1. ಲೇವಿಯರ ಪಿತೃಗಳ ಹಿರಿಯರು ಕಾನಾನ್ ದೇಶದ ಶೀಲೋವಿನಲ್ಲಿರುವ ಯಾಜಕ ನಾದ ಎಲಿಯಾಜರನ ಬಳಿಗೂ ನೂನನ ಮಗನಾದ ಯೆಹೋಶುವನ ಬಳಿಗೂ ಇಸ್ರಾಯೇಲ್ ಮಕ್ಕಳ ಗೋತ್ರಗಳ ಪಿತೃಗಳಲ್ಲಿರುವ ಹಿರಿಯರ ಬಳಿಗೂ ಬಂದು ಅವರ ಸಂಗಡ ಮಾತನಾಡಿ--
|
2. ನಾವು ವಾಸವಾಗಿರುವ ಪಟ್ಟಣಗಳನ್ನು ನಮ್ಮ ಪಶುಗಳಿಗೋಸ್ಕರ ಅವುಗಳ ಉಪನಗರಗಳೊಂದಿಗೆ ನಮಗೆ ಕೊಡಬೇಕೆಂದು ಕರ್ತನು ಮೋಶೆಯ ಮುಖಾಂತರವಾಗಿ ಆಜ್ಞಾಪಿಸಿ ದ್ದಾನೆ ಅಂದರು.
|
3. ಹಾಗೆಯೇ ಇಸ್ರಾಯೇಲ್ ಮಕ್ಕಳು ತಮ್ಮ ಬಾಧ್ಯತೆಯಲ್ಲಿ ಲೇವಿಯರಿಗೆ ಕರ್ತನ ಅಜ್ಞೆಯ ಪ್ರಕಾರ ಪಟ್ಟಣಗಳನ್ನೂ ಅವುಗಳ ಉಪನಗರಗಳನ್ನೂ ಕೊಟ್ಟರು. ಅವು ಯಾವವೆಂದರೆ--
|
4. ಕೆಹಾತ್ಯರ ಗೋತ್ರಗಳಿಗೆ ಚೀಟು ಹಾಕಿದಾಗ ಲೇವಿಯರಲ್ಲಿ ಯಾಜಕನಾದ ಆರೋನನ ಮಕ್ಕಳಿಗೆ ಯೂದನ ಗೋತ್ರದಲ್ಲಿಯೂ ಸಿಮೆಯೋನನ ಗೋತ್ರ ದಲ್ಲಿಯೂ ಬೆನ್ಯಾವಿಾನನ ಗೋತ್ರದಲ್ಲಿಯೂ ಹದಿ ಮೂರು ಪಟ್ಟಣಗಳು ದೊರಕಿದವು.
|
5. ಕೆಹಾತನ ಉಳಿದ ಮಕ್ಕಳಿಗೆ ಎಫ್ರಾಯಾಮನ ಗೊತ್ರದಲ್ಲಿಯೂ ದಾನನ ಗೋತ್ರದಲ್ಲಿಯೂ ಮನಸ್ಸೆಯ ಅರ್ಧಗೋತ್ರದ ಲ್ಲಿಯೂ ಹತ್ತು ಪಟ್ಟಣಗಳೂ ದೊರಕಿದವು.
|
6. ಗೆರ್ಷೋನ್ಯನ ಮಕ್ಕಳಿಗೆ ಚೀಟಿ ಹಾಕಿದಾಗ ಇಸ್ಸಾಕಾರನ ಗೋತ್ರಗಳ ಕುಟುಂಬಗಳಲ್ಲಿಯೂ ಆಶೇರನ ಗೋತ್ರದಲ್ಲಿಯೂ ನಫ್ತಾಲಿಯ ಗೋತ್ರ ದಲ್ಲಿಯೂ ಬಾಷಾನಿನಲ್ಲಿರುವ ಮನಸ್ಸೆಯ ಅರ್ಧ ಗೋತ್ರದಲ್ಲಿಯೂ ಹದಿಮೂರು ಪಟ್ಟಣಗಳು ದೊರ ಕಿದವು.
|
7. ಇದಲ್ಲದೆ ಮೆರಾರಿಯ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ರೂಬೇನನ ಗೋತ್ರದಲ್ಲಿಯೂ ಗಾದನ ಗೋತ್ರದಲ್ಲಿಯೂ ಜೆಬುಲೂನನ ಗೋತ್ರ ದಲ್ಲಿಯೂ ಹನ್ನೆರಡು ಪಟ್ಟಣಗಳು ದೊರಕಿದವು.
|
8. ಈ ಪಟ್ಟಣಗಳನ್ನು ಅವುಗಳ ಉಪನಗರಗಳನ್ನು ಇಸ್ರಾಯೇಲ್ ಮಕ್ಕಳು ಕರ್ತನು ಮೋಶೆಯ ಮುಖಾಂತರ ಆಜ್ಞಾಪಿಸಿದ ಪ್ರಕಾರ ಲೇವಿಯರಿಗೆ ಚೀಟುಹಾಕಿ ಕೊಟ್ಟರು.
|
9. ಆದರೆ ಲೇವಿಯ ಮಕ್ಕಳಲ್ಲಿ ಮೊದಲನೇ ಚೀಟು ಬಿದ್ದ ಕೆಹಾತ್ಯರ ಗೋತ್ರಗಳಲ್ಲಿ ಇರುವ ಆರೋನನ ಮಕ್ಕಳಿಗೆ ಯೂದನ ಮಕ್ಕಳ ಗೋತ್ರದಲ್ಲಿಯೂ ಸಿಮೆಯೋನನ ಮಕ್ಕಳ ಗೋತ್ರದಲ್ಲಿಯೂ ಕೊಡಲ್ಪಟ್ಟ ಪಟ್ಟಣಗಳ ಹೆಸರುಗಳು
|
11. ಯೂದನ ಬೆಟ್ಟಗಳಲ್ಲಿರುವ ಅನಾಕನ ತಂದೆಯಾದ ಅರ್ಬನ ಹೆಸರಿನ ಪಟ್ಟಣ ಹೆಬ್ರೋ ನನ್ನೂ ಅದರ ಸುತ್ತಲಿರುವ ಉಪನಗರಗಳನ್ನೂ ಅವ ರಿಗೆ ಕೊಟ್ಟರು.
|
13. ಹೀಗೆಯೇ ಯಾಜಕನಾದ ಆರೋನನ ಮಕ್ಕಳಿಗೆ ಕೊಲೆ ಮಾಡಿದವನಿಗೆ ಆಶ್ರಯ ಪಟ್ಟಣವಾದ ಹೆಬ್ರೋನನ್ನೂ ಅದರ ಉಪನಗರಗಳನ್ನೂ ಲಿಬ್ನಾವನ್ನೂ ಅದರ ಉಪ ನಗರಗಳನ್ನೂ
|
16. ಆಯಿನನ್ನೂ ಅದರ ಉಪನಗರಗಳನ್ನೂ ಯುಟ್ಟಾ ವನ್ನೂ ಅದರ ಉಪನಗರಗಳನ್ನೂ ಬೇತ್ಷೆಮೆಷನ್ನೂ ಅದರ ಉಪನಗರಗಳನ್ನೂ; ಹೀಗೆಯೇ ಆ ಎರಡು ಗೋತ್ರಗಳಿಂದ ಈ ಒಂಭತ್ತು ಪಟ್ಟಣಗಳನ್ನು ಕೊಟ್ಟರು.
|
20. ಇದಲ್ಲದೆ ಲೇವಿಯರಾದ ಕೆಹಾತನ ಮಕ್ಕಳ ಕುಟುಂಬದಲ್ಲಿ ಉಳಿದವರಿಗೆ ಎಫ್ರಾಯಾಮನ ಗೋತ್ರದಲ್ಲಿ ಚೀಟಿನಿಂದ ದೊರಕಿದ ಪಟ್ಟಣಗಳು,
|
21. ಕೊಲೆಮಾಡಿದವನಿಗೆ ಆಶ್ರಯ ಪಟ್ಟಣವಾದ ಎಫ್ರಾಯಾಮನ ಬೆಟ್ಟಗಳಲ್ಲಿರುವ ಶೆಕೇಮನ್ನೂ ಅದರ ಉಪನಗರಗಳನ್ನೂ ಗೆಜೆರನ್ನೂ ಅದರ ಉಪನಗರ ಗಳನ್ನೂ
|
25. ಮನಸ್ಸೆಯ ಅರ್ಧಗೋತ್ರದಲ್ಲಿ ತಾನಾಕನ್ನೂ ಅದರ ಉಪನಗರ ಗಳನ್ನೂ; ಗತ್ರಿಮ್ಮೋನನ್ನೂ ಅದರ ಉಪನಗರ ಗಳನ್ನೂ ಹೀಗೆ ಎರಡು ಪಟ್ಟಣಗಳನ್ನು ಕೊಟ್ಟರು.
|
27. ಲೇವಿಯರ ಕುಟುಂಬಗಳಲ್ಲಿರುವ ಗೆರ್ಷೋನಿನ ಮಕ್ಕಳಿಗೆ ಮನಸ್ಸೆಯ ಅರ್ಧ ಗೋತ್ರದಲ್ಲಿ ಕೊಲೆ ಮಾಡಿದವನಿಗೆ ಆಶ್ರಯ ಪಟ್ಟಣವಾದ ಬಾಷಾನಿ ನಲ್ಲಿರುವ ಗೋಲಾನನ್ನೂ ಅದರ ಉಪನಗರಗಳನ್ನೂ ಬೆಯೆಷ್ಟೆರಾವನ್ನೂ ಅದರ ಉಪನಗರಗಳನ್ನೂ; ಹೀಗೆ ಎರಡು ಪಟ್ಟಣಗಳನ್ನು ಕೊಟ್ಟರು.
|
32. ನಫ್ತಾಲಿಯ ಗೋತ್ರ ದಲ್ಲಿ ಕೊಲೆಮಾಡಿದವನಿಗೆ ಆಶ್ರಯ ಪಟ್ಟಣವಾದ ಗಲಿಲಾಯದಲ್ಲಿರುವ ಕೆದೆಷನ್ನೂ ಅದರ ಉಪನಗರ ಗಳನ್ನೂ ಹಮ್ಮೋತ್ದೋರನ್ನೂ ಅದರ ಉಪನಗರ ಗಳನ್ನೂ ಕರ್ತಾನನ್ನೂ ಅದರ ಉಪನಗರಗಳನ್ನೂ; ಹೀಗೆ ಮೂರು ಪಟ್ಟಣಗಳನ್ನು ಕೊಟ್ಟರು.
|
34. ಉಳಿದ ಲೇವಿಯರಾದ ಮೆರಾರೀಯ ಮಕ್ಕಳ ಕುಟುಂಬಗಳಿಗೆ ಜೆಬುಲೂನನ ಗೋತ್ರದಲ್ಲಿ ಯೊಕ್ನೆ ಯಾಮನ್ನೂ ಆದರ ಉಪನಗರಗಳನ್ನೂ ಕರ್ತಾನನ್ನೂ ಅದರ ಉಪನಗರಗಳನ್ನೂ
|
38. ಗಾದನ ಗೋತ್ರದಲ್ಲಿ ಕೊಲೆ ಮಾಡಿ ದವನಿಗೆ ಆಶ್ರಯ ಪಟ್ಟಣವಾದ ಗಿಲ್ಯಾದಿನಲ್ಲಿರುವ ರಾಮೋತನ್ನೂ ಅದರ ಉಪನಗರಗಳನ್ನೂ ಮಹನ ಯಿಮನ್ನೂ ಅದರ ಉಪನಗರಗಳನ್ನೂ
|
40. ಹೀಗೆಯೇ ಲೇವಿಯರ ಕುಟುಂಬಗಳಲ್ಲಿ ಉಳಿದಂಥ ಮೆರಾರೀಯ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಚೀಟಿನಿಂದ ದೊರೆತ ಪಟ್ಟಣಗಳೆಲ್ಲಾ ಹನ್ನೆರಡು ಪಟ್ಟಣಗಳೂ ಅವುಗಳ ಉಪನಗರಗಳೂ.
|
41. ಇಸ್ರಾಯೇಲ್ ಮಕ್ಕಳ ಸ್ವಾಸ್ತ್ಯದ ಮಧ್ಯದಲ್ಲಿ ಇರುವ ಲೇವಿಯರ ಎಲ್ಲಾ ಪಟ್ಟಣಗಳೂ ಅವುಗಳ ಉಪನಗರಗಳೂ ನಾಲ್ವತ್ತೆಂಟು ಪಟ್ಟಣಗಳು.
|
43. ಕರ್ತನು ಅವರ ತಂದೆಗಳಿಗೆ ಕೊಡುವೆನೆಂದು ಆಣೆ ಇಟ್ಟ ದೇಶವನ್ನೆಲ್ಲಾ ಇಸ್ರಾಯೇಲಿಗೆ ಕೊಟ್ಟನು; ಅವರು ಅದನ್ನು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸವಾಗಿದ್ದರು.
|
44. ಕರ್ತನು ಅವರ ತಂದೆಗಳಿಗೆ ಆಣೆ ಇಟ್ಟ ಪ್ರಕಾರವೆಲ್ಲಾ ಅವರ ಸುತ್ತಲೂ ಅವರಿಗೆ ವಿಶ್ರಾಂತಿ ಕೊಟ್ಟನು; ಅವರ ಎಲ್ಲಾ ಶತ್ರುಗಳಲ್ಲಿ ಒಬ್ಬನಾದರೂ ಅವರ ಮುಂದೆ ನಿಲ್ಲಲಿಲ್ಲ; ಅವರ ಶತ್ರುಗಳನ್ನೆಲ್ಲಾ ಕರ್ತನು ಅವರ ಕೈಗಳಿಗೆ ಒಪ್ಪಿಸಿದನು.ಕರ್ತನು ಇಸ್ರಾಯೇಲ್ ಮನೆಗೆ ಹೇಳಿದ ಒಳ್ಳೇ ವಿಷಯಗಳಲ್ಲಿ ಒಂದಾದರೂ ಬಿದ್ದು ಹೋಗಲಿಲ್ಲ; ಎಲ್ಲಾ ನೆರವೇರಿದವು.
|