1. [PS]ಆದರೆ ಕಡೆಯ ದಿವಸಗಳಲ್ಲಿ ಕಷ್ಟಕರವಾದ ಕಾಲಗಳು ಬರುವುವೆಂಬುದನ್ನು ಸಹ ತಿಳಿದುಕೋ.
2. ಮನುಷ್ಯರು ತಮ್ಮನ್ನು ತಾವೇ ಪ್ರೀತಿಸಿಕೊಳ್ಳುವವರೂ ಹಣದಾಶೆಯುಳ್ಳವರೂ ಬಡಾಯಿ ಕೊಚ್ಚುವವರೂ ಅಹಂಕಾರಿಗಳೂ ದೇವದೂಷಕರೂ ತಂದೆತಾಯಿಗಳಿಗೆ ಅವಿಧೇಯರೂ ಕೃತಜ್ಞತೆಯಿಲ್ಲದವರೂ ಅಶುದ್ಧರೂ
3. ಮಾನವತ್ವವಿಲ್ಲದವರೂ ಸಮಾಧಾನವಾಗದವರೂ ಚಾಡಿಕೋರರೂ ಸಂಯಮವಿಲ್ಲದವರೂ ಉಗ್ರತೆಯುಳ್ಳವರೂ ಒಳ್ಳೆಯದನ್ನು ಪ್ರೀತಿಸದವರೂ
4. ದ್ರೋಹಿಗಳೂ ದುಡುಕುವವರೂ ಉಬ್ಬಿಕೊಂಡವರೂ ದೇವರನ್ನು ಪ್ರೀತಿಸುವುದಕ್ಕಿಂತಲೂ ಭೋಗಗಳನ್ನೇ ಪ್ರೀತಿಸುವವರೂ
5. ಭಕ್ತಿಯ ವೇಷವಿದ್ದು ಅದರ ಬಲವನ್ನು ಅಲ್ಲಗಳೆಯುವವರೂ ಆಗಿರುವರು. ಇಂಥವರನ್ನು ಬಿಟ್ಟು ಪ್ರತ್ಯೇಕವಾಗಿರು. [PE]
6. [PS]ಇಂಥವರು ಮನೆಗಳಲ್ಲಿ ನುಸುಳಿ ಪಾಪಗಳಿಂದ ತುಂಬಿದವರೂ ನಾನಾ ವಿಧವಾದ ಇಚ್ಛೆಗಳಿಂದ ಪ್ರೇರಣೆ ಹೊಂದಿ ಸುಲಭವಾಗಿ ಮೋಸಹೋಗುವ ಸ್ತ್ರೀಯರನ್ನು ವಶಮಾಡಿಕೊಳ್ಳುವರು.
7. ಇಂಥ ಸ್ತ್ರೀಯರು ಯಾವಾಗಲೂ ಕಲಿಯುತ್ತಿದ್ದರೂ ಸತ್ಯದ ಜ್ಞಾನಕ್ಕೆ ಬರಲಾರದವರು ಆಗಿರುವರು.
8. ಯನ್ನ, ಯಂಬ್ರ ಎಂಬವರು ಮೋಶೆಯನ್ನು ವಿರೋಧಿಸಿದಂತೆಯೇ, ಈ ಸುಳ್ಳು ಬೋಧಕರು ಸಹ ಸತ್ಯವನ್ನು ವಿರೋಧಿಸುತ್ತಾರೆ. ಇದಲ್ಲದೆ ಇವರು ಬುದ್ಧಿಗೆಟ್ಟವರೂ ವಿಶ್ವಾಸದ ವಿಷಯದಲ್ಲಿ ಭ್ರಷ್ಠರೂ ಆಗಿ, ತಿರಸ್ಕಾರ ಹೊಂದಿರುತ್ತಾರೆ.
9. ಆದರೆ ಇವರು ಇನ್ನು ಮುಂದುವರಿಯಲಾರರು. ಯನ್ನ, ಯಂಬ್ರರ ಮೂರ್ಖತನವು ಎಲ್ಲರಿಗೂ ಸ್ಪಷ್ಟವಾಗಿ ತಿಳಿದುಬಂದಂತೆಯೇ, ಇವರದೂ ತಿಳಿದುಬರುವುದು. [PE]
10. {#1ತಿಮೊಥೆಗೆ ಪೌಲನ ಅಪ್ಪಣೆ } [PS]ನೀನಾದರೋ ನನ್ನ ಎಲ್ಲಾ ಬೋಧನೆ, ನನ್ನ ನಡತೆ, ನನ್ನ ಉದ್ದೇಶ, ನಂಬಿಕೆ, ದೀರ್ಘಶಾಂತಿ, ಪ್ರೀತಿ, ಸೈರಣೆ,
11. ನಾನು ಎಂತೆಂಥ ಹಿಂಸೆಗಳನ್ನು ಸಹಿಸಿಕೊಂಡೆನೆಂಬುದನ್ನೂ ಅಂತಿಯೋಕ್ಯ, ಇಕೋನ್ಯ, ಲುಸ್ತ್ರ ಪಟ್ಟಣಗಳಲ್ಲಿ ನನಗೆ ಸಂಭವಿಸಿದ ಕಷ್ಟಾನುಭವಗಳನ್ನೂ ನನಗುಂಟಾದ ಎಲ್ಲಾ ಹಿಂಸೆಗಳನ್ನೂ ನೀನು ಪೂರ್ಣವಾಗಿ ತಿಳಿದವನಾಗಿದ್ದೀ. ಆದರೆ ಕರ್ತದೇವರು ನನ್ನನ್ನು ಇವೆಲ್ಲವುಗಳಿಂದ ಬಿಡಿಸಿದರು.
12. ನಿಜವಾಗಿಯೂ ಕ್ರಿಸ್ತ ಯೇಸುವಿನಲ್ಲಿ ಭಕ್ತಿಯುಳ್ಳವರಾಗಿ ಜೀವಿಸುವುದಕ್ಕೆ ಮನಸ್ಸು ಮಾಡುವವರೆಲ್ಲರೂ ಹಿಂಸೆಗೊಳಗಾಗುವರು.
13. ಆದರೆ ದುಷ್ಟರೂ ಇತರರಂತೆ ನಟಿಸುವ ವೇಷಧಾರಿಗಳೂ ಇತರರನ್ನು ವಂಚಿಸುತ್ತಾ ತಮ್ಮನ್ನೂ ವಂಚಿಸಿಕೊಳ್ಳುತ್ತಾ ಹೆಚ್ಚಾದ ಕೆಟ್ಟತನಕ್ಕೆ ಸಾಗುವರು.
14. ನೀನಾದರೋ, ಕಲಿತು ನಿಶ್ಚಯಗೊಂಡವುಗಳಲ್ಲಿ ಮುಂದುವರಿಯುತ್ತಿರು. ನಿನಗೆ ಕಲಿಸಿಕೊಟ್ಟವರು ಯಾರೆಂಬುದು ನಿನಗೆ ತಿಳಿದಿದೆ.
15. ಕ್ರಿಸ್ತ ಯೇಸುವಿನಲ್ಲಿ ವಿಶ್ವಾಸದ ಮೂಲಕ ರಕ್ಷಣೆ ಹೊಂದುವಂತೆ ನಿನ್ನನ್ನು ಜ್ಞಾನಿಯನ್ನಾಗಿ ಮಾಡಲು ಶಕ್ತವಾಗಿರುವ ಪವಿತ್ರ ವೇದಗಳನ್ನು ನೀನು ಚಿಕ್ಕಂದಿನಿಂದಲೂ ತಿಳಿದವನಾಗಿದ್ದೀಯಲ್ಲಾ.
16. ಪವಿತ್ರ ವೇದಗಳೆಲ್ಲವೂ ದೇವರ ಶ್ವಾಸದಿಂದಲೇ ಉಂಟಾದದ್ದು. ಅದು ಉಪದೇಶಕ್ಕೂ ಖಂಡನೆಗೂ ತಿದ್ದುಪಾಟಿಗೂ ನೀತಿಯ ಶಿಕ್ಷಣಕ್ಕೂ ಉಪಯುಕ್ತವಾಗಿದೆ.
17. ಆದ್ದರಿಂದ ದೇವರ ಮನುಷ್ಯನು ಪರಿಪೂರ್ಣನಾಗಿ ಸಕಲ ಸತ್ಕಾರ್ಯಗಳಿಗೆ ಸನ್ನದ್ಧನಾಗುವನು. [PE]