1. ನೀವು ಕರ್ತನನ್ನು ಸ್ತುತಿಸಿರಿ, ಕರ್ತನಿಗೆ ಉಪಕಾರ ಸ್ತುತಿಮಾಡಿರಿ; ಆತನು ಒಳ್ಳೆಯವನು, ಆತನ ಕರುಣೆಯು ಶಾಶ್ವತ ವಾಗಿರುವದು.
|
5. ಕರ್ತನೇ, ನೀನು ಆದುಕೊಂಡವರ ಸುಖವನ್ನು ನಾನು ನೋಡಿ ನಿನ್ನ ಜನಾಂಗದ ಸಂತೋಷ ದೊಂದಿಗೆ ಸಂತೋಷಿಸಿ ನಿನ್ನ ಬಾಧ್ಯತೆಯ ಸಂಗಡ ಹೊಗಳಿಕೊಳ್ಳುವೆನು.
|
7. ನಮ್ಮ ತಂದೆಗಳು ಐಗುಪ್ತದಲ್ಲಿ ನಿನ್ನ ಅದ್ಭುತಗಳನ್ನು ತಿಳಿಯದೆ ನಿನ್ನ ಕರುಣಾತಿಶಯವನ್ನು ನೆನಸದೆ, ಸಮುದ್ರದ ಬಳಿಯಲ್ಲಿ, ಅಂದರೆ ಕೆಂಪು ಸಮುದ್ರದ ಹತ್ತಿರ ನಿನಗೆ ತಿರುಗಿ ಬಿದ್ದರು.
|
9. ಆತನು ಕೆಂಪು ಸಮುದ್ರವನ್ನು ಗದರಿಸಲು ಅದು ಒಣಗಿ ಹೋಯಿತು. ಹೀಗೆ ಜಲಾಗಾಧದಲ್ಲಿ, ಅರಣ್ಯ ದಲ್ಲಿದ್ದ ಹಾಗೆಯೇ ಆತನು ಅವರನ್ನು ನಡಿಸಿದನು.
|
22. ಹಾಮನ ದೇಶದಲ್ಲಿ ಅದ್ಭುತಗಳನ್ನೂ ಕೆಂಪು ಸಮುದ್ರದ ಬಳಿ ಯಲ್ಲಿ ಭಯಂಕರವಾದವುಗಳನ್ನೂ ಮಾಡಿದ ದೇವ ರನ್ನು ಅವರು ಮರೆತರು.
|
23. ಆದದರಿಂದ ಆತನು ಅವರನ್ನು ನಾಶಮಾಡುತ್ತೇನೆಂದು ಹೇಳಿದನು. ಆದರೆ ಆತನು ಆದುಕೊಂಡ ಮೋಶೆಯು ಆತನ ಕೋಪ ವನ್ನು ತಿರುಗಿಸುವ ಹಾಗೆ ಆಪತ್ತಿನಲ್ಲಿ ಆತನ ಮುಂದೆ ನಿಂತುಕೊಂಡನು.
|
27. ಅವರ ಸಂತತಿಯನ್ನು ಜನಾಂಗಗಳಲ್ಲಿ ಕೆಡವಿ, ಅವರನ್ನು ದೇಶಗಳಲ್ಲಿ ಚದರಿಸುವದಕ್ಕೂ ಆತನು ತನ್ನ ಕೈಯನ್ನು ಅವರ ಮೇಲೆತ್ತಿದನು.
|
38. ಇದಲ್ಲದೆ ತಮ್ಮ ಗಂಡು ಹೆಣ್ಣು ಮಕ್ಕಳ ನಿರಪರಾ ಧದ ರಕ್ತವನ್ನು ಚೆಲ್ಲಿ, ಕಾನಾನಿನ ವಿಗ್ರಹಗಳಿಗೆ ಅರ್ಪಿಸಿ; ದೇಶವನ್ನು ರಕ್ತದಿಂದ ಅಶುದ್ಧಮಾಡಿದರು.
|
43. ಬಹಳ ಸಾರಿ ಆತನು ಅವರನ್ನು ಬಿಡಿಸಿದನು; ಆದರೆ ಅವರು ತಮ್ಮ ಆಲೋಚನೆಯಿಂದ ಆತನಿಗೆ ಕೋಪವನ್ನೆಬ್ಬಿಸಿದರು. ತಮ್ಮ ಅಕ್ರಮದಿಂದ ಅವರು ಕುಗ್ಗಿಹೋದರು.
|
47. ಓ ನಮ್ಮ ದೇವರಾದ ಕರ್ತನೇ, ನಾವು ನಿನ್ನ ಪರಿಶುದ್ಧ ಹೆಸರಿಗೆ ಉಪಕಾರಸ್ತುತಿ ಮಾಡಿ ನಿನ್ನ ಸ್ತೋತ್ರದಲ್ಲಿ ಜಯಘೋಷ ಮಾಡುವ ಹಾಗೆ ನಮ್ಮನ್ನು ರಕ್ಷಿಸು. ಅನ್ಯಜನಾಂಗಗಳೊಳಗಿಂದ ನಮ್ಮನ್ನು ಹೊರಗೆ ಬರಮಾಡು.ಇಸ್ರಾಯೇಲಿನ ದೇವರಾದ ಕರ್ತನಿಗೆ ಯುಗಯುಗಾಂತರಕ್ಕೂ ಸ್ತುತಿಯುಂಟಾಗಲಿ. ಜನರೆಲ್ಲಾ ಆಮೆನ್ ಎಂದು ಹೇಳಲಿ. ನೀವು ಕರ್ತನನ್ನು ಸ್ತುತಿಸಿರಿ.
|
48. ಇಸ್ರಾಯೇಲಿನ ದೇವರಾದ ಕರ್ತನಿಗೆ ಯುಗಯುಗಾಂತರಕ್ಕೂ ಸ್ತುತಿಯುಂಟಾಗಲಿ. ಜನರೆಲ್ಲಾ ಆಮೆನ್ ಎಂದು ಹೇಳಲಿ. ನೀವು ಕರ್ತನನ್ನು ಸ್ತುತಿಸಿರಿ.
|