1. {#1ಯೆಹೂದದ ಅರಸನಾದ ಅಜರೀಯನು } [PS]ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನ ಆಳ್ವಿಕೆಯ ಇಪ್ಪತ್ತೇಳನೆಯ ವರ್ಷದಲ್ಲಿ, ಯೆಹೂದದ ಅರಸನಾಗಿರುವ ಅಮಚ್ಯನ ಮಗ ಅಜರ್ಯನು ಆಳಲು ಆರಂಭಿಸಿದನು.
2. ಅವನು ಅರಸನಾದಾಗ, ಹದಿನಾರು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಐವತ್ತೆರಡು ವರ್ಷ ಆಳಿದನು. ಅವನ ತಾಯಿಯ ಹೆಸರು ಯೆಕೊಲ್ಯಳು, ಅವಳು ಯೆರೂಸಲೇಮಿನವಳು.
3. ಅವನು ತನ್ನ ತಂದೆಯಾದ ಅಮಚ್ಯನಂತೆ ಯೆಹೋವ ದೇವರ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದನು.
4. ಆದರೂ ಪೂಜಾಸ್ಥಳಗಳನ್ನು ತೆಗೆದುಹಾಕಲಿಲ್ಲ ಆದ್ದರಿಂದ ಜನರು ಪೂಜಾಸ್ಥಳಗಳ ಮೇಲೆ ಬಲಿಗಳನ್ನೂ ಧೂಪಗಳನ್ನೂ ಅರ್ಪಿಸುವುದನ್ನು ಮುಂದುವರೆಸಿದ್ದರು. [PE]
5.
6. [PS]ಯೆಹೋವ ದೇವರು ಅರಸನನ್ನು ಮರಣದ ದಿವಸದವರೆಗೂ ಕುಷ್ಠರೋಗದಿಂದ ಬಾಧಿಸಿದ್ದರಿಂದ, ಅವನು ಪ್ರತ್ಯೇಕವಾದ ಮನೆಯಲ್ಲಿ ವಾಸವಾಗಿದ್ದನು. ಅರಸನ ಮಗ ಯೋತಾಮನು ರಾಜಗೃಹಾಧಿಪತ್ಯವನ್ನು ಮತ್ತು ಪ್ರಜಾಪಾಲನೆಯನ್ನೂ ನೋಡಿಕೊಳ್ಳುತ್ತಿದ್ದನು. [PE][PS]ಅಜರ್ಯನ ಇತರ ಕ್ರಿಯೆಗಳನ್ನು ಅವನು ಮಾಡಿದ ಸಮಸ್ತವನ್ನು ಯೆಹೂದದ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.
7. ಅಜರ್ಯನು ಮೃತನಾಗಿ ತನ್ನ ಪಿತೃಗಳ ಬಳಿಗೆ ಸೇರಿದನು. ಅವನನ್ನು ದಾವೀದನ ಪಟ್ಟಣದಲ್ಲಿ ಅವನ ಪಿತೃಗಳ ಬಳಿಯಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಯೋತಾಮನು ಅರಸನಾದನು. [PE]
8. {#1ಇಸ್ರಾಯೇಲರ ಅರಸನಾದ ಜೆಕರ್ಯನು } [PS]ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಮೂವತ್ತೆಂಟನೆಯ ವರ್ಷದಲ್ಲಿ ಯಾರೊಬ್ಬಾಮನ ಮಗನಾದ ಜೆಕರ್ಯನು ಸಮಾರ್ಯದಲ್ಲಿ ಇಸ್ರಾಯೇಲರ ಅರಸನಾದನು. ಅವನು ಆರು ತಿಂಗಳು ಆಳಿದನು.
9. ಅವನು ತನ್ನ ಪಿತೃಗಳು ಮಾಡಿದ ಪ್ರಕಾರ, ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು. ಅವನು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗ ಯಾರೊಬ್ಬಾಮನ ಪಾಪಗಳನ್ನು ತೊರೆದುಬಿಡಲಿಲ್ಲ. [PE]
10. [PS]ಯಾಬೇಷನ ಮಗ ಶಲ್ಲೂಮನು ಜೆಕರ್ಯನ ಮೇಲೆ ಒಳಸಂಚುಮಾಡಿ, ಜನರ ಮುಂದೆ ಅವನನ್ನು ಹೊಡೆದು, ಕೊಂದುಹಾಕಿ, ಅವನಿಗೆ ಬದಲಾಗಿ ಅರಸನಾದನು.
11. ಜೆಕರ್ಯನ ಇತರ ಕ್ರಿಯೆಗಳು ಇಸ್ರಾಯೇಲಿನ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.
12. “ನಿನ್ನ ಸಂತತಿಯವರು ನಾಲ್ಕನೆಯ ತಲೆಮಾರಿನವರೆಗೂ ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು,”[* 2 ಅರಸು 10:30 ] ಎಂದು ಯೆಹೋವ ದೇವರು ಯೇಹುವಿಗೆ ಹೇಳಿದ ವಾಕ್ಯದಂತೆ ಇವೆಲ್ಲವೂ ನೆರವೇರಿತು. [PE]
13. {#1ಇಸ್ರಾಯೇಲರ ಅರಸನಾದ ಶಲ್ಲೂಮನು } [PS]ಯೆಹೂದದ ಅರಸನಾದ ಉಜ್ಜೀಯನ ಆಳ್ವಿಕೆಯ ಮೂವತ್ತೊಂಬತ್ತನೆಯ ವರ್ಷದಲ್ಲಿ ಯಾಬೇಷನ ಮಗ ಶಲ್ಲೂಮನು ಅರಸನಾಗಿ, ಸಮಾರ್ಯದಲ್ಲಿ ಒಂದು ತಿಂಗಳು ಆಳಿದನು.
14. ಗಾದಿಯ ಮಗ ಮೆನಹೇಮನು ತಿರ್ಚದಿಂದ ಸಮಾರ್ಯಕ್ಕೆ ಬಂದು, ಸಮಾರ್ಯದಲ್ಲಿ ಯಾಬೇಷನ ಮಗ ಶಲ್ಲೂಮನನ್ನು ಹೊಡೆದು, ಕೊಂದುಹಾಕಿ ಅವನಿಗೆ ಬದಲಾಗಿ ಅರಸನಾದನು. [PE]
15.
16. [PS]ಶಲ್ಲೂಮನ ಇತರ ಕ್ರಿಯೆಗಳೂ ಅವನು ಮಾಡಿದ ಒಳಸಂಚೂ ಇಸ್ರಾಯೇಲಿನ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ. [PE]
17. [PS]ಆ ಸಮಯದಲ್ಲಿ ಮೆನಹೇಮನು ತಿರ್ಚದಿಂದ ತಿಪ್ಸಹು ಪಟ್ಟಣಕ್ಕೆ ಹೋದಾಗ ಅಲ್ಲಿಯವರು ತಮ್ಮ ಊರುಬಾಗಿಲುಗಳನ್ನು ತನಗೆ ತೆರೆಯದೆ ಇದ್ದುದರಿಂದ ಎಲ್ಲರನ್ನೂ, ಅದರ ಮೇರೆಗಳಲ್ಲಿದ್ದವರೆಲ್ಲರನ್ನೂ ಸಂಹರಿಸಿದನು. ತಿಪ್ಸಹವನ್ನು ಹಾಳು ಮಾಡಿ, ಎಲ್ಲಾ ಗರ್ಭಿಣಿಯರ ಹೊಟ್ಟೆಗಳನ್ನು ಸೀಳಿಸಿದನು. [PE]{#1ಇಸ್ರಾಯೇಲರ ಅರಸನಾದ ಮೆನಹೇಮನು } [PS]ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಮೂವತ್ತೊಂಬತ್ತನೆಯ ವರ್ಷದಲ್ಲಿ ಗಾದಿಯ ಮಗ ಮೆನಹೇಮನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಹತ್ತು ವರ್ಷ ಆಳಿದನು.
18. ಅವನು ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು. ಅವನು ತನ್ನ ದಿವಸಗಳಲ್ಲೆಲ್ಲಾ ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗ ಯಾರೊಬ್ಬಾಮನ ಪಾಪಗಳನ್ನು ತೊರೆದುಬಿಡಲಿಲ್ಲ. [PE]
19. [PS]ಅಸ್ಸೀರಿಯಾ ದೇಶದ ಅರಸನಾದ ಪೂಲನು ಇಸ್ರಾಯೇಲ್ ದೇಶದ ಮೇಲೆ ಯುದ್ಧಕ್ಕೆ ಬಂದನು. ಆಗ ಮೆನಹೇಮನು ಅವನ ಬೆಂಬಲವನ್ನು ಪಡೆಯಲು ಮತ್ತು ರಾಜ್ಯವನ್ನು ದೃಢಪಡಿಸಲು ಪೂಲನಿಗೆ ಮೂವತ್ತು ನಾಲ್ಕು ಸಾವಿರ ಕಿಲೋಗ್ರಾಂ ಬೆಳ್ಳಿಯನ್ನು ಕೊಟ್ಟನು.
20. ಮೆನಹೇಮನು ಈ ಹಣವನ್ನು ಇಸ್ರಾಯೇಲಿನಿಂದ ವಸೂಲಿ ಮಾಡಿದನು. ಪ್ರತಿಯೊಬ್ಬ ಶ್ರೀಮಂತನು ಅಸ್ಸೀರಿಯದ ಅರಸನಿಗೆ ಕೊಡಬೇಕಾದ ಅರ್ಧ ಕಿಲೋಗ್ರಾಂ ಬೆಳ್ಳಿಯನ್ನು ನೀಡಬೇಕಾಗಿತ್ತು. ಆದ್ದರಿಂದ ಅಸ್ಸೀರಿಯದ ಅರಸನು ದೇಶದಲ್ಲಿ ನಿಲ್ಲದೆ ತನ್ನ ಸೈನ್ಯದೊಂದಿಗೆ ಹಿಂದಿರುಗಿ ಹೋದನು. [PE]
21. [PS]ಮೆನಹೇಮನ ಇತರ ಕ್ರಿಯೆಗಳೂ ಅವನು ಮಾಡಿದ ಸಮಸ್ತವೂ ಇಸ್ರಾಯೇಲಿನ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.
22. ಮೆನಹೇಮನು ಮೃತನಾಗಿ ತನ್ನ ಪಿತೃಗಳ ಜೊತೆ ಸೇರಿದನು. ಅವನ ಮಗ ಪೆಕಹ್ಯನು ಅವನಿಗೆ ಬದಲಾಗಿ ಅರಸನಾದನು. [PE]
23. {#1ಇಸ್ರಾಯೇಲರ ಅರಸನಾದ ಪೆಕಹ್ಯನು } [PS]ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಐವತ್ತನೆಯ ವರ್ಷದಲ್ಲಿ ಮೆನಹೇಮನ ಮಗ ಪೆಕಹ್ಯನು ಸಮಾರ್ಯದಲ್ಲಿ ಇಸ್ರಾಯೇಲಿನ ಅರಸನಾಗಿ, ಎರಡು ವರ್ಷ ಆಳಿದನು.
24. ಪೆಕಹ್ಯನು ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು. ಅವನು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗ ಯಾರೊಬ್ಬಾಮನ ಪಾಪಗಳನ್ನು ತೊರೆಯಲಿಲ್ಲ.
25. ಆದರೆ ಅವನ ಅಧಿಪತಿಯಾದಂಥ ರೆಮಲ್ಯನ ಮಗ ಪೆಕಹನು ಗಿಲ್ಯಾದಿನ ಐವತ್ತು ಮಂದಿಯನ್ನು ತನ್ನ ಸಂಗಡ ಕೂಡಿಸಿಕೊಂಡು ಪೆಕಹ್ಯನ ವಿರುದ್ಧ ಒಳಸಂಚುಮಾಡಿ, ಸಮಾರ್ಯದಲ್ಲಿರುವ ಅರಮನೆಯ ಗರ್ಭಗೃಹದಲ್ಲಿ ಪೆಕಹ್ಯನನ್ನು ಮತ್ತು ಅರ್ಗೋಬ್, ಅರ್ಯೇ ಎಂಬವರನ್ನು ಕೊಂದುಹಾಕಿದನು. ಅನಂತರ, ಪೆಕಹ್ಯನಿಗೆ ಬದಲಾಗಿ ಪೆಕಹನು ಅರಸನಾದನು. [PE]
26.
27. [PS]ಪೆಕಹ್ಯನ ಇತರ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಇಸ್ರಾಯೇಲಿನ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ. [PE]{#1ಇಸ್ರಾಯೇಲರ ಅರಸನಾದ ಪೆಕಹನು } [PS]ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಐವತ್ತೆರಡನೆಯ ವರುಷದಲ್ಲಿ ರೆಮಲ್ಯನ ಮಗ ಪೆಕಹನು ಸಮಾರ್ಯದಲ್ಲಿ ಇಸ್ರಾಯೇಲರ ಅರಸನಾಗಿ, ಇಪ್ಪತ್ತು ವರ್ಷ ಆಳಿದನು.
28. ಅವನು ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಅವನು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗ ಯಾರೊಬ್ಬಾಮನ ಪಾಪಗಳನ್ನು ತೊರೆದುಬಿಡಲಿಲ್ಲ. [PE]
29. [PS]ಇಸ್ರಾಯೇಲಿನ ಅರಸನಾದ ಪೆಕಹನ ಕಾಲದಲ್ಲಿ ಅಸ್ಸೀರಿಯದ ಅರಸನಾದ ತಿಗ್ಲತ್ಪಿಲೆಸೆರನು ಬಂದು, ಇಯ್ಯೋನ್, ಆಬೇಲ್ ಬೇತ್ ಮಾಕಾ, ಯಾನೋಹ, ಕೆದೆಷ್, ಹಾಚೋರ್, ಗಿಲ್ಯಾದ್, ಗಲಿಲಾಯ ಮತ್ತು ನಫ್ತಾಲಿಯ ಎಲ್ಲಾ ಭೂಮಿಯನ್ನು ವಶಮಾಡಿಕೊಂಡು, ಜನರನ್ನು ಸೆರೆಯಾಗಿ ಅಸ್ಸೀರಿಯಾ ದೇಶಕ್ಕೆ ಒಯ್ದನು.
30. ಇದಲ್ಲದೆ ಏಲನ ಮಗ ಹೋಶೇಯನು ರೆಮಲ್ಯನ ಮಗ ಪೆಕಹನ ವಿರುದ್ಧ ಒಳಸಂಚುಮಾಡಿ, ಇವನನ್ನು ಉಜ್ಜೀಯನ ಮಗ ಯೋತಾಮನ ಆಳ್ವಿಕೆಯ ಇಪ್ಪತ್ತನೆಯ ವರ್ಷದಲ್ಲಿ ಸಂಹರಿಸಿ, ಅವನಿಗೆ ಬದಲಾಗಿ ಅರಸನಾದನು. [PE]
31.
32. [PS]ಪೆಕಹನ ಇತರ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಇಸ್ರಾಯೇಲಿನ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ. [PE]{#1ಯೆಹೂದ್ಯರ ಅರಸನಾದ ಯೋತಾಮನು } [PS]ಇಸ್ರಾಯೇಲಿನ ಅರಸನೂ, ರೆಮಲ್ಯನ ಮಗನೂ ಆದ ಪೆಕಹನ ಆಳಿಕೆಯ ಎರಡನೆಯ ವರ್ಷದಲ್ಲಿ ಯೆಹೂದದ ಅರಸನಾದ ಉಜ್ಜೀಯನ ಮಗ ಯೋತಾಮನು ಆಳಲು ಆರಂಭಿಸಿದನು.
33. ಯೋತಾಮನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಹದಿನಾರು ವರ್ಷ ಆಳಿದನು. ಚಾದೋಕನ ಮಗಳಾದ ಯೆರೂಷ ಅವನ ತಾಯಿ.
34. ಅವನು ತನ್ನ ತಂದೆಯಾದ ಉಜ್ಜೀಯನಂತೆ ಯೆಹೋವ ದೇವರ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದನು.
35. ಆದರೂ ಪೂಜಾಸ್ಥಳಗಳನ್ನು ತೆಗೆದುಹಾಕಲಿಲ್ಲ ಆದ್ದರಿಂದ ಜನರು ಪೂಜಾಸ್ಥಳಗಳ ಮೇಲೆ ಬಲಿಗಳನ್ನೂ ಧೂಪಗಳನ್ನೂ ಅರ್ಪಿಸುವುದನ್ನು ಮುಂದುವರೆಸಿದ್ದರು. ಯೋತಾಮನು ಯೆಹೋವ ದೇವರ ಆಲಯದ ಮೇಲಿನ ಬಾಗಿಲನ್ನು ಕಟ್ಟಿಸಿದನು. [PE]
36. [PS]ಯೋತಾಮನ ಇತರ ಕ್ರಿಯೆಗಳೂ ಅವನು ಮಾಡಿದ ಸಮಸ್ತವೂ ಯೆಹೂದದ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.
37. ಆ ದಿವಸಗಳಲ್ಲಿ ಯೆಹೋವ ದೇವರು ಅರಾಮಿನ ಅರಸನಾದ ರೆಚೀನನನ್ನೂ ರೆಮಲ್ಯನ ಮಗ ಪೆಕಹನನ್ನೂ ಯೆಹೂದದ ವಿರೋಧವಾಗಿ ಕಳುಹಿಸಲು ಆರಂಭಿಸಿದರು.
38. ಯೋತಾಮನು ಮೃತನಾಗಿ ತನ್ನ ಪಿತೃಗಳ ಬಳಿಗೆ ಸೇರಿದನು. ಅವನ ಶವವನ್ನು ತಂದೆಯಾದ ದಾವೀದನ ಪಟ್ಟಣದಲ್ಲಿ ಅವನ ಪಿತೃಗಳ ಸ್ಮಶಾನದಲ್ಲಿ ಸಮಾಧಿಮಾಡಿದರು. ಅವನ ಮಗ ಆಹಾಜನು ಅವನಿಗೆ ಬದಲಾಗಿ ಅರಸನಾದನು. [PE]