1. [PS]ಯೆಹೋವ ದೇವರು ಮೋಶೆಗೆ, “ನೀನು ಈಜಿಪ್ಟ್ ದೇಶದೊಳಗಿಂದ ಬರಮಾಡಿದ ಜನರ ಸಂಗಡ ಈ ಸ್ಥಳವನ್ನು ಬಿಟ್ಟು ನಾನು ಅಬ್ರಹಾಮನಿಗೂ, ಇಸಾಕನಿಗೂ, ಯಾಕೋಬನಿಗೂ, ‘ನಿಮ್ಮ ಸಂತತಿಯವರಿಗೆ ಅದನ್ನು ಕೊಡುವೆನು,’ ಎಂದು ಹೇಳಿ ಪ್ರಮಾಣ ಮಾಡಿದ ದೇಶಕ್ಕೆ ಹೋಗು.
2. ನಾನು ನಿನ್ನ ಮುಂದೆ ದೂತನನ್ನು ಕಳುಹಿಸಿ ಕಾನಾನ್ಯರನ್ನೂ, ಅಮೋರಿಯರನ್ನೂ, ಹಿತ್ತಿಯರನ್ನೂ, ಪೆರಿಜೀಯರನ್ನೂ, ಹಿವ್ವಿಯರನ್ನೂ, ಯೆಬೂಸಿಯರನ್ನೂ ಹೊರದೂಡುವೆನು.
3. ಹಾಲೂ ಜೇನೂ ಹರಿಯುವ ದೇಶಕ್ಕೆ ಹೋಗು. ನಾನು ನಿಮ್ಮ ಸಂಗಡ ಹೋಗುವುದಿಲ್ಲ ಏಕೆಂದರೆ ನೀವು ಮಾತು ಕೇಳದ ಹಟಮಾರಿ ಜನರಾಗಿದ್ದೀರಿ ಮತ್ತು ಮಾರ್ಗದಲ್ಲಿ ನಾನು ನಿಮ್ಮನ್ನು ಸಂಹರಿಸಬೇಕಾಗಬಹುದು,” ಎಂದರು. [PE]
4. [PS]ಜನರು ಈ ಕಠಿಣವಾದ ಮಾತುಗಳನ್ನು ಕೇಳಿದಾಗ ದುಃಖಪಟ್ಟರು. ಯಾರೂ ತಮ್ಮ ಆಭರಣಗಳನ್ನು ಧರಿಸಿಕೊಳ್ಳಲಿಲ್ಲ.
5. ಏಕೆಂದರೆ ಯೆಹೋವ ದೇವರು ಮೋಶೆಗೆ, “ಇಸ್ರಾಯೇಲರಿಗೆ ಹೀಗೆ ಹೇಳು: ‘ನೀವು ಆಜ್ಞೆಗಳನ್ನು ಪಾಲಿಸದ ಹಟಮಾರಿ ಜನರು. ನಾನು ಕ್ಷಣಮಾತ್ರವೂ ನಿಮ್ಮೊಡನೆ ಬಂದರೆ ನೀವು ನಿರ್ಮೂಲವಾಗಿಬಿಡುವಿರಿ. ಹೀಗಿರುವುದರಿಂದ ಈಗ ನಿಮ್ಮ ಆಭರಣಗಳನ್ನು ನಿಮ್ಮಿಂದ ತೆಗೆದುಬಿಡಿರಿ, ನಾನು ನಿಮಗೆ ಏನು ಮಾಡಬೇಕೆಂಬುದನ್ನು ತೀರ್ಮಾನಿಸುವೆನು’ ಎಂದು ಹೇಳು,” ಎಂದು ತಿಳಿಸಿದರು.
6. ಅದರಂತೆಯೇ ಇಸ್ರಾಯೇಲರು ಹೋರೇಬ್[* ಸೀನಾಯಿ ಪರ್ವತಕ್ಕೆ ಇನ್ನೊಂದು ಹೆಸರು. ] ಬೆಟ್ಟದ ಬಳಿಯಲ್ಲಿ ತಮ್ಮ ಆಭರಣಗಳನ್ನು ತೆಗೆದುಬಿಟ್ಟರು. [PE]
7. {#1ದೇವದರ್ಶನದ ಗುಡಾರ } [PS]ಮೋಶೆಯು ಗುಡಾರವನ್ನು ತೆಗೆದು ಪಾಳೆಯದ ಹೊರಗೆ ಪಾಳೆಯಕ್ಕೆ ದೂರವಾಗಿ ಹಾಕಿ, ಅದಕ್ಕೆ “ದೇವದರ್ಶನದ ಗುಡಾರ” ಎಂದು ಹೆಸರಿಟ್ಟನು. ತರುವಾಯ ಯೆಹೋವ ದೇವರನ್ನು ಹುಡುಕುವವರೆಲ್ಲಾ ಪಾಳೆಯದ ಹೊರಗೆ ಇರುವ ದೇವದರ್ಶನದ ಗುಡಾರಕ್ಕೆ ಹೋದರು.
8. ಇದಾದ ಮೇಲೆ ಮೋಶೆಯು ಗುಡಾರದ ಬಳಿಗೆ ಹೊರಗೆ ಹೋಗುತ್ತಿರುವಾಗ ಜನರೆಲ್ಲರೂ ಎದ್ದು, ತಮ್ಮ ತಮ್ಮ ಗುಡಾರಗಳ ಬಾಗಿಲುಗಳಲ್ಲಿ ನಿಂತುಕೊಂಡು ಮೋಶೆಯು ಗುಡಾರದಲ್ಲಿ ಪ್ರವೇಶಿಸುವವರೆಗೆ ಅವನ ಹಿಂದೆ ನೋಡುತ್ತಿದ್ದರು.
9. ಮೋಶೆ ಗುಡಾರದೊಳಗೆ ಹೋಗುವಾಗ, ಮೇಘಸ್ತಂಭವು ಪ್ರವೇಶದ್ವಾರದ ಬಳಿಯಲ್ಲಿ ನಿಲ್ಲುತ್ತಿತ್ತು. ಆಗ ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡುತ್ತಿದ್ದರು.
10. ಜನರೆಲ್ಲರೂ ಗುಡಾರದ ಬಾಗಿಲಲ್ಲಿ ನಿಂತ ಮೇಘಸ್ತಂಭವನ್ನು ನೋಡುವಾಗ ತಮ್ಮ ತಮ್ಮ ಡೇರೆಗಳ ಬಾಗಿಲುಗಳಲ್ಲಿ ಎದ್ದು ನಿಂತು ಯೆಹೋವ ದೇವರನ್ನು ಆರಾಧಿಸುತ್ತಿದ್ದರು.
11. ಒಬ್ಬ ಮನುಷ್ಯನು ತನ್ನ ಸ್ನೇಹಿತನ ಸಂಗಡ ಮಾತನಾಡುವಂತೆ ಯೆಹೋವ ದೇವರು ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತನಾಡುತ್ತಿದ್ದರು. ತರುವಾಯ ಅವನು ಪಾಳೆಯಕ್ಕೆ ಹಿಂದಿರುಗಿ ಹೋಗುತ್ತಿದ್ದನು. ಆದರೆ ಅವನ ಸೇವಕನೂ ನೂನನ ಮಗನೂ ಆದ ಯೆಹೋಶುವನೆಂಬ ಯೌವನಸ್ಥನು ಗುಡಾರವನ್ನು ಬಿಟ್ಟುಹೋಗಲಿಲ್ಲ. [PE]
12. {#1ಮೋಶೆ ಮತ್ತು ಯೆಹೋವ ದೇವರ ಮಹಿಮೆ } [PS]ಮೋಶೆಯು ಯೆಹೋವ ದೇವರಿಗೆ, “ ‘ಈ ಜನರನ್ನು ನಡೆಸಿಕೊಂಡು ಹೋಗು,’ ಎಂದು ನನಗೆ ಹೇಳುತ್ತಿರುವಿರಿ. ಯಾರನ್ನು ನನ್ನ ಸಂಗಡ ಕಳುಹಿಸುವಿರಿ, ಎಂದು ನೀವು ನನಗೆ ತಿಳಿಸಲಿಲ್ಲ. ಆದರೂ ನೀವು ನನಗೆ, ‘ನಾನು ನಿನ್ನನ್ನು ನಿನ್ನ ಹೆಸರಿನ ಮೂಲಕ ತಿಳಿದಿದ್ದೇನೆ, ನನ್ನ ದೃಷ್ಟಿಯಲ್ಲಿ ನಿನಗೆ ಕೃಪೆ ದೊರೆಯಿತು,’ ಎಂದೂ ಹೇಳಿದ್ದೀರಲ್ಲಾ.
13. ಹಾಗಾದರೆ ಈಗ ನಿಮ್ಮ ದೃಷ್ಟಿಯಲ್ಲಿ ನನಗೆ ದಯೆ ದೊರೆಕಿದ್ದೇ ಆದರೆ ನಾನು ನಿಮ್ಮನ್ನು ತಿಳಿಯುವ ಹಾಗೆ, ನಿಮ್ಮ ಮಾರ್ಗವನ್ನು ನನಗೆ ತೋರಿಸಿ. ಆಗ ನಿಮ್ಮ ದೃಷ್ಟಿಯಲ್ಲಿ ನನಗೆ ದಯೆ ದೊರಕಿರುವುದು. ಈ ಜನಾಂಗವು ನಿಮ್ಮ ಜನರೇ, ಎಂದು ಜ್ಞಾಪಿಸಿಕೊಳ್ಳುವೆನು,” ಎಂದು ಹೇಳಿದನು. [PE]
14.
15. [PS]ಆಗ ಯೆಹೋವ ದೇವರು, “ನನ್ನ ಪ್ರಸನ್ನತೆಯು ನಿನ್ನ ಸಂಗಡ ಹೋಗುವುದು. ನಾನು ನಿನಗೆ ವಿಶ್ರಾಂತಿಯನ್ನು ಕೊಡುವೆನು,” ಎಂದರು. [PE][PS]ಮೋಶೆಯು ಅವರಿಗೆ, “ನಿಮ್ಮ ಪ್ರಸನ್ನತೆಯು ನಮ್ಮೊಂದಿಗೆ ಹೋಗದಿದ್ದರೆ ನಮ್ಮನ್ನು ಇಲ್ಲಿಂದ ಕರೆದುಕೊಂಡು ಹೋಗಬೇಡಿ.
16. ಏಕೆಂದರೆ ನನಗೂ ನಿಮ್ಮ ಜನರಿಗೂ ನಿಮ್ಮ ದೃಷ್ಟಿಯಲ್ಲಿ ದಯೆ ದೊರಕಿತೆಂದು ಯಾವುದರಿಂದ ತಿಳಿದುಬರುವುದು? ನೀವು ನನ್ನೊಂದಿಗೆ ಹೋಗುವುದರಿಂದಲ್ಲವೋ? ಹೀಗೆ ನಾನೂ ನಿಮ್ಮ ಜನರೂ ಭೂಮಿಯ ಮೇಲಿರುವ ಎಲ್ಲಾ ಜನರಿಂದ ಪ್ರತ್ಯೇಕವಾಗಿರುವೆವು,” ಎಂದನು. [PE]
17.
18. [PS]ಅದಕ್ಕೆ ಯೆಹೋವ ದೇವರು ಮೋಶೆಗೆ, “ನೀನು ಆಡಿದ ಈ ಮಾತಿನಂತೆಯೇ ನಾನು ಇದನ್ನು ಮಾಡುತ್ತೇನೆ. ಏಕೆಂದರೆ ನನ್ನ ದೃಷ್ಟಿಯಲ್ಲಿ ನಿನಗೆ ದಯೆ ದೊರಕಿತು. ನಾನು ನಿನ್ನನ್ನು ನಿನ್ನ ಹೆಸರಿನಿಂದ ತಿಳಿದಿದ್ದೇನೆ,” ಎಂದರು. [PE]
19. [PS]ಆಗ ಮೋಶೆ, “ನಿಮ್ಮ ಮಹಿಮೆಯನ್ನು ನನಗೆ ತೋರಿಸಿ ಎಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ,” ಎಂದನು. [PE][PS]ಅದಕ್ಕೆ ಅವರು, “ನಾನು ನನ್ನ ಒಳ್ಳೆಯತನವನ್ನೆಲ್ಲಾ ನಿನ್ನ ಎದುರಿಗೆ ಹಾದು ಹೋಗ ಮಾಡಿ, ಯೆಹೋವ ದೇವರ ಹೆಸರನ್ನು ನಿನ್ನ ಮುಂದೆ ಪ್ರಕಟಮಾಡಿ, ಯಾವನ ಮೇಲೆ ನನ್ನ ಕರುಣೆ ಉಂಟೋ, ಅವನನ್ನು ಕರುಣಿಸುವೆನು. ಯಾವನ ಮೇಲೆ ನನ್ನ ಕನಿಕರವಿದೆಯೋ ಅವನನ್ನು ಕನಿಕರಿಸುವೆನು,” ಎಂದರು.
20. ಮತ್ತೆ ದೇವರು ಮೋಶೆಗೆ, “ನೀನು ನನ್ನ ಮುಖವನ್ನು ನೋಡಲಾರಿ. ಏಕೆಂದರೆ ಯಾವ ಮನುಷ್ಯನೂ ನನ್ನನ್ನು ನೋಡಿ ಬದುಕಿರಲಾರನು,” ಎಂದರು. [PE]
21. [PS]ಇದಲ್ಲದೆ ಯೆಹೋವ ದೇವರು, “ನನ್ನ ಬಳಿಯಲ್ಲಿ ಒಂದು ಸ್ಥಳವಿದೆ. ನೀನು ಬಂಡೆಯ ಮೇಲೆ ನಿಂತುಕೋ.
22. ಆಗ ನನ್ನ ಮಹಿಮೆಯು ಹಾದುಹೋಗುವಾಗ, ನಿನ್ನನ್ನು ಬಂಡೆಯ ಬಿರುಕಿನಲ್ಲಿ ನಿಲ್ಲಿಸಿ, ನಿನ್ನ ಮೇಲೆ ನನ್ನ ಕೈ ಮುಚ್ಚುವೆನು.
23. ತರುವಾಯ ನನ್ನ ಕೈಯನ್ನು ತೆಗೆದುಬಿಡುವೆನು. ಆಗ ನೀನು ನನ್ನ ಬೆನ್ನನ್ನು ನೋಡುವೆ, ಆದರೆ ನನ್ನ ಮುಖವು ನಿನಗೆ ಕಾಣಿಸುವುದಿಲ್ಲ,” ಎಂದರು. [PE]