1. [PS]ಯೆಹೋವ ದೇವರು ಹೀಗೆ ಹೇಳುತ್ತಾನೆ: [PE][QS]“ಮೋವಾಬಿನವರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, [QE][QS2]ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. [QE][QS]ಏಕೆಂದರೆ ಅವನು ಎದೋಮಿನ ಅರಸನ ಎಲುಬುಗಳನ್ನು, [QE][QS2]ಸುಟ್ಟು ಸುಣ್ಣ ಮಾಡಿದ್ದಾನೆ. [QE]
2. [QS]ನಾನು ಮೋವಾಬಿನ ಮೇಲೆ ಬೆಂಕಿಯನ್ನು ಕಳುಹಿಸುವೆನು. [QE][QS2]ಅದು ಕೆರೀಯೋತಿನ ಕೋಟೆಗಳನ್ನು ದಹಿಸಿಬಿಡುವುದು. [QE][QS]ಮೋವಾಬು ಆರ್ಭಟದ ಮತ್ತು ತುತೂರಿಯ ಧ್ವನಿಯ ಸಂಗಡ [QE][QS2]ಗಲಿಬಿಲಿಯಲ್ಲಿ ಸಾಯುವುದು. [QE]
3. [QS]ನಾನು ಅದರ ಮಧ್ಯದಿಂದ ನ್ಯಾಯಾಧಿಪತಿಯನ್ನು ಕಡಿದುಹಾಕುವೆನು. [QE][QS2]ಎಲ್ಲಾ ಪ್ರಧಾನರನ್ನು ಅಲ್ಲಿ ಅವನೊಂದಿಗೆ ಕೊಲ್ಲುವೆನು,” [QE][QS2]ಎಂದು ಯೆಹೋವ ದೇವರು ಹೇಳುತ್ತಾರೆ. [QE]
4. [PS]ಯೆಹೋವ ದೇವರು ಹೀಗೆ ಹೇಳುತ್ತಾರೆ: [PE][QS]“ಯೆಹೂದದವರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, [QE][QS2]ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. [QE][QS]ಏಕೆಂದರೆ ಅವರು ಯೆಹೋವ ದೇವರ ನಿಯಮವನ್ನು ನಿರಾಕರಿಸಿದರು. [QE][QS2]ಆತನ ಆಜ್ಞೆಗಳನ್ನು ಕೈಗೊಳ್ಳಲಿಲ್ಲ. [QE][QS]ಅವರ ಪಿತೃಗಳು ಅನುಸರಿಸಿದ ಸುಳ್ಳು ದೇವರುಗಳೇ, [QE][QS2]ಇವರನ್ನು ದಾರಿ ತಪ್ಪುವವರನ್ನಾಗಿ ಮಾಡಿವೆ. [QE]
5. [QS]ನಾನು ಯೆಹೂದದ ಮೇಲೆ ಬೆಂಕಿಯನ್ನು ಕಳುಹಿಸುವೆನು. [QE][QS2]ಅದು ಯೆರೂಸಲೇಮಿನ ಕೋಟೆಗಳನ್ನು ದಹಿಸಿಬಿಡುವುದು.” [QE]
6. {#1ಇಸ್ರಾಯೇಲರ ಮೇಲೆ ತೀರ್ಪು } [PS]ಯೆಹೋವ ದೇವರು ಹೀಗೆ ಹೇಳುತ್ತಾರೆ: [PE][QS]“ಇಸ್ರಾಯೇಲಿನವರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, [QE][QS2]ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. [QE][QS]ಏಕೆಂದರೆ ಅವರು ನಿರಪರಾಧಿಗಳನ್ನು ಬೆಳ್ಳಿಗೆ [QE][QS2]ಮತ್ತು ಬಡವರನ್ನು ಒಂದು ಜೋಡಿ ಕೆರಗಳಿಗೆ ಮಾರಿದರು. [QE]
7. [QS]ಬಡವರ ತಲೆಗಳನ್ನು ಬೀದಿಯ ಧೂಳಿನಂತೆ ತುಳಿದು ಬಿಡುತ್ತಾರೆ. [QE][QS2]ದೀನದಲಿತರಿಗೆ ನ್ಯಾಯ ದೊರಕದಂತೆ ಮಾಡುತ್ತಾರೆ. [QE][QS]ತಂದೆಯೂ ಮಗನೂ ಒಬ್ಬ ಮಹಿಳೆಯನ್ನು ಇಟ್ಟುಕೊಂಡು, [QE][QS2]ನನ್ನ ಪವಿತ್ರ ನಾಮಕ್ಕೆ ಅಪಕೀರ್ತಿ ತರುತ್ತಾರೆ. [QE]
8. [QS]ಅವರು ಅಡವು ಇಟ್ಟ ವಸ್ತ್ರಗಳ ಮೇಲೆ [QE][QS2]ಪ್ರತಿಯೊಂದು ಬಲಿಪೀಠಗಳ ಬಳಿಯಲ್ಲೂ ಮಲಗುತ್ತಾರೆ. [QE][QS]ನಿಷೇಧಿಸಿದ ದ್ರಾಕ್ಷಾರಸವನ್ನು [QE][QS2]ತಮ್ಮ ದೇವರ ಆಲಯದಲ್ಲಿ ಕುಡಿಯುತ್ತಾರೆ. [QE][PBR]
9. [QS]“ಆದರೂ ನನ್ನ ಜನರೇ, ದೇವದಾರು ಮರದಂತೆ ಎತ್ತರವಾಗಿ, [QE][QS2]ಅಲ್ಲೋನ್ ಮರದಂತೆ ಬಲಿಷ್ಠರಾಗಿ ಇದ್ದ, [QE][QS2]ಅಮೋರಿಯರನ್ನು ನಾನು ನಾಶ ಪಡಿಸಿದೆನು. [QE][QS]ನಾನು ಮೇಲೆ ಅದರ ಫಲವನ್ನು ಮತ್ತು ಕೆಳಗೆ ಅದರ ಬೇರನ್ನು ಕಿತ್ತು ಹಾಕುವಂತೆ, [QE][QS2]ಅವರನ್ನು ನಿರ್ಮೂಲ ಮಾಡುವೆನು. [QE]
10. [QS]ನಾನೇ ನಿಮ್ಮನ್ನು ಈಜಿಪ್ಟ್ ದೇಶದಿಂದ ಕರೆತಂದೆನು. [QE][QS2]ಅಮೋರಿಯರ ದೇಶವನ್ನು ನಿಮಗೆ ಸೊತ್ತಾಗಿ ಕೊಡಲು, [QE][QS2]ನಿಮ್ಮನ್ನು ನಾಲ್ವತ್ತು ವರ್ಷ ಮರುಭೂಮಿಯಲ್ಲಿ ನಡೆಸಿದೆನು. [QE][PBR]
11. [QS]“ನಾನು ನಿಮ್ಮ ಪುತ್ರರಲ್ಲಿ ಪ್ರವಾದಿಗಳನ್ನೂ [QE][QS2]ನಿಮ್ಮ ಯೌವನಸ್ಥರಲ್ಲಿ ನಾಜೀರರನ್ನೂ ಎಬ್ಬಿಸಿದೆನು. [QE][QS]ಇಸ್ರಾಯೇಲಿನ ಜನರೇ, ಇದು ಸರಿಯಲ್ಲವೋ?” [QE][QS2]ಎಂದು ಯೆಹೋವ ದೇವರು ಹೇಳುತ್ತಾರೆ. [QE]
12. [QS]“ಆದರೆ ನೀವು ನಾಜೀರರಿಗೆ ಕುಡಿಯಲು ದ್ರಾಕ್ಷಾರಸವನ್ನು ಕೊಟ್ಟಿರಿ. [QE][QS2]ಪ್ರವಾದಿಗಳಿಗೆ ಪ್ರವಾದಿಸಬೇಡಿರಿ ಎಂದು ಆಜ್ಞಾಪಿಸಿದಿರಿ. [QE][PBR]
13. [QS]“ಇಗೋ, ಸಿವುಡು ತುಂಬಿದ ಬಂಡಿ ಒತ್ತುವ ಪ್ರಕಾರ, [QE][QS2]ನಾನು ನಿಮ್ಮನ್ನು ಕೆಳಗೆ ಹಾಕಿ ಒತ್ತುವೆನು. [QE]
14. [QS]ಆದ್ದರಿಂದ ತ್ವರೆಯಾಗಿ ಓಡುವವನು ತಪ್ಪಿಸಿಕೊಳ್ಳನು. [QE][QS2]ಬಲಿಷ್ಠನು ತನ್ನ ತ್ರಾಣವನ್ನು ಬಲಪಡಿಸಿಕೊಳ್ಳಲಾರನು. [QE][QS2]ಪರಾಕ್ರಮಿಯು ತನ್ನ ಪ್ರಾಣವನ್ನು ಉಳಿಸಿಕೊಳ್ಳನು. [QE]
15. [QS]ಬಿಲ್ಲು ಹಿಡಿಯುವವನು ಭೂಮಿಯ ಮೇಲೆ ನಿಲ್ಲನು. [QE][QS2]ಪಾದತ್ವರಿತನು ತಪ್ಪಿಸಿಕೊಳ್ಳನು. [QE][QS2]ಅಶ್ವಾರೂಢನು ತನ್ನ ಪ್ರಾಣವನ್ನು ಉಳಿಸಿಕೊಳ್ಳನು. [QE]
16. [QS]ಶೂರರಲ್ಲಿ ಧೈರ್ಯ ಹೃದಯವುಳ್ಳವನು, [QE][QS2]ಆ ದಿನದಲ್ಲಿ ಬೆತ್ತಲೆಯಾಗಿ ಓಡಿಹೋಗುವನು,” [QE][QS2]ಎಂದು ಯೆಹೋವ ದೇವರು ಹೇಳುತ್ತಾರೆ. [QE]