ಪವಿತ್ರ ಬೈಬಲ್

ಓಪನ್ ಸಮಕಾಲೀನ ಆವೃತ್ತಿ (OCV)
ಧರ್ಮೋಪದೇಶಕಾಂಡ
1. {#1ಯೆಹೋವ ದೇವರನ್ನು ಪ್ರೀತಿಸು } [PS]ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಬೋಧಿಸಲು ನನಗೆ ನಡೆಸಿದ ಈ ಆಜ್ಞೆಗಳನ್ನೂ, ತೀರ್ಪುಗಳನ್ನೂ, ನಿಯಮಗಳನ್ನೂ ನೀವು ಸ್ವತಂತ್ರಿಸಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ಅನುಸರಿಸಬೇಕಾದವುಗಳು ಇವೇ.
2. ನೀವೂ, ನಿಮ್ಮ ಮಕ್ಕಳೂ, ನಿಮ್ಮ ಮೊಮ್ಮಕ್ಕಳೂ ತಮ್ಮ ಜೀವನದ ದಿವಸಗಳಲ್ಲೆಲ್ಲಾ ನಿಮ್ಮ ದೇವರಾದ ಯೆಹೋವ ದೇವರಿಗೆ ಭಯಪಟ್ಟು, ಕೈಗೊಳ್ಳುವ ಹಾಗೆಯೂ, ನಿಮ್ಮ ದಿವಸಗಳು ಬಹಳವಾಗುವ ಹಾಗೆಯೂ ನಾನು ನಿಮಗೆ ಕೊಡುವ ದೇವರ ಎಲ್ಲಾ ತೀರ್ಪುಗಳನ್ನು ಮತ್ತು ಆಜ್ಞೆಗಳನ್ನು ಅನುಸರಿಸಬೇಕು.
3. ಹೀಗಿರುವುದರಿಂದ ಓ ಇಸ್ರಾಯೇಲರೇ, ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರು ವಾಗ್ದಾನ ಮಾಡಿದ ಪ್ರಕಾರ ಹಾಲೂ ಜೇನೂ ಹರಿಯುವ ದೇಶದಲ್ಲಿ ನಿಮಗೆ ಒಳ್ಳೆಯದಾಗುವ ಹಾಗೆಯೂ ನೀವು ಬಹಳವಾಗಿ ಹೆಚ್ಚುವ ಹಾಗೆಯೂ ಲಕ್ಷ್ಯವಿಟ್ಟು ಕೇಳಿ ವಿಧೇಯರಾಗಿರಿ. [PE]
4. [PS]ಇಸ್ರಾಯೇಲರೇ, ಕೇಳಿರಿ: ದೇವರಾದ ಯೆಹೋವ ನಮ್ಮ ದೇವರು; ಯೆಹೋವ ದೇವರು ಒಬ್ಬರೇ.
5. ನೀವು ನಿಮ್ಮ ದೇವರಾದ ಯೆಹೋವ ದೇವರನ್ನು ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ, ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು.
6. ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಈ ಮಾತುಗಳು ನಿಮ್ಮ ಹೃದಯದಲ್ಲಿ ಇರಬೇಕು.
7. ಅವುಗಳನ್ನು ನಿಮ್ಮ ಮಕ್ಕಳಿಗೆ ಅಭ್ಯಾಸ ಮಾಡಿಸಿ, ನಿಮ್ಮ ಮನೆಯಲ್ಲಿ ಕೂತಿರುವಾಗಲೂ ಮಾರ್ಗದಲ್ಲಿ ನಡೆಯುವಾಗಲೂ ಮಲಗುವಾಗಲೂ ಏಳುವಾಗಲೂ ಅವುಗಳ ವಿಷಯವಾಗಿ ಮಾತನಾಡಬೇಕು.
8. ಅವುಗಳನ್ನು ಗುರುತಾಗಿ ನಿಮ್ಮ ಕೈಗಳಿಗೆ ಕಟ್ಟಿಕೊಳ್ಳಬೇಕು. ಅವುಗಳನ್ನು ನಿಮ್ಮ ಹಣೆಗೂ ಕಟ್ಟಿಕೊಳ್ಳಬೇಕು.
9. ಅವುಗಳನ್ನು ನಿಮ್ಮ ಮನೆಯ ನಿಲುವು ಪಟ್ಟಿಗಳ ಮೇಲೆಯೂ ನಿಮ್ಮ ಬಾಗಿಲುಗಳ ಮೇಲೆಯೂ ಬರೆಯಬೇಕು. [PE]
10. [PS]ಇದಲ್ಲದೆ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಪಿತೃಗಳಾದ ಅಬ್ರಹಾಮ, ಇಸಾಕ, ಯಾಕೋಬರಿಗೆ ಪ್ರಮಾಣ ಮಾಡಿದ ದೇಶದಲ್ಲಿ ನಿಮ್ಮನ್ನು ಸೇರಿಸಿ, ನೀವು ಕಟ್ಟಿದ ದೊಡ್ಡದಾದ ಒಳ್ಳೆಯ ಪಟ್ಟಣಗಳನ್ನೂ,
11. ನೀವು ಕೂಡಿಸದ ಉತ್ತಮ ವಸ್ತುಗಳಿಂದ ತುಂಬಿದ ಮನೆಗಳನ್ನೂ, ನೀವು ಅಗೆಯದಿರುವ ಬಾವಿಗಳನ್ನೂ, ನೀವು ನೆಡದ ದ್ರಾಕ್ಷಿತೋಟಗಳನ್ನೂ, ಓಲಿವ್ ತೋಟಗಳನ್ನೂ ನಿಮಗೆ ಕೊಡಲಾಗಿ, ನೀವು ತಿಂದು ತೃಪ್ತರಾಗಿರುವಿರಿ.
12. ಈಜಿಪ್ಟ್ ದೇಶದ ದಾಸತ್ವದ ಮನೆಯೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿದ ಯೆಹೋವ ದೇವರನ್ನು ಮರೆಯದ ಹಾಗೆ ನೋಡಿಕೊಳ್ಳಿರಿ. [PE]
13. [PS]ನಿಮ್ಮ ದೇವರಾದ ಯೆಹೋವ ದೇವರಿಗೆ ನೀವು ಭಯಪಡಬೇಕು. ಅವರಿಗೆ ಮಾತ್ರವೇ ಸೇವೆ ಸಲ್ಲಿಸಬೇಕು ಮತ್ತು ಅವರ ಹೆಸರಿನಲ್ಲಿ ಆಣೆಯಿಟ್ಟುಕೊಳ್ಳಬೇಕು.
14. ನಿಮ್ಮ ಸುತ್ತಲಿರುವ ಜನರ ದೇವರುಗಳಾಗಿರುವ ಬೇರೆ ದೇವರುಗಳನ್ನು ನೀವು ಹಿಂಬಾಲಿಸಬೇಡಿರಿ.
15. ಏಕೆಂದರೆ ನಿಮ್ಮ ಮಧ್ಯದಲ್ಲಿರುವ ನಿಮ್ಮ ಯೆಹೋವ ದೇವರು ತಮಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ಸ್ವಾಮ್ಯಾಸಕ್ತರಾದ ದೇವರು. ನಿಮ್ಮ ದೇವರ ಕೋಪವು ನಿಮ್ಮ ಮೇಲೆ ಉರಿಯಲು, ಅವರು ನಿಮ್ಮನ್ನು ಭೂಮಿಯ ಮೇಲಿನಿಂದ ತೆಗೆದುಹಾಕುವರು.
16. ನೀವು ಮಸ್ಸದಲ್ಲಿ ಪರೀಕ್ಷಿಸಿದ ಹಾಗೆ ನಿಮ್ಮ ದೇವರಾದ ಯೆಹೋವ ದೇವರನ್ನು ಪರೀಕ್ಷಿಸಬಾರದು.
17. ನಿಮ್ಮ ದೇವರಾದ ಯೆಹೋವ ದೇವರ ಆಜ್ಞೆಗಳನ್ನೂ, ಅವರು ನಿಮಗೆ ನೀಡಿದ ಷರತ್ತುಗಳನ್ನೂ, ಅವರ ತೀರ್ಪುಗಳನ್ನೂ ಎಚ್ಚರಿಕೆಯಿಂದ ಕೈಗೊಳ್ಳಬೇಕು.
18. ನಿಮಗೆ ಒಳ್ಳೆಯದಾಗುವಂತೆಯೂ ಯೆಹೋವ ದೇವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಆ ಒಳ್ಳೆಯ ದೇಶವನ್ನು ನೀವು ಪ್ರವೇಶಿಸಿ ಸ್ವತಂತ್ರಿಸಿಕೊಳ್ಳುವಂತೆಯೂ ಯೆಹೋವ ದೇವರ ದೃಷ್ಟಿಯಲ್ಲಿ ಸರಿಯಾದದ್ದನ್ನೂ, ಒಳ್ಳೆಯದನ್ನೂ ಮಾಡಿರಿ.
19. ಆಗ ಯೆಹೋವ ದೇವರು ತಾವು ಹೇಳಿದಂತೆ ನಿಮ್ಮ ಎಲ್ಲಾ ಶತ್ರುಗಳನ್ನು ನಿಮ್ಮ ಮುಂದೆಯೇ ಓಡಿಸಿಬಿಡುವರು. [PE]
20. [PS]ಮುಂದಿನ ಕಾಲದಲ್ಲಿ ನಿಮ್ಮ ಮಕ್ಕಳು ನಿಮ್ಮನ್ನು, “ನಮ್ಮ ದೇವರಾದ ಯೆಹೋವ ದೇವರು ಆಜ್ಞಾಪಿಸಿದ ಈ ಷರತ್ತುಗಳ, ತೀರ್ಪುಗಳ ಹಾಗು ನಿಯಮಗಳ ಅರ್ಥ ಏನು?” ಎಂದು ನಿಮ್ಮನ್ನು ಕೇಳುವರು.
21. ಆಗ ನೀವು ಅವರಿಗೆ, “ನಾವು ಈಜಿಪ್ಟ್ ದೇಶದಲ್ಲಿ ಫರೋಹನನಿಗೆ ದಾಸರಾಗಿದ್ದೆವು. ಯೆಹೋವ ದೇವರು ಬಲವಾದ ಕೈಯಿಂದ ನಮ್ಮನ್ನು ಈಜಿಪ್ಟಿನೊಳಗಿಂದ ಹೊರಗೆ ಬರಮಾಡಿದರು.
22. ಯೆಹೋವ ದೇವರು ನಮ್ಮ ಕಣ್ಣ ಮುಂದೆಯೇ ಈಜಿಪ್ಟಿನ ಮೇಲೆಯೂ, ಫರೋಹನ ಮೇಲೆಯೂ, ಅವನ ಎಲ್ಲಾ ಮನೆಯ ಮೇಲೆಯೂ ಭಯಂಕರವಾದ ದೊಡ್ಡ ಗುರುತುಗಳನ್ನೂ, ಅದ್ಭುತಗಳನ್ನೂ ಕಳುಹಿಸಿದರು.
23. ಆದರೆ ದೇವರು ನಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ದೇಶವನ್ನು ನಮಗೆ ಕೊಡುವಂತೆಯೂ ನಾವು ಅದರಲ್ಲಿ ಪ್ರವೇಶ ಮಾಡುವಂತೆಯೂ ನಮ್ಮನ್ನು ಈಜಿಪ್ಟಿನಿಂದ ಬರಮಾಡಿದರು.
24. ನಮಗೆ ಎಂದೆಂದಿಗೂ ಒಳ್ಳೆಯದಾಗುವಂತೆಯೂ, ಇಂದಿನಂತೆ ನಾವು ಬದುಕುವಂತೆಯೂ, ನಾವು ಈ ನಿಯಮಗಳನ್ನೆಲ್ಲಾ ಕೈಗೊಂಡು ನಮ್ಮ ಯೆಹೋವ ದೇವರಿಗೆ ಭಯಪಡಬೇಕೆಂದು ಅವರು ನಮಗೆ ಆಜ್ಞಾಪಿಸಿದ್ದಾರೆ.
25. ಅವರು ನಮಗೆ ಆಜ್ಞಾಪಿಸಿದಂತೆ ನಮ್ಮ ದೇವರಾದ ಯೆಹೋವ ದೇವರ ಮುಂದೆ ಈ ಎಲ್ಲಾ ಆಜ್ಞೆಯನ್ನು ಕೈಗೊಂಡು ನಡೆದರೆ, ಅದು ನಮಗೆ ನೀತಿಯಾಗಿರುವುದು,” ಎಂದು ಹೇಳಬೇಕು. [PE]
ಒಟ್ಟು 34 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 6 / 34
ಯೆಹೋವ ದೇವರನ್ನು ಪ್ರೀತಿಸು 1 ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಬೋಧಿಸಲು ನನಗೆ ನಡೆಸಿದ ಈ ಆಜ್ಞೆಗಳನ್ನೂ, ತೀರ್ಪುಗಳನ್ನೂ, ನಿಯಮಗಳನ್ನೂ ನೀವು ಸ್ವತಂತ್ರಿಸಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ಅನುಸರಿಸಬೇಕಾದವುಗಳು ಇವೇ. 2 ನೀವೂ, ನಿಮ್ಮ ಮಕ್ಕಳೂ, ನಿಮ್ಮ ಮೊಮ್ಮಕ್ಕಳೂ ತಮ್ಮ ಜೀವನದ ದಿವಸಗಳಲ್ಲೆಲ್ಲಾ ನಿಮ್ಮ ದೇವರಾದ ಯೆಹೋವ ದೇವರಿಗೆ ಭಯಪಟ್ಟು, ಕೈಗೊಳ್ಳುವ ಹಾಗೆಯೂ, ನಿಮ್ಮ ದಿವಸಗಳು ಬಹಳವಾಗುವ ಹಾಗೆಯೂ ನಾನು ನಿಮಗೆ ಕೊಡುವ ದೇವರ ಎಲ್ಲಾ ತೀರ್ಪುಗಳನ್ನು ಮತ್ತು ಆಜ್ಞೆಗಳನ್ನು ಅನುಸರಿಸಬೇಕು. 3 ಹೀಗಿರುವುದರಿಂದ ಓ ಇಸ್ರಾಯೇಲರೇ, ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರು ವಾಗ್ದಾನ ಮಾಡಿದ ಪ್ರಕಾರ ಹಾಲೂ ಜೇನೂ ಹರಿಯುವ ದೇಶದಲ್ಲಿ ನಿಮಗೆ ಒಳ್ಳೆಯದಾಗುವ ಹಾಗೆಯೂ ನೀವು ಬಹಳವಾಗಿ ಹೆಚ್ಚುವ ಹಾಗೆಯೂ ಲಕ್ಷ್ಯವಿಟ್ಟು ಕೇಳಿ ವಿಧೇಯರಾಗಿರಿ. 4 ಇಸ್ರಾಯೇಲರೇ, ಕೇಳಿರಿ: ದೇವರಾದ ಯೆಹೋವ ನಮ್ಮ ದೇವರು; ಯೆಹೋವ ದೇವರು ಒಬ್ಬರೇ. 5 ನೀವು ನಿಮ್ಮ ದೇವರಾದ ಯೆಹೋವ ದೇವರನ್ನು ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ, ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು. 6 ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಈ ಮಾತುಗಳು ನಿಮ್ಮ ಹೃದಯದಲ್ಲಿ ಇರಬೇಕು. 7 ಅವುಗಳನ್ನು ನಿಮ್ಮ ಮಕ್ಕಳಿಗೆ ಅಭ್ಯಾಸ ಮಾಡಿಸಿ, ನಿಮ್ಮ ಮನೆಯಲ್ಲಿ ಕೂತಿರುವಾಗಲೂ ಮಾರ್ಗದಲ್ಲಿ ನಡೆಯುವಾಗಲೂ ಮಲಗುವಾಗಲೂ ಏಳುವಾಗಲೂ ಅವುಗಳ ವಿಷಯವಾಗಿ ಮಾತನಾಡಬೇಕು. 8 ಅವುಗಳನ್ನು ಗುರುತಾಗಿ ನಿಮ್ಮ ಕೈಗಳಿಗೆ ಕಟ್ಟಿಕೊಳ್ಳಬೇಕು. ಅವುಗಳನ್ನು ನಿಮ್ಮ ಹಣೆಗೂ ಕಟ್ಟಿಕೊಳ್ಳಬೇಕು. 9 ಅವುಗಳನ್ನು ನಿಮ್ಮ ಮನೆಯ ನಿಲುವು ಪಟ್ಟಿಗಳ ಮೇಲೆಯೂ ನಿಮ್ಮ ಬಾಗಿಲುಗಳ ಮೇಲೆಯೂ ಬರೆಯಬೇಕು. 10 ಇದಲ್ಲದೆ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಪಿತೃಗಳಾದ ಅಬ್ರಹಾಮ, ಇಸಾಕ, ಯಾಕೋಬರಿಗೆ ಪ್ರಮಾಣ ಮಾಡಿದ ದೇಶದಲ್ಲಿ ನಿಮ್ಮನ್ನು ಸೇರಿಸಿ, ನೀವು ಕಟ್ಟಿದ ದೊಡ್ಡದಾದ ಒಳ್ಳೆಯ ಪಟ್ಟಣಗಳನ್ನೂ, 11 ನೀವು ಕೂಡಿಸದ ಉತ್ತಮ ವಸ್ತುಗಳಿಂದ ತುಂಬಿದ ಮನೆಗಳನ್ನೂ, ನೀವು ಅಗೆಯದಿರುವ ಬಾವಿಗಳನ್ನೂ, ನೀವು ನೆಡದ ದ್ರಾಕ್ಷಿತೋಟಗಳನ್ನೂ, ಓಲಿವ್ ತೋಟಗಳನ್ನೂ ನಿಮಗೆ ಕೊಡಲಾಗಿ, ನೀವು ತಿಂದು ತೃಪ್ತರಾಗಿರುವಿರಿ. 12 ಈಜಿಪ್ಟ್ ದೇಶದ ದಾಸತ್ವದ ಮನೆಯೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿದ ಯೆಹೋವ ದೇವರನ್ನು ಮರೆಯದ ಹಾಗೆ ನೋಡಿಕೊಳ್ಳಿರಿ. 13 ನಿಮ್ಮ ದೇವರಾದ ಯೆಹೋವ ದೇವರಿಗೆ ನೀವು ಭಯಪಡಬೇಕು. ಅವರಿಗೆ ಮಾತ್ರವೇ ಸೇವೆ ಸಲ್ಲಿಸಬೇಕು ಮತ್ತು ಅವರ ಹೆಸರಿನಲ್ಲಿ ಆಣೆಯಿಟ್ಟುಕೊಳ್ಳಬೇಕು. 14 ನಿಮ್ಮ ಸುತ್ತಲಿರುವ ಜನರ ದೇವರುಗಳಾಗಿರುವ ಬೇರೆ ದೇವರುಗಳನ್ನು ನೀವು ಹಿಂಬಾಲಿಸಬೇಡಿರಿ. 15 ಏಕೆಂದರೆ ನಿಮ್ಮ ಮಧ್ಯದಲ್ಲಿರುವ ನಿಮ್ಮ ಯೆಹೋವ ದೇವರು ತಮಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ಸ್ವಾಮ್ಯಾಸಕ್ತರಾದ ದೇವರು. ನಿಮ್ಮ ದೇವರ ಕೋಪವು ನಿಮ್ಮ ಮೇಲೆ ಉರಿಯಲು, ಅವರು ನಿಮ್ಮನ್ನು ಭೂಮಿಯ ಮೇಲಿನಿಂದ ತೆಗೆದುಹಾಕುವರು. 16 ನೀವು ಮಸ್ಸದಲ್ಲಿ ಪರೀಕ್ಷಿಸಿದ ಹಾಗೆ ನಿಮ್ಮ ದೇವರಾದ ಯೆಹೋವ ದೇವರನ್ನು ಪರೀಕ್ಷಿಸಬಾರದು. 17 ನಿಮ್ಮ ದೇವರಾದ ಯೆಹೋವ ದೇವರ ಆಜ್ಞೆಗಳನ್ನೂ, ಅವರು ನಿಮಗೆ ನೀಡಿದ ಷರತ್ತುಗಳನ್ನೂ, ಅವರ ತೀರ್ಪುಗಳನ್ನೂ ಎಚ್ಚರಿಕೆಯಿಂದ ಕೈಗೊಳ್ಳಬೇಕು. 18 ನಿಮಗೆ ಒಳ್ಳೆಯದಾಗುವಂತೆಯೂ ಯೆಹೋವ ದೇವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಆ ಒಳ್ಳೆಯ ದೇಶವನ್ನು ನೀವು ಪ್ರವೇಶಿಸಿ ಸ್ವತಂತ್ರಿಸಿಕೊಳ್ಳುವಂತೆಯೂ ಯೆಹೋವ ದೇವರ ದೃಷ್ಟಿಯಲ್ಲಿ ಸರಿಯಾದದ್ದನ್ನೂ, ಒಳ್ಳೆಯದನ್ನೂ ಮಾಡಿರಿ. 19 ಆಗ ಯೆಹೋವ ದೇವರು ತಾವು ಹೇಳಿದಂತೆ ನಿಮ್ಮ ಎಲ್ಲಾ ಶತ್ರುಗಳನ್ನು ನಿಮ್ಮ ಮುಂದೆಯೇ ಓಡಿಸಿಬಿಡುವರು. 20 ಮುಂದಿನ ಕಾಲದಲ್ಲಿ ನಿಮ್ಮ ಮಕ್ಕಳು ನಿಮ್ಮನ್ನು, “ನಮ್ಮ ದೇವರಾದ ಯೆಹೋವ ದೇವರು ಆಜ್ಞಾಪಿಸಿದ ಈ ಷರತ್ತುಗಳ, ತೀರ್ಪುಗಳ ಹಾಗು ನಿಯಮಗಳ ಅರ್ಥ ಏನು?” ಎಂದು ನಿಮ್ಮನ್ನು ಕೇಳುವರು. 21 ಆಗ ನೀವು ಅವರಿಗೆ, “ನಾವು ಈಜಿಪ್ಟ್ ದೇಶದಲ್ಲಿ ಫರೋಹನನಿಗೆ ದಾಸರಾಗಿದ್ದೆವು. ಯೆಹೋವ ದೇವರು ಬಲವಾದ ಕೈಯಿಂದ ನಮ್ಮನ್ನು ಈಜಿಪ್ಟಿನೊಳಗಿಂದ ಹೊರಗೆ ಬರಮಾಡಿದರು. 22 ಯೆಹೋವ ದೇವರು ನಮ್ಮ ಕಣ್ಣ ಮುಂದೆಯೇ ಈಜಿಪ್ಟಿನ ಮೇಲೆಯೂ, ಫರೋಹನ ಮೇಲೆಯೂ, ಅವನ ಎಲ್ಲಾ ಮನೆಯ ಮೇಲೆಯೂ ಭಯಂಕರವಾದ ದೊಡ್ಡ ಗುರುತುಗಳನ್ನೂ, ಅದ್ಭುತಗಳನ್ನೂ ಕಳುಹಿಸಿದರು. 23 ಆದರೆ ದೇವರು ನಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ದೇಶವನ್ನು ನಮಗೆ ಕೊಡುವಂತೆಯೂ ನಾವು ಅದರಲ್ಲಿ ಪ್ರವೇಶ ಮಾಡುವಂತೆಯೂ ನಮ್ಮನ್ನು ಈಜಿಪ್ಟಿನಿಂದ ಬರಮಾಡಿದರು. 24 ನಮಗೆ ಎಂದೆಂದಿಗೂ ಒಳ್ಳೆಯದಾಗುವಂತೆಯೂ, ಇಂದಿನಂತೆ ನಾವು ಬದುಕುವಂತೆಯೂ, ನಾವು ಈ ನಿಯಮಗಳನ್ನೆಲ್ಲಾ ಕೈಗೊಂಡು ನಮ್ಮ ಯೆಹೋವ ದೇವರಿಗೆ ಭಯಪಡಬೇಕೆಂದು ಅವರು ನಮಗೆ ಆಜ್ಞಾಪಿಸಿದ್ದಾರೆ. 25 ಅವರು ನಮಗೆ ಆಜ್ಞಾಪಿಸಿದಂತೆ ನಮ್ಮ ದೇವರಾದ ಯೆಹೋವ ದೇವರ ಮುಂದೆ ಈ ಎಲ್ಲಾ ಆಜ್ಞೆಯನ್ನು ಕೈಗೊಂಡು ನಡೆದರೆ, ಅದು ನಮಗೆ ನೀತಿಯಾಗಿರುವುದು,” ಎಂದು ಹೇಳಬೇಕು.
ಒಟ್ಟು 34 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 6 / 34
×

Alert

×

Kannada Letters Keypad References