ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. ಬನ್ನಿರಿ, ಕರ್ತನಿಗೆ ಉತ್ಸಾಹ ಧ್ವನಿಮಾಡುವಾ ನಮ್ಮ ರಕ್ಷಣೆಯ ಬಂಡೆಗೆ ಜಯಧ್ವನಿ ಮಾಡೋಣ.
2. ಸ್ತೋತ್ರದಿಂದ ಆತನ ಸನ್ನಿಧಿಯ ಮುಂದೆ ಬಂದು ಕೀರ್ತನೆಗಳಿಂದ ಆತನಿಗೆ ಆನಂದದ ಧ್ವನಿಮಾಡೋಣ.
3. ಕರ್ತನು ದೊಡ್ಡ ದೇವರೂ ಎಲ್ಲಾ ದೇವರುಗಳ ಮೇಲೆ ದೊಡ್ಡ ಅರಸನೂ ಆಗಿದ್ದಾನೆ.
4. ಆತನ ಕೈಯಲ್ಲಿ ಭೂಮಿಯ ಆಳವಾದ ಸ್ಥಳಗಳು ಅವೆ; ಬೆಟ್ಟಗಳ ಬಲವು ಆತನದೇ.
5. ಸಮುದ್ರವು ಆತನದು; ಆತನು ಅದನ್ನು ಮಾಡಿದನು; ಆತನ ಕೈಗಳು ಒಣಭೂಮಿಯನ್ನು ರೂಪಿಸಿದವು.
6. ಬನ್ನಿರಿ, ನಮ್ಮನ್ನು ಉಂಟುಮಾಡಿದ ಕರ್ತನ ಮುಂದೆ ಮೊಣಕಾಲು ಊರೋಣ ಆತನಿಗೆ ಎರಗಿ ಆರಾಧಿಸೋಣ.
7. ಆತನು ನಮ್ಮ ದೇವರು; ನಾವು ಆತನು ಮೇಯಿಸುವ ಜನರೂ ಆತನ ಕೈ ಕೆಳಗಿರುವ ಹಿಂಡೂ ಆಗಿದ್ದೇವೆ. ನೀವು ಈ ಹೊತ್ತು ಆತನ ಸ್ವರವನ್ನು ಕೇಳಿದರೆ
8. ಅರಣ್ಯದಲ್ಲಿ ಆದ ಶೋಧನೆಯ ದಿವಸದಲ್ಲಿ ಕೋಪವನ್ನೆಬ್ಬಿಸಿದಂತೆ ನಿಮ್ಮ ಹೃದ ಯವನ್ನು ಕಠಿಣಮಾಡಿಕೊಳ್ಳಬೇಡಿರಿ.
9. ಅಲ್ಲಿ ನಿಮ್ಮ ತಂದೆಗಳು ನನ್ನನ್ನು ಶೋಧಿಸಿ, ಪರೀಕ್ಷಿಸಿದರು; ನನ್ನ ಕೆಲಸವನ್ನು ನೋಡಿದರು.
10. ನಾಲ್ವತ್ತು ವರುಷ ಆ ಸಂತತಿಗೆ ಬೇಸರಗೊಂಡು--ಇವರು ತಮ್ಮ ಹೃದಯ ದಲ್ಲಿ ತಪ್ಪಿ ಹೋಗುವ ಜನರಾಗಿದ್ದಾರೆ; ನನ್ನ ಮಾರ್ಗ ಗಳನ್ನು ಅವರು ಅರಿಯರು ಅಂದೆನು.ಆದದರಿಂದ ನನ್ನ ವಿಶ್ರಾಂತಿಯಲ್ಲಿ ಅವರು ಪ್ರವೇಶಿಸರೆಂದು ಕೋಪ ದಿಂದ ಆಣೆ ಇಟ್ಟುಕೊಂಡೆನು.
11. ಆದದರಿಂದ ನನ್ನ ವಿಶ್ರಾಂತಿಯಲ್ಲಿ ಅವರು ಪ್ರವೇಶಿಸರೆಂದು ಕೋಪ ದಿಂದ ಆಣೆ ಇಟ್ಟುಕೊಂಡೆನು.

Notes

No Verse Added

Total 150 Chapters, Current Chapter 95 of Total Chapters 150
ಕೀರ್ತನೆಗಳು 95:18
1. ಬನ್ನಿರಿ, ಕರ್ತನಿಗೆ ಉತ್ಸಾಹ ಧ್ವನಿಮಾಡುವಾ ನಮ್ಮ ರಕ್ಷಣೆಯ ಬಂಡೆಗೆ ಜಯಧ್ವನಿ ಮಾಡೋಣ.
2. ಸ್ತೋತ್ರದಿಂದ ಆತನ ಸನ್ನಿಧಿಯ ಮುಂದೆ ಬಂದು ಕೀರ್ತನೆಗಳಿಂದ ಆತನಿಗೆ ಆನಂದದ ಧ್ವನಿಮಾಡೋಣ.
3. ಕರ್ತನು ದೊಡ್ಡ ದೇವರೂ ಎಲ್ಲಾ ದೇವರುಗಳ ಮೇಲೆ ದೊಡ್ಡ ಅರಸನೂ ಆಗಿದ್ದಾನೆ.
4. ಆತನ ಕೈಯಲ್ಲಿ ಭೂಮಿಯ ಆಳವಾದ ಸ್ಥಳಗಳು ಅವೆ; ಬೆಟ್ಟಗಳ ಬಲವು ಆತನದೇ.
5. ಸಮುದ್ರವು ಆತನದು; ಆತನು ಅದನ್ನು ಮಾಡಿದನು; ಆತನ ಕೈಗಳು ಒಣಭೂಮಿಯನ್ನು ರೂಪಿಸಿದವು.
6. ಬನ್ನಿರಿ, ನಮ್ಮನ್ನು ಉಂಟುಮಾಡಿದ ಕರ್ತನ ಮುಂದೆ ಮೊಣಕಾಲು ಊರೋಣ ಆತನಿಗೆ ಎರಗಿ ಆರಾಧಿಸೋಣ.
7. ಆತನು ನಮ್ಮ ದೇವರು; ನಾವು ಆತನು ಮೇಯಿಸುವ ಜನರೂ ಆತನ ಕೈ ಕೆಳಗಿರುವ ಹಿಂಡೂ ಆಗಿದ್ದೇವೆ. ನೀವು ಹೊತ್ತು ಆತನ ಸ್ವರವನ್ನು ಕೇಳಿದರೆ
8. ಅರಣ್ಯದಲ್ಲಿ ಆದ ಶೋಧನೆಯ ದಿವಸದಲ್ಲಿ ಕೋಪವನ್ನೆಬ್ಬಿಸಿದಂತೆ ನಿಮ್ಮ ಹೃದ ಯವನ್ನು ಕಠಿಣಮಾಡಿಕೊಳ್ಳಬೇಡಿರಿ.
9. ಅಲ್ಲಿ ನಿಮ್ಮ ತಂದೆಗಳು ನನ್ನನ್ನು ಶೋಧಿಸಿ, ಪರೀಕ್ಷಿಸಿದರು; ನನ್ನ ಕೆಲಸವನ್ನು ನೋಡಿದರು.
10. ನಾಲ್ವತ್ತು ವರುಷ ಸಂತತಿಗೆ ಬೇಸರಗೊಂಡು--ಇವರು ತಮ್ಮ ಹೃದಯ ದಲ್ಲಿ ತಪ್ಪಿ ಹೋಗುವ ಜನರಾಗಿದ್ದಾರೆ; ನನ್ನ ಮಾರ್ಗ ಗಳನ್ನು ಅವರು ಅರಿಯರು ಅಂದೆನು.ಆದದರಿಂದ ನನ್ನ ವಿಶ್ರಾಂತಿಯಲ್ಲಿ ಅವರು ಪ್ರವೇಶಿಸರೆಂದು ಕೋಪ ದಿಂದ ಆಣೆ ಇಟ್ಟುಕೊಂಡೆನು.
11. ಆದದರಿಂದ ನನ್ನ ವಿಶ್ರಾಂತಿಯಲ್ಲಿ ಅವರು ಪ್ರವೇಶಿಸರೆಂದು ಕೋಪ ದಿಂದ ಆಣೆ ಇಟ್ಟುಕೊಂಡೆನು.
Total 150 Chapters, Current Chapter 95 of Total Chapters 150
×

Alert

×

kannada Letters Keypad References