ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
2 ಪೂರ್ವಕಾಲವೃತ್ತಾ
1. {#1ದೇವಾಲಯದ ಸಲಕರಣೆಗಳು } [PS]ಇವುಗಳಲ್ಲದೆ, ಸೊಲೊಮೋನನು ಕಂಚಿನ ಬಲಿಪೀಠವನ್ನು ಮಾಡಿಸಿದನು; ಅದರ ಉದ್ದ ಒಂಬತ್ತು ಮೀಟರ್, ಅಗಲ ಒಂಬತ್ತು ಮೀಟರ್, ಎತ್ತರ ಸುಮಾರು ಐದು ಮೀಟರ್.
2. ಅನಂತರ ಅವನು ಸಮುದ್ರಪಾತ್ರೆ ಎಂದು ಕರೆಯಲಾಗುವ ಎರಕದ ದೊಡ್ಡ ಪಾತ್ರೆಯನ್ನು ಮಾಡಿಸಿದನು; ಅದು ಚಕ್ರಾಕಾರವಾಗಿ ಅಂಚಿನಿಂದ ಅಂಚಿಗೆ ಸುಮಾರು ನಾಲ್ಕು ಮೀಟರ್; ಅದರ ಎತ್ತರ ಸುಮಾರು ಎರಡು ಮೀಟರ್; ಸುತ್ತಳತೆ ಸುಮಾರು ಹದಿನಾಲ್ಕು ಮೀಟರಾಗಿತ್ತು;
3. ಅದರ ಅಂಚಿನ ಕೆಳಭಾಗದಲ್ಲಿ ಅದರ ಸುತ್ತಲೂ ಎತ್ತುಗಳ ರೂಪಗಳಿದ್ದವು; ಅವು ಒಂದೊಂದು ಮೀಟರಿಗೆ ಹತ್ತರಂತೆ, ಆ ಕೊಳದ ಪಾತ್ರೆಯ ಸುತ್ತಲೂ ಇದ್ದವು; ಇದು ಎರಕ ಹೊಯ್ಯುವಾಗ, ಎತ್ತುಗಳ ರೂಪಗಳು ಎರಡು ಸಾಲಾಗಿ ಎರಕ ಹೊಯ್ಸಿದನು. [PE]
4. [PS]ಅದು ಹನ್ನೆರಡು ಎತ್ತುಗಳ ಮೇಲೆ ನಿಂತಿತ್ತು. ಮೂರು ಉತ್ತರಕ್ಕೂ, ಮೂರು ಪಶ್ಚಿಮಕ್ಕೂ, ಮೂರು ದಕ್ಷಿಣಕ್ಕೂ, ಮೂರು ಪೂರ್ವಕ್ಕೂ ಮುಖಮಾಡಿಕೊಂಡಿದ್ದವು. ಆ ಕೊಳವು ಅವುಗಳ ಮೇಲೆ ಇತ್ತು. ಅವುಗಳ ಹಿಂಭಾಗಗಳೆಲ್ಲಾ ಒಳಮುಖವಾಗಿದ್ದವು.
5. ಅದರ ದಪ್ಪವು ಅಂಗೈ ಅಗಲದಷ್ಟಾಗಿಯೂ, ಅದರ ಅಂಚು ಪಾತ್ರೆಯ ಅಂಚಿನ ಹಾಗೆಯೂ, ತಾವರೆ ಪುಷ್ಪದ ಹಾಗೆಯೂ ಇತ್ತು. ಅದು ಅರವತ್ತಾರು ಸಾವಿರ ಲೀಟರ್ ನೀರನ್ನು ಹಿಡಿಯುತ್ತಿತ್ತು. [PE]
6.
7. [PS]ಇದಲ್ಲದೆ ಹತ್ತು ತೊಟ್ಟಿಗಳನ್ನು ಮಾಡಿಸಿ, ಅವುಗಳಲ್ಲಿ ತೊಳೆಯುವ ನಿಮಿತ್ತವಾಗಿ ಬಲಗಡೆಯಲ್ಲಿ ಐದನ್ನೂ, ಎಡಗಡೆಯಲ್ಲಿ ಐದನ್ನೂ ಇರಿಸಿದನು. ದಹನಬಲಿಗೋಸ್ಕರ ಅರ್ಪಿಸುವವುಗಳನ್ನು ಅವುಗಳಲ್ಲಿ ತೊಳೆಯುತ್ತಿದ್ದರು. ಆದರೆ ಆ ಕೊಳವು ಯಾಜಕರು ತೊಳೆದುಕೊಳ್ಳುವುದಕ್ಕೆ ಇತ್ತು. [PE]
8. [PS]ಅವುಗಳ ಮಾದರಿಯ ಪ್ರಕಾರವಾಗಿ ಹತ್ತು ಬಂಗಾರದ ದೀಪಸ್ತಂಭಗಳನ್ನು ಮಾಡಿಸಿ, ಮಂದಿರದಲ್ಲಿ ಬಲಗಡೆ ಐದನ್ನೂ, ಎಡಗಡೆ ಐದನ್ನೂ ಇರಿಸಿದನು. [PE]
9. [PS]ಹಾಗೆಯೇ ಅವನು ಹತ್ತು ಮೇಜುಗಳನ್ನು ಮಾಡಿಸಿ, ಮಂದಿರದಲ್ಲಿ ಬಲಗಡೆ ಐದನ್ನೂ, ಎಡಗಡೆ ಐದನ್ನೂ ಇರಿಸಿದನು. ನೂರು ಬಂಗಾರದ ಬಟ್ಟಲುಗಳನ್ನು ಮಾಡಿಸಿದನು. [PE][PS]ಯಾಜಕರ ಅಂಗಳವನ್ನೂ, ದೊಡ್ಡ ಅಂಗಳವನ್ನೂ, ಅಂಗಳಗಳಿಗೋಸ್ಕರ ಬಾಗಿಲುಗಳನ್ನೂ ಮಾಡಿಸಿ, ಆ ಬಾಗಿಲುಗಳನ್ನು ಕಂಚಿನಿಂದ ಹೊದಿಸಿದನು.
10. ಸಮುದ್ರ ಎಂದು ಕರೆಯಲಾದ ದೊಡ್ಡ ಪಾತ್ರೆಯನ್ನು ಬಲಗಡೆಯಲ್ಲಿ ಅಂದರೆ ಆಗ್ನೇಯ ದಿಕ್ಕಿನಲ್ಲಿ ಇರಿಸಿದನು. [PE]
11. [PS]ಇದಲ್ಲದೆ ಹೂರಾಮನು[* ಹೂರಾಮನು ಅಥವಾ ಹೀರಾಮ ] ಪಾತ್ರೆಗಳನ್ನೂ, ಸಲಿಕೆಗಳನ್ನೂ, ಬಟ್ಟಲುಗಳನ್ನೂ ಮಾಡಿದನು. [PE][PS]ಯೆಹೋವ ದೇವರ ಆಲಯಕ್ಕೋಸ್ಕರ ಅರಸನಾದ ಸೊಲೊಮೋನನು ಒಪ್ಪಿಸಿದ ಎಲ್ಲಾ ಕೆಲಸಗಳನ್ನು ಹೂರಾಮನು ಮಾಡಿ ತೀರಿಸಿದನು: [PE][PBR]
12. [LS] ಅವು ಯಾವುವೆಂದರೆ, ಎರಡು ಸ್ತಂಭಗಳು, [LE][LS]ಆ ಸ್ತಂಭಗಳ ಮೇಲಿನ ಎರಡು ಕುಂಭಗಳು, [LE][LS]ಆ ಎರಡು ಕುಂಭಗಳನ್ನು ಮುಚ್ಚುವ ಎರಡು ಜಾಲರಿಗಳು. [LE]
13. [LS] ಎರಡು ಜಾಲರಿ ಸಾಮಾನುಗಳಿಗೆ ನಾನೂರು ದಾಳಿಂಬೆ ಹಣ್ಣುಗಳು, ಸ್ತಂಭಗಳ ಮೇಲೆ ಇರುವ ಎರಡು ಕುಂಭಗಳನ್ನು ಮುಚ್ಚುವಂತೆ ಒಂದು ಜಾಲರಿ ಸಲಕರಣೆಗಳಿಗೆ ಎರಡು ಸಾಲಿನ ದಾಳಿಂಬೆ ಹಣ್ಣುಗಳನ್ನು ಮಾಡಿದನು. [LE]
14. [LS] ಇದಲ್ಲದೆ ಅವನು ಪೀಠಗಳನ್ನು ಅವುಗಳ ಮೇಲಿರುವ ತೊಟ್ಟಿಗಳನ್ನು ಮಾಡಿದನು. [LE]
15. [LS] ಸಮುದ್ರಪಾತ್ರೆಯು ಅದರ ಕೆಳಗಿರುವ ಹನ್ನೆರಡು ಎತ್ತುಗಳು, [LE]
16. [LS] ಪಾತ್ರೆಗಳು, ಸಲಿಕೆಗಳು, ಮುಳ್ಳುಗಳು. [LE][PBR] [PS]ಅವುಗಳ ಎಲ್ಲಾ ವಸ್ತುಗಳನ್ನೂ ಅರಸನಾದ ಸೊಲೊಮೋನನಿಗೆ ಅವನ ತಂದೆಯು ಹೇಳಿದಂತೆ ಹೂರಾಮ ಅಬೀ ಹೊಳೆಯುವ ಕಂಚಿನಿಂದ ಯೆಹೋವ ದೇವರ ಆಲಯಕ್ಕೋಸ್ಕರ ಮಾಡಿದನು.
17. ಯೊರ್ದನಿಗೆ ಸೇರಿದ ಬಯಲಾದ ಸುಕ್ಕೋತಿಗೂ ಚರೇದನಿಗೂ ನಡುವೆ ಇರುವ ಜೇಡಿಮಣ್ಣಿನ ಅಚ್ಚುಗಳಲ್ಲಿ ಅರಸನು ಅವುಗಳನ್ನು ಎರಕ ಹೊಯ್ಯಿಸಿದನು.
18. ಸೊಲೊಮೋನನು ಮಾಡಿಸಿದ ಈ ಸಲಕರಣೆಗಳೆಲ್ಲಾ ಬಹು ಹೆಚ್ಚಾಗಿದ್ದರಿಂದ ಆ ಕಂಚಿನ ತೂಕವು ಎಷ್ಟೆಂದು ನಿರ್ಧರಿಸಲಾಗಲಿಲ್ಲ. [PE]
19. [PS]ಸೊಲೊಮೋನನು ದೇವರ ಆಲಯದ ಎಲ್ಲಾ ಸಲಕರಣೆಗಳನ್ನು ಮಾಡಿಸಿದನು. ಅವು ಯಾವುವೆಂದರೆ: [PE][PBR] [LS]ಬಂಗಾರದ ಧೂಪವೇದಿಯನ್ನು, [LE][LS]ಸಮ್ಮುಖದ ರೊಟ್ಟಿಗಳನ್ನು ಇಡುವುದಕ್ಕೆ ಮೇಜುಗಳನ್ನು, [LE]
20. [LS] ನಿಯಮದ ಪ್ರಕಾರ ಮಹಾಪರಿಶುದ್ಧ ಸ್ಥಳದ ಮುಂಭಾಗದಲ್ಲಿ ಶುದ್ಧ ಬಂಗಾರದ ದೀಪಸ್ತಂಭಗಳನ್ನೂ ಅವುಗಳ ದೀಪಗಳನ್ನೂ, [LE]
21. [LS] ಹೂವುಗಳನ್ನೂ, ದೀಪಗಳ ಚಿಮಟಿಗಳನ್ನೂ ಶುದ್ಧ ಬಂಗಾರದಿಂದ ಮಾಡಿಸಿದನು. [LE]
22. [LS] ಶುದ್ಧ ಬಂಗಾರದಿಂದ ಕತ್ತರಿಗಳು, ಬೋಗುಣಿಗಳು, ಅಗ್ನಿಪಾತ್ರೆಗಳು, ಅಗ್ಗಿಷ್ಟಿಗೆ ಇವುಗಳನ್ನು ಮಾಡಿಸಿದನು. ಇದಲ್ಲದೆ ಆಲಯದ ಪ್ರವೇಶ ದ್ವಾರವೂ, ಮಹಾಪರಿಶುದ್ಧ ಸ್ಥಳವಾದ ಗರ್ಭಗುಡಿಯ ಬಾಗಿಲುಗಳೂ, ಮಂದಿರದ ಮನೆ ಬಾಗಿಲುಗಳೂ ಬಂಗಾರದವುಗಳಾಗಿದ್ದವು. [LE][PBR]
ಒಟ್ಟು 36 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 4 / 36
ದೇವಾಲಯದ ಸಲಕರಣೆಗಳು 1 ಇವುಗಳಲ್ಲದೆ, ಸೊಲೊಮೋನನು ಕಂಚಿನ ಬಲಿಪೀಠವನ್ನು ಮಾಡಿಸಿದನು; ಅದರ ಉದ್ದ ಒಂಬತ್ತು ಮೀಟರ್, ಅಗಲ ಒಂಬತ್ತು ಮೀಟರ್, ಎತ್ತರ ಸುಮಾರು ಐದು ಮೀಟರ್. 2 ಅನಂತರ ಅವನು ಸಮುದ್ರಪಾತ್ರೆ ಎಂದು ಕರೆಯಲಾಗುವ ಎರಕದ ದೊಡ್ಡ ಪಾತ್ರೆಯನ್ನು ಮಾಡಿಸಿದನು; ಅದು ಚಕ್ರಾಕಾರವಾಗಿ ಅಂಚಿನಿಂದ ಅಂಚಿಗೆ ಸುಮಾರು ನಾಲ್ಕು ಮೀಟರ್; ಅದರ ಎತ್ತರ ಸುಮಾರು ಎರಡು ಮೀಟರ್; ಸುತ್ತಳತೆ ಸುಮಾರು ಹದಿನಾಲ್ಕು ಮೀಟರಾಗಿತ್ತು; 3 ಅದರ ಅಂಚಿನ ಕೆಳಭಾಗದಲ್ಲಿ ಅದರ ಸುತ್ತಲೂ ಎತ್ತುಗಳ ರೂಪಗಳಿದ್ದವು; ಅವು ಒಂದೊಂದು ಮೀಟರಿಗೆ ಹತ್ತರಂತೆ, ಆ ಕೊಳದ ಪಾತ್ರೆಯ ಸುತ್ತಲೂ ಇದ್ದವು; ಇದು ಎರಕ ಹೊಯ್ಯುವಾಗ, ಎತ್ತುಗಳ ರೂಪಗಳು ಎರಡು ಸಾಲಾಗಿ ಎರಕ ಹೊಯ್ಸಿದನು. 4 ಅದು ಹನ್ನೆರಡು ಎತ್ತುಗಳ ಮೇಲೆ ನಿಂತಿತ್ತು. ಮೂರು ಉತ್ತರಕ್ಕೂ, ಮೂರು ಪಶ್ಚಿಮಕ್ಕೂ, ಮೂರು ದಕ್ಷಿಣಕ್ಕೂ, ಮೂರು ಪೂರ್ವಕ್ಕೂ ಮುಖಮಾಡಿಕೊಂಡಿದ್ದವು. ಆ ಕೊಳವು ಅವುಗಳ ಮೇಲೆ ಇತ್ತು. ಅವುಗಳ ಹಿಂಭಾಗಗಳೆಲ್ಲಾ ಒಳಮುಖವಾಗಿದ್ದವು. 5 ಅದರ ದಪ್ಪವು ಅಂಗೈ ಅಗಲದಷ್ಟಾಗಿಯೂ, ಅದರ ಅಂಚು ಪಾತ್ರೆಯ ಅಂಚಿನ ಹಾಗೆಯೂ, ತಾವರೆ ಪುಷ್ಪದ ಹಾಗೆಯೂ ಇತ್ತು. ಅದು ಅರವತ್ತಾರು ಸಾವಿರ ಲೀಟರ್ ನೀರನ್ನು ಹಿಡಿಯುತ್ತಿತ್ತು. 6 7 ಇದಲ್ಲದೆ ಹತ್ತು ತೊಟ್ಟಿಗಳನ್ನು ಮಾಡಿಸಿ, ಅವುಗಳಲ್ಲಿ ತೊಳೆಯುವ ನಿಮಿತ್ತವಾಗಿ ಬಲಗಡೆಯಲ್ಲಿ ಐದನ್ನೂ, ಎಡಗಡೆಯಲ್ಲಿ ಐದನ್ನೂ ಇರಿಸಿದನು. ದಹನಬಲಿಗೋಸ್ಕರ ಅರ್ಪಿಸುವವುಗಳನ್ನು ಅವುಗಳಲ್ಲಿ ತೊಳೆಯುತ್ತಿದ್ದರು. ಆದರೆ ಆ ಕೊಳವು ಯಾಜಕರು ತೊಳೆದುಕೊಳ್ಳುವುದಕ್ಕೆ ಇತ್ತು. 8 ಅವುಗಳ ಮಾದರಿಯ ಪ್ರಕಾರವಾಗಿ ಹತ್ತು ಬಂಗಾರದ ದೀಪಸ್ತಂಭಗಳನ್ನು ಮಾಡಿಸಿ, ಮಂದಿರದಲ್ಲಿ ಬಲಗಡೆ ಐದನ್ನೂ, ಎಡಗಡೆ ಐದನ್ನೂ ಇರಿಸಿದನು. 9 ಹಾಗೆಯೇ ಅವನು ಹತ್ತು ಮೇಜುಗಳನ್ನು ಮಾಡಿಸಿ, ಮಂದಿರದಲ್ಲಿ ಬಲಗಡೆ ಐದನ್ನೂ, ಎಡಗಡೆ ಐದನ್ನೂ ಇರಿಸಿದನು. ನೂರು ಬಂಗಾರದ ಬಟ್ಟಲುಗಳನ್ನು ಮಾಡಿಸಿದನು. ಯಾಜಕರ ಅಂಗಳವನ್ನೂ, ದೊಡ್ಡ ಅಂಗಳವನ್ನೂ, ಅಂಗಳಗಳಿಗೋಸ್ಕರ ಬಾಗಿಲುಗಳನ್ನೂ ಮಾಡಿಸಿ, ಆ ಬಾಗಿಲುಗಳನ್ನು ಕಂಚಿನಿಂದ ಹೊದಿಸಿದನು. 10 ಸಮುದ್ರ ಎಂದು ಕರೆಯಲಾದ ದೊಡ್ಡ ಪಾತ್ರೆಯನ್ನು ಬಲಗಡೆಯಲ್ಲಿ ಅಂದರೆ ಆಗ್ನೇಯ ದಿಕ್ಕಿನಲ್ಲಿ ಇರಿಸಿದನು. 11 ಇದಲ್ಲದೆ ಹೂರಾಮನು* ಹೂರಾಮನು ಅಥವಾ ಹೀರಾಮ ಪಾತ್ರೆಗಳನ್ನೂ, ಸಲಿಕೆಗಳನ್ನೂ, ಬಟ್ಟಲುಗಳನ್ನೂ ಮಾಡಿದನು. ಯೆಹೋವ ದೇವರ ಆಲಯಕ್ಕೋಸ್ಕರ ಅರಸನಾದ ಸೊಲೊಮೋನನು ಒಪ್ಪಿಸಿದ ಎಲ್ಲಾ ಕೆಲಸಗಳನ್ನು ಹೂರಾಮನು ಮಾಡಿ ತೀರಿಸಿದನು: 12 ಅವು ಯಾವುವೆಂದರೆ, ಎರಡು ಸ್ತಂಭಗಳು, ಆ ಸ್ತಂಭಗಳ ಮೇಲಿನ ಎರಡು ಕುಂಭಗಳು, ಆ ಎರಡು ಕುಂಭಗಳನ್ನು ಮುಚ್ಚುವ ಎರಡು ಜಾಲರಿಗಳು. 13 ಎರಡು ಜಾಲರಿ ಸಾಮಾನುಗಳಿಗೆ ನಾನೂರು ದಾಳಿಂಬೆ ಹಣ್ಣುಗಳು, ಸ್ತಂಭಗಳ ಮೇಲೆ ಇರುವ ಎರಡು ಕುಂಭಗಳನ್ನು ಮುಚ್ಚುವಂತೆ ಒಂದು ಜಾಲರಿ ಸಲಕರಣೆಗಳಿಗೆ ಎರಡು ಸಾಲಿನ ದಾಳಿಂಬೆ ಹಣ್ಣುಗಳನ್ನು ಮಾಡಿದನು. 14 ಇದಲ್ಲದೆ ಅವನು ಪೀಠಗಳನ್ನು ಅವುಗಳ ಮೇಲಿರುವ ತೊಟ್ಟಿಗಳನ್ನು ಮಾಡಿದನು. 15 ಸಮುದ್ರಪಾತ್ರೆಯು ಅದರ ಕೆಳಗಿರುವ ಹನ್ನೆರಡು ಎತ್ತುಗಳು, 16 ಪಾತ್ರೆಗಳು, ಸಲಿಕೆಗಳು, ಮುಳ್ಳುಗಳು. ಅವುಗಳ ಎಲ್ಲಾ ವಸ್ತುಗಳನ್ನೂ ಅರಸನಾದ ಸೊಲೊಮೋನನಿಗೆ ಅವನ ತಂದೆಯು ಹೇಳಿದಂತೆ ಹೂರಾಮ ಅಬೀ ಹೊಳೆಯುವ ಕಂಚಿನಿಂದ ಯೆಹೋವ ದೇವರ ಆಲಯಕ್ಕೋಸ್ಕರ ಮಾಡಿದನು. 17 ಯೊರ್ದನಿಗೆ ಸೇರಿದ ಬಯಲಾದ ಸುಕ್ಕೋತಿಗೂ ಚರೇದನಿಗೂ ನಡುವೆ ಇರುವ ಜೇಡಿಮಣ್ಣಿನ ಅಚ್ಚುಗಳಲ್ಲಿ ಅರಸನು ಅವುಗಳನ್ನು ಎರಕ ಹೊಯ್ಯಿಸಿದನು. 18 ಸೊಲೊಮೋನನು ಮಾಡಿಸಿದ ಈ ಸಲಕರಣೆಗಳೆಲ್ಲಾ ಬಹು ಹೆಚ್ಚಾಗಿದ್ದರಿಂದ ಆ ಕಂಚಿನ ತೂಕವು ಎಷ್ಟೆಂದು ನಿರ್ಧರಿಸಲಾಗಲಿಲ್ಲ. 19 ಸೊಲೊಮೋನನು ದೇವರ ಆಲಯದ ಎಲ್ಲಾ ಸಲಕರಣೆಗಳನ್ನು ಮಾಡಿಸಿದನು. ಅವು ಯಾವುವೆಂದರೆ: ಬಂಗಾರದ ಧೂಪವೇದಿಯನ್ನು, ಸಮ್ಮುಖದ ರೊಟ್ಟಿಗಳನ್ನು ಇಡುವುದಕ್ಕೆ ಮೇಜುಗಳನ್ನು, 20 ನಿಯಮದ ಪ್ರಕಾರ ಮಹಾಪರಿಶುದ್ಧ ಸ್ಥಳದ ಮುಂಭಾಗದಲ್ಲಿ ಶುದ್ಧ ಬಂಗಾರದ ದೀಪಸ್ತಂಭಗಳನ್ನೂ ಅವುಗಳ ದೀಪಗಳನ್ನೂ, 21 ಹೂವುಗಳನ್ನೂ, ದೀಪಗಳ ಚಿಮಟಿಗಳನ್ನೂ ಶುದ್ಧ ಬಂಗಾರದಿಂದ ಮಾಡಿಸಿದನು. 22 ಶುದ್ಧ ಬಂಗಾರದಿಂದ ಕತ್ತರಿಗಳು, ಬೋಗುಣಿಗಳು, ಅಗ್ನಿಪಾತ್ರೆಗಳು, ಅಗ್ಗಿಷ್ಟಿಗೆ ಇವುಗಳನ್ನು ಮಾಡಿಸಿದನು. ಇದಲ್ಲದೆ ಆಲಯದ ಪ್ರವೇಶ ದ್ವಾರವೂ, ಮಹಾಪರಿಶುದ್ಧ ಸ್ಥಳವಾದ ಗರ್ಭಗುಡಿಯ ಬಾಗಿಲುಗಳೂ, ಮಂದಿರದ ಮನೆ ಬಾಗಿಲುಗಳೂ ಬಂಗಾರದವುಗಳಾಗಿದ್ದವು.
ಒಟ್ಟು 36 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 4 / 36
×

Alert

×

Kannada Letters Keypad References