1. {#1ಜ್ಞಾನ } [QS]ಅಮೂಲ್ಯವಾದ ಸುಗಂಧ ತೈಲಕ್ಕಿಂತ ಒಳ್ಳೆಯ ಹೆಸರು ಉತ್ತಮ. [QE][QS2]ಒಬ್ಬನ ಜನ್ಮ ದಿನಕ್ಕಿಂತ ಮರಣದ ದಿನವೇ ಮೇಲು. [QE]
2. [QS]ಔತಣದ ಮನೆಗೆ ಹೋಗುವುದಕ್ಕಿಂತ, [QE][QS2]ಶೋಕದ ಮನೆಗೆ ಹೋಗುವುದು ಲೇಸು. [QE][QS]ಏಕೆಂದರೆ ಎಲ್ಲಾ ಮನುಷ್ಯರ ಅಂತ್ಯವು ಸಾವಾಗಿದೆ. [QE][QS2]ಇದರಿಂದ ಜೀವಂತರು ಇದನ್ನು ತಮ್ಮ ಹೃದಯದಲ್ಲಿ ಸ್ಮರಿಸಿಕೊಳ್ಳುವರು. [QE]
3. [QS]ನಗೆಗಿಂತ ದುಃಖವು ವಾಸಿ, [QE][QS2]ಏಕೆಂದರೆ ಮುಖದಲ್ಲಿ ದುಃಖ ಹೃದಯಕ್ಕೆ ಸುಖ. [QE]
4. [QS]ಜ್ಞಾನಿಗಳ ಹೃದಯವು ಶೋಕದ ಮನೆಯಲ್ಲಿರುವುದು, [QE][QS2]ಆದರೆ ಮೂಢರ ಹೃದಯವು ಉಲ್ಲಾಸದ ಮನೆಯಲ್ಲಿರುವುದು. [QE]
5. [QS]ಮೂಢರ ಹಾಡನ್ನು ಕೇಳುವುದಕ್ಕಿಂತ, [QE][QS2]ಜ್ಞಾನಿಗಳ ಗದರಿಕೆಯನ್ನು ಕೇಳುವುದು ಲೇಸು. [QE]
6. [QS]ಗಡಿಗೆಯ ಕೆಳಗೆ ಉರಿಯುವ ಮುಳ್ಳುಕಡ್ಡಿ ಚಟಚಟನೆಯ ಶಬ್ದ ಹೇಗೋ, [QE][QS2]ಮೂಢನ ನಗುವು ಹಾಗೆಯೇ ಇರುವುದು. [QE][QS2]ಇದು ಕೂಡ ವ್ಯರ್ಥವೇ. [QE][PBR]
7. [QS]ದಬ್ಬಾಳಿಕೆ ಜ್ಞಾನಿಯನ್ನು ಮೂರ್ಖನನ್ನಾಗಿ ಮಾಡುತ್ತದೆ. [QE][QS2]ಲಂಚವು ಹೃದಯವನ್ನು ಕೆಡಿಸುತ್ತದೆ. [QE][PBR]
8. [QS]ಪ್ರಾರಂಭಕ್ಕಿಂತ ಅದರ ಅಂತ್ಯವೇ ಲೇಸು. [QE][QS2]ಗರ್ವಿಷ್ಠನಿಗಿಂತ ತಾಳ್ಮೆಯುಳ್ಳವನೇ ಉತ್ತಮ. [QE]
9. [QS]ನೀನು ಕೋಪಿಸಿಕೊಳ್ಳುವುದಕ್ಕೆ ಆತುರಪಡದಿರು, [QE][QS2]ಏಕೆಂದರೆ ಕೋಪವು ಮೂಢರ ಎದೆಯಲ್ಲಿ ನೆಲೆಗೊಳ್ಳುತ್ತದೆ. [QE][PBR]
10. [QS]“ಹಿಂದಿನ ಕಾಲ ಈಗಿನ ಕಾಲಕ್ಕಿಂತ ಮೇಲಾಗಿರುವುದಕ್ಕೆ ಕಾರಣ ಏನು?” ಎಂದು ನೀನು ಕೇಳಬೇಡ. [QE][QS2]ಇದು ಬುದ್ಧಿವಂತರು ಕೇಳುವ ಪ್ರಶ್ನೆಯಲ್ಲ. [QE][PBR]
11. [QS]ಜ್ಞಾನವು ಆಸ್ತಿಯ ಹಾಗೆ ಒಳ್ಳೆಯದು; [QE][QS2]ಅದರಿಂದ ಜೀವಂತರೆಲ್ಲರಿಗೂ ಲಾಭಕರ. [QE]
12. [QS]ಧನವು ಹೇಗೋ [QE][QS2]ಹಾಗೆ ಜ್ಞಾನವು ಆಶ್ರಯ. [QE][QS]ಆದರೆ ಜ್ಞಾನದ ಶ್ರೇಷ್ಠತೆ ಏನೆಂದರೆ, [QE][QS2]ಅದು ಜ್ಞಾನಿಗೆ ಜೀವದಾಯಕ. [QE]
13. [PS]ದೇವರ ಸೃಷ್ಟಿಕಾರ್ಯವನ್ನು ಯೋಚಿಸು: [PE][QS]ದೇವರು ಮಾಡಿದ್ದನ್ನು, [QE][QS2]ಪುನಃ ಸರಿಪಡಿಸಲು ಯಾರಿಗೆ ಸಾಧ್ಯ? [QE]
14. [QS]ಸುಖ ದಿನದಲ್ಲಿ ಸಂತೋಷವಾಗಿರು. [QE][QS2]ಆದರೆ ದುಃಖ ದಿನದಲ್ಲಿ ಇದನ್ನು ಯೋಚಿಸು: [QE][QS]ದೇವರು ಇವುಗಳನ್ನು ಒಂದರ ಮೇಲೊಂದನ್ನು ಬರಮಾಡುತ್ತಾರೆ. [QE][QS2]ಹೀಗೆ ಮನುಷ್ಯನು ತನ್ನ ಆಯುಸ್ಸನ್ನು ಕಳೆದ ಮೇಲೆ ಭವಿಷ್ಯವನ್ನು ಗ್ರಹಿಸಲಾರನು. [QE]
15. [PS]ನನ್ನ ವ್ಯರ್ಥದ ದಿನಗಳಲ್ಲಿ ಇವೆರಡು ವಿಷಯಗಳನ್ನು ನೋಡಿದ್ದೇನೆ: [PE][QS]ನೀತಿವಂತನು ತನ್ನ ನೀತಿಯಲ್ಲಿ ಗತಿಸಿಹೋಗುತ್ತಾನೆ. [QE][QS2]ದುಷ್ಟನು ತನ್ನ ದುಷ್ಟತನದಲ್ಲಿ, ಇಡೀ ಜೀವಮಾನವನ್ನು ಕಳೆಯುತ್ತಾನೆ. [QE]
16. [QS]ನೀನು ಅತಿಯಾಗಿ ನೀತಿವಂತನಾಗಿರಬೇಡ. [QE][QS2]ಅತಿಯಾಗಿ ನಿನ್ನನ್ನು ಜ್ಞಾನಿಯನ್ನಾಗಿಯೂ ಮಾಡಿಕೊಳ್ಳಬೇಡ. [QE][QS2]ನಿನ್ನನ್ನು ನೀನೇ ಏಕೆ ನಾಶಪಡಿಸಿಕೊಳ್ಳುವೆ? [QE]
17. [QS]ನೀನು ದುಷ್ಟತನದಲ್ಲಿ ಸಾಗಬೇಡ, [QE][QS2]ಮೂರ್ಖತನದಲ್ಲಿಯೂ ಮುಂದುವರಿಯಬೇಡ. [QE][QS2]ನಿನ್ನ ಸಮಯಕ್ಕಿಂತ ಮೊದಲು ನೀನು ಏಕೆ ಸಾಯುವೆ? [QE]
18. [QS]ನೀನು ಇವುಗಳನ್ನು ಗ್ರಹಿಸಿಕೊಳ್ಳುವುದು ಒಳ್ಳೆಯದು. [QE][QS2]ಹೌದು, ಇವುಗಳನ್ನು ಮರೆಯಬೇಡ. [QE][QS2]ಏಕೆಂದರೆ ದೇವರಿಗೆ ಭಯಪಡುವವನು ಇವೆಲ್ಲವುಗಳಿಂದ ಪಾರಾಗುವನು. [QE][PBR]
19. [QS]ಪಟ್ಟಣದ ಹತ್ತು ಮಂದಿ ಅಧಿಕಾರಿಗಳ ಸ್ಥಿರತೆಗಿಂತ, [QE][QS2]ಜ್ಞಾನವು ಜ್ಞಾನಿಯನ್ನು ಹೆಚ್ಚಾಗಿ ಸ್ಥಿರಪಡಿಸುತ್ತದೆ. [QE][PBR]
20. [QS]ಪಾಪಮಾಡದೆ ಒಳ್ಳೆಯದನ್ನೇ ನಡೆಸುವ ನೀತಿವಂತನು, [QE][QS2]ಭೂಮಿಯ ಮೇಲೆ ಒಬ್ಬನೂ ಇಲ್ಲ. [QE][PBR]
21. [QS]ಜನರು ಆಡಿದ ಎಲ್ಲಾ ಮಾತುಗಳನ್ನು ನೀನು ಲಕ್ಷಿಸಬೇಡ, [QE][QS2]ನಿನ್ನ ಕೆಲಸದವರೂ ನಿನ್ನನ್ನು ಶಪಿಸಬಹುದು. [QE]
22. [QS]ನೀನು ಸಹ ಅನೇಕ ವೇಳೆ ಇತರರನ್ನು ಶಪಿಸಿದ್ದೀ, [QE][QS2]ಇದು ನಿನ್ನ ಹೃದಯಕ್ಕೆ ತಿಳಿದಿದೆ. [QE]
23. [PS]ಇದೆಲ್ಲವನ್ನು ನಾನು ಜ್ಞಾನದಿಂದ ಪರೀಕ್ಷಿಸಿದ್ದೇನೆ, [PE][QS]“ನಾನು ಜ್ಞಾನಿಯಾಗಿರಲು ತೀರ್ಮಾನಿಸುತ್ತೇನೆ,” ಎಂದುಕೊಂಡೆನು. [QE][QS2]ಆದರೆ ಅದು ನನ್ನಿಂದ ದೂರವಾಯಿತು. [QE]
24. [QS]ದೂರದಲ್ಲಿರುವುದನ್ನೂ, ಅಗಾಧದಲ್ಲಿರುವುದನ್ನೂ [QE][QS2]ಯಾರು ಕಂಡುಕೊಂಡಾರು? [QE]
25. [QS]ಜ್ಞಾನದ ಮೂಲ ತತ್ವವನ್ನೂ, [QE][QS2]ದುಷ್ಟತನದ ಮೂಢತನವನ್ನೂ, [QE][QS]ಮೂಢತ್ವದ ಹುಚ್ಚುತನವನ್ನೂ [QE][QS2]ಪರೀಕ್ಷಿಸಿ ತಿಳಿದುಕೊಳ್ಳುವಂತೆ ಮನಸ್ಸುಮಾಡಿದೆನು. [QE][PBR]
26. [QS]ಕೆಟ್ಟ ಹೆಂಗಸಿನ ಹೃದಯವು ಬೋನೂ ಬಲೆಯೂ ಆಗಿರುತ್ತದೆ. [QE][QS2]ಅವಳ ಕೈ ಸಂಕೋಲೆ ಆಗಿರುತ್ತದೆ. [QE][QS]ಇದು ಮರಣಕ್ಕಿಂತಲೂ ಕಠೋರವಾದದ್ದು ಎಂದು ನಾನು ಕಂಡಿದ್ದೇನೆ. [QE][QS2]ದೇವರನ್ನು ಮೆಚ್ಚಿಸುವವನು, [QE][QS]ಅವಳಿಂದ ತಪ್ಪಿಸಿಕೊಳ್ಳುವನು. [QE][QS2]ಆದರೆ ಪಾಪಿಯು ಅವಳ ಕೈಗೆ ಸಿಕ್ಕಿಬೀಳುವನು. [QE]
27. [PS]“ನೋಡು, ನಾನಿದನ್ನು ಹುಡುಕಿ ಕಂಡುಕೊಂಡಿದ್ದೇನೆ,” ಎಂದು ಪ್ರಸಂಗಿಯು ಹೇಳುತ್ತಿದ್ದಾನೆ: [PE][QS]ನಾನು ಒಂದರ ನಂತರ ಮತ್ತೊಂದನ್ನು ಕೂಡಿಸಿ, ಸಂಶೋಧನೆಗಳನ್ನು ನಡೆಸಿದೆ; [QE]
2. [QS2]ನಾನು ಹುಡುಕಿ ನೋಡಿದರೂ [QE][QS2]ನನಗೆ ಇದುವರೆಗೆ ಉತ್ತರ ಸಿಕ್ಕಲಿಲ್ಲ. [QE][QS]ನಾನು ಸಾವಿರ ಪುರುಷರಲ್ಲಿ ಒಬ್ಬ ಸತ್ಯವಂತನನ್ನು ಕಂಡೆನು. [QE][QS2]ಆದರೆ ಸಾವಿರ ಸ್ತ್ರೀಯರಲ್ಲಿ ಒಬ್ಬ ಸತ್ಯವಂತಳನ್ನು ಕಂಡುಕೊಳ್ಳಲಿಲ್ಲ. [QE]
29. [QS]ಇದನ್ನು ಮಾತ್ರ ನಾನು ಕಂಡುಕೊಂಡಿದ್ದೇನೆ: [QE][QS2]ದೇವರು ಮನುಷ್ಯರನ್ನು ಸತ್ಯವಂತರನ್ನಾಗಿ ಸೃಷ್ಟಿಸಿದರು. [QE][QS2]ಮನುಷ್ಯರಾದರೋ ಅನೇಕ ಸ್ವಾರ್ಥ ಯೋಜನೆಗಳನ್ನು ಮಾಡಿಕೊಂಡಿದ್ದಾರೆ. [QE][PBR]