1. {#1ಇಸ್ರಾಯೇಲು ನಾಶವಾಗುವುದು } [PS]ಕರ್ತದೇವರು ಬಲಿಪೀಠದ ಪಕ್ಕದಲ್ಲಿ ನಿಂತಿರುವುದನ್ನು ನಾನು ಕಂಡೆನು. ಅವರು ಹೇಳಿದ್ದೇನೆಂದರೆ: [PE][QS]“ಹೊಸ್ತಿಲುಗಳು ಕದಲುವಂತೆ [QE][QS2]ಆಧಾರ ಬೋದಿಗೆಗಳನ್ನು ಬಲವಾಗಿ ಹೊಡೆದು, [QE][QS]ಅವು ಎಲ್ಲರ ತಲೆಗಳ ಮೇಲೆ ಬೀಳುವ ಹಾಗೆ ಅವುಗಳನ್ನು ಕಡಿದುಬಿಡು. [QE][QS2]ಅವರಲ್ಲಿ ಉಳಿದವರನ್ನು ಖಡ್ಗದಿಂದ ಕೊಲ್ಲುವೆನು. [QE][QS2]ಅವರಲ್ಲಿ ಓಡಿಹೋಗುವವನು ಓಡಿಹೋಗಲಾಗುವುದಿಲ್ಲ. [QE]
2. [QS]ಅವರು ಪಾತಾಳದವರೆಗೂ ಅಗೆದುಕೊಂಡು ಹೋದರೂ, [QE][QS2]ನನ್ನ ಕೈ ಅವರನ್ನು ಅಲ್ಲಿಂದ ಹಿಡಿದೆಳೆಯುವುದು. [QE][QS]ಅವರು ಆಕಾಶಕ್ಕೆ ಏರಿಹೋದರೂ, [QE][QS2]ನಾನು ಅವರನ್ನು ಅಲ್ಲಿಂದ ಕೆಳಗೆ ಇಳಿಸುವೆನು. [QE]
3. [QS]ಅವರು ಕರ್ಮೆಲಿನ ಬೆಟ್ಟದ ತುದಿಯಲ್ಲಿ ಅಡಗಿಕೊಂಡರೂ, [QE][QS2]ನಾನು ಅವರನ್ನು ಹುಡುಕಿ, ಅಲ್ಲಿಂದ ತೆಗೆಯುವೆನು. [QE][QS]ಅವರು ನನ್ನ ದೃಷ್ಟಿಗೆ ಮರೆಯಾಗಿ ಸಮುದ್ರದ ತಳದಲ್ಲಿ ಅಡಗಿಕೊಂಡರೂ, [QE][QS2]ಸರ್ಪಕ್ಕೆ ಅಪ್ಪಣೆಕೊಟ್ಟು, ಅದು ಅವರನ್ನು ಅಲ್ಲೇ ಕಚ್ಚುವಂತೆ ಮಾಡುವೆನು. [QE]
4. [QS]ಅವರು ತಮ್ಮ ಶತ್ರುಗಳ ಮುಂದೆ ಸೆರೆಗೆ ಹೋಗಿದ್ದರೂ, [QE][QS2]ಖಡ್ಗವು ನನ್ನ ಆಜ್ಞಾನುಸಾರ ಅಲ್ಲಿಯೂ ಅವರನ್ನು ಕೊಲ್ಲುವುದು. [QE][PBR] [QS]“ಅವರ ಮೇಲಿಗಾಗಿ ಅಲ್ಲ, [QE][QS2]ಕೇಡಿಗಾಗಿ ಅವರ ಮೇಲೆ ನನ್ನ ದೃಷ್ಟಿಯಿಡುವೆನು.” [QE][PBR]
5. [QS]ಸೇನಾಧೀಶ್ವರ ಯೆಹೋವ ದೇವರಾದ ಕರ್ತರೇ, [QE][QS]ನೀವು ದೇಶವನ್ನು ಮುಟ್ಟಿದ ಮಾತ್ರಕ್ಕೆ ಅದು ಕರಗಿ ಹೋಗುವುದು. [QE][QS2]ಅದರಲ್ಲಿ ವಾಸವಾಗಿರುವವರೆಲ್ಲರೂ ಗೋಳಾಡುವರು. [QE][QS]ಅವೆಲ್ಲಾ ನೈಲ್ ನದಿಯ ಹಾಗೆ ಪ್ರವಾಹದಂತೆ ಉಕ್ಕಿ, [QE][QS2]ಈಜಿಪ್ಟಿನ ಪ್ರವಾಹದಂತೆ ಉಕ್ಕಿ ಮುಳುಗಿ ಹೋಗುವುದು. [QE]
6. [QS]ಆಕಾಶದಲ್ಲಿ ಉಪ್ಪರಿಗೆಗಳನ್ನು ಕಟ್ಟಿಕೊಂಡು, [QE][QS2]ಭೂಮಿಯ ಮೇಲೆ ತಮ್ಮ ತಂಡಗಳನ್ನು ಸ್ಥಾಪಿಸಿ, [QE][QS]ಸಮುದ್ರದ ನೀರನ್ನು ಕರೆದು, [QE][QS2]ಅದನ್ನು ಭೂಮಿಯ ಮೇಲೆ ಹೊಯ್ಯುವಂತೆ ಮಾಡುವಾತರು ಅವರೇ. [QE][QS2]ಅವರ ಹೆಸರು ಯೆಹೋವ ದೇವರು. [QE][PBR]
7. [QS]“ಇಸ್ರಾಯೇಲರೇ, ನೀವು ನನಗೆ ಕೂಷ್ಯರ ಮಕ್ಕಳ ಹಾಗಲ್ಲವೇ? [QE][QS2]ನಾನು ನಿಮ್ಮನ್ನು ಈಜಿಪ್ಟಿನಿಂದಲೂ ಫಿಲಿಷ್ಟಿಯರನ್ನು [QE][QS2]ಕಫ್ತೋರಿನಿಂದಲೂ ಅರಾಮ್ಯರನ್ನು ಕೀರಿನಿಂದಲೂ ತರಲಿಲ್ಲವೇ?” [QE][QS2]ಎಂದು ಯೆಹೋವ ದೇವರು ಹೇಳುತ್ತಾರೆ. [QE][PBR]
8. [QS]“ಸಾರ್ವಭೌಮ ಯೆಹೋವ ದೇವರ ಕಣ್ಣುಗಳು [QE][QS2]ಪಾಪವುಳ್ಳ ರಾಜ್ಯದ ಮೇಲೆ ಇವೆ. [QE][QS]ನಾನು ಅದನ್ನು ಭೂಮಿಯ ಮೇಲಿನಿಂದ ನಾಶಮಾಡುವೆನು. [QE][QS2]ಆದರೆ ಯಾಕೋಬಿನ ಮನೆತನದವರನ್ನು ನಾನು ನಿಜವಾಗಿ ನಾಶಮಾಡುವುದಿಲ್ಲ,” [QE][QS2]ಎಂದು ಯೆಹೋವ ದೇವರು ಹೇಳುತ್ತಾರೆ. [QE]
9. [QS]ಧಾನ್ಯವನ್ನು ಜರಡಿಯಲ್ಲಿ ಜಾಲಿಸುವಂತೆ [QE][QS2]ನಾನು ಇಸ್ರಾಯೇಲರನ್ನು ಎಲ್ಲಾ ಜನಾಂಗಗಳಲ್ಲಿ ಹಾಕಿ ಜಾಲಿಸಬೇಕೆಂದು ಆಜ್ಞಾಪಿಸುವೆನು. [QE][QS2]ಆದರೂ ಒಂದು ಕಾಳಾದರೂ ನೆಲಕ್ಕೆ ಬೀಳುವುದಿಲ್ಲ. [QE]
10. [QS]ಕೇಡು ನಮ್ಮನ್ನು ಹಿಂದಟ್ಟದು ಮತ್ತು ನಮ್ಮನ್ನು ತಡೆಯುವದೂ ಇಲ್ಲ, [QE][QS2]ಎನ್ನುವ ನನ್ನ ಜನರಲ್ಲಿರುವ ಪಾಪಿಗಳೆಲ್ಲರೂ ಖಡ್ಗದಿಂದ ಸಾಯುವರು. [QE]
11. {#1ಇಸ್ರಾಯೇಲಿನ ಪುನಃಸ್ಥಾಪನೆ } [PS]ಆ ದಿನದಲ್ಲಿ, [PE][QS]ಬಿದ್ದುಹೋದ ದಾವೀದನ ಗುಡಾರವನ್ನು ನಾನು ನಿಲ್ಲಿಸಿ [QE][QS2]ಅದರ ಮುರಿದ ಗೋಡೆಗಳನ್ನು ಸರಿಪಡಿಸುತ್ತೇನೆ. [QE][QS2]ಮತ್ತು ಅದರ ಅವಶೇಷಗಳನ್ನು ಪುನಃಸ್ಥಾಪಿಸಿ [QE][QS2]ಮತ್ತು ಅದನ್ನು ಮೊದಲಿನಂತೆ ಪುನಃ ನಿರ್ಮಿಸುವೆನು. [QE]
12. [QS]ಆಗ ಅವರು ಎದೋಮಿನ ಮಿಕ್ಕ ಭಾಗವನ್ನೂ, [QE][QS2]ನನ್ನ ಹೆಸರಿನಿಂದ ಕರೆಯಲಾಗುವ ಎಲ್ಲಾ ಜನಾಂಗಗಳನ್ನೂ ಸ್ವಾಧೀನ ಮಾಡಿಕೊಳ್ಳುವೆನು, [QE][QS2]ಎಂಬುದಾಗಿ ಇದನ್ನು ಮಾಡುವವರಾದ ಯೆಹೋವ ದೇವರು ಹೇಳುತ್ತಾರೆ. [QE]
13. [PS]ಯೆಹೋವ ದೇವರು ಹೇಳುವುದೇನೆಂದರೆ: “ದಿನಗಳು ಬರುವುವು,” [PE][QS]“ಆಗ ಉಳುವವನು ಕೊಯ್ಯುವವನನ್ನೂ, [QE][QS2]ದ್ರಾಕ್ಷಿ ಮಾರುವವನು ಬೀಜ ಹಾಕುವವನನ್ನೂ ಹಿಂದಟ್ಟುವರು. [QE][QS]ಆಗ ಬೆಟ್ಟಗಳು ಹೊಸ ಸಿಹಿ ದ್ರಾಕ್ಷಾರಸವನ್ನು ಸುರಿಯುವುವು, [QE][QS2]ಗುಡ್ಡಗಳೆಲ್ಲಾ ಕರಗುವುವು. [QE]
2. [QS2]ನನ್ನ ಜನರಾದ ಇಸ್ರಾಯೇಲರನ್ನು ಸೆರೆಯಿಂದ ತಿರುಗಿ ಬರಮಾಡುವೆನು. [QE][PBR] [QS]“ಅವರು ಹಾಳಾದ ಪಟ್ಟಣಗಳನ್ನು ಕಟ್ಟಿ ವಾಸಮಾಡುವರು. [QE][QS2]ದ್ರಾಕ್ಷಿತೋಟಗಳನ್ನು ನೆಟ್ಟು, ಅವುಗಳ ದ್ರಾಕ್ಷಾರಸವನ್ನು ಕುಡಿಯುವರು. [QE][QS2]ತೋಟಗಳನ್ನು ಮಾಡಿ ಅವುಗಳ ಫಲವನ್ನು ತಿನ್ನುವರು. [QE]
15. [QS]ನಾನು ಇಸ್ರಾಯೇಲರನ್ನು ಅವರ ದೇಶದಲ್ಲಿ ನೆಡುವೆನು. [QE][QS2]ನಾನು ಅವರಿಗೆ ಕೊಟ್ಟಿರುವ ದೇಶದಿಂದ ಇನ್ನು ಮುಂದೆ ಯಾರೂ ಅವರನ್ನು ಕಿತ್ತುಹಾಕರು,” [QE][MS]ಎಂದು ನಿಮ್ಮ ದೇವರಾದ ಯೆಹೋವ ದೇವರು ಹೇಳುತ್ತಾರೆ. [ME]