ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಪ್ರಕಟನೆ
1. ಸಿಂಹಾಸನದ ಮೇಲೆ ಕೂತಿದ್ದಾತನ ಬಲಗೈಯಲ್ಲಿ ಒಂದು ಪುಸ್ತಕವನ್ನು ಕಂಡೆನು; ಅದರ ಒಳಗೂ ಹಿಂದಿನ ಭಾಗದ ಮೇಲೆಯೂ ಬರೆದಿತ್ತು; ಅದು ಏಳು ಮುದ್ರೆಗಳಿಂದ ಮುದ್ರಿತವಾಗಿತ್ತು.
2. ಇದಲ್ಲದೆ ಬಲಿಷ್ಠನಾದ ಒಬ್ಬ ದೂತನು--ಈ ಪುಸ್ತಕವನ್ನು ತೆರೆಯುವದಕ್ಕೂ ಇದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯಾವನು ಯೋಗ್ಯನು ಎಂದು ಮಹಾಶಬ್ದದಿಂದ ಸಾರುವದನ್ನು ಕಂಡೆನು.
3. ಆ ಪುಸ್ತಕವನ್ನು ತೆರೆಯುವದಕ್ಕಾದರೂ ಅದರೊಳಗೆ ನೋಡುವದಕ್ಕಾದರೂ ಪರಲೋಕದಲ್ಲಿಯಾಗಲಿ ಭೂಮಿಯಲ್ಲಿಯಾಗಲಿ ಭೂಮಿಯ ಕೆಳಗಾಗಲಿ ಯಾವನಿಗೂ ಶಕ್ತಿಯಿರಲಿಲ್ಲ.
4. ಆಗ ಪುಸ್ತಕವನ್ನು ತೆರೆಯುವದಕ್ಕಾಗಲಿ ಅದನ್ನು ಓದುವದಕ್ಕಾಗಲಿ ಅದರಲ್ಲಿ ನೋಡುವದಕ್ಕಾಗಲಿ ಯೋಗ್ಯನಾದವನು ಒಬ್ಬನೂ ಸಿಕ್ಕಲಿಲ್ಲವಾದ ಕಾರಣ ನಾನು ಬಹಳವಾಗಿ ಅತ್ತೆನು.
5. ಆಗ ಹಿರಿಯರಲ್ಲಿ ಒಬ್ಬನು ನನಗೆ--ಅಳಬೇಡ; ಅಗೋ, ಯೂದಾ ಗೋತ್ರದ ಸಿಂಹವೂ ದಾವೀದನ ಅಂಕುರದವನೂ ಆಗಿರುವಾತನು ಆ ಪುಸ್ತಕವನ್ನು ತೆರೆಯುವದಕ್ಕೂ ಅದರ ಏಳು ಮುದ್ರೆ ಗಳನ್ನು ಬಿಚ್ಚುವದಕ್ಕೂ ಜಯಹೊಂದಿದ್ದಾನೆ ಎಂದು ಹೇಳಿದನು.
6. ನಾನು ನೋಡಲಾಗಿ ಇಗೋ, ಸಿಂಹಾಸ ನದ ಮತ್ತು ನಾಲ್ಕು ಜೀವಿಗಳ ಮಧ್ಯದಲ್ಲಿಯೂ ಹಿರಿಯರ ಮಧ್ಯದಲ್ಲಿಯೂ ಒಂದು ಕುರಿಮರಿಯು ವಧಿಸಲ್ಪಟ್ಟಂತೆ ನಿಂತಿರುವದನ್ನು ಕಂಡೆನು; ಅದಕ್ಕೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು; ಅವು ಭೂಮಿಯ ಮೇಲೆಲ್ಲಾ ಕಳುಹಿಸಲ್ಪಟ್ಟಿರುವ ದೇವರ ಏಳು ಆತ್ಮ
7. ಆತನು ಬಂದು ಸಿಂಹಾಸನದ ಮೇಲೆ ಕೂತಿದ್ದಾತನ ಬಲಗೈಯೊಳಗಿಂದ ಆ ಪುಸ್ತಕ ವನ್ನು ತೆಗೆದುಕೊಂಡನು.
8. ಆತನು ಆ ಪುಸ್ತಕವನ್ನು ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ತನಾಲ್ಕು ಮಂದಿ ಹಿರಿಯರೂ ಕುರಿಮರಿಯಾದಾತನ ಮುಂದೆ ಅಡ್ಡಬಿದ್ದರು; ಅವರೆಲ್ಲರ ಕೈಗಳಲ್ಲಿ ವೀಣೆಗಳೂ ಪರಿ ಶುದ್ಧರ ಪರಿಮಳವಾದ ಪ್ರಾರ್ಥನೆಗಳಿಂದ ತುಂಬಿದ್ದ ಚಿನ್ನದ ಪಾತ್ರೆಗಳೂ ಇದ್ದವು.
9. ಅವರು ಹೊಸ ಹಾಡನ್ನು ಹಾಡುತ್ತಾ--ನೀನು ಪುಸ್ತಕವನ್ನು ತೆಗೆದುಕೊಳ್ಳುವದಕ್ಕೂ ಅದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯೋಗ್ಯ ನಾಗಿದ್ದೀ; ಯಾಕಂದರೆ ನೀನು ವಧಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳ ವರಿಂದ ನಮ್ಮನ್ನು ದೇವರಿಗಾಗಿ ವಿಮೋಚಿಸಿದ್ದೀ;
10. ನಮ್ಮನ್ನು ನಮ್ಮ ದೇವರಿಗೊಸ್ಕರ ರಾಜರನ್ನಾಗಿಯೂ ಯಾಜಕರನ್ನಾ ಗಿಯೂ ಮಾಡಿದ್ದೀ; ನಾವು ಭೂಮಿಯ ಮೇಲೆ ಆಳುವೆವು ಎಂದು ಹೇಳಿದರು.
11. ಇದಲ್ಲದೆ ನಾನು ನೋಡಲಾಗಿ ಸಿಂಹಾಸನದ, ಜೀವಿಗಳ ಮತ್ತು ಹಿರಿಯರ ಸುತ್ತಲು ಬಹುಮಂದಿ ದೂತರ ಶಬ್ದವನ್ನು ಕೇಳಿದೆನು; ಅವರ ಸಂಖ್ಯೆಯು ಕೋಟ್ಯಾನುಕೋಟಿ ಯಾಗಿಯೂ ಲಕ್ಷೋಪಲಕ್ಷವಾಗಿಯೂ ಇತ್ತು.
12. ಅವರು--ವಧಿತನಾದ ಕುರಿಮರಿಯು ಬಲ ಐಶ್ವರ್ಯ ಜ್ಞಾನ ಸಾಮರ್ಥ್ಯ ಮಾನಪ್ರಭಾವ ಸ್ತೋತ್ರಗಳನ್ನು ಹೊಂದುವದಕ್ಕೆ ಯೋಗ್ಯನು ಎಂದು ಮಹಾಶಬ್ದದಿಂದ ಹೇಳಿದರು.
13. ಇದಲ್ಲದೆ ಆಕಾಶ ದಲ್ಲಿಯೂ ಭೂಮಿಯ ಮೇಲೆಯೂ ಭೂಮಿಯ ಕೆಳಗೂ ಸಮುದ್ರದಲ್ಲಿಯೂ ಅವುಗಳಲ್ಲಿರುವ ಎಲ್ಲಾ ಸೃಷ್ಟಿಗಳೂ--ಸಿಂಹಾಸನಾಸೀನನಾಗಿರುವಾತನಿಗೂ ಕುರಿಮರಿಯಾದಾತನಿಗೂ ಸ್ತೋತ್ರಮಾನ ಪ್ರಭಾವ ಬಲವು ಯುಗಯುಗಾಂತರಗಳಲ್ಲಿಯೂ ಇರಲಿ ಎಂದು ಹೇಳುವದನ್ನು ನಾನು ಕೇಳಿದೆನು.
14. ಆಗ ನಾಲ್ಕು ಜೀವಿಗಳು--ಆಮೆನ್ ಅಂದವು; ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡ ಬಿದ್ದು ಯುಗಯುಗಾಂತರಗಳಲ್ಲಿ ಜೀವಿಸುವಾತನನ್ನು ಆರಾಧಿಸಿದರು.
ಒಟ್ಟು 22 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 5 / 22
1 ಸಿಂಹಾಸನದ ಮೇಲೆ ಕೂತಿದ್ದಾತನ ಬಲಗೈಯಲ್ಲಿ ಒಂದು ಪುಸ್ತಕವನ್ನು ಕಂಡೆನು; ಅದರ ಒಳಗೂ ಹಿಂದಿನ ಭಾಗದ ಮೇಲೆಯೂ ಬರೆದಿತ್ತು; ಅದು ಏಳು ಮುದ್ರೆಗಳಿಂದ ಮುದ್ರಿತವಾಗಿತ್ತು. 2 ಇದಲ್ಲದೆ ಬಲಿಷ್ಠನಾದ ಒಬ್ಬ ದೂತನು--ಈ ಪುಸ್ತಕವನ್ನು ತೆರೆಯುವದಕ್ಕೂ ಇದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯಾವನು ಯೋಗ್ಯನು ಎಂದು ಮಹಾಶಬ್ದದಿಂದ ಸಾರುವದನ್ನು ಕಂಡೆನು. 3 ಆ ಪುಸ್ತಕವನ್ನು ತೆರೆಯುವದಕ್ಕಾದರೂ ಅದರೊಳಗೆ ನೋಡುವದಕ್ಕಾದರೂ ಪರಲೋಕದಲ್ಲಿಯಾಗಲಿ ಭೂಮಿಯಲ್ಲಿಯಾಗಲಿ ಭೂಮಿಯ ಕೆಳಗಾಗಲಿ ಯಾವನಿಗೂ ಶಕ್ತಿಯಿರಲಿಲ್ಲ. 4 ಆಗ ಪುಸ್ತಕವನ್ನು ತೆರೆಯುವದಕ್ಕಾಗಲಿ ಅದನ್ನು ಓದುವದಕ್ಕಾಗಲಿ ಅದರಲ್ಲಿ ನೋಡುವದಕ್ಕಾಗಲಿ ಯೋಗ್ಯನಾದವನು ಒಬ್ಬನೂ ಸಿಕ್ಕಲಿಲ್ಲವಾದ ಕಾರಣ ನಾನು ಬಹಳವಾಗಿ ಅತ್ತೆನು. 5 ಆಗ ಹಿರಿಯರಲ್ಲಿ ಒಬ್ಬನು ನನಗೆ--ಅಳಬೇಡ; ಅಗೋ, ಯೂದಾ ಗೋತ್ರದ ಸಿಂಹವೂ ದಾವೀದನ ಅಂಕುರದವನೂ ಆಗಿರುವಾತನು ಆ ಪುಸ್ತಕವನ್ನು ತೆರೆಯುವದಕ್ಕೂ ಅದರ ಏಳು ಮುದ್ರೆ ಗಳನ್ನು ಬಿಚ್ಚುವದಕ್ಕೂ ಜಯಹೊಂದಿದ್ದಾನೆ ಎಂದು ಹೇಳಿದನು. 6 ನಾನು ನೋಡಲಾಗಿ ಇಗೋ, ಸಿಂಹಾಸ ನದ ಮತ್ತು ನಾಲ್ಕು ಜೀವಿಗಳ ಮಧ್ಯದಲ್ಲಿಯೂ ಹಿರಿಯರ ಮಧ್ಯದಲ್ಲಿಯೂ ಒಂದು ಕುರಿಮರಿಯು ವಧಿಸಲ್ಪಟ್ಟಂತೆ ನಿಂತಿರುವದನ್ನು ಕಂಡೆನು; ಅದಕ್ಕೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು; ಅವು ಭೂಮಿಯ ಮೇಲೆಲ್ಲಾ ಕಳುಹಿಸಲ್ಪಟ್ಟಿರುವ ದೇವರ ಏಳು ಆತ್ಮ 7 ಆತನು ಬಂದು ಸಿಂಹಾಸನದ ಮೇಲೆ ಕೂತಿದ್ದಾತನ ಬಲಗೈಯೊಳಗಿಂದ ಆ ಪುಸ್ತಕ ವನ್ನು ತೆಗೆದುಕೊಂಡನು. 8 ಆತನು ಆ ಪುಸ್ತಕವನ್ನು ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ತನಾಲ್ಕು ಮಂದಿ ಹಿರಿಯರೂ ಕುರಿಮರಿಯಾದಾತನ ಮುಂದೆ ಅಡ್ಡಬಿದ್ದರು; ಅವರೆಲ್ಲರ ಕೈಗಳಲ್ಲಿ ವೀಣೆಗಳೂ ಪರಿ ಶುದ್ಧರ ಪರಿಮಳವಾದ ಪ್ರಾರ್ಥನೆಗಳಿಂದ ತುಂಬಿದ್ದ ಚಿನ್ನದ ಪಾತ್ರೆಗಳೂ ಇದ್ದವು. 9 ಅವರು ಹೊಸ ಹಾಡನ್ನು ಹಾಡುತ್ತಾ--ನೀನು ಪುಸ್ತಕವನ್ನು ತೆಗೆದುಕೊಳ್ಳುವದಕ್ಕೂ ಅದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯೋಗ್ಯ ನಾಗಿದ್ದೀ; ಯಾಕಂದರೆ ನೀನು ವಧಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳ ವರಿಂದ ನಮ್ಮನ್ನು ದೇವರಿಗಾಗಿ ವಿಮೋಚಿಸಿದ್ದೀ; 10 ನಮ್ಮನ್ನು ನಮ್ಮ ದೇವರಿಗೊಸ್ಕರ ರಾಜರನ್ನಾಗಿಯೂ ಯಾಜಕರನ್ನಾ ಗಿಯೂ ಮಾಡಿದ್ದೀ; ನಾವು ಭೂಮಿಯ ಮೇಲೆ ಆಳುವೆವು ಎಂದು ಹೇಳಿದರು. 11 ಇದಲ್ಲದೆ ನಾನು ನೋಡಲಾಗಿ ಸಿಂಹಾಸನದ, ಜೀವಿಗಳ ಮತ್ತು ಹಿರಿಯರ ಸುತ್ತಲು ಬಹುಮಂದಿ ದೂತರ ಶಬ್ದವನ್ನು ಕೇಳಿದೆನು; ಅವರ ಸಂಖ್ಯೆಯು ಕೋಟ್ಯಾನುಕೋಟಿ ಯಾಗಿಯೂ ಲಕ್ಷೋಪಲಕ್ಷವಾಗಿಯೂ ಇತ್ತು. 12 ಅವರು--ವಧಿತನಾದ ಕುರಿಮರಿಯು ಬಲ ಐಶ್ವರ್ಯ ಜ್ಞಾನ ಸಾಮರ್ಥ್ಯ ಮಾನಪ್ರಭಾವ ಸ್ತೋತ್ರಗಳನ್ನು ಹೊಂದುವದಕ್ಕೆ ಯೋಗ್ಯನು ಎಂದು ಮಹಾಶಬ್ದದಿಂದ ಹೇಳಿದರು. 13 ಇದಲ್ಲದೆ ಆಕಾಶ ದಲ್ಲಿಯೂ ಭೂಮಿಯ ಮೇಲೆಯೂ ಭೂಮಿಯ ಕೆಳಗೂ ಸಮುದ್ರದಲ್ಲಿಯೂ ಅವುಗಳಲ್ಲಿರುವ ಎಲ್ಲಾ ಸೃಷ್ಟಿಗಳೂ--ಸಿಂಹಾಸನಾಸೀನನಾಗಿರುವಾತನಿಗೂ ಕುರಿಮರಿಯಾದಾತನಿಗೂ ಸ್ತೋತ್ರಮಾನ ಪ್ರಭಾವ ಬಲವು ಯುಗಯುಗಾಂತರಗಳಲ್ಲಿಯೂ ಇರಲಿ ಎಂದು ಹೇಳುವದನ್ನು ನಾನು ಕೇಳಿದೆನು. 14 ಆಗ ನಾಲ್ಕು ಜೀವಿಗಳು--ಆಮೆನ್ ಅಂದವು; ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡ ಬಿದ್ದು ಯುಗಯುಗಾಂತರಗಳಲ್ಲಿ ಜೀವಿಸುವಾತನನ್ನು ಆರಾಧಿಸಿದರು.
ಒಟ್ಟು 22 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 5 / 22
×

Alert

×

Kannada Letters Keypad References