ಪವಿತ್ರ ಬೈಬಲ್

ಓಪನ್ ಸಮಕಾಲೀನ ಆವೃತ್ತಿ (OCV)
ಎಫೆಸದವರಿಗೆ
1. [PS]ಮಕ್ಕಳೇ, ನೀವು ಕರ್ತನಲ್ಲಿ ನಿಮ್ಮ ತಂದೆತಾಯಿಗಳಿಗೆ ವಿಧೇಯರಾಗಿರಿ, ಇದು ಸೂಕ್ತವಾದದ್ದು.
2. “ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು,” ಎಂಬುದು ವಾಗ್ದಾನ ಸಹಿತವಾದ ಮೊದಲನೆಯ ಆಜ್ಞೆಯಾಗಿದೆ.
3. “ಸನ್ಮಾನಿಸಿದರೆ ನಿನಗೆ ಶುಭವಾಗುವುದು. ನೀನು ಭೂಮಿಯ ಮೇಲೆ ಬಹುಕಾಲ ಬದುಕುವೆ.”[* ಧರ್ಮೋ 5:16 ] [PE]
4.
5. [PS]ತಂದೆಗಳೇ, ನಿಮ್ಮ ಮಕ್ಕಳನ್ನು ಸಿಟ್ಟಿಗೆಬ್ಬಿಸಬೇಡಿರಿ; ಕರ್ತನ ಶಿಸ್ತಿನಲ್ಲಿಯೂ ಉಪದೇಶದಲ್ಲಿಯೂ ಮಕ್ಕಳನ್ನು ಬೆಳೆಸಿರಿ. [PE][PS]ಸೇವಕರೇ, ಭಯಭಕ್ತಿಯಿಂದಲೂ ಸರಳ ಹೃದಯದಿಂದ ಕ್ರಿಸ್ತನಿಗೆ ವಿಧೇಯರಾಗುವ ಪ್ರಕಾರ ಲೌಕಿಕವಾಗಿ ನಿಮ್ಮ ಯಜಮಾನನಾಗಿರುವವರಿಗೆ ವಿಧೇಯರಾಗಿರಿ.
6. ಯಜಮಾನರನ್ನು ಮೆಚ್ಚಿಸುವವರಂತೆ ಕಣ್ಣಿಗೆ ಕಾಣುವಾಗ ಮಾತ್ರ ಅವರಿಗೆ ಸೇವೆಮಾಡದೆ, ಕ್ರಿಸ್ತನ ದಾಸರಿಗೆ ತಕ್ಕಂತೆ ಮನಃಪೂರ್ವಕವಾಗಿ ದೇವರ ಚಿತ್ತವನ್ನು ನೆರವೇರಿಸಿರಿ.
7. ನೀವು ಮನುಷ್ಯರಿಗೋಸ್ಕರವಲ್ಲ, ಕರ್ತನಿಗೋಸ್ಕರವೇ ಸೇವೆ ಮಾಡುವಂತೆ, ಪೂರ್ಣಮನಸ್ಸಿನಿಂದ ಸೇವೆಮಾಡಿರಿ.
8. ದಾಸನಾಗಲಿ, ಸ್ವತಂತ್ರನಾಗಲಿ ತಾನು ಯಾವ ಸತ್ಕಾರ್ಯವನ್ನು ಮಾಡುತ್ತಾನೋ ಅದರ ಪ್ರತಿಫಲವನ್ನು ಕರ್ತ ಯೇಸುವಿನಿಂದ ಹೊಂದುವನೆಂದು ನೀವು ತಿಳಿದಿದ್ದೀರಿ. [PE]
9.
10. [PS]ಯಜಮಾನರೇ, ನೀವು ಸಹ ನಿಮ್ಮ ಸೇವಕರೊಡನೆ ಅದೇ ರೀತಿಯಾಗಿ ನಡೆದುಕೊಳ್ಳಿರಿ. ಪರಲೋಕದಲ್ಲಿ ನಿಮಗೆ ಯಜಮಾನನಿದ್ದಾನೆಂತಲೂ ಆತನಲ್ಲಿ ಪಕ್ಷಪಾತವಿಲ್ಲವೆಂತಲೂ ತಿಳಿದು ಅವರನ್ನು ಬೆದರಿಸುವುದನ್ನು ಬಿಟ್ಟುಬಿಡಿರಿ. [PE]{#1ದೇವರು ಕೊಡುವ ಸರ್ವಾಯುಧಗಳು } [PS]ಕೊನೆಯದಾಗಿ, ಕರ್ತನಲ್ಲಿಯೂ ಅವರ ಪರಾಕ್ರಮ ಶಕ್ತಿಯಲ್ಲಿಯೂ ಬಲಗೊಳ್ಳಿರಿ.
11. ನೀವು ಪಿಶಾಚನ ತಂತ್ರಗಳನ್ನು ಎದುರಿಸಿ ನಿಲ್ಲುವುದಕ್ಕೆ ಶಕ್ತರಾಗುವಂತೆ ದೇವರ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ.
12. ಏಕೆಂದರೆ, ನಾವು ಹೋರಾಡುವುದು ನರಮಾನವರೊಂದಿಗಲ್ಲ, ರಾಜತ್ವಗಳ ಮೇಲೆಯೂ ಅಧಿಕಾರಿಗಳ ಮೇಲೆಯೂ ಈ ಲೋಕದ ಅಂಧಕಾರದ ಅಧಿಪತಿಗಳ ಮೇಲೆಯೂ ಆಕಾಶಮಂಡಲದಲ್ಲಿರುವ ದುರಾತ್ಮಗಳ ಸೇನೆಗಳ ಮೇಲೆಯೂ ಆಗಿದೆ.
13. ಆದುದರಿಂದ ವೈರಿಯು ದಾಳಿಮಾಡುವ ದಿನವು ಬರುವಾಗ ನೀವು ಅವನನ್ನು ಎದುರಿಸಿ ನಿಲ್ಲುವಂತೆಯು, ಎಲ್ಲವನ್ನು ಜಯಿಸಿ ಮುಗಿಸಿದ ಮೇಲೆ ನಿಲ್ಲಲು ಶಕ್ತರಾಗುವಂತೆ, ದೇವರ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ.
14. ಸತ್ಯವೆಂಬ ನಡುಕಟ್ಟನ್ನು ಕಟ್ಟಿಕೊಂಡು, ನೀತಿಯೆಂಬ ಕವಚವನ್ನು ಧರಿಸಿಕೊಳ್ಳಿರಿ.
15. ಸಮಾಧಾನದ ಸುವಾರ್ತೆಯ ಸಿದ್ಧತೆಯೆಂಬ ಪಾದರಕ್ಷೆಗಳನ್ನು ಮೆಟ್ಟಿಕೊಂಡು ನಿಲ್ಲಿರಿ.
16. ಇವೆಲ್ಲವುಗಳೊಂದಿಗೆ ವಿಶ್ವಾಸವೆಂಬ ಗುರಾಣಿಯನ್ನು ಹಿಡಿದುಕೊಳ್ಳಿರಿ. ಈ ಗುರಾಣಿಯಿಂದಲೇ, ನೀವು ಕೆಡುಕನ ಅಗ್ನಿಬಾಣಗಳನ್ನೆಲ್ಲಾ ನಂದಿಸುವುದಕ್ಕೆ ಶಕ್ತರಾಗುವಿರಿ.
17. ಇದಲ್ಲದೆ ರಕ್ಷಣೆಯೆಂಬ ಶಿರಸ್ತ್ರಾಣವನ್ನು ಧರಿಸಿಕೊಳ್ಳಿರಿ. ದೇವರ ವಾಕ್ಯವೆಂಬ ಪವಿತ್ರಾತ್ಮರ ಖಡ್ಗವನ್ನು ಎತ್ತಿ ಹಿಡಿಯಿರಿ. [PE]
18. [PS]ನೀವು ಪವಿತ್ರಾತ್ಮ ದೇವರಲ್ಲಿ ಎಲ್ಲಾ ಸಮಯಗಳಲ್ಲಿಯೂ ಸಕಲ ವಿಧವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ಕರ್ತನ ಜನರೆಲ್ಲರಿಗಾಗಿ ಪ್ರಾರ್ಥನೆ ಮಾಡುತ್ತಾ ಎಚ್ಚರವಾಗಿರಿ.
19. ನಾನು ಬಾಯಿ ತೆರೆಯುವಾಗ ಸುವಾರ್ತೆಯ ರಹಸ್ಯವನ್ನು ಧೈರ್ಯವಾಗಿ ತಿಳಿಯಪಡಿಸುವುದಕ್ಕೆ ಮಾತನ್ನು ನನಗೆ ದಯಪಾಲಿಸಬೇಕೆಂದು ಪ್ರಾರ್ಥಿಸಿರಿ.
20. ಏಕೆಂದರೆ ಆ ಸುವಾರ್ತೆಗಾಗಿಯೇ ಸೆರೆಯಲ್ಲಿರುವ ರಾಯಭಾರಿಯಾದ ನಾನು ಅದನ್ನು ಸಾರುವುದರಲ್ಲಿ ಧೈರ್ಯವಾಗಿ ಮಾತನಾಡುವ ಹಂಗಿನಲ್ಲಿದ್ದೇನೆ. [PE][PBR]
21. {#1ಅಂತಿಮ ವಂದನೆಗಳು } [PS]ನನ್ನ ವಿಷಯವಾಗಿಯೂ ನಾನು ಮಾಡುತ್ತಿರುವುದರ ವಿಷಯವಾಗಿಯೂ ಪ್ರಿಯ ಸಹೋದರನೂ ಕರ್ತನಲ್ಲಿ ನಂಬಿಗಸ್ತನಾದ ಸೇವಕನೂ ಆಗಿರುವ ತುಖಿಕನು ನಿಮಗೆ ಎಲ್ಲವನ್ನೂ ತಿಳಿಸುವನು.
22. ನೀವು ನಮ್ಮ ಸಮಾಚಾರವನ್ನು ತಿಳಿದುಕೊಳ್ಳುವಂತೆಯೂ ಅವನು ನಿಮ್ಮ ಹೃದಯಗಳನ್ನು ಉತ್ತೇಜಿಸುವಂತೆಯೂ ಅವನನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ. [PE][PBR]
23. [PS]ತಂದೆಯಾದ ದೇವರಿಂದಲೂ ಕರ್ತ ಆಗಿರುವ ಯೇಸು ಕ್ರಿಸ್ತರಿಂದಲೂ ಶಾಂತಿಯೂ ಮತ್ತು ನಂಬಿಕೆಯಿಂದ ಕೂಡಿದ ಪ್ರೀತಿಯೂ ಸಹೋದರರಿಗೆ ಇರಲಿ. [PE][PBR]
24. [PS]ನಮ್ಮ ಕರ್ತ ಆಗಿರುವ ಯೇಸು ಕ್ರಿಸ್ತರನ್ನು ಅಳಿದು ಹೋಗದ ಪ್ರೀತಿಯಿಂದ ಪ್ರೀತಿಸುವವರೆಲ್ಲರ ಮೇಲೆ ಕೃಪೆಯಿರಲಿ. [PE]
ಒಟ್ಟು 6 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 6 / 6
1 2 3 4 5 6
1 ಮಕ್ಕಳೇ, ನೀವು ಕರ್ತನಲ್ಲಿ ನಿಮ್ಮ ತಂದೆತಾಯಿಗಳಿಗೆ ವಿಧೇಯರಾಗಿರಿ, ಇದು ಸೂಕ್ತವಾದದ್ದು. 2 “ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು,” ಎಂಬುದು ವಾಗ್ದಾನ ಸಹಿತವಾದ ಮೊದಲನೆಯ ಆಜ್ಞೆಯಾಗಿದೆ. 3 “ಸನ್ಮಾನಿಸಿದರೆ ನಿನಗೆ ಶುಭವಾಗುವುದು. ನೀನು ಭೂಮಿಯ ಮೇಲೆ ಬಹುಕಾಲ ಬದುಕುವೆ.”* ಧರ್ಮೋ 5:16 4 5 ತಂದೆಗಳೇ, ನಿಮ್ಮ ಮಕ್ಕಳನ್ನು ಸಿಟ್ಟಿಗೆಬ್ಬಿಸಬೇಡಿರಿ; ಕರ್ತನ ಶಿಸ್ತಿನಲ್ಲಿಯೂ ಉಪದೇಶದಲ್ಲಿಯೂ ಮಕ್ಕಳನ್ನು ಬೆಳೆಸಿರಿ. ಸೇವಕರೇ, ಭಯಭಕ್ತಿಯಿಂದಲೂ ಸರಳ ಹೃದಯದಿಂದ ಕ್ರಿಸ್ತನಿಗೆ ವಿಧೇಯರಾಗುವ ಪ್ರಕಾರ ಲೌಕಿಕವಾಗಿ ನಿಮ್ಮ ಯಜಮಾನನಾಗಿರುವವರಿಗೆ ವಿಧೇಯರಾಗಿರಿ. 6 ಯಜಮಾನರನ್ನು ಮೆಚ್ಚಿಸುವವರಂತೆ ಕಣ್ಣಿಗೆ ಕಾಣುವಾಗ ಮಾತ್ರ ಅವರಿಗೆ ಸೇವೆಮಾಡದೆ, ಕ್ರಿಸ್ತನ ದಾಸರಿಗೆ ತಕ್ಕಂತೆ ಮನಃಪೂರ್ವಕವಾಗಿ ದೇವರ ಚಿತ್ತವನ್ನು ನೆರವೇರಿಸಿರಿ. 7 ನೀವು ಮನುಷ್ಯರಿಗೋಸ್ಕರವಲ್ಲ, ಕರ್ತನಿಗೋಸ್ಕರವೇ ಸೇವೆ ಮಾಡುವಂತೆ, ಪೂರ್ಣಮನಸ್ಸಿನಿಂದ ಸೇವೆಮಾಡಿರಿ. 8 ದಾಸನಾಗಲಿ, ಸ್ವತಂತ್ರನಾಗಲಿ ತಾನು ಯಾವ ಸತ್ಕಾರ್ಯವನ್ನು ಮಾಡುತ್ತಾನೋ ಅದರ ಪ್ರತಿಫಲವನ್ನು ಕರ್ತ ಯೇಸುವಿನಿಂದ ಹೊಂದುವನೆಂದು ನೀವು ತಿಳಿದಿದ್ದೀರಿ. 9 10 ಯಜಮಾನರೇ, ನೀವು ಸಹ ನಿಮ್ಮ ಸೇವಕರೊಡನೆ ಅದೇ ರೀತಿಯಾಗಿ ನಡೆದುಕೊಳ್ಳಿರಿ. ಪರಲೋಕದಲ್ಲಿ ನಿಮಗೆ ಯಜಮಾನನಿದ್ದಾನೆಂತಲೂ ಆತನಲ್ಲಿ ಪಕ್ಷಪಾತವಿಲ್ಲವೆಂತಲೂ ತಿಳಿದು ಅವರನ್ನು ಬೆದರಿಸುವುದನ್ನು ಬಿಟ್ಟುಬಿಡಿರಿ. ದೇವರು ಕೊಡುವ ಸರ್ವಾಯುಧಗಳು ಕೊನೆಯದಾಗಿ, ಕರ್ತನಲ್ಲಿಯೂ ಅವರ ಪರಾಕ್ರಮ ಶಕ್ತಿಯಲ್ಲಿಯೂ ಬಲಗೊಳ್ಳಿರಿ. 11 ನೀವು ಪಿಶಾಚನ ತಂತ್ರಗಳನ್ನು ಎದುರಿಸಿ ನಿಲ್ಲುವುದಕ್ಕೆ ಶಕ್ತರಾಗುವಂತೆ ದೇವರ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ. 12 ಏಕೆಂದರೆ, ನಾವು ಹೋರಾಡುವುದು ನರಮಾನವರೊಂದಿಗಲ್ಲ, ರಾಜತ್ವಗಳ ಮೇಲೆಯೂ ಅಧಿಕಾರಿಗಳ ಮೇಲೆಯೂ ಈ ಲೋಕದ ಅಂಧಕಾರದ ಅಧಿಪತಿಗಳ ಮೇಲೆಯೂ ಆಕಾಶಮಂಡಲದಲ್ಲಿರುವ ದುರಾತ್ಮಗಳ ಸೇನೆಗಳ ಮೇಲೆಯೂ ಆಗಿದೆ. 13 ಆದುದರಿಂದ ವೈರಿಯು ದಾಳಿಮಾಡುವ ದಿನವು ಬರುವಾಗ ನೀವು ಅವನನ್ನು ಎದುರಿಸಿ ನಿಲ್ಲುವಂತೆಯು, ಎಲ್ಲವನ್ನು ಜಯಿಸಿ ಮುಗಿಸಿದ ಮೇಲೆ ನಿಲ್ಲಲು ಶಕ್ತರಾಗುವಂತೆ, ದೇವರ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ. 14 ಸತ್ಯವೆಂಬ ನಡುಕಟ್ಟನ್ನು ಕಟ್ಟಿಕೊಂಡು, ನೀತಿಯೆಂಬ ಕವಚವನ್ನು ಧರಿಸಿಕೊಳ್ಳಿರಿ. 15 ಸಮಾಧಾನದ ಸುವಾರ್ತೆಯ ಸಿದ್ಧತೆಯೆಂಬ ಪಾದರಕ್ಷೆಗಳನ್ನು ಮೆಟ್ಟಿಕೊಂಡು ನಿಲ್ಲಿರಿ. 16 ಇವೆಲ್ಲವುಗಳೊಂದಿಗೆ ವಿಶ್ವಾಸವೆಂಬ ಗುರಾಣಿಯನ್ನು ಹಿಡಿದುಕೊಳ್ಳಿರಿ. ಈ ಗುರಾಣಿಯಿಂದಲೇ, ನೀವು ಕೆಡುಕನ ಅಗ್ನಿಬಾಣಗಳನ್ನೆಲ್ಲಾ ನಂದಿಸುವುದಕ್ಕೆ ಶಕ್ತರಾಗುವಿರಿ. 17 ಇದಲ್ಲದೆ ರಕ್ಷಣೆಯೆಂಬ ಶಿರಸ್ತ್ರಾಣವನ್ನು ಧರಿಸಿಕೊಳ್ಳಿರಿ. ದೇವರ ವಾಕ್ಯವೆಂಬ ಪವಿತ್ರಾತ್ಮರ ಖಡ್ಗವನ್ನು ಎತ್ತಿ ಹಿಡಿಯಿರಿ. 18 ನೀವು ಪವಿತ್ರಾತ್ಮ ದೇವರಲ್ಲಿ ಎಲ್ಲಾ ಸಮಯಗಳಲ್ಲಿಯೂ ಸಕಲ ವಿಧವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ಕರ್ತನ ಜನರೆಲ್ಲರಿಗಾಗಿ ಪ್ರಾರ್ಥನೆ ಮಾಡುತ್ತಾ ಎಚ್ಚರವಾಗಿರಿ. 19 ನಾನು ಬಾಯಿ ತೆರೆಯುವಾಗ ಸುವಾರ್ತೆಯ ರಹಸ್ಯವನ್ನು ಧೈರ್ಯವಾಗಿ ತಿಳಿಯಪಡಿಸುವುದಕ್ಕೆ ಮಾತನ್ನು ನನಗೆ ದಯಪಾಲಿಸಬೇಕೆಂದು ಪ್ರಾರ್ಥಿಸಿರಿ. 20 ಏಕೆಂದರೆ ಆ ಸುವಾರ್ತೆಗಾಗಿಯೇ ಸೆರೆಯಲ್ಲಿರುವ ರಾಯಭಾರಿಯಾದ ನಾನು ಅದನ್ನು ಸಾರುವುದರಲ್ಲಿ ಧೈರ್ಯವಾಗಿ ಮಾತನಾಡುವ ಹಂಗಿನಲ್ಲಿದ್ದೇನೆ. ಅಂತಿಮ ವಂದನೆಗಳು 21 ನನ್ನ ವಿಷಯವಾಗಿಯೂ ನಾನು ಮಾಡುತ್ತಿರುವುದರ ವಿಷಯವಾಗಿಯೂ ಪ್ರಿಯ ಸಹೋದರನೂ ಕರ್ತನಲ್ಲಿ ನಂಬಿಗಸ್ತನಾದ ಸೇವಕನೂ ಆಗಿರುವ ತುಖಿಕನು ನಿಮಗೆ ಎಲ್ಲವನ್ನೂ ತಿಳಿಸುವನು. 22 ನೀವು ನಮ್ಮ ಸಮಾಚಾರವನ್ನು ತಿಳಿದುಕೊಳ್ಳುವಂತೆಯೂ ಅವನು ನಿಮ್ಮ ಹೃದಯಗಳನ್ನು ಉತ್ತೇಜಿಸುವಂತೆಯೂ ಅವನನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ. 23 ತಂದೆಯಾದ ದೇವರಿಂದಲೂ ಕರ್ತ ಆಗಿರುವ ಯೇಸು ಕ್ರಿಸ್ತರಿಂದಲೂ ಶಾಂತಿಯೂ ಮತ್ತು ನಂಬಿಕೆಯಿಂದ ಕೂಡಿದ ಪ್ರೀತಿಯೂ ಸಹೋದರರಿಗೆ ಇರಲಿ. 24 ನಮ್ಮ ಕರ್ತ ಆಗಿರುವ ಯೇಸು ಕ್ರಿಸ್ತರನ್ನು ಅಳಿದು ಹೋಗದ ಪ್ರೀತಿಯಿಂದ ಪ್ರೀತಿಸುವವರೆಲ್ಲರ ಮೇಲೆ ಕೃಪೆಯಿರಲಿ.
ಒಟ್ಟು 6 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 6 / 6
1 2 3 4 5 6
×

Alert

×

Kannada Letters Keypad References