ಪವಿತ್ರ ಬೈಬಲ್

ಓಪನ್ ಸಮಕಾಲೀನ ಆವೃತ್ತಿ (OCV)
2 ತಿಮೊಥೆಯನಿಗೆ
1. [PS]ದೇವರ ಮುಂದೆಯೂ ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರಿಸಲು ಕರ್ತ ಆಗಿರುವ ಕ್ರಿಸ್ತ ಯೇಸುವಿನ ಮುಂದೆಯೂ ಅವರ ಪ್ರತ್ಯಕ್ಷತೆ ಹಾಗೂ ಅವರ ರಾಜ್ಯದ ಮುಂದೆಯೂ ನಾನು ನಿನಗೆ ಆಜ್ಞಾಪಿಸಿ ಹೇಳುವುದೇನೆಂದರೆ:
2. ವಾಕ್ಯವನ್ನು ಸಾರು; ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಸಿದ್ಧವಾಗಿರು. ಎಲ್ಲಾ ತಾಳ್ಮೆಯಿಂದ ಉಪದೇಶಿಸಿ ಖಂಡಿಸು, ಗದರಿಸು, ಪ್ರೋತ್ಸಾಹಿಸು.
3. ಏಕೆಂದರೆ ಜನರು ಸ್ವಸ್ಥಬೋಧನೆಯನ್ನು ಸಹಿಸಲಾರದ ಕಾಲವು ಬರುತ್ತದೆ. ಆದರೆ ಅವರು ತಮ್ಮ ಕಿವಿಗಳು ಕೇಳಲು ಆಶೆಪಡುವ ಅನೇಕ ಉಪದೇಶಕರನ್ನು ಕೂಡಿಟ್ಟುಕೊಳ್ಳುವರು.
4. ಅವರು ಸತ್ಯಕ್ಕೆ ಕಿವಿಗೊಡದೆ ಕಟ್ಟುಕಥೆಗಳನ್ನು ಕೇಳುವುದಕ್ಕೆ ತಿರುಗಿಕೊಳ್ಳುವರು.
5. ಆದರೆ ನೀನು ಎಲ್ಲಾ ವಿಷಯಗಳಲ್ಲಿ ಸ್ವಸ್ಥಚಿತ್ತನಾಗಿರು. ಶ್ರಮೆಗಳನ್ನು ತಾಳಿಕೋ. ಸುವಾರ್ತಿಕನ ಕೆಲಸವನ್ನು ಮಾಡು. ನಿನ್ನ ಸೇವೆಯ ಎಲ್ಲಾ ಕರ್ತವ್ಯಗಳನ್ನು ನೆರವೇರಿಸು. [PE]
6. [PS]ಏಕೆಂದರೆ ನಾನು ಈಗಲೇ ಪಾನ ಅರ್ಪಣೆಯಾಗಿ ಇದ್ದೇನೆ. ನಾನು ಹೊರಟುಹೋಗಬೇಕಾದ ಸಮಯವು ಹತ್ತಿರ ಬಂದಿದೆ.
7. ನಾನು ಒಳ್ಳೆಯ ಹೋರಾಟವನ್ನು ಮಾಡಿದ್ದೇನೆ. ನಾನು ಓಟವನ್ನು ಮುಗಿಸಿದ್ದೇನೆ. ನಾನು ವಿಶ್ವಾಸವನ್ನು ಕಾಪಾಡಿಕೊಂಡಿದ್ದೇನೆ.
8. ಈಗ ನನಗೋಸ್ಕರ ನೀತಿಯ ಕಿರೀಟವು ಇಡಲಾಗಿದೆ. ಅದನ್ನು ನೀತಿಯುಳ್ಳ ನ್ಯಾಯಾಧಿಪತಿಯಾದ ಕರ್ತದೇವರು ಆ ದಿನದಲ್ಲಿ ನನಗೆ ಕೊಡುವರು. ನನಗೆ ಮಾತ್ರವಲ್ಲದೆ ಅವರ ಪುನರಾಗಮನಕ್ಕಾಗಿ ಆಸಕ್ತಿಯಿಂದ ಕಾದಿರುವವರೆಲ್ಲರಿಗೂ ಕೊಡುವರು. [PE]
9. {#1ವೈಯಕ್ತಿಕ ಹಿತನುಡಿಗಳು } [PS]ನನ್ನ ಬಳಿಗೆ ಆದಷ್ಟು ಬೇಗನೆ ಬರುವುದಕ್ಕೆ ನೀನು ಪ್ರಯತ್ನ ಮಾಡು.
10. ಏಕೆಂದರೆ ದೇಮನು ಇಹಲೋಕವನ್ನು ಪ್ರೀತಿಸಿ ನನ್ನನ್ನು ತೊರೆದುಬಿಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೂ, ತೀತನು ದಲ್ಮಾತ್ಯಕ್ಕೂ ಹೋದನು.
11. ಲೂಕನು ಮಾತ್ರ ನನ್ನ ಜೊತೆಯಲ್ಲಿದ್ದಾನೆ. ಮಾರ್ಕನನ್ನು ನಿನ್ನ ಸಂಗಡ ಕರೆದುಕೊಂಡು ಬಾ. ಅವನು ನನ್ನ ಸೇವೆಗಾಗಿ ನನಗೆ ಉಪಯುಕ್ತನಾಗಿದ್ದಾನೆ.
12. ತುಖಿಕನನ್ನು ನಾನು ಎಫೆಸಕ್ಕೆ ಕಳುಹಿಸಿದೆನು.
13. ತ್ರೋವದಲ್ಲಿ ನಾನು ಕರ್ಪನ ಬಳಿ ಬಿಟ್ಟುಬಂದ ಮೇಲಂಗಿಯನ್ನೂ ಪುಸ್ತಕಗಳನ್ನೂ ಮುಖ್ಯವಾಗಿ ಚರ್ಮದ ಕಾಗದಗಳನ್ನೂ ನೀನು ಬರುವಾಗ ತೆಗೆದುಕೊಂಡು ಬಾ. [PE]
14. [PS]ಕಂಚುಗಾರನಾದ ಅಲೆಕ್ಸಾಂದ್ರನು ನನಗೆ ಬಹಳ ಕೇಡು ಮಾಡಿದ್ದಾನೆ. ಕರ್ತದೇವರು ಅವನ ಕೃತ್ಯಗಳಿಗೆ ಅನುಸಾರವಾಗಿ ಅವನಿಗೆ ಪ್ರತಿಫಲವನ್ನು ಕೊಡಲಿ.
15. ನೀನು ಸಹ ಅವನ ವಿಷಯದಲ್ಲಿ ಎಚ್ಚರಿಕೆಯಿಂದಿರು. ಏಕೆಂದರೆ ಅವನು ನಮ್ಮ ಸಂದೇಶವನ್ನು ಬಹಳವಾಗಿ ವಿರೋಧಿಸಿದನು. [PE]
16. [PS]ನಾನು ಮೊದಲನೆಯ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನೊಂದಿಗೆ ನಿಲ್ಲಲಿಲ್ಲ. ಎಲ್ಲರೂ ನನ್ನನ್ನು ಕೈಬಿಟ್ಟರು. ಇದು ಅವರ ಲೆಕ್ಕಕ್ಕೆ ಸೇರಿಸಲಾಗದೆ ಇರಲಿ.
17. ಆದರೆ ಕರ್ತ ಯೇಸು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ, ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರುವಂತೆ ಮಾಡಿದರು. ಯೆಹೂದ್ಯರಲ್ಲದವರೆಲ್ಲರೂ ಸಹ ಅದನ್ನು ಕೇಳುವಂತೆಯೂ ಮಾಡಿದರು. ಇದಲ್ಲದೆ ಕರ್ತ ಯೇಸು ನನ್ನನ್ನು ಸಿಂಹದ ಬಾಯೊಳಗಿಂದ ಸಂರಕ್ಷಿಸಿದರು.
18. ನನ್ನನ್ನು ಪ್ರತಿಯೊಂದು ದುಷ್ಟದಾಳಿಯಿಂದ ಕರ್ತ ಯೇಸು ತಪ್ಪಿಸಿ, ತಮ್ಮ ಪರಲೋಕ ರಾಜ್ಯಕ್ಕೆ ನನ್ನನ್ನು ಸುರಕ್ಷಿತವಾಗಿ ತರುವರು. ಯುಗಯುಗಾಂತರಗಳಲ್ಲಿಯೂ ಅವರಿಗೆ ಮಹಿಮೆ. ಆಮೆನ್. [PE][PBR]
19. {#1ಅಂತಿಮ ವಂದನೆಗಳು } [PS]ಪ್ರಿಸ್ಕಳಿಗೂ ಅಕ್ವಿಲನಿಗೂ ಒನೇಸಿಫೊರನ ಮನೆಯವರಿಗೂ ವಂದನೆ. [PE][PBR]
20. [PS]ಎರಸ್ತನು ಕೊರಿಂಥದಲ್ಲಿ ಉಳಿದುಕೊಂಡಿದ್ದಾನೆ. ಆದರೆ ತ್ರೊಫಿಮನು ಅಸ್ವಸ್ಥನಾಗಿದ್ದುದರಿಂದ ಅವನನ್ನು ನಾನು ಮಿಲೇತದಲ್ಲಿ ಬಿಟ್ಟಿದ್ದೇನೆ.
21. ನೀನು ಚಳಿಗಾಲಕ್ಕೆ ಮುಂಚೆಯೇ ಆದಷ್ಟು ಬೇಗನೆ ಬರುವುದಕ್ಕೆ ಪ್ರಯತ್ನ ಮಾಡು. [PE][PBR] [PS]ಯುಬೂಲನೂ ಪೊದೆಯನೂ ಲೀನನೂ ಕ್ಲೌದ್ಯಳೂ ಎಲ್ಲಾ ಸಹೋದರರೂ ನಿನಗೆ ವಂದನೆ ಹೇಳುತ್ತಾರೆ. [PE][PBR]
22. [PS]ಕರ್ತ ಯೇಸು ನಿನ್ನ ಆತ್ಮದೊಂದಿಗೆ ಇರಲಿ. ಕೃಪೆಯು ನಿಮ್ಮೆಲ್ಲರೊಂದಿಗಿರಲಿ. [PE]
ಒಟ್ಟು 4 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 4 / 4
1 2 3 4
1 ದೇವರ ಮುಂದೆಯೂ ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರಿಸಲು ಕರ್ತ ಆಗಿರುವ ಕ್ರಿಸ್ತ ಯೇಸುವಿನ ಮುಂದೆಯೂ ಅವರ ಪ್ರತ್ಯಕ್ಷತೆ ಹಾಗೂ ಅವರ ರಾಜ್ಯದ ಮುಂದೆಯೂ ನಾನು ನಿನಗೆ ಆಜ್ಞಾಪಿಸಿ ಹೇಳುವುದೇನೆಂದರೆ: 2 ವಾಕ್ಯವನ್ನು ಸಾರು; ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಸಿದ್ಧವಾಗಿರು. ಎಲ್ಲಾ ತಾಳ್ಮೆಯಿಂದ ಉಪದೇಶಿಸಿ ಖಂಡಿಸು, ಗದರಿಸು, ಪ್ರೋತ್ಸಾಹಿಸು. 3 ಏಕೆಂದರೆ ಜನರು ಸ್ವಸ್ಥಬೋಧನೆಯನ್ನು ಸಹಿಸಲಾರದ ಕಾಲವು ಬರುತ್ತದೆ. ಆದರೆ ಅವರು ತಮ್ಮ ಕಿವಿಗಳು ಕೇಳಲು ಆಶೆಪಡುವ ಅನೇಕ ಉಪದೇಶಕರನ್ನು ಕೂಡಿಟ್ಟುಕೊಳ್ಳುವರು. 4 ಅವರು ಸತ್ಯಕ್ಕೆ ಕಿವಿಗೊಡದೆ ಕಟ್ಟುಕಥೆಗಳನ್ನು ಕೇಳುವುದಕ್ಕೆ ತಿರುಗಿಕೊಳ್ಳುವರು. 5 ಆದರೆ ನೀನು ಎಲ್ಲಾ ವಿಷಯಗಳಲ್ಲಿ ಸ್ವಸ್ಥಚಿತ್ತನಾಗಿರು. ಶ್ರಮೆಗಳನ್ನು ತಾಳಿಕೋ. ಸುವಾರ್ತಿಕನ ಕೆಲಸವನ್ನು ಮಾಡು. ನಿನ್ನ ಸೇವೆಯ ಎಲ್ಲಾ ಕರ್ತವ್ಯಗಳನ್ನು ನೆರವೇರಿಸು. 6 ಏಕೆಂದರೆ ನಾನು ಈಗಲೇ ಪಾನ ಅರ್ಪಣೆಯಾಗಿ ಇದ್ದೇನೆ. ನಾನು ಹೊರಟುಹೋಗಬೇಕಾದ ಸಮಯವು ಹತ್ತಿರ ಬಂದಿದೆ. 7 ನಾನು ಒಳ್ಳೆಯ ಹೋರಾಟವನ್ನು ಮಾಡಿದ್ದೇನೆ. ನಾನು ಓಟವನ್ನು ಮುಗಿಸಿದ್ದೇನೆ. ನಾನು ವಿಶ್ವಾಸವನ್ನು ಕಾಪಾಡಿಕೊಂಡಿದ್ದೇನೆ. 8 ಈಗ ನನಗೋಸ್ಕರ ನೀತಿಯ ಕಿರೀಟವು ಇಡಲಾಗಿದೆ. ಅದನ್ನು ನೀತಿಯುಳ್ಳ ನ್ಯಾಯಾಧಿಪತಿಯಾದ ಕರ್ತದೇವರು ಆ ದಿನದಲ್ಲಿ ನನಗೆ ಕೊಡುವರು. ನನಗೆ ಮಾತ್ರವಲ್ಲದೆ ಅವರ ಪುನರಾಗಮನಕ್ಕಾಗಿ ಆಸಕ್ತಿಯಿಂದ ಕಾದಿರುವವರೆಲ್ಲರಿಗೂ ಕೊಡುವರು. ವೈಯಕ್ತಿಕ ಹಿತನುಡಿಗಳು 9 ನನ್ನ ಬಳಿಗೆ ಆದಷ್ಟು ಬೇಗನೆ ಬರುವುದಕ್ಕೆ ನೀನು ಪ್ರಯತ್ನ ಮಾಡು. 10 ಏಕೆಂದರೆ ದೇಮನು ಇಹಲೋಕವನ್ನು ಪ್ರೀತಿಸಿ ನನ್ನನ್ನು ತೊರೆದುಬಿಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೂ, ತೀತನು ದಲ್ಮಾತ್ಯಕ್ಕೂ ಹೋದನು. 11 ಲೂಕನು ಮಾತ್ರ ನನ್ನ ಜೊತೆಯಲ್ಲಿದ್ದಾನೆ. ಮಾರ್ಕನನ್ನು ನಿನ್ನ ಸಂಗಡ ಕರೆದುಕೊಂಡು ಬಾ. ಅವನು ನನ್ನ ಸೇವೆಗಾಗಿ ನನಗೆ ಉಪಯುಕ್ತನಾಗಿದ್ದಾನೆ. 12 ತುಖಿಕನನ್ನು ನಾನು ಎಫೆಸಕ್ಕೆ ಕಳುಹಿಸಿದೆನು. 13 ತ್ರೋವದಲ್ಲಿ ನಾನು ಕರ್ಪನ ಬಳಿ ಬಿಟ್ಟುಬಂದ ಮೇಲಂಗಿಯನ್ನೂ ಪುಸ್ತಕಗಳನ್ನೂ ಮುಖ್ಯವಾಗಿ ಚರ್ಮದ ಕಾಗದಗಳನ್ನೂ ನೀನು ಬರುವಾಗ ತೆಗೆದುಕೊಂಡು ಬಾ. 14 ಕಂಚುಗಾರನಾದ ಅಲೆಕ್ಸಾಂದ್ರನು ನನಗೆ ಬಹಳ ಕೇಡು ಮಾಡಿದ್ದಾನೆ. ಕರ್ತದೇವರು ಅವನ ಕೃತ್ಯಗಳಿಗೆ ಅನುಸಾರವಾಗಿ ಅವನಿಗೆ ಪ್ರತಿಫಲವನ್ನು ಕೊಡಲಿ. 15 ನೀನು ಸಹ ಅವನ ವಿಷಯದಲ್ಲಿ ಎಚ್ಚರಿಕೆಯಿಂದಿರು. ಏಕೆಂದರೆ ಅವನು ನಮ್ಮ ಸಂದೇಶವನ್ನು ಬಹಳವಾಗಿ ವಿರೋಧಿಸಿದನು. 16 ನಾನು ಮೊದಲನೆಯ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನೊಂದಿಗೆ ನಿಲ್ಲಲಿಲ್ಲ. ಎಲ್ಲರೂ ನನ್ನನ್ನು ಕೈಬಿಟ್ಟರು. ಇದು ಅವರ ಲೆಕ್ಕಕ್ಕೆ ಸೇರಿಸಲಾಗದೆ ಇರಲಿ. 17 ಆದರೆ ಕರ್ತ ಯೇಸು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ, ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರುವಂತೆ ಮಾಡಿದರು. ಯೆಹೂದ್ಯರಲ್ಲದವರೆಲ್ಲರೂ ಸಹ ಅದನ್ನು ಕೇಳುವಂತೆಯೂ ಮಾಡಿದರು. ಇದಲ್ಲದೆ ಕರ್ತ ಯೇಸು ನನ್ನನ್ನು ಸಿಂಹದ ಬಾಯೊಳಗಿಂದ ಸಂರಕ್ಷಿಸಿದರು. 18 ನನ್ನನ್ನು ಪ್ರತಿಯೊಂದು ದುಷ್ಟದಾಳಿಯಿಂದ ಕರ್ತ ಯೇಸು ತಪ್ಪಿಸಿ, ತಮ್ಮ ಪರಲೋಕ ರಾಜ್ಯಕ್ಕೆ ನನ್ನನ್ನು ಸುರಕ್ಷಿತವಾಗಿ ತರುವರು. ಯುಗಯುಗಾಂತರಗಳಲ್ಲಿಯೂ ಅವರಿಗೆ ಮಹಿಮೆ. ಆಮೆನ್. ಅಂತಿಮ ವಂದನೆಗಳು 19 ಪ್ರಿಸ್ಕಳಿಗೂ ಅಕ್ವಿಲನಿಗೂ ಒನೇಸಿಫೊರನ ಮನೆಯವರಿಗೂ ವಂದನೆ. 20 ಎರಸ್ತನು ಕೊರಿಂಥದಲ್ಲಿ ಉಳಿದುಕೊಂಡಿದ್ದಾನೆ. ಆದರೆ ತ್ರೊಫಿಮನು ಅಸ್ವಸ್ಥನಾಗಿದ್ದುದರಿಂದ ಅವನನ್ನು ನಾನು ಮಿಲೇತದಲ್ಲಿ ಬಿಟ್ಟಿದ್ದೇನೆ. 21 ನೀನು ಚಳಿಗಾಲಕ್ಕೆ ಮುಂಚೆಯೇ ಆದಷ್ಟು ಬೇಗನೆ ಬರುವುದಕ್ಕೆ ಪ್ರಯತ್ನ ಮಾಡು. ಯುಬೂಲನೂ ಪೊದೆಯನೂ ಲೀನನೂ ಕ್ಲೌದ್ಯಳೂ ಎಲ್ಲಾ ಸಹೋದರರೂ ನಿನಗೆ ವಂದನೆ ಹೇಳುತ್ತಾರೆ. 22 ಕರ್ತ ಯೇಸು ನಿನ್ನ ಆತ್ಮದೊಂದಿಗೆ ಇರಲಿ. ಕೃಪೆಯು ನಿಮ್ಮೆಲ್ಲರೊಂದಿಗಿರಲಿ.
ಒಟ್ಟು 4 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 4 / 4
1 2 3 4
×

Alert

×

Kannada Letters Keypad References