ಪವಿತ್ರ ಬೈಬಲ್

ಓಪನ್ ಸಮಕಾಲೀನ ಆವೃತ್ತಿ (OCV)
ಅಪೊಸ್ತಲರ ಕೃತ್ಯಗ
1. {#1ಪವಿತ್ರಾತ್ಮ ದೇವರ ಆಗಮನ } [PS]ಪೆಂಟೆಕೋಸ್ಟ್ ಎಂಬ ಐವತ್ತನೆಯ ದಿನದ ಹಬ್ಬದಂದು,[* ಪಸ್ಕಹಬ್ಬ ಆಚರಿಸಿದ ಐವತ್ತು ದಿನಗಳ ನಂತರ ಬರುತ್ತಿದ್ದ ಯೆಹೂದ್ಯರ ಹಬ್ಬ ] ಅವರೆಲ್ಲರೂ ಒಂದೇ ಸ್ಥಳದಲ್ಲಿ ಒಂದಾಗಿ ಕೂಡಿ ಬಂದಿದ್ದರು.
2. ಆಗ ಬೀಸುತ್ತಿರುವ ಬಿರುಗಾಳಿಯ ರಭಸವಾದ ಶಬ್ದವು ಫಕ್ಕನೆ ಪರಲೋಕದಿಂದ ಬಂದು ಅವರು ಕುಳಿತುಕೊಂಡಿದ್ದ ಮನೆಯನ್ನೆಲ್ಲಾ ತುಂಬಿಕೊಂಡಿತು.
3. ಅಗ್ನಿ ಜ್ವಾಲೆಗಳು ಬೆಂಕಿಯ ನಾಲಿಗೆಗಳಂತೆ ವಿಂಗಡವಾಗಿ ಬಂದು ಪ್ರತಿಯೊಬ್ಬರ ಮೇಲೆ ಇಳಿಯುವುದನ್ನು ಅವರು ಕಂಡರು.
4. ಅವರೆಲ್ಲರೂ ಪವಿತ್ರಾತ್ಮಭರಿತರಾದರು. ಮಾತ್ರವಲ್ಲದೆ ಪವಿತ್ರಾತ್ಮ ದೇವರು ಕೊಟ್ಟ ಪ್ರೇರಣೆಯ ಪ್ರಕಾರ ಬೇರೆ ಬೇರೆ ಭಾಷೆಗಳಲ್ಲಿ ಮಾತನಾಡಲು ಪ್ರಾರಂಭಿಸಿದರು. [PE]
5. [PS]ಆಗ ಜಗತ್ತಿನ ಪ್ರತಿಯೊಂದು ದೇಶದಿಂದಲೂ ಬಂದ ದೇವಭಕ್ತಿಯುಳ್ಳ ಯೆಹೂದ್ಯರು ಯೆರೂಸಲೇಮಿನಲ್ಲಿದ್ದರು.
6. ಈ ಶಬ್ದ ಕೇಳಿದಾಗ, ಜನರ ಗುಂಪೊಂದು ಕೂಡಿಬಂದಿತು. ಬಂದವರೆಲ್ಲರೂ ತಮ್ಮ ತಮ್ಮ ಭಾಷೆಗಳಲ್ಲಿಯೇ ಆ ಶಿಷ್ಯರು ಮಾತಾಡುತ್ತಿರುವುದನ್ನು ಕೇಳಿ, ಆಶ್ಚರ್ಯಗೊಂಡರು.
7. ಅವರು ಅತ್ಯಾಶ್ಚರ್ಯವುಳ್ಳವರಾಗಿ, “ಇಲ್ಲಿ ಮಾತನಾಡುತ್ತಿರುವವರೆಲ್ಲರೂ ಗಲಿಲಾಯದವರಲ್ಲವೇ?
8. ನಾವೆಲ್ಲರೂ ನಮ್ಮ ನಮ್ಮ ಮಾತೃಭಾಷೆಗಳಲ್ಲಿಯೇ ಇವರು ಮಾತಾಡುತ್ತಿರುವುದನ್ನು ಕೇಳುತ್ತಿರುವುದು ಹೇಗೆ?
9. ಪಾರ್ಥಿಯರು, ಮೇದ್ಯರು ಹಾಗೂ ಏಲಾಮ್ಯರು, ಮೆಸೊಪೊಟೇಮಿಯ, ಯೂದಾಯ, ಕಪ್ಪದೋಕ್ಯ, ಪೊಂತ, ಏಷ್ಯಾ,[† ಆ ಹೆಸರಿನ ರೋಮಾ ಪ್ರಾಂತವಾಗಿತ್ತು ]
10. ಫ್ರುಗ್ಯ ಮತ್ತು ಪಂಫುಲ್ಯ, ಈಜಿಪ್ಟ್ ಹಾಗೂ ಕುರೇನೆದ ಹತ್ತಿರದ ಲಿಬ್ಯದ ಭಾಗಗಳ ನಿವಾಸಿಗಳು; ರೋಮ್ ಪಟ್ಟಣದಿಂದ ಬಂದ ಸಂದರ್ಶಕರು ಇಲ್ಲಿ ಬಂದಿದ್ದಾರೆ.
11. ಇವರಲ್ಲದೆ, ಯೆಹೂದ್ಯರು ಮತ್ತು ಯೆಹೂದಿ ವಿಶ್ವಾಸಕ್ಕೆ ಬಂದಿದ್ದವರೂ ಇಲ್ಲಿದ್ದಾರೆ. ಅವರೊಂದಿಗೆ ಕ್ರೇತದವರು ಹಾಗೂ ಅರಬೀಯರು ನಮ್ಮ ಭಾಷೆಗಳಲ್ಲಿಯೇ ದೇವರ ಮಹತ್ಕಾರ್ಯಗಳನ್ನು ಹೇಳುತ್ತಿರುವದನ್ನು ಕೇಳುತ್ತಿದ್ದೇವಲ್ಲಾ!” ಎಂದು ಹೇಳಿದರು.
12. ಅವರು ಆಶ್ಚರ್ಯದಿಂದಲೂ ಗಲಿಬಿಲಿಗೊಂಡವರಾಗಿಯೂ, “ಇದರ ಅರ್ಥವೇನು?” ಎಂದು ತಮ್ಮತಮ್ಮೊಳಗೆ ಪ್ರಶ್ನೆಮಾಡಿಕೊಂಡರು. [PE]
13.
14. [PS]ಆದರೆ, ಅವರಲ್ಲಿ ಕೆಲವರು, ಅವರ ಬಗ್ಗೆ ಹಾಸ್ಯಮಾಡುತ್ತಾ, “ಇವರು ಕುಡಿದು ಮತ್ತರಾಗಿದ್ದಾರೆ,” ಎಂದರು. [PE]{#1ಜನಸಮೂಹಕ್ಕೆ ಪೇತ್ರನ ಬೋಧನೆ } [PS]ಆಗ ಹನ್ನೊಂದು ಜನರೊಂದಿಗೆ ಪೇತ್ರನು ಎದ್ದು ನಿಂತುಕೊಂಡು, ಜನಸಮೂಹವನ್ನು ಉದ್ದೇಶಿಸಿ ಹೇಳಿದ್ದೇನೆಂದರೆ: “ಯೆಹೂದ್ಯರೇ, ಯೆರೂಸಲೇಮಿನ ಸರ್ವನಿವಾಸಿಗಳೇ, ಇದರ ಬಗ್ಗೆ ನಾನು ವಿವರಿಸುತ್ತೇನೆ, ಕೇಳಿರಿ. ನಾನು ಹೇಳುವುದನ್ನು ಜಾಗರೂಕತೆಯಿಂದ ಆಲಿಸಿರಿ.
15. ನೀವು ಊಹಿಸಿದಂತೆ, ಈ ಜನರು ಕುಡಿದು ಮತ್ತರಾಗಿಲ್ಲ. ಈಗ ಸಮಯ ಬೆಳಿಗ್ಗೆ ಒಂಬತ್ತು ಗಂಟೆ!
16. ಇದು ಪ್ರವಾದಿ ಯೋವೇಲನ ಪ್ರವಾದನೆಯ ನೆರವೇರುವಿಕೆಯಾಗಿದೆ: [PE]
17. [QS]“ದೇವರು ಹೇಳುವುದೇನೆಂದರೆ: ‘ಅಂತ್ಯ ದಿನಗಳಲ್ಲಿ [QE][QS2]ನನ್ನ ಆತ್ಮವನ್ನು ಎಲ್ಲಾ ಮನುಷ್ಯರ ಮೇಲೆ ಸುರಿಸುವೆನು, [QE][QS]ನಿಮ್ಮ ಗಂಡು ಹೆಣ್ಣುಮಕ್ಕಳು ಪ್ರವಾದಿಸುವರು, [QE][QS2]ನಿಮ್ಮ ಯುವಜನರಿಗೆ ದರ್ಶನಗಳು ಕಾಣುವವು, [QE][QS2]ನಿಮ್ಮ ಹಿರಿಯರಿಗೆ ಕನಸುಗಳು ಬೀಳುವುವು. [QE]
18. [QS]ಆ ದಿನಗಳಲ್ಲಿ, ನನ್ನ ದಾಸ ದಾಸಿಯರ ಮೇಲೆ, [QE][QS2]ನನ್ನ ಆತ್ಮವನ್ನು ಸುರಿಸುವೆನು, [QE][QS2]ಅವರು ಪ್ರವಾದಿಸುವರು. [QE]
19. [QS]ನಾನು ಆಕಾಶದಲ್ಲಿ ಅದ್ಭುತಗಳನ್ನು, [QE][QS2]ಭೂಮಿಯಲ್ಲಿ ಸೂಚಕಕಾರ್ಯಗಳನ್ನು, [QE][QS2]ರಕ್ತ, ಬೆಂಕಿ, ಹಬೆಯನ್ನು ತೋರಿಸುವೆನು. [QE]
20. [QS]ಕರ್ತದೇವರ ಮಹಿಮೆಯುಳ್ಳ ಮಹಾದಿನವೂ ಬರುವುದಕ್ಕೆ ಮೊದಲು [QE][QS2]ಸೂರ್ಯನು ಕತ್ತಲಾಗುವನು, [QE][QS2]ಚಂದ್ರನು ರಕ್ತವಾಗುವನು. [QE]
21. [QS]ಆಗ ಕರ್ತದೇವರ ಹೆಸರನ್ನು ಹೇಳಿಕೊಳ್ಳುವವರೆಲ್ಲರಿಗೆ [QE][QS2]ರಕ್ಷಣೆ ಆಗುವುದು.’[‡ ಯೋಯೇಲ 2:28-32 ] [QE]
22. [PS]“ಇಸ್ರಾಯೇಲ್ ಜನರೇ, ಈ ವಿಷಯವನ್ನು ಕೇಳಿರಿ: ದೇವರು ನಜರೇತಿನ ಯೇಸುಸ್ವಾಮಿಯವರ ಮುಖಾಂತರ ನಿಮ್ಮ ಮಧ್ಯದಲ್ಲಿ ಅದ್ಭುತಕಾರ್ಯಗಳನ್ನೂ ಆಶ್ಚರ್ಯಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ನಡೆಸಿದ್ದರಿಂದ, ಯೇಸು ದೇವರ ಮೆಚ್ಚಿಕೆ ಪಡೆದವರಾಗಿದ್ದಾರೆಂಬುದನ್ನು, ನೀವೇ ತಿಳಿದಿರುವಿರಿ.
23. ದೇವರು ತಾವು ಮುಂಚಿತವಾಗಿ ನಿರ್ಣಯಿಸಿದ ಪ್ರಕಾರವೂ ತಾವು ಮೊದಲೇ ತಿಳಿದಿರುವಂತೆ ದೇವರು ಯೇಸುವನ್ನು ತಾವಾಗಿಯೇ ನಿಮಗೆ ಒಪ್ಪಿಸಿಕೊಟ್ಟರು. ನೀವಾದರೋ ದುಷ್ಟರ ಸಹಾಯದಿಂದ ಯೇಸುವನ್ನು ಶಿಲುಬೆಗೆ ಹಾಕಿ ಕೊಲೆಮಾಡಿದಿರಿ.
24. ಆದರೆ ದೇವರು ಯೇಸುವನ್ನು ಮರಣ ವೇದನೆಯಿಂದ ಬಿಡಿಸಿ ಜೀವಂತವಾಗಿ ಎಬ್ಬಿಸಿದರು. ಏಕೆಂದರೆ ಯೇಸುವನ್ನು ಹಿಡಿದಿಟ್ಟುಕೊಂಡಿರಲು ಮರಣಕ್ಕೆ ಸಾಧ್ಯವಾಗಲಿಲ್ಲ.
25. ದಾವೀದನು ಯೇಸುಸ್ವಾಮಿಯವರ ಬಗ್ಗೆ ಹೀಗೆ ಹೇಳಿದ್ದಾನೆ: [PE][QS]“ ‘ನಾನು ಕರ್ತದೇವರನ್ನು ಯಾವಾಗಲೂ ನನ್ನೆದುರಿನಲ್ಲಿಯೇ ಇಟ್ಟುಕೊಂಡಿದ್ದೇನೆ. [QE][QS2]ನಾನು ಕದಲದಂತೆ [QE][QS2]ಕರ್ತದೇವರು ನನ್ನ ಬಲಗಡೆಯಲ್ಲಿದ್ದಾರೆ. [QE]
26. [QS]ಆದ್ದರಿಂದ ನನ್ನ ಹೃದಯ ಹರ್ಷಿಸುವುದು, ನನ್ನ ನಾಲಿಗೆ ಉಲ್ಲಾಸಗೊಳ್ಳುವುದು; [QE][QS2]ನನ್ನ ಶರೀರವು ಸಹ ನಿರೀಕ್ಷೆಯಿಂದ ನೆಲೆಯಾಗಿರುವುದು. [QE]
27. [QS]ಏಕೆಂದರೆ ನೀವು ನನ್ನ ಪ್ರಾಣವನ್ನು ಪಾತಾಳದಲ್ಲಿ ಬಿಟ್ಟುಬಿಡುವುದಿಲ್ಲ, [QE][QS2]ನಿಮ್ಮ ಪರಿಶುದ್ಧ ವ್ಯಕ್ತಿಯನ್ನು ಕೊಳೆಯುವಂತೆ ಬಿಡುವುದೇ ಇಲ್ಲ. [QE]
28. [QS]ನೀವು ನನಗೆ ಜೀವಮಾರ್ಗಗಳನ್ನು ತಿಳಿಯಪಡಿಸಿರುವಿರಿ; [QE][QS2]ನಿಮ್ಮ ಸನ್ನಿಧಿಯಲ್ಲಿ ನನ್ನನ್ನು ಆನಂದಭರಿತನಾಗ ಮಾಡುವಿರಿ.’[§ ಕೀರ್ತನೆ 16:8-11 ] [QE]
29. [PS]“ಪ್ರಿಯರೇ, ಮೂಲಪಿತೃ ದಾವೀದನು ಮರಣಹೊಂದಿದನು; ಸಮಾಧಿಮಾಡಲಾಯಿತು. ಇಂದಿಗೂ ಅವನ ಸಮಾಧಿ ನಮ್ಮಲ್ಲಿದೆ ಎಂಬುದನ್ನು ನಾನು ನಿಮಗೆ ಧೈರ್ಯದಿಂದ ಹೇಳಬಲ್ಲೆ.
30. ಆದರೆ ಪ್ರವಾದಿಯಾಗಿದ್ದ ದಾವೀದನ ಸಂತತಿಯವರಲ್ಲಿ ಒಬ್ಬರನ್ನು ಅವನ ಸಿಂಹಾಸನದ ಮೇಲೆ ಕುಳ್ಳಿರಿಸುವೆನು, ಎಂದು ಆಣೆಯಿಟ್ಟು ದೇವರು ವಾಗ್ದಾನ ಮಾಡಿದ್ದನ್ನು ದಾವೀದನು ತಿಳಿದಿದ್ದನು.
31. ದಾವೀದನು ಕ್ರಿಸ್ತ ಯೇಸುವಿನ ಪುನರುತ್ಥಾನದ ಬಗ್ಗೆ ಮುಂಚಿತವಾಗಿಯೇ ನೋಡಿ, ಹೀಗೆ ಮಾತನಾಡಿದನು: ‘ಅವರನ್ನು ಪಾತಾಳದಲ್ಲಿಯೇ ಬಿಡಲಿಲ್ಲ; ಅವರ ದೇಹವು ಕೊಳೆಯುವ ಅವಸ್ಥೆಯನ್ನು ಕಾಣಲಿಲ್ಲ.’
32. ದೇವರು ಈ ಯೇಸುವನ್ನೇ ಮರಣದಿಂದ ಎಬ್ಬಿಸಿದರು. ಇದಕ್ಕೆ ನಾವೆಲ್ಲರೂ ಸಾಕ್ಷಿಗಳು.
33. ಆದ್ದರಿಂದ ಯೇಸು ದೇವರ ಬಲಗಡೆಗೆ ಏರಿಹೋಗಿ ವಾಗ್ದಾನಮಾಡಿದ ಪವಿತ್ರಾತ್ಮ ದೇವರನ್ನು ತಂದೆಯಿಂದ ಪಡೆದುಕೊಂಡರು. ಈಗ ನೀವು ಕಂಡು ಕೇಳಿರುವ ಆ ಪವಿತ್ರಾತ್ಮ ವರವನ್ನು ಯೇಸುವೇ ಇವರ ಮೇಲೆ ಸುರಿಸಿದ್ದಾರೆ.
34. ದಾವೀದನು ಪರಲೋಕಕ್ಕೆ ಏರಿಹೋಗಲಿಲ್ಲವಾದರೂ ಹೀಗೆ ಹೇಳಿದ್ದಾನೆ: [PE][QS]“ ‘ಕರ್ತದೇವರು ನನ್ನ ಕರ್ತದೇವರಿಗೆ: [QE][QS2]“ನಾನು ನಿನ್ನ ವಿರೋಧಿಗಳನ್ನು [QE]
35. [QS]ನಿನ್ನ ಪಾದಗಳ ಪೀಠವಾಗಿ ಮಾಡುವವರೆಗೂ [QE][QS2]ನನ್ನ ಬಲಪಾರ್ಶ್ವದಲ್ಲಿ ನೀನು ಕುಳಿತುಕೊಂಡಿರು.” ’[* ಕೀರ್ತನೆ 110:1 ] [QE]
36.
37. [PS]“ಆದ್ದರಿಂದ ನೀವು ಶಿಲುಬೆಗೇರಿಸಿದ ಈ ಯೇಸುವನ್ನೇ ದೇವರು ಕರ್ತ ಹಾಗೂ ಕ್ರಿಸ್ತ ಆಗಿಯೂ ಮಾಡಿದ್ದಾರೆ ಎಂಬುದು ಎಲ್ಲಾ ಇಸ್ರಾಯೇಲ್ ಮನೆತನದವರಿಗೆ ಸ್ಪಷ್ಟವಾಗಿ ತಿಳಿದಿರಲಿ,” ಎಂದನು. [PE]
38. [PS]ಜನರು ಇದನ್ನು ಕೇಳಿದಾಗ ಅವರಿಗೆ ಹೃದಯದಲ್ಲಿ ಅಲಗು ನೆಟ್ಟಂತಾಗಿ, “ಸಹೋದರರೇ, ನಾವೇನು ಮಾಡಬೇಕು?” ಎಂದು ಪೇತ್ರನನ್ನೂ ಉಳಿದ ಅಪೊಸ್ತಲರನ್ನೂ ಕೇಳಿದರು. [PE][PS]ಅದಕ್ಕೆ ಪೇತ್ರನು, “ನಿಮ್ಮಲ್ಲಿ ಪ್ರತಿಯೊಬ್ಬನೂ ಪಶ್ಚಾತ್ತಾಪಪಟ್ಟು, ನಿಮ್ಮ ಪಾಪಗಳ ಕ್ಷಮೆಗಾಗಿ ಕ್ರಿಸ್ತ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನ ತೆಗೆದುಕೊಳ್ಳಿರಿ. ಆಗ ನೀವು ಪವಿತ್ರಾತ್ಮ ವರವನ್ನು ಪಡೆದುಕೊಳ್ಳುವಿರಿ.
39. ಈ ವಾಗ್ದಾನವು ನಿಮಗೂ ನಿಮ್ಮ ಮಕ್ಕಳಿಗೂ ದೂರ ಇರುವ ಎಲ್ಲರಿಗೂ ನಮ್ಮ ಕರ್ತದೇವರು ತಮ್ಮ ಕಡೆಗೆ ಕರೆಯುವ ಎಲ್ಲರಿಗಾಗಿಯೂ ಇರುವುದು,” ಎಂದನು. [PE]
40. [PS]ಪೇತ್ರನು ಇನ್ನೂ ಅನೇಕ ಮಾತುಗಳಿಂದ ಅವರನ್ನು ಎಚ್ಚರಿಸಿ, ಸಾಕ್ಷಿ ನುಡಿದು, “ಈ ಕೆಟ್ಟ ಸಂತತಿಯಿಂದ ನಿಮ್ಮನ್ನು ರಕ್ಷಿಸಿಕೊಳ್ಳಿರಿ,” ಎಂದು ಹೇಳಿದನು.
41. ಪೇತ್ರನ ಸಂದೇಶವನ್ನು ಸ್ವೀಕರಿಸಿದವರು ದೀಕ್ಷಾಸ್ನಾನ ಪಡೆದರು. ಆ ದಿನ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿದರು. [PE]
42. {#1ವಿಶ್ವಾಸಿಗಳ ಅನ್ಯೋನ್ಯತೆ } [PS]ಅವರೆಲ್ಲರು ಅಪೊಸ್ತಲರ ಬೋಧನೆಯಲ್ಲಿ, ಅನ್ಯೋನ್ಯತೆಯಲ್ಲಿ, ರೊಟ್ಟಿ ಮುರಿಯುವುದರಲ್ಲಿ, ಪ್ರಾರ್ಥನೆ ಮಾಡುವುದರಲ್ಲಿ ತಮ್ಮನ್ನು ಸಮರ್ಪಿಸಿಕೊಂಡು,
43. ಪ್ರತಿಯೊಬ್ಬರೂ ಭಯಭಕ್ತಿಉಳ್ಳವರಾಗಿದ್ದರು. ಅಪೊಸ್ತಲರು ಅನೇಕ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ಮಾಡುತ್ತಿದ್ದರು.
44. ವಿಶ್ವಾಸಿಗಳೆಲ್ಲರೂ ಒಟ್ಟಾಗಿದ್ದು, ತಮ್ಮಲ್ಲಿರುವ ಪ್ರತಿಯೊಂದನ್ನೂ ಹಂಚಿಕೊಳ್ಳುತ್ತಿದ್ದರು.
45. ಅವರು ಆಸ್ತಿಪಾಸ್ತಿಯನ್ನು ಮಾರಿ ಅವರವರ ಅವಶ್ಯಕತೆಗೆ ಅನುಸಾರವಾಗಿ ಎಲ್ಲರಿಗೂ ಹಂಚುತ್ತಿದ್ದರು.
46. ಪ್ರತಿದಿನವೂ ದೇವಾಲಯದಲ್ಲಿ ಒಮ್ಮನಸ್ಸಿನಿಂದ ಸಭೆ ಕೂಡಿಬರುವುದನ್ನು ಕ್ರಮವಾಗಿ ಮುಂದುವರೆಸಿದರು. ತಮ್ಮ ಮನೆಗಳಲ್ಲಿ ರೊಟ್ಟಿ ಮುರಿಯುತ್ತಾ ಆನಂದದಿಂದಲೂ ಸರಳ ಹೃದಯದಿಂದಲೂ ಊಟಮಾಡುತ್ತಿದ್ದರು.
47. ಅವರು ದೇವರಿಗೆ ಸ್ತೋತ್ರ ಮಾಡುತ್ತಾ, ಜನರೆಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು. ರಕ್ಷಣೆ ಹೊಂದಿದವರನ್ನು ಕರ್ತ ಯೇಸುವು ಪ್ರತಿದಿನವೂ ಅವರೊಂದಿಗೆ ಸೇರಿಸುತ್ತಿದ್ದರು. [PE]
ಒಟ್ಟು 28 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 2 / 28
ಪವಿತ್ರಾತ್ಮ ದೇವರ ಆಗಮನ 1 ಪೆಂಟೆಕೋಸ್ಟ್ ಎಂಬ ಐವತ್ತನೆಯ ದಿನದ ಹಬ್ಬದಂದು,* ಪಸ್ಕಹಬ್ಬ ಆಚರಿಸಿದ ಐವತ್ತು ದಿನಗಳ ನಂತರ ಬರುತ್ತಿದ್ದ ಯೆಹೂದ್ಯರ ಹಬ್ಬ ಅವರೆಲ್ಲರೂ ಒಂದೇ ಸ್ಥಳದಲ್ಲಿ ಒಂದಾಗಿ ಕೂಡಿ ಬಂದಿದ್ದರು. 2 ಆಗ ಬೀಸುತ್ತಿರುವ ಬಿರುಗಾಳಿಯ ರಭಸವಾದ ಶಬ್ದವು ಫಕ್ಕನೆ ಪರಲೋಕದಿಂದ ಬಂದು ಅವರು ಕುಳಿತುಕೊಂಡಿದ್ದ ಮನೆಯನ್ನೆಲ್ಲಾ ತುಂಬಿಕೊಂಡಿತು. 3 ಅಗ್ನಿ ಜ್ವಾಲೆಗಳು ಬೆಂಕಿಯ ನಾಲಿಗೆಗಳಂತೆ ವಿಂಗಡವಾಗಿ ಬಂದು ಪ್ರತಿಯೊಬ್ಬರ ಮೇಲೆ ಇಳಿಯುವುದನ್ನು ಅವರು ಕಂಡರು. 4 ಅವರೆಲ್ಲರೂ ಪವಿತ್ರಾತ್ಮಭರಿತರಾದರು. ಮಾತ್ರವಲ್ಲದೆ ಪವಿತ್ರಾತ್ಮ ದೇವರು ಕೊಟ್ಟ ಪ್ರೇರಣೆಯ ಪ್ರಕಾರ ಬೇರೆ ಬೇರೆ ಭಾಷೆಗಳಲ್ಲಿ ಮಾತನಾಡಲು ಪ್ರಾರಂಭಿಸಿದರು. 5 ಆಗ ಜಗತ್ತಿನ ಪ್ರತಿಯೊಂದು ದೇಶದಿಂದಲೂ ಬಂದ ದೇವಭಕ್ತಿಯುಳ್ಳ ಯೆಹೂದ್ಯರು ಯೆರೂಸಲೇಮಿನಲ್ಲಿದ್ದರು. 6 ಈ ಶಬ್ದ ಕೇಳಿದಾಗ, ಜನರ ಗುಂಪೊಂದು ಕೂಡಿಬಂದಿತು. ಬಂದವರೆಲ್ಲರೂ ತಮ್ಮ ತಮ್ಮ ಭಾಷೆಗಳಲ್ಲಿಯೇ ಆ ಶಿಷ್ಯರು ಮಾತಾಡುತ್ತಿರುವುದನ್ನು ಕೇಳಿ, ಆಶ್ಚರ್ಯಗೊಂಡರು. 7 ಅವರು ಅತ್ಯಾಶ್ಚರ್ಯವುಳ್ಳವರಾಗಿ, “ಇಲ್ಲಿ ಮಾತನಾಡುತ್ತಿರುವವರೆಲ್ಲರೂ ಗಲಿಲಾಯದವರಲ್ಲವೇ? 8 ನಾವೆಲ್ಲರೂ ನಮ್ಮ ನಮ್ಮ ಮಾತೃಭಾಷೆಗಳಲ್ಲಿಯೇ ಇವರು ಮಾತಾಡುತ್ತಿರುವುದನ್ನು ಕೇಳುತ್ತಿರುವುದು ಹೇಗೆ? 9 ಪಾರ್ಥಿಯರು, ಮೇದ್ಯರು ಹಾಗೂ ಏಲಾಮ್ಯರು, ಮೆಸೊಪೊಟೇಮಿಯ, ಯೂದಾಯ, ಕಪ್ಪದೋಕ್ಯ, ಪೊಂತ, ಏಷ್ಯಾ, ಆ ಹೆಸರಿನ ರೋಮಾ ಪ್ರಾಂತವಾಗಿತ್ತು 10 ಫ್ರುಗ್ಯ ಮತ್ತು ಪಂಫುಲ್ಯ, ಈಜಿಪ್ಟ್ ಹಾಗೂ ಕುರೇನೆದ ಹತ್ತಿರದ ಲಿಬ್ಯದ ಭಾಗಗಳ ನಿವಾಸಿಗಳು; ರೋಮ್ ಪಟ್ಟಣದಿಂದ ಬಂದ ಸಂದರ್ಶಕರು ಇಲ್ಲಿ ಬಂದಿದ್ದಾರೆ. 11 ಇವರಲ್ಲದೆ, ಯೆಹೂದ್ಯರು ಮತ್ತು ಯೆಹೂದಿ ವಿಶ್ವಾಸಕ್ಕೆ ಬಂದಿದ್ದವರೂ ಇಲ್ಲಿದ್ದಾರೆ. ಅವರೊಂದಿಗೆ ಕ್ರೇತದವರು ಹಾಗೂ ಅರಬೀಯರು ನಮ್ಮ ಭಾಷೆಗಳಲ್ಲಿಯೇ ದೇವರ ಮಹತ್ಕಾರ್ಯಗಳನ್ನು ಹೇಳುತ್ತಿರುವದನ್ನು ಕೇಳುತ್ತಿದ್ದೇವಲ್ಲಾ!” ಎಂದು ಹೇಳಿದರು. 12 ಅವರು ಆಶ್ಚರ್ಯದಿಂದಲೂ ಗಲಿಬಿಲಿಗೊಂಡವರಾಗಿಯೂ, “ಇದರ ಅರ್ಥವೇನು?” ಎಂದು ತಮ್ಮತಮ್ಮೊಳಗೆ ಪ್ರಶ್ನೆಮಾಡಿಕೊಂಡರು. 13 14 ಆದರೆ, ಅವರಲ್ಲಿ ಕೆಲವರು, ಅವರ ಬಗ್ಗೆ ಹಾಸ್ಯಮಾಡುತ್ತಾ, “ಇವರು ಕುಡಿದು ಮತ್ತರಾಗಿದ್ದಾರೆ,” ಎಂದರು. ಜನಸಮೂಹಕ್ಕೆ ಪೇತ್ರನ ಬೋಧನೆ ಆಗ ಹನ್ನೊಂದು ಜನರೊಂದಿಗೆ ಪೇತ್ರನು ಎದ್ದು ನಿಂತುಕೊಂಡು, ಜನಸಮೂಹವನ್ನು ಉದ್ದೇಶಿಸಿ ಹೇಳಿದ್ದೇನೆಂದರೆ: “ಯೆಹೂದ್ಯರೇ, ಯೆರೂಸಲೇಮಿನ ಸರ್ವನಿವಾಸಿಗಳೇ, ಇದರ ಬಗ್ಗೆ ನಾನು ವಿವರಿಸುತ್ತೇನೆ, ಕೇಳಿರಿ. ನಾನು ಹೇಳುವುದನ್ನು ಜಾಗರೂಕತೆಯಿಂದ ಆಲಿಸಿರಿ. 15 ನೀವು ಊಹಿಸಿದಂತೆ, ಈ ಜನರು ಕುಡಿದು ಮತ್ತರಾಗಿಲ್ಲ. ಈಗ ಸಮಯ ಬೆಳಿಗ್ಗೆ ಒಂಬತ್ತು ಗಂಟೆ! 16 ಇದು ಪ್ರವಾದಿ ಯೋವೇಲನ ಪ್ರವಾದನೆಯ ನೆರವೇರುವಿಕೆಯಾಗಿದೆ: 17 “ದೇವರು ಹೇಳುವುದೇನೆಂದರೆ: ‘ಅಂತ್ಯ ದಿನಗಳಲ್ಲಿ ನನ್ನ ಆತ್ಮವನ್ನು ಎಲ್ಲಾ ಮನುಷ್ಯರ ಮೇಲೆ ಸುರಿಸುವೆನು, ನಿಮ್ಮ ಗಂಡು ಹೆಣ್ಣುಮಕ್ಕಳು ಪ್ರವಾದಿಸುವರು, ನಿಮ್ಮ ಯುವಜನರಿಗೆ ದರ್ಶನಗಳು ಕಾಣುವವು, ನಿಮ್ಮ ಹಿರಿಯರಿಗೆ ಕನಸುಗಳು ಬೀಳುವುವು. 18 ಆ ದಿನಗಳಲ್ಲಿ, ನನ್ನ ದಾಸ ದಾಸಿಯರ ಮೇಲೆ, ನನ್ನ ಆತ್ಮವನ್ನು ಸುರಿಸುವೆನು, ಅವರು ಪ್ರವಾದಿಸುವರು. 19 ನಾನು ಆಕಾಶದಲ್ಲಿ ಅದ್ಭುತಗಳನ್ನು, ಭೂಮಿಯಲ್ಲಿ ಸೂಚಕಕಾರ್ಯಗಳನ್ನು, ರಕ್ತ, ಬೆಂಕಿ, ಹಬೆಯನ್ನು ತೋರಿಸುವೆನು. 20 ಕರ್ತದೇವರ ಮಹಿಮೆಯುಳ್ಳ ಮಹಾದಿನವೂ ಬರುವುದಕ್ಕೆ ಮೊದಲು ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು. 21 ಆಗ ಕರ್ತದೇವರ ಹೆಸರನ್ನು ಹೇಳಿಕೊಳ್ಳುವವರೆಲ್ಲರಿಗೆ ರಕ್ಷಣೆ ಆಗುವುದು.’ ಯೋಯೇಲ 2:28-32 22 “ಇಸ್ರಾಯೇಲ್ ಜನರೇ, ಈ ವಿಷಯವನ್ನು ಕೇಳಿರಿ: ದೇವರು ನಜರೇತಿನ ಯೇಸುಸ್ವಾಮಿಯವರ ಮುಖಾಂತರ ನಿಮ್ಮ ಮಧ್ಯದಲ್ಲಿ ಅದ್ಭುತಕಾರ್ಯಗಳನ್ನೂ ಆಶ್ಚರ್ಯಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ನಡೆಸಿದ್ದರಿಂದ, ಯೇಸು ದೇವರ ಮೆಚ್ಚಿಕೆ ಪಡೆದವರಾಗಿದ್ದಾರೆಂಬುದನ್ನು, ನೀವೇ ತಿಳಿದಿರುವಿರಿ. 23 ದೇವರು ತಾವು ಮುಂಚಿತವಾಗಿ ನಿರ್ಣಯಿಸಿದ ಪ್ರಕಾರವೂ ತಾವು ಮೊದಲೇ ತಿಳಿದಿರುವಂತೆ ದೇವರು ಯೇಸುವನ್ನು ತಾವಾಗಿಯೇ ನಿಮಗೆ ಒಪ್ಪಿಸಿಕೊಟ್ಟರು. ನೀವಾದರೋ ದುಷ್ಟರ ಸಹಾಯದಿಂದ ಯೇಸುವನ್ನು ಶಿಲುಬೆಗೆ ಹಾಕಿ ಕೊಲೆಮಾಡಿದಿರಿ. 24 ಆದರೆ ದೇವರು ಯೇಸುವನ್ನು ಮರಣ ವೇದನೆಯಿಂದ ಬಿಡಿಸಿ ಜೀವಂತವಾಗಿ ಎಬ್ಬಿಸಿದರು. ಏಕೆಂದರೆ ಯೇಸುವನ್ನು ಹಿಡಿದಿಟ್ಟುಕೊಂಡಿರಲು ಮರಣಕ್ಕೆ ಸಾಧ್ಯವಾಗಲಿಲ್ಲ. 25 ದಾವೀದನು ಯೇಸುಸ್ವಾಮಿಯವರ ಬಗ್ಗೆ ಹೀಗೆ ಹೇಳಿದ್ದಾನೆ: “ ‘ನಾನು ಕರ್ತದೇವರನ್ನು ಯಾವಾಗಲೂ ನನ್ನೆದುರಿನಲ್ಲಿಯೇ ಇಟ್ಟುಕೊಂಡಿದ್ದೇನೆ. ನಾನು ಕದಲದಂತೆ ಕರ್ತದೇವರು ನನ್ನ ಬಲಗಡೆಯಲ್ಲಿದ್ದಾರೆ. 26 ಆದ್ದರಿಂದ ನನ್ನ ಹೃದಯ ಹರ್ಷಿಸುವುದು, ನನ್ನ ನಾಲಿಗೆ ಉಲ್ಲಾಸಗೊಳ್ಳುವುದು; ನನ್ನ ಶರೀರವು ಸಹ ನಿರೀಕ್ಷೆಯಿಂದ ನೆಲೆಯಾಗಿರುವುದು. 27 ಏಕೆಂದರೆ ನೀವು ನನ್ನ ಪ್ರಾಣವನ್ನು ಪಾತಾಳದಲ್ಲಿ ಬಿಟ್ಟುಬಿಡುವುದಿಲ್ಲ, ನಿಮ್ಮ ಪರಿಶುದ್ಧ ವ್ಯಕ್ತಿಯನ್ನು ಕೊಳೆಯುವಂತೆ ಬಿಡುವುದೇ ಇಲ್ಲ. 28 ನೀವು ನನಗೆ ಜೀವಮಾರ್ಗಗಳನ್ನು ತಿಳಿಯಪಡಿಸಿರುವಿರಿ; ನಿಮ್ಮ ಸನ್ನಿಧಿಯಲ್ಲಿ ನನ್ನನ್ನು ಆನಂದಭರಿತನಾಗ ಮಾಡುವಿರಿ.’§ ಕೀರ್ತನೆ 16:8-11 29 “ಪ್ರಿಯರೇ, ಮೂಲಪಿತೃ ದಾವೀದನು ಮರಣಹೊಂದಿದನು; ಸಮಾಧಿಮಾಡಲಾಯಿತು. ಇಂದಿಗೂ ಅವನ ಸಮಾಧಿ ನಮ್ಮಲ್ಲಿದೆ ಎಂಬುದನ್ನು ನಾನು ನಿಮಗೆ ಧೈರ್ಯದಿಂದ ಹೇಳಬಲ್ಲೆ. 30 ಆದರೆ ಪ್ರವಾದಿಯಾಗಿದ್ದ ದಾವೀದನ ಸಂತತಿಯವರಲ್ಲಿ ಒಬ್ಬರನ್ನು ಅವನ ಸಿಂಹಾಸನದ ಮೇಲೆ ಕುಳ್ಳಿರಿಸುವೆನು, ಎಂದು ಆಣೆಯಿಟ್ಟು ದೇವರು ವಾಗ್ದಾನ ಮಾಡಿದ್ದನ್ನು ದಾವೀದನು ತಿಳಿದಿದ್ದನು. 31 ದಾವೀದನು ಕ್ರಿಸ್ತ ಯೇಸುವಿನ ಪುನರುತ್ಥಾನದ ಬಗ್ಗೆ ಮುಂಚಿತವಾಗಿಯೇ ನೋಡಿ, ಹೀಗೆ ಮಾತನಾಡಿದನು: ‘ಅವರನ್ನು ಪಾತಾಳದಲ್ಲಿಯೇ ಬಿಡಲಿಲ್ಲ; ಅವರ ದೇಹವು ಕೊಳೆಯುವ ಅವಸ್ಥೆಯನ್ನು ಕಾಣಲಿಲ್ಲ.’ 32 ದೇವರು ಈ ಯೇಸುವನ್ನೇ ಮರಣದಿಂದ ಎಬ್ಬಿಸಿದರು. ಇದಕ್ಕೆ ನಾವೆಲ್ಲರೂ ಸಾಕ್ಷಿಗಳು. 33 ಆದ್ದರಿಂದ ಯೇಸು ದೇವರ ಬಲಗಡೆಗೆ ಏರಿಹೋಗಿ ವಾಗ್ದಾನಮಾಡಿದ ಪವಿತ್ರಾತ್ಮ ದೇವರನ್ನು ತಂದೆಯಿಂದ ಪಡೆದುಕೊಂಡರು. ಈಗ ನೀವು ಕಂಡು ಕೇಳಿರುವ ಆ ಪವಿತ್ರಾತ್ಮ ವರವನ್ನು ಯೇಸುವೇ ಇವರ ಮೇಲೆ ಸುರಿಸಿದ್ದಾರೆ. 34 ದಾವೀದನು ಪರಲೋಕಕ್ಕೆ ಏರಿಹೋಗಲಿಲ್ಲವಾದರೂ ಹೀಗೆ ಹೇಳಿದ್ದಾನೆ: “ ‘ಕರ್ತದೇವರು ನನ್ನ ಕರ್ತದೇವರಿಗೆ: “ನಾನು ನಿನ್ನ ವಿರೋಧಿಗಳನ್ನು 35 ನಿನ್ನ ಪಾದಗಳ ಪೀಠವಾಗಿ ಮಾಡುವವರೆಗೂ ನನ್ನ ಬಲಪಾರ್ಶ್ವದಲ್ಲಿ ನೀನು ಕುಳಿತುಕೊಂಡಿರು.” ’* ಕೀರ್ತನೆ 110:1 36 37 “ಆದ್ದರಿಂದ ನೀವು ಶಿಲುಬೆಗೇರಿಸಿದ ಈ ಯೇಸುವನ್ನೇ ದೇವರು ಕರ್ತ ಹಾಗೂ ಕ್ರಿಸ್ತ ಆಗಿಯೂ ಮಾಡಿದ್ದಾರೆ ಎಂಬುದು ಎಲ್ಲಾ ಇಸ್ರಾಯೇಲ್ ಮನೆತನದವರಿಗೆ ಸ್ಪಷ್ಟವಾಗಿ ತಿಳಿದಿರಲಿ,” ಎಂದನು. 38 ಜನರು ಇದನ್ನು ಕೇಳಿದಾಗ ಅವರಿಗೆ ಹೃದಯದಲ್ಲಿ ಅಲಗು ನೆಟ್ಟಂತಾಗಿ, “ಸಹೋದರರೇ, ನಾವೇನು ಮಾಡಬೇಕು?” ಎಂದು ಪೇತ್ರನನ್ನೂ ಉಳಿದ ಅಪೊಸ್ತಲರನ್ನೂ ಕೇಳಿದರು. ಅದಕ್ಕೆ ಪೇತ್ರನು, “ನಿಮ್ಮಲ್ಲಿ ಪ್ರತಿಯೊಬ್ಬನೂ ಪಶ್ಚಾತ್ತಾಪಪಟ್ಟು, ನಿಮ್ಮ ಪಾಪಗಳ ಕ್ಷಮೆಗಾಗಿ ಕ್ರಿಸ್ತ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನ ತೆಗೆದುಕೊಳ್ಳಿರಿ. ಆಗ ನೀವು ಪವಿತ್ರಾತ್ಮ ವರವನ್ನು ಪಡೆದುಕೊಳ್ಳುವಿರಿ. 39 ಈ ವಾಗ್ದಾನವು ನಿಮಗೂ ನಿಮ್ಮ ಮಕ್ಕಳಿಗೂ ದೂರ ಇರುವ ಎಲ್ಲರಿಗೂ ನಮ್ಮ ಕರ್ತದೇವರು ತಮ್ಮ ಕಡೆಗೆ ಕರೆಯುವ ಎಲ್ಲರಿಗಾಗಿಯೂ ಇರುವುದು,” ಎಂದನು. 40 ಪೇತ್ರನು ಇನ್ನೂ ಅನೇಕ ಮಾತುಗಳಿಂದ ಅವರನ್ನು ಎಚ್ಚರಿಸಿ, ಸಾಕ್ಷಿ ನುಡಿದು, “ಈ ಕೆಟ್ಟ ಸಂತತಿಯಿಂದ ನಿಮ್ಮನ್ನು ರಕ್ಷಿಸಿಕೊಳ್ಳಿರಿ,” ಎಂದು ಹೇಳಿದನು. 41 ಪೇತ್ರನ ಸಂದೇಶವನ್ನು ಸ್ವೀಕರಿಸಿದವರು ದೀಕ್ಷಾಸ್ನಾನ ಪಡೆದರು. ಆ ದಿನ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿದರು. ವಿಶ್ವಾಸಿಗಳ ಅನ್ಯೋನ್ಯತೆ 42 ಅವರೆಲ್ಲರು ಅಪೊಸ್ತಲರ ಬೋಧನೆಯಲ್ಲಿ, ಅನ್ಯೋನ್ಯತೆಯಲ್ಲಿ, ರೊಟ್ಟಿ ಮುರಿಯುವುದರಲ್ಲಿ, ಪ್ರಾರ್ಥನೆ ಮಾಡುವುದರಲ್ಲಿ ತಮ್ಮನ್ನು ಸಮರ್ಪಿಸಿಕೊಂಡು, 43 ಪ್ರತಿಯೊಬ್ಬರೂ ಭಯಭಕ್ತಿಉಳ್ಳವರಾಗಿದ್ದರು. ಅಪೊಸ್ತಲರು ಅನೇಕ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ಮಾಡುತ್ತಿದ್ದರು. 44 ವಿಶ್ವಾಸಿಗಳೆಲ್ಲರೂ ಒಟ್ಟಾಗಿದ್ದು, ತಮ್ಮಲ್ಲಿರುವ ಪ್ರತಿಯೊಂದನ್ನೂ ಹಂಚಿಕೊಳ್ಳುತ್ತಿದ್ದರು. 45 ಅವರು ಆಸ್ತಿಪಾಸ್ತಿಯನ್ನು ಮಾರಿ ಅವರವರ ಅವಶ್ಯಕತೆಗೆ ಅನುಸಾರವಾಗಿ ಎಲ್ಲರಿಗೂ ಹಂಚುತ್ತಿದ್ದರು. 46 ಪ್ರತಿದಿನವೂ ದೇವಾಲಯದಲ್ಲಿ ಒಮ್ಮನಸ್ಸಿನಿಂದ ಸಭೆ ಕೂಡಿಬರುವುದನ್ನು ಕ್ರಮವಾಗಿ ಮುಂದುವರೆಸಿದರು. ತಮ್ಮ ಮನೆಗಳಲ್ಲಿ ರೊಟ್ಟಿ ಮುರಿಯುತ್ತಾ ಆನಂದದಿಂದಲೂ ಸರಳ ಹೃದಯದಿಂದಲೂ ಊಟಮಾಡುತ್ತಿದ್ದರು. 47 ಅವರು ದೇವರಿಗೆ ಸ್ತೋತ್ರ ಮಾಡುತ್ತಾ, ಜನರೆಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು. ರಕ್ಷಣೆ ಹೊಂದಿದವರನ್ನು ಕರ್ತ ಯೇಸುವು ಪ್ರತಿದಿನವೂ ಅವರೊಂದಿಗೆ ಸೇರಿಸುತ್ತಿದ್ದರು.
ಒಟ್ಟು 28 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 2 / 28
×

Alert

×

Kannada Letters Keypad References