ಪವಿತ್ರ ಬೈಬಲ್

ಓಪನ್ ಸಮಕಾಲೀನ ಆವೃತ್ತಿ (OCV)
1 ಪೂರ್ವಕಾಲವೃತ್ತಾ
1. {#1ದಾವೀದನ ವಿಜಯಗಳು }
2. [PS]ಇದರ ತರುವಾಯ ದಾವೀದನು ಫಿಲಿಷ್ಟಿಯರ ಮೇಲೆ ದಾಳಿಮಾಡಿ ಅವರನ್ನು ಸೋಲಿಸಿ, ಅವರಿಂದ ಗತ್ ಪಟ್ಟಣವನ್ನೂ ಅದರ ಸುತ್ತಲಿನ ಗ್ರಾಮಗಳನ್ನೂ ತೆಗೆದುಕೊಂಡು, ಆಡಳಿತವನ್ನು ತನ್ನ ಸ್ವಾಧೀನದಲ್ಲಿಟ್ಟುಕೊಂಡನು. [PE]
3. [PS]ಹಾಗೆಯೇ ಅವನು ಮೋವಾಬ್ಯರನ್ನು ಸಹ ಸೋಲಿಸಿದನು, ಮೋವಾಬ್ಯರು ದಾವೀದನಿಗೆ ಅಧೀನರಾಗಿ ಕಪ್ಪಕೊಡುವವರಾದರು. [PE][PS]ಇದಲ್ಲದೆ ದಾವೀದನು ಯೂಫ್ರೇಟೀಸ್ ನದಿಯ ಬಳಿಯಲ್ಲಿ ತನ್ನ ಅಧಿಕಾರವನ್ನು ಸ್ಥಾಪಿಸುವದಕ್ಕೆ ಹೋಗುತ್ತಿರುವಾಗ, ಹಮಾತಿನ ಬಳಿಯಲ್ಲಿ ಚೋಬದ ಅರಸನಾದ ಹದದೆಜೆರನನ್ನು ಸೋಲಿಸಿದನು.
4. ದಾವೀದನು ಅವನಿಂದ ಸಾವಿರ ರಥಗಳನ್ನೂ, ಏಳು ಸಾವಿರ ರಾಹುತರನ್ನೂ, ಇಪ್ಪತ್ತು ಸಾವಿರ ಕಾಲಾಳುಗಳನ್ನೂ ವಶಪಡಿಸಿಕೊಂಡನು. ನೂರು ರಥಗಳಿಗೆ ಕುದುರೆಗಳನ್ನು ಉಳಿಸಿ, ಇತರ ಕುದುರೆಗಳ ಕಾಲಿನ ನರಗಳನ್ನು ಕೊಯ್ಯಿಸಿಬಿಟ್ಟನು. [PE]
5. [PS]ದಮಸ್ಕದ ಅರಾಮ್ಯರು ಚೋಬದ ಅರಸ ಹದದೆಜೆರನಿಗೆ ಸಹಾಯಮಾಡಲು ಬಂದಾಗ, ದಾವೀದನು ಅರಾಮ್ಯರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಸಂಹರಿಸಿಬಿಟ್ಟನು.
6. ತರುವಾಯ ದಾವೀದನು ದಮಸ್ಕದ ಅರಾಮಿನಲ್ಲಿ ಕಾವಲುದಂಡುಗಳನ್ನು ಇಟ್ಟನು. ಹೀಗೆ ಅರಾಮ್ಯರು ದಾವೀದನಿಗೆ ಅಧೀನರಾಗಿ, ಕಪ್ಪವನ್ನು ಕೊಡುವವರಾದರು. ದಾವೀದನು ಹೋದ ಸ್ಥಳಗಳಲ್ಲೆಲ್ಲಾ ಯೆಹೋವ ದೇವರು ಅವನಿಗೆ ಜಯಕೊಟ್ಟರು. [PE]
7. [PS]ಆಗ ದಾವೀದನು ಹದದೆಜೆರನ ಸೇವಕರಿಗಿದ್ದ ಬಂಗಾರದ ಗುರಾಣಿಗಳನ್ನು ತೆಗೆದುಕೊಂಡು, ಅವುಗಳನ್ನು ಯೆರೂಸಲೇಮಿಗೆ ತಂದನು.
8. ಇದಲ್ಲದೆ ಹದದೆಜೆರನ ಪಟ್ಟಣಗಳಾದ ಟಿಭತಿನಿಂದಲೂ, ಕೂನ್‌ದಿಂದಲೂ ದಾವೀದನು ಅತ್ಯಧಿಕವಾಗಿ ಕಂಚನ್ನು ತೆಗೆದುಕೊಂಡು ಬಂದನು. ಅದರಿಂದ ಸೊಲೊಮೋನನು ಕಂಚಿನ ಕೊಳವನ್ನೂ, ಸ್ತಂಭಗಳನ್ನೂ, ವಿವಿಧ ಪಾತ್ರೆಗಳನ್ನೂ ಮಾಡಿಸಿದನು. [PE]
9. [PS]ದಾವೀದನು ಚೋಬದ ಅರಸನಾದ ಹದದೆಜೆರನ ಸಮಸ್ತ ಸೈನ್ಯವನ್ನು ಸೋಲಿಸಿದನೆಂಬ ವರ್ತಮಾನವನ್ನು ಹಮಾತಿನ ಅರಸನಾದ ತೋವು ಕೇಳಿದಾಗ,
10. ಅರಸನಾದ ದಾವೀದನ ಕ್ಷೇಮಸಮಾಚಾರವನ್ನು ವಿಚಾರಿಸಲೂ, ಹದದೆಜೆರನ ವಿರುದ್ಧ ಯುದ್ಧಮಾಡಿ ಅವನನ್ನು ಸೋಲಿಸಿದ್ದಕ್ಕಾಗಿ ಅವನನ್ನು ಅಭಿನಂದಿಸಿ, ಹರಸುವಂತೆ, ತೋವು ತನ್ನ ಪುತ್ರನಾದ ಹದೋರಾಮನನ್ನು ಎಲ್ಲಾ ತರವಾದ ಬೆಳ್ಳಿ, ಬಂಗಾರ, ಕಂಚಿನ ಪಾತ್ರೆಗಳ ಸಹಿತವಾಗಿ ದಾವೀದನ ಬಳಿಗೆ ಕಳುಹಿಸಿದನು; ಏಕೆಂದರೆ ಹದದೆಜೆರನಿಗೆ ತೋವಿಯ ಸಂಗಡ ಯುದ್ಧಗಳಿದ್ದವು. [PE]
11.
12. [PS]ಇವುಗಳನ್ನು ಅರಸನಾದ ದಾವೀದನು ಎದೋಮ್ಯರು, ಮೋವಾಬ್ಯರು, ಅಮ್ಮೋನ್ಯರು, ಫಿಲಿಷ್ಟಿಯರು, ಅಮಾಲೇಕ್ಯರು ಎಂಬ ಸಕಲ ಜನಾಂಗಗಳ ಬಳಿಯಿಂದ ತೆಗೆದುಕೊಂಡು ಬಂದ ಬೆಳ್ಳಿಬಂಗಾರವನ್ನು ಯೆಹೋವ ದೇವರಿಗೆ ಪ್ರತಿಷ್ಠೆ ಮಾಡಿದನು. [PE][PS]ಇದಲ್ಲದೆ ಚೆರೂಯಳ ಮಗ ಅಬೀಷೈಯನು ಉಪ್ಪಿನ ತಗ್ಗಿನಲ್ಲಿ ಹದಿನೆಂಟು ಸಾವಿರ ಎದೋಮ್ಯರ ಸೈನಿಕರನ್ನು ಕೊಂದನು.
13. ಎದೋಮಿನಲ್ಲಿ ಕಾವಲುದಂಡುಗಳನ್ನು ಇಟ್ಟನು. ಇದರಿಂದ, ಎದೋಮ್ಯರೆಲ್ಲರು ದಾವೀದನಿಗೆ ಅಧೀನರಾದರು. ದಾವೀದನು ಹೋದಲ್ಲೆಲ್ಲಾ ಯೆಹೋವ ದೇವರು ಅವನಿಗೆ ಜಯಕೊಟ್ಟರು. [PE]
14. {#1ದಾವೀದನ ಸರದಾರರು } [PS]ಹೀಗೆಯೇ ದಾವೀದನು ಸಮಸ್ತ ಇಸ್ರಾಯೇಲಿನ ಮೇಲೆ ಆಳುತ್ತಾ ತನ್ನ ಸಮಸ್ತ ಜನರಿಗೂ ನೀತಿ ನ್ಯಾಯಗಳಿಂದ ನಡೆಸುತ್ತಿದ್ದನು. [PE][PBR]
15. [LS] ಚೆರೂಯಳ ಮಗ ಯೋವಾಬನು ಸೈನ್ಯದ ಅಧಿಪತಿಯಾಗಿದ್ದನು. ಅಹೀಲೂದನ ಮಗ ಯೆಹೋಷಾಫಾಟನು ಆಸ್ಥಾನದ [LE][LS]ಆಗುಹೋಗುಗಳನ್ನು ದಾಖಲಿಸುವವನಾಗಿದ್ದನು. [LE]
16. [LS] ಅಹೀಟೂಬನ ಮಗ ಚಾದೋಕನೂ, ಅಬಿಯಾತರನ ಮಗ ಅಹೀಮೆಲೆಕನೂ ಯಾಜಕರಾಗಿದ್ದರು. [LE][LS]ಶವ್ಷನು ಕಾರ್ಯದರ್ಶಿಯಾಗಿದ್ದನು. [LE]
17. [LS] ಯೆಹೋಯಾದಾವನ ಮಗ ಬೆನಾಯನು ಕೆರೇತ್ಯರ ಮೇಲೆಯೂ, ಪೆಲೇತ್ಯರ ಮೇಲೆಯೂ ಮುಖ್ಯಸ್ಥನಾಗಿದ್ದನು. [LE][LS]ದಾವೀದನ ಪುತ್ರರು ಅರಸನ ಬಳಿಯಲ್ಲಿ ಪ್ರಧಾನರಾಗಿದ್ದರು. [LE]
ಒಟ್ಟು 29 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 18 / 29
ದಾವೀದನ ವಿಜಯಗಳು 1 2 ಇದರ ತರುವಾಯ ದಾವೀದನು ಫಿಲಿಷ್ಟಿಯರ ಮೇಲೆ ದಾಳಿಮಾಡಿ ಅವರನ್ನು ಸೋಲಿಸಿ, ಅವರಿಂದ ಗತ್ ಪಟ್ಟಣವನ್ನೂ ಅದರ ಸುತ್ತಲಿನ ಗ್ರಾಮಗಳನ್ನೂ ತೆಗೆದುಕೊಂಡು, ಆಡಳಿತವನ್ನು ತನ್ನ ಸ್ವಾಧೀನದಲ್ಲಿಟ್ಟುಕೊಂಡನು. 3 ಹಾಗೆಯೇ ಅವನು ಮೋವಾಬ್ಯರನ್ನು ಸಹ ಸೋಲಿಸಿದನು, ಮೋವಾಬ್ಯರು ದಾವೀದನಿಗೆ ಅಧೀನರಾಗಿ ಕಪ್ಪಕೊಡುವವರಾದರು. ಇದಲ್ಲದೆ ದಾವೀದನು ಯೂಫ್ರೇಟೀಸ್ ನದಿಯ ಬಳಿಯಲ್ಲಿ ತನ್ನ ಅಧಿಕಾರವನ್ನು ಸ್ಥಾಪಿಸುವದಕ್ಕೆ ಹೋಗುತ್ತಿರುವಾಗ, ಹಮಾತಿನ ಬಳಿಯಲ್ಲಿ ಚೋಬದ ಅರಸನಾದ ಹದದೆಜೆರನನ್ನು ಸೋಲಿಸಿದನು. 4 ದಾವೀದನು ಅವನಿಂದ ಸಾವಿರ ರಥಗಳನ್ನೂ, ಏಳು ಸಾವಿರ ರಾಹುತರನ್ನೂ, ಇಪ್ಪತ್ತು ಸಾವಿರ ಕಾಲಾಳುಗಳನ್ನೂ ವಶಪಡಿಸಿಕೊಂಡನು. ನೂರು ರಥಗಳಿಗೆ ಕುದುರೆಗಳನ್ನು ಉಳಿಸಿ, ಇತರ ಕುದುರೆಗಳ ಕಾಲಿನ ನರಗಳನ್ನು ಕೊಯ್ಯಿಸಿಬಿಟ್ಟನು. 5 ದಮಸ್ಕದ ಅರಾಮ್ಯರು ಚೋಬದ ಅರಸ ಹದದೆಜೆರನಿಗೆ ಸಹಾಯಮಾಡಲು ಬಂದಾಗ, ದಾವೀದನು ಅರಾಮ್ಯರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಸಂಹರಿಸಿಬಿಟ್ಟನು. 6 ತರುವಾಯ ದಾವೀದನು ದಮಸ್ಕದ ಅರಾಮಿನಲ್ಲಿ ಕಾವಲುದಂಡುಗಳನ್ನು ಇಟ್ಟನು. ಹೀಗೆ ಅರಾಮ್ಯರು ದಾವೀದನಿಗೆ ಅಧೀನರಾಗಿ, ಕಪ್ಪವನ್ನು ಕೊಡುವವರಾದರು. ದಾವೀದನು ಹೋದ ಸ್ಥಳಗಳಲ್ಲೆಲ್ಲಾ ಯೆಹೋವ ದೇವರು ಅವನಿಗೆ ಜಯಕೊಟ್ಟರು. 7 ಆಗ ದಾವೀದನು ಹದದೆಜೆರನ ಸೇವಕರಿಗಿದ್ದ ಬಂಗಾರದ ಗುರಾಣಿಗಳನ್ನು ತೆಗೆದುಕೊಂಡು, ಅವುಗಳನ್ನು ಯೆರೂಸಲೇಮಿಗೆ ತಂದನು. 8 ಇದಲ್ಲದೆ ಹದದೆಜೆರನ ಪಟ್ಟಣಗಳಾದ ಟಿಭತಿನಿಂದಲೂ, ಕೂನ್‌ದಿಂದಲೂ ದಾವೀದನು ಅತ್ಯಧಿಕವಾಗಿ ಕಂಚನ್ನು ತೆಗೆದುಕೊಂಡು ಬಂದನು. ಅದರಿಂದ ಸೊಲೊಮೋನನು ಕಂಚಿನ ಕೊಳವನ್ನೂ, ಸ್ತಂಭಗಳನ್ನೂ, ವಿವಿಧ ಪಾತ್ರೆಗಳನ್ನೂ ಮಾಡಿಸಿದನು. 9 ದಾವೀದನು ಚೋಬದ ಅರಸನಾದ ಹದದೆಜೆರನ ಸಮಸ್ತ ಸೈನ್ಯವನ್ನು ಸೋಲಿಸಿದನೆಂಬ ವರ್ತಮಾನವನ್ನು ಹಮಾತಿನ ಅರಸನಾದ ತೋವು ಕೇಳಿದಾಗ, 10 ಅರಸನಾದ ದಾವೀದನ ಕ್ಷೇಮಸಮಾಚಾರವನ್ನು ವಿಚಾರಿಸಲೂ, ಹದದೆಜೆರನ ವಿರುದ್ಧ ಯುದ್ಧಮಾಡಿ ಅವನನ್ನು ಸೋಲಿಸಿದ್ದಕ್ಕಾಗಿ ಅವನನ್ನು ಅಭಿನಂದಿಸಿ, ಹರಸುವಂತೆ, ತೋವು ತನ್ನ ಪುತ್ರನಾದ ಹದೋರಾಮನನ್ನು ಎಲ್ಲಾ ತರವಾದ ಬೆಳ್ಳಿ, ಬಂಗಾರ, ಕಂಚಿನ ಪಾತ್ರೆಗಳ ಸಹಿತವಾಗಿ ದಾವೀದನ ಬಳಿಗೆ ಕಳುಹಿಸಿದನು; ಏಕೆಂದರೆ ಹದದೆಜೆರನಿಗೆ ತೋವಿಯ ಸಂಗಡ ಯುದ್ಧಗಳಿದ್ದವು. 11 12 ಇವುಗಳನ್ನು ಅರಸನಾದ ದಾವೀದನು ಎದೋಮ್ಯರು, ಮೋವಾಬ್ಯರು, ಅಮ್ಮೋನ್ಯರು, ಫಿಲಿಷ್ಟಿಯರು, ಅಮಾಲೇಕ್ಯರು ಎಂಬ ಸಕಲ ಜನಾಂಗಗಳ ಬಳಿಯಿಂದ ತೆಗೆದುಕೊಂಡು ಬಂದ ಬೆಳ್ಳಿಬಂಗಾರವನ್ನು ಯೆಹೋವ ದೇವರಿಗೆ ಪ್ರತಿಷ್ಠೆ ಮಾಡಿದನು. ಇದಲ್ಲದೆ ಚೆರೂಯಳ ಮಗ ಅಬೀಷೈಯನು ಉಪ್ಪಿನ ತಗ್ಗಿನಲ್ಲಿ ಹದಿನೆಂಟು ಸಾವಿರ ಎದೋಮ್ಯರ ಸೈನಿಕರನ್ನು ಕೊಂದನು. 13 ಎದೋಮಿನಲ್ಲಿ ಕಾವಲುದಂಡುಗಳನ್ನು ಇಟ್ಟನು. ಇದರಿಂದ, ಎದೋಮ್ಯರೆಲ್ಲರು ದಾವೀದನಿಗೆ ಅಧೀನರಾದರು. ದಾವೀದನು ಹೋದಲ್ಲೆಲ್ಲಾ ಯೆಹೋವ ದೇವರು ಅವನಿಗೆ ಜಯಕೊಟ್ಟರು. ದಾವೀದನ ಸರದಾರರು 14 ಹೀಗೆಯೇ ದಾವೀದನು ಸಮಸ್ತ ಇಸ್ರಾಯೇಲಿನ ಮೇಲೆ ಆಳುತ್ತಾ ತನ್ನ ಸಮಸ್ತ ಜನರಿಗೂ ನೀತಿ ನ್ಯಾಯಗಳಿಂದ ನಡೆಸುತ್ತಿದ್ದನು. 15 ಚೆರೂಯಳ ಮಗ ಯೋವಾಬನು ಸೈನ್ಯದ ಅಧಿಪತಿಯಾಗಿದ್ದನು. ಅಹೀಲೂದನ ಮಗ ಯೆಹೋಷಾಫಾಟನು ಆಸ್ಥಾನದ ಆಗುಹೋಗುಗಳನ್ನು ದಾಖಲಿಸುವವನಾಗಿದ್ದನು. 16 ಅಹೀಟೂಬನ ಮಗ ಚಾದೋಕನೂ, ಅಬಿಯಾತರನ ಮಗ ಅಹೀಮೆಲೆಕನೂ ಯಾಜಕರಾಗಿದ್ದರು. ಶವ್ಷನು ಕಾರ್ಯದರ್ಶಿಯಾಗಿದ್ದನು. 17 ಯೆಹೋಯಾದಾವನ ಮಗ ಬೆನಾಯನು ಕೆರೇತ್ಯರ ಮೇಲೆಯೂ, ಪೆಲೇತ್ಯರ ಮೇಲೆಯೂ ಮುಖ್ಯಸ್ಥನಾಗಿದ್ದನು. ದಾವೀದನ ಪುತ್ರರು ಅರಸನ ಬಳಿಯಲ್ಲಿ ಪ್ರಧಾನರಾಗಿದ್ದರು.
ಒಟ್ಟು 29 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 18 / 29
×

Alert

×

Kannada Letters Keypad References