3. ನಿನ್ನ ಕೋಪದ ನಿಮಿತ್ತವಾಗಿ ನನ್ನ ಶರೀರದಲ್ಲಿ ಸ್ವಸ್ಥವೇನೂ ಇಲ್ಲ; ನನ್ನ ಪಾಪದ ನಿಮಿತ್ತ ನನ್ನ ಎಲುಬುಗಳಲ್ಲಿ ವಿಶ್ರಾಂತಿಯೇ ಇಲ್ಲ.
|
10. ನನ್ನ ಹೃದಯವು ಬಡಿದುಕೊಳ್ಳುತ್ತದೆ; ನನ್ನ ಶಕ್ತಿಯು ನನ್ನನ್ನು ಬಿಟ್ಟು ಹೋಗಿದೆ; ನನ್ನ ಕಣ್ಣುಗಳ ಬೆಳಕು ಸಹ ನನ್ನಲ್ಲಿ ಇಲ್ಲ.
|
11. ನನ್ನ ಪ್ರಿಯರೂ ಸ್ನೇಹಿತರೂ ನನ್ನ ಹುಣ್ಣನ್ನು ನೋಡಿ ಓರೆಯಾಗಿ ನಿಲ್ಲುತ್ತಾರೆ; ನನ್ನ ನೆರೆಯವರು ದೂರದಲ್ಲಿ ನಿಂತಿದ್ದಾರೆ.
|
12. ನನ್ನ ಪ್ರಾಣವನ್ನು ಹುಡುಕುವವರು ಬಲೆ ಒಡ್ಡುತ್ತಾರೆ; ನನ್ನ ಕೇಡನ್ನು ಹುಡುಕುವವರು ಕೇಡಿನ ಮಾತುಗಳನ್ನಾಡುತ್ತಾರೆ; ದಿನವೆಲ್ಲಾ ಮೋಸಗಳನ್ನು ಕಲ್ಪಿಸುತ್ತಾರೆ.
|
16. ಅವರು ನನ್ನ ವಿಷಯದಲ್ಲಿ ಸಂತೋಷಪಡದಿರಲಿ ಎಂದು ನಾನು ಅಂದುಕೊಂಡೆನು; ನನ್ನ ಪಾದ ಜಾರು ವಾಗ ಅವರು ನನಗೆ ವಿರೋಧವಾಗಿ ತಮ್ಮನ್ನು ಹೆಚ್ಚಿಸಿ ಕೊಳ್ಳುತ್ತಾರೆ.
|
20. ಒಳ್ಳೇದಕ್ಕೆ ಬದಲಾಗಿ ಕೇಡನ್ನು ಸಲ್ಲಿಸುವವರು ನನ್ನ ಶತ್ರುಗಳಾಗಿದ್ದಾರೆ. ನಾನು ಒಳ್ಳೇ ದನ್ನು ಅನುಸರಿಸುವವನಾಗಿದ್ದೇನೆ.
|
21. ಓ ಕರ್ತನೇ, ನನ್ನನ್ನು ಬಿಡಬೇಡ ; ನನ್ನ ದೇವರೇ, ನನಗೆ ದೂರವಾಗಿರಬೇಡ.ನನ್ನ ರಕ್ಷಣೆ ಯಾಗಿರುವ ಕರ್ತನೇ, ನನ್ನ ಸಹಾಯಕ್ಕೆ ಬೇಗ ಬಾ.
|