ಪವಿತ್ರ ಬೈಬಲ್

ಓಪನ್ ಸಮಕಾಲೀನ ಆವೃತ್ತಿ (OCV)
1 ಕೊರಿಂಥದವರಿಗೆ
1. {#1ಅಪೊಸ್ತಲರ ಹಕ್ಕುಗಳು } [PS]ನಾನು ಸ್ವತಂತ್ರನಲ್ಲವೇ? ನಾನೂ ಅಪೊಸ್ತಲನಲ್ಲವೇ? ನಾನು ನಮ್ಮ ಕರ್ತ ಆಗಿರುವ ಯೇಸುವನ್ನು ಕಂಡವನಲ್ಲವೇ? ನಾನು ಕರ್ತ ದೇವರಲ್ಲಿ ಮಾಡಿದ ಕೆಲಸದ ಫಲವು ನೀವಲ್ಲವೇ?
2. ಇತರರಿಗೆ ನಾನು ಅಪೊಸ್ತಲನಲ್ಲದಿದ್ದರೂ ನಿಮಗೆ ನಾನು ಅಪೊಸ್ತಲನಾಗಿದ್ದೇನೆ! ನನ್ನ ಅಪೊಸ್ತಲ ಸೇವೆಯ ಮುದ್ರೆಯು ಕರ್ತ ದೇವರಲ್ಲಿ ನೀವೇ ಆಗಿದ್ದೀರಷ್ಟೇ. [PE]
3. [PS]ನನ್ನ ಮೇಲೆ ತಪ್ಪು ಹೊರಿಸುವವರಿಗೆ ಇದೇ ನನ್ನ ಪ್ರತಿವಾದ:
4. ಅನ್ನಪಾನಗಳಿಗಾಗಿ ನಮಗೆ ಹಕ್ಕಿಲ್ಲವೇ?
5. ಮಿಕ್ಕ ಅಪೊಸ್ತಲರಂತೆಯೂ ಕರ್ತದೇವರ ತಮ್ಮಂದಿರಂತೆಯೂ ಕೇಫನಂತೆಯೂ ವಿಶ್ವಾಸಿಯಾದ ಒಬ್ಬಳನ್ನು ಮದುವೆಮಾಡಿಕೊಳ್ಳಲು ನಮಗೆ ಹಕ್ಕಿಲ್ಲವೇ?
6. ಇಲ್ಲವೆ ಉಪಜೀವನಕ್ಕಾಗಿ ನಾನೂ ಮತ್ತು ಬಾರ್ನಬನೂ ಮಾತ್ರವೇ ಕೆಲಸಮಾಡಬೇಕೋ? [PE]
7. [PS]ಸೈನಿಕ ಸೇವೆಯನ್ನು ಯಾವನಾದರೂ ಸ್ವಂತ ಖರ್ಚಿನಿಂದ ಮಾಡುವುದುಂಟೋ? ದ್ರಾಕ್ಷಿಯ ತೋಟವನ್ನು ಮಾಡಿ ಅದರ ಫಲವನ್ನು ತಿನ್ನದೇ ಇರುವವರುಂಟೋ? ಮಂದೆಯನ್ನು ಮೇಯಿಸುವವನು ಹಾಲನ್ನು ಕುಡಿಯದೇ ಇರುವುದುಂಟೋ?
8. ನಾನು ಕೇವಲ ಮಾನವೀಯ ನೋಟದಲ್ಲಿ ಮಾತನಾಡುತ್ತಿದ್ದೇನೋ? ನಿಯಮವು ಸಹ ಇದನ್ನು ಹೇಳುವುದಿಲ್ಲವೋ?
9. “ಕಣ ತುಳಿಯುವ ಎತ್ತಿನ ಬಾಯನ್ನು ಕಟ್ಟಬಾರದು,”[* ಧರ್ಮೋ 25:4 ] ಎಂದು ಮೋಶೆಯ ನಿಯಮದಲ್ಲಿ ಬರೆದಿದೆ. ಇಲ್ಲಿ ದೇವರಿಗೆ ಎತ್ತಿನ ಬಗ್ಗೆ ಮಾತ್ರ ಚಿಂತೆಯಿದೆಯೋ?
10. ನಿಶ್ಚಯವಾಗಿಯೂ, ದೇವರು ನಮಗೋಸ್ಕರ ಇವೆಲ್ಲವನ್ನು ಹೇಳುತ್ತಾರೆ ಅಲ್ಲವೇ? ಹೌದು, ಪವಿತ್ರ ವೇದವು ನಮಗೋಸ್ಕರವಾಗಿಯೇ ಬರೆಯಲಾಗಿದೆ. ಉಳುವವನು ಉಳುವಾಗ, ಒಕ್ಕುವವನು ಒಕ್ಕುವಾಗ ಸುಗ್ಗಿಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿಂದ ಹಾಗೆ ಮಾಡಬೇಕು.
11. ನಾವು ನಿಮ್ಮಲ್ಲಿ ಆತ್ಮಿಕ ಸಂಗತಿಗಳನ್ನು ಬಿತ್ತಿದ ಮೇಲೆ, ನಿಮ್ಮಿಂದ ಭೌತಿಕ ಸುಗ್ಗಿಯನ್ನು ಕೊಯ್ಯುವುದು ದೊಡ್ಡದೋ?
12. ಇತರರಿಗೆ ನಿಮ್ಮ ಸಹಾಯದಲ್ಲಿ ಪಾಲು ಇದ್ದರೆ, ಅದರಲ್ಲಿ ನಮಗೂ ಹೆಚ್ಚು ಪಾಲು ಇರಬೇಕಲ್ಲಾ? [PE]
13. [PS]ಆದರೆ ನಾವು ಈ ಅಧಿಕಾರವನ್ನು ಚಲಾಯಿಸಿಲ್ಲ. ಕ್ರಿಸ್ತ ಯೇಸುವಿಗೆ ಸೇರಿದ ಸುವಾರ್ತೆಗೆ ಅಡ್ಡಿಯಾಗಬಾರದೆಂದು ಎಲ್ಲವನ್ನೂ ಸಹಿಸಿಕೊಂಡೆವು. [PE][PS]ದೇವಾಲಯದಲ್ಲಿ ಸೇವೆಮಾಡುವವರು, ದೇವಾಲಯದಲ್ಲಿ ಊಟ ಪಡೆಯುತ್ತಾರೆಂಬುದೂ; ಬಲಿಪೀಠದ ಬಳಿಯಲ್ಲಿ ಸೇವೆಮಾಡುವವರು, ಆ ಬಲಿಪೀಠದ ಮೇಲೆ ಸಮರ್ಪಿಸಿದ್ದರಲ್ಲಿ ಪಾಲು ಹೊಂದುತ್ತಾರೆಂಬುದೂ ನಿಮಗೆ ತಿಳಿಯದೋ?
14. ಅದೇ ರೀತಿಯಾಗಿ ಸುವಾರ್ತೆಯನ್ನು ಸಾರುವವರು, ಸುವಾರ್ತೆಯಿಂದಲೇ ಜೀವನ ಮಾಡಬೇಕೆಂದು ಕರ್ತದೇವರು ಸಹ ಆಜ್ಞಾಪಿಸಿದ್ದಾರೆ. [PE]
15. [PS]ಆದರೆ ನಾನಂತೂ ಇವುಗಳಲ್ಲಿ ಒಂದು ಹಕ್ಕನ್ನೂ ಉಪಯೋಗಿಸಿಕೊಂಡಿಲ್ಲ. ಅಂಥವುಗಳನ್ನು ನನಗೆ ನೀವು ಮಾಡಬೇಕೆಂಬ ಅಪೇಕ್ಷೆಯಿಂದ ಈ ಸಂಗತಿಗಳನ್ನು ನಾನು ಬರೆಯಲಿಲ್ಲ. ಯಾರಾದರೂ ಈ ಹೆಮ್ಮೆಯನ್ನು ನನ್ನಿಂದ ಅಪಹರಿಸುವುದಕ್ಕಿಂತಲೂ ಸಾಯುವುದೇ ಲೇಸು.
16. ನಾನು ಸುವಾರ್ತೆಯನ್ನು ಸಾರಿದರೂ ಹೊಗಳಿಸಿಕೊಳ್ಳುವ ಯಾವ ಆಸೆಯೂ ನನಗೆ ಇಲ್ಲ. ಸಾರಲೇಬೇಕೆಂಬ ಕರ್ತವ್ಯಕ್ಕೆ ನಾನು ಸಾಲಗಾರನಾಗಿದ್ದೇನೆ. ಸುವಾರ್ತೆಯನ್ನು ಸಾರದಿದ್ದರೆ, ನನ್ನ ಗತಿ ಏನೆಂದು ಹೇಳಲಿ!
17. ನಾನು ಇಷ್ಟಪೂರ್ವಕವಾಗಿ ಸುವಾರ್ತೆ ಸಾರಿದರೆ, ನನಗೆ ಬಹುಮಾನವಿರುವುದು. ಇಷ್ಟವಿಲ್ಲದೆ ಮಾಡಿದರೆ, ನನ್ನ ವಶಕ್ಕೆ ಒಪ್ಪಿಸಲಾದ ಕಾರ್ಯಭಾರವನ್ನು ನಾನು ನೆರವೇರಿಸಿದಂತಾಗುತ್ತದೆ.
18. ಹಾಗಾದರೆ ನನಗೆ ದೊರೆಯುವ ಬಹುಮಾನವೇನು? ನಾನು ಸುವಾರ್ತೆಯನ್ನು ಸಾರುವಾಗ, ಅದನ್ನು ಉಚಿತವಾಗಿ ಸಾರುತ್ತಾ, ಸುವಾರ್ತೆಯ ಪ್ರಸಂಗಿಯಾಗಿ ನನ್ನ ಪೂರ್ಣ ಹಕ್ಕನ್ನು ಉಪಯೋಗಿಸದಿರುವುದೇ ನನ್ನ ಬಹುಮಾನ. [PE]
19. {#1ಪೌಲನ ಸ್ವತಂತ್ರ } [PS]ನಾನು ಸ್ವತಂತ್ರನಾಗಿದ್ದರೂ, ಯಾರಿಗೂ ಸೇರಿದವನಾಗಿರದಿದ್ದರೂ, ಹೆಚ್ಚು ಜನರನ್ನು ಸಂಪಾದಿಸಿಕೊಳ್ಳಬೇಕೆಂಬ ಉದ್ದೇಶದಿಂದ ನನ್ನನ್ನು ಎಲ್ಲರಿಗೂ ಗುಲಾಮನನ್ನಾಗಿ ಮಾಡಿಕೊಂಡೆನು.
20. ಯೆಹೂದ್ಯರನ್ನು ಸಂಪಾದಿಸಿಕೊಳ್ಳುವಂತೆ ಯೆಹೂದ್ಯರಿಗೆ ಯೆಹೂದ್ಯನಂತಾದೆನು. ನಾನು ನಿಯಮಕ್ಕೆ ಅಧೀನನಲ್ಲದಿದ್ದರೂ ನಿಯಮಕ್ಕೆ ಅಧೀನರಾದವರನ್ನು ಸಂಪಾದಿಸಿಕೊಳ್ಳುವಂತೆ ಅವರಿಗಾಗಿ ನಿಯಮಕ್ಕೆ ಅಧೀನನಂತಾದೆನು.
21. ನಾನು ನಿಯಮ ಇಲ್ಲದವರನ್ನು ಸಂಪಾದಿಸಿಕೊಳ್ಳುವುದಕ್ಕಾಗಿ ಅವರಿಗೆ ನಿಯಮವಿಲ್ಲದವನಂತಾದೆನು. ನಾನು ಕ್ರಿಸ್ತ ಯೇಸುವಿನ ನಿಯಮಕ್ಕೆ ಒಳಗಾದವನಾಗಿದ್ದರೂ ನಾನು ದೇವರ ನಿಯಮದಿಂದ ಸ್ವತಂತ್ರವಾದವನಲ್ಲ.
22. ಬಲವಿಲ್ಲದವರನ್ನು ಸಂಪಾದಿಸುವುದಕ್ಕಾಗಿ ಬಲವಿಲ್ಲದವರಿಗೆ ಬಲವಿಲ್ಲದವನಾದೆನು. ಯಾವ ವಿಧದಲ್ಲಿಯಾದರೂ ಕೆಲವರನ್ನು ರಕ್ಷಿಸಬೇಕೆಂದು ಎಲ್ಲರಿಗೂ ಎಲ್ಲವೂ ಆದೆನು.
23. ನಾನು ಸುವಾರ್ತೆಯ ಆಶೀರ್ವಾದಗಳಲ್ಲಿ ಪಾಲುಗಾರನಾಗಬೇಕೆಂದು ಇದೆಲ್ಲವನ್ನು ಸುವಾರ್ತೆಗೋಸ್ಕರವೇ ಮಾಡುತ್ತೇನೆ. [PE]
24. {#1ಶಿಸ್ತಿನ ಜೀವನದ ಅವಶ್ಯಕತೆ } [PS]ಪಂದ್ಯಗಳಲ್ಲಿ ಎಲ್ಲರೂ ಓಡುತ್ತಾರೆ. ಆದರೆ ಒಬ್ಬನಿಗೆ ಮಾತ್ರ ಬಹುಮಾನ ದೊರೆಯುತ್ತದೆ ಎಂಬುದು ನಿಮಗೆ ತಿಳಿಯದೋ? ಬಹುಮಾನವನ್ನು ಪಡಕೊಳ್ಳಬೇಕೆಂದು ನೀವೂ ಓಡಿರಿ.
25. ಆಟಗಳಲ್ಲಿ ಪಂದ್ಯಕ್ಕೆ ಭಾಗವಹಿಸುವವರೆಲ್ಲರೂ, ಕಠಿಣವಾದ ತರಬೇತಿಯನ್ನು ಹೊಂದುತ್ತಾರೆ. ಅವರು ಬಹುದಿನ ಉಳಿಯದೇ ಇರುವ ಕಿರೀಟವನ್ನು ಪಡೆಯುವುದಕ್ಕೆ ಇದನ್ನು ಮಾಡುತ್ತಾರೆ. ಆದರೆ ನಾವು ಎಂದೆಂದಿಗೂ ಉಳಿಯುವ ಕಿರೀಟ ಹೊಂದಲು ಹೋರಾಡುವವರಾಗಿದ್ದೇವೆ.
26. ಗೊತ್ತುಗುರಿ ಇಲ್ಲದವನ ಹಾಗೆ ನಾನು ಓಡುವುದಿಲ್ಲ, ಗಾಳಿಯನ್ನು ಗುದ್ದುವವನ ಹಾಗೆ ನಾನು ಹೋರಾಡುವುದಿಲ್ಲ.
27. ನಾನು ಇತರರಿಗೆ ಸುವಾರ್ತೆ ಸಾರಿದ ಮೇಲೆ, ನಾನೇ ಬಹುಮಾನ ಹೊಂದಲು ಅಯೋಗ್ಯನಾಗದಂತೆ ನನ್ನ ದೇಹವನ್ನು ದಂಡಿಸಿ, ನನ್ನ ಸ್ವಾಧೀನದಲ್ಲಿಟ್ಟುಕೊಳ್ಳುತ್ತೇನೆ. [PE]
ಒಟ್ಟು 16 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 9 / 16
1 2 3 4 5 6 7 8 9 10 11 12 13 14 15 16
ಅಪೊಸ್ತಲರ ಹಕ್ಕುಗಳು 1 ನಾನು ಸ್ವತಂತ್ರನಲ್ಲವೇ? ನಾನೂ ಅಪೊಸ್ತಲನಲ್ಲವೇ? ನಾನು ನಮ್ಮ ಕರ್ತ ಆಗಿರುವ ಯೇಸುವನ್ನು ಕಂಡವನಲ್ಲವೇ? ನಾನು ಕರ್ತ ದೇವರಲ್ಲಿ ಮಾಡಿದ ಕೆಲಸದ ಫಲವು ನೀವಲ್ಲವೇ? 2 ಇತರರಿಗೆ ನಾನು ಅಪೊಸ್ತಲನಲ್ಲದಿದ್ದರೂ ನಿಮಗೆ ನಾನು ಅಪೊಸ್ತಲನಾಗಿದ್ದೇನೆ! ನನ್ನ ಅಪೊಸ್ತಲ ಸೇವೆಯ ಮುದ್ರೆಯು ಕರ್ತ ದೇವರಲ್ಲಿ ನೀವೇ ಆಗಿದ್ದೀರಷ್ಟೇ. 3 ನನ್ನ ಮೇಲೆ ತಪ್ಪು ಹೊರಿಸುವವರಿಗೆ ಇದೇ ನನ್ನ ಪ್ರತಿವಾದ: 4 ಅನ್ನಪಾನಗಳಿಗಾಗಿ ನಮಗೆ ಹಕ್ಕಿಲ್ಲವೇ? 5 ಮಿಕ್ಕ ಅಪೊಸ್ತಲರಂತೆಯೂ ಕರ್ತದೇವರ ತಮ್ಮಂದಿರಂತೆಯೂ ಕೇಫನಂತೆಯೂ ವಿಶ್ವಾಸಿಯಾದ ಒಬ್ಬಳನ್ನು ಮದುವೆಮಾಡಿಕೊಳ್ಳಲು ನಮಗೆ ಹಕ್ಕಿಲ್ಲವೇ? 6 ಇಲ್ಲವೆ ಉಪಜೀವನಕ್ಕಾಗಿ ನಾನೂ ಮತ್ತು ಬಾರ್ನಬನೂ ಮಾತ್ರವೇ ಕೆಲಸಮಾಡಬೇಕೋ? 7 ಸೈನಿಕ ಸೇವೆಯನ್ನು ಯಾವನಾದರೂ ಸ್ವಂತ ಖರ್ಚಿನಿಂದ ಮಾಡುವುದುಂಟೋ? ದ್ರಾಕ್ಷಿಯ ತೋಟವನ್ನು ಮಾಡಿ ಅದರ ಫಲವನ್ನು ತಿನ್ನದೇ ಇರುವವರುಂಟೋ? ಮಂದೆಯನ್ನು ಮೇಯಿಸುವವನು ಹಾಲನ್ನು ಕುಡಿಯದೇ ಇರುವುದುಂಟೋ? 8 ನಾನು ಕೇವಲ ಮಾನವೀಯ ನೋಟದಲ್ಲಿ ಮಾತನಾಡುತ್ತಿದ್ದೇನೋ? ನಿಯಮವು ಸಹ ಇದನ್ನು ಹೇಳುವುದಿಲ್ಲವೋ? 9 “ಕಣ ತುಳಿಯುವ ಎತ್ತಿನ ಬಾಯನ್ನು ಕಟ್ಟಬಾರದು,”* ಧರ್ಮೋ 25:4 ಎಂದು ಮೋಶೆಯ ನಿಯಮದಲ್ಲಿ ಬರೆದಿದೆ. ಇಲ್ಲಿ ದೇವರಿಗೆ ಎತ್ತಿನ ಬಗ್ಗೆ ಮಾತ್ರ ಚಿಂತೆಯಿದೆಯೋ? 10 ನಿಶ್ಚಯವಾಗಿಯೂ, ದೇವರು ನಮಗೋಸ್ಕರ ಇವೆಲ್ಲವನ್ನು ಹೇಳುತ್ತಾರೆ ಅಲ್ಲವೇ? ಹೌದು, ಪವಿತ್ರ ವೇದವು ನಮಗೋಸ್ಕರವಾಗಿಯೇ ಬರೆಯಲಾಗಿದೆ. ಉಳುವವನು ಉಳುವಾಗ, ಒಕ್ಕುವವನು ಒಕ್ಕುವಾಗ ಸುಗ್ಗಿಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿಂದ ಹಾಗೆ ಮಾಡಬೇಕು. 11 ನಾವು ನಿಮ್ಮಲ್ಲಿ ಆತ್ಮಿಕ ಸಂಗತಿಗಳನ್ನು ಬಿತ್ತಿದ ಮೇಲೆ, ನಿಮ್ಮಿಂದ ಭೌತಿಕ ಸುಗ್ಗಿಯನ್ನು ಕೊಯ್ಯುವುದು ದೊಡ್ಡದೋ? 12 ಇತರರಿಗೆ ನಿಮ್ಮ ಸಹಾಯದಲ್ಲಿ ಪಾಲು ಇದ್ದರೆ, ಅದರಲ್ಲಿ ನಮಗೂ ಹೆಚ್ಚು ಪಾಲು ಇರಬೇಕಲ್ಲಾ? 13 ಆದರೆ ನಾವು ಈ ಅಧಿಕಾರವನ್ನು ಚಲಾಯಿಸಿಲ್ಲ. ಕ್ರಿಸ್ತ ಯೇಸುವಿಗೆ ಸೇರಿದ ಸುವಾರ್ತೆಗೆ ಅಡ್ಡಿಯಾಗಬಾರದೆಂದು ಎಲ್ಲವನ್ನೂ ಸಹಿಸಿಕೊಂಡೆವು. ದೇವಾಲಯದಲ್ಲಿ ಸೇವೆಮಾಡುವವರು, ದೇವಾಲಯದಲ್ಲಿ ಊಟ ಪಡೆಯುತ್ತಾರೆಂಬುದೂ; ಬಲಿಪೀಠದ ಬಳಿಯಲ್ಲಿ ಸೇವೆಮಾಡುವವರು, ಆ ಬಲಿಪೀಠದ ಮೇಲೆ ಸಮರ್ಪಿಸಿದ್ದರಲ್ಲಿ ಪಾಲು ಹೊಂದುತ್ತಾರೆಂಬುದೂ ನಿಮಗೆ ತಿಳಿಯದೋ? 14 ಅದೇ ರೀತಿಯಾಗಿ ಸುವಾರ್ತೆಯನ್ನು ಸಾರುವವರು, ಸುವಾರ್ತೆಯಿಂದಲೇ ಜೀವನ ಮಾಡಬೇಕೆಂದು ಕರ್ತದೇವರು ಸಹ ಆಜ್ಞಾಪಿಸಿದ್ದಾರೆ. 15 ಆದರೆ ನಾನಂತೂ ಇವುಗಳಲ್ಲಿ ಒಂದು ಹಕ್ಕನ್ನೂ ಉಪಯೋಗಿಸಿಕೊಂಡಿಲ್ಲ. ಅಂಥವುಗಳನ್ನು ನನಗೆ ನೀವು ಮಾಡಬೇಕೆಂಬ ಅಪೇಕ್ಷೆಯಿಂದ ಈ ಸಂಗತಿಗಳನ್ನು ನಾನು ಬರೆಯಲಿಲ್ಲ. ಯಾರಾದರೂ ಈ ಹೆಮ್ಮೆಯನ್ನು ನನ್ನಿಂದ ಅಪಹರಿಸುವುದಕ್ಕಿಂತಲೂ ಸಾಯುವುದೇ ಲೇಸು. 16 ನಾನು ಸುವಾರ್ತೆಯನ್ನು ಸಾರಿದರೂ ಹೊಗಳಿಸಿಕೊಳ್ಳುವ ಯಾವ ಆಸೆಯೂ ನನಗೆ ಇಲ್ಲ. ಸಾರಲೇಬೇಕೆಂಬ ಕರ್ತವ್ಯಕ್ಕೆ ನಾನು ಸಾಲಗಾರನಾಗಿದ್ದೇನೆ. ಸುವಾರ್ತೆಯನ್ನು ಸಾರದಿದ್ದರೆ, ನನ್ನ ಗತಿ ಏನೆಂದು ಹೇಳಲಿ! 17 ನಾನು ಇಷ್ಟಪೂರ್ವಕವಾಗಿ ಸುವಾರ್ತೆ ಸಾರಿದರೆ, ನನಗೆ ಬಹುಮಾನವಿರುವುದು. ಇಷ್ಟವಿಲ್ಲದೆ ಮಾಡಿದರೆ, ನನ್ನ ವಶಕ್ಕೆ ಒಪ್ಪಿಸಲಾದ ಕಾರ್ಯಭಾರವನ್ನು ನಾನು ನೆರವೇರಿಸಿದಂತಾಗುತ್ತದೆ. 18 ಹಾಗಾದರೆ ನನಗೆ ದೊರೆಯುವ ಬಹುಮಾನವೇನು? ನಾನು ಸುವಾರ್ತೆಯನ್ನು ಸಾರುವಾಗ, ಅದನ್ನು ಉಚಿತವಾಗಿ ಸಾರುತ್ತಾ, ಸುವಾರ್ತೆಯ ಪ್ರಸಂಗಿಯಾಗಿ ನನ್ನ ಪೂರ್ಣ ಹಕ್ಕನ್ನು ಉಪಯೋಗಿಸದಿರುವುದೇ ನನ್ನ ಬಹುಮಾನ. ಪೌಲನ ಸ್ವತಂತ್ರ 19 ನಾನು ಸ್ವತಂತ್ರನಾಗಿದ್ದರೂ, ಯಾರಿಗೂ ಸೇರಿದವನಾಗಿರದಿದ್ದರೂ, ಹೆಚ್ಚು ಜನರನ್ನು ಸಂಪಾದಿಸಿಕೊಳ್ಳಬೇಕೆಂಬ ಉದ್ದೇಶದಿಂದ ನನ್ನನ್ನು ಎಲ್ಲರಿಗೂ ಗುಲಾಮನನ್ನಾಗಿ ಮಾಡಿಕೊಂಡೆನು. 20 ಯೆಹೂದ್ಯರನ್ನು ಸಂಪಾದಿಸಿಕೊಳ್ಳುವಂತೆ ಯೆಹೂದ್ಯರಿಗೆ ಯೆಹೂದ್ಯನಂತಾದೆನು. ನಾನು ನಿಯಮಕ್ಕೆ ಅಧೀನನಲ್ಲದಿದ್ದರೂ ನಿಯಮಕ್ಕೆ ಅಧೀನರಾದವರನ್ನು ಸಂಪಾದಿಸಿಕೊಳ್ಳುವಂತೆ ಅವರಿಗಾಗಿ ನಿಯಮಕ್ಕೆ ಅಧೀನನಂತಾದೆನು. 21 ನಾನು ನಿಯಮ ಇಲ್ಲದವರನ್ನು ಸಂಪಾದಿಸಿಕೊಳ್ಳುವುದಕ್ಕಾಗಿ ಅವರಿಗೆ ನಿಯಮವಿಲ್ಲದವನಂತಾದೆನು. ನಾನು ಕ್ರಿಸ್ತ ಯೇಸುವಿನ ನಿಯಮಕ್ಕೆ ಒಳಗಾದವನಾಗಿದ್ದರೂ ನಾನು ದೇವರ ನಿಯಮದಿಂದ ಸ್ವತಂತ್ರವಾದವನಲ್ಲ. 22 ಬಲವಿಲ್ಲದವರನ್ನು ಸಂಪಾದಿಸುವುದಕ್ಕಾಗಿ ಬಲವಿಲ್ಲದವರಿಗೆ ಬಲವಿಲ್ಲದವನಾದೆನು. ಯಾವ ವಿಧದಲ್ಲಿಯಾದರೂ ಕೆಲವರನ್ನು ರಕ್ಷಿಸಬೇಕೆಂದು ಎಲ್ಲರಿಗೂ ಎಲ್ಲವೂ ಆದೆನು. 23 ನಾನು ಸುವಾರ್ತೆಯ ಆಶೀರ್ವಾದಗಳಲ್ಲಿ ಪಾಲುಗಾರನಾಗಬೇಕೆಂದು ಇದೆಲ್ಲವನ್ನು ಸುವಾರ್ತೆಗೋಸ್ಕರವೇ ಮಾಡುತ್ತೇನೆ. ಶಿಸ್ತಿನ ಜೀವನದ ಅವಶ್ಯಕತೆ 24 ಪಂದ್ಯಗಳಲ್ಲಿ ಎಲ್ಲರೂ ಓಡುತ್ತಾರೆ. ಆದರೆ ಒಬ್ಬನಿಗೆ ಮಾತ್ರ ಬಹುಮಾನ ದೊರೆಯುತ್ತದೆ ಎಂಬುದು ನಿಮಗೆ ತಿಳಿಯದೋ? ಬಹುಮಾನವನ್ನು ಪಡಕೊಳ್ಳಬೇಕೆಂದು ನೀವೂ ಓಡಿರಿ. 25 ಆಟಗಳಲ್ಲಿ ಪಂದ್ಯಕ್ಕೆ ಭಾಗವಹಿಸುವವರೆಲ್ಲರೂ, ಕಠಿಣವಾದ ತರಬೇತಿಯನ್ನು ಹೊಂದುತ್ತಾರೆ. ಅವರು ಬಹುದಿನ ಉಳಿಯದೇ ಇರುವ ಕಿರೀಟವನ್ನು ಪಡೆಯುವುದಕ್ಕೆ ಇದನ್ನು ಮಾಡುತ್ತಾರೆ. ಆದರೆ ನಾವು ಎಂದೆಂದಿಗೂ ಉಳಿಯುವ ಕಿರೀಟ ಹೊಂದಲು ಹೋರಾಡುವವರಾಗಿದ್ದೇವೆ. 26 ಗೊತ್ತುಗುರಿ ಇಲ್ಲದವನ ಹಾಗೆ ನಾನು ಓಡುವುದಿಲ್ಲ, ಗಾಳಿಯನ್ನು ಗುದ್ದುವವನ ಹಾಗೆ ನಾನು ಹೋರಾಡುವುದಿಲ್ಲ. 27 ನಾನು ಇತರರಿಗೆ ಸುವಾರ್ತೆ ಸಾರಿದ ಮೇಲೆ, ನಾನೇ ಬಹುಮಾನ ಹೊಂದಲು ಅಯೋಗ್ಯನಾಗದಂತೆ ನನ್ನ ದೇಹವನ್ನು ದಂಡಿಸಿ, ನನ್ನ ಸ್ವಾಧೀನದಲ್ಲಿಟ್ಟುಕೊಳ್ಳುತ್ತೇನೆ.
ಒಟ್ಟು 16 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 9 / 16
1 2 3 4 5 6 7 8 9 10 11 12 13 14 15 16
×

Alert

×

Kannada Letters Keypad References