ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಯೆರೆಮಿಯ
1. ಕರ್ತನು ಹೀಗೆ ಹೇಳುತ್ತಾನೆ--ಹೋಗಿ, ಕುಂಬಾರನ ಮಣ್ಣಿನ ಕೂಜೆಯನ್ನು ತಕ್ಕೊಂಡು, ಜನರ ಹಿರಿಯರಿಂದಲೂ ಯಾಜಕರ ಹಿರಿಯರಿಂದಲೂ ಕೆಲವರನ್ನು ಕರಕೊಂಡು
2. ಮೂಡಣ ಬಾಗಿಲಿನ ಪ್ರವೇಶದ ಬಳಿಯಲ್ಲಿ ಹಿನ್ನೋಮನ ಮಗನ ತಗ್ಗಿಗೆ ಹೋಗಿ, ನಾನು ನಿನಗೆ ಹೇಳುವ ಮಾತುಗಳನ್ನು ಅಲ್ಲಿ ಸಾರಿ ಹೇಳು.
3. ಓ ಯೆಹೂದದ ಅರಸರೇ, ಯೆರೂಸಲೇಮಿನ ನಿವಾಸಿಗಳೇ, ಕರ್ತನ ವಾಕ್ಯವನ್ನು ಕೇಳಿರಿ. ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನು ಹೀಗನ್ನುತ್ತಾನೆ--ಇಗೋ, ನಾನು ಈ ಸ್ಥಳದ ಮೇಲೆ ಕೇಡನ್ನು ಬರಮಾಡುತ್ತೇನೆ; ಅದನ್ನು ಕೇಳುವವ ರೆಲ್ಲರ ಕಿವಿಗಳು ಗುಂಯ್ಗುಟ್ಟುವವು.
4. ಅವರು ನನ್ನನ್ನು ಬಿಟ್ಟು ಈ ಸ್ಥಳವನ್ನು ಪರಸ್ಥಳ ಮಾಡಿ, ಅವರೂ ಅವರ ತಂದೆಗಳೂ ಯೆಹೂದದ ಅರಸರೂ ಅರಿಯದ ಬೇರೆ ದೇವರುಗಳಿಗೆ ಅಲ್ಲಿ ಧೂಪಸುಟ್ಟು ಈ ಸ್ಥಳವನ್ನು ಅಪರಾಧವಿಲ್ಲದವರ ರಕ್ತ ದಿಂದ ತುಂಬಿಸಿ
5. ತಮ್ಮ ಮಕ್ಕಳನ್ನು ಬಾಳನಿಗೆ ದಹನ ಬಲಿಗಳಾಗಿ ಬೆಂಕಿಯಲ್ಲಿ ಸುಡುವದಕ್ಕೆ ಬಾಳನ ಉನ್ನತ ಸ್ಥಳಗಳನ್ನು ಕಟ್ಟಿದ್ದಾರೆ. ಇಂಥದ್ದನ್ನು ನಾನು ಆಜ್ಞಾ ಪಿಸಲಿಲ್ಲ, ನಾನು ಹೇಳಲಿಲ್ಲ, ನನ್ನ ಮನಸ್ಸಿಗೆ ಬರಲಿಲ್ಲ.
6. ಹೀಗಿರುವದರಿಂದ ಕರ್ತನು ಹೇಳುವದೇನಂದರೆ --ಇಗೋ, ದಿನಗಳು ಬರುವವು; ಆಗ ಈ ಸ್ಥಳವು ಇನ್ನು ತೋಫೆತೆಂದು, ಹಿನ್ನೋಮನ ಮಗನ ತಗ್ಗೆಂದು ಅಲ್ಲ, ಕೊಲೆಯ ತಗ್ಗೆಂದು ಕರೆಯಲ್ಪಡುವದು.
7. ನಾನು ಈ ಸ್ಥಳದಲ್ಲಿ ಯೆಹೂದದ, ಯೆರೂಸಲೇಮಿನ ಆಲೋಚನೆಯನ್ನು ಶೂನ್ಯ ಮಾಡುವೆನು; ಅವರ ಶತ್ರುಗಳ ಮುಂದೆಯೂ ಅವರ ಪ್ರಾಣವನ್ನು ಹುಡುಕು ವವರ ಕೈಯಿಂದಲೂ ಅವರನ್ನು ಕತ್ತಿಯಿಂದ ಬೀಳು ವಂತೆ ಮಾಡುವೆನು; ಅವರ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರವಾಗಿ ಕೊಡುವೆನು.
8. ಈ ಪಟ್ಟಣಗಳನ್ನು ಹಾಳಾಗಿಯೂ ತಿರಸ್ಕರಿಸಲ್ಪಡುವಂತೆಯೂ ಮಾಡುವೆನು; ಅದನ್ನು ಹಾದುಹೋಗುವವರೆಲ್ಲರು ಅದರ ಎಲ್ಲಾ ಬಾಧೆಗಳ ನಿಮಿತ್ತ ವಿಸ್ಮಯಹೊಂದಿ ಸಿಳ್ಳು ಹಾಕುವರು.
9. ಅವರು ತಮ್ಮ ಕುಮಾರರ ಕುಮಾರ್ತೆಯರ ಮಾಂಸವನ್ನೂ ತಿನ್ನುವಂತೆ ಮಾಡುವೆನು; ಮುತ್ತಿಗೆಯಲ್ಲಿ ಸಹ ಅವರ ಶತ್ರುಗಳೂ ಅವರ ಪ್ರಾಣವನ್ನು ಹುಡುಕುವವರೂ ಅವರಿಗೆ ಮಾಡುವ ಇಕ್ಕಟ್ಟಿನಲ್ಲಿಯೂ ಅವರು ತಮ್ಮ ತಮ್ಮ ಸ್ನೇಹಿತರ ಮಾಂಸವನ್ನು ತಿನ್ನುವರು.
10. ಆಗ ನೀನು ನಿನ್ನ ಸಂಗಡ ಬಂದ ಮನುಷ್ಯರ ಮುಂದೆ ಆ ಕೂಜೆಯನ್ನು ಒಡೆದು, ಅವರಿಗೆ ಹೇಳಬೇಕಾದದ್ದೇ ನಂದರೆ,
11. ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ಯಾವ ಪ್ರಕಾರ ಒಬ್ಬನು ಕುಂಬಾರನ ಪಾತ್ರೆಯನ್ನು ಅದು ತಿರಿಗಿ ಒಂದುಗೂಡದ ಹಾಗೆ ಒಡೆಯುತ್ತಾನೋ ಅದೇ ಪ್ರಕಾರ ನಾನು ಈ ಜನವನ್ನೂ ಈ ಪಟ್ಟಣ ವನ್ನೂ ಒಡೆದು ಬಿಡುವೆನು; ಆಗ ಹೂಣಿಡುವದಕ್ಕೆ ಸ್ಥಳವಿಲ್ಲದೆ ತೋಫೆತಿನಲ್ಲಿ ಅವರು ಹೂಣಿಡುವರು.
12. ಹೀಗೆ ಈ ಸ್ಥಳಕ್ಕೂ ಅದರ ನಿವಾಸಿಗಳಿಗೂ ಮಾಡು ವೆನೆಂದು ಕರ್ತನು ಹೇಳುತ್ತಾನೆ; ಈ ಪಟ್ಟಣವನ್ನು ತೋಫೆತಿನ ಹಾಗೆಯೇ ಮಾಡುವೆನು.
13. ಯಾವ ಮನೆಗಳ ಮಾಳಿಗೆಗಳ ಮೇಲೆ ಆಕಾಶದ ಸೈನ್ಯಕ್ಕೆಲ್ಲಾ ಧೂಪಸುಟ್ಟು ಬೇರೆ ದೇವರುಗಳಿಗೆ ಪಾನದ ಅರ್ಪಣೆ ಗಳನ್ನು ಹೊಯ್ದಿದ್ದಾರೋ ಆ ಎಲ್ಲಾ ಮನೆಗಳ ನಿಮಿತ್ತ ವಾಗಿ ಯೆರೂಸಲೇಮಿನ ಮನೆಗಳೂ ಯೆಹೂದದ ಅರಸರ ಮನೆಗಳೂ ತೋಫೆತಿನ ಸ್ಥಳದ ಹಾಗೆ ಅಶುದ್ಧವಾಗುವವು.
14. ಆಗ ಕರ್ತನು ಯೆರೆವಿಾಯನನ್ನು ಪ್ರವಾದಿಸು ವದಕ್ಕೆ ಕಳುಹಿಸಿದ ತೋಫೆತಿನಿಂದ ಬಂದು ಕರ್ತನ ಆಲಯದ ಅಂಗಳದಲ್ಲಿ ನಿಂತುಕೊಂಡು ಜನರಿಗೆಲ್ಲಾ ಹೇಳಿದ್ದೇನಂದರೆ--
15. ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ಪಟ್ಟಣದ ಮೇಲೆಯೂ ಅದರ ಎಲ್ಲಾ ಊರುಗಳ ಮೇಲೆಯೂ ನಾನು ಅದಕ್ಕೆ ವಿರೋಧವಾಗಿ ಹೇಳಿದ ಕೇಡನ್ನೆಲ್ಲಾ ಬರ ಮಾಡುತ್ತೇನೆ; ಅವರು ನನ್ನ ಮಾತುಗಳನ್ನು ಕೇಳದ ಹಾಗೆ ತಮ್ಮ ಕುತ್ತಿಗೆಗಳನ್ನು ಕಠಿಣ ಮಾಡಿಕೊಂಡಿದ್ದಾರೆ.
ಒಟ್ಟು 52 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 19 / 52
1 ಕರ್ತನು ಹೀಗೆ ಹೇಳುತ್ತಾನೆ--ಹೋಗಿ, ಕುಂಬಾರನ ಮಣ್ಣಿನ ಕೂಜೆಯನ್ನು ತಕ್ಕೊಂಡು, ಜನರ ಹಿರಿಯರಿಂದಲೂ ಯಾಜಕರ ಹಿರಿಯರಿಂದಲೂ ಕೆಲವರನ್ನು ಕರಕೊಂಡು 2 ಮೂಡಣ ಬಾಗಿಲಿನ ಪ್ರವೇಶದ ಬಳಿಯಲ್ಲಿ ಹಿನ್ನೋಮನ ಮಗನ ತಗ್ಗಿಗೆ ಹೋಗಿ, ನಾನು ನಿನಗೆ ಹೇಳುವ ಮಾತುಗಳನ್ನು ಅಲ್ಲಿ ಸಾರಿ ಹೇಳು.
3 ಓ ಯೆಹೂದದ ಅರಸರೇ, ಯೆರೂಸಲೇಮಿನ ನಿವಾಸಿಗಳೇ, ಕರ್ತನ ವಾಕ್ಯವನ್ನು ಕೇಳಿರಿ. ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನು ಹೀಗನ್ನುತ್ತಾನೆ--ಇಗೋ, ನಾನು ಈ ಸ್ಥಳದ ಮೇಲೆ ಕೇಡನ್ನು ಬರಮಾಡುತ್ತೇನೆ; ಅದನ್ನು ಕೇಳುವವ ರೆಲ್ಲರ ಕಿವಿಗಳು ಗುಂಯ್ಗುಟ್ಟುವವು.
4 ಅವರು ನನ್ನನ್ನು ಬಿಟ್ಟು ಈ ಸ್ಥಳವನ್ನು ಪರಸ್ಥಳ ಮಾಡಿ, ಅವರೂ ಅವರ ತಂದೆಗಳೂ ಯೆಹೂದದ ಅರಸರೂ ಅರಿಯದ ಬೇರೆ ದೇವರುಗಳಿಗೆ ಅಲ್ಲಿ ಧೂಪಸುಟ್ಟು ಈ ಸ್ಥಳವನ್ನು ಅಪರಾಧವಿಲ್ಲದವರ ರಕ್ತ ದಿಂದ ತುಂಬಿಸಿ 5 ತಮ್ಮ ಮಕ್ಕಳನ್ನು ಬಾಳನಿಗೆ ದಹನ ಬಲಿಗಳಾಗಿ ಬೆಂಕಿಯಲ್ಲಿ ಸುಡುವದಕ್ಕೆ ಬಾಳನ ಉನ್ನತ ಸ್ಥಳಗಳನ್ನು ಕಟ್ಟಿದ್ದಾರೆ. ಇಂಥದ್ದನ್ನು ನಾನು ಆಜ್ಞಾ ಪಿಸಲಿಲ್ಲ, ನಾನು ಹೇಳಲಿಲ್ಲ, ನನ್ನ ಮನಸ್ಸಿಗೆ ಬರಲಿಲ್ಲ. 6 ಹೀಗಿರುವದರಿಂದ ಕರ್ತನು ಹೇಳುವದೇನಂದರೆ --ಇಗೋ, ದಿನಗಳು ಬರುವವು; ಆಗ ಈ ಸ್ಥಳವು ಇನ್ನು ತೋಫೆತೆಂದು, ಹಿನ್ನೋಮನ ಮಗನ ತಗ್ಗೆಂದು ಅಲ್ಲ, ಕೊಲೆಯ ತಗ್ಗೆಂದು ಕರೆಯಲ್ಪಡುವದು. 7 ನಾನು ಈ ಸ್ಥಳದಲ್ಲಿ ಯೆಹೂದದ, ಯೆರೂಸಲೇಮಿನ ಆಲೋಚನೆಯನ್ನು ಶೂನ್ಯ ಮಾಡುವೆನು; ಅವರ ಶತ್ರುಗಳ ಮುಂದೆಯೂ ಅವರ ಪ್ರಾಣವನ್ನು ಹುಡುಕು ವವರ ಕೈಯಿಂದಲೂ ಅವರನ್ನು ಕತ್ತಿಯಿಂದ ಬೀಳು ವಂತೆ ಮಾಡುವೆನು; ಅವರ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರವಾಗಿ ಕೊಡುವೆನು. 8 ಈ ಪಟ್ಟಣಗಳನ್ನು ಹಾಳಾಗಿಯೂ ತಿರಸ್ಕರಿಸಲ್ಪಡುವಂತೆಯೂ ಮಾಡುವೆನು; ಅದನ್ನು ಹಾದುಹೋಗುವವರೆಲ್ಲರು ಅದರ ಎಲ್ಲಾ ಬಾಧೆಗಳ ನಿಮಿತ್ತ ವಿಸ್ಮಯಹೊಂದಿ ಸಿಳ್ಳು ಹಾಕುವರು. 9 ಅವರು ತಮ್ಮ ಕುಮಾರರ ಕುಮಾರ್ತೆಯರ ಮಾಂಸವನ್ನೂ ತಿನ್ನುವಂತೆ ಮಾಡುವೆನು; ಮುತ್ತಿಗೆಯಲ್ಲಿ ಸಹ ಅವರ ಶತ್ರುಗಳೂ ಅವರ ಪ್ರಾಣವನ್ನು ಹುಡುಕುವವರೂ ಅವರಿಗೆ ಮಾಡುವ ಇಕ್ಕಟ್ಟಿನಲ್ಲಿಯೂ ಅವರು ತಮ್ಮ ತಮ್ಮ ಸ್ನೇಹಿತರ ಮಾಂಸವನ್ನು ತಿನ್ನುವರು. 10 ಆಗ ನೀನು ನಿನ್ನ ಸಂಗಡ ಬಂದ ಮನುಷ್ಯರ ಮುಂದೆ ಆ ಕೂಜೆಯನ್ನು ಒಡೆದು, ಅವರಿಗೆ ಹೇಳಬೇಕಾದದ್ದೇ ನಂದರೆ, 11 ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ಯಾವ ಪ್ರಕಾರ ಒಬ್ಬನು ಕುಂಬಾರನ ಪಾತ್ರೆಯನ್ನು ಅದು ತಿರಿಗಿ ಒಂದುಗೂಡದ ಹಾಗೆ ಒಡೆಯುತ್ತಾನೋ ಅದೇ ಪ್ರಕಾರ ನಾನು ಈ ಜನವನ್ನೂ ಈ ಪಟ್ಟಣ ವನ್ನೂ ಒಡೆದು ಬಿಡುವೆನು; ಆಗ ಹೂಣಿಡುವದಕ್ಕೆ ಸ್ಥಳವಿಲ್ಲದೆ ತೋಫೆತಿನಲ್ಲಿ ಅವರು ಹೂಣಿಡುವರು. 12 ಹೀಗೆ ಈ ಸ್ಥಳಕ್ಕೂ ಅದರ ನಿವಾಸಿಗಳಿಗೂ ಮಾಡು ವೆನೆಂದು ಕರ್ತನು ಹೇಳುತ್ತಾನೆ; ಈ ಪಟ್ಟಣವನ್ನು ತೋಫೆತಿನ ಹಾಗೆಯೇ ಮಾಡುವೆನು. 13 ಯಾವ ಮನೆಗಳ ಮಾಳಿಗೆಗಳ ಮೇಲೆ ಆಕಾಶದ ಸೈನ್ಯಕ್ಕೆಲ್ಲಾ ಧೂಪಸುಟ್ಟು ಬೇರೆ ದೇವರುಗಳಿಗೆ ಪಾನದ ಅರ್ಪಣೆ ಗಳನ್ನು ಹೊಯ್ದಿದ್ದಾರೋ ಆ ಎಲ್ಲಾ ಮನೆಗಳ ನಿಮಿತ್ತ ವಾಗಿ ಯೆರೂಸಲೇಮಿನ ಮನೆಗಳೂ ಯೆಹೂದದ ಅರಸರ ಮನೆಗಳೂ ತೋಫೆತಿನ ಸ್ಥಳದ ಹಾಗೆ ಅಶುದ್ಧವಾಗುವವು. 14 ಆಗ ಕರ್ತನು ಯೆರೆವಿಾಯನನ್ನು ಪ್ರವಾದಿಸು ವದಕ್ಕೆ ಕಳುಹಿಸಿದ ತೋಫೆತಿನಿಂದ ಬಂದು ಕರ್ತನ ಆಲಯದ ಅಂಗಳದಲ್ಲಿ ನಿಂತುಕೊಂಡು ಜನರಿಗೆಲ್ಲಾ ಹೇಳಿದ್ದೇನಂದರೆ-- 15 ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ಪಟ್ಟಣದ ಮೇಲೆಯೂ ಅದರ ಎಲ್ಲಾ ಊರುಗಳ ಮೇಲೆಯೂ ನಾನು ಅದಕ್ಕೆ ವಿರೋಧವಾಗಿ ಹೇಳಿದ ಕೇಡನ್ನೆಲ್ಲಾ ಬರ ಮಾಡುತ್ತೇನೆ; ಅವರು ನನ್ನ ಮಾತುಗಳನ್ನು ಕೇಳದ ಹಾಗೆ ತಮ್ಮ ಕುತ್ತಿಗೆಗಳನ್ನು ಕಠಿಣ ಮಾಡಿಕೊಂಡಿದ್ದಾರೆ.
ಒಟ್ಟು 52 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 19 / 52
×

Alert

×

Kannada Letters Keypad References