ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಕೀರ್ತನೆಗಳು
1. ಕರ್ತನೇ, ನಿನ್ನನ್ನು ಕೂಗುತ್ತೇನೆ; ನನ್ನ ಬಳಿಗೆ ಬರಲು ತ್ವರೆಯಾಗಿ ಬಾ; ನಾನು ನಿನ್ನನ್ನು ಕರೆಯುವಾಗ, ನನ್ನ ಸ್ವರಕ್ಕೆ ಕಿವಿಗೊಡು.
2. ನನ್ನ ಪ್ರಾರ್ಥನೆ ನಿನ್ನ ಮುಂದೆ ಧೂಪವಾಗಿಯೂ ನನ್ನ ಕೈ ಎತ್ತುವದು ಸಾಯಂಕಾಲದ ಬಲಿಯಾಗಿಯೂ ಸಿದ್ಧವಾಗಿರಲಿ.
3. ಓ ಕರ್ತನೇ, ನನ್ನ ಬಾಯಿಗೆ ಕಾವ ಲಿಡು; ನನ್ನ ತುಟಿಗಳ ಕದವನ್ನು ಕಾಯಿ. ಅಪರಾಧ ಮಾಡುವ ಮನುಷ್ಯರ ಸಂಗಡ ದುಷ್ಟತ್ವದಿಂದ ಕರ್ಮಗಳನ್ನು ನಡಿಸುವ ಕೆಟ್ಟ ಕಾರ್ಯಕ್ಕೆ
4. ನನ್ನ ಹೃದಯವನ್ನು ಲಾಲಿಸದೆ ಮಾಡು; ಅವರ ಸವಿ ಊಟಗಳನ್ನು ನಾನು ಉಣ್ಣುವದಿಲ್ಲ.
5. ನೀತಿವಂತನು ನನ್ನನ್ನು ಹೊಡೆಯಲಿ; ಅದು ಕರುಣೆಯೇ; ಅವನು ನನ್ನನ್ನು ಗದರಿಸಲಿ; ಅದು ನನ್ನ ತಲೆಗೆ ಶ್ರೇಷ್ಠ ಎಣ್ಣೆಯೇ. ಅದನ್ನು ನನ್ನ ತಲೆ ಬೇಡವೆನ್ನದಿರಲಿ; ಆದರೆ ಇನ್ನೂ ಅವರ ಕೇಡುಗಳಲ್ಲಿ ನನ್ನ ಪ್ರಾರ್ಥನೆ ಇರುವದು.
6. ಅವರ ನ್ಯಾಯಾ ಧಿಪತಿಗಳು ಬಂಡೆಯ ಸ್ಥಳಗಳಲ್ಲಿ ಕೆಡವಲ್ಪಡುವಾಗ ಅವರು ನನ್ನ ಮಾತುಗಳನ್ನು ಕೇಳುವರು; ಅವು ಸಿಹಿಯಾಗಿವೆ.
7. ಭೂಮಿಯಲ್ಲಿ ಮರವನ್ನು ಕಡಿದು ಸೀಳುವವನ ಹಾಗೆ ನಮ್ಮ ಎಲುಬುಗಳು ಸಮಾಧಿಯ ಬಾಯಿಯ ಹತ್ತಿರ ಚದುರಿ ಅವೆ.
8. ಕರ್ತನಾದ ಓ ದೇವರೇ, ನನ್ನ ಕಣ್ಣುಗಳು ನಿನ್ನ ಕಡೆಗೆ ಅವೆ; ನಿನ್ನನ್ನು ಆಶ್ರಯಿಸಿಕೊಂಡಿದ್ದೇನೆ; ನನ್ನ ಪ್ರಾಣವನ್ನು ದಿಕ್ಕಿಲ್ಲ ದಂತೆ ಬಿಡಬೇಡ.
9. ಅವರು ನನಗೆ ಒಡ್ಡಿದ ಉರ್ಲಿ ನಿಂದಲೂ ಅಪರಾಧಿಗಳ ನೇಣುಗಳಿಂದಲೂ ನನ್ನನ್ನು ಕಾಪಾಡು.
10. ನಾನು ತಪ್ಪಿಸಿಕೊಂಡು ಹೋಗುವಷ್ಟರಲ್ಲಿ ದುಷ್ಟರು ತಮ್ಮ ಬಲೆಗಳಲ್ಲಿ ಬೀಳಲಿ.

History

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 141 / 150
1 ಕರ್ತನೇ, ನಿನ್ನನ್ನು ಕೂಗುತ್ತೇನೆ; ನನ್ನ ಬಳಿಗೆ ಬರಲು ತ್ವರೆಯಾಗಿ ಬಾ; ನಾನು ನಿನ್ನನ್ನು ಕರೆಯುವಾಗ, ನನ್ನ ಸ್ವರಕ್ಕೆ ಕಿವಿಗೊಡು. 2 ನನ್ನ ಪ್ರಾರ್ಥನೆ ನಿನ್ನ ಮುಂದೆ ಧೂಪವಾಗಿಯೂ ನನ್ನ ಕೈ ಎತ್ತುವದು ಸಾಯಂಕಾಲದ ಬಲಿಯಾಗಿಯೂ ಸಿದ್ಧವಾಗಿರಲಿ. 3 ಓ ಕರ್ತನೇ, ನನ್ನ ಬಾಯಿಗೆ ಕಾವ ಲಿಡು; ನನ್ನ ತುಟಿಗಳ ಕದವನ್ನು ಕಾಯಿ. ಅಪರಾಧ ಮಾಡುವ ಮನುಷ್ಯರ ಸಂಗಡ ದುಷ್ಟತ್ವದಿಂದ ಕರ್ಮಗಳನ್ನು ನಡಿಸುವ ಕೆಟ್ಟ ಕಾರ್ಯಕ್ಕೆ 4 ನನ್ನ ಹೃದಯವನ್ನು ಲಾಲಿಸದೆ ಮಾಡು; ಅವರ ಸವಿ ಊಟಗಳನ್ನು ನಾನು ಉಣ್ಣುವದಿಲ್ಲ. 5 ನೀತಿವಂತನು ನನ್ನನ್ನು ಹೊಡೆಯಲಿ; ಅದು ಕರುಣೆಯೇ; ಅವನು ನನ್ನನ್ನು ಗದರಿಸಲಿ; ಅದು ನನ್ನ ತಲೆಗೆ ಶ್ರೇಷ್ಠ ಎಣ್ಣೆಯೇ. ಅದನ್ನು ನನ್ನ ತಲೆ ಬೇಡವೆನ್ನದಿರಲಿ; ಆದರೆ ಇನ್ನೂ ಅವರ ಕೇಡುಗಳಲ್ಲಿ ನನ್ನ ಪ್ರಾರ್ಥನೆ ಇರುವದು. 6 ಅವರ ನ್ಯಾಯಾ ಧಿಪತಿಗಳು ಬಂಡೆಯ ಸ್ಥಳಗಳಲ್ಲಿ ಕೆಡವಲ್ಪಡುವಾಗ ಅವರು ನನ್ನ ಮಾತುಗಳನ್ನು ಕೇಳುವರು; ಅವು ಸಿಹಿಯಾಗಿವೆ. 7 ಭೂಮಿಯಲ್ಲಿ ಮರವನ್ನು ಕಡಿದು ಸೀಳುವವನ ಹಾಗೆ ನಮ್ಮ ಎಲುಬುಗಳು ಸಮಾಧಿಯ ಬಾಯಿಯ ಹತ್ತಿರ ಚದುರಿ ಅವೆ. 8 ಕರ್ತನಾದ ಓ ದೇವರೇ, ನನ್ನ ಕಣ್ಣುಗಳು ನಿನ್ನ ಕಡೆಗೆ ಅವೆ; ನಿನ್ನನ್ನು ಆಶ್ರಯಿಸಿಕೊಂಡಿದ್ದೇನೆ; ನನ್ನ ಪ್ರಾಣವನ್ನು ದಿಕ್ಕಿಲ್ಲ ದಂತೆ ಬಿಡಬೇಡ. 9 ಅವರು ನನಗೆ ಒಡ್ಡಿದ ಉರ್ಲಿ ನಿಂದಲೂ ಅಪರಾಧಿಗಳ ನೇಣುಗಳಿಂದಲೂ ನನ್ನನ್ನು ಕಾಪಾಡು. 10 ನಾನು ತಪ್ಪಿಸಿಕೊಂಡು ಹೋಗುವಷ್ಟರಲ್ಲಿ ದುಷ್ಟರು ತಮ್ಮ ಬಲೆಗಳಲ್ಲಿ ಬೀಳಲಿ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 141 / 150
×

Alert

×

Kannada Letters Keypad References