2. ಅವನು ಹೂವಿನ ಹಾಗೆ ಅರಳು ತ್ತಾನೆ ಮತ್ತು ಕೊಯ್ಯಲ್ಪಡುತ್ತಾನೆ; ಅವನು ನೆರಳಿನಂತೆ ಓಡಿಹೋಗುತ್ತಾನೆ, ಹಾಗೂ ಮುಂದುವರೆಯುವ ದಿಲ್ಲ.
|
5. ಅವನ ದಿವಸಗಳು ನೇಮಕವಾಗಿವೆ; ಅವನ ತಿಂಗಳುಗಳ ಲೆಕ್ಕ ನಿನ್ನ ಬಳಿಯಲ್ಲಿ ಅದೆ; ಅವನು ದಾಟಲಾರದ ಹಾಗೆ ಅವನ ಮೇರೆಗಳನ್ನು ಮಾಡಿದಿ.
|
6. ಹೀಗಿರುವ ದರಿಂದ ಅವನು ಕೂಲಿಯವನ ಹಾಗೆ ತನ್ನ ದಿವಸದಲ್ಲಿ ವಿಶ್ರಾಂತಿ ಪಡೆಯುವಂತೆ ಅವನು ಪೂರೈಸುವ ವರೆಗೆ ಅವನಿಂದ ತಿರುಗು.
|
13. ನೀನು ನನ್ನನ್ನು ಸಮಾಧಿಯಲ್ಲಿ ಮರೆಮಾಡಿ, ನಿನ್ನ ಕೋಪವು ತಿರುಗುವ ವರೆಗೂ ನನ್ನನ್ನು ಅಡಗಿಸಿ ನನಗೆ ನೇಮಕವಾದ ಸಮಯವನ್ನು ನೇಮಿಸಿ ನನ್ನನ್ನು ಜ್ಞಾಪಕಮಾಡಿಕೊಂಡರೆ ಲೇಸು.
|
14. ಮನುಷ್ಯನು ಸತ್ತರೆ ಅವನು ತಿರುಗಿ ಬದುಕುವನೋ? ನನಗೆ ನೇಮಕ ಮಾಡಿದ ಸಮಯದ ದಿನಗಳೆಲ್ಲಾ ನನಗೆ ಬದಲು ಬರುವ ವರೆಗೆ ನಾನು ಕಾದುಕೊಂಡಿರುವೆನು.
|
19. ನೀರು ಕಲ್ಲುಗಳನ್ನು ಕೊರೆಯುವದು. ಭೂಮಿಯ ಧೂಳಿನಿಂದ ಬೆಳೆದು ಬರುವವುಗಳನ್ನು ನೀನು ತೊಳೆದುಬಿಡುತ್ತೀ; ಮನುಷ್ಯನ ನಿರೀಕ್ಷೆಯನ್ನು ನಾಶಮಾಡುತ್ತೀ.
|
20. ನೀನು ಅವನಿಗೆ ನಿತ್ಯಕ್ಕೂ ಮೇಲುಗೈ ಆಗಿರುವಿ; ಅವನು ಹೊರಟು ಹೋಗುವನು; ಅವನ ಮುಖಭಾವವನ್ನು ಮಾರ್ಪಡಿಸಿ ಅವನನ್ನು ಕಳುಹಿಸಿ ಬಿಡುತ್ತೀ.
|
21. ಅವನ ಮಕ್ಕಳು ಘನತೆಗೆ ಬರುತ್ತಾರೆ; ಅದು ಅವನಿಗೆ ತಿಳಿಯುವದಿಲ್ಲ; ಅವರು ಹೀನರಾಗುತ್ತಾರೆ, ಅವನು ಗ್ರಹಿಸಿಕೊಳ್ಳುವದಿಲ್ಲ.ಆದರೆ ಅವನ ಮೇಲಿರುವ ಮಾಂಸವು ನೋಯುವದು; ಅವನಲ್ಲಿರುವ ಅವನ ಆತ್ಮವು ದುಃಖಪಡುವದು.
|