ಪವಿತ್ರ ಬೈಬಲ್

ಓಪನ್ ಸಮಕಾಲೀನ ಆವೃತ್ತಿ (OCV)
2 ಅರಸುಗಳು
1. {#1ನಾಮಾನನ ಕುಷ್ಠರೋಗ ವಾಸಿಯಾದದ್ದು }
2. [PS]ಅರಾಮಿನ ಅರಸನ ಸೈನ್ಯಾಧಿಪತಿ ನಾಮಾನನು ತನ್ನ ಯಜಮಾನನ ಮುಂದೆ ಮಹಾಪುರುಷನಾಗಿಯೂ, ಘನವುಳ್ಳವನಾಗಿಯೂ ಇದ್ದನು. ಏಕೆಂದರೆ ಅವನಿಂದ ಯೆಹೋವ ದೇವರು ಅರಾಮ್ಯರಿಗೆ ಬಿಡುಗಡೆಯನ್ನು ಉಂಟುಮಾಡಿದ್ದರು. ಇದಲ್ಲದೆ ಅವನು ಪರಾಕ್ರಮಶಾಲಿಯಾಗಿದ್ದನು. ಆದರೆ ಅವನು ಕುಷ್ಠರೋಗಿಯಾಗಿದ್ದನು. [PE][PS]ಅರಾಮಿನವರು ಗುಂಪುಗುಂಪಾಗಿ ಹೊರಟು, ಇಸ್ರಾಯೇಲ್ ದೇಶದಿಂದ ಒಬ್ಬ ಹುಡುಗಿಯನ್ನು ಸೆರೆಯಾಗಿ ಹಿಡಿದುಕೊಂಡು ಬಂದರು. ಅವಳು ನಾಮಾನನ ಹೆಂಡತಿಗೆ ಸೇವಕಿಯಾದಳು.
3. ಅವಳು ತನ್ನ ಯಜಮಾನನಿಗೆ, “ನನ್ನ ಧಣಿಯು ಸಮಾರ್ಯದಲ್ಲಿರುವ ಪ್ರವಾದಿಯ ಬಳಿಯಲ್ಲಿರುತ್ತಿದ್ದರೆ, ಅವನು ಧಣಿಯ ಕುಷ್ಠರೋಗವನ್ನು ವಾಸಿಮಾಡುತ್ತಿದ್ದನು,” ಎಂದಳು. [PE]
4. [PS]ನಾಮಾನನು ಹೋಗಿ ಇಸ್ರಾಯೇಲ್ ದೇಶದ ಹುಡುಗಿಯು ಹೇಳಿದ್ದನ್ನು ತನ್ನ ಯಜಮಾನನಿಗೆ ತಿಳಿಸಿದನು.
5. ಅರಾಮ್ಯರ ಅರಸನು, “ನೀನು ಹೋಗಿ ಬಾ. ನಾನು ಇಸ್ರಾಯೇಲಿನ ಅರಸನಿಗೆ ಪತ್ರವನ್ನು ಕಳುಹಿಸುವೆನು,” ಎಂದನು. ಅದರಂತೆ ನಾಮಾನನು 340 ಕಿಲೋಗ್ರಾಂ ಬೆಳ್ಳಿ, 64 ಕಿಲೋಗ್ರಾಂ ಬಂಗಾರ, ಹತ್ತು ಜೊತೆ ಬಟ್ಟೆಗಳನ್ನೂ ತೆಗೆದುಕೊಂಡು ಹೋದನು.
6. ಅವನು ಇಸ್ರಾಯೇಲಿನ ಅರಸನ ಬಳಿಗೆ ಆ ಪತ್ರವನ್ನು ತೆಗೆದುಕೊಂಡು ಬಂದನು. ಅದರಲ್ಲಿ, “ಈ ಪತ್ರ ನಿನಗೆ ಸೇರುವಾಗ, ನಿನ್ನ ಸೇವಕನಾದ ನಾಮಾನನ ಕುಷ್ಠರೋಗವನ್ನು ವಾಸಿಮಾಡುವ ಹಾಗೆ ನಿನ್ನ ಬಳಿಗೆ ಕಳುಹಿಸಿದ್ದೇನೆ,” ಎಂದು ಬರೆದಿತ್ತು. [PE]
7.
8. [PS]ಇಸ್ರಾಯೇಲಿನ ಅರಸನು ಆ ಪತ್ರವನ್ನು ಓದಿದ ಮೇಲೆ ತನ್ನ ವಸ್ತ್ರಗಳನ್ನು ಹರಿದುಕೊಂಡು, “ಕೊಲ್ಲುವುದಕ್ಕೂ, ಬದುಕಿಸುವುದಕ್ಕೂ ನಾನು ದೇವರೋ? ಇವನ ಕುಷ್ಠರೋಗವನ್ನು ವಾಸಿ ಮಾಡುವುದಕ್ಕೆ ನನ್ನ ಬಳಿಗೆ ಕಳುಹಿಸಿದ್ದೇನು? ಇವನು ನನಗೆ ವಿರೋಧವಾಗಿ ಜಗಳಕ್ಕೆ ಕಾರಣ ಹುಡುಕುವುದನ್ನು ನೀವೇ ನೋಡಿರಿ,” ಎಂದನು. [PE][PS]ಇಸ್ರಾಯೇಲಿನ ಅರಸನು ತನ್ನ ವಸ್ತ್ರಗಳನ್ನು ಹರಿದುಕೊಂಡನೆಂದು ದೇವರ ಮನುಷ್ಯನಾದ ಎಲೀಷನು ಕೇಳಿದಾಗ, “ನೀನು ನಿನ್ನ ವಸ್ತ್ರಗಳನ್ನು ಹರಿದುಕೊಂಡದ್ದೇನು? ಇಸ್ರಾಯೇಲಿನಲ್ಲಿ ಪ್ರವಾದಿ ಇದ್ದಾನೆಂದು ನಾಮಾನನು ತಿಳಿದುಕೊಳ್ಳುವಂತೆ ಅವನು ನನ್ನ ಬಳಿಗೆ ಬರಲಿ,” ಎಂದು ಅರಸನಿಗೆ ಹೇಳಿ ಕಳುಹಿಸಿದನು.
9. ಹಾಗೆಯೇ ನಾಮಾನನು ತನ್ನ ಕುದುರೆಗಳ ಸಂಗಡ, ತನ್ನ ರಥದ ಸಂಗಡ ಬಂದು, ಎಲೀಷನ ಮನೆಯ ಬಾಗಿಲ ಬಳಿಯಲ್ಲಿ ನಿಂತನು.
10. ಆಗ ಎಲೀಷನು, “ನೀನು ಹೋಗಿ ಯೊರ್ದನಿನಲ್ಲಿ ಏಳು ಸಾರಿ ಸ್ನಾನಮಾಡು, ಆಗ ನಿನ್ನ ಶರೀರವು ಮೊದಲಿನಂತೆ ಮಾರ್ಪಡುವುದು, ನೀನು ಶುದ್ಧನಾಗುವೆ,” ಎಂದು ಹೇಳಲು, ಅವನ ಬಳಿಗೆ ಸೇವಕನನ್ನು ಕಳುಹಿಸಿದನು. [PE]
11. [PS]ಆಗ ನಾಮಾನನು ಕೋಪಗೊಂಡು ಹೊರಟುಹೋಗಿ, “ಅವನು ನಿಶ್ಚಯವಾಗಿ ನನ್ನ ಬಳಿಗೆ ಹೊರಟುಬಂದು, ತನ್ನ ದೇವರಾದ ಯೆಹೋವ ದೇವರ ಹೆಸರನ್ನು ಕರೆದು, ನನ್ನ ಚರ್ಮದ ಮೇಲೆ ತನ್ನ ಕೈಯನ್ನಾಡಿಸಿ, ಕುಷ್ಠರೋಗವನ್ನು ವಾಸಿಮಾಡುವನೆಂದು, ನಾನು ನೆನಸಿದೆ.
12. ನಾನು ಹೊಳೆಗಳಲ್ಲಿ ಸ್ನಾನಮಾಡಿ ಶುದ್ಧನಾಗುವಂತೆ ದಮಸ್ಕದ ನದಿಗಳಾದ ಅಬಾನಾವೂ, ಪಾರ್ಪರೂ ಇಸ್ರಾಯೇಲಿನ ಸಮಸ್ತ ನೀರುಗಳಿಗಿಂತ ಉತ್ತಮವಾಗಿಲ್ಲವೋ?” ಎಂದು ಹೇಳಿ ತಿರುಗಿಕೊಂಡು ಕೋಪದಿಂದ ಹೋದನು. [PE]
13. [PS]ಆದರೆ ನಾಮಾನನ ಸೇವಕನು ಅವನ ಬಳಿಗೆ ಬಂದು, ಅವನ ಸಂಗಡ ಮಾತನಾಡಿ, “ನನ್ನ ತಂದೆಯೇ, ಪ್ರವಾದಿಯು ದೊಡ್ಡ ಕಾರ್ಯವನ್ನು ನಿನಗೆ ಹೇಳಿದ್ದರೆ, ನೀನು ಮಾಡುತ್ತಿದ್ದಿಲ್ಲವೋ? ಅವನು ನಿನಗೆ, ‘ಸ್ನಾನಮಾಡಿ ಶುದ್ಧನಾಗು’ ಎಂದು ಹೇಳಿದರಲ್ಲಿ ಅಡ್ಡಿ ಏನು?” ಎಂದನು.
14. ಆಗ ಅವನು ಇಳಿದು ಹೋಗಿ ದೇವರ ಮನುಷ್ಯನ ಮಾತಿನ ಪ್ರಕಾರ ಯೊರ್ದನಿನಲ್ಲಿ ಏಳು ಸಾರಿ ಮುಳುಗಿದನು. ಆಗ ಅವನ ಶರೀರವು ಚಿಕ್ಕ ಮಗುವಿನ ಶರೀರದ ಹಾಗೆ ಮಾರ್ಪಟ್ಟಿತು, ಅವನು ಶುದ್ಧನಾದನು. [PE]
15.
16. [PS]ಆಗ ನಾಮಾನನೂ, ಅವನ ಸಮಸ್ತ ಸೈನ್ಯವೂ ದೇವರ ಮನುಷ್ಯನ ಬಳಿಗೆ ತಿರುಗಿ ಬಂದರು. ಅವನು ಪ್ರವಾದಿಯ ಮುಂದೆ ಬಂದು ನಿಂತು, “ಇಸ್ರಾಯೇಲಿನಲ್ಲಿರುವ ದೇವರ ಹೊರತು ಭೂಮಿಯಲ್ಲೆಲ್ಲೂ ಬೇರೆ ದೇವರು ಇಲ್ಲವೆಂದು ನಾನು ಬಲ್ಲೆನು. ಆದಕಾರಣ ನೀನು ದಯಮಾಡಿ ನಿನ್ನ ಸೇವಕನಿಂದ ಕಾಣಿಕೆಯನ್ನು ತೆಗೆದುಕೋ,” ಎಂದನು. [PE]
17. [PS]ಆದರೆ ಪ್ರವಾದಿಯು, “ನಾನು ಯಾರ ಮುಂದೆ ನಿಲ್ಲುತ್ತೇನೋ ಆ ಯೆಹೋವ ದೇವರ ಜೀವದಾಣೆ, ನಾನು ಏನೂ ತೆಗೆದುಕೊಳ್ಳುವುದಿಲ್ಲ,” ಎಂದನು. ಅವನು ತೆಗೆದುಕೊಳ್ಳಬೇಕೆಂದು ಬಲವಂತ ಮಾಡಿದರೂ, “ಬೇಡ,” ಎಂದನು. [PE][PS]ನಾಮಾನನು, “ಹಾಗಾದರೆ ಎರಡು ಹೇಸರಗತ್ತೆಗಳು ಹೊರತಕ್ಕ ಮಣ್ಣು ನಿನ್ನ ಸೇವಕನಿಗೆ ಕೊಡುವಂತೆ ಮಾಡು. ಏಕೆಂದರೆ ನಿನ್ನ ಸೇವಕನು ಇನ್ನು ಮೇಲೆ ಯೆಹೋವ ದೇವರಿಗೆ ಹೊರತಾಗಿ ಅನ್ಯ ದೇವರುಗಳಿಗೆ ದಹನಬಲಿಯನ್ನಾಗಲಿ, ಯಜ್ಞವನ್ನಾಗಲಿ ಅರ್ಪಿಸನು.
18. ಈ ಕಾರ್ಯವನ್ನು ಯೆಹೋವ ದೇವರು ನಿನ್ನ ಸೇವಕನಿಗೆ ಮನ್ನಿಸಲಿ. ಏನೆಂದರೆ, ನನ್ನ ಯಜಮಾನನು ಅಡ್ಡ ಬೀಳುವುದಕ್ಕೆ ರಿಮ್ಮೋನನ ದೇವಸ್ಥಾನಕ್ಕೆ ಹೋಗಿ, ಅವನು ನನ್ನ ಕೈಯ ಮೇಲೆ ಆತುಕೊಳ್ಳುವಾಗ, ರಿಮ್ಮೋನನ ದೇವಸ್ಥಾನದಲ್ಲಿ ನಾನು ಬಾಗಿದರೆ, ಯೆಹೋವ ದೇವರು ನಿನ್ನ ಸೇವಕನಿಗೆ ಈ ಕಾರ್ಯವನ್ನು ಮನ್ನಿಸಲಿ,” ಎಂದನು. [PE]
19. [PS]ಅದಕ್ಕೆ ಎಲೀಷನು, “ಸಮಾಧಾನದಿಂದ ಹೋಗು,” ಎಂದನು. [PE][PS]ನಾಮಾನನು ಸ್ವಲ್ಪ ದೂರ ಹೋದನು.
20. ದೇವರ ಮನುಷ್ಯನಾದ ಎಲೀಷನ ಸೇವಕನಾಗಿರುವ ಗೇಹಜಿಯು, “ನನ್ನ ಯಜಮಾನನು ಈ ಅರಾಮ್ಯನಾದ ನಾಮಾನನು ತೆಗೆದುಕೊಂಡು ಬಂದದ್ದನ್ನು ಅವನ ಕೈಯಿಂದ ತೆಗೆದುಕೊಳ್ಳದೆ ಸುಮ್ಮನೆ ಕಳುಹಿಸಿದ್ದಾನೆ. ಆದರೆ ಯೆಹೋವ ದೇವರ ಜೀವದಾಣೆ, ನಾನು ಅವನ ಹಿಂದೆ ಓಡಿಹೋಗಿ, ಅವನ ಕೈಯಿಂದ ಏನಾದರೂ ತೆಗೆದುಕೊಳ್ಳುವೆನು,” ಅಂದುಕೊಂಡನು. [PE]
21.
22. [PS]ಅದರಂತೆ ಗೇಹಜಿಯು ನಾಮಾನನ ಹಿಂದೆ ಹೋದನು. ನಾಮಾನನು ತನ್ನ ಹಿಂದೆ ಓಡಿ ಬರುವವನನ್ನು ಕಂಡಾಗ, ಅವನನ್ನು ಎದುರುಗೊಳ್ಳಲು ರಥದಿಂದ ಇಳಿದು ಅವನಿಗೆ, “ಎಲ್ಲಾ ಕ್ಷೇಮವೋ?” ಎಂದನು. [PE]
23. [PS]ಅದಕ್ಕೆ ಗೇಹಜಿಯು, “ಎಲ್ಲಾ ಕ್ಷೇಮ. ಪ್ರವಾದಿಗಳ ಮಂಡಳಿಯಲ್ಲಿಯ ಇಬ್ಬರು ಯುವಕರು ಎಫ್ರಾಯೀಮ್ ಬೆಟ್ಟದಿಂದ ಈಗಲೇ ನನ್ನ ಬಳಿಗೆ ಬಂದಿದ್ದಾರೆ. ನೀನು ದಯಮಾಡಿ ಅವರಿಗೆ ಮೂರು ಸಾವಿರ ಬೆಳ್ಳಿ ನಾಣ್ಯಗಳನ್ನೂ, ಎರಡು ಜೊತೆ ಬಟ್ಟೆಗಳನ್ನೂ ಕೊಡಬೇಕೆಂದು ನಿನಗೆ ಹೇಳು ಎಂದು ನನ್ನ ಯಜಮಾನನು ಕಳುಹಿಸಿದ್ದಾನೆ,” ಎಂದನು. [PE][PS]ಆಗ ನಾಮಾನನು, “ನೀನು ದಯಮಾಡಿ ಆರು ಸಾವಿರ ನಾಣ್ಯಗಳನ್ನಾದರೂ ತೆಗೆದುಕೋ,” ಎಂದು ಹೇಳಿ ಗೇಹಜಿಯನ್ನು ಬಲವಂತ ಮಾಡಿದನು. ಹಾಗೆಯೇ ಆರು ಸಾವಿರ ಬೆಳ್ಳಿ ನಾಣ್ಯಗಳನ್ನು ಎರಡು ಚೀಲಗಳಲ್ಲಿ ಕಟ್ಟಿಸಿ, ಅದರ ಸಂಗಡ ಎರಡು ಜೊತೆ ಬಟ್ಟೆಗಳನ್ನು ಕೊಟ್ಟು, ತನ್ನ ಸೇವಕರಲ್ಲಿ ಇಬ್ಬರ ಮೇಲೆ ಹೊರಿಸಿದನು. ಅವರು ಗೇಹಜಿಯ ಮುಂದೆ ಹೊತ್ತುಕೊಂಡು ಹೋದರು.
24. ಆದರೆ ಗೇಹಜಿಯು ಬೆಟ್ಟಕ್ಕೆ ಬಂದಾಗ, ಅವರ ಕೈಯಿಂದ ಅವುಗಳನ್ನು ತೆಗೆದುಕೊಂಡು ಮನೆಯಲ್ಲಿಟ್ಟು, ಆ ಮನುಷ್ಯರನ್ನು ಕಳುಹಿಸಿಬಿಟ್ಟದ್ದರಿಂದ ಅವರು ಹೊರಟು ಹೋದರು. [PE]
25.
26. [PS]ಆಗ ಗೇಹಜಿಯು ಒಳಗೆ ಪ್ರವೇಶಿಸಿ, ತನ್ನ ಯಜಮಾನನ ಮುಂದೆ ನಿಂತನು. ಎಲೀಷನು ಅವನಿಗೆ, “ಗೇಹಜಿಯೇ, ಎಲ್ಲಿಗೆ ಹೋಗಿ ಬಂದೆ?” ಎಂದನು. [PE][PS]ಅದಕ್ಕೆ ಗೇಹಜಿಯು, “ನಿನ್ನ ಸೇವಕನು ಎಲ್ಲಿಗೂ ಹೋಗಲಿಲ್ಲ,” ಎಂದನು. [PE][PS]ಆದರೆ ಎಲೀಷನು ಅವನಿಗೆ, “ಆ ಮನುಷ್ಯನು ನಿನ್ನನ್ನು ಎದುರುಗೊಳ್ಳಲು ತನ್ನ ರಥದಿಂದ ಇಳಿದು ನಿನ್ನ ಬಳಿಗೆ ಬಂದಾಗ, ನನ್ನ ಹೃದಯವು ನಿನ್ನ ಸಂಗಡ ಹೋಗಲಿಲ್ಲವೋ? ಹಣವನ್ನೂ, ವಸ್ತ್ರಗಳನ್ನೂ, ದ್ರವ್ಯವನ್ನೂ, ಹಿಪ್ಪೆಯ ತೋಪುಗಳನ್ನೂ, ದ್ರಾಕ್ಷಿಯ ತೋಟಗಳನ್ನೂ, ಕುರಿದನಗಳನ್ನೂ, ದಾಸದಾಸಿಯರನ್ನೂ ಪಡೆದುಕೊಳ್ಳುವುದಕ್ಕೆ ಇದು ಸಮಯವೋ?
27. ನಾಮಾನನ ಕುಷ್ಠರೋಗವು ನಿನಗೂ, ನಿನ್ನ ಸಂತಾನಕ್ಕೂ ನಿತ್ಯವಾಗಿ ಇರುವುದು,” ಎಂದನು. ಆಗ ಗೇಹಜಿಯು ಹಿಮದಂತೆ ಬಿಳುಪಾಗಿ, ಕುಷ್ಠರೋಗಿ ಆಗಿ ಎಲೀಷನಿಂದ ಹೊರಟುಹೋದನು. [PE]
ಒಟ್ಟು 25 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 5 / 25
ನಾಮಾನನ ಕುಷ್ಠರೋಗ ವಾಸಿಯಾದದ್ದು 1 2 ಅರಾಮಿನ ಅರಸನ ಸೈನ್ಯಾಧಿಪತಿ ನಾಮಾನನು ತನ್ನ ಯಜಮಾನನ ಮುಂದೆ ಮಹಾಪುರುಷನಾಗಿಯೂ, ಘನವುಳ್ಳವನಾಗಿಯೂ ಇದ್ದನು. ಏಕೆಂದರೆ ಅವನಿಂದ ಯೆಹೋವ ದೇವರು ಅರಾಮ್ಯರಿಗೆ ಬಿಡುಗಡೆಯನ್ನು ಉಂಟುಮಾಡಿದ್ದರು. ಇದಲ್ಲದೆ ಅವನು ಪರಾಕ್ರಮಶಾಲಿಯಾಗಿದ್ದನು. ಆದರೆ ಅವನು ಕುಷ್ಠರೋಗಿಯಾಗಿದ್ದನು. ಅರಾಮಿನವರು ಗುಂಪುಗುಂಪಾಗಿ ಹೊರಟು, ಇಸ್ರಾಯೇಲ್ ದೇಶದಿಂದ ಒಬ್ಬ ಹುಡುಗಿಯನ್ನು ಸೆರೆಯಾಗಿ ಹಿಡಿದುಕೊಂಡು ಬಂದರು. ಅವಳು ನಾಮಾನನ ಹೆಂಡತಿಗೆ ಸೇವಕಿಯಾದಳು. 3 ಅವಳು ತನ್ನ ಯಜಮಾನನಿಗೆ, “ನನ್ನ ಧಣಿಯು ಸಮಾರ್ಯದಲ್ಲಿರುವ ಪ್ರವಾದಿಯ ಬಳಿಯಲ್ಲಿರುತ್ತಿದ್ದರೆ, ಅವನು ಧಣಿಯ ಕುಷ್ಠರೋಗವನ್ನು ವಾಸಿಮಾಡುತ್ತಿದ್ದನು,” ಎಂದಳು. 4 ನಾಮಾನನು ಹೋಗಿ ಇಸ್ರಾಯೇಲ್ ದೇಶದ ಹುಡುಗಿಯು ಹೇಳಿದ್ದನ್ನು ತನ್ನ ಯಜಮಾನನಿಗೆ ತಿಳಿಸಿದನು. 5 ಅರಾಮ್ಯರ ಅರಸನು, “ನೀನು ಹೋಗಿ ಬಾ. ನಾನು ಇಸ್ರಾಯೇಲಿನ ಅರಸನಿಗೆ ಪತ್ರವನ್ನು ಕಳುಹಿಸುವೆನು,” ಎಂದನು. ಅದರಂತೆ ನಾಮಾನನು 340 ಕಿಲೋಗ್ರಾಂ ಬೆಳ್ಳಿ, 64 ಕಿಲೋಗ್ರಾಂ ಬಂಗಾರ, ಹತ್ತು ಜೊತೆ ಬಟ್ಟೆಗಳನ್ನೂ ತೆಗೆದುಕೊಂಡು ಹೋದನು. 6 ಅವನು ಇಸ್ರಾಯೇಲಿನ ಅರಸನ ಬಳಿಗೆ ಆ ಪತ್ರವನ್ನು ತೆಗೆದುಕೊಂಡು ಬಂದನು. ಅದರಲ್ಲಿ, “ಈ ಪತ್ರ ನಿನಗೆ ಸೇರುವಾಗ, ನಿನ್ನ ಸೇವಕನಾದ ನಾಮಾನನ ಕುಷ್ಠರೋಗವನ್ನು ವಾಸಿಮಾಡುವ ಹಾಗೆ ನಿನ್ನ ಬಳಿಗೆ ಕಳುಹಿಸಿದ್ದೇನೆ,” ಎಂದು ಬರೆದಿತ್ತು. 7 8 ಇಸ್ರಾಯೇಲಿನ ಅರಸನು ಆ ಪತ್ರವನ್ನು ಓದಿದ ಮೇಲೆ ತನ್ನ ವಸ್ತ್ರಗಳನ್ನು ಹರಿದುಕೊಂಡು, “ಕೊಲ್ಲುವುದಕ್ಕೂ, ಬದುಕಿಸುವುದಕ್ಕೂ ನಾನು ದೇವರೋ? ಇವನ ಕುಷ್ಠರೋಗವನ್ನು ವಾಸಿ ಮಾಡುವುದಕ್ಕೆ ನನ್ನ ಬಳಿಗೆ ಕಳುಹಿಸಿದ್ದೇನು? ಇವನು ನನಗೆ ವಿರೋಧವಾಗಿ ಜಗಳಕ್ಕೆ ಕಾರಣ ಹುಡುಕುವುದನ್ನು ನೀವೇ ನೋಡಿರಿ,” ಎಂದನು. ಇಸ್ರಾಯೇಲಿನ ಅರಸನು ತನ್ನ ವಸ್ತ್ರಗಳನ್ನು ಹರಿದುಕೊಂಡನೆಂದು ದೇವರ ಮನುಷ್ಯನಾದ ಎಲೀಷನು ಕೇಳಿದಾಗ, “ನೀನು ನಿನ್ನ ವಸ್ತ್ರಗಳನ್ನು ಹರಿದುಕೊಂಡದ್ದೇನು? ಇಸ್ರಾಯೇಲಿನಲ್ಲಿ ಪ್ರವಾದಿ ಇದ್ದಾನೆಂದು ನಾಮಾನನು ತಿಳಿದುಕೊಳ್ಳುವಂತೆ ಅವನು ನನ್ನ ಬಳಿಗೆ ಬರಲಿ,” ಎಂದು ಅರಸನಿಗೆ ಹೇಳಿ ಕಳುಹಿಸಿದನು. 9 ಹಾಗೆಯೇ ನಾಮಾನನು ತನ್ನ ಕುದುರೆಗಳ ಸಂಗಡ, ತನ್ನ ರಥದ ಸಂಗಡ ಬಂದು, ಎಲೀಷನ ಮನೆಯ ಬಾಗಿಲ ಬಳಿಯಲ್ಲಿ ನಿಂತನು. 10 ಆಗ ಎಲೀಷನು, “ನೀನು ಹೋಗಿ ಯೊರ್ದನಿನಲ್ಲಿ ಏಳು ಸಾರಿ ಸ್ನಾನಮಾಡು, ಆಗ ನಿನ್ನ ಶರೀರವು ಮೊದಲಿನಂತೆ ಮಾರ್ಪಡುವುದು, ನೀನು ಶುದ್ಧನಾಗುವೆ,” ಎಂದು ಹೇಳಲು, ಅವನ ಬಳಿಗೆ ಸೇವಕನನ್ನು ಕಳುಹಿಸಿದನು. 11 ಆಗ ನಾಮಾನನು ಕೋಪಗೊಂಡು ಹೊರಟುಹೋಗಿ, “ಅವನು ನಿಶ್ಚಯವಾಗಿ ನನ್ನ ಬಳಿಗೆ ಹೊರಟುಬಂದು, ತನ್ನ ದೇವರಾದ ಯೆಹೋವ ದೇವರ ಹೆಸರನ್ನು ಕರೆದು, ನನ್ನ ಚರ್ಮದ ಮೇಲೆ ತನ್ನ ಕೈಯನ್ನಾಡಿಸಿ, ಕುಷ್ಠರೋಗವನ್ನು ವಾಸಿಮಾಡುವನೆಂದು, ನಾನು ನೆನಸಿದೆ. 12 ನಾನು ಹೊಳೆಗಳಲ್ಲಿ ಸ್ನಾನಮಾಡಿ ಶುದ್ಧನಾಗುವಂತೆ ದಮಸ್ಕದ ನದಿಗಳಾದ ಅಬಾನಾವೂ, ಪಾರ್ಪರೂ ಇಸ್ರಾಯೇಲಿನ ಸಮಸ್ತ ನೀರುಗಳಿಗಿಂತ ಉತ್ತಮವಾಗಿಲ್ಲವೋ?” ಎಂದು ಹೇಳಿ ತಿರುಗಿಕೊಂಡು ಕೋಪದಿಂದ ಹೋದನು. 13 ಆದರೆ ನಾಮಾನನ ಸೇವಕನು ಅವನ ಬಳಿಗೆ ಬಂದು, ಅವನ ಸಂಗಡ ಮಾತನಾಡಿ, “ನನ್ನ ತಂದೆಯೇ, ಪ್ರವಾದಿಯು ದೊಡ್ಡ ಕಾರ್ಯವನ್ನು ನಿನಗೆ ಹೇಳಿದ್ದರೆ, ನೀನು ಮಾಡುತ್ತಿದ್ದಿಲ್ಲವೋ? ಅವನು ನಿನಗೆ, ‘ಸ್ನಾನಮಾಡಿ ಶುದ್ಧನಾಗು’ ಎಂದು ಹೇಳಿದರಲ್ಲಿ ಅಡ್ಡಿ ಏನು?” ಎಂದನು. 14 ಆಗ ಅವನು ಇಳಿದು ಹೋಗಿ ದೇವರ ಮನುಷ್ಯನ ಮಾತಿನ ಪ್ರಕಾರ ಯೊರ್ದನಿನಲ್ಲಿ ಏಳು ಸಾರಿ ಮುಳುಗಿದನು. ಆಗ ಅವನ ಶರೀರವು ಚಿಕ್ಕ ಮಗುವಿನ ಶರೀರದ ಹಾಗೆ ಮಾರ್ಪಟ್ಟಿತು, ಅವನು ಶುದ್ಧನಾದನು. 15 16 ಆಗ ನಾಮಾನನೂ, ಅವನ ಸಮಸ್ತ ಸೈನ್ಯವೂ ದೇವರ ಮನುಷ್ಯನ ಬಳಿಗೆ ತಿರುಗಿ ಬಂದರು. ಅವನು ಪ್ರವಾದಿಯ ಮುಂದೆ ಬಂದು ನಿಂತು, “ಇಸ್ರಾಯೇಲಿನಲ್ಲಿರುವ ದೇವರ ಹೊರತು ಭೂಮಿಯಲ್ಲೆಲ್ಲೂ ಬೇರೆ ದೇವರು ಇಲ್ಲವೆಂದು ನಾನು ಬಲ್ಲೆನು. ಆದಕಾರಣ ನೀನು ದಯಮಾಡಿ ನಿನ್ನ ಸೇವಕನಿಂದ ಕಾಣಿಕೆಯನ್ನು ತೆಗೆದುಕೋ,” ಎಂದನು. 17 ಆದರೆ ಪ್ರವಾದಿಯು, “ನಾನು ಯಾರ ಮುಂದೆ ನಿಲ್ಲುತ್ತೇನೋ ಆ ಯೆಹೋವ ದೇವರ ಜೀವದಾಣೆ, ನಾನು ಏನೂ ತೆಗೆದುಕೊಳ್ಳುವುದಿಲ್ಲ,” ಎಂದನು. ಅವನು ತೆಗೆದುಕೊಳ್ಳಬೇಕೆಂದು ಬಲವಂತ ಮಾಡಿದರೂ, “ಬೇಡ,” ಎಂದನು. ನಾಮಾನನು, “ಹಾಗಾದರೆ ಎರಡು ಹೇಸರಗತ್ತೆಗಳು ಹೊರತಕ್ಕ ಮಣ್ಣು ನಿನ್ನ ಸೇವಕನಿಗೆ ಕೊಡುವಂತೆ ಮಾಡು. ಏಕೆಂದರೆ ನಿನ್ನ ಸೇವಕನು ಇನ್ನು ಮೇಲೆ ಯೆಹೋವ ದೇವರಿಗೆ ಹೊರತಾಗಿ ಅನ್ಯ ದೇವರುಗಳಿಗೆ ದಹನಬಲಿಯನ್ನಾಗಲಿ, ಯಜ್ಞವನ್ನಾಗಲಿ ಅರ್ಪಿಸನು. 18 ಈ ಕಾರ್ಯವನ್ನು ಯೆಹೋವ ದೇವರು ನಿನ್ನ ಸೇವಕನಿಗೆ ಮನ್ನಿಸಲಿ. ಏನೆಂದರೆ, ನನ್ನ ಯಜಮಾನನು ಅಡ್ಡ ಬೀಳುವುದಕ್ಕೆ ರಿಮ್ಮೋನನ ದೇವಸ್ಥಾನಕ್ಕೆ ಹೋಗಿ, ಅವನು ನನ್ನ ಕೈಯ ಮೇಲೆ ಆತುಕೊಳ್ಳುವಾಗ, ರಿಮ್ಮೋನನ ದೇವಸ್ಥಾನದಲ್ಲಿ ನಾನು ಬಾಗಿದರೆ, ಯೆಹೋವ ದೇವರು ನಿನ್ನ ಸೇವಕನಿಗೆ ಈ ಕಾರ್ಯವನ್ನು ಮನ್ನಿಸಲಿ,” ಎಂದನು. 19 ಅದಕ್ಕೆ ಎಲೀಷನು, “ಸಮಾಧಾನದಿಂದ ಹೋಗು,” ಎಂದನು. ನಾಮಾನನು ಸ್ವಲ್ಪ ದೂರ ಹೋದನು. 20 ದೇವರ ಮನುಷ್ಯನಾದ ಎಲೀಷನ ಸೇವಕನಾಗಿರುವ ಗೇಹಜಿಯು, “ನನ್ನ ಯಜಮಾನನು ಈ ಅರಾಮ್ಯನಾದ ನಾಮಾನನು ತೆಗೆದುಕೊಂಡು ಬಂದದ್ದನ್ನು ಅವನ ಕೈಯಿಂದ ತೆಗೆದುಕೊಳ್ಳದೆ ಸುಮ್ಮನೆ ಕಳುಹಿಸಿದ್ದಾನೆ. ಆದರೆ ಯೆಹೋವ ದೇವರ ಜೀವದಾಣೆ, ನಾನು ಅವನ ಹಿಂದೆ ಓಡಿಹೋಗಿ, ಅವನ ಕೈಯಿಂದ ಏನಾದರೂ ತೆಗೆದುಕೊಳ್ಳುವೆನು,” ಅಂದುಕೊಂಡನು. 21 22 ಅದರಂತೆ ಗೇಹಜಿಯು ನಾಮಾನನ ಹಿಂದೆ ಹೋದನು. ನಾಮಾನನು ತನ್ನ ಹಿಂದೆ ಓಡಿ ಬರುವವನನ್ನು ಕಂಡಾಗ, ಅವನನ್ನು ಎದುರುಗೊಳ್ಳಲು ರಥದಿಂದ ಇಳಿದು ಅವನಿಗೆ, “ಎಲ್ಲಾ ಕ್ಷೇಮವೋ?” ಎಂದನು. 23 ಅದಕ್ಕೆ ಗೇಹಜಿಯು, “ಎಲ್ಲಾ ಕ್ಷೇಮ. ಪ್ರವಾದಿಗಳ ಮಂಡಳಿಯಲ್ಲಿಯ ಇಬ್ಬರು ಯುವಕರು ಎಫ್ರಾಯೀಮ್ ಬೆಟ್ಟದಿಂದ ಈಗಲೇ ನನ್ನ ಬಳಿಗೆ ಬಂದಿದ್ದಾರೆ. ನೀನು ದಯಮಾಡಿ ಅವರಿಗೆ ಮೂರು ಸಾವಿರ ಬೆಳ್ಳಿ ನಾಣ್ಯಗಳನ್ನೂ, ಎರಡು ಜೊತೆ ಬಟ್ಟೆಗಳನ್ನೂ ಕೊಡಬೇಕೆಂದು ನಿನಗೆ ಹೇಳು ಎಂದು ನನ್ನ ಯಜಮಾನನು ಕಳುಹಿಸಿದ್ದಾನೆ,” ಎಂದನು. ಆಗ ನಾಮಾನನು, “ನೀನು ದಯಮಾಡಿ ಆರು ಸಾವಿರ ನಾಣ್ಯಗಳನ್ನಾದರೂ ತೆಗೆದುಕೋ,” ಎಂದು ಹೇಳಿ ಗೇಹಜಿಯನ್ನು ಬಲವಂತ ಮಾಡಿದನು. ಹಾಗೆಯೇ ಆರು ಸಾವಿರ ಬೆಳ್ಳಿ ನಾಣ್ಯಗಳನ್ನು ಎರಡು ಚೀಲಗಳಲ್ಲಿ ಕಟ್ಟಿಸಿ, ಅದರ ಸಂಗಡ ಎರಡು ಜೊತೆ ಬಟ್ಟೆಗಳನ್ನು ಕೊಟ್ಟು, ತನ್ನ ಸೇವಕರಲ್ಲಿ ಇಬ್ಬರ ಮೇಲೆ ಹೊರಿಸಿದನು. ಅವರು ಗೇಹಜಿಯ ಮುಂದೆ ಹೊತ್ತುಕೊಂಡು ಹೋದರು. 24 ಆದರೆ ಗೇಹಜಿಯು ಬೆಟ್ಟಕ್ಕೆ ಬಂದಾಗ, ಅವರ ಕೈಯಿಂದ ಅವುಗಳನ್ನು ತೆಗೆದುಕೊಂಡು ಮನೆಯಲ್ಲಿಟ್ಟು, ಆ ಮನುಷ್ಯರನ್ನು ಕಳುಹಿಸಿಬಿಟ್ಟದ್ದರಿಂದ ಅವರು ಹೊರಟು ಹೋದರು. 25 26 ಆಗ ಗೇಹಜಿಯು ಒಳಗೆ ಪ್ರವೇಶಿಸಿ, ತನ್ನ ಯಜಮಾನನ ಮುಂದೆ ನಿಂತನು. ಎಲೀಷನು ಅವನಿಗೆ, “ಗೇಹಜಿಯೇ, ಎಲ್ಲಿಗೆ ಹೋಗಿ ಬಂದೆ?” ಎಂದನು. ಅದಕ್ಕೆ ಗೇಹಜಿಯು, “ನಿನ್ನ ಸೇವಕನು ಎಲ್ಲಿಗೂ ಹೋಗಲಿಲ್ಲ,” ಎಂದನು. ಆದರೆ ಎಲೀಷನು ಅವನಿಗೆ, “ಆ ಮನುಷ್ಯನು ನಿನ್ನನ್ನು ಎದುರುಗೊಳ್ಳಲು ತನ್ನ ರಥದಿಂದ ಇಳಿದು ನಿನ್ನ ಬಳಿಗೆ ಬಂದಾಗ, ನನ್ನ ಹೃದಯವು ನಿನ್ನ ಸಂಗಡ ಹೋಗಲಿಲ್ಲವೋ? ಹಣವನ್ನೂ, ವಸ್ತ್ರಗಳನ್ನೂ, ದ್ರವ್ಯವನ್ನೂ, ಹಿಪ್ಪೆಯ ತೋಪುಗಳನ್ನೂ, ದ್ರಾಕ್ಷಿಯ ತೋಟಗಳನ್ನೂ, ಕುರಿದನಗಳನ್ನೂ, ದಾಸದಾಸಿಯರನ್ನೂ ಪಡೆದುಕೊಳ್ಳುವುದಕ್ಕೆ ಇದು ಸಮಯವೋ? 27 ನಾಮಾನನ ಕುಷ್ಠರೋಗವು ನಿನಗೂ, ನಿನ್ನ ಸಂತಾನಕ್ಕೂ ನಿತ್ಯವಾಗಿ ಇರುವುದು,” ಎಂದನು. ಆಗ ಗೇಹಜಿಯು ಹಿಮದಂತೆ ಬಿಳುಪಾಗಿ, ಕುಷ್ಠರೋಗಿ ಆಗಿ ಎಲೀಷನಿಂದ ಹೊರಟುಹೋದನು.
ಒಟ್ಟು 25 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 5 / 25
×

Alert

×

Kannada Letters Keypad References