ಪವಿತ್ರ ಬೈಬಲ್

ಓಪನ್ ಸಮಕಾಲೀನ ಆವೃತ್ತಿ (OCV)
1 ಯೋಹಾನನು
1. {#1ಆತ್ಮಗಳನ್ನು ಪರೀಕ್ಷಿಸತಕ್ಕದ್ದು } [PS]ಪ್ರಿಯ ಸ್ನೇಹಿತರೇ, ಅನೇಕ ಸುಳ್ಳು ಪ್ರವಾದಿಗಳು ಲೋಕದೊಳಗೆ ಹೋಗಿರುವುದರಿಂದ ನೀವು ಎಲ್ಲಾ ಆತ್ಮಗಳನ್ನು ನಂಬದೆ ಆಯಾ ಆತ್ಮಗಳು ದೇವರಿಗೆ ಸಂಬಂಧವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.
2. ನೀವು ದೇವರಾತ್ಮನನ್ನು ಹೀಗೆ ಗುರುತಿಸಬಹುದು: ಕ್ರಿಸ್ತ ಯೇಸು ನರಮಾಂಸರಾಗಿ ಬಂದರೆಂದು ಒಪ್ಪಿಕೊಳ್ಳುವ ಪ್ರತಿಯೊಂದು ಆತ್ಮವು ದೇವರಿಂದ ಬಂದದ್ದು.
3. ನರಮಾಂಸದಲ್ಲಿ ಬಂದ ಯೇಸುವನ್ನು ಒಪ್ಪಿಕೊಳ್ಳದಿರುವ ಪ್ರತಿಯೊಂದು ಆತ್ಮವು ದೇವರಿಂದ ಬಂದದ್ದಲ್ಲ. ಅದು ಕ್ರಿಸ್ತವಿರೋಧಿಯ ಆತ್ಮವಾಗಿದೆ. ಅದು ಬರುವುದೆಂಬುದನ್ನು ನೀವು ಕೇಳಿದ್ದೀರಲ್ಲಾ. ಈಗಲೂ ಅದು ಲೋಕದಲ್ಲಿ ಇದೆ. [PE]
4. [PS]ಪ್ರಿಯ ಮಕ್ಕಳೇ, ನೀವು ದೇವರಿಗೆ ಸೇರಿದವರಾಗಿದ್ದೀರಿ, ಸುಳ್ಳು ಪ್ರವಾದಿಗಳನ್ನು ಜಯಿಸಿದ್ದೀರಿ. ಏಕೆಂದರೆ ನಿಮ್ಮಲ್ಲಿರುವ ದೇವರು ಲೋಕದಲ್ಲಿ ಇರುವವನಿಗಿಂತ ದೊಡ್ಡವರಾಗಿದ್ದಾರೆ.
5. ಅವರು ಲೋಕಕ್ಕೆ ಸೇರಿದವರಾಗಿದ್ದಾರೆ. ಈ ಕಾರಣದಿಂದ ಅವರು ಲೋಕ ಸಂಬಂಧವಾಗಿ ಮಾತನಾಡುತ್ತಾರೆ ಮತ್ತು ಲೋಕದವರು ಅವರ ಮಾತನ್ನು ಕೇಳುತ್ತಾರೆ.
6. ನಾವಂತೂ ದೇವರಿಗೆ ಸೇರಿದವರಾಗಿದ್ದೇವೆ. ದೇವರನ್ನು ಬಲ್ಲವರು ನಮ್ಮ ಮಾತನ್ನು ಕೇಳುತ್ತಾರೆ. ದೇವರಿಗೆ ಸೇರದವರು ನಮ್ಮ ಮಾತನ್ನು ಕೇಳುವುದಿಲ್ಲ. ಇದು ಸತ್ಯದ ಆತ್ಮ. ಅದು ಸುಳ್ಳಿನ ಆತ್ಮ ಎಂದು ಇದರಿಂದಲೇ ನಾವು ತಿಳಿದುಕೊಳ್ಳುತ್ತೇವೆ. [PE]
7. {#1ದೇವರ ಪ್ರೀತಿ ಮತ್ತು ನಮ್ಮ ಪ್ರೀತಿ } [PS]ಪ್ರಿಯರೇ, ನಾವು ಒಬ್ಬರನ್ನೊಬ್ಬರು ಪ್ರೀತಿಸೋಣ. ಏಕೆಂದರೆ ಪ್ರೀತಿಯು ದೇವರಿಂದಾಗಿದೆ. ಪ್ರೀತಿ ಮಾಡುವ ಪ್ರತಿಯೊಬ್ಬರು ದೇವರಿಂದ ಹುಟ್ಟಿದವರೂ ದೇವರನ್ನು ಬಲ್ಲವರೂ ಆಗಿದ್ದಾರೆ.
8. ಪ್ರೀತಿಯಿಲ್ಲದವರು ದೇವರನ್ನು ಬಲ್ಲವರಲ್ಲ. ಏಕೆಂದರೆ ದೇವರು ಪ್ರೀತಿಯಾಗಿದ್ದಾರೆ.
9. ತಮ್ಮ ಏಕೈಕ ಪುತ್ರ ಆಗಿರುವ ಕ್ರಿಸ್ತ ಯೇಸುವಿನ ಮೂಲಕ ನಾವು ಜೀವಿಸುವುದಕ್ಕಾಗಿ ದೇವರು ಅವರನ್ನು ಲೋಕಕ್ಕೆ ಕಳುಹಿಸಿದರು. ಇದರಿಂದಲೇ ದೇವರು ತಮ್ಮ ಪ್ರೀತಿಯನ್ನು ನಮ್ಮ ನಡುವೆ ತೋರಿಸಿದರು.
10. ಪ್ರೀತಿಯು ಇದಾಗಿರುತ್ತದೆ: ನಾವು ದೇವರನ್ನು ಪ್ರೀತಿಸಿದ್ದರಲ್ಲಿ ಅಲ್ಲ, ದೇವರೇ ನಮ್ಮನ್ನು ಪ್ರೀತಿಸಿ, ನಮ್ಮ ಪಾಪಗಳಿಗೆ ಪ್ರಾಯಶ್ಚಿತ್ತ ಬಲಿಯಾಗಿ ತಮ್ಮ ಪುತ್ರ ಆಗಿರುವ ಕ್ರಿಸ್ತ ಯೇಸುವನ್ನು ಕಳುಹಿಸಿ ಕೊಟ್ಟಿದ್ದರಲ್ಲಿಯೇ ಅವರ ಸತ್ಯ ಪ್ರೀತಿಯು ತೋರಿಬರುತ್ತದೆ.
11. ಪ್ರಿಯರೇ, ದೇವರು ನಮ್ಮನ್ನು ಹೀಗೆ ಪ್ರೀತಿಸಿದ ಮೇಲೆ ನಾವು ಸಹ ಒಬ್ಬರನ್ನೊಬ್ಬರು ಪ್ರೀತಿಸಬೇಕು.
12. ದೇವರನ್ನು ಯಾರೂ ಎಂದೂ ನೋಡಿಲ್ಲ, ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ, ದೇವರು ನಮ್ಮಲ್ಲಿ ನೆಲೆಗೊಂಡಿದ್ದಾರೆ ಮತ್ತು ಅವರ ಪ್ರೀತಿಯು ನಮ್ಮಲ್ಲಿ ಸಿದ್ಧಿಗೆ ಬರುತ್ತದೆ. [PE]
13. [PS]ದೇವರು ನಮಗೆ ತಮ್ಮ ಆತ್ಮವನ್ನು ಕೊಟ್ಟಿರುವುದರಿಂದಲೇ, ನಾವು ದೇವರಲ್ಲಿಯೂ ದೇವರು ನಮ್ಮಲ್ಲಿಯೂ ಬಾಳುವವರಾಗಿದ್ದಾರೆಂದು ತಿಳಿದುಕೊಳ್ಳುತ್ತೇವೆ.
14. ತಂದೆಯು ಮಗನನ್ನು ಲೋಕ ರಕ್ಷಕರನ್ನಾಗಿ ಕಳುಹಿಸಿಕೊಟ್ಟಿರುವುದನ್ನು ನಾವು ನೋಡಿದ್ದೇವೆ ಮತ್ತು ಅದಕ್ಕೆ ನಾವು ಸಾಕ್ಷಿ ಹೇಳುತ್ತೇವೆ.
15. ಯೇಸು ದೇವರ ಪುತ್ರರಾಗಿದ್ದಾರೆಂದು ಯಾರು ಒಪ್ಪಿಕೊಳ್ಳುತ್ತಾರೋ, ಅವರಲ್ಲಿ ದೇವರು ಬಾಳುತ್ತಾರೆ ಮತ್ತು ಅವರು ದೇವರಲ್ಲಿ ಬಾಳುವವರಾಗಿದ್ದಾರೆ.
16. ದೇವರು ನಮ್ಮನ್ನು ಪ್ರೀತಿಸುತ್ತಾರೆಂದು ನಾವು ತಿಳಿದುಕೊಂಡಿದ್ದೇವೆ ಮತ್ತು ಅದನ್ನು ನಂಬಿದ್ದೇವೆ. [PE][PS]ದೇವರು ಪ್ರೀತಿಯಾಗಿದ್ದಾರೆ, ಪ್ರೀತಿಯಲ್ಲಿ ಬಾಳುವವರು ದೇವರಲ್ಲಿ ಬಾಳುವವರಾಗಿದ್ದಾರೆ, ದೇವರು ಅವರಲ್ಲಿ ಬಾಳುವವರಾಗಿದ್ದಾರೆ.
17. ನ್ಯಾಯತೀರ್ಪಿನ ದಿನದಲ್ಲಿ ನಮಗೆ ಧೈರ್ಯವಿರುವಂತೆ ನಮ್ಮ ಪ್ರೀತಿಯು ಸಿದ್ಧಿಗೆ ಬಂತು. ಏಕೆಂದರೆ ಯೇಸು ಎಂಥವರಾಗಿದ್ದಾರೋ ನಾವು ಅಂಥವರಾಗಿಯೇ ಈ ಲೋಕದಲ್ಲಿದ್ದೇವೆ.
18. ಪ್ರೀತಿಯಲ್ಲಿ ಹೆದರಿಕೆಯಿಲ್ಲ ಆದರೆ ಪೂರ್ಣ ಪ್ರೀತಿಯು ಹೆದರಿಕೆಯನ್ನು ಹೊರಡಿಸಿಬಿಡುತ್ತದೆ. ಏಕೆಂದರೆ ಭಯವಿರುವಲ್ಲಿ ಯಾತನೆಯಿರುವುದು. ಭಯಪಡುವವನು ಪ್ರೀತಿಯಲ್ಲಿ ಸಿದ್ಧಿಗೆ ಬಂದವನಲ್ಲ. [PE]
19. [PS]ದೇವರು ಮೊದಲು ನಮ್ಮನ್ನು ಪ್ರೀತಿಸಿದ್ದರಿಂದಲೇ ನಾವು ದೇವರನ್ನು ಪ್ರೀತಿಸುತ್ತೇವೆ.
20. ಒಬ್ಬನು, “ನಾನು ದೇವರನ್ನು ಪ್ರೀತಿಸುತ್ತೇನೆ,” ಎಂದು ಹೇಳಿ ತನ್ನ ಸಹೋದರರನ್ನು ದ್ವೇಷ ಮಾಡಿದರೆ, ಅವನು ಸುಳ್ಳುಗಾರನಾಗಿದ್ದಾನೆ. ಏಕೆಂದರೆ ತಾನು ಕಾಣುವ ಸಹೋದರನನ್ನು ಪ್ರೀತಿಸದವನು, ಕಾಣದಿರುವ ದೇವರನ್ನು ಪ್ರೀತಿಸಲಾರನು.
21. ದೇವರನ್ನು ಪ್ರೀತಿಸುವವನು ತನ್ನ ಸಹೋದರನನ್ನೂ ಸಹೋದರಿಯನ್ನೂ ಪ್ರೀತಿಸಬೇಕೆಂಬ ಈ ಆಜ್ಞೆಯನ್ನು ನಾವು ದೇವರಿಂದ ಹೊಂದಿದ್ದೇವೆ. [PE]
ಒಟ್ಟು 5 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 4 / 5
1 2 3 4 5
ಆತ್ಮಗಳನ್ನು ಪರೀಕ್ಷಿಸತಕ್ಕದ್ದು 1 ಪ್ರಿಯ ಸ್ನೇಹಿತರೇ, ಅನೇಕ ಸುಳ್ಳು ಪ್ರವಾದಿಗಳು ಲೋಕದೊಳಗೆ ಹೋಗಿರುವುದರಿಂದ ನೀವು ಎಲ್ಲಾ ಆತ್ಮಗಳನ್ನು ನಂಬದೆ ಆಯಾ ಆತ್ಮಗಳು ದೇವರಿಗೆ ಸಂಬಂಧವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು. 2 ನೀವು ದೇವರಾತ್ಮನನ್ನು ಹೀಗೆ ಗುರುತಿಸಬಹುದು: ಕ್ರಿಸ್ತ ಯೇಸು ನರಮಾಂಸರಾಗಿ ಬಂದರೆಂದು ಒಪ್ಪಿಕೊಳ್ಳುವ ಪ್ರತಿಯೊಂದು ಆತ್ಮವು ದೇವರಿಂದ ಬಂದದ್ದು. 3 ನರಮಾಂಸದಲ್ಲಿ ಬಂದ ಯೇಸುವನ್ನು ಒಪ್ಪಿಕೊಳ್ಳದಿರುವ ಪ್ರತಿಯೊಂದು ಆತ್ಮವು ದೇವರಿಂದ ಬಂದದ್ದಲ್ಲ. ಅದು ಕ್ರಿಸ್ತವಿರೋಧಿಯ ಆತ್ಮವಾಗಿದೆ. ಅದು ಬರುವುದೆಂಬುದನ್ನು ನೀವು ಕೇಳಿದ್ದೀರಲ್ಲಾ. ಈಗಲೂ ಅದು ಲೋಕದಲ್ಲಿ ಇದೆ. 4 ಪ್ರಿಯ ಮಕ್ಕಳೇ, ನೀವು ದೇವರಿಗೆ ಸೇರಿದವರಾಗಿದ್ದೀರಿ, ಸುಳ್ಳು ಪ್ರವಾದಿಗಳನ್ನು ಜಯಿಸಿದ್ದೀರಿ. ಏಕೆಂದರೆ ನಿಮ್ಮಲ್ಲಿರುವ ದೇವರು ಲೋಕದಲ್ಲಿ ಇರುವವನಿಗಿಂತ ದೊಡ್ಡವರಾಗಿದ್ದಾರೆ. 5 ಅವರು ಲೋಕಕ್ಕೆ ಸೇರಿದವರಾಗಿದ್ದಾರೆ. ಈ ಕಾರಣದಿಂದ ಅವರು ಲೋಕ ಸಂಬಂಧವಾಗಿ ಮಾತನಾಡುತ್ತಾರೆ ಮತ್ತು ಲೋಕದವರು ಅವರ ಮಾತನ್ನು ಕೇಳುತ್ತಾರೆ. 6 ನಾವಂತೂ ದೇವರಿಗೆ ಸೇರಿದವರಾಗಿದ್ದೇವೆ. ದೇವರನ್ನು ಬಲ್ಲವರು ನಮ್ಮ ಮಾತನ್ನು ಕೇಳುತ್ತಾರೆ. ದೇವರಿಗೆ ಸೇರದವರು ನಮ್ಮ ಮಾತನ್ನು ಕೇಳುವುದಿಲ್ಲ. ಇದು ಸತ್ಯದ ಆತ್ಮ. ಅದು ಸುಳ್ಳಿನ ಆತ್ಮ ಎಂದು ಇದರಿಂದಲೇ ನಾವು ತಿಳಿದುಕೊಳ್ಳುತ್ತೇವೆ. ದೇವರ ಪ್ರೀತಿ ಮತ್ತು ನಮ್ಮ ಪ್ರೀತಿ 7 ಪ್ರಿಯರೇ, ನಾವು ಒಬ್ಬರನ್ನೊಬ್ಬರು ಪ್ರೀತಿಸೋಣ. ಏಕೆಂದರೆ ಪ್ರೀತಿಯು ದೇವರಿಂದಾಗಿದೆ. ಪ್ರೀತಿ ಮಾಡುವ ಪ್ರತಿಯೊಬ್ಬರು ದೇವರಿಂದ ಹುಟ್ಟಿದವರೂ ದೇವರನ್ನು ಬಲ್ಲವರೂ ಆಗಿದ್ದಾರೆ. 8 ಪ್ರೀತಿಯಿಲ್ಲದವರು ದೇವರನ್ನು ಬಲ್ಲವರಲ್ಲ. ಏಕೆಂದರೆ ದೇವರು ಪ್ರೀತಿಯಾಗಿದ್ದಾರೆ. 9 ತಮ್ಮ ಏಕೈಕ ಪುತ್ರ ಆಗಿರುವ ಕ್ರಿಸ್ತ ಯೇಸುವಿನ ಮೂಲಕ ನಾವು ಜೀವಿಸುವುದಕ್ಕಾಗಿ ದೇವರು ಅವರನ್ನು ಲೋಕಕ್ಕೆ ಕಳುಹಿಸಿದರು. ಇದರಿಂದಲೇ ದೇವರು ತಮ್ಮ ಪ್ರೀತಿಯನ್ನು ನಮ್ಮ ನಡುವೆ ತೋರಿಸಿದರು. 10 ಪ್ರೀತಿಯು ಇದಾಗಿರುತ್ತದೆ: ನಾವು ದೇವರನ್ನು ಪ್ರೀತಿಸಿದ್ದರಲ್ಲಿ ಅಲ್ಲ, ದೇವರೇ ನಮ್ಮನ್ನು ಪ್ರೀತಿಸಿ, ನಮ್ಮ ಪಾಪಗಳಿಗೆ ಪ್ರಾಯಶ್ಚಿತ್ತ ಬಲಿಯಾಗಿ ತಮ್ಮ ಪುತ್ರ ಆಗಿರುವ ಕ್ರಿಸ್ತ ಯೇಸುವನ್ನು ಕಳುಹಿಸಿ ಕೊಟ್ಟಿದ್ದರಲ್ಲಿಯೇ ಅವರ ಸತ್ಯ ಪ್ರೀತಿಯು ತೋರಿಬರುತ್ತದೆ. 11 ಪ್ರಿಯರೇ, ದೇವರು ನಮ್ಮನ್ನು ಹೀಗೆ ಪ್ರೀತಿಸಿದ ಮೇಲೆ ನಾವು ಸಹ ಒಬ್ಬರನ್ನೊಬ್ಬರು ಪ್ರೀತಿಸಬೇಕು. 12 ದೇವರನ್ನು ಯಾರೂ ಎಂದೂ ನೋಡಿಲ್ಲ, ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ, ದೇವರು ನಮ್ಮಲ್ಲಿ ನೆಲೆಗೊಂಡಿದ್ದಾರೆ ಮತ್ತು ಅವರ ಪ್ರೀತಿಯು ನಮ್ಮಲ್ಲಿ ಸಿದ್ಧಿಗೆ ಬರುತ್ತದೆ. 13 ದೇವರು ನಮಗೆ ತಮ್ಮ ಆತ್ಮವನ್ನು ಕೊಟ್ಟಿರುವುದರಿಂದಲೇ, ನಾವು ದೇವರಲ್ಲಿಯೂ ದೇವರು ನಮ್ಮಲ್ಲಿಯೂ ಬಾಳುವವರಾಗಿದ್ದಾರೆಂದು ತಿಳಿದುಕೊಳ್ಳುತ್ತೇವೆ. 14 ತಂದೆಯು ಮಗನನ್ನು ಲೋಕ ರಕ್ಷಕರನ್ನಾಗಿ ಕಳುಹಿಸಿಕೊಟ್ಟಿರುವುದನ್ನು ನಾವು ನೋಡಿದ್ದೇವೆ ಮತ್ತು ಅದಕ್ಕೆ ನಾವು ಸಾಕ್ಷಿ ಹೇಳುತ್ತೇವೆ. 15 ಯೇಸು ದೇವರ ಪುತ್ರರಾಗಿದ್ದಾರೆಂದು ಯಾರು ಒಪ್ಪಿಕೊಳ್ಳುತ್ತಾರೋ, ಅವರಲ್ಲಿ ದೇವರು ಬಾಳುತ್ತಾರೆ ಮತ್ತು ಅವರು ದೇವರಲ್ಲಿ ಬಾಳುವವರಾಗಿದ್ದಾರೆ. 16 ದೇವರು ನಮ್ಮನ್ನು ಪ್ರೀತಿಸುತ್ತಾರೆಂದು ನಾವು ತಿಳಿದುಕೊಂಡಿದ್ದೇವೆ ಮತ್ತು ಅದನ್ನು ನಂಬಿದ್ದೇವೆ. ದೇವರು ಪ್ರೀತಿಯಾಗಿದ್ದಾರೆ, ಪ್ರೀತಿಯಲ್ಲಿ ಬಾಳುವವರು ದೇವರಲ್ಲಿ ಬಾಳುವವರಾಗಿದ್ದಾರೆ, ದೇವರು ಅವರಲ್ಲಿ ಬಾಳುವವರಾಗಿದ್ದಾರೆ. 17 ನ್ಯಾಯತೀರ್ಪಿನ ದಿನದಲ್ಲಿ ನಮಗೆ ಧೈರ್ಯವಿರುವಂತೆ ನಮ್ಮ ಪ್ರೀತಿಯು ಸಿದ್ಧಿಗೆ ಬಂತು. ಏಕೆಂದರೆ ಯೇಸು ಎಂಥವರಾಗಿದ್ದಾರೋ ನಾವು ಅಂಥವರಾಗಿಯೇ ಈ ಲೋಕದಲ್ಲಿದ್ದೇವೆ. 18 ಪ್ರೀತಿಯಲ್ಲಿ ಹೆದರಿಕೆಯಿಲ್ಲ ಆದರೆ ಪೂರ್ಣ ಪ್ರೀತಿಯು ಹೆದರಿಕೆಯನ್ನು ಹೊರಡಿಸಿಬಿಡುತ್ತದೆ. ಏಕೆಂದರೆ ಭಯವಿರುವಲ್ಲಿ ಯಾತನೆಯಿರುವುದು. ಭಯಪಡುವವನು ಪ್ರೀತಿಯಲ್ಲಿ ಸಿದ್ಧಿಗೆ ಬಂದವನಲ್ಲ. 19 ದೇವರು ಮೊದಲು ನಮ್ಮನ್ನು ಪ್ರೀತಿಸಿದ್ದರಿಂದಲೇ ನಾವು ದೇವರನ್ನು ಪ್ರೀತಿಸುತ್ತೇವೆ. 20 ಒಬ್ಬನು, “ನಾನು ದೇವರನ್ನು ಪ್ರೀತಿಸುತ್ತೇನೆ,” ಎಂದು ಹೇಳಿ ತನ್ನ ಸಹೋದರರನ್ನು ದ್ವೇಷ ಮಾಡಿದರೆ, ಅವನು ಸುಳ್ಳುಗಾರನಾಗಿದ್ದಾನೆ. ಏಕೆಂದರೆ ತಾನು ಕಾಣುವ ಸಹೋದರನನ್ನು ಪ್ರೀತಿಸದವನು, ಕಾಣದಿರುವ ದೇವರನ್ನು ಪ್ರೀತಿಸಲಾರನು. 21 ದೇವರನ್ನು ಪ್ರೀತಿಸುವವನು ತನ್ನ ಸಹೋದರನನ್ನೂ ಸಹೋದರಿಯನ್ನೂ ಪ್ರೀತಿಸಬೇಕೆಂಬ ಈ ಆಜ್ಞೆಯನ್ನು ನಾವು ದೇವರಿಂದ ಹೊಂದಿದ್ದೇವೆ.
ಒಟ್ಟು 5 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 4 / 5
1 2 3 4 5
×

Alert

×

Kannada Letters Keypad References