ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಆದಿಕಾಂಡ
1. ರಾಹೇಲಳು ತಾನು ಯಾಕೋಬನಿಗೆ ಇನ್ನು ಹೆರುವದಿಲ್ಲವೆಂದು ತಿಳಿದಾಗ ಆಕೆಯು ತನ್ನ ಸಹೋದರಿಯ ಮೇಲೆ ಹೊಟ್ಟೇಕಿಚ್ಚು ಪಟ್ಟು ಯಾಕೋಬನಿಗೆ--ನನಗೆ ಮಕ್ಕಳನ್ನು ಕೊಡು, ಇಲ್ಲದಿದ್ದರೆ ನಾನು ಸಾಯುತ್ತೇನೆ ಅಂದಳು.
2. ಅದಕ್ಕೆ ಯಾಕೋಬನು ರಾಹೇಲಳ ಮೇಲೆ ಕೋಪಿಸಿ ಕೊಂಡು--ನಿನಗೆ ಗರ್ಭ ಫಲವನ್ನು ಕೊಡದ ದೇವರ ಸ್ಥಾನದಲ್ಲಿ ನಾನಿದ್ದೇನೋ ಅಂದನು.
3. ಅದಕ್ಕೆ ಆಕೆಯು--ಇಗೋ, ನನ್ನ ದಾಸಿಯಾದ ಬಿಲ್ಹಳು ಇದ್ದಾಳೆ. ಅವಳ ಬಳಿಗೆ ಹೋಗು; ಅವಳು ನನ್ನ ಮೊಣಕಾಲಿನ ಮೇಲೆ ಹೆರುವಳು, ಅವಳಿಂದ ನನಗೆ ಮಕ್ಕಳಾಗುವರು ಅಂದಳು.
4. ಹೀಗೆ ಅವನಿಗೆ ತನ್ನ ದಾಸಿಯಾದ ಬಿಲ್ಹಳನ್ನು ಕೊಟ್ಟಳು. ಯಾಕೋಬನು ಅವಳ ಬಳಿಗೆ ಹೋದನು.
5. ಆಗ ಬಿಲ್ಹಳು ಗರ್ಭಿಣಿಯಾಗಿ ಯಾಕೋಬನಿಗೆ ಮಗನನ್ನು ಹೆತ್ತಳು.
6. ರಾಹೇಲಳು--ದೇವರು ನನಗೆ ನ್ಯಾಯತೀರಿಸಿ ನನ್ನ ಮೊರೆ ಕೇಳಿ ನನಗೆ ಮಗನನ್ನು ಕೊಟ್ಟಿದ್ದಾನೆ ಎಂದು ಹೇಳಿದಳು. ಆದದರಿಂದ ಆಕೆಯು ಅವನಿಗೆ ದಾನ್ ಎಂದು ಹೆಸರಿಟ್ಟಳು.
7. ರಾಹೇಲಳ ದಾಸಿಯಾದ ಬಿಲ್ಹಳು ತಿರಿಗಿ ಗರ್ಭಿಣಿ ಯಾಗಿ ಯಾಕೋಬನಿಗೆ ಎರಡನೆಯ ಮಗನನ್ನು ಹೆತ್ತಳು.
8. ಆಗ ರಾಹೇಲಳು--ಅಧಿಕವಾದ ಹೋರಾಟ ಗಳಿಂದ ನನ್ನ ಸಹೋದರಿಯ ಸಂಗಡ ಹೋರಾಡಿ ಜಯಿಸಿದ್ದೇನೆ ಎಂದು ಹೇಳಿ ಅವನಿಗೆ ನಫ್ತಾಲಿ ಎಂದು ಹೆಸರಿಟ್ಟಳು.
9. ಲೇಯಳು ತಾನು ಹೆರುವದು ನಿಂತಿತೆಂದು ತಿಳಿದು ತನ್ನ ದಾಸಿಯಾದ ಜಿಲ್ಪಳನ್ನು ತಕ್ಕೊಂಡು ಯಾಕೋಬ ನಿಗೆ ಹೆಂಡತಿಯಾಗಿ ಕೊಟ್ಟಳು.
10. ಲೇಯಳ ದಾಸಿ ಯಾದ ಜಿಲ್ಪಳು ಯಾಕೋಬನಿಗೆ ಮಗನನ್ನು ಹೆತ್ತಳು.
11. ಆಗ ಲೇಯಳು--ಒಂದು ಸೈನ್ಯ ಬರುತ್ತದೆ ಎಂದು ಹೇಳಿ ಅವನಿಗೆ ಗಾದ್ ಎಂದು ಹೆಸರಿಟ್ಟಳು.
12. ಲೇಯಳ ದಾಸಿಯಾದ ಜಿಲ್ಪಳು ಯಾಕೋಬನಿಗೆ ಎರಡನೆಯ ಮಗನನ್ನು ಹೆತ್ತಳು.
13. ಆಗ ಲೇಯಳು--ನಾನು ಧನ್ಯಳಾದೆನು. ಸ್ತ್ರೀಯರು ನನ್ನನ್ನು ಧನ್ಯಳೆಂದು ಕರೆಯು ವರು ಎಂದು ಹೇಳಿ ಅವನಿಗೆ ಆಶೇರ್ ಎಂದು ಹೆಸರಿಟ್ಟಳು.
14. ರೂಬೇನನು ಗೋದಿ ಕೊಯ್ಯುವ ಕಾಲದಲ್ಲಿ ಹೋಗಿ ಹೊಲದಲ್ಲಿ ದುದಾಯಗಳನ್ನು ಕಂಡು ತಾಯಿಯಾದ ಲೇಯಳ ಬಳಿಗೆ ತಂದಾಗ ರಾಹೇಲಳು ಲೇಯಳಿಗೆ--ನಿನ್ನ ಮಗನ ದುದಾಯಗಳಲ್ಲಿ ಕೆಲವನ್ನು ನನಗೆ ಕೊಡು ಅಂದಳು.
15. ಅದಕ್ಕೆ ಆಕೆಯು--ನೀನು ನನ್ನ ಗಂಡನನ್ನು ತಕ್ಕೊಂಡದ್ದು ಅಲ್ಪಕಾರ್ಯವೋ? ನೀನು ಈಗ ನನ್ನ ಮಗನು ತಂದ ದುದಾಯಗಳನ್ನು ಸಹ ತಕ್ಕೊಳ್ಳುವಿಯೋ ಅಂದಾಗ ರಾಹೇಲಳು--ಆದದರಿಂದ ನಿನ್ನ ಮಗನು ತಂದ ದುದಾಯಗಳಿ ಗೋಸ್ಕರ ಯಾಕೋಬನು ಈ ರಾತ್ರಿ ನಿನ್ನ ಸಂಗಡ ಮಲಗಲಿ ಅಂದಳು.
16. ಯಾಕೋಬನು ಸಾಯಂಕಾಲ ದಲ್ಲಿ ಹೊಲದಿಂದ ಬಂದಾಗ ಲೇಯಳು ಅವನೆದುರಿಗೆ ಹೊರಟುಹೋಗಿ--ನೀನು ನನ್ನ ಬಳಿಗೆ ಬರಬೇಕು; ನನ್ನ ಮಗನ ದುದಾಯಗಳ ಬಾಡಿಗೆಯಿಂದ ನಿನ್ನನ್ನು ಸಂಪಾದಿಸಿಕೊಂಡಿದ್ದೇನೆ ಅಂದಳು. ಆದದರಿಂದ ಅವನು ಆ ರಾತ್ರಿಯಲ್ಲಿ ಆಕೆಯ ಸಂಗಡ ಮಲಗಿದನು.
17. ಆಗ ದೇವರು ಲೇಯಳನ್ನು ಆಲೈಸಿದ್ದರಿಂದ ಆಕೆಯು ಗರ್ಭಿಣಿಯಾಗಿ ಯಾಕೋಬನಿಗೆ ಐದನೆಯ ಮಗನನ್ನು ಹೆತ್ತಳು.
18. ಆಗ ಲೇಯಳು--ನಾನು ನನ್ನ ಗಂಡನಿಗೆ ನನ್ನ ದಾಸಿಯನ್ನು ಕೊಟ್ಟದ್ದರಿಂದ ದೇವರು ನನಗೆ ಕೂಲಿಯನ್ನು ಕೊಟ್ಟಿದ್ದಾನೆ ಎಂದು ಹೇಳಿ ಅವನಿಗೆ ಇಸ್ಸಾಕಾರ ಎಂದು ಹೆಸರಿಟ್ಟಳು.
19. ಮತ್ತೊಂದು ಸಾರಿ ಲೇಯಳು ಗರ್ಭಿಣಿಯಾಗಿ ಯಾಕೋಬನಿಗೆ ಆರನೆಯ ಮಗನನ್ನು ಹೆತ್ತಳು;
20. ಲೇಯಳು--ದೇವರು ನನಗೆ ಒಳ್ಳೇ ಬಳುವಳಿಯನ್ನು ಕೊಟ್ಟಿದ್ದಾನೆ; ಈಗ ನಾನು ಅವನಿಗೆ ಆರು ಮಕ್ಕಳನ್ನು ಹೆತ್ತದ್ದರಿಂದ ನನ್ನ ಗಂಡನು ನನ್ನ ಸಂಗಡ ವಾಸಿಸುವನು ಎಂದು ಹೇಳಿ ಅವನಿಗೆ ಜೆಬುಲೂನ್ ಎಂದು ಹೆಸರಿಟ್ಟಳು.
21. ತರುವಾಯ ಆಕೆಯು ಒಬ್ಬ ಮಗಳನ್ನು ಹೆತ್ತು ಆಕೆಗೆ ದೀನಾ ಎಂದು ಹೆಸರಿಟ್ಟಳು.
22. ಆಗ ದೇವರು ರಾಹೇಲಳನ್ನು ಜ್ಞಾಪಕಮಾಡಿ ಕೊಂಡನು. ದೇವರು ಆಕೆಯನ್ನು ಆಲೈಸಿ ಆಕೆಯ ಗರ್ಭವನ್ನು ತೆರೆದನು.
23. ಆಕೆಯು ಗರ್ಭಿಣಿಯಾಗಿ ಮಗನನ್ನು ಹೆತ್ತು--ದೇವರು ನನ್ನ ನಿಂದೆಯನ್ನು ತೆಗೆದುಬಿಟ್ಟಿದ್ದಾನೆ ಅಂದಳು.
24. ಆಕೆಯು--ಕರ್ತನು ನನಗೆ ಮತ್ತೊಬ್ಬ ಮಗನನ್ನು ಕೂಡಿಸುವನೆಂದು ಹೇಳಿ ಅವನಿಗೆ ಯೋಸೇಫ ಎಂದು ಹೆಸರಿಟ್ಟಳು.
25. ರಾಹೇಲಳು ಯೋಸೇಫನನ್ನು ಹೆತ್ತಾಗ ಯಾಕೋಬನು ಲಾಬಾನನಿಗೆ--ನಾನು ನನ್ನ ಸ್ಥಳಕ್ಕೂ ಸ್ವದೇಶಕ್ಕೂ ಹೋಗುವ ಹಾಗೆ ನನ್ನನ್ನು ಕಳುಹಿಸಿ ಕೊಡು.
26. ನಾನು ಯಾರಿಗೊಸ್ಕರ ನಿನಗೆ ಸೇವೆ ಮಾಡಿದೆನೋ ಆ ನನ್ನ ಹೆಂಡತಿಯರನ್ನೂ ನನ್ನ ಮಕ್ಕಳನ್ನೂ ನನ್ನೊಂದಿಗೆ ಕಳುಹಿಸಿಕೊಡು. ನಾನು ನಿನಗೆ ಮಾಡಿದ ಸೇವೆಯನ್ನು ನೀನು ಬಲ್ಲವನಾಗಿದ್ದೀ ಅಂದನು.
27. ಲಾಬಾನನು ಅವನಿಗೆ--ನಾನು ನಿನ್ನ ದೃಷ್ಟಿಯಲ್ಲಿ ದಯೆಹೊಂದಿದವನಾಗಿದ್ದರೆ ನನ್ನ ಬಳಿ ಯಲ್ಲಿಯೇ ಇರು. ಕರ್ತನು ನಿನಗೋಸ್ಕರ ನನ್ನನ್ನು ಆಶೀರ್ವದಿಸಿದ್ದಾನೆಂದು ನಾನು ಅನುಭವದಿಂದ ಕಲಿತುಕೊಂಡಿದ್ದೇನೆ.
28. ನೀನು ನಿನ್ನ ಸಂಬಳವನ್ನು ನಿರ್ಣಯಿಸು; ಆಗ ಅದನ್ನು ನಾನು ನಿನಗೆ ಕೊಡುವೆನು ಅಂದನು.
29. ಅದಕ್ಕೆ ಯಾಕೋಬನು ಅವನಿಗೆ--ನಾನು ನಿನಗೆ ಮಾಡಿದ ಸೇವೆಯನ್ನೂ ನಿನ್ನ ಮಂದೆಯು ನನ್ನ ಬಳಿಯಲ್ಲಿ ಹೇಗೆ ಇತ್ತೆಂಬದ್ದನ್ನೂ ನೀನು ಬಲ್ಲೆ.
30. ನಾನು ಬರುವದಿಕ್ಕಿಂತ ಮುಂಚೆ ನಿನಗಿದ್ದದ್ದು ಸ್ವಲ್ಪವೇ; ಈಗ ಅದು ಬಹಳವಾಗಿ ಹೆಚ್ಚಿದೆ. ನಾನು ಬಂದಂದಿನಿಂದ ಕರ್ತನು ನಿನ್ನನ್ನು ಆಶೀರ್ವದಿಸಿದ್ದಾನೆ. ಈಗ ನಾನು ನನ್ನ ಸ್ವಂತ ಮನೆಗೋಸ್ಕರ ಯಾವಾಗ ಸಂಪಾದಿಸಲಿ ಅಂದನು.
31. ಅದಕ್ಕೆ ಲಾಬಾನನು--ನಿನಗೆ ನಾನು ಏನು ಕೊಡಲಿ ಅಂದಾಗ ಯಾಕೋಬನು--ಏನೂ ಕೊಡ ಬೇಡ, ಇದು ಮಾತ್ರ ನೀನು ನನಗಾಗಿ ಮಾಡಿದರೆ ನಾನು ತಿರಿಗಿ ನಿನ್ನ ಮಂದೆಯನ್ನು ಮೇಯಿಸಿ ಕಾಯುವೆನು;
32. ಈ ಹೊತ್ತು ನಾನು ನಿನ್ನ ಎಲ್ಲಾ ಮಂದೆಯ ಮಧ್ಯದಲ್ಲಿ ಹಾದುಹೋಗುವೆನು; ಅದ ರಲ್ಲಿ ಚುಕ್ಕೆ ಮಚ್ಚೆ ಉಳ್ಳವುಗಳನ್ನೆಲ್ಲಾ ಕುರಿಗಳಲ್ಲಿ ಕಂದು ಬಣ್ಣದವುಗಳನ್ನೆಲ್ಲಾ ಮೇಕೆಗಳಲ್ಲಿ ಚುಕ್ಕೆ ಮಚ್ಚೆ ಉಳ್ಳವುಗಳನ್ನೆಲ್ಲಾ ಬೇರೆ ಮಾಡುವೆನು. ಅವೇ ನನ್ನ ಕೂಲಿಯಾಗಿರಲಿ.
33. ಹೀಗಿದ್ದರೆ ಬರುವ ಕಾಲದಲ್ಲಿ ನನ್ನ ಸಂಬಳಕ್ಕಾಗಿ ನಾನು ನಿನ್ನ ಮುಂದೆ ಬಂದಾಗ ನನ್ನ ನೀತಿಯು ನನಗಾಗಿ ಉತ್ತರ ಕೊಡುವದು. ಮೇಕೆಗಳಲ್ಲಿ ಚುಕ್ಕೆ ಮಚ್ಚೆ ಕುರಿಗಳಲ್ಲಿ ಕಂದು ಬಣ್ಣವಿಲ್ಲದವುಗಳೂ ನನ್ನ ಬಳಿಯಲ್ಲಿದ್ದರೆ ಅವು ಕದ್ದವುಗಳಾಗಿ ಎಣಿಕೆಯಾಗಿರಲಿ ಅಂದನು.
34. ಲಾಬಾನನು--ಇಗೋ, ನೀನು ಹೇಳಿದಂತೆಯೇ ಆಗಲಿ ಅಂದನು.
35. ಅದೇ ದಿನದಲ್ಲಿ ಲಾಬಾನನು ಹೋತಗಳಲ್ಲಿ ರೇಖೆ ಮಚ್ಚೆ ಇದ್ದವುಗಳನ್ನೂ ಮೇಕೆ ಗಳಲ್ಲಿ ಚುಕ್ಕೆ ಮಚ್ಚೆ ಇದ್ದವುಗಳನ್ನೂ ಮತ್ತು ಸ್ವಲ್ಪ ಬಿಳುಪಾದ ಬಣ್ಣವಿದ್ದ ಎಲ್ಲವುಗಳನ್ನೂ ಕುರಿ ಗಳಲ್ಲಿ ಕಂದುಬಣ್ಣವಿದ್ದವುಗಳನ್ನೂ ವಿಂಗಡಿಸಿ ತನ್ನ ಕುಮಾರರ ಕೈಗೆ ಕೊಟ್ಟನು.
36. ತನಗೂ ಯಾಕೋಬ ನಿಗೂ ಮಧ್ಯದಲ್ಲಿ ಮೂರು ದಿನದ ಪ್ರಯಾಣದಷ್ಟು ಅಂತರವನ್ನು ಬಿಟ್ಟನು. ಯಾಕೋಬನು ಲಾಬಾನನ ಮಿಕ್ಕ ಮಂದೆಗಳನ್ನು ಮೇಯಿಸಿದನು.
37. ಹೀಗಿರುವಲ್ಲಿ ಯಾಕೋಬನು ಲಿಬ್ನೆ, ಲೂಜು, ಅರ್ಮೋನ್ ಎಂಬ ಮರಗಳ ಹಸಿಕೋಲುಗಳನ್ನು ತೆಗೆದುಕೊಂಡು ಪಟ್ಟೆಪಟ್ಟೆಯಾಗಿ ತೊಗಟೆಯನ್ನು ಸುಲಿದು ಅವುಗಳ ಲ್ಲಿರುವ ಬಿಳೀ ಬಣ್ಣವು ಕಾಣಿಸುವಂತೆ ಮಾಡಿ
38. ಮಂದೆಗಳು ನೀರು ಕುಡಿಯುವದಕ್ಕೆ ಬಂದ ಸಮಯವೇ ಅವುಗಳಿಗೆ ಸಂಗಮಕಾಲವಾಗಿತ್ತು. ಅವು ಕೋಲುಗಳನ್ನು ನೋಡುತ್ತಾ ಸಂಗಮಮಾಡಿ ದ್ದರಿಂದ
39. ಚುಕ್ಕೆ ಮಚ್ಚೆ ರೇಖೆಗಳುಳ್ಳ ಮರಿಗಳನ್ನು ಈಯುತ್ತಿದ್ದವು.
40. ಯಾಕೋಬನು ಕುರಿಗಳನ್ನು ಬೇರೆ ಮಾಡಿ ಲಾಬಾನನ ಮಂದೆಯಲ್ಲಿರುವ ರೇಖೆಗಳು ಳ್ಳವುಗಳೆದುರಾಗಿಯೂ ಕಂದು ಬಣ್ಣ ಉಳ್ಳವು ಗಳಿಗೆದುರಾಗಿಯೂ ಕುರಿಗಳನ್ನು ಇರಿಸಿದನು. ಅವನು ತನ್ನ ಮಂದೆಯನ್ನು ಲಾಬಾನನ ಮಂದೆಗಳೊಂದಿಗೆ ಸೇರಿಸದೆ ಅವುಗಳನ್ನು ಬೇರೆ ಇಟ್ಟುಕೊಂಡನು.
41. ಇದಲ್ಲದೆ ಬಲಿಷ್ಠವಾದ ಆಡು ಕುರಿಗಳು ಸಂಗಮ ಮಾಡುವಾಗ ಆ ಕೋಲುಗಳನ್ನು ನೋಡುತ್ತಾ ಸಂಗಮಮಾಡಲಿ ಎಂದು ಯಾಕೋಬನು ದೋಣಿ ಗಳಲ್ಲಿ ಕೋಲುಗಳನ್ನಿಟ್ಟನು.
42. ಆದರೆ ಕುರಿಗಳು ಬಲಹೀನವಾಗಿದ್ದಾಗ ಅವನು ಕೋಲುಗಳನ್ನು ದೋಣಿಗಳಲ್ಲಿ ಇಡಲಿಲ್ಲ. ಹೀಗಾಗಿ ಬಲಹೀನ ವಾದವುಗಳು ಲಾಬಾನನಿಗೂ ಬಲವಾದವುಗಳು ಯಾಕೋಬನಿಗೂ ಆದವು.
43. ಈ ಪ್ರಕಾರ ಯಾಕೋಬನು ಅತ್ಯಧಿಕವಾಗಿ ಅಭಿವೃದ್ಧಿಯಾದದ್ದರಿಂದ ಬಹು ಕುರಿಗಳೂ ದಾಸದಾಸಿ ಯರೂ ಒಂಟೆಗಳೂ ಕತ್ತೆಗಳೂ ಅವನಿಗೆ ದೊರೆತವು.
ಒಟ್ಟು 50 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 30 / 50
1 ರಾಹೇಲಳು ತಾನು ಯಾಕೋಬನಿಗೆ ಇನ್ನು ಹೆರುವದಿಲ್ಲವೆಂದು ತಿಳಿದಾಗ ಆಕೆಯು ತನ್ನ ಸಹೋದರಿಯ ಮೇಲೆ ಹೊಟ್ಟೇಕಿಚ್ಚು ಪಟ್ಟು ಯಾಕೋಬನಿಗೆ--ನನಗೆ ಮಕ್ಕಳನ್ನು ಕೊಡು, ಇಲ್ಲದಿದ್ದರೆ ನಾನು ಸಾಯುತ್ತೇನೆ ಅಂದಳು. 2 ಅದಕ್ಕೆ ಯಾಕೋಬನು ರಾಹೇಲಳ ಮೇಲೆ ಕೋಪಿಸಿ ಕೊಂಡು--ನಿನಗೆ ಗರ್ಭ ಫಲವನ್ನು ಕೊಡದ ದೇವರ ಸ್ಥಾನದಲ್ಲಿ ನಾನಿದ್ದೇನೋ ಅಂದನು. 3 ಅದಕ್ಕೆ ಆಕೆಯು--ಇಗೋ, ನನ್ನ ದಾಸಿಯಾದ ಬಿಲ್ಹಳು ಇದ್ದಾಳೆ. ಅವಳ ಬಳಿಗೆ ಹೋಗು; ಅವಳು ನನ್ನ ಮೊಣಕಾಲಿನ ಮೇಲೆ ಹೆರುವಳು, ಅವಳಿಂದ ನನಗೆ ಮಕ್ಕಳಾಗುವರು ಅಂದಳು. 4 ಹೀಗೆ ಅವನಿಗೆ ತನ್ನ ದಾಸಿಯಾದ ಬಿಲ್ಹಳನ್ನು ಕೊಟ್ಟಳು. ಯಾಕೋಬನು ಅವಳ ಬಳಿಗೆ ಹೋದನು. 5 ಆಗ ಬಿಲ್ಹಳು ಗರ್ಭಿಣಿಯಾಗಿ ಯಾಕೋಬನಿಗೆ ಮಗನನ್ನು ಹೆತ್ತಳು. 6 ರಾಹೇಲಳು--ದೇವರು ನನಗೆ ನ್ಯಾಯತೀರಿಸಿ ನನ್ನ ಮೊರೆ ಕೇಳಿ ನನಗೆ ಮಗನನ್ನು ಕೊಟ್ಟಿದ್ದಾನೆ ಎಂದು ಹೇಳಿದಳು. ಆದದರಿಂದ ಆಕೆಯು ಅವನಿಗೆ ದಾನ್ ಎಂದು ಹೆಸರಿಟ್ಟಳು. 7 ರಾಹೇಲಳ ದಾಸಿಯಾದ ಬಿಲ್ಹಳು ತಿರಿಗಿ ಗರ್ಭಿಣಿ ಯಾಗಿ ಯಾಕೋಬನಿಗೆ ಎರಡನೆಯ ಮಗನನ್ನು ಹೆತ್ತಳು. 8 ಆಗ ರಾಹೇಲಳು--ಅಧಿಕವಾದ ಹೋರಾಟ ಗಳಿಂದ ನನ್ನ ಸಹೋದರಿಯ ಸಂಗಡ ಹೋರಾಡಿ ಜಯಿಸಿದ್ದೇನೆ ಎಂದು ಹೇಳಿ ಅವನಿಗೆ ನಫ್ತಾಲಿ ಎಂದು ಹೆಸರಿಟ್ಟಳು. 9 ಲೇಯಳು ತಾನು ಹೆರುವದು ನಿಂತಿತೆಂದು ತಿಳಿದು ತನ್ನ ದಾಸಿಯಾದ ಜಿಲ್ಪಳನ್ನು ತಕ್ಕೊಂಡು ಯಾಕೋಬ ನಿಗೆ ಹೆಂಡತಿಯಾಗಿ ಕೊಟ್ಟಳು. 10 ಲೇಯಳ ದಾಸಿ ಯಾದ ಜಿಲ್ಪಳು ಯಾಕೋಬನಿಗೆ ಮಗನನ್ನು ಹೆತ್ತಳು. 11 ಆಗ ಲೇಯಳು--ಒಂದು ಸೈನ್ಯ ಬರುತ್ತದೆ ಎಂದು ಹೇಳಿ ಅವನಿಗೆ ಗಾದ್ ಎಂದು ಹೆಸರಿಟ್ಟಳು. 12 ಲೇಯಳ ದಾಸಿಯಾದ ಜಿಲ್ಪಳು ಯಾಕೋಬನಿಗೆ ಎರಡನೆಯ ಮಗನನ್ನು ಹೆತ್ತಳು. 13 ಆಗ ಲೇಯಳು--ನಾನು ಧನ್ಯಳಾದೆನು. ಸ್ತ್ರೀಯರು ನನ್ನನ್ನು ಧನ್ಯಳೆಂದು ಕರೆಯು ವರು ಎಂದು ಹೇಳಿ ಅವನಿಗೆ ಆಶೇರ್ ಎಂದು ಹೆಸರಿಟ್ಟಳು. 14 ರೂಬೇನನು ಗೋದಿ ಕೊಯ್ಯುವ ಕಾಲದಲ್ಲಿ ಹೋಗಿ ಹೊಲದಲ್ಲಿ ದುದಾಯಗಳನ್ನು ಕಂಡು ತಾಯಿಯಾದ ಲೇಯಳ ಬಳಿಗೆ ತಂದಾಗ ರಾಹೇಲಳು ಲೇಯಳಿಗೆ--ನಿನ್ನ ಮಗನ ದುದಾಯಗಳಲ್ಲಿ ಕೆಲವನ್ನು ನನಗೆ ಕೊಡು ಅಂದಳು. 15 ಅದಕ್ಕೆ ಆಕೆಯು--ನೀನು ನನ್ನ ಗಂಡನನ್ನು ತಕ್ಕೊಂಡದ್ದು ಅಲ್ಪಕಾರ್ಯವೋ? ನೀನು ಈಗ ನನ್ನ ಮಗನು ತಂದ ದುದಾಯಗಳನ್ನು ಸಹ ತಕ್ಕೊಳ್ಳುವಿಯೋ ಅಂದಾಗ ರಾಹೇಲಳು--ಆದದರಿಂದ ನಿನ್ನ ಮಗನು ತಂದ ದುದಾಯಗಳಿ ಗೋಸ್ಕರ ಯಾಕೋಬನು ಈ ರಾತ್ರಿ ನಿನ್ನ ಸಂಗಡ ಮಲಗಲಿ ಅಂದಳು. 16 ಯಾಕೋಬನು ಸಾಯಂಕಾಲ ದಲ್ಲಿ ಹೊಲದಿಂದ ಬಂದಾಗ ಲೇಯಳು ಅವನೆದುರಿಗೆ ಹೊರಟುಹೋಗಿ--ನೀನು ನನ್ನ ಬಳಿಗೆ ಬರಬೇಕು; ನನ್ನ ಮಗನ ದುದಾಯಗಳ ಬಾಡಿಗೆಯಿಂದ ನಿನ್ನನ್ನು ಸಂಪಾದಿಸಿಕೊಂಡಿದ್ದೇನೆ ಅಂದಳು. ಆದದರಿಂದ ಅವನು ಆ ರಾತ್ರಿಯಲ್ಲಿ ಆಕೆಯ ಸಂಗಡ ಮಲಗಿದನು. 17 ಆಗ ದೇವರು ಲೇಯಳನ್ನು ಆಲೈಸಿದ್ದರಿಂದ ಆಕೆಯು ಗರ್ಭಿಣಿಯಾಗಿ ಯಾಕೋಬನಿಗೆ ಐದನೆಯ ಮಗನನ್ನು ಹೆತ್ತಳು. 18 ಆಗ ಲೇಯಳು--ನಾನು ನನ್ನ ಗಂಡನಿಗೆ ನನ್ನ ದಾಸಿಯನ್ನು ಕೊಟ್ಟದ್ದರಿಂದ ದೇವರು ನನಗೆ ಕೂಲಿಯನ್ನು ಕೊಟ್ಟಿದ್ದಾನೆ ಎಂದು ಹೇಳಿ ಅವನಿಗೆ ಇಸ್ಸಾಕಾರ ಎಂದು ಹೆಸರಿಟ್ಟಳು. 19 ಮತ್ತೊಂದು ಸಾರಿ ಲೇಯಳು ಗರ್ಭಿಣಿಯಾಗಿ ಯಾಕೋಬನಿಗೆ ಆರನೆಯ ಮಗನನ್ನು ಹೆತ್ತಳು; 20 ಲೇಯಳು--ದೇವರು ನನಗೆ ಒಳ್ಳೇ ಬಳುವಳಿಯನ್ನು ಕೊಟ್ಟಿದ್ದಾನೆ; ಈಗ ನಾನು ಅವನಿಗೆ ಆರು ಮಕ್ಕಳನ್ನು ಹೆತ್ತದ್ದರಿಂದ ನನ್ನ ಗಂಡನು ನನ್ನ ಸಂಗಡ ವಾಸಿಸುವನು ಎಂದು ಹೇಳಿ ಅವನಿಗೆ ಜೆಬುಲೂನ್ ಎಂದು ಹೆಸರಿಟ್ಟಳು. 21 ತರುವಾಯ ಆಕೆಯು ಒಬ್ಬ ಮಗಳನ್ನು ಹೆತ್ತು ಆಕೆಗೆ ದೀನಾ ಎಂದು ಹೆಸರಿಟ್ಟಳು. 22 ಆಗ ದೇವರು ರಾಹೇಲಳನ್ನು ಜ್ಞಾಪಕಮಾಡಿ ಕೊಂಡನು. ದೇವರು ಆಕೆಯನ್ನು ಆಲೈಸಿ ಆಕೆಯ ಗರ್ಭವನ್ನು ತೆರೆದನು. 23 ಆಕೆಯು ಗರ್ಭಿಣಿಯಾಗಿ ಮಗನನ್ನು ಹೆತ್ತು--ದೇವರು ನನ್ನ ನಿಂದೆಯನ್ನು ತೆಗೆದುಬಿಟ್ಟಿದ್ದಾನೆ ಅಂದಳು. 24 ಆಕೆಯು--ಕರ್ತನು ನನಗೆ ಮತ್ತೊಬ್ಬ ಮಗನನ್ನು ಕೂಡಿಸುವನೆಂದು ಹೇಳಿ ಅವನಿಗೆ ಯೋಸೇಫ ಎಂದು ಹೆಸರಿಟ್ಟಳು. 25 ರಾಹೇಲಳು ಯೋಸೇಫನನ್ನು ಹೆತ್ತಾಗ ಯಾಕೋಬನು ಲಾಬಾನನಿಗೆ--ನಾನು ನನ್ನ ಸ್ಥಳಕ್ಕೂ ಸ್ವದೇಶಕ್ಕೂ ಹೋಗುವ ಹಾಗೆ ನನ್ನನ್ನು ಕಳುಹಿಸಿ ಕೊಡು. 26 ನಾನು ಯಾರಿಗೊಸ್ಕರ ನಿನಗೆ ಸೇವೆ ಮಾಡಿದೆನೋ ಆ ನನ್ನ ಹೆಂಡತಿಯರನ್ನೂ ನನ್ನ ಮಕ್ಕಳನ್ನೂ ನನ್ನೊಂದಿಗೆ ಕಳುಹಿಸಿಕೊಡು. ನಾನು ನಿನಗೆ ಮಾಡಿದ ಸೇವೆಯನ್ನು ನೀನು ಬಲ್ಲವನಾಗಿದ್ದೀ ಅಂದನು. 27 ಲಾಬಾನನು ಅವನಿಗೆ--ನಾನು ನಿನ್ನ ದೃಷ್ಟಿಯಲ್ಲಿ ದಯೆಹೊಂದಿದವನಾಗಿದ್ದರೆ ನನ್ನ ಬಳಿ ಯಲ್ಲಿಯೇ ಇರು. ಕರ್ತನು ನಿನಗೋಸ್ಕರ ನನ್ನನ್ನು ಆಶೀರ್ವದಿಸಿದ್ದಾನೆಂದು ನಾನು ಅನುಭವದಿಂದ ಕಲಿತುಕೊಂಡಿದ್ದೇನೆ. 28 ನೀನು ನಿನ್ನ ಸಂಬಳವನ್ನು ನಿರ್ಣಯಿಸು; ಆಗ ಅದನ್ನು ನಾನು ನಿನಗೆ ಕೊಡುವೆನು ಅಂದನು. 29 ಅದಕ್ಕೆ ಯಾಕೋಬನು ಅವನಿಗೆ--ನಾನು ನಿನಗೆ ಮಾಡಿದ ಸೇವೆಯನ್ನೂ ನಿನ್ನ ಮಂದೆಯು ನನ್ನ ಬಳಿಯಲ್ಲಿ ಹೇಗೆ ಇತ್ತೆಂಬದ್ದನ್ನೂ ನೀನು ಬಲ್ಲೆ. 30 ನಾನು ಬರುವದಿಕ್ಕಿಂತ ಮುಂಚೆ ನಿನಗಿದ್ದದ್ದು ಸ್ವಲ್ಪವೇ; ಈಗ ಅದು ಬಹಳವಾಗಿ ಹೆಚ್ಚಿದೆ. ನಾನು ಬಂದಂದಿನಿಂದ ಕರ್ತನು ನಿನ್ನನ್ನು ಆಶೀರ್ವದಿಸಿದ್ದಾನೆ. ಈಗ ನಾನು ನನ್ನ ಸ್ವಂತ ಮನೆಗೋಸ್ಕರ ಯಾವಾಗ ಸಂಪಾದಿಸಲಿ ಅಂದನು. 31 ಅದಕ್ಕೆ ಲಾಬಾನನು--ನಿನಗೆ ನಾನು ಏನು ಕೊಡಲಿ ಅಂದಾಗ ಯಾಕೋಬನು--ಏನೂ ಕೊಡ ಬೇಡ, ಇದು ಮಾತ್ರ ನೀನು ನನಗಾಗಿ ಮಾಡಿದರೆ ನಾನು ತಿರಿಗಿ ನಿನ್ನ ಮಂದೆಯನ್ನು ಮೇಯಿಸಿ ಕಾಯುವೆನು; 32 ಈ ಹೊತ್ತು ನಾನು ನಿನ್ನ ಎಲ್ಲಾ ಮಂದೆಯ ಮಧ್ಯದಲ್ಲಿ ಹಾದುಹೋಗುವೆನು; ಅದ ರಲ್ಲಿ ಚುಕ್ಕೆ ಮಚ್ಚೆ ಉಳ್ಳವುಗಳನ್ನೆಲ್ಲಾ ಕುರಿಗಳಲ್ಲಿ ಕಂದು ಬಣ್ಣದವುಗಳನ್ನೆಲ್ಲಾ ಮೇಕೆಗಳಲ್ಲಿ ಚುಕ್ಕೆ ಮಚ್ಚೆ ಉಳ್ಳವುಗಳನ್ನೆಲ್ಲಾ ಬೇರೆ ಮಾಡುವೆನು. ಅವೇ ನನ್ನ ಕೂಲಿಯಾಗಿರಲಿ. 33 ಹೀಗಿದ್ದರೆ ಬರುವ ಕಾಲದಲ್ಲಿ ನನ್ನ ಸಂಬಳಕ್ಕಾಗಿ ನಾನು ನಿನ್ನ ಮುಂದೆ ಬಂದಾಗ ನನ್ನ ನೀತಿಯು ನನಗಾಗಿ ಉತ್ತರ ಕೊಡುವದು. ಮೇಕೆಗಳಲ್ಲಿ ಚುಕ್ಕೆ ಮಚ್ಚೆ ಕುರಿಗಳಲ್ಲಿ ಕಂದು ಬಣ್ಣವಿಲ್ಲದವುಗಳೂ ನನ್ನ ಬಳಿಯಲ್ಲಿದ್ದರೆ ಅವು ಕದ್ದವುಗಳಾಗಿ ಎಣಿಕೆಯಾಗಿರಲಿ ಅಂದನು.
34 ಲಾಬಾನನು--ಇಗೋ, ನೀನು ಹೇಳಿದಂತೆಯೇ ಆಗಲಿ ಅಂದನು.
35 ಅದೇ ದಿನದಲ್ಲಿ ಲಾಬಾನನು ಹೋತಗಳಲ್ಲಿ ರೇಖೆ ಮಚ್ಚೆ ಇದ್ದವುಗಳನ್ನೂ ಮೇಕೆ ಗಳಲ್ಲಿ ಚುಕ್ಕೆ ಮಚ್ಚೆ ಇದ್ದವುಗಳನ್ನೂ ಮತ್ತು ಸ್ವಲ್ಪ ಬಿಳುಪಾದ ಬಣ್ಣವಿದ್ದ ಎಲ್ಲವುಗಳನ್ನೂ ಕುರಿ ಗಳಲ್ಲಿ ಕಂದುಬಣ್ಣವಿದ್ದವುಗಳನ್ನೂ ವಿಂಗಡಿಸಿ ತನ್ನ ಕುಮಾರರ ಕೈಗೆ ಕೊಟ್ಟನು. 36 ತನಗೂ ಯಾಕೋಬ ನಿಗೂ ಮಧ್ಯದಲ್ಲಿ ಮೂರು ದಿನದ ಪ್ರಯಾಣದಷ್ಟು ಅಂತರವನ್ನು ಬಿಟ್ಟನು. ಯಾಕೋಬನು ಲಾಬಾನನ ಮಿಕ್ಕ ಮಂದೆಗಳನ್ನು ಮೇಯಿಸಿದನು. 37 ಹೀಗಿರುವಲ್ಲಿ ಯಾಕೋಬನು ಲಿಬ್ನೆ, ಲೂಜು, ಅರ್ಮೋನ್ ಎಂಬ ಮರಗಳ ಹಸಿಕೋಲುಗಳನ್ನು ತೆಗೆದುಕೊಂಡು ಪಟ್ಟೆಪಟ್ಟೆಯಾಗಿ ತೊಗಟೆಯನ್ನು ಸುಲಿದು ಅವುಗಳ ಲ್ಲಿರುವ ಬಿಳೀ ಬಣ್ಣವು ಕಾಣಿಸುವಂತೆ ಮಾಡಿ 38 ಮಂದೆಗಳು ನೀರು ಕುಡಿಯುವದಕ್ಕೆ ಬಂದ ಸಮಯವೇ ಅವುಗಳಿಗೆ ಸಂಗಮಕಾಲವಾಗಿತ್ತು. ಅವು ಕೋಲುಗಳನ್ನು ನೋಡುತ್ತಾ ಸಂಗಮಮಾಡಿ ದ್ದರಿಂದ 39 ಚುಕ್ಕೆ ಮಚ್ಚೆ ರೇಖೆಗಳುಳ್ಳ ಮರಿಗಳನ್ನು ಈಯುತ್ತಿದ್ದವು. 40 ಯಾಕೋಬನು ಕುರಿಗಳನ್ನು ಬೇರೆ ಮಾಡಿ ಲಾಬಾನನ ಮಂದೆಯಲ್ಲಿರುವ ರೇಖೆಗಳು ಳ್ಳವುಗಳೆದುರಾಗಿಯೂ ಕಂದು ಬಣ್ಣ ಉಳ್ಳವು ಗಳಿಗೆದುರಾಗಿಯೂ ಕುರಿಗಳನ್ನು ಇರಿಸಿದನು. ಅವನು ತನ್ನ ಮಂದೆಯನ್ನು ಲಾಬಾನನ ಮಂದೆಗಳೊಂದಿಗೆ ಸೇರಿಸದೆ ಅವುಗಳನ್ನು ಬೇರೆ ಇಟ್ಟುಕೊಂಡನು. 41 ಇದಲ್ಲದೆ ಬಲಿಷ್ಠವಾದ ಆಡು ಕುರಿಗಳು ಸಂಗಮ ಮಾಡುವಾಗ ಆ ಕೋಲುಗಳನ್ನು ನೋಡುತ್ತಾ ಸಂಗಮಮಾಡಲಿ ಎಂದು ಯಾಕೋಬನು ದೋಣಿ ಗಳಲ್ಲಿ ಕೋಲುಗಳನ್ನಿಟ್ಟನು. 42 ಆದರೆ ಕುರಿಗಳು ಬಲಹೀನವಾಗಿದ್ದಾಗ ಅವನು ಕೋಲುಗಳನ್ನು ದೋಣಿಗಳಲ್ಲಿ ಇಡಲಿಲ್ಲ. ಹೀಗಾಗಿ ಬಲಹೀನ ವಾದವುಗಳು ಲಾಬಾನನಿಗೂ ಬಲವಾದವುಗಳು ಯಾಕೋಬನಿಗೂ ಆದವು. 43 ಈ ಪ್ರಕಾರ ಯಾಕೋಬನು ಅತ್ಯಧಿಕವಾಗಿ ಅಭಿವೃದ್ಧಿಯಾದದ್ದರಿಂದ ಬಹು ಕುರಿಗಳೂ ದಾಸದಾಸಿ ಯರೂ ಒಂಟೆಗಳೂ ಕತ್ತೆಗಳೂ ಅವನಿಗೆ ದೊರೆತವು.
ಒಟ್ಟು 50 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 30 / 50
×

Alert

×

Kannada Letters Keypad References