1. ಕರ್ತನು ದಾವೀದನನ್ನು ಅವನ ಎಲ್ಲಾ ಶತ್ರುಗಳ ಕೈಯೊಳಗಿಂದಲೂ ಸೌಲನ ಕೈಯೊಳಗಿಂದಲೂ ಬಿಡಿಸಿದ ದಿವಸದಲ್ಲಿ ಅವನು ಕರ್ತನನ್ನು ಕುರಿತು ಈ ಹಾಡಿನ ಮಾತುಗಳನ್ನು ಹೇಳಿದನು. ಏನಂದರೆ--
|
3. ನನ್ನ ಬಂಡೆಯಾದ ದೇವರಲ್ಲಿ ನಾನು ಭರವಸ ವಿಡುವೆನು; ಆತನು ನನ್ನ ಗುರಾಣಿಯೂ ನನ್ನ ರಕ್ಷಣೆಯ ಕೊಂಬೂ ಉನ್ನತ ಗೋಪುರವೂ ನನ್ನ ಆಶ್ರಯವೂ ನನ್ನ ರಕ್ಷಕನೂ ಆಗಿದ್ದಾನೆ. ನೀನು ಬಲಾತ್ಕಾರಿಯಿಂದ ನನ್ನನ್ನು ರಕ್ಷಿಸುತ್ತೀ.
|
7. ನನ್ನ ಇಕ್ಕಟ್ಟಿನಲ್ಲಿ ಕರ್ತ ನನ್ನು ಕರೆದೆನು; ನನ್ನ ದೇವರನ್ನು ಕರೆದೆನು. ಆತನು ತನ್ನ ಮಂದಿರದೊಳಗಿಂದ ನನ್ನ ಶಬ್ದವನ್ನು ಕೇಳಿದನು; ನನ್ನ ಮೊರೆಯು ಆತನ ಕಿವಿಗೆ ಮುಟ್ಟಿತು.
|
16. ಮಿಂಚನ್ನು ಕಳುಹಿಸಿ ಅವರನ್ನು ಗಲಿಬಿಲಿ ಮಾಡಿ ದನು. ಆಗ ಕರ್ತನ ಗದರಿಕೆಯಿಂದಲೂ ಆತನ ಮೂಗಿನ ಶ್ವಾಸದ ಗಾಳಿಯಿಂದಲೂ ಸಮುದ್ರದ ನೆಲೆ ಗಳು ಕಾಣಲ್ಪಟ್ಟವು; ಭೂಲೋಕದ ಅಸ್ತಿವಾರಗಳು ಬೈಲಾದವು.
|
19. ಅವರು ನನಗಿಂತ ಬಲಿಷ್ಠ ರಾಗಿದ್ದರು. ನನ್ನ ಆಪತ್ತಿನ ದಿವಸದಲ್ಲಿ ನನಗೆ ಅಡ್ಡಿ ಯಾಗಿದ್ದರು; ಆದರೆ ಕರ್ತನು ನನಗೆ ಆಧಾರ ವಾಗಿದ್ದನು.
|
25. ಆದದರಿಂದ ಕರ್ತನು ನನ್ನ ನೀತಿಯ ಪ್ರಕಾರವಾಗಿಯೂ ಆತನ ಕಣ್ಣುಗಳ ಮುಂದಿನ ನನ್ನ ಶುದ್ಧತ್ವದ ಪ್ರಕಾರವಾಗಿಯೂ ನನಗೆ ಬದಲುಕೊಟ್ಟನು.
|
31. ದೇವರಾದರೋ, ಆತನ ಮಾರ್ಗವು ಸಂಪೂರ್ಣ ವಾದದ್ದು; ಕರ್ತನ ವಾಕ್ಯವು ಶೋಧಿಸಲ್ಪಟ್ಟದ್ದಾಗಿದೆ; ಆತನಲ್ಲಿ ಭರವಸವಿಡುವವರೆಲ್ಲರಿಗೆ ಗುರಾಣಿಯಾಗಿ ದ್ದಾನೆ.
|
42. ಅವರು ನೋಡುತ್ತಿದ್ದರು, ಆದರೆ ರಕ್ಷಿಸು ವವನು ಯಾರು ಇರಲಿಲ್ಲ; ಕರ್ತನನ್ನು ನೋಡಿದರು, ಆದರೆ ಆತನು ಅವರಿಗೆ ಪ್ರತ್ಯುತ್ತರ ಕೊಡಲಿಲ್ಲ.
|
43. ಆಗ ನಾನು ಅವರನ್ನು ನೆಲದ ಧೂಳಿನ ಹಾಗೆ ಪುಡಿಪುಡಿಮಾಡಿದೆನು; ಬೀದಿಯ ಕೆಸರಿನ ಹಾಗೆ ಅವರನ್ನು ತುಳಿದು ಚದರುವಂತೆ ಮಾಡಿದೆನು.
|
44. ನೀನು ನನ್ನ ಜನರ ವಾಗ್ವಾದಗಳಿಂದ ನನ್ನನ್ನು ತಪ್ಪಿಸಿದ್ದೀ, ಜನಾಂಗಗಳಿಗೆ ತಲೆಯಾಗಿ ನನ್ನನ್ನು ಇರಿಸಿದ್ದೀ; ನಾನು ಅರಿಯದ ಜನರು ನನ್ನನ್ನು ಸೇವಿಸುವರು.
|
49. ಆತನು ನನ್ನ ಶತ್ರುಗಳಿಂದ ನನ್ನನ್ನು ಹೊರಗೆ ತರು ತ್ತಾನೆ. ನೀನು ನನ್ನ ಎದುರಾಳಿಗಳಿಂದ ನನ್ನನ್ನು ತಪ್ಪಿಸಿ ಗೌರವಿಸುತ್ತೀ; ಬಲಾತ್ಕಾರದ ಮನುಷ್ಯನಿಂದ ತಪ್ಪಿ ಸುತ್ತೀ.
|
50. ಆದದರಿಂದ ಓ ಕರ್ತನೇ, ನಾನು ಜನಾಂಗ ಗಳಲ್ಲಿ ನಿನ್ನನ್ನು ಕೊಂಡಾಡುವೆನು; ನಿನ್ನ ಹೆಸರನ್ನು ಕೀರ್ತಿಸುವೆನು.ಆತನು ತನ್ನ ಅರಸನಿಗೆ ರಕ್ಷಣೆಯ ಗೋಪುರವಾಗಿದ್ದಾನೆ; ತನ್ನ ಅಭಿಷಕ್ತನಾದ ದಾವೀದ ನಿಗೂ ಅವನ ಸಂತತಿಗೂ ಕೃಪೆಯನ್ನು ಯುಗಯುಗಕ್ಕೂ ಅನುಗ್ರಹಿಸುತ್ತಾನೆ.
|
51. ಆತನು ತನ್ನ ಅರಸನಿಗೆ ರಕ್ಷಣೆಯ ಗೋಪುರವಾಗಿದ್ದಾನೆ; ತನ್ನ ಅಭಿಷಕ್ತನಾದ ದಾವೀದ ನಿಗೂ ಅವನ ಸಂತತಿಗೂ ಕೃಪೆಯನ್ನು ಯುಗಯುಗಕ್ಕೂ ಅನುಗ್ರಹಿಸುತ್ತಾನೆ.
|