1. ಕಡೇಕಾಲಗಳಲ್ಲಿ ಕೆಲವರು ವಂಚಿಸುವ ಆತ್ಮಗಳಿಗೂ ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ನಂಬಿಕೆಯಿಂದ ತೊಲಗಿಹೋಗುವ ರೆಂದು ಆತ್ಮನು ಸ್ಪಷ್ಟವಾಗಿ ಹೇಳುತ್ತಾನೆ.
|
3. ಮದುವೆಯಾಗಬಾರದೆಂತಲೂ ಯಾರು ನಂಬುವವರಾಗಿದ್ದು ಸತ್ಯವನ್ನು ಗ್ರಹಿಸಿಕೊಂಡಿದ್ದಾರೋ ಅವರು ಕೃತಜ್ಞತಾಸ್ತುತಿ ಮಾಡಿ ತಿನ್ನುವದಕ್ಕೋಸ್ಕರ ದೇವರು ಉಂಟು ಮಾಡಿದ ಆಹಾರವನ್ನು ತಿನ್ನಬಾರ ದೆಂತಲೂ ಆಜ್ಞಾಪಿಸುತ್ತಾರೆ.
|
4. ದೇವರ ಪ್ರತಿಯೊಂದು ಸೃಷ್ಟಿಯೂ ಒಳ್ಳೇದಾಗಿದೆ; ಸ್ತೋತ್ರ ಮಾಡಿ ತೆಗೆದು ಕೊಳ್ಳುವ ಪಕ್ಷಕ್ಕೆ ಯಾವದನ್ನೂ ನಿರಾಕರಿಸಬಾರದು.
|
6. ಈ ಸಂಗತಿಗಳನ್ನು ಸಹೋದರರಿಗೆ ತಿಳಿಸಿದರೆ ನೀನು ಅನುಸರಿಸುವ ನಂಬಿಕೆಯ ಮತ್ತು ಸುಬೋಧನೆಯ ವಾಕ್ಯಗಳಲ್ಲಿ ಪೋಷಣೆ ಹೊಂದುವವರಾಗಿ ಯೇಸು ಕ್ರಿಸ್ತನ ಒಳ್ಳೇ ಸೇವಕನಾಗಿರುವಿ.
|
8. ದೇಹಸಾಧನೆಯು ಸ್ವಲ್ಪ ಮಟ್ಟಿಗೆ ಲಾಭಕರವಾಗಿದೆ, ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಲಾಭಕರವಾದದ್ದು; ಆದಕ್ಕೆ ಈಗಲೂ ಮುಂದೆ ಬರುವದಕ್ಕೂ ಜೀವಾಗ್ದಾನ ಉಂಟು.
|
10. ಆದದರಿಂದ ಇದಕ್ಕಾಗಿ ನಾವು ಕಷ್ಟಪಡುವವರೂ ನಿಂದೆಯನ್ನನುಭವಿಸುವವರೂ ಆಗಿದ್ದೇವೆ; ಯಾಕಂದರೆ ಎಲ್ಲಾ ಮನುಷ್ಯರಿಗೆ ವಿಶೇಷವಾಗಿ ನಂಬುವವರಿಗೆ ರಕ್ಷಕನಾಗಿರುವ ಜೀವವುಳ್ಳ ದೇವರನ್ನು ನಾವು ನಂಬಿ ದ್ದೇವೆ.
|
12. ಯೌವನಸ್ಥನೆಂದು ನಿನ್ನನ್ನು ಅಸಡ್ಡೆ ಮಾಡುವದಕ್ಕೆ ಯಾರಿಗೂ ಅವಕಾಶಕೊಡದೆ ನಂಬು ವವರಿಗೆ ನಡೆ ನುಡಿ ಪ್ರೀತಿ ಆತ್ಮ ನಂಬಿಕೆ ಶುದ್ಧತ್ವದಲ್ಲಿ ನೀನೇ ಮಾದರಿಯಾಗಿರು.
|
14. ನಿನ್ನಲ್ಲಿರುವ ವರವನ್ನು ಅಲಕ್ಷ್ಯಮಾಡಬೇಡ; ಸಭೆಯ ಹಿರಿಯರು ಪ್ರವಾದನೆಯಿಂದ ನಿನ್ನ ಮೇಲೆ ಹಸ್ತಗಳನ್ನಿಟ್ಟಾಗ ಅದು ನಿನಗೆ ಕೊಡಲ್ಪಟ್ಟಿತಲ್ಲಾ.
|
15. ಈ ವಿಷಯಗಳನ್ನು ಧ್ಯಾನಿಸು ವವನಾಗಿರು; ನಿನ್ನನ್ನು ಸಂಪೂರ್ಣವಾಗಿ ಅವುಗಳಿಗೆ ಒಪ್ಪಿಸಿಕೊಡು; ಹೀಗೆ ನಿನಗಾದ ಲಾಭವು ಎಲ್ಲರಿಗೂ ತೋರಿಬಂದೀತು.ನಿನ್ನ ವಿಷಯದಲ್ಲಿಯೂ ಉಪ ದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಇವುಗಳಲ್ಲಿ ನಿರತನಾಗಿರು; ಹೀಗೆ ಮಾಡುವದರಿಂದ ನೀನು ನಿನ್ನನ್ನೂ ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವಿ.
|
16. ನಿನ್ನ ವಿಷಯದಲ್ಲಿಯೂ ಉಪ ದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಇವುಗಳಲ್ಲಿ ನಿರತನಾಗಿರು; ಹೀಗೆ ಮಾಡುವದರಿಂದ ನೀನು ನಿನ್ನನ್ನೂ ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವಿ.
|