ಪವಿತ್ರ ಬೈಬಲ್

ಓಪನ್ ಸಮಕಾಲೀನ ಆವೃತ್ತಿ (OCV)
ಕೊಲೊಸ್ಸೆಯವರಿಗೆ
1. [PS]ದೇವರ ಚಿತ್ತಾನುಸಾರ ಕ್ರಿಸ್ತ ಯೇಸುವಿನ ಅಪೊಸ್ತಲನಾಗಿರುವ ಪೌಲನೂ ನಮ್ಮ ಸಹೋದರನಾದ ತಿಮೊಥೆಯನೂ, [PE][PBR]
2. [PS]ಕ್ರಿಸ್ತನಲ್ಲಿರುವ ಕೊಲೊಸ್ಸೆಯ ದೇವರ ಪರಿಶುದ್ಧರಿಗೆ ಮತ್ತು ನಂಬಿಗಸ್ತರಾದ ಸಹೋದರ ಸಹೋದರಿಯರಿಗೆ: [PE][PBR] [PS]ನಮ್ಮ ತಂದೆಯಾದ ದೇವರಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. [PE][PBR]
3. {#1ಕೃತಜ್ಞತಾಸ್ತುತಿ ಹಾಗೂ ಪ್ರಾರ್ಥನೆ } [PS]ನಾವು ನಿಮಗಾಗಿ ಪ್ರಾರ್ಥನೆ ಮಾಡುವಾಗ, ನಮ್ಮ ಕರ್ತ ಯೇಸುಕ್ರಿಸ್ತರ ತಂದೆಯಾದ ದೇವರಿಗೆ ಯಾವಾಗಲೂ ಕೃತಜ್ಞತೆಯನ್ನು ಸಲ್ಲಿಸುತ್ತೇವೆ.
4. ಏಕೆಂದರೆ, ಕ್ರಿಸ್ತ ಯೇಸುವಿನಲ್ಲಿ ನೀವು ಇಟ್ಟ ನಂಬಿಕೆ ಹಾಗೂ ದೇವಜನರೆಲ್ಲರ ಮೇಲಿರುವ ನಿಮ್ಮ ಪ್ರೀತಿಯ ವಿಷಯವಾಗಿ ನಾವು ಕೇಳಿದ್ದೇವೆ.
5. ಪರಲೋಕದಲ್ಲಿ ನಿಮಗೋಸ್ಕರ ಕಾದಿರಿಸಲಾದ ನಿರೀಕ್ಷೆಯಿಂದಲೇ ಈ ವಿಶ್ವಾಸವೂ ಪ್ರೀತಿಯೂ ಬುಗ್ಗೆಯಾಗಿ ಒದಗಿಬರುತ್ತದೆ. ಈ ನಿರೀಕ್ಷೆಯ ಬಗ್ಗೆ ಸುವಾರ್ತೆಯ ಸತ್ಯ ಸಂದೇಶವನ್ನು ಮೊದಲೇ ನೀವು ಕೇಳಿದ್ದೀರಿ.
6. ಆ ಸುವಾರ್ತೆಯು ಲೋಕದಲ್ಲೆಲ್ಲಾ ಹರಡಿದಂತೆ, ನಿಮಗೂ ತಲುಪಲು ನೀವು ಸಹ ಅದನ್ನು ಕೇಳಿ ದೇವರ ಕೃಪೆಯನ್ನು ನಿಜವಾಗಿಯೂ ತಿಳಿದುಕೊಂಡ ದಿವಸದಿಂದ ನಿಮ್ಮಲ್ಲಿಯೂ ಫಲಕೊಟ್ಟು ವೃದ್ಧಿಯಾಗುತ್ತಿದೆ.
7. ಇದನ್ನು ನೀವು ನಮ್ಮ ಪ್ರೀತಿಯ ಜೊತೆ ಸೇವಕನಾದ ಎಪಫ್ರನಿಂದ ಕಲಿತುಕೊಂಡಿರಿ. ಅವನು ನಮಗೋಸ್ಕರ[* ಕೆಲವು ಪ್ರತಿಗಳಲ್ಲಿ, ನಿಮಗೋಸ್ಕರ ] ಕ್ರಿಸ್ತನ ನಂಬಿಗಸ್ತನಾದ ಸೇವಕನು.
8. ಪವಿತ್ರಾತ್ಮರಿಂದ ನೀವು ಹೊಂದಿರುವ ಪ್ರೀತಿಯನ್ನು ನಮಗೆ ತಿಳಿಸಿದವನೂ ಅವನೇ. [PE]
9. [PS]ಆದಕಾರಣ ನಾವೂ ಸಹ ನಿಮ್ಮ ಬಗ್ಗೆ ಕೇಳಿದ ದಿನದಿಂದ ನಿಮಗಾಗಿ ಪ್ರಾರ್ಥಿಸುವುದನ್ನು ಬಿಡಲಿಲ್ಲ. ನೀವು ದೇವರಾತ್ಮ ನೀಡುವ ಜ್ಞಾನವನ್ನೂ ಗ್ರಹಿಕೆಯನ್ನೂ ಹೊಂದಿ, ದೇವರ ಚಿತ್ತದ ತಿಳುವಳಿಕೆಯಿಂದ ತುಂಬಿರಬೇಕೆಂದು ನಾವು ದೇವರಿಗೆ ಬೇಡಿಕೊಳ್ಳುತ್ತಿದ್ದೇವೆ.
10. ಕರ್ತ ಯೇಸುವಿಗೆ ಯೋಗ್ಯರಾಗಿ ಜೀವಿಸಿ ಎಲ್ಲಾ ವಿಧದಲ್ಲಿ ಅವರನ್ನೇ ಮೆಚ್ಚಿಸುವವರಾಗಿರಬೇಕೆಂತಲೂ ನೀವು ಸಕಲ ಸತ್ಕಾರ್ಯದಲ್ಲಿ ಫಲಕೊಡುತ್ತಾ ದೇವರ ತಿಳುವಳಿಕೆಯಲ್ಲಿ ವೃದ್ಧಿಯಾಗುತ್ತಿರಬೇಕೆಂತಲೂ
11. ದೇವರ ಮಹಿಮೆಯ ಪರಾಕ್ರಮದಿಂದ ಬರುವ ಸರ್ವಶಕ್ತಿಯನ್ನು ಹೊಂದಿ ಬಲಗೊಳ್ಳಲಿ ಎಂದು ಬೇಡಿಕೊಳ್ಳುತ್ತೇವೆ. ಆಗ ನೀವು ಸರ್ವತಾಳ್ಮೆಯನ್ನೂ ದೀರ್ಘಶಾಂತಿಯನ್ನೂ ಹೊಂದಿದವರಾಗಿ,
12. ತಂದೆಯಾದ ದೇವರಿಗೆ ಹರ್ಷದಿಂದ ಕೃತಜ್ಞತೆಯನ್ನು ಸಲ್ಲಿಸುವಿರಿ. ಬೆಳಕಿನಲ್ಲಿರುವ ದೇವಭಕ್ತರ ಬಾಧ್ಯತೆಯಲ್ಲಿ ಪಾಲುಗಾರರಾಗುವುದಕ್ಕೆ ತಂದೆಯು ನಿಮ್ಮನ್ನು ಯೋಗ್ಯರನ್ನಾಗಿ ಮಾಡಿದ್ದಾರೆ.
13. ತಂದೆಯು ನಮ್ಮನ್ನು ಅಂಧಕಾರದ ಅಧಿಪತ್ಯದಿಂದ ಬಿಡಿಸಿ ತಮ್ಮ ಪ್ರಿಯ ಪುತ್ರ ಕ್ರಿಸ್ತ ಯೇಸುವಿನ ರಾಜ್ಯದೊಳಗೆ ಸೇರಿಸಿದರು.
14. ಕ್ರಿಸ್ತ ಯೇಸುವಿನಲ್ಲಿಯೇ ನಮಗೆ ವಿಮೋಚನೆ ಉಂಟಾಯಿತು. ನಮ್ಮ ಪಾಪಗಳ ಕ್ಷಮೆಯೇ ಆ ವಿಮೋಚನೆಯಾಗಿರುತ್ತದೆ. [PE]
15. {#1ಕ್ರಿಸ್ತ ಯೇಸುವಿನ ಸರ್ವಶ್ರೇಷ್ಠತೆ } [PS]ಕ್ರಿಸ್ತ ಯೇಸು ಅದೃಶ್ಯರಾದ ದೇವರ ಸ್ವರೂಪವೂ ಸರ್ವಸೃಷ್ಟಿಗು ಜ್ಯೇಷ್ಠ ಪುತ್ರರೂ ಆಗಿದ್ದಾರೆ.
16. ಏಕೆಂದರೆ ಭೂಪರಲೋಕಗಳಲ್ಲಿರುವ ಕಾಣುವಂತವುಗಳಾಗಲಿ, ಕಾಣದಂತವುಗಳಾಗಲಿ ಸಮಸ್ತವು ಇವರ ಮೂಲಕವೇ ಸೃಷ್ಟಿಸಲಾಯಿತು. ಸಿಂಹಾಸನಗಳಾಗಲಿ, ಪ್ರಭುತ್ವಗಳಾಗಲಿ, ದೊರೆತನಗಳಾಗಲಿ, ಅಧಿಕಾರಗಳಾಗಲಿ ಕ್ರಿಸ್ತನಲ್ಲಿಯೇ ಸೃಷ್ಟಿಗೊಂಡವು. ಸರ್ವವೂ ಕ್ರಿಸ್ತರಿಂದಲೂ ಕ್ರಿಸ್ತರಿಗಾಗಿಯೂ ಸೃಷ್ಟಿಹೊಂದಿತು.
17. ಕ್ರಿಸ್ತ ಯೇಸು ಎಲ್ಲದಕ್ಕೂ ಮೊದಲು ಇದ್ದವರು, ಇವರಲ್ಲಿಯೇ ಸಮಸ್ತವೂ ನೆಲೆಯಾಗಿದೆ.
18. ಕ್ರಿಸ್ತ ಯೇಸು ಸಭೆಯೆಂಬ ದೇಹಕ್ಕೆ ಶಿರಸ್ಸಾಗಿದ್ದಾರೆ. ಎಲ್ಲದರಲ್ಲಿಯೂ ಇವರೇ ಪ್ರಥಮ ಸ್ಥಾನಹೊಂದಿರುವಂತೆ, ಆರಂಭವೂ ಸತ್ತು ಎದ್ದು ಬಂದವರಲ್ಲಿ ಪ್ರಥಮವಾದವರು ಆಗಿದ್ದಾರೆ. ಹೀಗೆ ಇವರು ಎಲ್ಲದರಲ್ಲಿಯೂ ಸರ್ವಶ್ರೇಷ್ಠರಾಗಿದ್ದಾರೆ.
19. ಏಕೆಂದರೆ ದೇವರು ಕ್ರಿಸ್ತ ಯೇಸುವಿನಲ್ಲಿ ಸರ್ವಸಂಪೂರ್ಣತೆಯು ವಾಸವಾಗಿರಲು ಬಯಸಿದರು.
20. ಕ್ರಿಸ್ತ ಯೇಸು ಶಿಲುಬೆಯ ಮೇಲೆ ಸುರಿಸಿದ ರಕ್ತದ ಮೂಲಕವಾಗಿ, ದೇವರು ಸಮಾಧಾನವನ್ನು ಉಂಟುಮಾಡಿ, ಕ್ರಿಸ್ತನ ಮೂಲಕವೇ ಭೂಪರಲೋಕಗಳಲ್ಲಿರುವ ಎಲ್ಲವನ್ನೂ ತಮ್ಮೊಂದಿಗೆ ಸಂಧಾನಪಡಿಸಿಕೊಂಡರು. [PE]
21. [PS]ಹಿಂದಿನ ಕಾಲದಲ್ಲಿ ನೀವು ನಿಮ್ಮ ದುಷ್ಕೃತ್ಯಗಳ ನಿಮಿತ್ತ ದೇವರಿಂದ ದೂರವಿದ್ದವರೂ ಮನಸ್ಸಿನಲ್ಲಿ ದೇವರ ಶತ್ರುಗಳೂ ಆಗಿದ್ದೀರಿ.
22. ಈಗಲಾದರೋ ದೇವರು ನಿಮ್ಮನ್ನು ಪರಿಶುದ್ಧರನ್ನಾಗಿಯೂ ನಿರ್ದೋಷಿಗಳನ್ನಾಗಿಯೂ ನಿಂದಾರಹಿತರನ್ನಾಗಿಯೂ ತಮ್ಮ ಸನ್ನಿಧಿಯಲ್ಲಿ ನಿಲ್ಲಿಸಿಕೊಳ್ಳುವಂತೆ, ಕ್ರಿಸ್ತನ ಮಾಂಸದೇಹದ ಮರಣದಿಂದ ಈಗ ನಿಮ್ಮನ್ನು ಸಂಧಾನಪಡಿಸಿಕೊಂಡಿದ್ದಾರೆ.
23. ನೀವು ನಿಮ್ಮ ನಂಬಿಕೆಯಲ್ಲಿ ಸ್ಥಿರವಾಗಿ ಮುಂದುವರೆದು ನೆಲೆಗೊಂಡು, ಸುವಾರ್ತೆಯ ನಿರೀಕ್ಷೆಯಿಂದ ತೊಲಗಿ ಹೋಗದಿರಿ. ನೀವು ಕೇಳಿದಂಥ ಮತ್ತು ಆಕಾಶದ ಕೆಳಗಿರುವ ಸರ್ವಸೃಷ್ಟಿಗೆ ಸಾರಲಾದ ಈ ಸುವಾರ್ತೆಗೆ ಪೌಲನೆಂಬ ನಾನು ಸೇವಕನಾದೆನು. [PE]
24. {#1ಸಭೆಗಾಗಿ ಪೌಲನ ಸೇವೆ } [PS]ಈಗ ನಾನು ನಿಮಗೋಸ್ಕರ ಸಹಿಸುತ್ತಿರುವ ಬಾಧೆಗಳಲ್ಲಿ ಆನಂದಿಸುತ್ತೇನೆ. ಕ್ರಿಸ್ತ ಯೇಸುವಿನ ಸಂಕಟಗಳೊಳಗೆ ಇನ್ನೂ ಕೊರತೆಯಾಗಿರುವುದನ್ನು ಅವರ ದೇಹವಾಗಿರುವ ಸಭೆಗಾಗಿ ನನ್ನ ದೇಹದಲ್ಲಿ ತೀರಿಸುತ್ತೇನೆ.
25. ನಿಮಗೋಸ್ಕರವಾಗಿ ನನಗೆ ದೇವರು ಕೊಟ್ಟಿರುವ ಜವಾಬ್ದಾರಿಗೆ ಅನುಸಾರವಾಗಿ, ದೇವರ ವಾಕ್ಯವನ್ನು ಸಂಪೂರ್ಣವಾಗಿ ಸಾರಲು ನಾನು ಸಭೆಗೆ ಸೇವಕನಾದೆನು.
26. ಆ ರಹಸ್ಯವು ಹಿಂದಿನ ಯುಗಗಳಿಂದಲೂ ತಲತಲಾಂತರಗಳಿಂದಲೂ ಮರೆಯಾಗಿತ್ತು. ಆದರೂ ಈಗ ಅದು ಕರ್ತ ಯೇಸುವಿನ ಜನರಿಗೆ ಪ್ರಕಟವಾಗಿದೆ.
27. ಯೆಹೂದ್ಯರಲ್ಲದವರಲ್ಲಿ ಆ ರಹಸ್ಯದ ಮಹಿಮೆಯ ಐಶ್ವರ್ಯವು ಎಷ್ಟೆಂಬುದನ್ನು ದೇವರು ತಮ್ಮ ಜನರಿಗೆ ಪ್ರಕಟಿಸುವುದಕ್ಕೆ ಮನಸ್ಸು ಮಾಡಿದ್ದಾರೆ. ಆ ರಹಸ್ಯವು ಏನೆಂದರೆ, ನಿಮ್ಮಲ್ಲಿರುವ ಕ್ರಿಸ್ತ ಯೇಸು ಮಹಿಮೆಯ ನಿರೀಕ್ಷೆಯಾಗಿದ್ದಾರೆ ಎಂಬುದೇ. [PE]
28. [PS]ಈ ಕ್ರಿಸ್ತ ಯೇಸುವನ್ನೇ ನಾವು ಸಾರುವವರಾಗಿದ್ದೇವೆ; ಪ್ರತಿಯೊಬ್ಬರೂ ಕ್ರಿಸ್ತ ಯೇಸುವಿನಲ್ಲಿ ಪರಿಪಕ್ವತೆಯುಳ್ಳವರಾಗಿ ಸಮರ್ಪಿಸುವಂತೆ, ಪ್ರತಿಯೊಬ್ಬರನ್ನೂ ಎಚ್ಚರಿಸಿ ಎಲ್ಲಾ ಜ್ಞಾನದಲ್ಲಿ ಪ್ರತಿಯೊಬ್ಬರಿಗೂ ಬೋಧಿಸುತ್ತಿದ್ದೇವೆ.
29. ನನ್ನಲ್ಲಿ ಬಲದಿಂದ ಕಾರ್ಯ ಮಾಡುವ ಕ್ರಿಸ್ತನ ಶಕ್ತಿಗೆ ಅನುಸಾರವಾಗಿ, ನಾನೂ ಸಹ ಪ್ರಯಾಸ ಪಡುತ್ತಾ ಈ ಗುರಿಗಾಗಿ ಹೋರಾಡುತ್ತೇನೆ. [PE]
ಒಟ್ಟು 4 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 1 / 4
1 2 3 4
1 ದೇವರ ಚಿತ್ತಾನುಸಾರ ಕ್ರಿಸ್ತ ಯೇಸುವಿನ ಅಪೊಸ್ತಲನಾಗಿರುವ ಪೌಲನೂ ನಮ್ಮ ಸಹೋದರನಾದ ತಿಮೊಥೆಯನೂ, 2 ಕ್ರಿಸ್ತನಲ್ಲಿರುವ ಕೊಲೊಸ್ಸೆಯ ದೇವರ ಪರಿಶುದ್ಧರಿಗೆ ಮತ್ತು ನಂಬಿಗಸ್ತರಾದ ಸಹೋದರ ಸಹೋದರಿಯರಿಗೆ: ನಮ್ಮ ತಂದೆಯಾದ ದೇವರಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ಕೃತಜ್ಞತಾಸ್ತುತಿ ಹಾಗೂ ಪ್ರಾರ್ಥನೆ 3 ನಾವು ನಿಮಗಾಗಿ ಪ್ರಾರ್ಥನೆ ಮಾಡುವಾಗ, ನಮ್ಮ ಕರ್ತ ಯೇಸುಕ್ರಿಸ್ತರ ತಂದೆಯಾದ ದೇವರಿಗೆ ಯಾವಾಗಲೂ ಕೃತಜ್ಞತೆಯನ್ನು ಸಲ್ಲಿಸುತ್ತೇವೆ. 4 ಏಕೆಂದರೆ, ಕ್ರಿಸ್ತ ಯೇಸುವಿನಲ್ಲಿ ನೀವು ಇಟ್ಟ ನಂಬಿಕೆ ಹಾಗೂ ದೇವಜನರೆಲ್ಲರ ಮೇಲಿರುವ ನಿಮ್ಮ ಪ್ರೀತಿಯ ವಿಷಯವಾಗಿ ನಾವು ಕೇಳಿದ್ದೇವೆ. 5 ಪರಲೋಕದಲ್ಲಿ ನಿಮಗೋಸ್ಕರ ಕಾದಿರಿಸಲಾದ ನಿರೀಕ್ಷೆಯಿಂದಲೇ ಈ ವಿಶ್ವಾಸವೂ ಪ್ರೀತಿಯೂ ಬುಗ್ಗೆಯಾಗಿ ಒದಗಿಬರುತ್ತದೆ. ಈ ನಿರೀಕ್ಷೆಯ ಬಗ್ಗೆ ಸುವಾರ್ತೆಯ ಸತ್ಯ ಸಂದೇಶವನ್ನು ಮೊದಲೇ ನೀವು ಕೇಳಿದ್ದೀರಿ. 6 ಆ ಸುವಾರ್ತೆಯು ಲೋಕದಲ್ಲೆಲ್ಲಾ ಹರಡಿದಂತೆ, ನಿಮಗೂ ತಲುಪಲು ನೀವು ಸಹ ಅದನ್ನು ಕೇಳಿ ದೇವರ ಕೃಪೆಯನ್ನು ನಿಜವಾಗಿಯೂ ತಿಳಿದುಕೊಂಡ ದಿವಸದಿಂದ ನಿಮ್ಮಲ್ಲಿಯೂ ಫಲಕೊಟ್ಟು ವೃದ್ಧಿಯಾಗುತ್ತಿದೆ. 7 ಇದನ್ನು ನೀವು ನಮ್ಮ ಪ್ರೀತಿಯ ಜೊತೆ ಸೇವಕನಾದ ಎಪಫ್ರನಿಂದ ಕಲಿತುಕೊಂಡಿರಿ. ಅವನು ನಮಗೋಸ್ಕರ* ಕೆಲವು ಪ್ರತಿಗಳಲ್ಲಿ, ನಿಮಗೋಸ್ಕರ ಕ್ರಿಸ್ತನ ನಂಬಿಗಸ್ತನಾದ ಸೇವಕನು. 8 ಪವಿತ್ರಾತ್ಮರಿಂದ ನೀವು ಹೊಂದಿರುವ ಪ್ರೀತಿಯನ್ನು ನಮಗೆ ತಿಳಿಸಿದವನೂ ಅವನೇ. 9 ಆದಕಾರಣ ನಾವೂ ಸಹ ನಿಮ್ಮ ಬಗ್ಗೆ ಕೇಳಿದ ದಿನದಿಂದ ನಿಮಗಾಗಿ ಪ್ರಾರ್ಥಿಸುವುದನ್ನು ಬಿಡಲಿಲ್ಲ. ನೀವು ದೇವರಾತ್ಮ ನೀಡುವ ಜ್ಞಾನವನ್ನೂ ಗ್ರಹಿಕೆಯನ್ನೂ ಹೊಂದಿ, ದೇವರ ಚಿತ್ತದ ತಿಳುವಳಿಕೆಯಿಂದ ತುಂಬಿರಬೇಕೆಂದು ನಾವು ದೇವರಿಗೆ ಬೇಡಿಕೊಳ್ಳುತ್ತಿದ್ದೇವೆ. 10 ಕರ್ತ ಯೇಸುವಿಗೆ ಯೋಗ್ಯರಾಗಿ ಜೀವಿಸಿ ಎಲ್ಲಾ ವಿಧದಲ್ಲಿ ಅವರನ್ನೇ ಮೆಚ್ಚಿಸುವವರಾಗಿರಬೇಕೆಂತಲೂ ನೀವು ಸಕಲ ಸತ್ಕಾರ್ಯದಲ್ಲಿ ಫಲಕೊಡುತ್ತಾ ದೇವರ ತಿಳುವಳಿಕೆಯಲ್ಲಿ ವೃದ್ಧಿಯಾಗುತ್ತಿರಬೇಕೆಂತಲೂ 11 ದೇವರ ಮಹಿಮೆಯ ಪರಾಕ್ರಮದಿಂದ ಬರುವ ಸರ್ವಶಕ್ತಿಯನ್ನು ಹೊಂದಿ ಬಲಗೊಳ್ಳಲಿ ಎಂದು ಬೇಡಿಕೊಳ್ಳುತ್ತೇವೆ. ಆಗ ನೀವು ಸರ್ವತಾಳ್ಮೆಯನ್ನೂ ದೀರ್ಘಶಾಂತಿಯನ್ನೂ ಹೊಂದಿದವರಾಗಿ, 12 ತಂದೆಯಾದ ದೇವರಿಗೆ ಹರ್ಷದಿಂದ ಕೃತಜ್ಞತೆಯನ್ನು ಸಲ್ಲಿಸುವಿರಿ. ಬೆಳಕಿನಲ್ಲಿರುವ ದೇವಭಕ್ತರ ಬಾಧ್ಯತೆಯಲ್ಲಿ ಪಾಲುಗಾರರಾಗುವುದಕ್ಕೆ ತಂದೆಯು ನಿಮ್ಮನ್ನು ಯೋಗ್ಯರನ್ನಾಗಿ ಮಾಡಿದ್ದಾರೆ. 13 ತಂದೆಯು ನಮ್ಮನ್ನು ಅಂಧಕಾರದ ಅಧಿಪತ್ಯದಿಂದ ಬಿಡಿಸಿ ತಮ್ಮ ಪ್ರಿಯ ಪುತ್ರ ಕ್ರಿಸ್ತ ಯೇಸುವಿನ ರಾಜ್ಯದೊಳಗೆ ಸೇರಿಸಿದರು. 14 ಕ್ರಿಸ್ತ ಯೇಸುವಿನಲ್ಲಿಯೇ ನಮಗೆ ವಿಮೋಚನೆ ಉಂಟಾಯಿತು. ನಮ್ಮ ಪಾಪಗಳ ಕ್ಷಮೆಯೇ ಆ ವಿಮೋಚನೆಯಾಗಿರುತ್ತದೆ. ಕ್ರಿಸ್ತ ಯೇಸುವಿನ ಸರ್ವಶ್ರೇಷ್ಠತೆ 15 ಕ್ರಿಸ್ತ ಯೇಸು ಅದೃಶ್ಯರಾದ ದೇವರ ಸ್ವರೂಪವೂ ಸರ್ವಸೃಷ್ಟಿಗು ಜ್ಯೇಷ್ಠ ಪುತ್ರರೂ ಆಗಿದ್ದಾರೆ. 16 ಏಕೆಂದರೆ ಭೂಪರಲೋಕಗಳಲ್ಲಿರುವ ಕಾಣುವಂತವುಗಳಾಗಲಿ, ಕಾಣದಂತವುಗಳಾಗಲಿ ಸಮಸ್ತವು ಇವರ ಮೂಲಕವೇ ಸೃಷ್ಟಿಸಲಾಯಿತು. ಸಿಂಹಾಸನಗಳಾಗಲಿ, ಪ್ರಭುತ್ವಗಳಾಗಲಿ, ದೊರೆತನಗಳಾಗಲಿ, ಅಧಿಕಾರಗಳಾಗಲಿ ಕ್ರಿಸ್ತನಲ್ಲಿಯೇ ಸೃಷ್ಟಿಗೊಂಡವು. ಸರ್ವವೂ ಕ್ರಿಸ್ತರಿಂದಲೂ ಕ್ರಿಸ್ತರಿಗಾಗಿಯೂ ಸೃಷ್ಟಿಹೊಂದಿತು. 17 ಕ್ರಿಸ್ತ ಯೇಸು ಎಲ್ಲದಕ್ಕೂ ಮೊದಲು ಇದ್ದವರು, ಇವರಲ್ಲಿಯೇ ಸಮಸ್ತವೂ ನೆಲೆಯಾಗಿದೆ. 18 ಕ್ರಿಸ್ತ ಯೇಸು ಸಭೆಯೆಂಬ ದೇಹಕ್ಕೆ ಶಿರಸ್ಸಾಗಿದ್ದಾರೆ. ಎಲ್ಲದರಲ್ಲಿಯೂ ಇವರೇ ಪ್ರಥಮ ಸ್ಥಾನಹೊಂದಿರುವಂತೆ, ಆರಂಭವೂ ಸತ್ತು ಎದ್ದು ಬಂದವರಲ್ಲಿ ಪ್ರಥಮವಾದವರು ಆಗಿದ್ದಾರೆ. ಹೀಗೆ ಇವರು ಎಲ್ಲದರಲ್ಲಿಯೂ ಸರ್ವಶ್ರೇಷ್ಠರಾಗಿದ್ದಾರೆ. 19 ಏಕೆಂದರೆ ದೇವರು ಕ್ರಿಸ್ತ ಯೇಸುವಿನಲ್ಲಿ ಸರ್ವಸಂಪೂರ್ಣತೆಯು ವಾಸವಾಗಿರಲು ಬಯಸಿದರು. 20 ಕ್ರಿಸ್ತ ಯೇಸು ಶಿಲುಬೆಯ ಮೇಲೆ ಸುರಿಸಿದ ರಕ್ತದ ಮೂಲಕವಾಗಿ, ದೇವರು ಸಮಾಧಾನವನ್ನು ಉಂಟುಮಾಡಿ, ಕ್ರಿಸ್ತನ ಮೂಲಕವೇ ಭೂಪರಲೋಕಗಳಲ್ಲಿರುವ ಎಲ್ಲವನ್ನೂ ತಮ್ಮೊಂದಿಗೆ ಸಂಧಾನಪಡಿಸಿಕೊಂಡರು. 21 ಹಿಂದಿನ ಕಾಲದಲ್ಲಿ ನೀವು ನಿಮ್ಮ ದುಷ್ಕೃತ್ಯಗಳ ನಿಮಿತ್ತ ದೇವರಿಂದ ದೂರವಿದ್ದವರೂ ಮನಸ್ಸಿನಲ್ಲಿ ದೇವರ ಶತ್ರುಗಳೂ ಆಗಿದ್ದೀರಿ. 22 ಈಗಲಾದರೋ ದೇವರು ನಿಮ್ಮನ್ನು ಪರಿಶುದ್ಧರನ್ನಾಗಿಯೂ ನಿರ್ದೋಷಿಗಳನ್ನಾಗಿಯೂ ನಿಂದಾರಹಿತರನ್ನಾಗಿಯೂ ತಮ್ಮ ಸನ್ನಿಧಿಯಲ್ಲಿ ನಿಲ್ಲಿಸಿಕೊಳ್ಳುವಂತೆ, ಕ್ರಿಸ್ತನ ಮಾಂಸದೇಹದ ಮರಣದಿಂದ ಈಗ ನಿಮ್ಮನ್ನು ಸಂಧಾನಪಡಿಸಿಕೊಂಡಿದ್ದಾರೆ. 23 ನೀವು ನಿಮ್ಮ ನಂಬಿಕೆಯಲ್ಲಿ ಸ್ಥಿರವಾಗಿ ಮುಂದುವರೆದು ನೆಲೆಗೊಂಡು, ಸುವಾರ್ತೆಯ ನಿರೀಕ್ಷೆಯಿಂದ ತೊಲಗಿ ಹೋಗದಿರಿ. ನೀವು ಕೇಳಿದಂಥ ಮತ್ತು ಆಕಾಶದ ಕೆಳಗಿರುವ ಸರ್ವಸೃಷ್ಟಿಗೆ ಸಾರಲಾದ ಈ ಸುವಾರ್ತೆಗೆ ಪೌಲನೆಂಬ ನಾನು ಸೇವಕನಾದೆನು. ಸಭೆಗಾಗಿ ಪೌಲನ ಸೇವೆ 24 ಈಗ ನಾನು ನಿಮಗೋಸ್ಕರ ಸಹಿಸುತ್ತಿರುವ ಬಾಧೆಗಳಲ್ಲಿ ಆನಂದಿಸುತ್ತೇನೆ. ಕ್ರಿಸ್ತ ಯೇಸುವಿನ ಸಂಕಟಗಳೊಳಗೆ ಇನ್ನೂ ಕೊರತೆಯಾಗಿರುವುದನ್ನು ಅವರ ದೇಹವಾಗಿರುವ ಸಭೆಗಾಗಿ ನನ್ನ ದೇಹದಲ್ಲಿ ತೀರಿಸುತ್ತೇನೆ. 25 ನಿಮಗೋಸ್ಕರವಾಗಿ ನನಗೆ ದೇವರು ಕೊಟ್ಟಿರುವ ಜವಾಬ್ದಾರಿಗೆ ಅನುಸಾರವಾಗಿ, ದೇವರ ವಾಕ್ಯವನ್ನು ಸಂಪೂರ್ಣವಾಗಿ ಸಾರಲು ನಾನು ಸಭೆಗೆ ಸೇವಕನಾದೆನು. 26 ಆ ರಹಸ್ಯವು ಹಿಂದಿನ ಯುಗಗಳಿಂದಲೂ ತಲತಲಾಂತರಗಳಿಂದಲೂ ಮರೆಯಾಗಿತ್ತು. ಆದರೂ ಈಗ ಅದು ಕರ್ತ ಯೇಸುವಿನ ಜನರಿಗೆ ಪ್ರಕಟವಾಗಿದೆ. 27 ಯೆಹೂದ್ಯರಲ್ಲದವರಲ್ಲಿ ಆ ರಹಸ್ಯದ ಮಹಿಮೆಯ ಐಶ್ವರ್ಯವು ಎಷ್ಟೆಂಬುದನ್ನು ದೇವರು ತಮ್ಮ ಜನರಿಗೆ ಪ್ರಕಟಿಸುವುದಕ್ಕೆ ಮನಸ್ಸು ಮಾಡಿದ್ದಾರೆ. ಆ ರಹಸ್ಯವು ಏನೆಂದರೆ, ನಿಮ್ಮಲ್ಲಿರುವ ಕ್ರಿಸ್ತ ಯೇಸು ಮಹಿಮೆಯ ನಿರೀಕ್ಷೆಯಾಗಿದ್ದಾರೆ ಎಂಬುದೇ. 28 ಈ ಕ್ರಿಸ್ತ ಯೇಸುವನ್ನೇ ನಾವು ಸಾರುವವರಾಗಿದ್ದೇವೆ; ಪ್ರತಿಯೊಬ್ಬರೂ ಕ್ರಿಸ್ತ ಯೇಸುವಿನಲ್ಲಿ ಪರಿಪಕ್ವತೆಯುಳ್ಳವರಾಗಿ ಸಮರ್ಪಿಸುವಂತೆ, ಪ್ರತಿಯೊಬ್ಬರನ್ನೂ ಎಚ್ಚರಿಸಿ ಎಲ್ಲಾ ಜ್ಞಾನದಲ್ಲಿ ಪ್ರತಿಯೊಬ್ಬರಿಗೂ ಬೋಧಿಸುತ್ತಿದ್ದೇವೆ. 29 ನನ್ನಲ್ಲಿ ಬಲದಿಂದ ಕಾರ್ಯ ಮಾಡುವ ಕ್ರಿಸ್ತನ ಶಕ್ತಿಗೆ ಅನುಸಾರವಾಗಿ, ನಾನೂ ಸಹ ಪ್ರಯಾಸ ಪಡುತ್ತಾ ಈ ಗುರಿಗಾಗಿ ಹೋರಾಡುತ್ತೇನೆ.
ಒಟ್ಟು 4 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 1 / 4
1 2 3 4
×

Alert

×

Kannada Letters Keypad References