1. ಕಡೇದಾಗಿ ಸಹೋದರರೇ, ನಮಗೋ ಸ್ಕರ ಪ್ರಾರ್ಥನೆ ಮಾಡಿರಿ ಕರ್ತನ ವಾಕ್ಯವು ನಿಮ್ಮಲ್ಲಿ ಹಬ್ಬಿದ ಪ್ರಕಾರ ಎಲ್ಲೆಲ್ಲಿಯೂ ಬೇಗನೆ ಹಬ್ಬಿ ಮಹಿಮೆ ಹೊಂದುವ ಹಾಗೆಯೂ
|
2. ಮೂರ್ಖರಾದ ದುಷ್ಟಜನರ ಕೈಯಿಂದ ನಾವು ತಪ್ಪಿಸಲ್ಪಡುವ ಹಾಗೆಯೂ ಪ್ರಾರ್ಥಿಸಿರಿ; ಯಾಕಂದರೆ ಎಲ್ಲರಲ್ಲಿ ನಂಬಿಕೆ ಯಿಲ್ಲವಲ್ಲಾ.
|
4. ನಾವು ನಿಮಗೆ ಆಜ್ಞಾಪಿಸುವ ಪ್ರಕಾರ ನೀವು ಮಾಡು ತ್ತೀರೆಂತಲೂ ಮುಂದೆಯೂ ಮಾಡುವಿರೆಂತಲೂ ನಿಮ್ಮ ವಿಷಯದಲ್ಲಿ ಕರ್ತನ ಮೂಲಕವಾಗಿ ನಮಗೆ ಭರವಸ ವುಂಟು.
|
6. ಸಹೋದರರೇ, ನಮ್ಮಿಂದ ಹೊಂದಿದ ಬೋಧನೆ ಯನ್ನು ಅನುಸರಿಸದೆ ಅಕ್ರಮವಾಗಿ ನಡೆಯುವ ಪ್ರತಿ ಸಹೋದರನಿಗೆ ನೀವು ದೂರವಾಗಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಾವು ನಿಮಗೆ ಆಜ್ಞಾಪಿಸುತ್ತೇವೆ.
|
8. ಇಲ್ಲವೆ ನಾವು ಸುಮ್ಮನೆ (ಹಣಕೊಡದೆ) ಯಾರ ಬಳಿಯಲ್ಲಿಯೂ ಊಟಮಾಡ ಲಿಲ್ಲ; ನಿಮ್ಮಲ್ಲಿ ಒಬ್ಬರಿಗೂ ನಾವು ಭಾರವಾಗಬಾರ ದೆಂದು ಹಗಲಿರುಳು ಕಷ್ಟದಿಂದಲೂ ಪ್ರಯಾಸ ದಿಂದಲೂ ದುಡಿದೆವು.
|
9. ನಿಮ್ಮಿಂದ ಪೋಷಣೆ ಹೊಂದು ವದಕ್ಕೆ ನಮಗೆ ಹಕ್ಕಿಲ್ಲವೆಂದು ಹಾಗೆ ಮಾಡಲಿಲ್ಲ. ನೀವು ನಮ್ಮನ್ನು ಅನುಸರಿಸುವದಕ್ಕಾಗಿ ನಿಮಗೆ ಮಾದರಿ ಯಾಗಿರೋಣವೆಂದೇ ಮಾಡಿದೆವು;
|
11. ಆದರೆ ನಿಮ್ಮಲ್ಲಿ ಕೆಲವರು ಯಾವ ಕೆಲಸವನ್ನೂ ಮಾಡದೆ ಇತರರ ಕೆಲಸದಲ್ಲಿ ಮಾತ್ರ ತಲೆಹಾಕಿ ಅಕ್ರಮವಾಗಿ ನಡೆಯುತ್ತಾರೆಂದು ಕೇಳಿದ್ದೇವೆ.
|
12. ಅಂಥವರು ಮೌನವಾಗಿ ತಮ್ಮ ಕೆಲಸವನ್ನು ಮಾಡುತ್ತಾ ತಮ್ಮ ಸ್ವಂತ ಆಹಾರವನ್ನೇ ಊಟಮಾಡ ಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಾವು ಆಜ್ಞಾಪಿಸಿ ಪ್ರಬೋಧಿಸುತ್ತೇವೆ.
|
14. ಈ ಪತ್ರಿಕೆಯ ಮೂಲಕ ವಾಗಿ ಹೇಳಿರುವ ನಮ್ಮ ಮಾತಿಗೆ ಯಾವನಾದರೂ ವಿಧೇಯನಾಗದಿದ್ದರೆ ಅವನನ್ನು ಗುರುತು ಇಟ್ಟು ಕೊಂಡು ಅವನಿಗೆ ನಾಚಿಕೆಯಾಗುವಂತೆ ಅವನ ಸಹವಾಸದಲ್ಲಿ ಸೇರಬೇಡಿರಿ.
|
16. ಶಾಂತಿದಾಯಕನಾದ ಕರ್ತನು ತಾನೇ ಸದಾಕಾಲ ದಲ್ಲಿಯೂ ಸಕಲವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಕರ್ತನು ನಿಮ್ಮೆಲ್ಲರೊಂದಿಗೆ ಇರಲಿ.
|
17. ಪೌಲನೆಂಬ ನಾನು ನನ್ನ ಸ್ವಂತ ಕೈಯಿಂದ ಬರೆಯುವ ವಂದನೆಯು, ಎಲ್ಲಾ ಪತ್ರಿಕೆಗಳಲ್ಲಿಯೂ ಇದೇ ಗುರುತು; ಹೀಗೆಯೇ ಬರೆಯುತ್ತೇನೆ.ನಮ್ಮ ಕರ್ತ ನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರ ಸಂಗಡವಿರಲಿ. ಆಮೆನ್.
|