.
|
10. ಕ್ರಿಸ್ತ ಯೇಸುವಿನ ಮೂಲಕ ನಿಮ್ಮನ್ನು ತನ್ನ ನಿತ್ಯಪ್ರಭಾವಕ್ಕೆ ಕರೆದ ಕೃಪಾಪೂರ್ಣ ನಾದ ದೇವರು ತಾನೇ ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಪರಿಪೂರ್ಣ ಮಾಡಿ ಸ್ಥಿರಪಡಿಸಿ ಬಲಪಡಿಸಿ ನೆಲೆಗೊಳಿಸುವನು.
|
12. ನಿಮ್ಮನ್ನು ಎಚ್ಚರಿಸುವದಕ್ಕೂ ಇದೇ ದೇವರ ನಿಜವಾದ ಕೃಪೆ ಎಂದು ಸಾಕ್ಷಿ ಹೇಳುವದಕ್ಕೂ ನಿಮಗೆ ನಂಬಿಗಸ್ತನಾದ ಸಹೋದರನೆಂದು ನಾನು ಎಣಿಸುವ ಸಿಲ್ವಾನನಿಂದ ಸಂಕ್ಷೇಪವಾಗಿ ಇದನ್ನು ಬರೆದಿದ್ದೇನೆ. ಈ ನಿಜವಾದ ಕೃಪೆಯಲ್ಲಿ ನೀವು ನಿಂತವರಾಗಿದ್ದೀರಿ.
|
13. ನಿಮ್ಮೊಂದಿಗೆ ಆರಿಸಿಕೊಂಡಂಥ ಬಾಬೆಲಿನಲ್ಲಿರುವ ಸಭೆಯು ನಿಮಗೆ ವಂದನೆ ಹೇಳುತ್ತದೆ. ನನ್ನ ಮಗನಾದ ಮಾರ್ಕನು ಸಹ ವಂದನೆಹೇಳುತ್ತಾನೆ.ಪ್ರೀತಿಯಿಂದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. ಕ್ರಿಸ್ತ ಯೇಸುವಿನಲ್ಲಿರುವ ನಿಮ್ಮೆಲ್ಲರಿಗೆ ಶಾಂತಿಯಿರಲಿ. ಆಮೆನ್.
|
14. ಪ್ರೀತಿಯಿಂದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. ಕ್ರಿಸ್ತ ಯೇಸುವಿನಲ್ಲಿರುವ ನಿಮ್ಮೆಲ್ಲರಿಗೆ ಶಾಂತಿಯಿರಲಿ. ಆಮೆನ್.
|