ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
1. {#1ಇತರ ಜನರನ್ನು ಹೊರಹಾಕಿದ್ದು } [PS]ನಿಮ್ಮ ದೇವರಾದ ಯೆಹೋವ ದೇವರು ನೀವು ಸ್ವತಂತ್ರಿಸಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ನಿಮ್ಮನ್ನು ಬರಮಾಡಿದಾಗ, ಅವರು ನಿಮಗಿಂತ ದೊಡ್ಡವರೂ ಬಲಿಷ್ಠರೂ ಆದ ಏಳು ಜನಾಂಗಗಳನ್ನು ಎಂದರೆ, ಗಿರ್ಗಾಷಿಯರನ್ನೂ ಹಿತ್ತಿಯರನ್ನೂ ಅಮೋರಿಯರನ್ನೂ ಕಾನಾನ್ಯರನ್ನೂ ಪೆರಿಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ಈ ಪ್ರಕಾರ ಬಹಳ ಜನಾಂಗಗಳನ್ನು ನಿಮ್ಮ ಮುಂದೆಯೇ ಹೊರಡಿಸುವರು.
2. ನಿಮ್ಮ ದೇವರಾದ ಯೆಹೋವ ದೇವರು ಅವರನ್ನು ದಂಡಿಸಿ ಸಂಪೂರ್ಣವಾಗಿ ತೆಗೆದುಹಾಕಿಬಿಡುವರು. ಅವರ ಸಂಗಡ ಒಡಂಬಡಿಕೆ ಮಾಡಿಕೊಳ್ಳಬಾರದು. ಅವರಿಗೆ ದಯೆ ತೋರಿಸಬಾರದು.
3. ಅವರ ಸಂಗಡ ಮದುವೆ ಮಾಡಿಕೊಳ್ಳಬಾರದು. ನಿಮ್ಮ ಪುತ್ರಿಯರನ್ನು ಅವರ ಮಕ್ಕಳಿಗೆ ಕೊಡಬಾರದು. ನಿಮ್ಮ ಪುತ್ರರಿಗೆ ಅವರ ಪುತ್ರಿಯರನ್ನು ತೆಗೆದುಕೊಳ್ಳಬಾರದು.
4. ಏಕೆಂದರೆ ಅವರು ನಿಮ್ಮ ಪುತ್ರರನ್ನು ಬೇರೆ ದೇವರುಗಳನ್ನು ಸೇವಿಸುವ ಹಾಗೆ ನನ್ನಿಂದ ತೊಲಗಿಸಿಬಿಡುವರು. ಆಗ ಯೆಹೋವ ದೇವರು ನಿಮ್ಮ ಮೇಲೆ ಕೋಪಗೊಂಡು, ನಿಮ್ಮನ್ನು ಬೇಗ ದಂಡಿಸಿಬಿಡುವರು.
5. ಅವರ ಬಲಿಪೀಠಗಳನ್ನು ಒಡೆದುಹಾಕಬೇಕು. ಅವರ ಪವಿತ್ರ ಕಲ್ಲುಕಂಬಗಳನ್ನು ಒಡೆದು, ಅಶೇರವೆಂಬ ವಿಗ್ರಹಸ್ತಂಭಗಳನ್ನು ಕಡಿದುಹಾಕಬೇಕು. ಅವರ ಕೆತ್ತಿದ ವಿಗ್ರಹಗಳನ್ನು ಬೆಂಕಿಯಿಂದ ಸುಡಬೇಕು. ನೀವು ಅವರಿಗೆ ಹೀಗೆ ಮಾಡತಕ್ಕದ್ದು.
6. ಏಕೆಂದರೆ ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ಪರಿಶುದ್ಧ ಜನರು. ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಭೂಮಿಯ ಮೇಲಿರುವ ಎಲ್ಲಾ ಜನರೊಳಗಿಂದ ತಮಗೆ ಸ್ವಂತ ಜನರಾಗಿರಲು ತಮ್ಮ ಆಸ್ತಿಯಾಗಿ ಆರಿಸಿಕೊಂಡಿದ್ದಾರೆ. [PE]
7. [PS]ನೀವು ಎಲ್ಲಾ ಜನರಿಗಿಂತ ಹೆಚ್ಚಾಗಿರುವ ಕಾರಣ ಯೆಹೋವ ದೇವರು ನಿಮ್ಮನ್ನು ಪ್ರೀತಿಸಿ ಆರಿಸಿಕೊಳ್ಳಲಿಲ್ಲ. ನೀವು ಎಲ್ಲಾ ಜನರಿಗಿಂತ ಸಂಖ್ಯಾತರು.
8. ಯೆಹೋವ ದೇವರು ನಿಮ್ಮನ್ನು ಪ್ರೀತಿಸಿದ್ದರಿಂದಲೂ, ನಿಮ್ಮ ಪಿತೃಗಳಿಗೆ ಮಾಡಿದ ಪ್ರಮಾಣವನ್ನು ನೆರವೇರಿಸುವುದರಿಂದಲೂ, ಯೆಹೋವ ದೇವರು ನಿಮ್ಮನ್ನು ಬಲವಾದ ಕೈಯಿಂದ ಹೊರಗೆ ಬರಮಾಡಿ ನಿಮ್ಮನ್ನು ಗುಲಾಮತನದಿಂದಲೂ, ಈಜಿಪ್ಟಿನ ಅರಸನಾದ ಫರೋಹನ ಕೈಯಿಂದಲೂ ವಿಮೋಚಿಸಿದರು.
9. ಹೀಗಿರುವುದರಿಂದ ನಿಮ್ಮ ದೇವರಾದ ಯೆಹೋವ ದೇವರು ಒಬ್ಬರೇ ದೇವರು; ಅವರೇ ನಂಬಿಗಸ್ತರಾದ ದೇವರು; ತಮ್ಮನ್ನು ಪ್ರೀತಿಸಿ, ತಮ್ಮ ಆಜ್ಞೆಗಳನ್ನು ಕೈಗೊಳ್ಳುವವರಿಗೆ, ಅವರು ತಮ್ಮ ಒಡಂಬಡಿಕೆಯ ಪ್ರೀತಿಯನ್ನು ಸಾವಿರ ತಲೆಗಳವರೆಗೂ ತೋರಿಸುವರು.
10. ಆದರೆ, [PE][QS]ತಮ್ಮನ್ನು ಹಗೆಮಾಡುವವರಿಗೆ ಮುಯ್ಯಿಗೆ ಮುಯ್ಯಿ ತೀರಿಸಿ, ಅವರನ್ನು ತೆಗೆದುಹಾಕುತ್ತಾರೆ. [QE][QS2]ದೇವರು ತಮ್ಮನ್ನು ಹಗೆಮಾಡುವವರಿಗೆ ತಡಮಾಡದೆ [QE][QS2]ಮುಯ್ಯಿಗೆ ಮುಯ್ಯಿ ತೀರಿಸುತ್ತಾರೆ ಎಂದು ತಿಳಿದುಕೊಳ್ಳಿರಿ. [QE]
11. [MS] ಹೀಗಿರುವುದರಿಂದ ನಾನು ಈ ಹೊತ್ತು ನಿಮಗೆ ಕೊಡುವ ಆಜ್ಞೆಗಳನ್ನೂ, ತೀರ್ಪುಗಳನ್ನೂ, ನಿಯಮಗಳನ್ನು ಕೈಗೊಳ್ಳಬೇಕು. [ME]
12. [PS]ನೀವು ಈ ನ್ಯಾಯಗಳನ್ನು ಕೇಳಿ ಕಾಪಾಡಿ ನಡೆದುಕೊಂಡರೆ, ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಒಡಂಬಡಿಕೆಯನ್ನೂ, ಕರುಣೆಯನ್ನೂ ನಿಮಗೋಸ್ಕರ ನೆರವೇರಿಸುವರು.
13. ಅವರು ನಿಮ್ಮನ್ನು ಪ್ರೀತಿಸಿ, ನಿಮ್ಮನ್ನು ಆಶೀರ್ವದಿಸಿ, ನಿಮ್ಮನ್ನು ಅಭಿವೃದ್ಧಿಗೊಳಿಸಿ ಮತ್ತು ನಿಮಗೆ ಕೊಡುತ್ತೇನೆಂದು ಅವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಆ ದೇಶದಲ್ಲಿ ನಿಮ್ಮ ಗರ್ಭದ ಫಲವನ್ನೂ ಅಂದರೆ, ಭೂಮಿಯ ಹುಟ್ಟುವಳಿಯನ್ನೂ, ನಿಮ್ಮ ಧಾನ್ಯವನ್ನೂ, ನಿಮ್ಮ ಹೊಸ ದ್ರಾಕ್ಷಾರಸವನ್ನೂ, ನಿಮ್ಮ ಎಣ್ಣೆಯನ್ನೂ, ನಿಮ್ಮ ಪಶುಗಳನ್ನೂ, ನಿಮ್ಮ ಕುರಿಗಳ ಮಂದೆಗಳನ್ನೂ ಆಶೀರ್ವದಿಸುವರು.
14. ಎಲ್ಲಾ ಜನರಿಗಿಂತಲೂ ನೀವು ಆಶೀರ್ವಾದಕ್ಕೆ ಪಾತ್ರರಾಗಿರುವಿರಿ. ನಿಮ್ಮೊಳಗೆ ಸ್ತ್ರೀ ಪುರುಷರಲ್ಲಾಗಲಿ, ಹೆಣ್ಣು ಗಂಡು ಪಶುಗಳಲ್ಲಿಯಾಗಲಿ ಬಂಜೆತನವು ಇರುವುದಿಲ್ಲ.
15. ಯೆಹೋವ ದೇವರು ಎಲ್ಲಾ ರೋಗಗಳನ್ನು ನಿಮ್ಮಿಂದ ತೆಗೆದುಬಿಡುವರು. ನಿಮಗೆ ತಿಳಿದಿರುವ ಈಜಿಪ್ಟಿನ ಕ್ರೂರರೋಗಗಳನ್ನು ನಿಮ್ಮ ಮೇಲೆ ಬರಮಾಡದ, ನಿಮ್ಮನ್ನು ಹಗೆಮಾಡುವವರೆಲ್ಲರ ಮೇಲೆ ಅವುಗಳನ್ನು ಬರಮಾಡುವರು.
16. ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಒಪ್ಪಿಸುವ ಜನರನ್ನೆಲ್ಲಾ ನೀವು ಸಂಹರಿಸಬೇಕು. ಅವರ ಮೇಲೆ ನೀವು ಕಟಾಕ್ಷವಿಡಬಾರದು. ಅವರ ದೇವರುಗಳನ್ನು ಆರಾಧಿಸಬಾರದು. ಏಕೆಂದರೆ ಅವು ನಿಮಗೆ ಉರುಲಾಗುವವು. [PE]
17. [PS]“ಈ ಜನಾಂಗದವರು ನಮಗಿಂತ ಹೆಚ್ಚು ಮಂದಿ ಇದ್ದಾರೆ. ನಾವು ಹೇಗೆ ಅವರನ್ನು ವಶಮಾಡಿಕೊಳ್ಳಬೇಕು?” ಎಂದು ನಿಮ್ಮ ಹೃದಯದಲ್ಲಿ ಅಂದುಕೊಳ್ಳುವಿರೋ?
18. ನೀವು ಅವರಿಗೆ ಭಯಪಡಬೇಡಿರಿ. ನಿಮ್ಮ ದೇವರಾದ ಯೆಹೋವ ದೇವರು ಫರೋಹನಿಗೂ, ಎಲ್ಲಾ ಈಜಿಪ್ಟಿನವರಿಗೂ ಮಾಡಿದ್ದನ್ನು
19. ಕಣ್ಣಾರೆ ನೋಡಿದ ದೊಡ್ಡ ಉಪದ್ರವಗಳನ್ನೂ, ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಹೊರಗೆ ಬರಮಾಡಿದಾಗ ಉಂಟಾದ ಗುರುತುಗಳನ್ನೂ, ಅದ್ಭುತಗಳನ್ನೂ, ದೇವರ ಬಲವಾದ ಹಸ್ತವನ್ನೂ, ಚಾಚಿದ ತೋಳನ್ನೂ ನೀವು ಚೆನ್ನಾಗಿ ಜ್ಞಾಪಕಮಾಡಿಕೊಳ್ಳಬೇಕು. ನೀವು ಯಾವ ಜನರಿಗೆ ಭಯಪಡುತ್ತೀರೋ, ಆ ಜನರಿಗೆಲ್ಲಾ ನಿಮ್ಮ ದೇವರಾದ ಯೆಹೋವ ದೇವರು ಹಾಗೆಯೇ ಮಾಡುವರು.
20. ಇದಲ್ಲದೆ ಉಳಿದವರೂ, ನಿಮಗೆ ಮರೆಯಾಗಿ ಉಳುಕೊಂಡವರೂ ನಾಶವಾಗುವ ತನಕ ನಿಮ್ಮ ದೇವರಾದ ಯೆಹೋವ ದೇವರು ಕಣಜದ ಹುಳವನ್ನು ಅವರಲ್ಲಿ ಕಳುಹಿಸುವರು.
21. ಅವರಿಗೆ ಹೆದರಬೇಡಿರಿ. ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ಭಯಭಕ್ತಿಗೆ ಯೋಗ್ಯರಾದ ಮಹಾ ದೇವರಾಗಿ ನಿಮ್ಮ ಮಧ್ಯದಲ್ಲಿದ್ದಾರೆ.
22. ನಿಮ್ಮ ದೇವರಾದ ಯೆಹೋವ ದೇವರು ಆ ಜನಾಂಗಗಳನ್ನು ನಿಮ್ಮ ಮುಂದೆ ಸ್ವಲ್ಪ ಸ್ವಲ್ಪವಾಗಿ ಹೊರಗೆ ಹಾಕುವರು. ನೀವು ಅವರನ್ನು ತ್ವರೆಯಾಗಿ ಸಂಹರಿಸಬಾರದು. ಹಾಗೆ ಮಾಡಿದರೆ, ಕಾಡುಮೃಗಗಳು ಹೆಚ್ಚಾಗಿ ನಿಮಗೆ ತೊಂದರೆಕೊಡುವುವು.
23. ಆದರೂ ನಿಮ್ಮ ದೇವರಾದ ಯೆಹೋವ ದೇವರು ಅವರನ್ನು ನಿಮಗೆ ಒಪ್ಪಿಸಿಬಿಡುವರು. ಅವರು ಸೋತುಹೋಗಿ ಇಲ್ಲದಂತಾಗುವರು.
24. ದೇವರು ಅವರ ಅರಸರನ್ನು ನಿಮಗೆ ಒಪ್ಪಿಸುವರು. ನೀವು ಅವರ ಹೆಸರನ್ನು ಆಕಾಶದ ಕೆಳಗೆ ಇಲ್ಲದ ಹಾಗೆ ದಂಡಿಸುವಿರಿ. ನೀವು ಅವರನ್ನು ನಿರ್ಮೂಲ ಮಾಡುವ ತನಕ ಒಬ್ಬನಾದರೂ ನಿಮ್ಮ ಮುಂದೆ ನಿಲ್ಲಲಾರನು.
25. ಅವರ ದೇವರುಗಳ ವಿಗ್ರಹಗಳನ್ನು ಬೆಂಕಿಯಿಂದ ಸುಡಬೇಕು. ಅವುಗಳ ಮೇಲಿರುವ ಬೆಳ್ಳಿಬಂಗಾರವನ್ನು ಆಶಿಸಿ ನೀವು ತೆಗೆದುಕೊಳ್ಳಬಾರದು. ಅದು ನಿಮಗೆ ಉರುಲಾದೀತು. ಏಕೆಂದರೆ ಅದು ನಿಮ್ಮ ದೇವರಾದ ಯೆಹೋವ ದೇವರಿಗೆ ಅಸಹ್ಯವೇ.
26. ನೀವು ಅದರಂತೆ ಶಾಪಕ್ಕೊಳಗಾಗದ ಹಾಗೆ ಅಸಹ್ಯವಾದದ್ದನ್ನು ನಿಮ್ಮ ಮನೆಗೆ ತೆಗೆದುಕೊಂಡು ಬರಬಾರದು. ಅದನ್ನು ಕೆಟ್ಟದಾಗಿ ಪರಿಗಣಿಸಿ ಮತ್ತು ಅದನ್ನು ಸಂಪೂರ್ಣವಾಗಿ ಅಸಹ್ಯಿಸಬೇಕು, ಏಕೆಂದರೆ ಅದು ಶಾಪಗ್ರಸ್ತವಾದದ್ದು. [PE]
ಒಟ್ಟು 34 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 7 / 34
ಇತರ ಜನರನ್ನು ಹೊರಹಾಕಿದ್ದು 1 ನಿಮ್ಮ ದೇವರಾದ ಯೆಹೋವ ದೇವರು ನೀವು ಸ್ವತಂತ್ರಿಸಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ನಿಮ್ಮನ್ನು ಬರಮಾಡಿದಾಗ, ಅವರು ನಿಮಗಿಂತ ದೊಡ್ಡವರೂ ಬಲಿಷ್ಠರೂ ಆದ ಏಳು ಜನಾಂಗಗಳನ್ನು ಎಂದರೆ, ಗಿರ್ಗಾಷಿಯರನ್ನೂ ಹಿತ್ತಿಯರನ್ನೂ ಅಮೋರಿಯರನ್ನೂ ಕಾನಾನ್ಯರನ್ನೂ ಪೆರಿಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ಈ ಪ್ರಕಾರ ಬಹಳ ಜನಾಂಗಗಳನ್ನು ನಿಮ್ಮ ಮುಂದೆಯೇ ಹೊರಡಿಸುವರು. 2 ನಿಮ್ಮ ದೇವರಾದ ಯೆಹೋವ ದೇವರು ಅವರನ್ನು ದಂಡಿಸಿ ಸಂಪೂರ್ಣವಾಗಿ ತೆಗೆದುಹಾಕಿಬಿಡುವರು. ಅವರ ಸಂಗಡ ಒಡಂಬಡಿಕೆ ಮಾಡಿಕೊಳ್ಳಬಾರದು. ಅವರಿಗೆ ದಯೆ ತೋರಿಸಬಾರದು. 3 ಅವರ ಸಂಗಡ ಮದುವೆ ಮಾಡಿಕೊಳ್ಳಬಾರದು. ನಿಮ್ಮ ಪುತ್ರಿಯರನ್ನು ಅವರ ಮಕ್ಕಳಿಗೆ ಕೊಡಬಾರದು. ನಿಮ್ಮ ಪುತ್ರರಿಗೆ ಅವರ ಪುತ್ರಿಯರನ್ನು ತೆಗೆದುಕೊಳ್ಳಬಾರದು. 4 ಏಕೆಂದರೆ ಅವರು ನಿಮ್ಮ ಪುತ್ರರನ್ನು ಬೇರೆ ದೇವರುಗಳನ್ನು ಸೇವಿಸುವ ಹಾಗೆ ನನ್ನಿಂದ ತೊಲಗಿಸಿಬಿಡುವರು. ಆಗ ಯೆಹೋವ ದೇವರು ನಿಮ್ಮ ಮೇಲೆ ಕೋಪಗೊಂಡು, ನಿಮ್ಮನ್ನು ಬೇಗ ದಂಡಿಸಿಬಿಡುವರು. 5 ಅವರ ಬಲಿಪೀಠಗಳನ್ನು ಒಡೆದುಹಾಕಬೇಕು. ಅವರ ಪವಿತ್ರ ಕಲ್ಲುಕಂಬಗಳನ್ನು ಒಡೆದು, ಅಶೇರವೆಂಬ ವಿಗ್ರಹಸ್ತಂಭಗಳನ್ನು ಕಡಿದುಹಾಕಬೇಕು. ಅವರ ಕೆತ್ತಿದ ವಿಗ್ರಹಗಳನ್ನು ಬೆಂಕಿಯಿಂದ ಸುಡಬೇಕು. ನೀವು ಅವರಿಗೆ ಹೀಗೆ ಮಾಡತಕ್ಕದ್ದು. 6 ಏಕೆಂದರೆ ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ಪರಿಶುದ್ಧ ಜನರು. ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಭೂಮಿಯ ಮೇಲಿರುವ ಎಲ್ಲಾ ಜನರೊಳಗಿಂದ ತಮಗೆ ಸ್ವಂತ ಜನರಾಗಿರಲು ತಮ್ಮ ಆಸ್ತಿಯಾಗಿ ಆರಿಸಿಕೊಂಡಿದ್ದಾರೆ. 7 ನೀವು ಎಲ್ಲಾ ಜನರಿಗಿಂತ ಹೆಚ್ಚಾಗಿರುವ ಕಾರಣ ಯೆಹೋವ ದೇವರು ನಿಮ್ಮನ್ನು ಪ್ರೀತಿಸಿ ಆರಿಸಿಕೊಳ್ಳಲಿಲ್ಲ. ನೀವು ಎಲ್ಲಾ ಜನರಿಗಿಂತ ಸಂಖ್ಯಾತರು. 8 ಯೆಹೋವ ದೇವರು ನಿಮ್ಮನ್ನು ಪ್ರೀತಿಸಿದ್ದರಿಂದಲೂ, ನಿಮ್ಮ ಪಿತೃಗಳಿಗೆ ಮಾಡಿದ ಪ್ರಮಾಣವನ್ನು ನೆರವೇರಿಸುವುದರಿಂದಲೂ, ಯೆಹೋವ ದೇವರು ನಿಮ್ಮನ್ನು ಬಲವಾದ ಕೈಯಿಂದ ಹೊರಗೆ ಬರಮಾಡಿ ನಿಮ್ಮನ್ನು ಗುಲಾಮತನದಿಂದಲೂ, ಈಜಿಪ್ಟಿನ ಅರಸನಾದ ಫರೋಹನ ಕೈಯಿಂದಲೂ ವಿಮೋಚಿಸಿದರು. 9 ಹೀಗಿರುವುದರಿಂದ ನಿಮ್ಮ ದೇವರಾದ ಯೆಹೋವ ದೇವರು ಒಬ್ಬರೇ ದೇವರು; ಅವರೇ ನಂಬಿಗಸ್ತರಾದ ದೇವರು; ತಮ್ಮನ್ನು ಪ್ರೀತಿಸಿ, ತಮ್ಮ ಆಜ್ಞೆಗಳನ್ನು ಕೈಗೊಳ್ಳುವವರಿಗೆ, ಅವರು ತಮ್ಮ ಒಡಂಬಡಿಕೆಯ ಪ್ರೀತಿಯನ್ನು ಸಾವಿರ ತಲೆಗಳವರೆಗೂ ತೋರಿಸುವರು. 10 ಆದರೆ, ತಮ್ಮನ್ನು ಹಗೆಮಾಡುವವರಿಗೆ ಮುಯ್ಯಿಗೆ ಮುಯ್ಯಿ ತೀರಿಸಿ, ಅವರನ್ನು ತೆಗೆದುಹಾಕುತ್ತಾರೆ. ದೇವರು ತಮ್ಮನ್ನು ಹಗೆಮಾಡುವವರಿಗೆ ತಡಮಾಡದೆ ಮುಯ್ಯಿಗೆ ಮುಯ್ಯಿ ತೀರಿಸುತ್ತಾರೆ ಎಂದು ತಿಳಿದುಕೊಳ್ಳಿರಿ. 11 ಹೀಗಿರುವುದರಿಂದ ನಾನು ಈ ಹೊತ್ತು ನಿಮಗೆ ಕೊಡುವ ಆಜ್ಞೆಗಳನ್ನೂ, ತೀರ್ಪುಗಳನ್ನೂ, ನಿಯಮಗಳನ್ನು ಕೈಗೊಳ್ಳಬೇಕು. 12 ನೀವು ಈ ನ್ಯಾಯಗಳನ್ನು ಕೇಳಿ ಕಾಪಾಡಿ ನಡೆದುಕೊಂಡರೆ, ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಒಡಂಬಡಿಕೆಯನ್ನೂ, ಕರುಣೆಯನ್ನೂ ನಿಮಗೋಸ್ಕರ ನೆರವೇರಿಸುವರು. 13 ಅವರು ನಿಮ್ಮನ್ನು ಪ್ರೀತಿಸಿ, ನಿಮ್ಮನ್ನು ಆಶೀರ್ವದಿಸಿ, ನಿಮ್ಮನ್ನು ಅಭಿವೃದ್ಧಿಗೊಳಿಸಿ ಮತ್ತು ನಿಮಗೆ ಕೊಡುತ್ತೇನೆಂದು ಅವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಆ ದೇಶದಲ್ಲಿ ನಿಮ್ಮ ಗರ್ಭದ ಫಲವನ್ನೂ ಅಂದರೆ, ಭೂಮಿಯ ಹುಟ್ಟುವಳಿಯನ್ನೂ, ನಿಮ್ಮ ಧಾನ್ಯವನ್ನೂ, ನಿಮ್ಮ ಹೊಸ ದ್ರಾಕ್ಷಾರಸವನ್ನೂ, ನಿಮ್ಮ ಎಣ್ಣೆಯನ್ನೂ, ನಿಮ್ಮ ಪಶುಗಳನ್ನೂ, ನಿಮ್ಮ ಕುರಿಗಳ ಮಂದೆಗಳನ್ನೂ ಆಶೀರ್ವದಿಸುವರು. 14 ಎಲ್ಲಾ ಜನರಿಗಿಂತಲೂ ನೀವು ಆಶೀರ್ವಾದಕ್ಕೆ ಪಾತ್ರರಾಗಿರುವಿರಿ. ನಿಮ್ಮೊಳಗೆ ಸ್ತ್ರೀ ಪುರುಷರಲ್ಲಾಗಲಿ, ಹೆಣ್ಣು ಗಂಡು ಪಶುಗಳಲ್ಲಿಯಾಗಲಿ ಬಂಜೆತನವು ಇರುವುದಿಲ್ಲ. 15 ಯೆಹೋವ ದೇವರು ಎಲ್ಲಾ ರೋಗಗಳನ್ನು ನಿಮ್ಮಿಂದ ತೆಗೆದುಬಿಡುವರು. ನಿಮಗೆ ತಿಳಿದಿರುವ ಈಜಿಪ್ಟಿನ ಕ್ರೂರರೋಗಗಳನ್ನು ನಿಮ್ಮ ಮೇಲೆ ಬರಮಾಡದ, ನಿಮ್ಮನ್ನು ಹಗೆಮಾಡುವವರೆಲ್ಲರ ಮೇಲೆ ಅವುಗಳನ್ನು ಬರಮಾಡುವರು. 16 ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಒಪ್ಪಿಸುವ ಜನರನ್ನೆಲ್ಲಾ ನೀವು ಸಂಹರಿಸಬೇಕು. ಅವರ ಮೇಲೆ ನೀವು ಕಟಾಕ್ಷವಿಡಬಾರದು. ಅವರ ದೇವರುಗಳನ್ನು ಆರಾಧಿಸಬಾರದು. ಏಕೆಂದರೆ ಅವು ನಿಮಗೆ ಉರುಲಾಗುವವು. 17 “ಈ ಜನಾಂಗದವರು ನಮಗಿಂತ ಹೆಚ್ಚು ಮಂದಿ ಇದ್ದಾರೆ. ನಾವು ಹೇಗೆ ಅವರನ್ನು ವಶಮಾಡಿಕೊಳ್ಳಬೇಕು?” ಎಂದು ನಿಮ್ಮ ಹೃದಯದಲ್ಲಿ ಅಂದುಕೊಳ್ಳುವಿರೋ? 18 ನೀವು ಅವರಿಗೆ ಭಯಪಡಬೇಡಿರಿ. ನಿಮ್ಮ ದೇವರಾದ ಯೆಹೋವ ದೇವರು ಫರೋಹನಿಗೂ, ಎಲ್ಲಾ ಈಜಿಪ್ಟಿನವರಿಗೂ ಮಾಡಿದ್ದನ್ನು 19 ಕಣ್ಣಾರೆ ನೋಡಿದ ದೊಡ್ಡ ಉಪದ್ರವಗಳನ್ನೂ, ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಹೊರಗೆ ಬರಮಾಡಿದಾಗ ಉಂಟಾದ ಗುರುತುಗಳನ್ನೂ, ಅದ್ಭುತಗಳನ್ನೂ, ದೇವರ ಬಲವಾದ ಹಸ್ತವನ್ನೂ, ಚಾಚಿದ ತೋಳನ್ನೂ ನೀವು ಚೆನ್ನಾಗಿ ಜ್ಞಾಪಕಮಾಡಿಕೊಳ್ಳಬೇಕು. ನೀವು ಯಾವ ಜನರಿಗೆ ಭಯಪಡುತ್ತೀರೋ, ಆ ಜನರಿಗೆಲ್ಲಾ ನಿಮ್ಮ ದೇವರಾದ ಯೆಹೋವ ದೇವರು ಹಾಗೆಯೇ ಮಾಡುವರು. 20 ಇದಲ್ಲದೆ ಉಳಿದವರೂ, ನಿಮಗೆ ಮರೆಯಾಗಿ ಉಳುಕೊಂಡವರೂ ನಾಶವಾಗುವ ತನಕ ನಿಮ್ಮ ದೇವರಾದ ಯೆಹೋವ ದೇವರು ಕಣಜದ ಹುಳವನ್ನು ಅವರಲ್ಲಿ ಕಳುಹಿಸುವರು. 21 ಅವರಿಗೆ ಹೆದರಬೇಡಿರಿ. ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ಭಯಭಕ್ತಿಗೆ ಯೋಗ್ಯರಾದ ಮಹಾ ದೇವರಾಗಿ ನಿಮ್ಮ ಮಧ್ಯದಲ್ಲಿದ್ದಾರೆ. 22 ನಿಮ್ಮ ದೇವರಾದ ಯೆಹೋವ ದೇವರು ಆ ಜನಾಂಗಗಳನ್ನು ನಿಮ್ಮ ಮುಂದೆ ಸ್ವಲ್ಪ ಸ್ವಲ್ಪವಾಗಿ ಹೊರಗೆ ಹಾಕುವರು. ನೀವು ಅವರನ್ನು ತ್ವರೆಯಾಗಿ ಸಂಹರಿಸಬಾರದು. ಹಾಗೆ ಮಾಡಿದರೆ, ಕಾಡುಮೃಗಗಳು ಹೆಚ್ಚಾಗಿ ನಿಮಗೆ ತೊಂದರೆಕೊಡುವುವು. 23 ಆದರೂ ನಿಮ್ಮ ದೇವರಾದ ಯೆಹೋವ ದೇವರು ಅವರನ್ನು ನಿಮಗೆ ಒಪ್ಪಿಸಿಬಿಡುವರು. ಅವರು ಸೋತುಹೋಗಿ ಇಲ್ಲದಂತಾಗುವರು. 24 ದೇವರು ಅವರ ಅರಸರನ್ನು ನಿಮಗೆ ಒಪ್ಪಿಸುವರು. ನೀವು ಅವರ ಹೆಸರನ್ನು ಆಕಾಶದ ಕೆಳಗೆ ಇಲ್ಲದ ಹಾಗೆ ದಂಡಿಸುವಿರಿ. ನೀವು ಅವರನ್ನು ನಿರ್ಮೂಲ ಮಾಡುವ ತನಕ ಒಬ್ಬನಾದರೂ ನಿಮ್ಮ ಮುಂದೆ ನಿಲ್ಲಲಾರನು. 25 ಅವರ ದೇವರುಗಳ ವಿಗ್ರಹಗಳನ್ನು ಬೆಂಕಿಯಿಂದ ಸುಡಬೇಕು. ಅವುಗಳ ಮೇಲಿರುವ ಬೆಳ್ಳಿಬಂಗಾರವನ್ನು ಆಶಿಸಿ ನೀವು ತೆಗೆದುಕೊಳ್ಳಬಾರದು. ಅದು ನಿಮಗೆ ಉರುಲಾದೀತು. ಏಕೆಂದರೆ ಅದು ನಿಮ್ಮ ದೇವರಾದ ಯೆಹೋವ ದೇವರಿಗೆ ಅಸಹ್ಯವೇ. 26 ನೀವು ಅದರಂತೆ ಶಾಪಕ್ಕೊಳಗಾಗದ ಹಾಗೆ ಅಸಹ್ಯವಾದದ್ದನ್ನು ನಿಮ್ಮ ಮನೆಗೆ ತೆಗೆದುಕೊಂಡು ಬರಬಾರದು. ಅದನ್ನು ಕೆಟ್ಟದಾಗಿ ಪರಿಗಣಿಸಿ ಮತ್ತು ಅದನ್ನು ಸಂಪೂರ್ಣವಾಗಿ ಅಸಹ್ಯಿಸಬೇಕು, ಏಕೆಂದರೆ ಅದು ಶಾಪಗ್ರಸ್ತವಾದದ್ದು.
ಒಟ್ಟು 34 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 7 / 34
×

Alert

×

Kannada Letters Keypad References