ಪವಿತ್ರ ಬೈಬಲ್

ಓಪನ್ ಸಮಕಾಲೀನ ಆವೃತ್ತಿ (OCV)
1 ಅರಸುಗಳು
1. {#1ದೇವಾಲಯ ಕಟ್ಟಲು ಸಿದ್ಧತೆ } [PS]ಸೊಲೊಮೋನನು ತನ್ನ ತಂದೆಗೆ ಬದಲಾಗಿ ಅರಸನಾಗಲು ಅಭಿಷೇಕ ಪಡೆದಿದ್ದಾನೆಂದು ಟೈರಿನ ಅರಸನಾದ ಹೀರಾಮನು ಕೇಳಿದಾಗ, ಅವನು ತನ್ನ ರಾಜದೂತರನ್ನು ಸೊಲೊಮೋನನ ಬಳಿಗೆ ಕಳುಹಿಸಿದನು. ಏಕೆಂದರೆ ಹೀರಾಮನು ಯಾವಾಗಲೂ ದಾವೀದನಿಗೆ ಆಪ್ತಮಿತ್ರನಾಗಿದ್ದನು.
2. ಸೊಲೊಮೋನನು ರಾಜದೂತರ ಮುಖಾಂತರ ಹೀರಾಮನಿಗೆ ಈ ಸಂದೇಶವನ್ನು ಕಳುಹಿಸಿದನು: [PE]
3. [PMS] “ನನ್ನ ತಂದೆ ದಾವೀದನು ತನ್ನ ದೇವರಾದ ಯೆಹೋವ ದೇವರ ನಾಮಕ್ಕೆ ಆಲಯವನ್ನು ಕಟ್ಟಿಸಲಾರದೆ ಇದ್ದನೆಂದು ನೀನು ಬಲ್ಲೆ. ಏಕೆಂದರೆ ಯೆಹೋವ ದೇವರು ಅವನ ಶತ್ರುಗಳನ್ನು ಅವನ ಪಾದದ ಕೆಳಗೆ ಹಾಕುವವರೆಗೂ, ಅವನ ಸುತ್ತಲಿರುವ ಸಮಸ್ತ ದಿಕ್ಕುಗಳಲ್ಲಿ ಯುದ್ಧ ಉಂಟಾಯಿತು.
4. ಆದರೆ ಈಗ ನನ್ನ ದೇವರಾದ ಯೆಹೋವ ದೇವರು, ಶತ್ರುವಿನಿಂದ ತಗಲುವ ಕೇಡು ಒಂದಾದರೂ ಇಲ್ಲದ ಹಾಗೆ, ಸಮಸ್ತ ದಿಕ್ಕುಗಳಲ್ಲಿ ನನಗೆ ಸಮಾಧಾನವನ್ನು ಕೊಟ್ಟಿದ್ದಾರೆ.
5. ಆದ್ದರಿಂದ, ನನ್ನ ದೇವರಾದ ಯೆಹೋವ ದೇವರ ಹೆಸರಿಗೆ ಆಲಯವನ್ನು ಕಟ್ಟಿಸಬೇಕೆಂದಿದ್ದೇನೆ. ಅದರ ವಿಷಯವಾಗಿ ಯೆಹೋವ ದೇವರು ನನ್ನ ತಂದೆಯಾದ ದಾವೀದನಿಗೆ, ‘ನಿನಗೆ ಬದಲಾಗಿ ನಿನ್ನ ಸಿಂಹಾಸನದ ಮೇಲೆ ನಾನು ಕುಳ್ಳಿರಿಸುವ ನಿನ್ನ ಮಗನೇ ನನ್ನ ಹೆಸರಿಗೆ ದೇವಾಲಯವನ್ನು ಕಟ್ಟಿಸುವನು,’ ಎಂದು ಹೇಳಿದ್ದಾರಲ್ಲವೇ. [PME]
6. [PMS] “ಆದ್ದರಿಂದ ನೀನು ನನಗೋಸ್ಕರ ಲೆಬನೋನಿನಲ್ಲಿ ದೇವದಾರು ಮರಗಳನ್ನು ಕಡಿಯಲು ಆಜ್ಞಾಪಿಸು. ನನ್ನ ಸೇವಕರೂ, ನಿನ್ನ ಸೇವಕರೂ ಕೂಡ ಇರಲಿ. ನೀನು ಹೇಳಿದ ಪ್ರಕಾರ, ನಿನ್ನ ಸೇವಕರ ಕೂಲಿಯನ್ನು ಕೊಡುತ್ತೇನೆ. ಏಕೆಂದರೆ ನಮ್ಮಲ್ಲಿ ಸೀದೋನ್ಯರ ಹಾಗೆ ಮರವನ್ನು ಕಡಿಯಲು ತಿಳಿದವರಿಲ್ಲ ಎಂದು ನೀನು ಬಲ್ಲೆ,” ಎಂದು ಹೇಳಿದನು. [PME]
7.
8. [PS]ಹೀರಾಮನು ಸೊಲೊಮೋನನ ಮಾತುಗಳನ್ನು ಕೇಳಿದಾಗ ಬಹು ಸಂತೋಷಪಟ್ಟು, “ಈ ಮಹಾಜನರ ಮೇಲೆ ಜ್ಞಾನವುಳ್ಳ ಮಗನನ್ನು ದಾವೀದನಿಗೆ ಕೊಟ್ಟ ಯೆಹೋವ ದೇವರಿಗೆ ಇಂದು ಸ್ತೋತ್ರವಾಗಲಿ,” ಎಂದನು. [PE][PS]ಹೀರಾಮನು ಸೊಲೊಮೋನನಿಗೆ ಸಂದೇಶವನ್ನು ಕಳುಹಿಸಿ, [PE][PMS]“ನೀನು ಹೇಳಿ ಕಳುಹಿಸಿದ್ದನ್ನು ನಾನು ಕೇಳಿದ್ದೇನೆ. ದೇವದಾರು ಮರಗಳ ವಿಷಯವೂ, ತುರಾಯಿ ಮರಗಳ ವಿಷಯವೂ ನೀನು ಇಚ್ಛಿಸಿದ್ದನ್ನೆಲ್ಲಾ ನಾನು ಮಾಡುವೆನು.
9. ನನ್ನ ಸೇವಕರು ಅವುಗಳನ್ನು ಲೆಬನೋನಿನಿಂದ ಸಮುದ್ರಕ್ಕೆ ತಂದಮೇಲೆ, ನನಗೆ ನೇಮಿಸಿದ ಸ್ಥಳಕ್ಕೆ ತೆಪ್ಪವನ್ನು ಕಟ್ಟಿ, ಸಮುದ್ರದಿಂದ ಕಳುಹಿಸಿ, ಅಲ್ಲಿ ಒಪ್ಪಿಸುವ ಹಾಗೆ ಮಾಡುವೆನು. ನೀನು ಅವುಗಳನ್ನು ತೆಗೆದುಕೊಂಡು ನನ್ನ ಮನೆಯವರಿಗೊಸ್ಕರ ಆಹಾರವನ್ನು ಕೊಟ್ಟು, ನನ್ನ ಇಚ್ಛೆಯನ್ನು ತೀರಿಸುವೆ,” ಎಂದನು. [PME]
10. [PS]ಹೀಗೆಯೇ ಹೀರಾಮನು ದೇವದಾರು ಮರಗಳನ್ನೂ, ತುರಾಯಿ ಮರಗಳನ್ನೂ, ಸೊಲೊಮೋನನ ಇಚ್ಛೆಯ ಪ್ರಕಾರವೆಲ್ಲಾ ಕೊಟ್ಟನು.
11. ಸೊಲೊಮೋನನು ಹೀರಾಮನಿಗೆ ಅವನ ಮನೆಯವರ ಆಹಾರಕ್ಕೋಸ್ಕರ ಸುಮಾರು ಮೂರು ಸಾವಿರ ಆರನೂರು ಟನ್ ಗೋಧಿಯನ್ನೂ, ನಾಲ್ಕು ಲಕ್ಷ ನಲವತ್ತು ಸಾವಿರ ಲೀಟರ್ ಅಪ್ಪಟವಾದ ಎಣ್ಣೆಯನ್ನೂ ಕೊಟ್ಟನು. ಹೀಗೆಯೇ ಸೊಲೊಮೋನನು ಹೀರಾಮನಿಗೆ ಪ್ರತಿ ವರುಷ ಕೊಡುತ್ತಾ ಇದ್ದನು.
12. ಇದಲ್ಲದೆ ಯೆಹೋವ ದೇವರು ಸೊಲೊಮೋನನಿಗೆ ವಾಗ್ದಾನ ಮಾಡಿದಂತೆ ಜ್ಞಾನವನ್ನು ಕೊಟ್ಟರು. ಹೀರಾಮನಿಗೂ, ಸೊಲೊಮೋನನಿಗೂ ಸಮಾಧಾನ ಉಂಟಾಗಿತ್ತು. ಅವರಿಬ್ಬರೂ ಒಡಂಬಡಿಕೆಯನ್ನು ಮಾಡಿಕೊಂಡರು. [PE]
13. [PS]ಆಗ ಅರಸನಾದ ಸೊಲೊಮೋನನು ಸಮಸ್ತ ಇಸ್ರಾಯೇಲರೊಳಗಿಂದ ಆಳುಗಳನ್ನು ತೆಗೆದುಕೊಂಡನು. ಆ ಆಳುಗಳ ಲೆಕ್ಕವು ಮೂವತ್ತು ಸಾವಿರ ಜನವಾಗಿತ್ತು.
14. ಅವನು ಅವರನ್ನು ಲೆಬನೋನಿಗೆ ಕಳುಹಿಸಿದನು. ತಿಂಗಳು ತಿಂಗಳಿಗೂ ನೇಮಕದ ಪ್ರಕಾರ, ಹತ್ತು ಸಾವಿರ ಜನರನ್ನು ಕಳುಹಿಸಿದನು. ಅವರು ಒಂದು ತಿಂಗಳು ಲೆಬನೋನಿನಲ್ಲಿದ್ದು, ಎರಡು ತಿಂಗಳು ತಮ್ಮ ಮನೆಗಳಲ್ಲಿದ್ದರು. ಅದೋನೀರಾಮನು ಆಳುಗಳ ಮೇಲೆ ಯಜಮಾನನಾಗಿದ್ದನು.
15. ಇದಲ್ಲದೆ ಸೊಲೊಮೋನನಿಗೆ ಹೊರೆ ಹೊರುವವರು ಎಪ್ಪತ್ತು ಸಾವಿರವೂ, ಬೆಟ್ಟಗಳಲ್ಲಿ ಕಲ್ಲುಕುಟಿಗರು ಎಂಬತ್ತು ಸಾವಿರವೂ ಇದ್ದರು.
16. ಇದರ ಹೊರತಾಗಿ ಸೊಲೊಮೋನನ ಮುಖ್ಯವಾದ ಅಧಿಪತಿಗಳು ಕೆಲಸದ ಮೇಲೆ ಇದ್ದರು. ಕೆಲಸ ಮಾಡುವ ಜನರ ಮೇಲೆ ಮೂರು ಸಾವಿರದ ಮುನ್ನೂರು ಮೇಸ್ತ್ರಿಗಳಿದ್ದರು.
17. ಅರಸನು ಆಜ್ಞಾಪಿಸಿದ್ದರಿಂದ ದೊಡ್ಡ ಕಲ್ಲುಗಳನ್ನೂ, ಬೆಲೆಯುಳ್ಳ ಕಲ್ಲುಗಳನ್ನೂ ದೇವಾಲಯ ಅಸ್ತಿವಾರವನ್ನು ಹಾಕಲು ಕೆತ್ತಿದ ಕಲ್ಲುಗಳನ್ನು ತಂದರು.
18. ಸೊಲೊಮೋನನ ಶಿಲ್ಪಕಾರರೂ, ಹೀರಾಮನ ಶಿಲ್ಪಕಾರರೂ, ಗೆಬಾಲ್ಯರೂ ಅವುಗಳನ್ನು ಕಡಿದು, ಆಲಯವನ್ನು ಕಟ್ಟುವುದಕ್ಕೆ ಕಲ್ಲುಗಳನ್ನೂ, ಮರಗಳನ್ನೂ ಸಿದ್ಧಮಾಡಿದರು. [PE]
ಒಟ್ಟು 22 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 5 / 22
ದೇವಾಲಯ ಕಟ್ಟಲು ಸಿದ್ಧತೆ 1 ಸೊಲೊಮೋನನು ತನ್ನ ತಂದೆಗೆ ಬದಲಾಗಿ ಅರಸನಾಗಲು ಅಭಿಷೇಕ ಪಡೆದಿದ್ದಾನೆಂದು ಟೈರಿನ ಅರಸನಾದ ಹೀರಾಮನು ಕೇಳಿದಾಗ, ಅವನು ತನ್ನ ರಾಜದೂತರನ್ನು ಸೊಲೊಮೋನನ ಬಳಿಗೆ ಕಳುಹಿಸಿದನು. ಏಕೆಂದರೆ ಹೀರಾಮನು ಯಾವಾಗಲೂ ದಾವೀದನಿಗೆ ಆಪ್ತಮಿತ್ರನಾಗಿದ್ದನು. 2 ಸೊಲೊಮೋನನು ರಾಜದೂತರ ಮುಖಾಂತರ ಹೀರಾಮನಿಗೆ ಈ ಸಂದೇಶವನ್ನು ಕಳುಹಿಸಿದನು: 3 “ನನ್ನ ತಂದೆ ದಾವೀದನು ತನ್ನ ದೇವರಾದ ಯೆಹೋವ ದೇವರ ನಾಮಕ್ಕೆ ಆಲಯವನ್ನು ಕಟ್ಟಿಸಲಾರದೆ ಇದ್ದನೆಂದು ನೀನು ಬಲ್ಲೆ. ಏಕೆಂದರೆ ಯೆಹೋವ ದೇವರು ಅವನ ಶತ್ರುಗಳನ್ನು ಅವನ ಪಾದದ ಕೆಳಗೆ ಹಾಕುವವರೆಗೂ, ಅವನ ಸುತ್ತಲಿರುವ ಸಮಸ್ತ ದಿಕ್ಕುಗಳಲ್ಲಿ ಯುದ್ಧ ಉಂಟಾಯಿತು. 4 ಆದರೆ ಈಗ ನನ್ನ ದೇವರಾದ ಯೆಹೋವ ದೇವರು, ಶತ್ರುವಿನಿಂದ ತಗಲುವ ಕೇಡು ಒಂದಾದರೂ ಇಲ್ಲದ ಹಾಗೆ, ಸಮಸ್ತ ದಿಕ್ಕುಗಳಲ್ಲಿ ನನಗೆ ಸಮಾಧಾನವನ್ನು ಕೊಟ್ಟಿದ್ದಾರೆ. 5 ಆದ್ದರಿಂದ, ನನ್ನ ದೇವರಾದ ಯೆಹೋವ ದೇವರ ಹೆಸರಿಗೆ ಆಲಯವನ್ನು ಕಟ್ಟಿಸಬೇಕೆಂದಿದ್ದೇನೆ. ಅದರ ವಿಷಯವಾಗಿ ಯೆಹೋವ ದೇವರು ನನ್ನ ತಂದೆಯಾದ ದಾವೀದನಿಗೆ, ‘ನಿನಗೆ ಬದಲಾಗಿ ನಿನ್ನ ಸಿಂಹಾಸನದ ಮೇಲೆ ನಾನು ಕುಳ್ಳಿರಿಸುವ ನಿನ್ನ ಮಗನೇ ನನ್ನ ಹೆಸರಿಗೆ ದೇವಾಲಯವನ್ನು ಕಟ್ಟಿಸುವನು,’ ಎಂದು ಹೇಳಿದ್ದಾರಲ್ಲವೇ. 6 “ಆದ್ದರಿಂದ ನೀನು ನನಗೋಸ್ಕರ ಲೆಬನೋನಿನಲ್ಲಿ ದೇವದಾರು ಮರಗಳನ್ನು ಕಡಿಯಲು ಆಜ್ಞಾಪಿಸು. ನನ್ನ ಸೇವಕರೂ, ನಿನ್ನ ಸೇವಕರೂ ಕೂಡ ಇರಲಿ. ನೀನು ಹೇಳಿದ ಪ್ರಕಾರ, ನಿನ್ನ ಸೇವಕರ ಕೂಲಿಯನ್ನು ಕೊಡುತ್ತೇನೆ. ಏಕೆಂದರೆ ನಮ್ಮಲ್ಲಿ ಸೀದೋನ್ಯರ ಹಾಗೆ ಮರವನ್ನು ಕಡಿಯಲು ತಿಳಿದವರಿಲ್ಲ ಎಂದು ನೀನು ಬಲ್ಲೆ,” ಎಂದು ಹೇಳಿದನು. 7 8 ಹೀರಾಮನು ಸೊಲೊಮೋನನ ಮಾತುಗಳನ್ನು ಕೇಳಿದಾಗ ಬಹು ಸಂತೋಷಪಟ್ಟು, “ಈ ಮಹಾಜನರ ಮೇಲೆ ಜ್ಞಾನವುಳ್ಳ ಮಗನನ್ನು ದಾವೀದನಿಗೆ ಕೊಟ್ಟ ಯೆಹೋವ ದೇವರಿಗೆ ಇಂದು ಸ್ತೋತ್ರವಾಗಲಿ,” ಎಂದನು. ಹೀರಾಮನು ಸೊಲೊಮೋನನಿಗೆ ಸಂದೇಶವನ್ನು ಕಳುಹಿಸಿ, “ನೀನು ಹೇಳಿ ಕಳುಹಿಸಿದ್ದನ್ನು ನಾನು ಕೇಳಿದ್ದೇನೆ. ದೇವದಾರು ಮರಗಳ ವಿಷಯವೂ, ತುರಾಯಿ ಮರಗಳ ವಿಷಯವೂ ನೀನು ಇಚ್ಛಿಸಿದ್ದನ್ನೆಲ್ಲಾ ನಾನು ಮಾಡುವೆನು. 9 ನನ್ನ ಸೇವಕರು ಅವುಗಳನ್ನು ಲೆಬನೋನಿನಿಂದ ಸಮುದ್ರಕ್ಕೆ ತಂದಮೇಲೆ, ನನಗೆ ನೇಮಿಸಿದ ಸ್ಥಳಕ್ಕೆ ತೆಪ್ಪವನ್ನು ಕಟ್ಟಿ, ಸಮುದ್ರದಿಂದ ಕಳುಹಿಸಿ, ಅಲ್ಲಿ ಒಪ್ಪಿಸುವ ಹಾಗೆ ಮಾಡುವೆನು. ನೀನು ಅವುಗಳನ್ನು ತೆಗೆದುಕೊಂಡು ನನ್ನ ಮನೆಯವರಿಗೊಸ್ಕರ ಆಹಾರವನ್ನು ಕೊಟ್ಟು, ನನ್ನ ಇಚ್ಛೆಯನ್ನು ತೀರಿಸುವೆ,” ಎಂದನು. 10 ಹೀಗೆಯೇ ಹೀರಾಮನು ದೇವದಾರು ಮರಗಳನ್ನೂ, ತುರಾಯಿ ಮರಗಳನ್ನೂ, ಸೊಲೊಮೋನನ ಇಚ್ಛೆಯ ಪ್ರಕಾರವೆಲ್ಲಾ ಕೊಟ್ಟನು. 11 ಸೊಲೊಮೋನನು ಹೀರಾಮನಿಗೆ ಅವನ ಮನೆಯವರ ಆಹಾರಕ್ಕೋಸ್ಕರ ಸುಮಾರು ಮೂರು ಸಾವಿರ ಆರನೂರು ಟನ್ ಗೋಧಿಯನ್ನೂ, ನಾಲ್ಕು ಲಕ್ಷ ನಲವತ್ತು ಸಾವಿರ ಲೀಟರ್ ಅಪ್ಪಟವಾದ ಎಣ್ಣೆಯನ್ನೂ ಕೊಟ್ಟನು. ಹೀಗೆಯೇ ಸೊಲೊಮೋನನು ಹೀರಾಮನಿಗೆ ಪ್ರತಿ ವರುಷ ಕೊಡುತ್ತಾ ಇದ್ದನು. 12 ಇದಲ್ಲದೆ ಯೆಹೋವ ದೇವರು ಸೊಲೊಮೋನನಿಗೆ ವಾಗ್ದಾನ ಮಾಡಿದಂತೆ ಜ್ಞಾನವನ್ನು ಕೊಟ್ಟರು. ಹೀರಾಮನಿಗೂ, ಸೊಲೊಮೋನನಿಗೂ ಸಮಾಧಾನ ಉಂಟಾಗಿತ್ತು. ಅವರಿಬ್ಬರೂ ಒಡಂಬಡಿಕೆಯನ್ನು ಮಾಡಿಕೊಂಡರು. 13 ಆಗ ಅರಸನಾದ ಸೊಲೊಮೋನನು ಸಮಸ್ತ ಇಸ್ರಾಯೇಲರೊಳಗಿಂದ ಆಳುಗಳನ್ನು ತೆಗೆದುಕೊಂಡನು. ಆ ಆಳುಗಳ ಲೆಕ್ಕವು ಮೂವತ್ತು ಸಾವಿರ ಜನವಾಗಿತ್ತು. 14 ಅವನು ಅವರನ್ನು ಲೆಬನೋನಿಗೆ ಕಳುಹಿಸಿದನು. ತಿಂಗಳು ತಿಂಗಳಿಗೂ ನೇಮಕದ ಪ್ರಕಾರ, ಹತ್ತು ಸಾವಿರ ಜನರನ್ನು ಕಳುಹಿಸಿದನು. ಅವರು ಒಂದು ತಿಂಗಳು ಲೆಬನೋನಿನಲ್ಲಿದ್ದು, ಎರಡು ತಿಂಗಳು ತಮ್ಮ ಮನೆಗಳಲ್ಲಿದ್ದರು. ಅದೋನೀರಾಮನು ಆಳುಗಳ ಮೇಲೆ ಯಜಮಾನನಾಗಿದ್ದನು. 15 ಇದಲ್ಲದೆ ಸೊಲೊಮೋನನಿಗೆ ಹೊರೆ ಹೊರುವವರು ಎಪ್ಪತ್ತು ಸಾವಿರವೂ, ಬೆಟ್ಟಗಳಲ್ಲಿ ಕಲ್ಲುಕುಟಿಗರು ಎಂಬತ್ತು ಸಾವಿರವೂ ಇದ್ದರು. 16 ಇದರ ಹೊರತಾಗಿ ಸೊಲೊಮೋನನ ಮುಖ್ಯವಾದ ಅಧಿಪತಿಗಳು ಕೆಲಸದ ಮೇಲೆ ಇದ್ದರು. ಕೆಲಸ ಮಾಡುವ ಜನರ ಮೇಲೆ ಮೂರು ಸಾವಿರದ ಮುನ್ನೂರು ಮೇಸ್ತ್ರಿಗಳಿದ್ದರು. 17 ಅರಸನು ಆಜ್ಞಾಪಿಸಿದ್ದರಿಂದ ದೊಡ್ಡ ಕಲ್ಲುಗಳನ್ನೂ, ಬೆಲೆಯುಳ್ಳ ಕಲ್ಲುಗಳನ್ನೂ ದೇವಾಲಯ ಅಸ್ತಿವಾರವನ್ನು ಹಾಕಲು ಕೆತ್ತಿದ ಕಲ್ಲುಗಳನ್ನು ತಂದರು. 18 ಸೊಲೊಮೋನನ ಶಿಲ್ಪಕಾರರೂ, ಹೀರಾಮನ ಶಿಲ್ಪಕಾರರೂ, ಗೆಬಾಲ್ಯರೂ ಅವುಗಳನ್ನು ಕಡಿದು, ಆಲಯವನ್ನು ಕಟ್ಟುವುದಕ್ಕೆ ಕಲ್ಲುಗಳನ್ನೂ, ಮರಗಳನ್ನೂ ಸಿದ್ಧಮಾಡಿದರು.
ಒಟ್ಟು 22 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 5 / 22
×

Alert

×

Kannada Letters Keypad References