ಪವಿತ್ರ ಬೈಬಲ್

ಓಪನ್ ಸಮಕಾಲೀನ ಆವೃತ್ತಿ (OCV)
1 ತಿಮೊಥೆಯನಿಗೆ
1. {#1ವಿಧವೆಯರ, ಹಿರಿಯರ, ಗುಲಾಮರ ಬಗ್ಗೆ ಸಲಹೆಗಳು } [PS]ವೃದ್ಧನನ್ನು ಗದರಿಸದೆ ತಂದೆಯಂತೆಯೂ ಯೌವನಸ್ಥರನ್ನು ಸಹೋದರರಂತೆಯೂ
2. ವೃದ್ಧ ಸ್ತ್ರೀಯರನ್ನು ತಾಯಿಯಂತೆಯೂ ಯೌವನ ಸ್ತ್ರೀಯರನ್ನು ಪೂರ್ಣ ಪವಿತ್ರತೆಯಿಂದ ಸಹೋದರಿಯರಂತೆಯೂ ಅವರವರಿಗೆ ಬುದ್ಧಿ ಹೇಳು. [PE]
3. [PS]ನಿಜವಾಗಿಯೂ ಕಷ್ಟದಲ್ಲಿರುವ ವಿಧವೆಯರನ್ನು ಗುರುತಿಸಿ ಅವರಿಗೆ ಸಹಾಯಮಾಡು.
4. ಆದರೆ ಯಾವ ವಿಧವೆಗಾದರೂ ಮಕ್ಕಳಾಗಲಿ, ಮೊಮ್ಮಕ್ಕಳಾಗಲಿ ಇದ್ದರೆ ಅವರೇ ಮೊದಲು ತಮ್ಮ ಮನೆಯಲ್ಲಿ ಭಕ್ತಿಯಿಂದಿರುವುದಕ್ಕೂ ತಂದೆತಾಯಿಗಳಿಗೆ ಪ್ರತ್ಯುಪಕಾರ ಮಾಡುವುದಕ್ಕೂ ಕಲಿತುಕೊಳ್ಳಲಿ. ಇದು ದೇವರ ದೃಷ್ಟಿಯಲ್ಲಿ ಮೆಚ್ಚಿಕೆಯಾದದ್ದು.
5. ನಿಜವಾಗಿಯೂ ಕಷ್ಟದಲ್ಲಿರುವ ವಿಧವೆಯು ದೇವರ ಮೇಲೆ ನಿರೀಕ್ಷೆಯನ್ನಿಟ್ಟು ಹಗಲು ಇರುಳು ವಿಜ್ಞಾಪನೆಗಳಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನೆಲೆಗೊಂಡಿರುವಳು.
6. ಆದರೆ ಭೋಗಿಯಾಗಿರುವ ವಿಧವೆಯು ಬದುಕಿರುವಾಗಲೂ ಸತ್ತವಳೇ.
7. ವಿಧವೆಯರು ನಿಂದೆಗೆ ಗುರಿಯಾಗದಂತೆ ಇವುಗಳನ್ನು ಆಜ್ಞಾಪಿಸು.
8. ಯಾವನಾದರೂ ಸ್ವಂತದವರನ್ನು ವಿಶೇಷವಾಗಿ ತನ್ನ ಮನೆಯವರನ್ನು ಸಂರಕ್ಷಿಸದೆ ಹೋದರೆ ಅವನು ನಂಬಿಕೆಯನ್ನು ಅಲ್ಲಗಳೆದವನೂ ಅವಿಶ್ವಾಸಿಗಿಂತ ನೀಚನೂ ಆಗಿದ್ದಾನೆ. [PE]
9. [PS]ವಯಸ್ಸಿನಲ್ಲಿ ಅರವತ್ತಕ್ಕೆ ಕಡಿಮೆಯಿಲ್ಲದ ವಿಧವೆಯರನ್ನು ಮಾತ್ರ ವಿಧವೆಯರ ಪಟ್ಟಿಯಲ್ಲಿ ಸೇರಿಸು. ಅಂಥವಳು ಗಂಡನಿಗೆ ನಂಬಿಗಸ್ತಳಾಗಿದ್ದಿರಬೇಕು.
10. ಆಕೆಯು ಮಕ್ಕಳನ್ನು ಸಾಕಿದವಳೂ ಅತಿಥಿ ಸತ್ಕಾರ ಮಾಡಿದವಳೂ ಭಕ್ತರ ಪಾದಗಳನ್ನು ತೊಳೆದವಳೂ ಸಂಕಟದಲ್ಲಿದ್ದವರಿಗೆ ಸಹಾಯ ಮಾಡಿದವಳೂ ಆಗಿರಬೇಕು. ಹೀಗೆ ಪ್ರತಿಯೊಂದು ಸತ್ಕ್ರಿಯೆಗಳಿಗೆ ಹೆಸರಾದವಳೂ ಆಗಿರಬೇಕು. [PE]
11. [PS]ಆದರೆ ಪ್ರಾಯದ ವಿಧವೆಯರನ್ನು ಪಟ್ಟಿಯಲ್ಲಿ ಸೇರಿಸಬೇಡ. ಏಕೆಂದರೆ ಅವರಲ್ಲಿ ದೈಹಿಕ ಅಪೇಕ್ಷೆಗಳು ಕ್ರಿಸ್ತ ಯೇಸುವಿನ ಮೇಲಿಟ್ಟ ಅವರ ಪ್ರತಿಷ್ಠೆಯನ್ನು ಸೋಲಿಸಿ, ಅವರು ಮದುವೆ ಮಾಡಿಕೊಳ್ಳುವಂತೆ ಮಾಡುವವು.
12. ಅಂಥವರು ತಮ್ಮ ಮೊದಲಿನ ನಂಬಿಕೆಯನ್ನು ಬಿಟ್ಟಿದ್ದರಿಂದ ತೀರ್ಪಿಗೆ ಗುರಿಯಾಗುವರು.
13. ಇದಲ್ಲದೆ ಅವರು ಮನೆಯಿಂದ ಮನೆಗೆ ತಿರುಗಾಡುತ್ತಾ ಸೋಮಾರಿತನವನ್ನು ಕಲಿಯುತ್ತಾರೆ. ಸೋಮಾರಿಗಳಾಗುವುದಷ್ಟೇ ಅಲ್ಲ, ಹರಟೆ ಮಾತನಾಡುವವರೂ ಇತರರ ಕೆಲಸದಲ್ಲಿ ತಲೆಹಾಕುವವರಾಗಿ ಆಡಬಾರದ ಮಾತುಗಳನ್ನಾಡುವವರೂ ಆಗುತ್ತಾರೆ.
14. ಆದ್ದರಿಂದ ಯೌವನಸ್ಥ ವಿಧವೆಯರು ಮದುವೆಮಾಡಿಕೊಂಡು, ಮಕ್ಕಳನ್ನು ಹೆತ್ತು, ಮನೆಯ ಕೆಲಸಮಾಡಿ, ವಿರೋಧಿಯ ನಿಂದೆಗೆ ಆಸ್ಪದ ಕೊಡಬಾರದೆಂಬುದೇ ನನ್ನ ಅಪೇಕ್ಷೆ.
15. ಈಗಾಗಲೇ ಕೆಲವರು ದಾರಿತಪ್ಪಿ ಸೈತಾನನನ್ನು ಹಿಂಬಾಲಿಸಿದ್ದಾರೆ. [PE]
16.
17. [PS]ವಿಶ್ವಾಸಿಯಾದ ಸ್ತ್ರೀಯ ಕುಟುಂಬದಲ್ಲಿ ವಿಧವೆಯರಿದ್ದರೆ, ಆಕೆ ಇಂಥವರನ್ನು ಸಂರಕ್ಷಿಸಲಿ. ಸಭೆಯು ದಿಕ್ಕಿಲ್ಲದ ವಿಧವೆಯರನ್ನು ಸಂರಕ್ಷಿಸಬೇಕಾಗಿರುವುದರಿಂದ ಆ ಭಾರವನ್ನು ಸಭೆಯ ಮೇಲೆ ಹಾಕಬಾರದು. [PE][PS]ಸಭಾಕಾರ್ಯಗಳನ್ನು ಸರಿಯಾಗಿ ನಡೆಸುತ್ತಿರುವ ಹಿರಿಯರು, ವಿಶೇಷವಾಗಿ ವಾಕ್ಯದಲ್ಲಿಯೂ ಬೋಧನೆಯಲ್ಲಿಯೂ ಶ್ರಮಿಸುತ್ತಿರುವವರು ಇಮ್ಮಡಿಯಾದ ಗೌರವಕ್ಕೆ ಯೋಗ್ಯರೆಂದು ಎಣಿಸಬೇಕು.
18. ಏಕೆಂದರೆ, “ಕಣ ತುಳಿಯುವ ಎತ್ತಿನ ಬಾಯನ್ನು ಕಟ್ಟಬಾರದು!”[* ಧರ್ಮೋ 25:4 ] ಎಂತಲೂ, “ಕೆಲಸದವನು ತನ್ನ ಕೂಲಿಗೆ ಯೋಗ್ಯನಾಗಿದ್ದಾನೆ!” [† ಲೂಕ 10:7 ] ಎಂತಲೂ ಪವಿತ್ರ ವೇದದಲ್ಲಿ ಹೇಳಿದೆಯಲ್ಲಾ.
19. ಹಿರಿಯನ ಮೇಲೆ ಯಾರಾದರೂ ದೂರು ಹೇಳಿದರೆ, ಇಬ್ಬರ ಇಲ್ಲವೆ ಮೂವರ ಸಾಕ್ಷಿ ಇಲ್ಲದೆ ಅದನ್ನು ಅಂಗೀಕರಿಸಬೇಡ.
20. ಪಾಪಮಾಡುವ ಹಿರಿಯರನ್ನು ಎಲ್ಲರ ಮುಂದೆಯೇ ಗದರಿಸು. ಇದರಿಂದ ಇತರರಿಗೂ ಎಚ್ಚರಿಕೆಯಾಗುವುದು.
21. ನೀನು ವಿಚಾರಿಸುವುದಕ್ಕೆ ಮೊದಲೇ ತೀರ್ಮಾನಿಸದೆಯೂ ಪಕ್ಷಪಾತದಿಂದ ಏನೂ ಮಾಡದೆಯೂ ಇವುಗಳನ್ನು ಕೈಗೊಳ್ಳಬೇಕೆಂದು ದೇವರ ಮುಂದೆಯೂ ಕ್ರಿಸ್ತ ಯೇಸುವಿನ ಮುಂದೆಯೂ ಆಯ್ಕೆಯಾದ ದೂತರ ಮುಂದೆಯೂ ಖಂಡಿತವಾಗಿ ನಾನು ಹೇಳುತ್ತೇನೆ. [PE]
22.
23. [PS]ಅವಸರದಿಂದ ಯಾರ ಮೇಲೆಯೂ ಹಸ್ತವನ್ನಿಟ್ಟು, ಸಭಾ ಹಿರಿಯರನ್ನಾಗಿ ನೇಮಿಸಬೇಡ. ಇತರರ ಪಾಪಗಳಲ್ಲಿ ಪಾಲುಗಾರನಾಗಬೇಡ. ನಿನ್ನನ್ನು ಶುದ್ಧನಾಗಿ ಕಾಪಾಡಿಕೋ. [PE]
24. [PS]ನೀರನ್ನು ಮಾತ್ರ ಕುಡಿಯದೆ ನಿನ್ನ ಹೊಟ್ಟೆಯ ನಿಮಿತ್ತವಾಗಿಯೂ ನಿನಗೆ ಆಗಾಗ್ಗೆ ಉಂಟಾಗುವ ಬಲಹೀನತೆಗಳಿಗಾಗಿಯೂ ಸ್ವಲ್ಪ ದ್ರಾಕ್ಷಾರಸವನ್ನು ಉಪಯೋಗಿಸು. [PE][PS]ಕೆಲವರ ಪಾಪಗಳು ತೀರ್ಪಿಗೆ ಮುಂಚೆಯೇ ಬಹಿರಂಗವಾಗುತ್ತವೆ. ಇನ್ನು ಕೆಲವರ ಪಾಪಗಳು ಕ್ರಮೇಣವಾಗಿ ಕಂಡುಬರುತ್ತವೆ.
25. ಅದರಂತೆಯೇ ಕೆಲವರ ಒಳ್ಳೆಯ ಕ್ರಿಯೆಗಳು ಮುಂಚೆಯೇ ಪ್ರತ್ಯಕ್ಷವಾಗಿರುತ್ತವೆ. ಪ್ರತ್ಯಕ್ಷವಾಗದಿರುವ ಒಳ್ಳೆಯ ಕ್ರಿಯೆಗಳು ನಿರಂತರವಾಗಿ ಮರೆಯಾಗಿರಲಾರವು. [PE]
ಒಟ್ಟು 6 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 5 / 6
1 2 3 4 5 6
ವಿಧವೆಯರ, ಹಿರಿಯರ, ಗುಲಾಮರ ಬಗ್ಗೆ ಸಲಹೆಗಳು 1 ವೃದ್ಧನನ್ನು ಗದರಿಸದೆ ತಂದೆಯಂತೆಯೂ ಯೌವನಸ್ಥರನ್ನು ಸಹೋದರರಂತೆಯೂ 2 ವೃದ್ಧ ಸ್ತ್ರೀಯರನ್ನು ತಾಯಿಯಂತೆಯೂ ಯೌವನ ಸ್ತ್ರೀಯರನ್ನು ಪೂರ್ಣ ಪವಿತ್ರತೆಯಿಂದ ಸಹೋದರಿಯರಂತೆಯೂ ಅವರವರಿಗೆ ಬುದ್ಧಿ ಹೇಳು. 3 ನಿಜವಾಗಿಯೂ ಕಷ್ಟದಲ್ಲಿರುವ ವಿಧವೆಯರನ್ನು ಗುರುತಿಸಿ ಅವರಿಗೆ ಸಹಾಯಮಾಡು. 4 ಆದರೆ ಯಾವ ವಿಧವೆಗಾದರೂ ಮಕ್ಕಳಾಗಲಿ, ಮೊಮ್ಮಕ್ಕಳಾಗಲಿ ಇದ್ದರೆ ಅವರೇ ಮೊದಲು ತಮ್ಮ ಮನೆಯಲ್ಲಿ ಭಕ್ತಿಯಿಂದಿರುವುದಕ್ಕೂ ತಂದೆತಾಯಿಗಳಿಗೆ ಪ್ರತ್ಯುಪಕಾರ ಮಾಡುವುದಕ್ಕೂ ಕಲಿತುಕೊಳ್ಳಲಿ. ಇದು ದೇವರ ದೃಷ್ಟಿಯಲ್ಲಿ ಮೆಚ್ಚಿಕೆಯಾದದ್ದು. 5 ನಿಜವಾಗಿಯೂ ಕಷ್ಟದಲ್ಲಿರುವ ವಿಧವೆಯು ದೇವರ ಮೇಲೆ ನಿರೀಕ್ಷೆಯನ್ನಿಟ್ಟು ಹಗಲು ಇರುಳು ವಿಜ್ಞಾಪನೆಗಳಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನೆಲೆಗೊಂಡಿರುವಳು. 6 ಆದರೆ ಭೋಗಿಯಾಗಿರುವ ವಿಧವೆಯು ಬದುಕಿರುವಾಗಲೂ ಸತ್ತವಳೇ. 7 ವಿಧವೆಯರು ನಿಂದೆಗೆ ಗುರಿಯಾಗದಂತೆ ಇವುಗಳನ್ನು ಆಜ್ಞಾಪಿಸು. 8 ಯಾವನಾದರೂ ಸ್ವಂತದವರನ್ನು ವಿಶೇಷವಾಗಿ ತನ್ನ ಮನೆಯವರನ್ನು ಸಂರಕ್ಷಿಸದೆ ಹೋದರೆ ಅವನು ನಂಬಿಕೆಯನ್ನು ಅಲ್ಲಗಳೆದವನೂ ಅವಿಶ್ವಾಸಿಗಿಂತ ನೀಚನೂ ಆಗಿದ್ದಾನೆ. 9 ವಯಸ್ಸಿನಲ್ಲಿ ಅರವತ್ತಕ್ಕೆ ಕಡಿಮೆಯಿಲ್ಲದ ವಿಧವೆಯರನ್ನು ಮಾತ್ರ ವಿಧವೆಯರ ಪಟ್ಟಿಯಲ್ಲಿ ಸೇರಿಸು. ಅಂಥವಳು ಗಂಡನಿಗೆ ನಂಬಿಗಸ್ತಳಾಗಿದ್ದಿರಬೇಕು. 10 ಆಕೆಯು ಮಕ್ಕಳನ್ನು ಸಾಕಿದವಳೂ ಅತಿಥಿ ಸತ್ಕಾರ ಮಾಡಿದವಳೂ ಭಕ್ತರ ಪಾದಗಳನ್ನು ತೊಳೆದವಳೂ ಸಂಕಟದಲ್ಲಿದ್ದವರಿಗೆ ಸಹಾಯ ಮಾಡಿದವಳೂ ಆಗಿರಬೇಕು. ಹೀಗೆ ಪ್ರತಿಯೊಂದು ಸತ್ಕ್ರಿಯೆಗಳಿಗೆ ಹೆಸರಾದವಳೂ ಆಗಿರಬೇಕು. 11 ಆದರೆ ಪ್ರಾಯದ ವಿಧವೆಯರನ್ನು ಪಟ್ಟಿಯಲ್ಲಿ ಸೇರಿಸಬೇಡ. ಏಕೆಂದರೆ ಅವರಲ್ಲಿ ದೈಹಿಕ ಅಪೇಕ್ಷೆಗಳು ಕ್ರಿಸ್ತ ಯೇಸುವಿನ ಮೇಲಿಟ್ಟ ಅವರ ಪ್ರತಿಷ್ಠೆಯನ್ನು ಸೋಲಿಸಿ, ಅವರು ಮದುವೆ ಮಾಡಿಕೊಳ್ಳುವಂತೆ ಮಾಡುವವು. 12 ಅಂಥವರು ತಮ್ಮ ಮೊದಲಿನ ನಂಬಿಕೆಯನ್ನು ಬಿಟ್ಟಿದ್ದರಿಂದ ತೀರ್ಪಿಗೆ ಗುರಿಯಾಗುವರು. 13 ಇದಲ್ಲದೆ ಅವರು ಮನೆಯಿಂದ ಮನೆಗೆ ತಿರುಗಾಡುತ್ತಾ ಸೋಮಾರಿತನವನ್ನು ಕಲಿಯುತ್ತಾರೆ. ಸೋಮಾರಿಗಳಾಗುವುದಷ್ಟೇ ಅಲ್ಲ, ಹರಟೆ ಮಾತನಾಡುವವರೂ ಇತರರ ಕೆಲಸದಲ್ಲಿ ತಲೆಹಾಕುವವರಾಗಿ ಆಡಬಾರದ ಮಾತುಗಳನ್ನಾಡುವವರೂ ಆಗುತ್ತಾರೆ. 14 ಆದ್ದರಿಂದ ಯೌವನಸ್ಥ ವಿಧವೆಯರು ಮದುವೆಮಾಡಿಕೊಂಡು, ಮಕ್ಕಳನ್ನು ಹೆತ್ತು, ಮನೆಯ ಕೆಲಸಮಾಡಿ, ವಿರೋಧಿಯ ನಿಂದೆಗೆ ಆಸ್ಪದ ಕೊಡಬಾರದೆಂಬುದೇ ನನ್ನ ಅಪೇಕ್ಷೆ. 15 ಈಗಾಗಲೇ ಕೆಲವರು ದಾರಿತಪ್ಪಿ ಸೈತಾನನನ್ನು ಹಿಂಬಾಲಿಸಿದ್ದಾರೆ. 16 17 ವಿಶ್ವಾಸಿಯಾದ ಸ್ತ್ರೀಯ ಕುಟುಂಬದಲ್ಲಿ ವಿಧವೆಯರಿದ್ದರೆ, ಆಕೆ ಇಂಥವರನ್ನು ಸಂರಕ್ಷಿಸಲಿ. ಸಭೆಯು ದಿಕ್ಕಿಲ್ಲದ ವಿಧವೆಯರನ್ನು ಸಂರಕ್ಷಿಸಬೇಕಾಗಿರುವುದರಿಂದ ಆ ಭಾರವನ್ನು ಸಭೆಯ ಮೇಲೆ ಹಾಕಬಾರದು. ಸಭಾಕಾರ್ಯಗಳನ್ನು ಸರಿಯಾಗಿ ನಡೆಸುತ್ತಿರುವ ಹಿರಿಯರು, ವಿಶೇಷವಾಗಿ ವಾಕ್ಯದಲ್ಲಿಯೂ ಬೋಧನೆಯಲ್ಲಿಯೂ ಶ್ರಮಿಸುತ್ತಿರುವವರು ಇಮ್ಮಡಿಯಾದ ಗೌರವಕ್ಕೆ ಯೋಗ್ಯರೆಂದು ಎಣಿಸಬೇಕು. 18 ಏಕೆಂದರೆ, “ಕಣ ತುಳಿಯುವ ಎತ್ತಿನ ಬಾಯನ್ನು ಕಟ್ಟಬಾರದು!”* ಧರ್ಮೋ 25:4 ಎಂತಲೂ, “ಕೆಲಸದವನು ತನ್ನ ಕೂಲಿಗೆ ಯೋಗ್ಯನಾಗಿದ್ದಾನೆ!” † ಲೂಕ 10:7 ಎಂತಲೂ ಪವಿತ್ರ ವೇದದಲ್ಲಿ ಹೇಳಿದೆಯಲ್ಲಾ. 19 ಹಿರಿಯನ ಮೇಲೆ ಯಾರಾದರೂ ದೂರು ಹೇಳಿದರೆ, ಇಬ್ಬರ ಇಲ್ಲವೆ ಮೂವರ ಸಾಕ್ಷಿ ಇಲ್ಲದೆ ಅದನ್ನು ಅಂಗೀಕರಿಸಬೇಡ. 20 ಪಾಪಮಾಡುವ ಹಿರಿಯರನ್ನು ಎಲ್ಲರ ಮುಂದೆಯೇ ಗದರಿಸು. ಇದರಿಂದ ಇತರರಿಗೂ ಎಚ್ಚರಿಕೆಯಾಗುವುದು. 21 ನೀನು ವಿಚಾರಿಸುವುದಕ್ಕೆ ಮೊದಲೇ ತೀರ್ಮಾನಿಸದೆಯೂ ಪಕ್ಷಪಾತದಿಂದ ಏನೂ ಮಾಡದೆಯೂ ಇವುಗಳನ್ನು ಕೈಗೊಳ್ಳಬೇಕೆಂದು ದೇವರ ಮುಂದೆಯೂ ಕ್ರಿಸ್ತ ಯೇಸುವಿನ ಮುಂದೆಯೂ ಆಯ್ಕೆಯಾದ ದೂತರ ಮುಂದೆಯೂ ಖಂಡಿತವಾಗಿ ನಾನು ಹೇಳುತ್ತೇನೆ. 22 23 ಅವಸರದಿಂದ ಯಾರ ಮೇಲೆಯೂ ಹಸ್ತವನ್ನಿಟ್ಟು, ಸಭಾ ಹಿರಿಯರನ್ನಾಗಿ ನೇಮಿಸಬೇಡ. ಇತರರ ಪಾಪಗಳಲ್ಲಿ ಪಾಲುಗಾರನಾಗಬೇಡ. ನಿನ್ನನ್ನು ಶುದ್ಧನಾಗಿ ಕಾಪಾಡಿಕೋ. 24 ನೀರನ್ನು ಮಾತ್ರ ಕುಡಿಯದೆ ನಿನ್ನ ಹೊಟ್ಟೆಯ ನಿಮಿತ್ತವಾಗಿಯೂ ನಿನಗೆ ಆಗಾಗ್ಗೆ ಉಂಟಾಗುವ ಬಲಹೀನತೆಗಳಿಗಾಗಿಯೂ ಸ್ವಲ್ಪ ದ್ರಾಕ್ಷಾರಸವನ್ನು ಉಪಯೋಗಿಸು. ಕೆಲವರ ಪಾಪಗಳು ತೀರ್ಪಿಗೆ ಮುಂಚೆಯೇ ಬಹಿರಂಗವಾಗುತ್ತವೆ. ಇನ್ನು ಕೆಲವರ ಪಾಪಗಳು ಕ್ರಮೇಣವಾಗಿ ಕಂಡುಬರುತ್ತವೆ. 25 ಅದರಂತೆಯೇ ಕೆಲವರ ಒಳ್ಳೆಯ ಕ್ರಿಯೆಗಳು ಮುಂಚೆಯೇ ಪ್ರತ್ಯಕ್ಷವಾಗಿರುತ್ತವೆ. ಪ್ರತ್ಯಕ್ಷವಾಗದಿರುವ ಒಳ್ಳೆಯ ಕ್ರಿಯೆಗಳು ನಿರಂತರವಾಗಿ ಮರೆಯಾಗಿರಲಾರವು.
ಒಟ್ಟು 6 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 5 / 6
1 2 3 4 5 6
×

Alert

×

Kannada Letters Keypad References