ಪವಿತ್ರ ಬೈಬಲ್

ಓಪನ್ ಸಮಕಾಲೀನ ಆವೃತ್ತಿ (OCV)
ಧರ್ಮೋಪದೇಶಕಾಂಡ
1. {#1ಯೆಹೋವ ದೇವರನ್ನು ಪ್ರೀತಿಸಿ, ಆತನಿಗೆ ವಿಧೇಯರಾಗಿರಿ } [PS]ಹೀಗಿರುವುದರಿಂದ ನಿಮ್ಮ ಯೆಹೋವ ದೇವರನ್ನು ಪ್ರೀತಿಸಿ, ಅವರ ಅಪೇಕ್ಷೆ, ಅವರ ತೀರ್ಪು, ಅವರ ನಿಯಮ ಹಾಗು ಅವರ ಆಜ್ಞೆಗಳನ್ನು ಯಾವಾಗಲೂ ಕೈಗೊಳ್ಳಬೇಕು.
2. ನಿಮಗೆ ಈ ಹೊತ್ತು ತಿಳಿಯಬೇಕಾದದ್ದೇನೆಂದರೆ, ನಿಮ್ಮ ದೇವರಾದ ಯೆಹೋವ ದೇವರ ಶಿಕ್ಷಣವನ್ನು ಅನುಭವಿಸಿದ್ದು ನಿಮ್ಮ ಮಕ್ಕಳಲ್ಲ: ದೇವರ ಮಹತ್ವವನ್ನೂ, ಅವರ ಬಲವಾದ ಕೈಯನ್ನೂ, ಅವರು ಚಾಚಿದ ಭುಜವನ್ನೂ;
3. ಅಂದರೆ, ದೇವರು ಈಜಿಪ್ಟ್ ಮಧ್ಯದಲ್ಲಿ ಈಜಿಪ್ಟಿನ ಅರಸನಾದ ಫರೋಹನಿಗೆ ಮತ್ತು ಅವನ ಎಲ್ಲಾ ದೇಶಕ್ಕೆ ಮಾಡಿದ ಅವರ ಸೂಚಕಕಾರ್ಯಗಳನ್ನೂ ನೀವೇ ಅನುಭವಿಸಿ ನೋಡಿದ್ದೀರಿ;
4. ದೇವರು ಈಜಿಪ್ಟಿನ ಸೈನ್ಯಕ್ಕೆ, ಅವರ ಕುದುರೆಗಳಿಗೆ ಮತ್ತು ರಥಗಳಿಗೆ ಮಾಡಿದ್ದನ್ನು ಅಂದರೆ, ಅವರು ನಿಮ್ಮನ್ನು ಹಿಂದಟ್ಟುವಾಗ ಕೆಂಪುಸಮುದ್ರದ ನೀರನ್ನು ಅವರ ಮೇಲೆ ಬರಮಾಡಿ, ಸಂಪೂರ್ಣವಾಗಿ ಅವರನ್ನು ನಾಶಮಾಡಿದ್ದನ್ನು ಸಹ ನೀವು ನೋಡಿದ್ದೀರಿ;
5. ನೀವು ಈ ಸ್ಥಳಕ್ಕೆ ಸೇರುವ ತನಕ ಯೆಹೋವ ದೇವರು ಮರುಭೂಮಿಯಲ್ಲಿ ನಿಮಗೆ ಮಾಡಿದ ಉಪಕಾರಗಳನ್ನೂ;
6. ರೂಬೇನನ ಮಗ ಎಲೀಯಾಬನ ಪುತ್ರರಾಗಿರುವ ದಾತಾನ್, ಅಬೀರಾಮರು ದಂಗೆಯೆದ್ದಾಗ, ಭೂಮಿಯು ಬಾಯಿತೆರೆದು ಅವರ ಮನೆಗಳನ್ನೂ, ಅವರಿಗಿದ್ದ ಎಲ್ಲಾ ಆಸ್ತಿಯನ್ನೂ, ಮನೆಯವರನ್ನೂ ಡೇರೆಗಳನ್ನೂ ಅವರಿಗೆ ಸೇರಿದ ಎಲ್ಲಾ ಪಶುಪ್ರಾಣಿಗಳನ್ನೂ, ಸಮಸ್ತ ಇಸ್ರಾಯೇಲರ ಮಧ್ಯದಲ್ಲಿ ಹೇಗೆ ನುಂಗುವಂತೆ ದೇವರು ಮಾಡಿದರೆಂಬುದನ್ನೂ ಜ್ಞಾಪಕಮಾಡಿಕೊಳ್ಳಿರಿ.
7. ಯೆಹೋವ ದೇವರು ಮಾಡಿದ ಮಹತ್ಕಾರ್ಯಗಳನ್ನೆಲ್ಲಾ ನಿಮ್ಮ ಕಣ್ಣುಗಳು ನೋಡಿದವು. [PE]
8. [PS]ಹೀಗಿರುವುದರಿಂದ ಈಗ ನಾನು ನಿಮಗೆ ಬೋಧಿಸುವ ಈ ಆಜ್ಞೆಯನ್ನೆಲ್ಲಾ ಕೈಗೊಳ್ಳಬೇಕು. ಆಗ ನೀವು ಬಲವುಳ್ಳವರಾಗಿ, ಈ ನದಿದಾಟಿ ಆಚೆಯಿರುವ ದೇಶವನ್ನು ಪ್ರವೇಶಿಸಿ, ಅದನ್ನು ಸ್ವಾಧೀನಮಾಡಿಕೊಳ್ಳುವಿರಿ.
9. ಯೆಹೋವ ದೇವರು ನಿಮ್ಮ ಪಿತೃಗಳಿಗೂ, ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣ ಮಾಡಿದ ಭೂಮಿಯಾಗಿರುವ ಆ ಹಾಲೂ ಜೇನೂ ಹರಿಯುವ ದೇಶದಲ್ಲಿ ನೀವು ಬಹುಕಾಲ ಬಾಳುವಿರಿ.
10. ಏಕೆಂದರೆ ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶವು, ನೀವು ಹೊರಟ ಈಜಿಪ್ಟ್ ದೇಶದ ಹಾಗಲ್ಲ. ಅಲ್ಲಿ ನೀವು ಬೀಜವನ್ನು ಬಿತ್ತಿ, ಪಲ್ಯಗಳ ತೋಟವನ್ನು ಸಾಗುವಳಿ ಮಾಡುವ ರೀತಿಯಲ್ಲಿ ಏತವನ್ನು ತುಳಿದು, ನೀರು ಕಟ್ಟುತ್ತಿದ್ದಿರಿ.
11. ಆದರೆ ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶವು ಬೆಟ್ಟಗಳೂ, ತಗ್ಗುಗಳೂ ಉಳ್ಳ ದೇಶವೇ; ಆಕಾಶದ ಮಳೆಯಿಂದ ಅದಕ್ಕೆ ನೀರು ದೊರೆಯುವುದು.
12. ಅದು ನಿಮ್ಮ ದೇವರಾದ ಯೆಹೋವ ದೇವರು ಪರಾಮರಿಸುವ ದೇಶವೇ; ವರ್ಷದ ಆರಂಭದಿಂದ ವರ್ಷದ ಅಂತ್ಯದವರೆಗೂ ಯಾವಾಗಲೂ ನಿಮ್ಮ ದೇವರಾದ ಯೆಹೋವ ದೇವರ ಕಣ್ಣು ಅದರ ಮೇಲಿರುವುದು. [PE]
13. [PS]ಹಾಗಾದರೆ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ನನ್ನ ಆಜ್ಞೆಗಳನ್ನು ನೀವು ಲಕ್ಯಕೊಟ್ಟು ಕೇಳಿ, ನಿಮ್ಮ ದೇವರಾದ ಯೆಹೋವ ದೇವರನ್ನು ನಿಮ್ಮ ಪೂರ್ಣಹೃದಯದಿಂದಲೂ, ನಿಮ್ಮ ಪೂರ್ಣಪ್ರಾಣದಿಂದಲೂ ಪ್ರೀತಿಸಿ ಅವರಿಗೆ ಸೇವೆ ಮಾಡಿದರೆ,
14. ನೀವು ನಿಮ್ಮ ಧಾನ್ಯವನ್ನೂ, ಹೊಸ ದ್ರಾಕ್ಷಾರಸವನ್ನೂ, ಎಣ್ಣೆಯನ್ನೂ ಕೂಡಿಸುವಂತೆ ದೇವರು ನಿಮ್ಮ ಭೂಮಿಗೆ ಅದರ ತಕ್ಕ ಕಾಲದಲ್ಲಿ ಮಳೆಯನ್ನೂ, ಮುಂಗಾರು ಹಿಂಗಾರುಗಳನ್ನೂ ಕೊಡುವರು.
15. ನಿಮ್ಮ ದನಕರುಗಳಿಗೆ ಬೇಕಾದಷ್ಟು ಹುಲ್ಲನ್ನು ನಿಮ್ಮ ಹೊಲದಲ್ಲಿ ಕೊಡುವರು. ನೀವು ಆಹಾರದಿಂದ ತೃಪ್ತರಾಗುವಿರಿ. [PE]
16. [PS]ನಿಮ್ಮ ಹೃದಯವು ಮರಳುಗೊಂಡು ನೀವು ದಾರಿತಪ್ಪಿ ಬೇರೆ ದೇವರುಗಳನ್ನು ಆರಾಧಿಸಿ ಅಡ್ಡಬೀಳದಂತೆ ಎಚ್ಚರವಾಗಿರಿ.
17. ಇಲ್ಲದಿದ್ದರೆ, ಯೆಹೋವ ದೇವರ ಕೋಪವು ನಿಮ್ಮ ಮೇಲೆ ಉರಿಯಲು ಅವರು ಮಳೆಯಾಗದಂತೆ ಮಾಡುವರು. ಭೂಮಿಯು ತನ್ನ ಬೆಳೆಯನ್ನು ಕೊಡದಂತೆ ಆಕಾಶವನ್ನು ಮುಚ್ಚಿಬಿಡುವರು. ಯೆಹೋವ ದೇವರು ನಿಮಗೆ ಕೊಡುವ ಆ ಒಳ್ಳೆಯ ದೇಶದಲ್ಲಿ ನೀವು ಬೇಗ ನಾಶವಾಗಿಹೋಗುವಿರಿ, ಎಚ್ಚರಿಕೆ.
18. ಈ ನನ್ನ ವಾಕ್ಯಗಳನ್ನು ನಿಮ್ಮ ಹೃದಯದಲ್ಲಿಯೂ, ಪ್ರಾಣಗಳಲ್ಲಿಯೂ ಇಟ್ಟುಕೊಳ್ಳಿರಿ. ಅವುಗಳನ್ನು ಗುರುತಾಗಿ ನಿಮ್ಮ ಕೈಗಳಿಗೆ ಕಟ್ಟಿಕೊಳ್ಳಿರಿ, ಅವು ನಿಮ್ಮ ಹಣೆಗೆ ಕಟ್ಟಿರಲಿ.
19. ನೀವು ನಿಮ್ಮ ಮನೆಯಲ್ಲಿ ಕೂತಿರುವಾಗಲೂ ಮಾರ್ಗದಲ್ಲಿ ನಡೆಯುವಾಗಲೂ ಮಲಗುವಾಗಲೂ ಏಳುವಾಗಲೂ ಅವುಗಳ ವಿಷಯ ಮಾತನಾಡಿ, ಅವುಗಳನ್ನು ನಿಮ್ಮ ಮಕ್ಕಳಿಗೆ ಕಲಿಸಬೇಕು.
20. ಅವುಗಳನ್ನು ನಿಮ್ಮ ಮನೆಯ ನಿಲುವು ಪಟ್ಟಿಗಳ ಮೇಲೆಯೂ ನಿಮ್ಮ ಬಾಗಿಲುಗಳ ಮೇಲೆಯೂ ಬರೆಯಬೇಕು.
21. ಹೀಗೆ ಮಾಡಿದರೆ ನಿಮ್ಮ ದಿನಗಳೂ, ನಿಮ್ಮ ಮಕ್ಕಳ ದಿನಗಳೂ ಭೂಮಿಯಲ್ಲಿ ಆಕಾಶದ ದಿನಗಳು ನೆಲೆಯಾಗಿರುವ ಪ್ರಕಾರ, ಯೆಹೋವ ದೇವರು ನಿಮ್ಮ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣ ಮಾಡಿದ ದೇಶದಲ್ಲಿ ನೆಲೆಯಾಗಿರುವಿರಿ. [PE]
22. [PS]ನಾನು ನಿಮಗೆ ಆಜ್ಞಾಪಿಸುವ ಈ ಆಜ್ಞೆಯನ್ನೆಲ್ಲಾ ನೀವು ಎಚ್ಚರಿಕೆಯಿಂದ ಕಾಪಾಡಿ, ನಿಮ್ಮ ದೇವರಾದ ಯೆಹೋವ ದೇವರನ್ನು ಪ್ರೀತಿಸಿ, ಅವರ ಎಲ್ಲಾ ಮಾರ್ಗಗಳಲ್ಲಿ ನಡೆದು, ಅವರನ್ನು ಅಂಟಿಕೊಂಡರೆ,
23. ಯೆಹೋವ ದೇವರು ಆ ಜನಾಂಗಗಳನ್ನೆಲ್ಲಾ ನಿಮ್ಮ ಮುಂದೆ ಹೊರಡಿಸುವರು. ನೀವು ನಿಮಗಿಂತ ಬಲವುಳ್ಳ ದೊಡ್ಡ ಜನಾಂಗಗಳನ್ನು ಸ್ವಾಧೀನಮಾಡಿಕೊಳ್ಳುವಿರಿ.
24. ನೀವು ಹೆಜ್ಜೆ ಇಡುವ ಸ್ಥಳವೆಲ್ಲಾ ನಿಮ್ಮದಾಗುವುದು. ಮರುಭೂಮಿಯಿಂದ ಲೆಬನೋನಿನವರೆಗೂ, ಯೂಫ್ರೇಟೀಸ್ ನದಿಯಿಂದ ಪಶ್ಚಿಮ ಸಮುದ್ರದ ಅಂತ್ಯದವರೆಗೂ ನಿಮ್ಮ ಮೇರೆಯಾಗಿರುವುದು.
25. ಯಾರೂ ನಿಮ್ಮ ಮುಂದೆ ನಿಲ್ಲಲಾರರು. ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಹೇಳಿದ ಹಾಗೆ ನಿಮ್ಮ ಹೆದರಿಕೆಯನ್ನೂ, ದಿಗಿಲನ್ನೂ, ನೀವು ಸಂಚಾರ ಮಾಡುವ ಸಮಸ್ತ ದೇಶದ ಮೇಲೆ ಇಡುವರು. [PE]
26. [PS]ನಾನು ಈ ಹೊತ್ತು ಆಶೀರ್ವಾದವನ್ನೂ, ಶಾಪವನ್ನೂ ನಿಮ್ಮ ಮುಂದೆ ಇಡುತ್ತೇನೆ.
27. ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವಂಥ ನಿಮ್ಮ ದೇವರಾದ ಯೆಹೋವ ದೇವರ ಆಜ್ಞೆಗಳಿಗೆ ನೀವು ವಿಧೇಯರಾದರೆ, ಆಶೀರ್ವಾದವನ್ನು ಪಡೆದುಕೊಳ್ಳುವಿರಿ.
28. ನಿಮ್ಮ ದೇವರಾದ ಯೆಹೋವ ದೇವರ ಆಜ್ಞೆಗಳಿಗೆ ವಿಧೇಯರಾಗದೆ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಮಾರ್ಗಕ್ಕೆ ಓರೆಯಾದರೆ, ನೀವು ತಿಳಿಯದ ಬೇರೆ ದೇವರುಗಳನ್ನು ಹಿಂಬಾಲಿಸಿದರೆ, ನಿಮಗೆ ಶಾಪವು ತಗಲುವುದು.
29. ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಪ್ರವೇಶಿಸುವ ದೇಶದಲ್ಲಿ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಸೇರಿಸಿದಾಗ, ನೀವು ಗೆರಿಜೀಮ್ ಬೆಟ್ಟದ ಮೇಲೆ ಆಶೀರ್ವಾದವನ್ನೂ ಏಬಾಲ್ ಬೆಟ್ಟದ ಮೇಲೆ ಶಾಪವನ್ನೂ ಪ್ರಕಟಿಸಬೇಕು.
30. ಇವು ಯೊರ್ದನ್ ನದಿಯ ಆಚೆ ಸೂರ್ಯನು ಅಸ್ತಮಿಸುವ ದಿಕ್ಕಿನಲ್ಲಿ ಅರಾಬಾ ಪ್ರದೇಶದಲ್ಲಿ ಗಿಲ್ಗಾಲಿಗೆ ಎದುರಾಗಿರುವ ಬಯಲಿನೊಳಗೆ ಮೋರೆ ಎಂಬ ಮಹಾವೃಕ್ಷದ ಸಮೀಪ ವಾಸಮಾಡುವ ಕಾನಾನ್ಯರ ದೇಶದಲ್ಲಿ ಇರುತ್ತವೆ.
31. ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ದೇಶವನ್ನು ಸೇರಿ, ಸ್ವಾಧೀನಮಾಡಿಕೊಳ್ಳುವುದಕ್ಕೆ ನೀವು ಯೊರ್ದನ್ ನದಿಯನ್ನು ದಾಟಿ ಹೋಗಬೇಕು. ಆಗ ಅದನ್ನು ನೀವು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಮಾಡುವಾಗ,
32. ನಾನು ಈ ಹೊತ್ತು ನಿಮ್ಮ ಮುಂದೆ ಇಡುವ ಎಲ್ಲಾ ಆಜ್ಞಾವಿಧಿಗಳನ್ನು ಕಾಪಾಡಿ ನಡೆದುಕೊಳ್ಳಬೇಕು. [PE]
ಒಟ್ಟು 34 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 11 / 34
ಯೆಹೋವ ದೇವರನ್ನು ಪ್ರೀತಿಸಿ, ಆತನಿಗೆ ವಿಧೇಯರಾಗಿರಿ 1 ಹೀಗಿರುವುದರಿಂದ ನಿಮ್ಮ ಯೆಹೋವ ದೇವರನ್ನು ಪ್ರೀತಿಸಿ, ಅವರ ಅಪೇಕ್ಷೆ, ಅವರ ತೀರ್ಪು, ಅವರ ನಿಯಮ ಹಾಗು ಅವರ ಆಜ್ಞೆಗಳನ್ನು ಯಾವಾಗಲೂ ಕೈಗೊಳ್ಳಬೇಕು. 2 ನಿಮಗೆ ಈ ಹೊತ್ತು ತಿಳಿಯಬೇಕಾದದ್ದೇನೆಂದರೆ, ನಿಮ್ಮ ದೇವರಾದ ಯೆಹೋವ ದೇವರ ಶಿಕ್ಷಣವನ್ನು ಅನುಭವಿಸಿದ್ದು ನಿಮ್ಮ ಮಕ್ಕಳಲ್ಲ: ದೇವರ ಮಹತ್ವವನ್ನೂ, ಅವರ ಬಲವಾದ ಕೈಯನ್ನೂ, ಅವರು ಚಾಚಿದ ಭುಜವನ್ನೂ; 3 ಅಂದರೆ, ದೇವರು ಈಜಿಪ್ಟ್ ಮಧ್ಯದಲ್ಲಿ ಈಜಿಪ್ಟಿನ ಅರಸನಾದ ಫರೋಹನಿಗೆ ಮತ್ತು ಅವನ ಎಲ್ಲಾ ದೇಶಕ್ಕೆ ಮಾಡಿದ ಅವರ ಸೂಚಕಕಾರ್ಯಗಳನ್ನೂ ನೀವೇ ಅನುಭವಿಸಿ ನೋಡಿದ್ದೀರಿ; 4 ದೇವರು ಈಜಿಪ್ಟಿನ ಸೈನ್ಯಕ್ಕೆ, ಅವರ ಕುದುರೆಗಳಿಗೆ ಮತ್ತು ರಥಗಳಿಗೆ ಮಾಡಿದ್ದನ್ನು ಅಂದರೆ, ಅವರು ನಿಮ್ಮನ್ನು ಹಿಂದಟ್ಟುವಾಗ ಕೆಂಪುಸಮುದ್ರದ ನೀರನ್ನು ಅವರ ಮೇಲೆ ಬರಮಾಡಿ, ಸಂಪೂರ್ಣವಾಗಿ ಅವರನ್ನು ನಾಶಮಾಡಿದ್ದನ್ನು ಸಹ ನೀವು ನೋಡಿದ್ದೀರಿ; 5 ನೀವು ಈ ಸ್ಥಳಕ್ಕೆ ಸೇರುವ ತನಕ ಯೆಹೋವ ದೇವರು ಮರುಭೂಮಿಯಲ್ಲಿ ನಿಮಗೆ ಮಾಡಿದ ಉಪಕಾರಗಳನ್ನೂ; 6 ರೂಬೇನನ ಮಗ ಎಲೀಯಾಬನ ಪುತ್ರರಾಗಿರುವ ದಾತಾನ್, ಅಬೀರಾಮರು ದಂಗೆಯೆದ್ದಾಗ, ಭೂಮಿಯು ಬಾಯಿತೆರೆದು ಅವರ ಮನೆಗಳನ್ನೂ, ಅವರಿಗಿದ್ದ ಎಲ್ಲಾ ಆಸ್ತಿಯನ್ನೂ, ಮನೆಯವರನ್ನೂ ಡೇರೆಗಳನ್ನೂ ಅವರಿಗೆ ಸೇರಿದ ಎಲ್ಲಾ ಪಶುಪ್ರಾಣಿಗಳನ್ನೂ, ಸಮಸ್ತ ಇಸ್ರಾಯೇಲರ ಮಧ್ಯದಲ್ಲಿ ಹೇಗೆ ನುಂಗುವಂತೆ ದೇವರು ಮಾಡಿದರೆಂಬುದನ್ನೂ ಜ್ಞಾಪಕಮಾಡಿಕೊಳ್ಳಿರಿ. 7 ಯೆಹೋವ ದೇವರು ಮಾಡಿದ ಮಹತ್ಕಾರ್ಯಗಳನ್ನೆಲ್ಲಾ ನಿಮ್ಮ ಕಣ್ಣುಗಳು ನೋಡಿದವು. 8 ಹೀಗಿರುವುದರಿಂದ ಈಗ ನಾನು ನಿಮಗೆ ಬೋಧಿಸುವ ಈ ಆಜ್ಞೆಯನ್ನೆಲ್ಲಾ ಕೈಗೊಳ್ಳಬೇಕು. ಆಗ ನೀವು ಬಲವುಳ್ಳವರಾಗಿ, ಈ ನದಿದಾಟಿ ಆಚೆಯಿರುವ ದೇಶವನ್ನು ಪ್ರವೇಶಿಸಿ, ಅದನ್ನು ಸ್ವಾಧೀನಮಾಡಿಕೊಳ್ಳುವಿರಿ. 9 ಯೆಹೋವ ದೇವರು ನಿಮ್ಮ ಪಿತೃಗಳಿಗೂ, ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣ ಮಾಡಿದ ಭೂಮಿಯಾಗಿರುವ ಆ ಹಾಲೂ ಜೇನೂ ಹರಿಯುವ ದೇಶದಲ್ಲಿ ನೀವು ಬಹುಕಾಲ ಬಾಳುವಿರಿ. 10 ಏಕೆಂದರೆ ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶವು, ನೀವು ಹೊರಟ ಈಜಿಪ್ಟ್ ದೇಶದ ಹಾಗಲ್ಲ. ಅಲ್ಲಿ ನೀವು ಬೀಜವನ್ನು ಬಿತ್ತಿ, ಪಲ್ಯಗಳ ತೋಟವನ್ನು ಸಾಗುವಳಿ ಮಾಡುವ ರೀತಿಯಲ್ಲಿ ಏತವನ್ನು ತುಳಿದು, ನೀರು ಕಟ್ಟುತ್ತಿದ್ದಿರಿ. 11 ಆದರೆ ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶವು ಬೆಟ್ಟಗಳೂ, ತಗ್ಗುಗಳೂ ಉಳ್ಳ ದೇಶವೇ; ಆಕಾಶದ ಮಳೆಯಿಂದ ಅದಕ್ಕೆ ನೀರು ದೊರೆಯುವುದು. 12 ಅದು ನಿಮ್ಮ ದೇವರಾದ ಯೆಹೋವ ದೇವರು ಪರಾಮರಿಸುವ ದೇಶವೇ; ವರ್ಷದ ಆರಂಭದಿಂದ ವರ್ಷದ ಅಂತ್ಯದವರೆಗೂ ಯಾವಾಗಲೂ ನಿಮ್ಮ ದೇವರಾದ ಯೆಹೋವ ದೇವರ ಕಣ್ಣು ಅದರ ಮೇಲಿರುವುದು. 13 ಹಾಗಾದರೆ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ನನ್ನ ಆಜ್ಞೆಗಳನ್ನು ನೀವು ಲಕ್ಯಕೊಟ್ಟು ಕೇಳಿ, ನಿಮ್ಮ ದೇವರಾದ ಯೆಹೋವ ದೇವರನ್ನು ನಿಮ್ಮ ಪೂರ್ಣಹೃದಯದಿಂದಲೂ, ನಿಮ್ಮ ಪೂರ್ಣಪ್ರಾಣದಿಂದಲೂ ಪ್ರೀತಿಸಿ ಅವರಿಗೆ ಸೇವೆ ಮಾಡಿದರೆ, 14 ನೀವು ನಿಮ್ಮ ಧಾನ್ಯವನ್ನೂ, ಹೊಸ ದ್ರಾಕ್ಷಾರಸವನ್ನೂ, ಎಣ್ಣೆಯನ್ನೂ ಕೂಡಿಸುವಂತೆ ದೇವರು ನಿಮ್ಮ ಭೂಮಿಗೆ ಅದರ ತಕ್ಕ ಕಾಲದಲ್ಲಿ ಮಳೆಯನ್ನೂ, ಮುಂಗಾರು ಹಿಂಗಾರುಗಳನ್ನೂ ಕೊಡುವರು. 15 ನಿಮ್ಮ ದನಕರುಗಳಿಗೆ ಬೇಕಾದಷ್ಟು ಹುಲ್ಲನ್ನು ನಿಮ್ಮ ಹೊಲದಲ್ಲಿ ಕೊಡುವರು. ನೀವು ಆಹಾರದಿಂದ ತೃಪ್ತರಾಗುವಿರಿ. 16 ನಿಮ್ಮ ಹೃದಯವು ಮರಳುಗೊಂಡು ನೀವು ದಾರಿತಪ್ಪಿ ಬೇರೆ ದೇವರುಗಳನ್ನು ಆರಾಧಿಸಿ ಅಡ್ಡಬೀಳದಂತೆ ಎಚ್ಚರವಾಗಿರಿ. 17 ಇಲ್ಲದಿದ್ದರೆ, ಯೆಹೋವ ದೇವರ ಕೋಪವು ನಿಮ್ಮ ಮೇಲೆ ಉರಿಯಲು ಅವರು ಮಳೆಯಾಗದಂತೆ ಮಾಡುವರು. ಭೂಮಿಯು ತನ್ನ ಬೆಳೆಯನ್ನು ಕೊಡದಂತೆ ಆಕಾಶವನ್ನು ಮುಚ್ಚಿಬಿಡುವರು. ಯೆಹೋವ ದೇವರು ನಿಮಗೆ ಕೊಡುವ ಆ ಒಳ್ಳೆಯ ದೇಶದಲ್ಲಿ ನೀವು ಬೇಗ ನಾಶವಾಗಿಹೋಗುವಿರಿ, ಎಚ್ಚರಿಕೆ. 18 ಈ ನನ್ನ ವಾಕ್ಯಗಳನ್ನು ನಿಮ್ಮ ಹೃದಯದಲ್ಲಿಯೂ, ಪ್ರಾಣಗಳಲ್ಲಿಯೂ ಇಟ್ಟುಕೊಳ್ಳಿರಿ. ಅವುಗಳನ್ನು ಗುರುತಾಗಿ ನಿಮ್ಮ ಕೈಗಳಿಗೆ ಕಟ್ಟಿಕೊಳ್ಳಿರಿ, ಅವು ನಿಮ್ಮ ಹಣೆಗೆ ಕಟ್ಟಿರಲಿ. 19 ನೀವು ನಿಮ್ಮ ಮನೆಯಲ್ಲಿ ಕೂತಿರುವಾಗಲೂ ಮಾರ್ಗದಲ್ಲಿ ನಡೆಯುವಾಗಲೂ ಮಲಗುವಾಗಲೂ ಏಳುವಾಗಲೂ ಅವುಗಳ ವಿಷಯ ಮಾತನಾಡಿ, ಅವುಗಳನ್ನು ನಿಮ್ಮ ಮಕ್ಕಳಿಗೆ ಕಲಿಸಬೇಕು. 20 ಅವುಗಳನ್ನು ನಿಮ್ಮ ಮನೆಯ ನಿಲುವು ಪಟ್ಟಿಗಳ ಮೇಲೆಯೂ ನಿಮ್ಮ ಬಾಗಿಲುಗಳ ಮೇಲೆಯೂ ಬರೆಯಬೇಕು. 21 ಹೀಗೆ ಮಾಡಿದರೆ ನಿಮ್ಮ ದಿನಗಳೂ, ನಿಮ್ಮ ಮಕ್ಕಳ ದಿನಗಳೂ ಭೂಮಿಯಲ್ಲಿ ಆಕಾಶದ ದಿನಗಳು ನೆಲೆಯಾಗಿರುವ ಪ್ರಕಾರ, ಯೆಹೋವ ದೇವರು ನಿಮ್ಮ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣ ಮಾಡಿದ ದೇಶದಲ್ಲಿ ನೆಲೆಯಾಗಿರುವಿರಿ. 22 ನಾನು ನಿಮಗೆ ಆಜ್ಞಾಪಿಸುವ ಈ ಆಜ್ಞೆಯನ್ನೆಲ್ಲಾ ನೀವು ಎಚ್ಚರಿಕೆಯಿಂದ ಕಾಪಾಡಿ, ನಿಮ್ಮ ದೇವರಾದ ಯೆಹೋವ ದೇವರನ್ನು ಪ್ರೀತಿಸಿ, ಅವರ ಎಲ್ಲಾ ಮಾರ್ಗಗಳಲ್ಲಿ ನಡೆದು, ಅವರನ್ನು ಅಂಟಿಕೊಂಡರೆ, 23 ಯೆಹೋವ ದೇವರು ಆ ಜನಾಂಗಗಳನ್ನೆಲ್ಲಾ ನಿಮ್ಮ ಮುಂದೆ ಹೊರಡಿಸುವರು. ನೀವು ನಿಮಗಿಂತ ಬಲವುಳ್ಳ ದೊಡ್ಡ ಜನಾಂಗಗಳನ್ನು ಸ್ವಾಧೀನಮಾಡಿಕೊಳ್ಳುವಿರಿ. 24 ನೀವು ಹೆಜ್ಜೆ ಇಡುವ ಸ್ಥಳವೆಲ್ಲಾ ನಿಮ್ಮದಾಗುವುದು. ಮರುಭೂಮಿಯಿಂದ ಲೆಬನೋನಿನವರೆಗೂ, ಯೂಫ್ರೇಟೀಸ್ ನದಿಯಿಂದ ಪಶ್ಚಿಮ ಸಮುದ್ರದ ಅಂತ್ಯದವರೆಗೂ ನಿಮ್ಮ ಮೇರೆಯಾಗಿರುವುದು. 25 ಯಾರೂ ನಿಮ್ಮ ಮುಂದೆ ನಿಲ್ಲಲಾರರು. ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಹೇಳಿದ ಹಾಗೆ ನಿಮ್ಮ ಹೆದರಿಕೆಯನ್ನೂ, ದಿಗಿಲನ್ನೂ, ನೀವು ಸಂಚಾರ ಮಾಡುವ ಸಮಸ್ತ ದೇಶದ ಮೇಲೆ ಇಡುವರು. 26 ನಾನು ಈ ಹೊತ್ತು ಆಶೀರ್ವಾದವನ್ನೂ, ಶಾಪವನ್ನೂ ನಿಮ್ಮ ಮುಂದೆ ಇಡುತ್ತೇನೆ. 27 ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವಂಥ ನಿಮ್ಮ ದೇವರಾದ ಯೆಹೋವ ದೇವರ ಆಜ್ಞೆಗಳಿಗೆ ನೀವು ವಿಧೇಯರಾದರೆ, ಆಶೀರ್ವಾದವನ್ನು ಪಡೆದುಕೊಳ್ಳುವಿರಿ. 28 ನಿಮ್ಮ ದೇವರಾದ ಯೆಹೋವ ದೇವರ ಆಜ್ಞೆಗಳಿಗೆ ವಿಧೇಯರಾಗದೆ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಮಾರ್ಗಕ್ಕೆ ಓರೆಯಾದರೆ, ನೀವು ತಿಳಿಯದ ಬೇರೆ ದೇವರುಗಳನ್ನು ಹಿಂಬಾಲಿಸಿದರೆ, ನಿಮಗೆ ಶಾಪವು ತಗಲುವುದು. 29 ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಪ್ರವೇಶಿಸುವ ದೇಶದಲ್ಲಿ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಸೇರಿಸಿದಾಗ, ನೀವು ಗೆರಿಜೀಮ್ ಬೆಟ್ಟದ ಮೇಲೆ ಆಶೀರ್ವಾದವನ್ನೂ ಏಬಾಲ್ ಬೆಟ್ಟದ ಮೇಲೆ ಶಾಪವನ್ನೂ ಪ್ರಕಟಿಸಬೇಕು. 30 ಇವು ಯೊರ್ದನ್ ನದಿಯ ಆಚೆ ಸೂರ್ಯನು ಅಸ್ತಮಿಸುವ ದಿಕ್ಕಿನಲ್ಲಿ ಅರಾಬಾ ಪ್ರದೇಶದಲ್ಲಿ ಗಿಲ್ಗಾಲಿಗೆ ಎದುರಾಗಿರುವ ಬಯಲಿನೊಳಗೆ ಮೋರೆ ಎಂಬ ಮಹಾವೃಕ್ಷದ ಸಮೀಪ ವಾಸಮಾಡುವ ಕಾನಾನ್ಯರ ದೇಶದಲ್ಲಿ ಇರುತ್ತವೆ. 31 ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ದೇಶವನ್ನು ಸೇರಿ, ಸ್ವಾಧೀನಮಾಡಿಕೊಳ್ಳುವುದಕ್ಕೆ ನೀವು ಯೊರ್ದನ್ ನದಿಯನ್ನು ದಾಟಿ ಹೋಗಬೇಕು. ಆಗ ಅದನ್ನು ನೀವು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಮಾಡುವಾಗ, 32 ನಾನು ಈ ಹೊತ್ತು ನಿಮ್ಮ ಮುಂದೆ ಇಡುವ ಎಲ್ಲಾ ಆಜ್ಞಾವಿಧಿಗಳನ್ನು ಕಾಪಾಡಿ ನಡೆದುಕೊಳ್ಳಬೇಕು.
ಒಟ್ಟು 34 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 11 / 34
×

Alert

×

Kannada Letters Keypad References