2. ನೀನು ಇಸ್ರಾಯೇಲ್ ಮಕ್ಕಳ ಸಂಗಡ ಮಾತನಾಡಿ ಅವರಿಂದ ಅವರ ಪಿತೃಗಳ ಮನೆಯ ಪ್ರಕಾರ, ಅವರ ಪ್ರಧಾನರೆಲ್ಲರ ಪಿತೃಗಳ ಮನೆಯ ಪ್ರಕಾರ, ಒಂದೊಂದು ಕೋಲನ್ನಾಗಿ ಹನ್ನೆರಡು ಕೋಲುಗಳನ್ನು ತಕ್ಕೊಂಡು ಒಬ್ಬೊಬ್ಬನ ಹೆಸರನ್ನು ಅವನವನ ಕೋಲಿನ ಮೇಲೆ ಬರೆ.
|
5. ಆಗ ಏನಾಗುವ ದಂದರೆ, ನಾನು ಯಾವನನ್ನು ಆದುಕೊಳ್ಳುತ್ತೇನೋ ಆ ಮನುಷ್ಯನ ಕೋಲು ಚಿಗುರುವದು. ಹೀಗೆ ಇಸ್ರಾ ಯೇಲ್ ಮಕ್ಕಳು ನಿಮಗೆ ವಿರೋಧವಾಗಿ ಗುಣುಗುಟ್ಟು ವದನ್ನು ನಾನು ನಿಲ್ಲಿಸಿಬಿಡುವೆನು ಅಂದನು.
|
6. ಹಾಗೆಯೇ ಮೋಶೆಯು ಇಸ್ರಾಯೇಲ್ ಮಕ್ಕಳ ಸಂಗಡ ಮಾತನಾಡಿದನು. ಅವರ ಪ್ರಧಾನರೆಲ್ಲರೂ ತಮ್ಮ ಪಿತೃಗಳ ಮನೆಗಳ ಪ್ರಕಾರ ಒಬ್ಬೊಬ್ಬ ಪ್ರಧಾನಿ ಗೋಸ್ಕರ ಒಂದೊಂದು ಕೋಲಿನ ಪ್ರಕಾರ ಹನ್ನೆರಡು ಕೋಲುಗಳನ್ನು ಕೊಟ್ಟರು. ಆರೋನನ ಕೋಲು ಸಹ ಅವರ ಕೋಲುಗಳ ಮಧ್ಯದಲ್ಲಿ ಇತ್ತು.
|
8. ಮರು ದಿವಸದಲ್ಲಿ ಆದದ್ದೇನಂದರೆ, ಮೋಶೆಯು ಸಾಕ್ಷೀ ಗುಡಾರದೊಳೆಗೆ ಪ್ರವೇಶಿಸುವಾಗ ಇಗೋ, ಲೇವಿ ಮನೆಯ ಕೋಲಾಗಿದ್ದ ಆರೋನನ ಕೋಲು ಚಿಗುರಿ ಮೊಗ್ಗುಬಿಟ್ಟು ಹೂವು ಅರಳಿ ಬಾದಾಮಿ ಹಣ್ಣುಗಳನ್ನು ಫಲಿಸಿತ್ತು.
|
9. ಆಗ ಮೋಶೆಯು ಎಲ್ಲಾ ಕೋಲುಗಳನ್ನು ಕರ್ತನ ಸನ್ನಿಧಿಯಿಂದ ಇಸ್ರಾಯೇಲ್ ಮಕ್ಕಳೆಲ್ಲರಿಗೆ ತೋರಿಸುವದಕ್ಕಾಗಿ ಹೊರಗೆ ತಂದನು. ಆಗ ಅವರು ನೋಡಿ ತಮ್ಮ ತಮ್ಮ ಕೋಲನ್ನು ತೆಗೆದುಕೊಂಡರು.
|
10. ತರುವಾಯ ಕರ್ತನು ಮೋಶೆಗೆ--ಆರೋನನ ಕೋಲನ್ನು ಎದುರು ಬೀಳುವವರಿಗೆ ಗುರುತಾಗಿ ಸಾಕ್ಷಿಯ ವಿಧಿಗಳ ಮುಂದೆ ತಿರಿಗಿ ಇಡು. ಹೀಗೆ ಅವರು ಸಾಯದ ಹಾಗೆ ನನ್ನ ಮುಂದೆ ಗುಣು ಗುಟ್ಟುವದನ್ನು ನನ್ನಿಂದ ನೀನು ಸಂಪೂರ್ಣವಾಗಿ ತೆಗೆದು ಬಿಡಬೇಕು ಅಂದನು.
|
12. ಆಗ ಇಸ್ರಾಯೇಲ್ ಮಕ್ಕಳು ಮೋಶೆಯ ಸಂಗಡ ಮಾತನಾಡಿ--ಇಗೋ, ಸಾಯುತ್ತೇವೆ. ನಾಶವಾಗು ತ್ತೇವೆ: ನಾವೆಲ್ಲರೂ ನಾಶವಾಗುತ್ತೇವೆ.ಕರ್ತನ ಗುಡಾರದ ಸವಿಾಪಕ್ಕೆ ಬರುವವರೆಲ್ಲರೂ ಸಾಯುವರು. ಸಾಯುವದರಿಂದ ನಾವು ನಾಶವಾಗಬೇಕೋ ಎಂದು ಹೇಳಿದರು.
|