1. {#1ಯೆಹೂದ್ಯ ಪ್ರಾಂತ್ಯದ ಅರಸನಾದ ಯೋತಾಮನು } [PS]ಯೋತಾಮನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಹದಿನಾರು ವರ್ಷ ಆಳಿದನು. ಚಾದೋಕನ ಮಗಳಾದ ಯೆರೂಷ ಅವನ ತಾಯಿ.
2. ಅವನು ತನ್ನ ತಂದೆಯಾದ ಉಜ್ಜೀಯನಂತೆ ಯೆಹೋವ ದೇವರ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದನು. ಆದರೆ ಅವನ ತಂದೆಯಂತೆ ಯೆಹೋವ ದೇವರ ಆಲಯದಲ್ಲಿ ಪ್ರವೇಶಿಸಲಿಲ್ಲ. ಆಗ ಜನರು ಇನ್ನೂ ಕೆಟ್ಟದ್ದನ್ನು ಮಾಡುತ್ತಾ ಇದ್ದರು.
3. ಅವನು ಯೆಹೋವ ದೇವರ ಆಲಯದ ಮೇಲಿನ ಬಾಗಿಲನ್ನು ಕಟ್ಟಿಸಿ, ಓಫೇಲ್ ಗೋಡೆಯನ್ನು ಎತ್ತರವಾಗಿ ಕಟ್ಟಿಸಿದನು.
4. ಇದಲ್ಲದೆ ಯೆಹೂದ ಪರ್ವತ ಪ್ರದೇಶದಲ್ಲಿ ಪಟ್ಟಣಗಳನ್ನೂ ಕಾಡುಗಳ ಪ್ರದೇಶದಲ್ಲಿ ಕೋಟೆಗಳನ್ನೂ ಬುರುಜುಗಳನ್ನೂ ಕಟ್ಟಿಸಿದನು. [PE]
5.
3. [PS]ಯೋತಾಮನು ಅಮ್ಮೋನ್ಯರ ಅರಸನ ಸಂಗಡ ಯುದ್ಧಮಾಡಿ ಅವನನ್ನು ಜಯಿಸಿದನು. ಆದ್ದರಿಂದ ಅಮ್ಮೋನಿಯರು ಅದೇ ವರ್ಷದಲ್ಲಿ 3,400 ಕಿಲೋಗ್ರಾಂ ಬೆಳ್ಳಿ, 1,600 ಮೆಟ್ರಿಕ್ ಟನ್ ಗೋಧಿ, 1,350 ಮೆಟ್ರಿಕ್ ಟನ್ ಜವೆಗೋಧಿಯನ್ನೂ ಅವನಿಗೆ ಕೊಟ್ಟರು. ಅಮ್ಮೋನಿಯರು ಎರಡನೆಯ ವರ್ಷದಲ್ಲಿಯೂ, ಮೂರನೆಯ ವರ್ಷದಲ್ಲಿಯೂ ಅದೇ ಪ್ರಕಾರ ಅವನಿಗೆ ಕೊಟ್ಟರು. [PE]
7. [PS]ಹೀಗೆ ಯೋತಾಮನು ತನ್ನ ದೇವರಾದ ಯೆಹೋವ ದೇವರ ಮುಂದೆ ತನ್ನ ಮಾರ್ಗಗಳನ್ನು ಸರಿಪಡಿಸಿಕೊಂಡದ್ದರಿಂದ ಅವನು ಬಲಗೊಂಡನು. [PE][PS]ಯೋತಾಮನ ಇತರ ಕ್ರಿಯೆಗಳೂ, ಅವನು ಮಾಡಿದ ಯುದ್ಧಗಳೂ, ಅವನ ಮಾರ್ಗಗಳೂ, ಅವು ಇಸ್ರಾಯೇಲರ ಮತ್ತು ಯೆಹೂದದ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.
8. ಅವನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಹದಿನಾರು ವರ್ಷ ಆಳಿದನು.
9. ಯೋತಾಮನು ಮೃತನಾಗಿ ತನ್ನ ಪಿತೃಗಳ ಬಳಿಗೆ ಸೇರಿದನು. ಅವನ ಶವವನ್ನು ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಅವನ ಮಗ ಆಹಾಜನು ಅವನಿಗೆ ಬದಲಾಗಿ ಅರಸನಾದನು. [PE]