1. {#1ಮೋಶೆ ಗೋತ್ರಗಳನ್ನು ಆಶೀರ್ವದಿಸಿದ್ದು }
2. [PS]ದೇವರ ಮನುಷ್ಯನಾದ ಮೋಶೆಯು ಮರಣ ಹೊಂದುವದಕ್ಕಿಂತ ಮುಂಚೆ ಇಸ್ರಾಯೇಲರಿಗೆ ಕೊಟ್ಟ ಆಶೀರ್ವಾದ: [PE][QS]“ಯೆಹೋವ ದೇವರು ಸೀನಾಯಿ ಬೆಟ್ಟದಿಂದ ಬಂದು, [QE][QS2]ಸೇಯೀರಿನಿಂದ ಅವರ ಮೇಲೆ ಉದಯಿಸಿದರು. [QE][QS2]ಪಾರಾನ್ ಬೆಟ್ಟದಿಂದ ಪ್ರಕಾಶಿಸಿದರು. [QE][QS]ದೇವರು ದಕ್ಷಿಣದ ತಮ್ಮ ಪರ್ವತ ಶ್ರೇಣಿಯಿಂದ [QE][QS2]ಲಕ್ಷಾಂತರ ಪರಿಶುದ್ಧರ ಸಂಗಡ ಬಂದರು. [QE]
3. [QS]ನಿಶ್ಚಯವಾಗಿ ನೀವು ಜನರನ್ನು ಪ್ರೀತಿಸುತ್ತೀರಿ. [QE][QS2]ಪರಿಶುದ್ಧ ಜನರು ನಿಮ್ಮ ಆಶ್ರಯದಲ್ಲಿಯೇ ಇದ್ದಾರೆ. [QE][QS]ನಿಮ್ಮ ಪಾದಗಳಿಗೆ ಎಲ್ಲರೂ ಎರಗುವರು. [QE][QS2]ನಿಮ್ಮಿಂದಲೇ ಬೋಧನೆ ಪಡೆಯುವರು. [QE]
4. [QS]ಯಾಕೋಬನ ಸಂತತಿಯವರಾದ ನಮಗೆ, [QE][QS2]ಮೋಶೆಯು ನಿಯಮವನ್ನು ಸೊತ್ತಾಗಿ ಕೊಟ್ಟಿದ್ದಾನೆ. [QE]
5. [QS]ಇಸ್ರಾಯೇಲರ ಮುಖ್ಯಸ್ಥರೂ [QE][QS2]ಅವರ ಗೋತ್ರಗಳು ಒಟ್ಟಾಗಿ ಸೇರಿಬಂದಾಗ, [QE][QS2]ದೇವರೇ ಯೆಶುರೂನಿನ ಮೇಲೆ ಅರಸನಾಗಿದ್ದರು. [QE][PBR]
6. [QS]“ರೂಬೇನನು ಸಾಯದೆ ಬದುಕಲಿ. [QE][QS2]ಅವನ ಜನರು ಕಡಿಮೆಯಾಗದಿರಲಿ.” [QE]
7. [PS]ಯೆಹೂದನ ಬಗ್ಗೆ ಮೋಶೆ ಹೇಳಿದ ಮಾತಿದು: [PE][QS]“ಯೆಹೋವ ದೇವರೇ, ಯೆಹೂದನ ಮೊರೆಯನ್ನಾಲಿಸಿ, [QE][QS2]ಅವರನ್ನು ಅವರ ಬಂಧುಗಳೊಡನೆ ಸೇರಿಸಿರಿ. [QE][QS]ಅವನ ಸ್ವಂತ ಕೈಗಳೇ ತನ್ನ ಹಕ್ಕು ಬಾಧ್ಯತೆಗಳನ್ನು ಕಾದಿರಿಸುತ್ತವೆ. [QE][QS2]ಅವನ ಶತ್ರುಗಳಿಂದ ಅವನನ್ನು ತಪ್ಪಿಸಿರಿ.” [QE]
8. [PS]ಲೇವಿ ಕುಲದ ವಿಷಯದಲ್ಲಿ ಹೇಳಿದ್ದೇನೆಂದರೆ: [PE][QS]“ನಿಮ್ಮ ನಿರ್ಣಯವನ್ನು ತಿಳಿಸುವ ಊರೀಮ್, ತುಮ್ಮೀಮ್ ಎಂಬ ವಸ್ತುಗಳು [QE][QS2]ನಿಮ್ಮ ಭಕ್ತರಾದ ಇವರ ವಶದಲ್ಲಿ ಉಂಟಷ್ಟೆ. [QE][QS]ನೀವು ಮಸ್ಸದಲ್ಲಿ ಅವರನ್ನು ಪರೀಕ್ಷಿಸಿದಿರಿ. [QE][QS2]ಮೆರೀಬಾದಲ್ಲಿ ನೀರು ಹೊರಟ ಸ್ಥಳದ ಹತ್ತಿರ ಅವರೊಡನೆ ವಿವಾದ ಮಾಡಿದಿರಿ. [QE]
9. [QS]ಅವನು ತನ್ನ ತಂದೆತಾಯಿಗಳ ಬಗ್ಗೆ, [QE][QS2]‘ಅವರಿಗಾಗಿ ನನಗೆ ಗೌರವವಿಲ್ಲ.’ [QE][QS]ಅವನು ತನ್ನ ಸಹೋದರರನ್ನೂ ಗುರುತಿಸಲಿಲ್ಲ [QE][QS2]ತನ್ನ ಸ್ವಂತ ಮಕ್ಕಳನ್ನೂ ಅರಿಯಲಿಲ್ಲ, [QE][QS]ಏಕೆಂದರೆ ಅವನು ನಿಮ್ಮ ವಾಕ್ಯವನ್ನು ಕೈಗೊಂಡು [QE][QS2]ನಿಮ್ಮ ಒಡಂಬಡಿಕೆಯನ್ನು ಕಾಪಾಡಿದ್ದಾನೆ. [QE]
10. [QS]ಅವನು ಯಾಕೋಬನಿಗೆ ನಿಮ್ಮ ಸೂತ್ರಗಳನ್ನೂ, [QE][QS2]ಇಸ್ರಾಯೇಲರಿಗೆ ನಿಮ್ಮ ನಿಯಮವನ್ನೂ ಬೋಧಿಸುವನು. [QE][QS]ನಿಮ್ಮ ಮುಂದೆ ಧೂಪವನ್ನೂ [QE][QS2]ನಿಮ್ಮ ಬಲಿಪೀಠದ ಮೇಲೆ ಸರ್ವಾಂಗ ದಹನಬಲಿಯನ್ನೂ ಸಮರ್ಪಿಸುವನು. [QE]
11. [QS]ಯೆಹೋವ ದೇವರೇ, ಅವನ ಎಲ್ಲ ಕೌಶಲ್ಯಗಳನ್ನು ಆಶೀರ್ವದಿಸಿರಿ. [QE][QS2]ಅವನ ಕೈಕೆಲಸವನ್ನು ಅಂಗೀಕರಿಸಿರಿ. [QE][QS]ಅವನಿಗೆ ವಿರೋಧವಾಗಿ ಏಳುವವರ ನಡು ಮುರಿದು ಹೋಗಲಿ. [QE][QS2]ಅವನನ್ನು ದ್ವೇಷಿಸುವವರು ತಿರುಗಿ ಏಳದ ಹೋಗಲಿ.” [QE]
12. [PS]ಮೋಶೆಯು ಬೆನ್ಯಾಮೀನನ ವಿಷಯವಾಗಿ ಹೇಳಿದ್ದೇನೆಂದರೆ: [PE][QS]“ಯೆಹೋವ ದೇವರಿಗೆ ಪ್ರಿಯನಾದ ಇವನು ದೇವರ ಬಳಿಯಲ್ಲಿ ಸುರಕ್ಷಿತವಾಗಿ ವಾಸಮಾಡುವನು. [QE][QS2]ದೇವರು ಅವನಿಗೆ ದಿನವೆಲ್ಲಾ ಆಸರೆಯಾಗಿರುವರು. [QE][QS2]ಅವನು ದೇವರ ಭುಜಗಳ ನಡುವೆ ವಿಶ್ರಾಂತಿ ಪಡೆಯುವನು.” [QE]
13. [PS]ಯೋಸೇಫನ ವಿಷಯವಾಗಿ ಹೇಳಿದ್ದೇನೆಂದರೆ: [PE][QS]“ಅವನ ದೇಶವು [QE][QS2]ಆಕಾಶದ ಅಮೂಲ್ಯವಾದ ಮಂಜಿನಿಂದಲೂ, [QE][QS2]ಕೆಳಗೆ ಸಾಗರ ಸೆಲೆಯಿಂದಲೂ ಯೆಹೋವ ದೇವರ ಆಶೀರ್ವಾದ ಹೊಂದಲಿ. [QE]
14. [QS]ಸೂರ್ಯನು ತರುವ ಉತ್ಕೃಷ್ಟವಾದವುಗಳಿಂದಲೂ [QE][QS2]ಚಂದ್ರನು ದಯಪಾಲಿಸುವ ಅಮೂಲ್ಯವಾದವುಗಳಿಂದಲೂ [QE]
15. [QS]ಪುರಾತನ ಪರ್ವತಗಳಿಂದ ದೊರೆಯುವ ಅತ್ಯುತ್ತಮ ಕಾಣಿಕೆಗಳಿಂದಲೂ [QE][QS2]ಶಾಶ್ವತ ಪರ್ವತಗಳಿಂದ ಸಿಗುವ ಒಳಿತುಗಳಿಂದಲೂ, [QE]
16. [QS]ಭೂಮಿಯಲ್ಲಿ ಸಮೃದ್ಧಿಯಾಗಿ ಬೆಳೆಯುವ ಫಲಗಳಲ್ಲಿ ಉತ್ಕೃಷ್ಟವಾದುದೆಲ್ಲವೂ [QE][QS2]ಸುಡುವ ಪೊದೆಯಲ್ಲಿ ವಾಸವಾಗಿದ್ದ ದೇವರ ದಯೆಯೂ [QE][QS]ಯೋಸೇಫನ ತಲೆಯ ಮೇಲೆ ನೆಲೆಗೊಳ್ಳಲಿ. [QE][QS2]ಅವನು ತನ್ನ ಸಹೋದರರಲ್ಲಿ ರಾಜಕುಮಾರನಾಗಿರುವನು. [QE][QS2]ಕುಲದವರ ಶಿರಸ್ಸಾಗಿರುವ ಅವನ ಮೇಲೆ ಆಶೀರ್ವಾದ ಉಂಟಾಗಲಿ. [QE]
17. [QS]ಅವನ ವೈಭವವು ಚೊಚ್ಚಲ ಹೋರಿಯಂತೆ ಇರುವುದು, [QE][QS2]ಅವನ ಕೊಂಬುಗಳು ಕಾಡುಕೋಣಗಳ ಕೊಂಬುಗಳಂತೆ ಇರುವುದು. [QE][QS]ಇವುಗಳಿಂದ ಜನಾಂಗಗಳನ್ನೆಲ್ಲಾ ಇರಿದು [QE][QS2]ಒಟ್ಟಿಗೆ ಭೂಮಿಯ ಅಂಚಿನವರೆಗೆ ಓಡಿಸುವನು. [QE][QS]ಎಫ್ರಾಯೀಮ್ ಕುಲದ ಹತ್ತು ಸಾವಿರ ಜನರೂ ಇಂಥವರೇ. [QE][QS2]ಮನಸ್ಸೆ ಕುಲದ ಸಹಸ್ರ ಜನರೂ ಇಂಥವರೇ ಆಗಿದ್ದಾರೆ.” [QE]
18. [PS]ಮೋಶೆಯು ಜೆಬುಲೂನರ ವಿಷಯವಾಗಿ ಹೇಳಿದ್ದೇನೆಂದರೆ: [PE][QS]“ಜೆಬೂಲೂನನೇ, ನಿನ್ನ ಪ್ರಯಾಣದಲ್ಲಿ ಸಂತೋಷಪಡು. [QE][QS2]ಇಸ್ಸಾಕಾರನೇ, ನಿನ್ನ ಗುಡಾರಗಳಲ್ಲಿ ಸಂತೋಷಪಡು. [QE]
19. [QS]ಅವರು ಜನರನ್ನು ಬೆಟ್ಟಕ್ಕೆ ಕರೆಯಿಸಿ, [QE][QS2]ಅಲ್ಲಿ ನೀತಿಯ ಬಲಿಗಳನ್ನು ಅರ್ಪಿಸುವರು. [QE][QS]ಏಕೆಂದರೆ ಅವರು ಸಮುದ್ರದಿಂದ ಐಶ್ವರ್ಯವನ್ನು ಹೊಂದಿ [QE][QS2]ಮರಳಿನಲ್ಲಿ ಅಡಗಿರುವ ಸಂಪತ್ತನ್ನು ಪಡೆಯುವರು.” [QE]
20. [PS]ಮೋಶೆಯು ಗಾದನ ವಿಷಯವಾಗಿ ಹೇಳಿದ್ದೇನೆಂದರೆ: [PE][QS]“ಗಾದನ ರಾಜ್ಯವನ್ನು ವಿಸ್ತಾರ ಮಾಡಿದ ದೇವರು ಸ್ತುತಿಹೊಂದಲಿ. [QE][QS2]ಅವನು ಸಿಂಹದಂತೆ ಜೀವಿಸಿ ತೋಳನ್ನೂ [QE][QS2]ಶಿರಸ್ಸನ್ನೂ ಮುರಿಯುವನು. [QE]
21. [QS]ಅವನು ಉತ್ತಮವಾದ ನಾಡನ್ನು ತನಗಾಗಿ ಆಯ್ದುಕೊಂಡನು. [QE][QS2]ನಾಯಕರ ಪಾಲು ಅವನಿಗಾಗಿ ದೊರಕಿತು. [QE][QS]ಅವನು ಜನರ ಮುಖ್ಯಸ್ಥರ ಸಂಗಡ ಬಂದು, [QE][QS2]ಇಸ್ರಾಯೇಲರೊಡನೆ ಯೆಹೋವ ದೇವರ ನೀತಿಯನ್ನೂ [QE][QS2]ದೇವರ ನ್ಯಾಯಗಳನ್ನೂ ಸ್ಥಾಪಿಸಿದನು.” [QE]
22. [PS]ಮೋಶೆಯು ದಾನನ ವಿಷಯವಾಗಿ ಹೇಳಿದ್ದೇನೆಂದರೆ: [PE][QS]“ದಾನನು ಬಾಷಾನಿನಿಂದ ಹಾರಿಬರುವ, [QE][QS2]ಪ್ರಾಯದ ಸಿಂಹದಂತಿದ್ದಾನೆ.” [QE]
23. [PS]ಮೋಶೆಯು ನಫ್ತಾಲಿಯ ವಿಷಯವಾಗಿ ಹೇಳಿದ್ದೇನೆಂದರೆ: [PE][QS]“ನಫ್ತಾಲಿಯೇ, ಯೆಹೋವ ದೇವರ ಅನುಗ್ರಹದಿಂದ ತೃಪ್ತನಾದವನೇ, [QE][QS2]ದೇವರ ಆಶೀರ್ವಾದದಿಂದ ತುಂಬಿದವನೇ; [QE][QS2]ಸಮುದ್ರವೂ ದಕ್ಷಿಣ ಪ್ರದೇಶವೂ ನಿನಗೆ ಸೊತ್ತಾಗಲಿ.” [QE]
24. [PS]ಮೋಶೆ ಆಶೇರನ ವಿಷಯವಾಗಿ ಹೇಳಿದ್ದೇನೆಂದರೆ: [PE][QS]“ಪುತ್ರರಲ್ಲಿಯೇ ಶ್ರೇಷ್ಠನಾದ ಆಶೇರನು ಭಾಗ್ಯ ಹೊಂದಲಿ. [QE][QS2]ಅವನ ಸಹೋದರರು ಅವನನ್ನು ಮೆಚ್ಚಿಕೊಳ್ಳಲಿ, [QE][QS2]ಎಣ್ಣೆಯಲ್ಲಿ ಪಾದಸ್ನಾನ ಮಾಡುವಂತಾಗಲಿ. [QE]
25. [QS]ನಿನ್ನ ದ್ವಾರಗಳ ಅಗುಳಿಗಳು ಕಬ್ಬಿಣದ ಮತ್ತು ಕಂಚಿನವುಗಳು ಆಗಿರಲಿ. [QE][QS2]ನಿನ್ನ ಜೀವಮಾನಕಾಲವೆಲ್ಲಾ ನಿನಗೆ ಬಲವಿರುವುದು. [QE][PBR]
26. [QS]“ಯೆಶುರೂನನ ದೇವರ ಹಾಗೆ ಯಾರೂ ಇಲ್ಲ. [QE][QS2]ದೇವರು ನಿನ್ನ ಸಹಾಯಕ್ಕೆ ಆಕಾಶವನ್ನೇರಿ [QE][QS2]ಮೇಘಾರೂಢನಾಗಿ ತಮ್ಮ ಘನತೆಯಲ್ಲಿ ಬರುತ್ತಾರೆ. [QE]
27. [QS]ನಿತ್ಯ ದೇವರು ನಿನ್ನ ಆಶ್ರಯವು. [QE][QS2]ದೇವರ ಶಾಶ್ವತ ತೋಳುಗಳು ನಿನಗೆ ಆಶ್ರಯ. [QE][QS]ನಿನ್ನ ವೈರಿಗಳನ್ನು ನಿನ್ನ ಮುಂದೆ ಓಡಿಸಿ, [QE][QS2]‘ಅವರನ್ನು ಸಂಹರಿಸಿರಿ,’ ಎಂದು ಆಜ್ಞಾಪಿಸುವರು. [QE]
28. [QS]ಆದಕಾರಣ ಆಕಾಶದಿಂದ ಮಂಜನ್ನು ಸುರಿಯುವ, [QE][QS2]ಧಾನ್ಯ, ಹೊಸ ದ್ರಾಕ್ಷಾರಸ ಸಮೃದ್ಧಿಯಾಗಿರುವ ನಾಡಿನಲ್ಲಿ, [QE][QS]ಯಾಕೋಬನ ವಂಶದವರು ಸುರಕ್ಷಿತರಾದರು. [QE][QS2]ಇಸ್ರಾಯೇಲರು ನಿರ್ಭಯವಾಗಿ ವಾಸಿಸುವವರಾದರು. [QE]
29. [QS]ಇಸ್ರಾಯೇಲರೇ, ನೀವು ಎಷ್ಟೋ ಧನ್ಯರು. [QE][QS2]ಯೆಹೋವ ದೇವರಿಂದ ರಕ್ಷಣೆಹೊಂದಿದ ಜನಾಂಗವೇ [QE][QS2]ನಿಮ್ಮಂತೆ ಯಾರಿದ್ದಾರೆ? [QE][QS]ದೇವರೇ ನಿಮಗೆ ಗುರಾಣಿ ಹಾಗೂ ಸಹಾಯಕ. [QE][QS2]ದೇವರು ನಿಮ್ಮ ಮಹಿಮಾ ಖಡ್ಗ. [QE][QS]ನಿಮ್ಮ ವೈರಿಗಳು ನಿಮ್ಮ ಮುಂದೆ ಮುದುರಿಕೊಳ್ಳುವರು [QE][QS2]ಮತ್ತು ಅವರ ಉನ್ನತ ಸ್ಥಳಗಳನ್ನು ನೀವು ತುಳಿದುಬಿಡುವಿರಿ.” [QE]