1. {#1ಚಿನ್ನದ ಕರು }
2. [PS]ಮೋಶೆಯು ಬೆಟ್ಟದಿಂದ ಇಳಿಯದೆ ತಡಮಾಡಿದ್ದನ್ನು ಇಸ್ರಾಯೇಲರು ನೋಡಿದಾಗ, ಅವರು ಆರೋನನ ಬಳಿಗೆ ಕೂಡಿಬಂದು ಅವನಿಗೆ, “ನೀನು ಎದ್ದು ನಮ್ಮನ್ನು ಮುನ್ನಡೆಸಿಕೊಂಡು ಹೋಗುವ ದೇವರುಗಳನ್ನು ನಮಗಾಗಿ ಮಾಡು. ಏಕೆಂದರೆ ಈಜಿಪ್ಟ್ ದೇಶದೊಳಗಿಂದ ನಮ್ಮನ್ನು ಕರೆದುಕೊಂಡು ಬಂದ ಮನುಷ್ಯನಾದ ಈ ಮೋಶೆಗೆ ಏನಾಯಿತೋ ನಮಗೆ ತಿಳಿಯದು,” ಎಂದರು. [PE][PS]ಅದಕ್ಕೆ ಆರೋನನು ಅವರಿಗೆ, “ನಿಮ್ಮ ಹೆಂಡತಿಯರ ಮತ್ತು ನಿಮ್ಮ ಪುತ್ರಪುತ್ರಿಯರ ಕಿವಿಗಳಲ್ಲಿರುವ ಚಿನ್ನದ ವಾಲೆಗಳನ್ನು ಬಿಚ್ಚಿ ನನ್ನ ಬಳಿಗೆ ತನ್ನಿರಿ,” ಎಂದನು.
3. ಆಗ ಜನರೆಲ್ಲರೂ ತಮ್ಮ ಕಿವಿಗಳಲ್ಲಿದ್ದ ಚಿನ್ನದ ವಾಲೆಗಳನ್ನು ಕಿತ್ತು ಆರೋನನ ಬಳಿಗೆ ತಂದರು.
4. ಅವನು ಅವುಗಳನ್ನು ಅವರ ಕೈಗಳಿಂದ ತೆಗೆದುಕೊಂಡು, ಉಳಿಯಿಂದ ರೂಪಿಸಿ, ಎರಕ ಹೊಯ್ದು, ಕರುವಾಗಿ ಮಾಡಿದನು. ಆಗ ಅವರು, “ಇಸ್ರಾಯೇಲರೇ, ನಿಮ್ಮನ್ನು ಈಜಿಪ್ಟ್ ದೇಶದೊಳಗಿನಿಂದ ಬರಮಾಡಿದ ನಿಮ್ಮ ದೇವರುಗಳು ಇವೇ,” ಎಂದರು. [PE]
5. [PS]ಆರೋನನು ಅದನ್ನು ನೋಡಿ ಅದರ ಮುಂದೆ ಬಲಿಪೀಠವನ್ನು ಕಟ್ಟಿದನು. “ನಾಳೆ ಯೆಹೋವ ದೇವರಿಗೆ ಹಬ್ಬ,” ಎಂದು ಪ್ರಕಟಿಸಿದನು.
6. ಮರುದಿನ ಬೆಳಿಗ್ಗೆ ಜನರು ಎದ್ದು, ದಹನಬಲಿಗಳನ್ನೂ, ಸಮಾಧಾನ ಬಲಿಗಳನ್ನೂ ಸಮರ್ಪಿಸಿದರು. ಬಳಿಕ ತಿನ್ನಲೂ ಕುಡಿಯಲೂ ಕುಳಿತುಕೊಂಡರು, ಆಮೇಲೆ ಎದ್ದು ಕುಣಿದಾಡಿದರು. [PE]
7. [PS]ಆಗ ಯೆಹೋವ ದೇವರು ಮೋಶೆಗೆ, “ನೀನು ಇಳಿದು ಹೋಗು ಏಕೆಂದರೆ ನೀನು ಈಜಿಪ್ಟ್ ದೇಶದೊಳಗಿಂದ ಬರಮಾಡಿದ ನಿನ್ನ ಜನರು ತಮ್ಮನ್ನು ಕೆಡಿಸಿಕೊಂಡಿದ್ದಾರೆ.
8. ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಬೇಗನೆ ಬಿಟ್ಟು, ತಮಗೆ ಎರಕ ಹೊಯ್ದ ಕರುವನ್ನು ಮಾಡಿಕೊಂಡು, ಅದನ್ನು ಆರಾಧಿಸುತ್ತಾ, ಅದಕ್ಕೆ ಬಲಿ ಅರ್ಪಿಸಿ, ‘ಇಸ್ರಾಯೇಲರೇ, ನಿಮ್ಮನ್ನು ಈಜಿಪ್ಟ್ ದೇಶದೊಳಗಿಂದ ಬರಮಾಡಿದ ನಿಮ್ಮ ದೇವರುಗಳು ಇವುಗಳೇ,’ ಎಂದು ಹೇಳುತ್ತಿದ್ದಾರೆ.” [PE]
9. [PS]ಇದಲ್ಲದೆ ಯೆಹೋವ ದೇವರು ಮೋಶೆಗೆ, “ನಾನು ಈ ಜನರನ್ನು ನೋಡಿದ್ದೇನೆ. ಇವರು ಹಟಮಾರಿ ಜನರೇ,
10. ಹೀಗಿರುವುದರಿಂದ ನನ್ನ ಕೋಪಾಗ್ನಿಯು ಅವರ ಮೇಲೆ ಉರಿದು ಅವರನ್ನು ದಹಿಸಿಬಿಡುವಂತೆ ನನ್ನನ್ನು ಬಿಡು. ತರುವಾಯ ನಾನು ನಿನ್ನನ್ನು ದೊಡ್ಡ ಜನಾಂಗವಾಗುವಂತೆ ಮಾಡುವೆನು,” ಎಂದರು. [PE]
11. [PS]ಅದಕ್ಕೆ ಮೋಶೆ, ತನ್ನ ದೇವರಾದ ಯೆಹೋವ ದೇವರ ಸನ್ನಿಧಿಯಲ್ಲಿ ಬೇಡಿಕೊಂಡು ಹೇಳಿದ್ದೇನೆಂದರೆ, “ಯೆಹೋವ ದೇವರೇ, ನೀವು ಮಹಾಶಕ್ತಿಯಿಂದಲೂ, ಬಲವುಳ್ಳ ಕೈಯಿಂದಲೂ ಈಜಿಪ್ಟ್ ದೇಶದೊಳಗಿಂದ ಹೊರಗೆ ಬರಮಾಡಿದ ನಿಮ್ಮ ಜನರ ಮೇಲೆ ಏಕೆ ನಿಮ್ಮ ಕೋಪವು ಉರಿಯುವುದು?
12. ‘ಕೇಡಿನ ನಿಮಿತ್ತವೂ ಬೆಟ್ಟಗಳಲ್ಲಿ ಅವರನ್ನು ಸಾಯಿಸಿ, ಭೂಮಿಯ ಮೇಲಿನಿಂದ ಅವರನ್ನು ಅಳಿಸಿಬಿಡುವುದಕ್ಕೂ, ದೇವರು ಅವರನ್ನು ಹೊರಗೆ ಬರಮಾಡಿದ್ದಾರೆ,’ ಎಂದು ಈಜಿಪ್ಟಿನವರು ಏಕೆ ಹೇಳಬೇಕು? ತಾವು ಕೋಪಾಗ್ನಿಯನ್ನು ಬಿಟ್ಟು ತಿರುಗಿಕೊಳ್ಳಿ. ನಿಮ್ಮ ಜನರಿಗೆ ವಿರೋಧವಾದ ಈ ಕೇಡಿನ ವಿಷಯದಲ್ಲಿ ತಮ್ಮ ಮನಸ್ಸನ್ನು ಬದಲಾಯಿಸಿರಿ.
13. ಆ ನಿಮ್ಮ ಸೇವಕರಾದ ಅಬ್ರಹಾಮನನ್ನೂ, ಇಸಾಕನನ್ನೂ, ಇಸ್ರಾಯೇಲನನ್ನೂ ಜ್ಞಾಪಕಮಾಡಿಕೊಳ್ಳಿರಿ, ಯಾರಿಗೆ ನೀವು ಆಣೆಯಿಟ್ಟು ಪ್ರಮಾಣಮಾಡಿ: ‘ಆಕಾಶದ ನಕ್ಷತ್ರಗಳ ಹಾಗೆ ನಿನ್ನ ಸಂತತಿಯನ್ನು ಹೆಚ್ಚಿಸಿ, ನಾನು ಹೇಳಿದ ಈ ದೇಶವನ್ನು ನಿಮ್ಮ ಸಂತತಿಯವರಿಗೆ ಕೊಡುವೆನು ಮತ್ತು ಅವರು ನಿತ್ಯವಾಗಿ ಸ್ವಾಧೀನವಾಗಿಟ್ಟುಕೊಳ್ಳುವರು’ ಎಂದು ಮಾತುಕೊಡಲಿಲ್ಲವೆ?” ಎಂದನು.
14. ಆಗ ಯೆಹೋವ ದೇವರು ತಮ್ಮ ಜನರಿಗೆ ಮಾಡುವೆನೆಂದು ಹೇಳಿದ ಕೇಡಿನ ವಿಷಯದಲ್ಲಿ ಮನಸ್ಸನ್ನು ಮಾರ್ಪಡಿಸಿಕೊಂಡರು. [PE]
15. [PS]ಮೋಶೆಯು ತಿರುಗಿಕೊಂಡು ಎರಡೂ ಬದಿಯಲ್ಲಿ ಬರೆದಿರುವ ಸಾಕ್ಷಿಯ ಎರಡು ಹಲಗೆಗಳನ್ನು ಕೈಯಲ್ಲಿ ಹಿಡಿದುಕೊಂಡು ಬೆಟ್ಟದಿಂದ ಇಳಿದು ಬಂದನು. ಆ ಹಲಗೆಗಳ ಎರಡೂ ಬದಿಗಳಲ್ಲಿ ಅಂದರೆ ಈ ಕಡೆಯಲ್ಲಿಯೂ ಮತ್ತು ಆ ಕಡೆಯಲ್ಲಿಯೂ ಬರಹವಿತ್ತು.
16. ಆ ಹಲಗೆಗಳು ದೇವರ ಕೆಲಸಗಳಾಗಿದ್ದವು. ಆ ಹಲಗೆಗಳ ಮೇಲೆ ಕೆತ್ತಿದ ಬರಹವು ದೇವರದ್ದೇ ಆಗಿತ್ತು. [PE]
17.
18. [PS]ಯೆಹೋಶುವನು ಜನರು ಕೂಗುತ್ತಿದ್ದ ಶಬ್ದವನ್ನು ಕೇಳಿ ಮೋಶೆಗೆ, “ಪಾಳೆಯದ ಕಡೆಯಿಂದ ಯುದ್ಧದ ಶಬ್ದವು ಕೇಳಿಸುತ್ತದೆ,” ಎಂದು ಹೇಳಿದನು. [PE][PS]ಅದಕ್ಕೆ ಮೋಶೆಯು ಹೀಗೆ ಉತ್ತರಿಸಿದನು: [PE][QS]“ಅದು ಜಯಧ್ವನಿಯು ಅಲ್ಲ, [QE][QS2]ಅಪಜಯದ ಧ್ವನಿಯೂ ಅಲ್ಲ. [QE][QS2]ಆದರೆ ನನಗೆ ಹಾಡುವ ಧ್ವನಿಯು ಕೇಳಿಸುತ್ತಿದೆ.” [QE]
19. [PS]ಇದಾದ ಮೇಲೆ ಮೋಶೆ ಪಾಳೆಯದ ಸಮೀಪಕ್ಕೆ ಬಂದು ಆ ಕರುವನ್ನೂ, ಅವರ ಕುಣಿದಾಟವನ್ನೂ ನೋಡಿದಾಗ, ಮೋಶೆಯು ಕೋಪಗೊಂಡು ಕೈಯಲ್ಲಿದ್ದ ಹಲಗೆಗಳನ್ನು ಬೆಟ್ಟದ ಅಡಿಯಲ್ಲಿ ಬಿಸಾಡಿ ಅವುಗಳನ್ನು ಒಡೆದುಬಿಟ್ಟನು.
20. ಅವರು ಮಾಡಿದ ಕರುವನ್ನು ಅವನು ತೆಗೆದುಕೊಂಡು, ಅದನ್ನು ಬೆಂಕಿಯಿಂದ ಸುಟ್ಟು ಪುಡಿಯಾಗುವವರೆಗೆ ಅರೆದು ನೀರಿನ ಮೇಲೆ ಚೆಲ್ಲಿ, ಆ ನೀರನ್ನು ಇಸ್ರಾಯೇಲರು ಕುಡಿಯುವಂತೆ ಮಾಡಿದನು. [PE]
21.
22. [PS]ಮೋಶೆಯು ಆರೋನನಿಗೆ, “ಈ ಜನರ ಮೇಲೆ ದೊಡ್ಡ ಪಾಪವನ್ನು ನೀನು ಬರಮಾಡುವಂತೆ ಅವರು ನಿನಗೆ ಏನು ಮಾಡಿದರು?” ಎಂದು ಕೇಳಿದನು. [PE][PS]ಅದಕ್ಕೆ ಆರೋನನು, “ನನ್ನ ಒಡೆಯನೇ ಕೋಪಗೊಳ್ಳಬೇಡಿ ಈ ಜನರು ಕೆಡುಕಿನ ಮನಸ್ಸಿನವರಾಗಿದ್ದಾರೆಂದು ನೀವು ಬಲ್ಲಿರಿ.
23. ಅವರು ನನಗೆ, ‘ನಮ್ಮನ್ನು ಮುನ್ನಡೆಸಿಕೊಂಡು ಹೋಗುವ ದೇವರುಗಳನ್ನು ಮಾಡು. ಏಕೆಂದರೆ ಈಜಿಪ್ಟ್ ದೇಶದೊಳಗಿಂದ ನಮ್ಮನ್ನು ಬರಮಾಡಿದ ಈ ಮೋಶೆಗೆ ಏನಾಯಿತೋ ನಮಗೆ ತಿಳಿಯದು,’ ಎಂದು ಹೇಳಿದರು.
24. ಆದ್ದರಿಂದ ನಾನು ಅವರಿಗೆ, ‘ಚಿನ್ನ ಇದ್ದವರು ಅದನ್ನು ತರಲಿ,’ ಎಂದೆನು. ಅವರು ಅದನ್ನು ನನಗೆ ಕೊಟ್ಟರು. ಆಗ ನಾನು ಅದನ್ನು ಬೆಂಕಿಯಲ್ಲಿ ಹಾಕಿದಾಗ, ಈ ಕರುವು ಉಂಟಾಯಿತು,” ಎಂದನು. [PE]
25. [PS]ಮೋಶೆಯು ಜನರು ಕ್ರಮವಿಲ್ಲದಿರುವುದನ್ನು ಕಂಡನು. ಆರೋನನು ಅವರನ್ನು ಮಿತಿಮೀರಿ ಇಷ್ಟಬಂದಂತೆ ಮಾಡುವದಕ್ಕೆ ಅವಕಾಶ ಮಾಡಿಕೊಟ್ಟದ್ದರಿಂದ ಅವರ ವೈರಿಗಳ ಮುಂದೆ ಅಪಹಾಸ್ಯಕ್ಕೆ ಆಸ್ಪದವಾಯಿತು.
26. ಮೋಶೆಯು ಪಾಳೆಯದ ಬಾಗಿಲಲ್ಲಿ ನಿಂತುಕೊಂಡು, “ಯೆಹೋವ ದೇವರ ಪಕ್ಷದವರೆಲ್ಲರೂ ನನ್ನ ಬಳಿಗೆ ಬರಲಿ,” ಎಂದನು. ಆಗ ಲೇವಿಯರೆಲ್ಲರು ಅವನ ಬಳಿಗೆ ಕೂಡಿಬಂದರು. [PE]
27. [PS]ಆಗ ಅವನು ಅವರಿಗೆ, “ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ಪ್ರತಿಯೊಬ್ಬನು ತನ್ನ ಖಡ್ಗವನ್ನು ಪಕ್ಕದಲ್ಲಿ ಕಟ್ಟಿಕೊಂಡು ಪಾಳೆಯದಲ್ಲೆಲ್ಲಾ ಒಂದು ದ್ವಾರದಿಂದ ಇನ್ನೊಂದು ದ್ವಾರಕ್ಕೆ ಹೋಗಿ ಹೋಗುತ್ತಾ ಬರುತ್ತಾ ತನ್ನ ಸಹೋದರನನ್ನೂ, ತನ್ನ ಜೊತೆಗಾರನನ್ನೂ ಮತ್ತು ನೆರೆಹೊರೆಯವನೆಂದು ಲಕ್ಷಿಸದೆ ಕೊಲ್ಲಲಿ,’ ” ಎಂದು ಹೇಳಿದನು.
28. ಲೇವಿಯರು ಮೋಶೆಯು ಆಜ್ಞಾಪಿಸಿದಂತೆ ಮಾಡಿದರು. ಆ ದಿನ ಹೆಚ್ಚು ಕಡಿಮೆ ಮೂರು ಸಾವಿರ ಜನರು ಸತ್ತರು.
29. ಆಗ ಮೋಶೆ ಆ ಲೇವಿಯರಿಗೆ, “ಈ ದಿನ ನಿಮ್ಮಲ್ಲಿ ಪ್ರತಿಯೊಬ್ಬನು ಮಗನನ್ನಾದರೂ, ಅಣ್ಣತಮ್ಮಂದಿರನ್ನಾದರೂ ಲಕ್ಷ್ಯಕ್ಕೆ ತೆಗೆದುಕೊಳ್ಳದೆ, ನಿಮ್ಮನ್ನೇ ಯೆಹೋವ ದೇವರ ಸೇವೆಗೆ ಪ್ರತಿಷ್ಠಾಪಿಸಿಕೊಂಡಿದ್ದೀರಿ. ಆದ್ದರಿಂದ ಅವರು ಈ ದಿನ ನಿಮ್ಮನ್ನು ಆಶೀರ್ವದಿಸಿರುವರು,” ಎಂದು ಹೇಳಿದನು. [PE]
30.
31. [PS]ಮರುದಿನದಲ್ಲಿ, ಮೋಶೆಯು ಜನರಿಗೆ, “ನೀವು ದೊಡ್ಡ ಪಾಪವನ್ನು ಮಾಡಿದ್ದೀರಿ. ಆದ್ದರಿಂದ ನಾನು ಈಗ ಬೆಟ್ಟವನ್ನು ಹತ್ತಿ ಯೆಹೋವ ದೇವರ ಬಳಿಗೆ ಹೋಗುವೆನು. ಒಂದು ವೇಳೆ ನಿಮ್ಮ ಪಾಪಕ್ಕಾಗಿ ನಾನು ಪ್ರಾಯಶ್ಚಿತ್ತ ಮಾಡಿಕೊಳ್ಳಬಹುದು,” ಎಂದನು. [PE][PS]ಹೀಗೆ ಮೋಶೆಯು ಯೆಹೋವ ದೇವರ ಬಳಿಗೆ ತಿರುಗಿ ಹೋಗಿ, “ಅಯ್ಯೋ, ಈ ಜನರು ದೊಡ್ಡ ಪಾಪವನ್ನು ಮಾಡಿದ್ದಾರೆ. ಅವರು ತಮಗೆ ಚಿನ್ನದ ದೇವರುಗಳನ್ನು ಮಾಡಿಕೊಂಡಿದ್ದಾರೆ.
32. ಆದರೂ ಈಗ ನೀವು ಅವರ ಪಾಪವನ್ನು ಕ್ಷಮಿಸಬೇಕು. ಇಲ್ಲವಾದರೆ ನೀವು ಬರೆದ ಗ್ರಂಥದಿಂದ ನನ್ನ ಹೆಸರನ್ನು ಅಳಿಸಿಬಿಡಿ,” ಎಂದು ಬೇಡಿಕೊಂಡನು. [PE]
33. [PS]ಅದಕ್ಕೆ ಯೆಹೋವ ದೇವರು ಮೋಶೆಗೆ, “ನನಗೆ ವಿರೋಧವಾಗಿ ಪಾಪಮಾಡಿದವನ ಹೆಸರನ್ನೇ ನಾನು ನನ್ನ ಪುಸ್ತಕದಿಂದ ಅಳಿಸಿಬಿಡುವೆನು.
34. ಆದರೆ ಈಗ ನೀನು ಹೋಗಿ, ಜನರನ್ನು ನಿನಗೆ ನಾನು ಹೇಳಿದ ಸ್ಥಳಕ್ಕೆ ಕರೆದುಕೊಂಡು ಹೋಗು. ಇಗೋ, ನನ್ನ ದೂತನು ನಿನ್ನನ್ನು ಮುನ್ನಡೆಸುವನು. ಆದರೂ ನಾನು ವಿಚಾರಿಸುವ ದಿನ ಬಂದಾಗ ಅವರ ಪಾಪಕ್ಕೆ ತಕ್ಕಂತೆ ಅವರನ್ನು ಶಿಕ್ಷಿಸುತ್ತೇನೆ,” ಎಂದರು. [PE]
35. [PS]ಹೀಗೆ ಆರೋನನು ಮಾಡಿದ ಕರುವನ್ನು ಅವರು ಆರಾಧಿಸಿದ್ದರಿಂದ ಯೆಹೋವ ದೇವರು ಜನರನ್ನು ಉಪದ್ರವದಿಂದ ಬಾಧಿಸಿದರು. [PE]