5. ಕೊಲ್ಲಲ್ಪಟ್ಟು ಸಮಾಧಿಯಲ್ಲಿ ಮಲಗಿರುವವರನ್ನು ನೀನು ಇನ್ನು ಜ್ಞಾಪಕಮಾಡಿಕೊಳ್ಳದ ಹಾಗೆ ಸತ್ತವ ರಲ್ಲಿ ಬಿಡಲ್ಪಟ್ಟಿದ್ದೇನೆ; ಅವರು ನಿನ್ನ ಕೈಯಿಂದ ಕಡಿ ಯಲ್ಪಟ್ಟಿದ್ದಾರೆ.
|
8. ನನ್ನ ಪರಿಚಿತರನ್ನು ನನಗೆ ದೂರಮಾಡಿದ್ದೀ; ನನ್ನನ್ನು ಅವ ರಿಗೆ ಅಸಹ್ಯ ಮಾಡಿದ್ದೀ; ಮುಚ್ಚಲ್ಪಟ್ಟಿದ್ದೇನೆ, ಹೊರಗೆ ಬರಲಾರೆನು.
|
9. ಬಾಧೆಯ ದೆಸೆಯಿಂದ ನನ್ನ ಕಣ್ಣು ದುಃಖಿಸುತ್ತದೆ. ಕರ್ತನೇ, ದಿನವೆಲ್ಲಾ ನಿನ್ನನ್ನು ಕರೆಯು ತ್ತೇನೆ; ನಾನು ನಿನ್ನ ಕಡೆಗೆ ನನ್ನ ಕೈಗಳನ್ನು ಚಾಚುತ್ತೇನೆ.
|
13. ಆದರೆ ನಾನು ಓ ಕರ್ತನೇ, ನಿನ್ನ ಕಡೆಗೆ ಮೊರೆಯಿಡುತ್ತೇನೆ. ಹೊತ್ತಾರೆ ನನ್ನ ಪ್ರಾರ್ಥ ನೆಯು ನಿನ್ನನ್ನು ಎದುರುಗೊಳ್ಳುವದು.
|
15. ನಾನು ಕುಂದಿದವನೂ ಯೌವನದಾರಭ್ಯ ಸಾಯು ವದಕ್ಕೆ ಸಿದ್ಧನೂ ಆಗಿದ್ದೇನೆ. ನಿನ್ನ ಬೆದರಿಕೆಗಳನ್ನು ನಾನು ತಾಳುತ್ತಾ ಭ್ರಮೆಗೊಳ್ಳುತ್ತೇನೆ.
|
17. ನೀರಿನ ಹಾಗೆ ಅವು ಬಂದು ನನ್ನನ್ನು ದಿನವೆಲ್ಲಾ ಸುತ್ತಿಕೊಂಡಿವೆ; ಏಕವಾಗಿ ನನ್ನನ್ನು ಮುತ್ತಿಕೊಂಡಿವೆ.ಪ್ರಿಯನನ್ನೂ ಸ್ನೇಹಿತನನೂ ನನಗೆ ದೂರ ಮಾಡಿದ್ದೀ; ನನ್ನ ಕತ್ತಲೆಯ ಸ್ಥಳವೇ ನನ್ನ ಪರಿಚಿತರು.
|