ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಸಂಗಿ
1. {#1ನೀರಿನ ಮೇಲೆ ರೊಟ್ಟಿ } [QS]ನಿನ್ನ ಆಹಾರ ಧಾನ್ಯವನ್ನು ಹೊರನಾಡಿನ ವ್ಯಾಪಾರಕ್ಕೆ ಕಳುಹಿಸು. [QE][QS2]ಬಹಳ ದಿನಗಳ ಮೇಲೆ ಅದರಿಂದ ನಿನಗೆ ಲಾಭ ಸಿಗುವುದು. [QE]
2. [QS]ನಿನ್ನ ಹಣವನ್ನು ಏಳೆಂಟು ಮಂದಿಗೆ ವೆಚ್ಚಮಾಡು. [QE][QS2]ಏಕೆಂದರೆ ಭೂಮಿಯ ಮೇಲೆ ಮುಂದೆ ಯಾವ ವಿಪತ್ತು ಬರುವುದೋ ನಿನಗೆ ತಿಳಿಯದು. [QE][PBR]
3. [QS]ಮೋಡಗಳು ಮಳೆಯಿಂದ ತುಂಬಿದ್ದರೆ, [QE][QS2]ಅವು ಭೂಮಿಯ ಮೇಲೆ ಸುರಿದುಬಿಡುತ್ತವೆ. [QE][QS]ಮರವು ಉತ್ತರ ಇಲ್ಲವೆ ದಕ್ಷಿಣಕ್ಕೆ ಬಿದ್ದರೆ, [QE][QS2]ಆ ಮರವು ಬಿದ್ದ ಸ್ಥಳದಲ್ಲಿಯೇ ಇರುವುದು. [QE]
4. [QS]ಯಾವನು ಗಾಳಿಗಾಗಿ ಕಾದಿರುವನೋ, ಅವನು ಬೀಜ ಬಿತ್ತುವುದಿಲ್ಲ. [QE][QS2]ಮೋಡಗಳನ್ನು ಗಮನಿಸುತ್ತಿರುವವನು ಸಹ ಪೈರು ಕೊಯ್ಯುವುದಿಲ್ಲ. [QE][PBR]
5. [QS]ಗಾಳಿಯ ಚಲನೆಯನ್ನಾಗಲಿ [QE][QS2]ಗರ್ಭಿಣಿಯ ಭ್ರೂಣದ ಬೆಳವಣಿಗೆಯನ್ನಾಗಲಿ ನೀನು ಹೇಗೆ ಗ್ರಹಿಸಲಾರೆಯೋ, [QE][QS]ಹಾಗೆಯೇ, ಸರ್ವ ಸೃಷ್ಟಿಕರ್ತ ಆಗಿರುವ [QE][QS2]ದೇವರ ಕೆಲಸವನ್ನು ನೀನು ಗ್ರಹಿಸಲಾರೆ. [QE][PBR]
6. [QS]ಬೆಳಿಗ್ಗೆ ನಿನ್ನ ಬೀಜವನ್ನು ಬಿತ್ತು. [QE][QS2]ಸಾಯಂಕಾಲದವರೆಗೂ ನಿನ್ನ ಕೈಗೆ ಬಿಡುವು ಕೊಡಬೇಡ. [QE][QS]ಏಕೆಂದರೆ ಇದು ಸಫಲವೋ ಅದು ಸಫಲವೋ ನಿನಗೆ ತಿಳಿಯದು. [QE][QS2]ಎರಡೂ ಒಳ್ಳೆಯ ಬೆಳೆಯನ್ನು ಕೊಡಲು ಸಾಧ್ಯವಿದೆ. [QE]
7. {#1ಸೃಷ್ಟಿಕರ್ತ ದೇವರನ್ನು ಸ್ಮರಿಸು } [QS]ಬೆಳಕು ಹಿತಕರ. [QE][QS2]ಸೂರ್ಯನ ಕಾಂತಿ ಕಣ್ಣುಗಳಿಗೆ ಮೆಚ್ಚಿಕೆ. [QE]
8. [QS]ಒಬ್ಬನು ಅನೇಕ ವರ್ಷಗಳು ಬದುಕಿ, [QE][QS2]ಅವುಗಳಲ್ಲೆಲ್ಲಾ ಸಂತೋಷಪಟ್ಟರೂ [QE][QS]ಕತ್ತಲೆಯ ದಿನಗಳನ್ನು ನೆನಪಿಸಿಕೊಳ್ಳಲಿ, [QE][QS2]ಏಕೆಂದರೆ ಅಂಥ ದಿನಗಳು ಬಹಳ. [QE][QS2]ಮುಂದಾಗುವುದೆಲ್ಲವೂ ವ್ಯರ್ಥವೇ. [QE][PBR]
9. [QS]ಯುವಕನೇ, ನಿನ್ನ ಯೌವನದಲ್ಲಿ ಸಂತೋಷಪಡು. [QE][QS2]ಯೌವನದ ದಿನಗಳಲ್ಲಿ ನಿನ್ನ ಹೃದಯವು ನಿನ್ನನ್ನು ಆನಂದಪಡಿಸಲಿ. [QE][QS]ನೀನು ನಿನ್ನ ಮನಸ್ಸಿಗೆ ಬಂದಂತೆಯೂ [QE][QS2]ನಿನ್ನ ಕಣ್ಣಿನ ನೋಟದಂತೆಯೂ ನಡೆ. [QE][QS]ಆದರೆ ಈ ಎಲ್ಲಾ ಸಂಗತಿಗಳಿಗಾಗಿ [QE][QS2]ದೇವರು ನಿನ್ನನ್ನು ನ್ಯಾಯವಿಚಾರಿಸುವರು ಎಂದು ತಿಳಿದುಕೋ. [QE]
10. [QS]ಆದ್ದರಿಂದ ನಿನ್ನ ಹೃದಯದಿಂದ ಚಿಂತೆಯನ್ನು ತೆಗೆದುಹಾಕು. [QE][QS2]ನಿನ್ನ ಶರೀರದಿಂದ ಕೆಟ್ಟದ್ದನ್ನು ದೂರಮಾಡು. [QE][QS2]ಯೌವನವೂ ಅದರ ಚೈತನ್ಯವೂ ಅಲ್ಪಕಾಲವೇ. [QE][PBR]
ಒಟ್ಟು 12 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 11 / 12
1 2 3 4 5 6 7 8 9 10 11 12
ನೀರಿನ ಮೇಲೆ ರೊಟ್ಟಿ 1 ನಿನ್ನ ಆಹಾರ ಧಾನ್ಯವನ್ನು ಹೊರನಾಡಿನ ವ್ಯಾಪಾರಕ್ಕೆ ಕಳುಹಿಸು. ಬಹಳ ದಿನಗಳ ಮೇಲೆ ಅದರಿಂದ ನಿನಗೆ ಲಾಭ ಸಿಗುವುದು. 2 ನಿನ್ನ ಹಣವನ್ನು ಏಳೆಂಟು ಮಂದಿಗೆ ವೆಚ್ಚಮಾಡು. ಏಕೆಂದರೆ ಭೂಮಿಯ ಮೇಲೆ ಮುಂದೆ ಯಾವ ವಿಪತ್ತು ಬರುವುದೋ ನಿನಗೆ ತಿಳಿಯದು. 3 ಮೋಡಗಳು ಮಳೆಯಿಂದ ತುಂಬಿದ್ದರೆ, ಅವು ಭೂಮಿಯ ಮೇಲೆ ಸುರಿದುಬಿಡುತ್ತವೆ. ಮರವು ಉತ್ತರ ಇಲ್ಲವೆ ದಕ್ಷಿಣಕ್ಕೆ ಬಿದ್ದರೆ, ಆ ಮರವು ಬಿದ್ದ ಸ್ಥಳದಲ್ಲಿಯೇ ಇರುವುದು. 4 ಯಾವನು ಗಾಳಿಗಾಗಿ ಕಾದಿರುವನೋ, ಅವನು ಬೀಜ ಬಿತ್ತುವುದಿಲ್ಲ. ಮೋಡಗಳನ್ನು ಗಮನಿಸುತ್ತಿರುವವನು ಸಹ ಪೈರು ಕೊಯ್ಯುವುದಿಲ್ಲ. 5 ಗಾಳಿಯ ಚಲನೆಯನ್ನಾಗಲಿ ಗರ್ಭಿಣಿಯ ಭ್ರೂಣದ ಬೆಳವಣಿಗೆಯನ್ನಾಗಲಿ ನೀನು ಹೇಗೆ ಗ್ರಹಿಸಲಾರೆಯೋ, ಹಾಗೆಯೇ, ಸರ್ವ ಸೃಷ್ಟಿಕರ್ತ ಆಗಿರುವ ದೇವರ ಕೆಲಸವನ್ನು ನೀನು ಗ್ರಹಿಸಲಾರೆ. 6 ಬೆಳಿಗ್ಗೆ ನಿನ್ನ ಬೀಜವನ್ನು ಬಿತ್ತು. ಸಾಯಂಕಾಲದವರೆಗೂ ನಿನ್ನ ಕೈಗೆ ಬಿಡುವು ಕೊಡಬೇಡ. ಏಕೆಂದರೆ ಇದು ಸಫಲವೋ ಅದು ಸಫಲವೋ ನಿನಗೆ ತಿಳಿಯದು. ಎರಡೂ ಒಳ್ಳೆಯ ಬೆಳೆಯನ್ನು ಕೊಡಲು ಸಾಧ್ಯವಿದೆ. ಸೃಷ್ಟಿಕರ್ತ ದೇವರನ್ನು ಸ್ಮರಿಸು 7 ಬೆಳಕು ಹಿತಕರ. ಸೂರ್ಯನ ಕಾಂತಿ ಕಣ್ಣುಗಳಿಗೆ ಮೆಚ್ಚಿಕೆ. 8 ಒಬ್ಬನು ಅನೇಕ ವರ್ಷಗಳು ಬದುಕಿ, ಅವುಗಳಲ್ಲೆಲ್ಲಾ ಸಂತೋಷಪಟ್ಟರೂ ಕತ್ತಲೆಯ ದಿನಗಳನ್ನು ನೆನಪಿಸಿಕೊಳ್ಳಲಿ, ಏಕೆಂದರೆ ಅಂಥ ದಿನಗಳು ಬಹಳ. ಮುಂದಾಗುವುದೆಲ್ಲವೂ ವ್ಯರ್ಥವೇ. 9 ಯುವಕನೇ, ನಿನ್ನ ಯೌವನದಲ್ಲಿ ಸಂತೋಷಪಡು. ಯೌವನದ ದಿನಗಳಲ್ಲಿ ನಿನ್ನ ಹೃದಯವು ನಿನ್ನನ್ನು ಆನಂದಪಡಿಸಲಿ. ನೀನು ನಿನ್ನ ಮನಸ್ಸಿಗೆ ಬಂದಂತೆಯೂ ನಿನ್ನ ಕಣ್ಣಿನ ನೋಟದಂತೆಯೂ ನಡೆ. ಆದರೆ ಈ ಎಲ್ಲಾ ಸಂಗತಿಗಳಿಗಾಗಿ ದೇವರು ನಿನ್ನನ್ನು ನ್ಯಾಯವಿಚಾರಿಸುವರು ಎಂದು ತಿಳಿದುಕೋ. 10 ಆದ್ದರಿಂದ ನಿನ್ನ ಹೃದಯದಿಂದ ಚಿಂತೆಯನ್ನು ತೆಗೆದುಹಾಕು. ನಿನ್ನ ಶರೀರದಿಂದ ಕೆಟ್ಟದ್ದನ್ನು ದೂರಮಾಡು. ಯೌವನವೂ ಅದರ ಚೈತನ್ಯವೂ ಅಲ್ಪಕಾಲವೇ.
ಒಟ್ಟು 12 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 11 / 12
1 2 3 4 5 6 7 8 9 10 11 12
×

Alert

×

Kannada Letters Keypad References