ಪವಿತ್ರ ಬೈಬಲ್

ಓಪನ್ ಸಮಕಾಲೀನ ಆವೃತ್ತಿ (OCV)
ಧರ್ಮೋಪದೇಶಕಾಂಡ
1. {#1ಶುದ್ಧ ಮತ್ತು ಅಶುದ್ಧವಾದ ಆಹಾರ } [PS]ನೀವು ನಿಮ್ಮ ದೇವರಾದ ಯೆಹೋವ ದೇವರ ಮಕ್ಕಳು. ನೀವು ಸತ್ತವರಿಗೋಸ್ಕರ ಗಾಯಮಾಡಿಕೊಳ್ಳಬಾರದು. ಮುಂದಲೆಯನ್ನು ಬೋಳಿಸಿಕೊಳ್ಳಬಾರದು.
2. ಏಕೆಂದರೆ ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ಪರಿಶುದ್ಧ ಜನರೇ, ಯೆಹೋವ ದೇವರು ಭೂಮಿಯ ಮೇಲಿರುವ ಎಲ್ಲಾ ಜನರೊಳಗಿಂದ ನಿಮ್ಮನ್ನೇ ತಮ್ಮ ಅಮೂಲ್ಯವಾದ ಆಸ್ತಿಯಾಗಿ ಆಯ್ದುಕೊಂಡಿದ್ದಾರೆ. [PE]
3. [PS]ಅಸಹ್ಯವಾದ ಯಾವುದನ್ನಾದರೂ ತಿನ್ನಬಾರದು.
4. ನೀವು ತಿನ್ನಬಹುದಾದ ಪ್ರಾಣಿಗಳು ಯಾವವಂದರೆ: ಎತ್ತು, ಕುರಿ, ಮೇಕೆ,
5. ದುಪ್ಪಿ, ಜಿಂಕೆ, ಸಾರಂಗ, ಕಾಡುಮೇಕೆ, ಚಿಗರಿ, ಕಡವೆ, ಕೊಂಡಗುರಿ ಇವುಗಳೇ.
6. ಯಾವ ಪ್ರಾಣಿಯ ಕಾಲ್ಗೊರಸು ಸೀಳಿದೆಯೋ, ಅದು ಮೆಲುಕು ಹಾಕುವಂಥಾದ್ದಾದರೆ ಅದರ ಮಾಂಸವನ್ನು ತಿನ್ನಬಹುದು.
7. ಆದರೆ ಯಾವ ಪ್ರಾಣಿ ಮೆಲುಕು ಹಾಕಿದರೂ ಗೊರಸು ಸೀಳಿರುವುದಿಲ್ಲವೋ ಮತ್ತು ಯಾವ ಪ್ರಾಣಿಯ ಗೊರಸು ಸೀಳಿದ್ದರೂ ಮೆಲುಕು ಹಾಕುವುದಿಲ್ಲವೋ ಅವುಗಳ ಮಾಂಸವನ್ನು ನೀವು ತಿನ್ನಬಾರದು. ಉದಾಹರಣೆಗೆ, ಒಂಟೆ, ಮೊಲ, ಬೆಟ್ಟದ ಮೊಲ ಇವು ಮೆಲುಕು ಹಾಕುವಂಥವುಗಳಾದರೂ, ಸೀಳುಗೊರಸು ಇಲ್ಲವಾದದ್ದರಿಂದ ಅವು ನಿಮಗೆ ಅಶುದ್ಧ.
8. ಹಂದಿಯನ್ನು ತಿನ್ನಬಾರದು. ಏಕೆಂದರೆ ಅದು ಗೊರಸು ಸೀಳಿದ್ದರೂ ಮೆಲುಕು ಹಾಕುವುದಿಲ್ಲ. ಅದು ನಿಮಗೆ ಅಶುದ್ಧವೇ. ಅವುಗಳ ಮಾಂಸವನ್ನು ನೀವು ತಿನ್ನಬಾರದು, ಅವುಗಳ ಹೆಣವನ್ನು ಮುಟ್ಟಬಾರದು. [PE]
9. [PS]ನೀರಿನಲ್ಲಿ ಬಾಳುವ ಎಲ್ಲವುಗಳಲ್ಲಿ ಅಂದರೆ ನೀವು ಈಜು ರೆಕ್ಕೆಗಳುಳ್ಳ ಮತ್ತು ಪೊರೆ ಇರುವವುಗಳನ್ನು ತಿನ್ನಬಹುದು.
10. ಆದರೆ ರೆಕ್ಕಗಳೂ ಪೊರೆಗಳೂ ಇಲ್ಲದವುಗಳನ್ನೆಲ್ಲಾ ತಿನ್ನಬಾರದು. ಅವು ನಿಮಗೆ ಅಶುದ್ಧ. [PE]
11. [PS]ಶುದ್ಧವಾದ ಎಲ್ಲಾ ಪಕ್ಷಿಗಳನ್ನು ತಿನ್ನಬಹುದು.
12. ಪಕ್ಷಿ ಜಾತಿಯಲ್ಲಿ ನೀವು ತಿನ್ನಬಾರದವುಗಳು ಯಾವುವೆಂದರೆ: ಗರುಡ, ಬೆಟ್ಟದಹದ್ದು, ಕಪ್ಪು ರಣಹದ್ದು,
13. ಗಿಡುಗ, ಹಕ್ಕಿಸಾಲೆ, ಸಕಲವಿಧವಾದ ಹದ್ದು,
14. ಸಕಲವಿಧವಾದ ಕಾಗೆ,
15. ಉಷ್ಟ್ರಪಕ್ಷಿ, ಉಲೂಕ, ಚೀರು ಗೂಬೆ, ಕಡಲ ಹಕ್ಕಿ, ಸಕಲವಿಧವಾದ ಡೇಗೆ,
16. ಸಣ್ಣ ಗೂಬೆ, ದೊಡ್ಡ ಗೂಬೆ, ಬಿಳಿಗೂಬೆ,
17. ಮರಳುಗಾಡು ಗೂಬೆ, ರಣಹದ್ದು, ನೀರು ಕೋಳಿ,
18. ಕೊಕ್ಕರೆ, ನೀರುಕಾಗೆ, ಸಕಲವಿಧವಾದ ಬಕ, ಹೆಡೆಹಕ್ಕಿ ಮತ್ತು ಬಾವಲಿ. [PE]
19. [PS]ಇದಲ್ಲದೆ ಹಾರುವ ಎಲ್ಲಾ ಕ್ರಿಮಿಕೀಟಗಳು ನಿಮಗೆ ಅಶುದ್ಧವೇ. ಅವುಗಳನ್ನು ತಿನ್ನಬಾರದು.
20. ಶುದ್ಧವಾದ ಎಲ್ಲಾ ರೆಕ್ಕೆ ಉಳ್ಳ ಪಕ್ಷಿಗಳನ್ನು ತಿನ್ನಬಹುದು. [PE]
21.
22. [PS]ತಾನೇ ಸತ್ತ ಯಾವುದನ್ನೂ ತಿನ್ನಬಾರದು. ನಿಮ್ಮ ಊರಲ್ಲಿರುವ ಅನ್ಯನಿಗೆ ತಿನ್ನಲು ಕೊಡಬಹುದು ಇಲ್ಲವೆ ಪರದೇಶದವನಿಗೆ ಮಾರಬಹುದು. ಏಕೆಂದರೆ ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ಪರಿಶುದ್ಧ ಜನರೇ. [PE][PS]ಮೇಕೆಯ ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಕುದಿಸಬಾರದು. [PE]{#1ಬೆಳೆಯ ದಶಮಾಂಶ } [PS]ನೀವು ಬಿತ್ತುವ ಹೊಲದಲ್ಲಿ ವರ್ಷ ವರ್ಷಕ್ಕೆ ಬರುವ ಹುಟ್ಟುವಳಿಯಿಂದ ದಶಮಾಂಶವನ್ನು ತಪ್ಪದೆ ಕೊಡಬೇಕು.
23. ನಿಮ್ಮ ಧಾನ್ಯ, ಹೊಸ ದ್ರಾಕ್ಷಾರಸ, ಓಲಿವ್ ಎಣ್ಣೆಗಳ ದಶಮಾಂಶವನ್ನೂ ನಿಮ್ಮ ದನಕುರಿಗಳಲ್ಲಿ ಚೊಚ್ಚಲುಗಳನ್ನೂ ನಿಮ್ಮ ದೇವರಾದ ಯೆಹೋವ ದೇವರ ಮುಂದೆ ತಮ್ಮ ಹೆಸರನ್ನು ಸ್ಥಾಪಿಸಿಕೊಳ್ಳುವುದಕ್ಕೆ ದೇವರೇ ಆಯ್ದುಕೊಂಡ ಸ್ಥಳದಲ್ಲಿ ತಿನ್ನಬೇಕು. ಇದರಿಂದ ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ಎಂದೆಂದಿಗೂ ಭಯಭಕ್ತಿಯುಳ್ಳವರಾಗಿ ಇರುವುದನ್ನು ಕಲಿಯುವಿರಿ.
24. ನೀವು ಕಾಣಿಕೆಗಳನ್ನು ತೆಗೆದುಕೊಂಡು ಹೋಗುವುದಕ್ಕೆ ನಿಮಗೆ ದಾರಿ ದೂರವಾಗಿದ್ದರೆ, ಅಥವಾ ನಿಮ್ಮ ದೇವರಾದ ಯೆಹೋವ ದೇವರು ತಮ್ಮ ಹೆಸರನ್ನು ಸ್ಥಾಪಿಸುವುದಕ್ಕೆ ಆಯ್ದುಕೊಂಡ ಸ್ಥಳವು ನಿಮಗೆ ದೂರವಾಗಿದ್ದರೆ, ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಆಶೀರ್ವದಿಸಿದ ಕಾಲದಲ್ಲಿ,
25. ಅವುಗಳನ್ನು ಮಾರಿ ಹಣವನ್ನಾಗಿ ಮಾರ್ಪಡಿಸಿ, ಆ ಹಣವನ್ನು ನಿಮ್ಮ ಕೈಯಲ್ಲಿ ತೆಗೆದುಕೊಂಡು, ನಿಮ್ಮ ದೇವರಾದ ಯೆಹೋವ ದೇವರು ಆಯ್ದುಕೊಳ್ಳುವ ಸ್ಥಳಕ್ಕೆ ಹೋಗಿರಿ.
26. ಅಲ್ಲಿ ನಿಮ್ಮ ಇಷ್ಟಾನುಸಾರ ದನ, ಕುರಿ, ದ್ರಾಕ್ಷಾರಸ, ಮದ್ಯ, ಮೊದಲಾದವುಗಳನ್ನು ಹಣದಿಂದ ಕೊಂಡುಕೊಂಡು ನೀವೂ, ನಿಮ್ಮ ಮನೆಯವರೂ, ನಿಮ್ಮ ಊರಿನ ಲೇವಿಯರೂ ನಿಮ್ಮ ದೇವರಾದ ಯೆಹೋವ ದೇವರ ಸನ್ನಿಧಿಯಲ್ಲಿ ಊಟಮಾಡಿ, ಸಂತೋಷವಾಗಿರಬೇಕು.
27. ನಿಮ್ಮ ಊರುಗಳಲ್ಲಿರುವ ಲೇವಿಯರನ್ನು ಕೈಬಿಡಬಾರದು. ಏಕೆಂದರೆ ಅವರಿಗೆ ನಿಮ್ಮ ಸಂಗಡ ಪಾಲೂ, ಸೊತ್ತೂ ಇಲ್ಲ. [PE]
28. [PS]ಪ್ರತಿ ಮೂರು ವರ್ಷಗಳ ಅಂತ್ಯದಲ್ಲಿ ಆಯಾ ವರ್ಷದಲ್ಲಿ ನಿಮಗೆ ಸಿಕ್ಕಿದ ಹುಟ್ಟುವಳಿಯ ದಶಮಭಾಗವನ್ನೆಲ್ಲಾ ಹೊರಗೆ ತಂದು ನಿಮ್ಮ ಊರಲ್ಲಿಯೇ ಕೂಡಿಸಬೇಕು.
29. ಆಗ ನಿಮ್ಮ ಸಂಗಡ ಪಾಲನ್ನೂ, ಸೊತ್ತನ್ನೂ ಹೊಂದದ ಲೇವಿಯರೂ, ನಿಮ್ಮ ಊರಲ್ಲಿರುವ ಅನ್ಯದೇಶದವರೂ, ದಿಕ್ಕಿಲ್ಲದವರೂ, ವಿಧವೆಯರೂ ಬಂದು ತಿಂದು ತೃಪ್ತರಾಗಲಿ. ಆಗ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನೂ, ನೀವು ಮಾಡುವ ಎಲ್ಲಾ ಪ್ರಯತ್ನಗಳನ್ನೂ ಆಶೀರ್ವದಿಸುವರು. [PE]
ಒಟ್ಟು 34 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 14 / 34
ಶುದ್ಧ ಮತ್ತು ಅಶುದ್ಧವಾದ ಆಹಾರ 1 ನೀವು ನಿಮ್ಮ ದೇವರಾದ ಯೆಹೋವ ದೇವರ ಮಕ್ಕಳು. ನೀವು ಸತ್ತವರಿಗೋಸ್ಕರ ಗಾಯಮಾಡಿಕೊಳ್ಳಬಾರದು. ಮುಂದಲೆಯನ್ನು ಬೋಳಿಸಿಕೊಳ್ಳಬಾರದು. 2 ಏಕೆಂದರೆ ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ಪರಿಶುದ್ಧ ಜನರೇ, ಯೆಹೋವ ದೇವರು ಭೂಮಿಯ ಮೇಲಿರುವ ಎಲ್ಲಾ ಜನರೊಳಗಿಂದ ನಿಮ್ಮನ್ನೇ ತಮ್ಮ ಅಮೂಲ್ಯವಾದ ಆಸ್ತಿಯಾಗಿ ಆಯ್ದುಕೊಂಡಿದ್ದಾರೆ. 3 ಅಸಹ್ಯವಾದ ಯಾವುದನ್ನಾದರೂ ತಿನ್ನಬಾರದು. 4 ನೀವು ತಿನ್ನಬಹುದಾದ ಪ್ರಾಣಿಗಳು ಯಾವವಂದರೆ: ಎತ್ತು, ಕುರಿ, ಮೇಕೆ, 5 ದುಪ್ಪಿ, ಜಿಂಕೆ, ಸಾರಂಗ, ಕಾಡುಮೇಕೆ, ಚಿಗರಿ, ಕಡವೆ, ಕೊಂಡಗುರಿ ಇವುಗಳೇ. 6 ಯಾವ ಪ್ರಾಣಿಯ ಕಾಲ್ಗೊರಸು ಸೀಳಿದೆಯೋ, ಅದು ಮೆಲುಕು ಹಾಕುವಂಥಾದ್ದಾದರೆ ಅದರ ಮಾಂಸವನ್ನು ತಿನ್ನಬಹುದು. 7 ಆದರೆ ಯಾವ ಪ್ರಾಣಿ ಮೆಲುಕು ಹಾಕಿದರೂ ಗೊರಸು ಸೀಳಿರುವುದಿಲ್ಲವೋ ಮತ್ತು ಯಾವ ಪ್ರಾಣಿಯ ಗೊರಸು ಸೀಳಿದ್ದರೂ ಮೆಲುಕು ಹಾಕುವುದಿಲ್ಲವೋ ಅವುಗಳ ಮಾಂಸವನ್ನು ನೀವು ತಿನ್ನಬಾರದು. ಉದಾಹರಣೆಗೆ, ಒಂಟೆ, ಮೊಲ, ಬೆಟ್ಟದ ಮೊಲ ಇವು ಮೆಲುಕು ಹಾಕುವಂಥವುಗಳಾದರೂ, ಸೀಳುಗೊರಸು ಇಲ್ಲವಾದದ್ದರಿಂದ ಅವು ನಿಮಗೆ ಅಶುದ್ಧ. 8 ಹಂದಿಯನ್ನು ತಿನ್ನಬಾರದು. ಏಕೆಂದರೆ ಅದು ಗೊರಸು ಸೀಳಿದ್ದರೂ ಮೆಲುಕು ಹಾಕುವುದಿಲ್ಲ. ಅದು ನಿಮಗೆ ಅಶುದ್ಧವೇ. ಅವುಗಳ ಮಾಂಸವನ್ನು ನೀವು ತಿನ್ನಬಾರದು, ಅವುಗಳ ಹೆಣವನ್ನು ಮುಟ್ಟಬಾರದು. 9 ನೀರಿನಲ್ಲಿ ಬಾಳುವ ಎಲ್ಲವುಗಳಲ್ಲಿ ಅಂದರೆ ನೀವು ಈಜು ರೆಕ್ಕೆಗಳುಳ್ಳ ಮತ್ತು ಪೊರೆ ಇರುವವುಗಳನ್ನು ತಿನ್ನಬಹುದು. 10 ಆದರೆ ರೆಕ್ಕಗಳೂ ಪೊರೆಗಳೂ ಇಲ್ಲದವುಗಳನ್ನೆಲ್ಲಾ ತಿನ್ನಬಾರದು. ಅವು ನಿಮಗೆ ಅಶುದ್ಧ. 11 ಶುದ್ಧವಾದ ಎಲ್ಲಾ ಪಕ್ಷಿಗಳನ್ನು ತಿನ್ನಬಹುದು. 12 ಪಕ್ಷಿ ಜಾತಿಯಲ್ಲಿ ನೀವು ತಿನ್ನಬಾರದವುಗಳು ಯಾವುವೆಂದರೆ: ಗರುಡ, ಬೆಟ್ಟದಹದ್ದು, ಕಪ್ಪು ರಣಹದ್ದು, 13 ಗಿಡುಗ, ಹಕ್ಕಿಸಾಲೆ, ಸಕಲವಿಧವಾದ ಹದ್ದು, 14 ಸಕಲವಿಧವಾದ ಕಾಗೆ, 15 ಉಷ್ಟ್ರಪಕ್ಷಿ, ಉಲೂಕ, ಚೀರು ಗೂಬೆ, ಕಡಲ ಹಕ್ಕಿ, ಸಕಲವಿಧವಾದ ಡೇಗೆ, 16 ಸಣ್ಣ ಗೂಬೆ, ದೊಡ್ಡ ಗೂಬೆ, ಬಿಳಿಗೂಬೆ, 17 ಮರಳುಗಾಡು ಗೂಬೆ, ರಣಹದ್ದು, ನೀರು ಕೋಳಿ, 18 ಕೊಕ್ಕರೆ, ನೀರುಕಾಗೆ, ಸಕಲವಿಧವಾದ ಬಕ, ಹೆಡೆಹಕ್ಕಿ ಮತ್ತು ಬಾವಲಿ. 19 ಇದಲ್ಲದೆ ಹಾರುವ ಎಲ್ಲಾ ಕ್ರಿಮಿಕೀಟಗಳು ನಿಮಗೆ ಅಶುದ್ಧವೇ. ಅವುಗಳನ್ನು ತಿನ್ನಬಾರದು. 20 ಶುದ್ಧವಾದ ಎಲ್ಲಾ ರೆಕ್ಕೆ ಉಳ್ಳ ಪಕ್ಷಿಗಳನ್ನು ತಿನ್ನಬಹುದು. 21 22 ತಾನೇ ಸತ್ತ ಯಾವುದನ್ನೂ ತಿನ್ನಬಾರದು. ನಿಮ್ಮ ಊರಲ್ಲಿರುವ ಅನ್ಯನಿಗೆ ತಿನ್ನಲು ಕೊಡಬಹುದು ಇಲ್ಲವೆ ಪರದೇಶದವನಿಗೆ ಮಾರಬಹುದು. ಏಕೆಂದರೆ ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ಪರಿಶುದ್ಧ ಜನರೇ. ಮೇಕೆಯ ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಕುದಿಸಬಾರದು. ಬೆಳೆಯ ದಶಮಾಂಶ ನೀವು ಬಿತ್ತುವ ಹೊಲದಲ್ಲಿ ವರ್ಷ ವರ್ಷಕ್ಕೆ ಬರುವ ಹುಟ್ಟುವಳಿಯಿಂದ ದಶಮಾಂಶವನ್ನು ತಪ್ಪದೆ ಕೊಡಬೇಕು. 23 ನಿಮ್ಮ ಧಾನ್ಯ, ಹೊಸ ದ್ರಾಕ್ಷಾರಸ, ಓಲಿವ್ ಎಣ್ಣೆಗಳ ದಶಮಾಂಶವನ್ನೂ ನಿಮ್ಮ ದನಕುರಿಗಳಲ್ಲಿ ಚೊಚ್ಚಲುಗಳನ್ನೂ ನಿಮ್ಮ ದೇವರಾದ ಯೆಹೋವ ದೇವರ ಮುಂದೆ ತಮ್ಮ ಹೆಸರನ್ನು ಸ್ಥಾಪಿಸಿಕೊಳ್ಳುವುದಕ್ಕೆ ದೇವರೇ ಆಯ್ದುಕೊಂಡ ಸ್ಥಳದಲ್ಲಿ ತಿನ್ನಬೇಕು. ಇದರಿಂದ ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ಎಂದೆಂದಿಗೂ ಭಯಭಕ್ತಿಯುಳ್ಳವರಾಗಿ ಇರುವುದನ್ನು ಕಲಿಯುವಿರಿ. 24 ನೀವು ಕಾಣಿಕೆಗಳನ್ನು ತೆಗೆದುಕೊಂಡು ಹೋಗುವುದಕ್ಕೆ ನಿಮಗೆ ದಾರಿ ದೂರವಾಗಿದ್ದರೆ, ಅಥವಾ ನಿಮ್ಮ ದೇವರಾದ ಯೆಹೋವ ದೇವರು ತಮ್ಮ ಹೆಸರನ್ನು ಸ್ಥಾಪಿಸುವುದಕ್ಕೆ ಆಯ್ದುಕೊಂಡ ಸ್ಥಳವು ನಿಮಗೆ ದೂರವಾಗಿದ್ದರೆ, ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಆಶೀರ್ವದಿಸಿದ ಕಾಲದಲ್ಲಿ, 25 ಅವುಗಳನ್ನು ಮಾರಿ ಹಣವನ್ನಾಗಿ ಮಾರ್ಪಡಿಸಿ, ಆ ಹಣವನ್ನು ನಿಮ್ಮ ಕೈಯಲ್ಲಿ ತೆಗೆದುಕೊಂಡು, ನಿಮ್ಮ ದೇವರಾದ ಯೆಹೋವ ದೇವರು ಆಯ್ದುಕೊಳ್ಳುವ ಸ್ಥಳಕ್ಕೆ ಹೋಗಿರಿ. 26 ಅಲ್ಲಿ ನಿಮ್ಮ ಇಷ್ಟಾನುಸಾರ ದನ, ಕುರಿ, ದ್ರಾಕ್ಷಾರಸ, ಮದ್ಯ, ಮೊದಲಾದವುಗಳನ್ನು ಹಣದಿಂದ ಕೊಂಡುಕೊಂಡು ನೀವೂ, ನಿಮ್ಮ ಮನೆಯವರೂ, ನಿಮ್ಮ ಊರಿನ ಲೇವಿಯರೂ ನಿಮ್ಮ ದೇವರಾದ ಯೆಹೋವ ದೇವರ ಸನ್ನಿಧಿಯಲ್ಲಿ ಊಟಮಾಡಿ, ಸಂತೋಷವಾಗಿರಬೇಕು. 27 ನಿಮ್ಮ ಊರುಗಳಲ್ಲಿರುವ ಲೇವಿಯರನ್ನು ಕೈಬಿಡಬಾರದು. ಏಕೆಂದರೆ ಅವರಿಗೆ ನಿಮ್ಮ ಸಂಗಡ ಪಾಲೂ, ಸೊತ್ತೂ ಇಲ್ಲ. 28 ಪ್ರತಿ ಮೂರು ವರ್ಷಗಳ ಅಂತ್ಯದಲ್ಲಿ ಆಯಾ ವರ್ಷದಲ್ಲಿ ನಿಮಗೆ ಸಿಕ್ಕಿದ ಹುಟ್ಟುವಳಿಯ ದಶಮಭಾಗವನ್ನೆಲ್ಲಾ ಹೊರಗೆ ತಂದು ನಿಮ್ಮ ಊರಲ್ಲಿಯೇ ಕೂಡಿಸಬೇಕು. 29 ಆಗ ನಿಮ್ಮ ಸಂಗಡ ಪಾಲನ್ನೂ, ಸೊತ್ತನ್ನೂ ಹೊಂದದ ಲೇವಿಯರೂ, ನಿಮ್ಮ ಊರಲ್ಲಿರುವ ಅನ್ಯದೇಶದವರೂ, ದಿಕ್ಕಿಲ್ಲದವರೂ, ವಿಧವೆಯರೂ ಬಂದು ತಿಂದು ತೃಪ್ತರಾಗಲಿ. ಆಗ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನೂ, ನೀವು ಮಾಡುವ ಎಲ್ಲಾ ಪ್ರಯತ್ನಗಳನ್ನೂ ಆಶೀರ್ವದಿಸುವರು.
ಒಟ್ಟು 34 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 14 / 34
×

Alert

×

Kannada Letters Keypad References