ಪವಿತ್ರ ಬೈಬಲ್

ಓಪನ್ ಸಮಕಾಲೀನ ಆವೃತ್ತಿ (OCV)
1 ಸಮುವೇಲನು
1. {#1ಅಷ್ಡೋದ್ ಮತ್ತು ಎಕ್ರೋನಿನಲ್ಲಿ ಮಂಜೂಷ } [PS]ಫಿಲಿಷ್ಟಿಯರು ದೇವರ ಮಂಜೂಷವನ್ನು ತೆಗೆದುಕೊಂಡು ಎಬೆನೆಜೆರಿನಿಂದ ಅಷ್ಡೋದಿಗೆ ತಂದರು.
2. ಫಿಲಿಷ್ಟಿಯರು ದೇವರ ಮಂಜೂಷವನ್ನು ದಾಗೋನನ ಗುಡಿಗೆ ತೆಗೆದುಕೊಂಡುಹೋಗಿ, ದಾಗೋನನ ಪಕ್ಕದಲ್ಲಿಟ್ಟರು.
3. ಅಷ್ಡೋದ್ಯರು ಮಾರನೆಯ ದಿವಸ ಎದ್ದಾಗ, ದಾಗೋನ್ ವಿಗ್ರಹ ಯೆಹೋವ ದೇವರ ಮಂಜೂಷದ ಮುಂದೆ ಬೋರಲು ಬಿದ್ದಿತ್ತು.
4. ಆಗ ಅವರು ದಾಗೋನನನ್ನು ತೆಗೆದು, ಅದನ್ನು ಅದರ ಸ್ಥಳದಲ್ಲಿ ತಿರುಗಿ ಇಟ್ಟರು. ಅವರು ಮಾರನೆಯ ದಿವಸ ಬೆಳಿಗ್ಗೆ ಎದ್ದಾಗ, ದಾಗೋನ್ ಯೆಹೋವ ದೇವರ ಮಂಜೂಷದ ಮುಂದೆ ಬೋರಲು ಬಿದ್ದಿತ್ತು. ದಾಗೋನನ ತಲೆಯೂ ಅದರ ಎರಡು ಕೈಗಳೂ ಕತ್ತರಿಸಲಾಗಿ ಹೊಸ್ತಿಲ ಮೇಲೆ ಬಿದ್ದಿದ್ದವು.
5. ಮುಂಡ ಮಾತ್ರ ಅದಕ್ಕೆ ಉಳಿದಿತ್ತು. ಆದ್ದರಿಂದ ಈ ದಿನದವರೆಗೂ ದಾಗೋನನ ಯಾಜಕರೂ, ದಾಗೋನನ ಗುಡಿಯನ್ನು ಪ್ರವೇಶಿಸುವವರೆಲ್ಲರೂ ಅಷ್ಡೋದಿನಲ್ಲಿರುವ ದಾಗೋನನ ಹೊಸ್ತಿಲನ್ನು ತುಳಿಯುವುದಿಲ್ಲ. [PE]
6. [PS]ಯೆಹೋವ ದೇವರ ಕೈ ಅಷ್ಡೋದಿನವರ ಮೇಲೆ ಮಹಾ ಭಾರವಾಗಿತ್ತು. ಅವರನ್ನು ನಾಶಮಾಡಿ, ಅಷ್ಡೋದನ್ನೂ, ಅದರ ಮೇರೆಗಳನ್ನೂ ಗಡ್ಡೆರೋಗದಿಂದಲೂ ಬಾಧಿಸಿದರು.
7. ಈ ಪ್ರಕಾರ ಸಂಭವಿಸಿದ್ದನ್ನು ಅಷ್ಡೋದಿನ ಜನರು ಕಂಡಾಗ, “ಇಸ್ರಾಯೇಲ್ ದೇವರ ಮಂಜೂಷವು ನಮ್ಮ ಬಳಿಯಲ್ಲಿ ಇರಬಾರದು. ಏಕೆಂದರೆ ಅವರ ಕೈ ನಮ್ಮ ಮೇಲೆಯೂ, ನಮ್ಮ ದೇವರಾದ ದಾಗೋನನ ಮೇಲೆಯೂ ಕಠಿಣವಾಗಿದೆ,” ಎಂದರು.
8. ಅವರು ಫಿಲಿಷ್ಟಿಯರ ಅಧಿಪತಿಗಳೆಲ್ಲರನ್ನು ತಮ್ಮ ಬಳಿಗೆ ಕರೆಯಕಳುಹಿಸಿ ಅವರಿಗೆ, “ಇಸ್ರಾಯೇಲ್ ದೇವರ ಮಂಜೂಷವನ್ನು ಏನು ಮಾಡೋಣ?” ಎಂದರು. ಅದಕ್ಕವರು, “ಇಸ್ರಾಯೇಲ್ ದೇವರ ಮಂಜೂಷವು ಗತ್ ಊರಿಗೆ ಕಳುಹಿಸಬೇಕು,” ಎಂದರು. [PE]
9. [PS]ಅವರು ಇಸ್ರಾಯೇಲ್ ದೇವರ ಮಂಜೂಷವನ್ನು ಅಲ್ಲಿಗೆ ಕಳುಹಿಸಿದರು. [PE][PS]ಆದರೆ ಅವರು ಅದನ್ನು ತಂದ ತರುವಾಯ, ಯೆಹೋವ ದೇವರ ಕೈ ಆ ಪಟ್ಟಣದ ಮೇಲೆ ಬಂದು ಮಹಾ ನಾಶಮಾಡಿತು. ಇದಲ್ಲದೆ ಯೆಹೋವ ದೇವರು ಚಿಕ್ಕವರಿಂದ ಹಿರಿಯರವರೆಗೂ ಆ ಪಟ್ಟಣದ ಮನುಷ್ಯರನ್ನು ಹೊಡೆದರು. ಅವರಿಗೆ ಗಡ್ಡೆರೋಗ ಬಂದಿತು.
10. ಅವರು ದೇವರ ಮಂಜೂಷವನ್ನು ಎಕ್ರೋನಿಗೆ ಕಳುಹಿಸಿದರು. [PE][PS]ದೇವರ ಮಂಜೂಷವು ಎಕ್ರೋನಿಗೆ ಬಂದಾಗ, ಎಕ್ರೋನ್ಯರು, “ನಮ್ಮನ್ನೂ, ನಮ್ಮ ಜನರನ್ನೂ ಕೊಂದುಹಾಕಬೇಕೆಂದು ಇಸ್ರಾಯೇಲ್ ದೇವರ ಮಂಜೂಷವನ್ನು ನಮ್ಮ ಬಳಿಗೆ ತಂದರು,” ಎಂದು ಕೂಗಿ ಹೇಳಿದರು.
11. ಆಗ ಆ ಇಡೀ ಪಟ್ಟಣಕ್ಕೆ ಮರಣಾಂತಿಕ ವಿನಾಶ ಉಂಟಾಗಿ, ದೇವರ ಕೈ ಅಲ್ಲಿ ಮಹಾಬಾಧಕವಾಗಿದ್ದರಿಂದ ಅವರು ಫಿಲಿಷ್ಟಿಯರ ಅಧಿಪತಿಗಳೆಲ್ಲರನ್ನು ಒಟ್ಟುಗೂಡಿಸಿ, “ಇಸ್ರಾಯೇಲ್ ದೇವರ ಮಂಜೂಷವು ನಮ್ಮನ್ನೂ, ನಮ್ಮ ಜನರನ್ನೂ ಕೊಂದು ಹಾಕದ ಹಾಗೆ ನೀವು ಅದನ್ನು ಅದರ ಸ್ವಸ್ಥಳಕ್ಕೆ ತಿರುಗಿ ಹೋಗುವಂತೆ ಕಳುಹಿಸಿಬಿಡಿರಿ,” ಎಂದರು.
12. ಉಳಿದವರು ಸತ್ತು ಹೋಗದೆ ಗಡ್ಡೆರೋಗದಿಂದ ಬಾಧಿತರಾದರು, ಆ ಪಟ್ಟಣದ ಗೋಳಾಟವು ಆಕಾಶಕ್ಕೆ ಮುಟ್ಟಿತು. [PE]
ಒಟ್ಟು 31 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 5 / 31
ಅಷ್ಡೋದ್ ಮತ್ತು ಎಕ್ರೋನಿನಲ್ಲಿ ಮಂಜೂಷ 1 ಫಿಲಿಷ್ಟಿಯರು ದೇವರ ಮಂಜೂಷವನ್ನು ತೆಗೆದುಕೊಂಡು ಎಬೆನೆಜೆರಿನಿಂದ ಅಷ್ಡೋದಿಗೆ ತಂದರು. 2 ಫಿಲಿಷ್ಟಿಯರು ದೇವರ ಮಂಜೂಷವನ್ನು ದಾಗೋನನ ಗುಡಿಗೆ ತೆಗೆದುಕೊಂಡುಹೋಗಿ, ದಾಗೋನನ ಪಕ್ಕದಲ್ಲಿಟ್ಟರು. 3 ಅಷ್ಡೋದ್ಯರು ಮಾರನೆಯ ದಿವಸ ಎದ್ದಾಗ, ದಾಗೋನ್ ವಿಗ್ರಹ ಯೆಹೋವ ದೇವರ ಮಂಜೂಷದ ಮುಂದೆ ಬೋರಲು ಬಿದ್ದಿತ್ತು. 4 ಆಗ ಅವರು ದಾಗೋನನನ್ನು ತೆಗೆದು, ಅದನ್ನು ಅದರ ಸ್ಥಳದಲ್ಲಿ ತಿರುಗಿ ಇಟ್ಟರು. ಅವರು ಮಾರನೆಯ ದಿವಸ ಬೆಳಿಗ್ಗೆ ಎದ್ದಾಗ, ದಾಗೋನ್ ಯೆಹೋವ ದೇವರ ಮಂಜೂಷದ ಮುಂದೆ ಬೋರಲು ಬಿದ್ದಿತ್ತು. ದಾಗೋನನ ತಲೆಯೂ ಅದರ ಎರಡು ಕೈಗಳೂ ಕತ್ತರಿಸಲಾಗಿ ಹೊಸ್ತಿಲ ಮೇಲೆ ಬಿದ್ದಿದ್ದವು. 5 ಮುಂಡ ಮಾತ್ರ ಅದಕ್ಕೆ ಉಳಿದಿತ್ತು. ಆದ್ದರಿಂದ ಈ ದಿನದವರೆಗೂ ದಾಗೋನನ ಯಾಜಕರೂ, ದಾಗೋನನ ಗುಡಿಯನ್ನು ಪ್ರವೇಶಿಸುವವರೆಲ್ಲರೂ ಅಷ್ಡೋದಿನಲ್ಲಿರುವ ದಾಗೋನನ ಹೊಸ್ತಿಲನ್ನು ತುಳಿಯುವುದಿಲ್ಲ. 6 ಯೆಹೋವ ದೇವರ ಕೈ ಅಷ್ಡೋದಿನವರ ಮೇಲೆ ಮಹಾ ಭಾರವಾಗಿತ್ತು. ಅವರನ್ನು ನಾಶಮಾಡಿ, ಅಷ್ಡೋದನ್ನೂ, ಅದರ ಮೇರೆಗಳನ್ನೂ ಗಡ್ಡೆರೋಗದಿಂದಲೂ ಬಾಧಿಸಿದರು. 7 ಈ ಪ್ರಕಾರ ಸಂಭವಿಸಿದ್ದನ್ನು ಅಷ್ಡೋದಿನ ಜನರು ಕಂಡಾಗ, “ಇಸ್ರಾಯೇಲ್ ದೇವರ ಮಂಜೂಷವು ನಮ್ಮ ಬಳಿಯಲ್ಲಿ ಇರಬಾರದು. ಏಕೆಂದರೆ ಅವರ ಕೈ ನಮ್ಮ ಮೇಲೆಯೂ, ನಮ್ಮ ದೇವರಾದ ದಾಗೋನನ ಮೇಲೆಯೂ ಕಠಿಣವಾಗಿದೆ,” ಎಂದರು. 8 ಅವರು ಫಿಲಿಷ್ಟಿಯರ ಅಧಿಪತಿಗಳೆಲ್ಲರನ್ನು ತಮ್ಮ ಬಳಿಗೆ ಕರೆಯಕಳುಹಿಸಿ ಅವರಿಗೆ, “ಇಸ್ರಾಯೇಲ್ ದೇವರ ಮಂಜೂಷವನ್ನು ಏನು ಮಾಡೋಣ?” ಎಂದರು. ಅದಕ್ಕವರು, “ಇಸ್ರಾಯೇಲ್ ದೇವರ ಮಂಜೂಷವು ಗತ್ ಊರಿಗೆ ಕಳುಹಿಸಬೇಕು,” ಎಂದರು. 9 ಅವರು ಇಸ್ರಾಯೇಲ್ ದೇವರ ಮಂಜೂಷವನ್ನು ಅಲ್ಲಿಗೆ ಕಳುಹಿಸಿದರು. ಆದರೆ ಅವರು ಅದನ್ನು ತಂದ ತರುವಾಯ, ಯೆಹೋವ ದೇವರ ಕೈ ಆ ಪಟ್ಟಣದ ಮೇಲೆ ಬಂದು ಮಹಾ ನಾಶಮಾಡಿತು. ಇದಲ್ಲದೆ ಯೆಹೋವ ದೇವರು ಚಿಕ್ಕವರಿಂದ ಹಿರಿಯರವರೆಗೂ ಆ ಪಟ್ಟಣದ ಮನುಷ್ಯರನ್ನು ಹೊಡೆದರು. ಅವರಿಗೆ ಗಡ್ಡೆರೋಗ ಬಂದಿತು. 10 ಅವರು ದೇವರ ಮಂಜೂಷವನ್ನು ಎಕ್ರೋನಿಗೆ ಕಳುಹಿಸಿದರು. ದೇವರ ಮಂಜೂಷವು ಎಕ್ರೋನಿಗೆ ಬಂದಾಗ, ಎಕ್ರೋನ್ಯರು, “ನಮ್ಮನ್ನೂ, ನಮ್ಮ ಜನರನ್ನೂ ಕೊಂದುಹಾಕಬೇಕೆಂದು ಇಸ್ರಾಯೇಲ್ ದೇವರ ಮಂಜೂಷವನ್ನು ನಮ್ಮ ಬಳಿಗೆ ತಂದರು,” ಎಂದು ಕೂಗಿ ಹೇಳಿದರು. 11 ಆಗ ಆ ಇಡೀ ಪಟ್ಟಣಕ್ಕೆ ಮರಣಾಂತಿಕ ವಿನಾಶ ಉಂಟಾಗಿ, ದೇವರ ಕೈ ಅಲ್ಲಿ ಮಹಾಬಾಧಕವಾಗಿದ್ದರಿಂದ ಅವರು ಫಿಲಿಷ್ಟಿಯರ ಅಧಿಪತಿಗಳೆಲ್ಲರನ್ನು ಒಟ್ಟುಗೂಡಿಸಿ, “ಇಸ್ರಾಯೇಲ್ ದೇವರ ಮಂಜೂಷವು ನಮ್ಮನ್ನೂ, ನಮ್ಮ ಜನರನ್ನೂ ಕೊಂದು ಹಾಕದ ಹಾಗೆ ನೀವು ಅದನ್ನು ಅದರ ಸ್ವಸ್ಥಳಕ್ಕೆ ತಿರುಗಿ ಹೋಗುವಂತೆ ಕಳುಹಿಸಿಬಿಡಿರಿ,” ಎಂದರು. 12 ಉಳಿದವರು ಸತ್ತು ಹೋಗದೆ ಗಡ್ಡೆರೋಗದಿಂದ ಬಾಧಿತರಾದರು, ಆ ಪಟ್ಟಣದ ಗೋಳಾಟವು ಆಕಾಶಕ್ಕೆ ಮುಟ್ಟಿತು.
ಒಟ್ಟು 31 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 5 / 31
×

Alert

×

Kannada Letters Keypad References