ಪವಿತ್ರ ಬೈಬಲ್

ಓಪನ್ ಸಮಕಾಲೀನ ಆವೃತ್ತಿ (OCV)
1 ಪೂರ್ವಕಾಲವೃತ್ತಾ
1. {#1ದಾವೀದನ ಅರಮನೆ ಹಾಗೂ ಕುಟುಂಬ } [PS]ಟೈರಿನ ಅರಸನಾದ ಹೀರಾಮನು ದಾವೀದನಿಗೆ ಅರಮನೆಯನ್ನು ಕಟ್ಟುವುದಕ್ಕೋಸ್ಕರ ದೂತರನ್ನು, ದೇವದಾರು ಮರಗಳನ್ನು, ಬಡಗಿಯವರನ್ನು ಮತ್ತು ಕಲ್ಲುಕುಟಿಗರನ್ನು ಕಳುಹಿಸಿದನು.
2. ಆಗ ದಾವೀದನು, ತನ್ನನ್ನು ಯೆಹೋವ ದೇವರು ಇಸ್ರಾಯೇಲಿನ ಮೇಲೆ ಅರಸನನ್ನಾಗಿ ಸ್ಥಿರಪಡಿಸಿದರೆಂದೂ, ತಮ್ಮ ಜನರಾದ ಇಸ್ರಾಯೇಲರ ನಿಮಿತ್ತ ತನ್ನ ರಾಜ್ಯವನ್ನು ಉನ್ನತಕ್ಕೇರಿಸಿದರೆಂದೂ ತಿಳಿದುಕೊಂಡನು. [PE]
3. [PS]ದಾವೀದನು ಯೆರೂಸಲೇಮಿನಲ್ಲಿ ಸಹ ಕೆಲವು ಸ್ತ್ರೀಯರನ್ನು ಮದುವೆಮಾಡಿಕೊಂಡನು. ಇನ್ನೂ ಹೆಚ್ಚು ಪುತ್ರ, ಪುತ್ರಿಯರನ್ನೂ ಪಡೆದನು.
4. ಯೆರೂಸಲೇಮಿನಲ್ಲಿ ಅವನಿಗೆ ಹುಟ್ಟಿದ ಮಕ್ಕಳ ಹೆಸರುಗಳು: ಶಮ್ಮೂವ, ಶೋಬಾಬ್, ನಾತಾನ್, ಸೊಲೊಮೋನ್,
5. ಇಬ್ಹಾರ್, ಎಲೀಷೂವ, ಎಲ್ಪೆಲೆಟ,
6. ನೋಗಹ, ನೆಫೆಗ್, ಯಾಫೀಯ,
7. ಎಲೀಷಾಮ, ಎಲ್ಯಾದ[* ಎಲ್ಯಾದ ಅಥವಾ ಬೇಲ್ಯಾದ ], ಎಲೀಫೆಲೆಟ್. [PE]
8. {#1ದಾವೀದನು ಫಿಲಿಷ್ಟಿಯರನ್ನು ಜಯಿಸಿದ್ದು } [PS]ದಾವೀದನು ಸಮಸ್ತ ಇಸ್ರಾಯೇಲಿನ ಮೇಲೆ ಅರಸನಾಗಿ ಅಭಿಷೇಕ ಹೊಂದಿದ್ದಾನೆಂದು ಫಿಲಿಷ್ಟಿಯರು ಕೇಳಿದಾಗ, ಫಿಲಿಷ್ಟಿಯರೆಲ್ಲರೂ ದಾವೀದನನ್ನು ಸೆರೆಹಿಡಿಯಲು ಹೋದರು. ದಾವೀದನು ಅದನ್ನು ಕೇಳಿ ಅವರಿಗೆದುರಾಗಿ ಹೊರಟನು.
9. ಆಗ ಫಿಲಿಷ್ಟಿಯರು ಬಂದು ರೆಫಾಯಿಮ್ ತಗ್ಗಿನಲ್ಲಿ ಇಳಿದುಕೊಂಡರು.
10. ಅದಕ್ಕೆ ದಾವೀದನು, “ನಾನು ಫಿಲಿಷ್ಟಿಯರ ಮೇಲೆ ಯುದ್ಧಕ್ಕೆ ಹೋಗಬಹುದೋ? ಅವರನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡುವಿರೋ?” ಎಂದು ದೇವರನ್ನು ವಿಚಾರಿಸಿದನು. [PE]
11. [PS]ಆಗ ಯೆಹೋವ ದೇವರು ಅವನಿಗೆ, “ಹೋಗು, ನಾನು ಅವರನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನು,” ಎಂದು ಹೇಳಿದರು. [PE][PS]ಹಾಗೆಯೇ ದಾವೀದನು ಮತ್ತು ಅವನ ಸಂಗಡಿಗರೂ ಬಾಳ್ ಪೆರಾಜಿಮ್ ಎಂಬಲ್ಲಿಗೆ ಹೋಗಿ ಫಿಲಿಷ್ಟಿಯರ ಮೇಲೆ ದಾಳಿಮಾಡಿ ಅವರನ್ನು ಸೋಲಿಸಿದನು. ಆಗ ದಾವೀದನು, “ಪ್ರವಾಹವು ಕೊಚ್ಚಿಕೊಂಡು ಹೋಗುವಹಾಗೆ, ದೇವರು ನನ್ನ ಕೈಯಿಂದ ನನ್ನ ಶತ್ರುಗಳನ್ನು ನಾಶಮಾಡಿದ್ದಾರೆ,” ಎಂದನು. ಆದಕಾರಣ ಆ ಸ್ಥಳಕ್ಕೆ ಬಾಳ್ ಪೆರಾಜಿಮ್[† ಬಾಳ್ ಪೆರಾಜಿಮ್ ಅರ್ಥ ಮುರಿದು ಬಿಡುವ ದೇವರು ] ಎಂದು ಹೆಸರಿಟ್ಟನು.
12. ಅಲ್ಲಿ ಫಿಲಿಷ್ಟಿಯರು ತಮ್ಮ ದೇವರುಗಳನ್ನು ಬಿಟ್ಟು ಹೋದುದರಿಂದ, ದಾವೀದನು ಅವುಗಳನ್ನು ಸುಟ್ಟುಹಾಕಬೇಕೆಂದು ಅಪ್ಪಣೆಮಾಡಿದನು. [PE]
13. [PS]ಫಿಲಿಷ್ಟಿಯರು ಮತ್ತೆ ತಿರುಗಿಬಂದು ತಗ್ಗಿನಲ್ಲಿ ಸುಲಿಗೆಮಾಡಲು ಪ್ರಾರಂಭಿಸಿದರು.
14. ಆದ್ದರಿಂದ ದಾವೀದನು ತಿರುಗಿ ದೇವರನ್ನು ವಿಚಾರಿಸಿದನು. ಆಗ ದೇವರು ಅವನಿಗೆ, “ನೀನು ಅವರ ಹಿಂದೆ ಹೋಗದೆ, ಅವರನ್ನು ಬಿಟ್ಟು ತಿರುಗಿಕೊಂಡು ಹೋಗಿ, ಬಾಕಾಮರಗಳಿಗೆ ಎದುರಾಗಿ ಅವರ ಮೇಲೆ ದಾಳಿಮಾಡು.
15. ಬಾಕಾಮರಗಳ ತುದಿಗಳಲ್ಲಿ ನಡೆದುಬರುವ ಶಬ್ದವನ್ನು ನೀನು ಕೇಳಿದಾಗಲೇ, ದೇವರು ಫಿಲಿಷ್ಟಿಯರ ದಂಡನ್ನು ಹೊಡೆಯಲು ನಿನ್ನ ಮುಂದಾಗಿ ಹೊರಟರೆಂದು ತಿಳಿದುಕೊಂಡು ಯುದ್ಧಕ್ಕೆ ಹೊರಡು,” ಎಂದರು.
16. ಆಗ ದಾವೀದನು, ದೇವರು ತನಗೆ ಆಜ್ಞಾಪಿಸಿದ ಪ್ರಕಾರಮಾಡಿ, ಅವನು ಗಿಬ್ಯೋನಿನಿಂದ ಗೆಜೆರಿನವರೆಗೆ ಫಿಲಿಷ್ಟಿಯರ ದಂಡನ್ನು ಸಂಹರಿಸಿದರು. [PE]
17. [PS]ದಾವೀದನ ಕೀರ್ತಿಯು ಸಮಸ್ತ ದೇಶಗಳಿಗೆ ಹರಡಿತು. ಯೆಹೋವ ದೇವರು ಅವನ ಭಯವನ್ನು ಸಮಸ್ತ ಜನಾಂಗಗಳ ಮೇಲೆ ಬರಮಾಡಿದರು. [PE]
ಒಟ್ಟು 29 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 14 / 29
ದಾವೀದನ ಅರಮನೆ ಹಾಗೂ ಕುಟುಂಬ 1 ಟೈರಿನ ಅರಸನಾದ ಹೀರಾಮನು ದಾವೀದನಿಗೆ ಅರಮನೆಯನ್ನು ಕಟ್ಟುವುದಕ್ಕೋಸ್ಕರ ದೂತರನ್ನು, ದೇವದಾರು ಮರಗಳನ್ನು, ಬಡಗಿಯವರನ್ನು ಮತ್ತು ಕಲ್ಲುಕುಟಿಗರನ್ನು ಕಳುಹಿಸಿದನು. 2 ಆಗ ದಾವೀದನು, ತನ್ನನ್ನು ಯೆಹೋವ ದೇವರು ಇಸ್ರಾಯೇಲಿನ ಮೇಲೆ ಅರಸನನ್ನಾಗಿ ಸ್ಥಿರಪಡಿಸಿದರೆಂದೂ, ತಮ್ಮ ಜನರಾದ ಇಸ್ರಾಯೇಲರ ನಿಮಿತ್ತ ತನ್ನ ರಾಜ್ಯವನ್ನು ಉನ್ನತಕ್ಕೇರಿಸಿದರೆಂದೂ ತಿಳಿದುಕೊಂಡನು. 3 ದಾವೀದನು ಯೆರೂಸಲೇಮಿನಲ್ಲಿ ಸಹ ಕೆಲವು ಸ್ತ್ರೀಯರನ್ನು ಮದುವೆಮಾಡಿಕೊಂಡನು. ಇನ್ನೂ ಹೆಚ್ಚು ಪುತ್ರ, ಪುತ್ರಿಯರನ್ನೂ ಪಡೆದನು. 4 ಯೆರೂಸಲೇಮಿನಲ್ಲಿ ಅವನಿಗೆ ಹುಟ್ಟಿದ ಮಕ್ಕಳ ಹೆಸರುಗಳು: ಶಮ್ಮೂವ, ಶೋಬಾಬ್, ನಾತಾನ್, ಸೊಲೊಮೋನ್, 5 ಇಬ್ಹಾರ್, ಎಲೀಷೂವ, ಎಲ್ಪೆಲೆಟ, 6 ನೋಗಹ, ನೆಫೆಗ್, ಯಾಫೀಯ, 7 ಎಲೀಷಾಮ, ಎಲ್ಯಾದ* ಎಲ್ಯಾದ ಅಥವಾ ಬೇಲ್ಯಾದ , ಎಲೀಫೆಲೆಟ್. ದಾವೀದನು ಫಿಲಿಷ್ಟಿಯರನ್ನು ಜಯಿಸಿದ್ದು 8 ದಾವೀದನು ಸಮಸ್ತ ಇಸ್ರಾಯೇಲಿನ ಮೇಲೆ ಅರಸನಾಗಿ ಅಭಿಷೇಕ ಹೊಂದಿದ್ದಾನೆಂದು ಫಿಲಿಷ್ಟಿಯರು ಕೇಳಿದಾಗ, ಫಿಲಿಷ್ಟಿಯರೆಲ್ಲರೂ ದಾವೀದನನ್ನು ಸೆರೆಹಿಡಿಯಲು ಹೋದರು. ದಾವೀದನು ಅದನ್ನು ಕೇಳಿ ಅವರಿಗೆದುರಾಗಿ ಹೊರಟನು. 9 ಆಗ ಫಿಲಿಷ್ಟಿಯರು ಬಂದು ರೆಫಾಯಿಮ್ ತಗ್ಗಿನಲ್ಲಿ ಇಳಿದುಕೊಂಡರು. 10 ಅದಕ್ಕೆ ದಾವೀದನು, “ನಾನು ಫಿಲಿಷ್ಟಿಯರ ಮೇಲೆ ಯುದ್ಧಕ್ಕೆ ಹೋಗಬಹುದೋ? ಅವರನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡುವಿರೋ?” ಎಂದು ದೇವರನ್ನು ವಿಚಾರಿಸಿದನು. 11 ಆಗ ಯೆಹೋವ ದೇವರು ಅವನಿಗೆ, “ಹೋಗು, ನಾನು ಅವರನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನು,” ಎಂದು ಹೇಳಿದರು. ಹಾಗೆಯೇ ದಾವೀದನು ಮತ್ತು ಅವನ ಸಂಗಡಿಗರೂ ಬಾಳ್ ಪೆರಾಜಿಮ್ ಎಂಬಲ್ಲಿಗೆ ಹೋಗಿ ಫಿಲಿಷ್ಟಿಯರ ಮೇಲೆ ದಾಳಿಮಾಡಿ ಅವರನ್ನು ಸೋಲಿಸಿದನು. ಆಗ ದಾವೀದನು, “ಪ್ರವಾಹವು ಕೊಚ್ಚಿಕೊಂಡು ಹೋಗುವಹಾಗೆ, ದೇವರು ನನ್ನ ಕೈಯಿಂದ ನನ್ನ ಶತ್ರುಗಳನ್ನು ನಾಶಮಾಡಿದ್ದಾರೆ,” ಎಂದನು. ಆದಕಾರಣ ಆ ಸ್ಥಳಕ್ಕೆ ಬಾಳ್ ಪೆರಾಜಿಮ್ ಬಾಳ್ ಪೆರಾಜಿಮ್ ಅರ್ಥ ಮುರಿದು ಬಿಡುವ ದೇವರು ಎಂದು ಹೆಸರಿಟ್ಟನು. 12 ಅಲ್ಲಿ ಫಿಲಿಷ್ಟಿಯರು ತಮ್ಮ ದೇವರುಗಳನ್ನು ಬಿಟ್ಟು ಹೋದುದರಿಂದ, ದಾವೀದನು ಅವುಗಳನ್ನು ಸುಟ್ಟುಹಾಕಬೇಕೆಂದು ಅಪ್ಪಣೆಮಾಡಿದನು. 13 ಫಿಲಿಷ್ಟಿಯರು ಮತ್ತೆ ತಿರುಗಿಬಂದು ತಗ್ಗಿನಲ್ಲಿ ಸುಲಿಗೆಮಾಡಲು ಪ್ರಾರಂಭಿಸಿದರು. 14 ಆದ್ದರಿಂದ ದಾವೀದನು ತಿರುಗಿ ದೇವರನ್ನು ವಿಚಾರಿಸಿದನು. ಆಗ ದೇವರು ಅವನಿಗೆ, “ನೀನು ಅವರ ಹಿಂದೆ ಹೋಗದೆ, ಅವರನ್ನು ಬಿಟ್ಟು ತಿರುಗಿಕೊಂಡು ಹೋಗಿ, ಬಾಕಾಮರಗಳಿಗೆ ಎದುರಾಗಿ ಅವರ ಮೇಲೆ ದಾಳಿಮಾಡು. 15 ಬಾಕಾಮರಗಳ ತುದಿಗಳಲ್ಲಿ ನಡೆದುಬರುವ ಶಬ್ದವನ್ನು ನೀನು ಕೇಳಿದಾಗಲೇ, ದೇವರು ಫಿಲಿಷ್ಟಿಯರ ದಂಡನ್ನು ಹೊಡೆಯಲು ನಿನ್ನ ಮುಂದಾಗಿ ಹೊರಟರೆಂದು ತಿಳಿದುಕೊಂಡು ಯುದ್ಧಕ್ಕೆ ಹೊರಡು,” ಎಂದರು. 16 ಆಗ ದಾವೀದನು, ದೇವರು ತನಗೆ ಆಜ್ಞಾಪಿಸಿದ ಪ್ರಕಾರಮಾಡಿ, ಅವನು ಗಿಬ್ಯೋನಿನಿಂದ ಗೆಜೆರಿನವರೆಗೆ ಫಿಲಿಷ್ಟಿಯರ ದಂಡನ್ನು ಸಂಹರಿಸಿದರು. 17 ದಾವೀದನ ಕೀರ್ತಿಯು ಸಮಸ್ತ ದೇಶಗಳಿಗೆ ಹರಡಿತು. ಯೆಹೋವ ದೇವರು ಅವನ ಭಯವನ್ನು ಸಮಸ್ತ ಜನಾಂಗಗಳ ಮೇಲೆ ಬರಮಾಡಿದರು.
ಒಟ್ಟು 29 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 14 / 29
×

Alert

×

Kannada Letters Keypad References