2. ನಾನು ನಿಮ್ಮನ್ನು ದುಃಖ ಪಡಿಸಿದರೆ ನನ್ನನ್ನು ಆನಂದಪಡಿಸುವದಕ್ಕೆ ಯಾರಿ ದ್ದಾರೆ? ನನ್ನಿಂದ ದುಃಖ ಹೊಂದಿದವನೇ ಹೊರತು ಬೇರೆ ಯಾರೂ ಇಲ್ಲವಲ್ಲಾ.
|
3. ನಾನು ಬಂದಾಗ ನನ್ನನು ಸಂತೋಷಪಡಿಸತಕ್ಕವರಿಂದ ದುಃಖ ಹೊಂದಬಾರ ದೆಂದೂ ನನ್ನ ಸಂತೋಷವು ನಿಮ್ಮೆಲ್ಲರ ಸಂತೋಷವೇ ಎಂದೂ ನಿಮ್ಮೆಲ್ಲರ ವಿಷಯದಲ್ಲಿ ನನಗೆ ಭರವಸ ವಿರುವದರಿಂದ ನಾನು ನಿಮಗೆ ಇದನ್ನು ಬರೆದಿದ್ದೇನೆ.
|
4. ನಿಮಗೆ ದುಃಖವಾಗಬೇಕಂತಲ್ಲ, ನಿಮ್ಮ ಮೇಲೆ ನನಗಿರುವ ಅಧಿಕವಾದ ಪ್ರೀತಿಯನ್ನು ನೀವು ತಿಳಿದು ಕೊಳ್ಳಬೇಕೆಂತಲೇ ನಾನು ಬಹಳ ಕಣ್ಣೀರಿನಿಂದಲೂ ಹೃದಯದ ಬಹುಸಂಕಟದಿಂದಲೂ ವ್ಯಾಕುಲ ದಿಂದಲೂ ನಿಮಗೆ ಬರೆದೆನು.
|
5. ಆದರೆ ನಾನು ನಿಮ್ಮ ಮೇಲೆ ವಿಶೇಷವಾದ ಭಾರವನ್ನು ಹಾಕದಂತೆ ಯಾವನಾದರೂ ದುಃಖ ವನ್ನುಂಟು ಮಾಡಿದ್ದರೆ ಅವನು ಸ್ವಲ್ಪ ಮಟ್ಟಿಗೆ ನನ್ನನ್ನು ದುಃಖಪಡಿಸಿದ್ದಾನೆ.
|
10. ನೀವು ಯಾರಿಗೆ ಯಾವದನ್ನು ಮನ್ನಿಸುತ್ತೀರೋ ನಾನು ಸಹ ಮನ್ನಿಸುತ್ತೇನೆ; ನಾನು ಯಾವದನ್ನಾದರೂ ಮನ್ನಿಸಿದ್ದರೆ ಕ್ರಿಸ್ತನ ಸನ್ನಿಧಾನದಲ್ಲಿ ನಿಮ್ಮ ನಿಮಿತ್ತವೇ ಮನ್ನಿಸಿದೆನು.
|
12. ಇದಲ್ಲದೆ ಕ್ರಿಸ್ತನ ಸುವಾರ್ತೆಯನ್ನು ಸಾರುವ ದಕ್ಕಾಗಿ ನಾನು ತ್ರೋವಕ್ಕೆ ಬಂದಾಗ ಕರ್ತನಿಂದ ನನಗೆ ಬಾಗಲು ತೆರೆಯಲ್ಪಟ್ಟಿತು.
|
13. ಆದರೂ ನನ್ನ ಸಹೋದರನಾದ ತೀತನು ನನಗೆ ಸಿಕ್ಕಲಿಲ್ಲವಾದ ಕಾರಣ ನನ್ನ ಆತ್ಮಕ್ಕೆ ಉಪಶಮನವಿಲ್ಲದೆ ಅಲ್ಲಿದ್ದವರಿಂದ ಕಳುಹಿಸಿ ಕೊಂಡವನಾಗಿ ಹೊರಟು ಮಕೆದೋನ್ಯಕ್ಕೆ ಬಂದೆನು.
|
14. ಕ್ರಿಸ್ತನಲ್ಲಿ ನಮ್ಮನ್ನು ಯಾವಾಗಲೂ ಜಯೋತ್ಸವ ದೊಡನೆ ಮೆರಸುತ್ತಾ ಆತನ ವಿಷಯವಾದ ಜ್ಞಾನ ವೆಂಬ ಸುವಾಸನೆಯನ್ನು ನಮ್ಮ ಮೂಲಕ ಎಲ್ಲಾ ಸ್ಥಳಗಳಲ್ಲಿ ವ್ಯಾಪನಗೊಳಿಸುತ್ತಾ ಬರುವ ದೇವರಿಗೆ ಸ್ತೋತ್ರ;
|
16. ನಾವು ನಾಶವಾಗುವವರಿಗೆ ಮರಣದಿಂದಾದ ಮರಣದ ವಾಸನೆಯಾಗಿಯೂ ರಕ್ಷಿಸಲ್ಪಟ್ಟವರಿಗೆ ಜೀವದಿಂದಾದ ಜೀವದ ಸುವಾಸನೆ ಯಾಗಿಯೂ ಇದ್ದೇವೆ; ಹೀಗಿರುವಾಗ ಇವುಗಳಿಗೆ ಯೋಗ್ಯನು ಯಾರು?ನಾವು ದೇವರ ವಾಕ್ಯವನ್ನು ಕಲಬೆರಿಕೆ ಮಾಡುವವರಾದ ಹೆಚ್ಚು ಪಾಲಿನ ಜನರ ಹಾಗಿರದೆ ನಿಷ್ಕಪಟಿಗಳಾಗಿ ದೇವರಿಂದ ಹೊಂದಿದ ವರಿಗೆ ತಕ್ಕ ಹಾಗೆ ಕ್ರಿಸ್ತನಲ್ಲಿದ್ದುಕೊಂಡು ದೇವರ ಸಮಕ್ಷಮದಲ್ಲಿಯೇ ಮಾತನಾಡುತ್ತೇವೆ.
|
17. ನಾವು ದೇವರ ವಾಕ್ಯವನ್ನು ಕಲಬೆರಿಕೆ ಮಾಡುವವರಾದ ಹೆಚ್ಚು ಪಾಲಿನ ಜನರ ಹಾಗಿರದೆ ನಿಷ್ಕಪಟಿಗಳಾಗಿ ದೇವರಿಂದ ಹೊಂದಿದ ವರಿಗೆ ತಕ್ಕ ಹಾಗೆ ಕ್ರಿಸ್ತನಲ್ಲಿದ್ದುಕೊಂಡು ದೇವರ ಸಮಕ್ಷಮದಲ್ಲಿಯೇ ಮಾತನಾಡುತ್ತೇವೆ.
|