1. ದೇವರೇ, ಅನ್ಯಜನಾಂಗಗಳು ನಿನ್ನ ಬಾಧ್ಯತೆಯೊಳಗೆ ಬಂದು, ನಿನ್ನ ಪರಿಶುದ್ಧ ಮಂದಿರವನ್ನು ಅಪವಿತ್ರ ಮಾಡಿ, ಯೆರೂಸಲೇಮನ್ನು ಹಾಳು ದಿಬ್ಬಗಳಾಗಿ ಮಾಡಿದ್ದಾರೆ.
|
2. ನಿನ್ನ ಸೇವಕರ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ ಪರಿಶುದ್ಧರ ಮಾಂಸ ವನ್ನು ಭೂಮಿಯ ಮೃಗಗಳಿಗೂ ಆಹಾರವಾಗಿ ಕೊಟ್ಟಿ ದ್ದಾರೆ.
|
8. ಪೂರ್ವಕಾಲದ ಅಕ್ರಮಗಳನ್ನು ನಮಗೆ ವಿರೋಧವಾಗಿ ಜ್ಞಾಪಕಮಾಡಿ ಕೊಳ್ಳಬೇಡ. ನಿನ್ನ ಅಂತಃಕರಣಗಳು ಬೇಗ ನಮ್ಮನ್ನು ಎದುರುಗೊಳ್ಳಲ್ಲಿ; ಬಹಳವಾಗಿ ಕುಗ್ಗಿ ಹೋಗಿದ್ದೇವೆ.
|
9. ಓ ನಮ್ಮ ರಕ್ಷಣೆಯ ದೇವರೇ, ನಿನ್ನ ಹೆಸರಿನ ಘನದ ನಿಮಿತ್ತ ನಮಗೆ ಸಹಾಯ ಮಾಡು; ನಿನ್ನ ಹೆಸರಿಗಾಗಿ ನಮ್ಮನ್ನು ಬಿಡಿಸಿ ನಮ್ಮ ಪಾಪಗಳನ್ನು ತೊಳೆದುಬಿಡು.
|
10. ಅವರ ದೇವರು ಎಲ್ಲಿ ಎಂದು ಅನ್ಯಜನಾಂಗಗಳು ಯಾಕೆ ಹೇಳಬೇಕು? ಚೆಲ್ಲಿರುವ ನಿನ್ನ ಸೇವಕರ ರಕ್ತದ ಪ್ರತಿ ದಂಡನೆಯನ್ನು ನಮ್ಮ ಕಣ್ಣುಗಳ ಮುಂದೆ ಅನ್ಯ ಜನಾಂಗಗಳಲ್ಲಿ ತಿಳಿಯಲ್ಪಡಲಿ.
|
12. ಓ ಕರ್ತನೇ, ಅವರು ನಿನ್ನನ್ನು ನಿಂದಿಸಿದ ನಿಂದೆ ಯನ್ನು ನಮ್ಮ ನೆರೆಯವರಿಗೆ ಏಳರಷ್ಟು ಅವರ ಉಡಿ ಯಲ್ಲಿ ತಿರಿಗಿ ಹಾಕು.ಆಗ ನಿನ್ನ ಜನರೂ ನಿನ್ನ ಹುಲ್ಲುಗಾವಲಿನ ಕುರಿಗಳೂ ಆಗಿರುವ ನಾವು ಎಂದೆಂದಿಗೂ ನಿನ್ನನ್ನು ಕೊಂಡಾಡಿ ತಲತಲಾಂತರಕ್ಕೂ ನಿನ್ನ ಸ್ತೋತ್ರವನ್ನು ಸಾರುವೆವು.
|
13. ಆಗ ನಿನ್ನ ಜನರೂ ನಿನ್ನ ಹುಲ್ಲುಗಾವಲಿನ ಕುರಿಗಳೂ ಆಗಿರುವ ನಾವು ಎಂದೆಂದಿಗೂ ನಿನ್ನನ್ನು ಕೊಂಡಾಡಿ ತಲತಲಾಂತರಕ್ಕೂ ನಿನ್ನ ಸ್ತೋತ್ರವನ್ನು ಸಾರುವೆವು.
|