2. ಯೋಸೇಫನು ತನ್ನ ತಂದೆಗೆ ಸುಗಂಧ ದ್ರವ್ಯವನ್ನು ಹಾಕಬೇಕೆಂದು ತನ್ನ ದಾಸರಾದ ವೈದ್ಯರಿಗೆ ಅಪ್ಪಣೆಕೊಡಲು ಅವರು ಇಸ್ರಾಯೇಲನಿಗೆ ಸುಗಂಧ ದ್ರವ್ಯವನ್ನು ಹಾಕಿದರು.
|
3. ನಾಲ್ವತ್ತು ದಿವಸಗಳು ಅವನಿಗೆ ಸಂಪೂರ್ಣವಾದವು. ಯಾಕಂದರೆ ಸುಗಂಧ ದ್ರವ್ಯವನ್ನು ತುಂಬಿಸಿದವರಿಗೆ ದಿನಗಳು ಹೀಗೆ ಸಂಪೂರ್ಣವಾಗಬೇಕು. ಇದಲ್ಲದೆ ಐಗುಪ್ತ್ಯರು ಅವನಿಗಾಗಿ ಎಪ್ಪತ್ತು ದಿವಸ ದುಃಖಪಟ್ಟರು.
|
4. ಅವ ನಿಗಾಗಿ ದುಃಖಿಸುವ ದಿನಗಳು ಮುಗಿದ ಮೇಲೆ ಯೋಸೇಫನು ಫರೋಹನ ಮನೆಯವರಿಗೆ--ನಾನು ನಿಮ್ಮ ಕಣ್ಣುಗಳ ಮುಂದೆ ಕೃಪೆ ಹೊಂದಿದ್ದರೆ ಫರೋಹನ ಕಿವಿಗಳಲ್ಲಿ ಈ ಮಾತು ಹೇಳಬೇಕು.
|
5. ನನ್ನ ತಂದೆ ನನಗೆ ಇಗೋ, ನಾನು ಸಾಯುತ್ತೇನೆ. ನಾನು ಕಾನಾನ್ದೇಶದಲ್ಲಿ ನನಗೋಸ್ಕರ ಅಗೆದ ನನ್ನ ಸಮಾಧಿಯಲ್ಲಿಯೇ ನನ್ನನ್ನು ಹೂಣಿಡಬೇಕು ಎಂದು ನನ್ನಿಂದ ಪ್ರಮಾಣಮಾಡಿಸಿದ್ದಾನೆ. ಹೀಗಿ ರುವದರಿಂದ ನಾನು ಹೋಗಿ ನನ್ನ ತಂದೆಯನ್ನು ಹೂಣಿಟ್ಟು ತಿರಿಗಿ ಬರುವ ಹಾಗೆ ಅಪ್ಪಣೆಯಾಗಬೇಕು ಅಂದನು.
|
7. ಹೀಗೆ ಯೋಸೇಫನು ತನ್ನ ತಂದೆಯನ್ನು ಹೂಣಿಡುವದಕ್ಕೆ ಹೊರಟುಹೋದನು. ಅವನ ಸಂಗಡ ಫರೋಹನ ದಾಸರೆಲ್ಲರೂ ಅವನ ಮನೆಯ ಹಿರಿಯರೂ ಐಗುಪ್ತದೇಶದ ಹಿರಿಯರೆಲ್ಲರೂ
|
8. ಯೋಸೇಫನ ಮನೆಯವರೆಲ್ಲರೂ ಅವನ ಸಹೋದ ರರೂ ಅವನ ತಂದೆಯ ಮನೆಯವರೂ ಹೋದರು. ಅವರ ಮಕ್ಕಳನ್ನೂ ಕುರಿದನಗಳನ್ನೂ ಮಾತ್ರ ಗೋಷೆನ್ ಸೀಮೆಯಲ್ಲಿ ಬಿಟ್ಟರು.
|
10. ಅವರು ಯೊರ್ದನಿನ ಆಚೆ ಇರುವ ಆಟಾದ್ ಕಣಕ್ಕೆ ಬಂದು ಅಲ್ಲಿ ಅಧಿಕವಾದ ಮಹಾಗೋಳಾಟದಿಂದ ದುಃಖ ಪಟ್ಟರು. ಅವನು ತನ್ನ ತಂದೆಗಾಗಿ ಏಳು ದಿವಸಗಳ ವರೆಗೆ ದುಃಖಪಟ್ಟನು.
|
11. ದೇಶದ ನಿವಾಸಿಗಳಾದ ಕಾನಾನ್ಯರು ಆಟಾದ್ ಕಣದಲ್ಲಿ ಆಗುತ್ತಿದ್ದ ದುಃಖವನ್ನು ನೋಡಿ--ಇದು ಐಗುಪ್ತ್ಯರಿಗೆ ಘೋರವಾದ ದುಃಖ ಎಂದು ಹೇಳಿದರು. ಆದದರಿಂದ ಅದಕ್ಕೆ ಆಬೇಲ್ ಮಿಚ್ರಯಾಮ್ ಎಂದು ಹೆಸರಾಯಿತು. ಅದು ಯೊರ್ದನಿನ ಆಚೆಯಲ್ಲಿದೆ.
|
13. ಅವನ ಕುಮಾರರು ಅವನನ್ನು ಕಾನಾನ್ ದೇಶಕ್ಕೆ ತಕ್ಕೊಂಡು ಹೋಗಿ ಅಬ್ರಹಾಮನು ಸ್ವಂತ ಸಮಾಧಿಗೋಸ್ಕರ ಹಿತ್ತಿಯನಾದ ಎಫ್ರೋನಿ ನಿಂದ ಕೊಂಡುಕೊಂಡಿದ್ದ ಮಮ್ರೆಗೆ ಎದುರಾಗಿರುವ ಮಕ್ಪೇಲ ಹೊಲದ ಗವಿಯಲ್ಲಿ ಹೂಣಿಟ್ಟರು.
|
14. ಯೋಸೇಫನು ತನ್ನ ತಂದೆಯನ್ನು ಹೂಣಿಟ್ಟ ಮೇಲೆ ತನ್ನ ಸಹೋದರರ ಸಂಗಡಲೂ ತನ್ನ ತಂದೆಯನ್ನು ಹೂಣಿಡುವದಕ್ಕಾಗಿ ಅವನ ಸಂಗಡ ಹೋದವರೆಲ್ಲರ ಸಂಗಡಲೂ ಐಗುಪ್ತಕ್ಕೆ ತಿರಿಗಿ ಬಂದನು.
|
15. ತಮ್ಮ ತಂದೆ ಸತ್ತುಹೋದದ್ದನ್ನು ಯೋಸೇಫನ ಸಹೋದರರು ನೋಡಿ--ಒಂದು ವೇಳೆ ಯೋಸೇಫನು ನಮ್ಮನ್ನು ಹಗೆಮಾಡಿ ನಾವು ಅವನಿಗೆ ಮಾಡಿದ್ದ ಎಲ್ಲಾ ಕೇಡಿಗೆ ನಿಶ್ಚಯವಾಗಿ ಪ್ರತೀಕಾರ ಮಾಡಾನು ಎಂದು ಅಂದುಕೊಂಡು
|
17. ನಿನ್ನ ಸಹೋದರರ ಅಪರಾಧವನ್ನೂ ಅವರ ಪಾಪವನ್ನೂ ಮನ್ನಿಸು ಎಂಬದಾಗಿ ಯೋಸೇಫನಿಗೆ ಹೇಳಿರಿ ಎಂದು ಆಜ್ಞಾಪಿಸಿದ್ದಾನೆ. ಹೀಗಿರುವದರಿಂದ ನಿನ್ನ ತಂದೆಯ ದೇವರ ದಾಸರಾದ ನಾವು ಮಾಡಿದ ಅಪರಾಧವನ್ನು ಕ್ಷಮಿಸು ಅಂದರು. ಹೀಗೆ ಅವರು ಯೋಸೇಫನ ಸಂಗಡ ಮಾತನಾಡುತ್ತಿರುವಾಗ ಅವನು ಅತ್ತನು.
|
20. ನೀವು ನನಗೆ ವಿರೋಧವಾಗಿ ಕೇಡನ್ನು ಆಲೋಚಿ ಸಿದಿರಿ; ಆದರೆ ದೇವರು ಈಗ ಮಾಡಿದ ಹಾಗೆ ಬಹುಜನರನ್ನು ಬದುಕಿಸುವದಕ್ಕೋಸ್ಕರ ಮೇಲಿಗಾಗಿ ಆಲೋಚನೆ ಮಾಡಿದನು.
|
21. ಹೀಗಿರುವದರಿಂದ ನೀವು ಭಯಪಡಬೇಡಿರಿ. ನಾನು ನಿಮ್ಮನ್ನೂ ನಿಮ್ಮ ಮಕ್ಕಳನ್ನೂ ಸಂರಕ್ಷಿಸುತ್ತೇನೆ ಎಂದು ಹೇಳಿ ಅವರನ್ನು ಸಂತೈಸಿ ದಯೆಯಿಂದ ಮಾತನಾಡಿದನು.
|
22. ಹೀಗೆ ಯೋಸೇಫನೂ ತನ್ನ ತಂದೆಯ ಮನೆ ಯವರೂ ಸಹಿತವಾಗಿ ಐಗುಪ್ತದಲ್ಲಿ ವಾಸಮಾಡಿದರು. ಯೋಸೇಫನು ನೂರ ಹತ್ತು ವರುಷ ಬದುಕಿದನು.
|
23. ಯೋಸೇಫನು ಎಫ್ರಾಯಾಮಿನ ಮರಿ ಮೊಮ್ಮಕ್ಕ ಳನ್ನೂ ನೋಡಿದನು. ಮನಸ್ಸೆಯ ಮಗನಾದ ಮಾಕೀ ರನ ಮಕ್ಕಳು ಸಹ ಯೋಸೇಫನ ತೊಡೆಯ ಮೇಲೆಯೇ ಬೆಳೆದರು.
|
24. ಇದಲ್ಲದೆ ಯೋಸೇಫನು ತನ್ನ ಸಹೋದ ರರಿಗೆ--ನಾನು ಸತ್ತ ಮೇಲೆ ದೇವರು ನಿಶ್ಚಯವಾಗಿ ನಿಮ್ಮನ್ನು ಪರಾಂಬರಿಸಿ ಈ ದೇಶದೊಳಗಿಂದ ತಾನು ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣ ಮಾಡಿದ ದೇಶಕ್ಕೆ ಹೋಗಮಾಡುವನು ಅಂದನು.
|
25. ಯೋಸೇಫನು ಇಸ್ರಾಯೇಲನ ಮಕ್ಕಳಿಗೆ--ದೇವರು ನಿಮ್ಮನ್ನು ನಿಶ್ಚಯವಾಗಿ ದರ್ಶಿಸುವನು. ಆಗ ನನ್ನ ಎಲುಬುಗಳನ್ನು ಇಲ್ಲಿಂದ ತಕ್ಕೊಂಡು ಹೋಗಬೇಕೆಂದು ಪ್ರಮಾಣ ಮಾಡಿಸಿದನು.
|
26. ಯೋಸೇಫನು ನೂರ ಹತ್ತು ವರುಷದವನಾಗಿ ಸತ್ತನು. ಅವರು ಅವನಿಗೆ ಸುಗಂಧದ್ರವ್ಯವನ್ನು ಹಾಕಿ ಐಗುಪ್ತದಲ್ಲಿ ಪೆಟ್ಟಿಗೆ ಯೊಳೆಗೆ ಇಟ್ಟರು.
|